ಜೈಪುರ: ರಾಜಸ್ಥಾನ್ ರಾಯಲ್ಸ್(Rajasthan Royals) ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ(Sanju Samson) ಸೋಲಿನ ಆಘಾತದ ಮಧ್ಯೆ ದಂಡದ ಬರೆಯೂ ಬಿದ್ದಿದೆ. ಗುಜರಾತ್ ಟೈಟಾನ್ಸ್(Gujarat Titans) ವಿರುದ್ಧ ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ(IPL 2024) ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಕಾರಣ ಸ್ಯಾಮ್ಸನ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
“ಸಂಜು ಅವರು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಋತುವಿನ ಮೊದಲ ಅಪರಾಧ ಮಾಡಿದ್ದು, ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಸ್ಯಾಮ್ಸನ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಐಪಿಎಲ್ ಪ್ರಕಟಣೆ ತಿಳಿಸಿದೆ. ಐಪಿಎಲ್‌ನ ಕೋಡ್ ಆಫ್ ಕಂಡಕ್ಟ್ ಅಪರಾಧವನ್ನು ಸಂಜು ಒಪ್ಪಿಕೊಂಡಿದ್ದಾರೆ. ಸ್ಲೋ ಓವರ್ ರೇಟ್ ನಿಯಮದ ಪ್ರಕಾರ ಮೊದಲ ತಪ್ಪಿಗೆ ನಾಯಕನನ್ನು ದೋಷಿಯನ್ನಾಗಿ ಮಾಡಲಾಗುತ್ತದೆ. ಮೊದಲ ಬಾರಿಯ ತಪ್ಪಿಗೆ 12 ಲಕ್ಷ ರೂ. ದಂಡ ಹಾಕಲಾಗುತ್ತದೆ. ಇದು ಪುನರಾವರ್ತನೆಯಾದಲ್ಲಿ 24 ಲಕ್ಷ ರೂ. ದಂಡ ನಿಗದಿ ಮಾಡಲಾಗಿದೆ. ಅಲ್ಲದೆ ತಂಡದ ಇತರೆ ಆಟಗಾರರು ಪಂದ್ಯದ ಶುಲ್ಕದ ಶೇ.25 ರಷ್ಟು ಮೊತ್ತವನ್ನು ದಂಡವಾಗಿ ನೀಡಬೇಕು. ಒಂದೊಮ್ಮೆ ಮೂರನೇ ಬಾರಿ ಮತ್ತೆ ಇದೇ ತಪ್ಪು ಮರುಕಳಿಸಿದರೆ ಆಗ ನಾಯಕ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಲಿದ್ದಾರೆ.
Heyy Sanju Samson, Men Never Crying 😭
— CrickSachin (RR Ka Parivar) (@Sachin_Gandhi7) April 11, 2024
Chin up your head Captain we will comeback strongly 💗☝🏻 pic.twitter.com/jisCoT6G7r
ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ಮೂಲಕ 38 ಎಸೆತಗಳಿಂದ ಅಜೇಯ 68 ರನ್ ಬಾರಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದರು. ಆದರೆ ಪಂದ್ಯ ಸೋತ ಕಾರಣ ಅವರ ಈ ಪ್ರದರ್ಶನ ವ್ಯರ್ಥಗೊಂಡಿತು.
ಜೈಪುರದ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ರಾಜಸ್ಥಾನ್ ರಾಯಲ್ಸ್, ನಾಯಕ ಸಂಜು ಸ್ಯಾಮ್ಸನ್(68) ಮತ್ತು ರಿಯಾನ್ ಪರಾಗ್(74) ಅವರ ವಿಸ್ಫೋಟಕ ಬ್ಯಾಟಿಂಗ್ ಹಾಗೂ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ಗೆ 196 ರನ್ ಬಾರಿಸಿತು.
ಇದನ್ನೂ ಓದಿ IPL 2024 Points Table: ರಾಜಸ್ಥಾನ್ಗೆ ಮೊದಲ ಸೋಲು; ಅಂಕಪಟ್ಟಿಯಲ್ಲಿ ಪ್ರಮುಖ ಬದಲಾವಣೆ
ಜವಾಬಿತ್ತ ಗುಜರಾತ್ ತಂಡ ದಿಟ್ಟ ಬ್ಯಾಟಿಂಗ್ ಹೋರಾಟ ನಡೆಸಿ ಭರ್ತಿ 20 ಓವರ್ ಆಡಿ 7 ವಿಕೆಟ್ ನಷ್ಟಕ್ಕೆ 199 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ಅಂತಿಮ ಹಂತದಲ್ಲಿ ರಾಹುಲ್ ತೆವಾಟಿಯ ಮತ್ತು ರಶೀದ್ ಖಾನ್ ಶಕ್ತಿ ಮೀರಿ ಬ್ಯಾಟಿಂಗ್ ನಡೆಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. 12 ಎಸೆತಗಳಲ್ಲಿ ಗೆಲುವಿಗೆ 35 ರನ್ ಗಳಿಸುವ ಸವಾಲನ್ನು ಮೆಟ್ಟಿ ನಿಂತರು. ತೆವಾಟಿಯ 11 ಎಸೆತಗಳಿಂದ 22 ರನ್ ಬಾರಿಸಿದರೆ, ರಶೀದ್ ಖಾನ್ 11 ಎಸೆತಗಳಲ್ಲಿ ಅಜೇಯ 24 ರನ್ ಚಚ್ಚಿದರು