IPL 2024 Squads: ಐಪಿಎಲ್ 10 ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ - Vistara News

ಕ್ರೀಡೆ

IPL 2024 Squads: ಐಪಿಎಲ್ 10 ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ

10 ತಂಡಗಳಲ್ಲಿ ಹಲವು ಆಟಗಾರರು ಗಾಯಗೊಂಡು ಮತ್ತು ವೈಯಕ್ತಿ ಕಾರಣ ನೀಡಿ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಇವರ ಸ್ಥಾನಕ್ಕೆ ಅನೇಕ ಬದಲಿ ಆಟಗಾರರು ಕೂಡ ಆಯ್ಕೆಯಾಗಿದ್ದಾರೆ.

VISTARANEWS.COM


on

IPL 2024 squad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2024ರ ಇಂಡಿಯನ್ ಪ್ರೀಮಿಯರ್ ಲೀಗ್(IPL 2024) ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 22ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್(royal challengers bangalore vs chennai super kings) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB vs CSK) ತಂಡಗಳು ಮುಖಾಮುಖಿಯಾಗುವುದರೊಂದಿಗೆ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. 10 ತಂಡಗಳಲ್ಲಿ ಹಲವು ಆಟಗಾರರು ಗಾಯಗೊಂಡು ಮತ್ತು ವೈಯಕ್ತಿ ಕಾರಣ ನೀಡಿ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಇವರ ಸ್ಥಾನಕ್ಕೆ ಅನೇಕ ಬದಲಿ ಆಟಗಾರರು ಕೂಡ ಆಯ್ಕೆಯಾಗಿದ್ದಾರೆ. ಹಾಗಿದ್ದರೆ ಪರಿಷ್ಕೃತ 10 ತಂಡಗಳು(IPL 2024 Squads) ಹೇಗಿದೆ ಎಂದು ನೋಡಣ.

ಚೆನ್ನೈ ಸೂಪರ್​ ಕಿಂಗ್ಸ್​(chennai super kings)


ಎಂ.ಎಸ್ ಧೋನಿ (ನಾಯಕ), ಋತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಶೇಕ್ ರಶೀದ್, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ಮೊಯೀನ್ ಅಲಿ, ಶಿವಂ ದುಬೆ, ನಿಶಾಂತ್ ಸಿಂಧು, ಅಜಯ್ ಮಂಡಲ್, ರಾಜವರ್ಧನ್ ಹಂಗರ್ಗೇಕರ್, ದೀಪಕ್ ಚಹರ್, ಮಹೇಶ್ ದೀಕ್ಷಾನಾ, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ತುಷಾರ್ ದೇಶಪಾಂಡೆ, ಶಾರ್ದೂಲ್ ಠಾಕೂರ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಸಮೀರ್ ರಿಜ್ವಿ. , ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್ ಅರವೆಲ್ಲಿ. ಡೆವೊನ್ ಕಾನ್ವೇ (ಹೆಬ್ಬೆರಳಿನ ಗಾಯ – ಮೇ ತನಕ ಫಿಟ್ ಆಗುವ ನಿರೀಕ್ಷೆಯಿಲ್ಲ), ಮಥೀಶ ಪತಿರಾನ (ಮಂಡಿರಜ್ಜು ಗಾಯ).

ಡೆಲ್ಲಿ ಕ್ಯಾಪಿಟಲ್ಸ್​

ರಿಷಬ್ ಪಂತ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಪೃಥ್ವಿ ಶಾ, ಡೇವಿಡ್ ವಾರ್ನರ್, ಅಭಿಷೇಕ್ ಪೊರೆಲ್, ಕುಮಾರ್ ಕುಶಾಗ್ರಾ, ರಿಕಿ ಭುಯಿ, ಶಾಯ್ ಹೋಪ್, ಮಿಚೆಲ್ ಮಾರ್ಷ್, ಯಶ್ ಧುಲ್, ಸ್ವಸ್ತಿಕ್ ಚಿಕಾರಾ, ಪ್ರವೀಣ್ ದುಬೆ, ಅಕ್ಷರ್ ಪಟೇಲ್, ಲಲಿತ್ ಯಾದವ್, ವಿಕ್ಕಿ ಓಸ್ತ್ವಾಲ್, ಸುಮಿತ್ ಕುಮಾರ್, ಅನ್ರಿಚ್ ನಾರ್ಜೆ, ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಜ್ಯೆ ರಿಚರ್ಡ್ಸನ್, ರಾಸಿಖ್ ಸಲಾಂ. ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್‌.

ಗುಜರಾತ್​ ಟೈಟಾನ್ಸ್​(Gujarat Titans)


ಶುಭಮನ್ ಗಿಲ್ (ನಾಯಕ), ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್(2 ಪಂದ್ಯಗಳಿಗೆ ಅಲಭ್ಯ), ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಅಭಿನವ್ ಮನೋಹರ್, ಬಿ ಸಾಯಿ ಸುದರ್ಶನ್, ದರ್ಶನ್ ನಾಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಸಾಯಿ ಕಿಶೋರ್, ರಶೀದ್ ಖಾನ್*, ಜೋಶುವಾ ಲಿಟಲ್*, ಮೋಹಿತ್ ಶರ್ಮಾ, ಅಜ್ಮತುಲ್ಲಾ ಒಮರ್ಜಾಯ್, ಉಮೇಶ್ ಯಾದವ್, ಶಾರುಖ್ ಖಾನ್, ಸುಶಾಂತ್ ಮಿಶ್ರಾ, ಕಾರ್ತಿಕ್ ತ್ಯಾಗಿ, ಮಾನವ್ ಸುತಾರ್, ಸ್ಪೆನ್ಸರ್ ಜಾನ್ಸನ್. ರಾಬಿನ್ ಮಿಂಜ್ (ಬೈಕ್ ಅಪಘಾತದಿಂದಾಗಿ ಗಾಯಗಳು)

ಕೋಲ್ಕತ್ತಾ ನೈಟ್​ ರೈಡರ್ಸ್​(Titans,Kolkata Knight Riders)


ಶ್ರೇಯಸ್ ಅಯ್ಯರ್ (ನಾಯಕ), ಕೆ.ಎಸ್ ಭರತ್, ರಹಮಾನುಲ್ಲಾ ಗುರ್ಬಾಜ್, ರಿಂಕು ಸಿಂಗ್, ಆಂಗ್‌ಕ್ರಿಶ್ ರಘುವಂಶಿ, ಶೆರ್ಫೇನ್ ರುದರ್‌ಫೋರ್ಡ್, ಆಂಡ್ರೆ ರಸೆಲ್, ಮನೀಶ್ ಪಾಂಡೆ, ನಿತೀಶ್ ರಾಣಾ, ವೆಂಕಟೇಶ್ ಅಯ್ಯರ್, ಅನುಕೂಲ್ ರಾಯ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ಸುನೀಲ್ ಚಕ್ರವರ್ತಿ ಅರೋರಾ, ಚೇತನ್ ಸಕರಿಯಾ, ಹರ್ಷಿತ್ ರಾಣಾ, ಸುಯಾಶ್ ಶರ್ಮಾ, ಮಿಚೆಲ್ ಸ್ಟಾರ್ಕ್, ದುಷ್ಮಂತ ಚಮೀರಾ, ಫಿಲ್ ಸಾಲ್ಟ್, ಸಾಕಿಬ್ ಹುಸೇನ್, ಮುಜೀಬ್ ಉರ್ ರೆಹಮಾನ್.

ಇದನ್ನೂ ಓದಿ IPL 2024: ಐಪಿಎಲ್​ ವೇಳಾಪಟ್ಟಿ, ಪ್ರಸಾರ, ಲೈವ್-ಸ್ಟ್ರೀಮಿಂಗ್ ಕುರಿತ ಮಾಹಿತಿ ಇಲ್ಲಿದೆ

ಲಕ್ನೋ ಸೂಪರ್​ ಜೈಂಟ್ಸ್​(Lucknow Super Giants)


ಕೆ.ಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್(ಉಪ ನಾಯಕ), ಆಯುಷ್ ಬಡೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ದೇವದತ್ತ್​ ಪಡಿಕ್ಕಲ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ಯುದ್ಧವೀರ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಶಮರ್​ ಜೋಸೆಫ್​, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಕೆ.ಗೌತಮ್, ಶಿವಂ ಮಾವಿ, ಅರ್ಶಿನ್ ಕುಲಕರ್ಣಿ, ಎಂ. ಸಿದ್ಧಾರ್ಥ್, ಆ್ಯಶ್ಟನ್​ ಟರ್ನರ್, ಡೇವಿಡ್ ವಿಲ್ಲಿ(ಆರಂಭಿಕ ಪಂದ್ಯಗಳಿಗೆ ಅಲಭ್ಯ), ಮೊಹಮ್ಮದ್ ಅರ್ಷದ್ ಖಾನ್.

ಮುಂಬೈ ಇಂಡಿಯನ್ಸ್​(Mumbai Indians)


ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್(ಇನ್ನೂ ಫಿಟ್​ ಆಗಿಲ್ಲ), ಇಶಾನ್ ಕಿಶನ್, ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಮೊಹಮ್ಮದ್ ನಬಿ, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್​ಪ್ರೀತ್​ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ , ಆಕಾಶ್ ಮಧ್ವಲ್, ಲ್ಯೂಕ್ ವುಡ್, ರೊಮಾರಿಯೋ ಶೆಫರ್ಡ್, ಜೆರಾಲ್ಡ್ ಕೋಟ್ಜಿ, ಶ್ರೇಯಸ್ ಗೋಪಾಲ್, ನುವಾನ್ ತುಷಾರ್​, ನಮನ್ ಧೀರ್, ಅನ್ಶುಲ್ ಕಾಂಬೋಜ್, ಶಿವಾಲಿಕ್ ಶರ್ಮಾ, ದಿಲ್ಶನ್ ಮಧುಶಂಕ.

ಪಂಜಾಬ್​ ಕಿಂಗ್ಸ್​(Punjab Kings)


ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋ, ಪ್ರಭ್‌ಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ, ಹರ್‌ಪ್ರೀತ್ ಭಾಟಿಯಾ, ರಿಲೀ ರೋಸೊವ್, ಶಶಾಂಕ್ ಸಿಂಗ್, ಸ್ಯಾಮ್ ಕರನ್​, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೈಡೆ, ರಿಷಿ ಧವನ್, ಸಿಕಂದರ್ ರಜಾ, ಶಿವಂ ಸಿಂಗ್, ಕ್ರಿಸ್ ವೋಕ್ಸ್ , ಅಶುತೋಷ್ ಶರ್ಮಾ, ವಿಶ್ವನಾಥ್ ಸಿಂಗ್, ಟಿ ತ್ಯಾಗರಾಜನ್, ಹರ್ಷಲ್ ಪಟೇಲ್, ಹರ್ಪ್ರೀತ್ ಬ್ರಾರ್, ಅರ್ಶ್ದೀಪ್ ಸಿಂಗ್, ಕಗಿಸೋ ರಬಾಡ, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ವಿ ಕಾವೇರಪ್ಪ, ಪ್ರಿನ್ಸ್ ಚೌಧರಿ.

ರಾಜಸ್ಥಾನ್​ ರಾಯಲ್ಸ್​(Rajasthan Royals)


ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಧ್ರುವ್ ಜುರೆಲ್, ಕುನಾಲ್ ರಾಥೋರ್, ಡೊನೊವನ್ ಫೆರೇರಾ*, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಯಶಸ್ವಿ ಜೈಸ್ವಾಲ್, ರೋವ್ಮನ್ ಪೊವೆಲ್, ಶುಭಂ ದುಬೆ, ರವಿಚಂದ್ರನ್ ಅಶ್ವಿನ್, ಅಬಿದ್ ಮುಷ್ತಾಕ್, ಟ್ರೆಂಟ್​ ಬೌಲ್ಟ್, ಯುಜ್ವೇಂದ್ರ ಚಹಾಲ್, ಕುಲದೀಪ್ ಸೇನ್, ಸಂದೀಪ್ ಶರ್ಮಾ, ನವದೀಪ್ ಸೈನಿ, ಆಡಮ್ ಝಂಪಾ, ನಾಂದ್ರೆ ಬರ್ಗರ್, ಅವೇಶ್ ಖಾನ್.

ರಾಯಲ್​ ಚಾಲೆಂಜರ್ಸ್ ಬೆಂಗಳೂರು(royal challengers bangalore)


ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ಸನ್​ರೈಸರ್ಸ್​ ಹೈದರಾಬಾದ್​(Sunrisers Hyderabad)


ಪ್ಯಾಟ್ ಕಮ್ಮಿನ್ಸ್ (ನಾಯಕ), ಗ್ಲೆನ್ ಫಿಲಿಪ್ಸ್, ಉಪೇಂದ್ರ ಸಿಂಗ್ ಯಾದವ್, ಹೆನ್ರಿಚ್ ಕ್ಲಾಸೆನ್, ಅಬ್ದುಲ್ ಸಮದ್, ಐಡೆನ್ ಮಾರ್ಕ್ರಾಮ್, ರಾಹುಲ್ ತ್ರಿಪಾಠಿ, ಮಯಾಂಕ್ ಅಗರ್ವಾಲ್, ಟ್ರಾವಿಸ್ ಹೆಡ್, ಅನ್ಮೋಲ್ಪ್ರೀತ್ ಸಿಂಗ್, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಶಹಬಾಜ್ ಅಹ್ಮದ್, ಸಂವೀರ್ ಸಿಂಗ್ , ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಟಿ ನಟರಾಜನ್, ಮಯಾಂಕ್ ಮಾರ್ಕಾಂಡೆ, ನಿತೀಶ್ ರೆಡ್ಡಿ, ಉಮ್ರಾನ್ ಮಲಿಕ್, ವನಿಂದು ಹಸರಂಗ, ಜಯದೇವ್ ಉನದ್ಕತ್, ಆಕಾಶ್ ಸಿಂಗ್, ಫಜಲ್ಹಕ್ ಫಾರೂಕಿ, ಜೆ ಸುಬ್ರಮಣ್ಯನ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

Federation Cup: ಫೆಡರೇಷನ್ ಕಪ್‌ ಫೈನಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ನೀರಜ್ ಚೋಪ್ರಾ

Federation Cup: 26 ವರ್ಷದ ನೀರಜ್ ಜೂನ್​ 18ರಂದು ಫಿನ್​ಲ್ಯಾಂಡ್​ನ ಪಾವೊ ನುರ್ಮಿ ಗೇಮ್ಸ್​ನಲ್ಲೂ ಸ್ಪರ್ಧಿಸಲಿದ್ದಾರೆ. ಈ ಟೂರ್ನಿಯಲ್ಲಿ 90 ಮೀ. ಗಡಿ ದಾಟಲು ಅವರು ಪಣ ತೊಟ್ಟಿದ್ದಾರೆ.

VISTARANEWS.COM


on

Federation Cup
Koo

ಭುವನೇಶ್ವರ: ಮೂರು ವರ್ಷದ ಬಳಿಕ ತವರಿನಲ್ಲಿ ನಡೆಯುವ ಫೆಡರೇಷನ್ ಕಪ್‌ನಲ್ಲಿ(Federation Cup) ಕಣಕ್ಕೆ ಇಳಿಯಲು ಸಜ್ಜಾದ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ, ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(Neeraj Chopra) ಮತ್ತು ಕಿಶೋರ್ ಜೇನಾ(Kishore Jena) ಅವರು ಈ ಟೂರ್ನಿಯಲ್ಲಿ ನೇರವಾಗಿ ಫೈನಲ್‌ ಪ್ರವೇಶ ಪಡೆದಿದ್ದಾರೆ. ಇಂದು ಅರ್ಹತಾ ಸುತ್ತಿನ ಸ್ಪರ್ಧೆ ನಡೆಯಲಿದ್ದು ಬುಧವಾರ ಫೈನಲ್‌ ನಡೆಯಲಿದೆ.

ನೀರಜ್​ ಚೋಪ್ರಾ ಮತ್ತು ಜೇನಾ ಈಗಾಗಲೇ ಹಲವು ಬಾರಿ ಅರ್ಹತಾ ಮಟ್ಟ (75 ಮೀಟರ್‌) ದಾಟಿರುವುದರಿಂದ ಉಭಯ ಜಾವೆಲಿನ್​ ಪಟುಗಳಿಗೆ ನೇರವಾಗಿ ಫೈನಲ್‌ಗೆ ಅರ್ಹತೆ ನೀಡಲಾಯಿತು. ನಾಳೆ ಇವರಿಬ್ಬರು ಫೈನಲ್​ನಲ್ಲಿ ಕಣಕ್ಕಿಳಿಯಲಿದ್ದಾರೆ. ಕಳೆದ ವಾರ ನಡೆದ ಡೈಮಂಡ್‌ ಲೀಗ್‌ನ ದೋಹಾ ಲೆಗ್‌ನಲ್ಲಿ ಚೋಪ್ರಾ 88.36 ಮೀ ದೂರ ಜಾವೆಲಿನ್ ಎಸೆದು ಎರಡನೇ ಸ್ಥಾನ ಪಡೆದಿದ್ದರು. ಏಷ್ಯನ್ ಕ್ರೀಡಾಕೂಟದ ಬೆಳ್ಳಿ ವಿಜೇತ ಜೇನಾ ಈ ಬಾರಿ ಡೈಮಂಡ್‌ ಲೀಗ್‌ಗೆ ಚೊಚ್ಚಲ ಪ್ರವೇಶ ಮಾಡಿ, 76.31 ಮೀ ದೂರ ಎಸೆದಿದ್ದರು.

ಕರ್ನಾಟಕದ ಡಿ.ಪಿ. ಮನು ಕೂಡ ಫೆಡರೇಷನ್ ಕಪ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. 2023ರ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಮನು ಆರನೇ ಸ್ಥಾನ ಪಡೆದಿದ್ದರು.

26 ವರ್ಷದ ನೀರಜ್ ಜೂನ್​ 18ರಂದು ಫಿನ್​ಲ್ಯಾಂಡ್​ನ ಪಾವೊ ನುರ್ಮಿ ಗೇಮ್ಸ್​ನಲ್ಲೂ ಸ್ಪರ್ಧಿಸಲಿದ್ದಾರೆ. ಈ ಟೂರ್ನಿಯಲ್ಲಿ 90 ಮೀ. ಗಡಿ ದಾಟಲು ಅವರು ಪಣ ತೊಟ್ಟಿದ್ದಾರೆ.

ಇದನ್ನೂ ಓದಿ Neeraj Chopra: ಪ್ಯಾರಿಸ್​ ಒಲಿಂಪಿಕ್ಸ್​ಗೆ ಮುನ್ನ 90 ಮೀಟರ್​ ಗಡಿ ದಾಟುವೆ; ನೀರಜ್​ ಚೋಪ್ರಾ ವಿಶ್ವಾಸ

ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು. ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ.

ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ನೀರಜ್‌ ಈ ಬಾರಿಯೂ ಚಿನ್ನ ಗೆಲ್ಲಲಿ ಎನ್ನುವುದು ಶತ ಕೋಟಿ ಭಾರತೀಯರ ಆಶಯ ಮತ್ತು ಹಾರೈಕೆಯಾಗಿದೆ. 2024ರಲ್ಲಿ ನಡೆಯುವ ಪ್ಯಾರಿಸ್ ಒಲಿಂಪಿಕ್ಸ್ ಅತಿ ದೊಡ್ಡ ಮತ್ತು ಮಹತ್ವದ ಕ್ರೀಡಾಕೂಟವಾಗಿದೆ. ಸುಮಾರು 200 ದೇಶಗಳ 10,000 ಕ್ರೀಡಾಪಟುಗಳು ಒಲಿಂಪಿಕ್ ವೈಭವಕ್ಕಾಗಿ ಸ್ಪರ್ಧಿಸಲಿದ್ದಾರೆ. ಪ್ಯಾರಿಸ್ ತನ್ನ ಮೂರನೇ ಬಾರಿಗೆ ಆತಿಥೇಯ ನಗರವಾಗಿ (1900 ಮತ್ತು 1924 ರ ನಂತರ) ಟೂರ್ನಿಯ ಆತಿಥ್ಯ ವಹಿಸಿಕೊಳ್ಳಲಿದೆ. ಜುಲೈ 26 ರಿಂದ ಆಗಸ್ಟ್ 11ರ ತನಕ ಟೂರ್ನಿ ನಡೆಯಲಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಕ್ರೀಡೆ

IPL 2024 Points Table: ಟೂರ್ನಿಯಿಂದ ಹೊರಬಿದ್ದ ಗುಜರಾತ್​ ಟೈಟಾನ್ಸ್​

IPL 2024 Points Table: ಇಂದು ನಡೆಯುವ ಪಂದ್ಯದಲ್ಲಿ ಡೆಲ್ಲಿ ಮತ್ತು ಲಕ್ನೋ ಸೂಪರ್​ ಜೈಂಟ್ಸ್​ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಡೆಲ್ಲಿ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದುಗೊಂಡು ತಲಾ 1 ಅಂಕ ಲಭಿಸಿದರೂ ಡೆಲ್ಲಿಗೆ ಪ್ಲೇ ಆಫ್​ ಅವಕಾಶ ಸಿಗುವುದಿಲ್ಲ.

VISTARANEWS.COM


on

IPL 2024 Points Table
Koo

ಅಹಮದಾಬಾದ್​: ಕೆಕೆಆರ್​ ವಿರುದ್ಧದ ಸೋಮವಾರದ ಐಪಿಎಲ್(IPL 2024)​ ಪಂದ್ಯ ರದ್ದು ಗೊಂಡ ಕಾರಣ ಶುಭಮನ್​ ಗಿಲ್​ ಸಾರಥ್ಯದ ಗುಜರಾತ್​ ಟೈಟಾನ್ಸ್​ ತಂಡ ಈ ಬಾರಿಯ ಟೂರ್ನಿಯಿಂದ ಅಧಿಕೃತವಾಗಿ(IPL 2024 Points Table) ಹೊರಬಿದ್ದಿದೆ. ಸತತವಾಗಿ 2 ಬಾರಿ ಫೈನಲ್​ ಪ್ರವೇಶಿಸಿ ಒಂದು ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದ್ದ ಗುಜರಾತ್​ಈ ಬಾರಿ ಲೀಗ್​ನಿಂದಲೇ ಹೊರಬಿದ್ದಿದೆ. ಸದ್ಯ ಗುಜರಾತ್​ ಸೇರಿ ಒಟ್ಟು ಮೂರು ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಉಳಿದ 2 ತಂಡಗಳೆಂದರೆ ಪಂಜಾಬ್​ ಕಿಂಗ್ಸ್​ ಮತ್ತು ಮುಂಬೈ ಇಂಡಿಯನ್ಸ್​.

ಇಂದು ನಡೆಯುವ ಪಂದ್ಯದಲ್ಲಿ ಡೆಲ್ಲಿ ಮತ್ತು ಲಕ್ನೋ ಸೂಪರ್​ ಜೈಂಟ್ಸ್​ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಡೆಲ್ಲಿ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದುಗೊಂಡು ತಲಾ 1 ಅಂಕ ಲಭಿಸಿದರೂ ಡೆಲ್ಲಿಗೆ ಪ್ಲೇ ಆಫ್​ ಅವಕಾಶ ಸಿಗುವುದಿಲ್ಲ.

ತಂಡಪಂದ್ಯಗೆಲುವುಸೋಲುಅಂಕ
ಕೆಕೆಆರ್​139319 (+1.428)
ರಾಜಸ್ಥಾನ್​ ರಾಯಲ್ಸ್​​​128416 (+0.349)
ಚೆನ್ನೈ​​137614 (+0.528)
ಹೈದರಾಬಾದ್​127514 (+0.406)
ಆರ್​ಸಿಬಿ136712 (+0.387)
ಡೆಲ್ಲಿ136712 (-0.482)
ಲಕ್ನೋ126612 (-0.769)
ಗುಜರಾತ್​135711 (-1.063)
ಮುಂಬೈ13498 (-0.271)
ಪಂಜಾಬ್​​12488 (-0.423)

ಪಂದ್ಯವು ಟಾಸ್​ ಸೇರಿದಂತೆ ಒಂದೇ ಒಂದು ಎಸೆತ ಕಾಣದೇ ರದ್ದಾಯಿತು. ಸ್ಟೇಡಿಯಮ್​ನಲ್ಲಿ ಸೇರಿದ್ದ 45,000 ಅಭಿಮಾನಿಗಳು ಪಂದ್ಯ ಆರಂಭವಾಗುವ ನಿರೀಕ್ಷೆಯಿಂದ ಸ್ಥಳದಿಂದ ಕದಲಲಿಲ್ಲ. ರಾತ್ರಿ 10:56 ಕ್ಕೆ 5 ಓವರ್​ಗಳ ಪಂದ್ಯದ ಕಟ್ ಆಫ್ ಸಮಯವಾಗಿತ್ತು. ಮೈದಾನದ ಸಿಬ್ಬಂದಿ ಎಲ್ಲ ಪ್ರಯತ್ನಗಳನ್ನು ಮಾಡಿದ ಹೊರತಾಗಿಯೂ ಆಡಿಲು ಯಾವುದೇ ಅವಕಾಶ ದೊರೆಯಲಿಲ್ಲ. ರಾತ್ರಿ 10:40 ರ ಸುಮಾರಿಗೆ ಅಧಿಕಾರಿಗಳು ಪಂದ್ಯವನ್ನು ರದ್ದುಗೊಳಿಸಿದರು.

ಇದನ್ನೂ ಓದಿ IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

ಗುಜರಾತ್​ಗೆ ನಿರಾಶಾದಾಯಕ ಅಭಿಯಾನ

ಗುಜರಾತ್​ ಟೈಟಾನ್ಸ್ ಪ್ಲೇಆಫ್​ನಲ್ಲಿ ಸ್ಥಾನ ಪಡೆಯುವ ರೇಸ್​​ನಿಂದ ಹೊರಗುಳಿದಿದೆ. ಹಾರ್ದಿಕ್ ಪಾಂಡ್ಯ ನಿರ್ಗಮನ ಮತ್ತು ಮೊಹಮ್ಮದ್ ಶಮಿ ಗಾಯಗೊಂಡ ನಂತರ ಜಿಟಿಗೆ ಉತ್ತಮ ಅನುಕೂಲಗಳು ಸಿಗಲಿಲ್ಲ. ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ಮುಂದಿನ ಸುತ್ತಿಗೆ ಪ್ರವೇಶಿಸುವ ಅವಕಾಶ ಆ ತಂಡಕ್ಕೆ ಇತ್ತು. ಆದರೆ, ಮಳೆ ಅವರ ಭರವಸೆಗಳನ್ನು ಭಗ್ನಗೊಳಿಸಿತು.

Continue Reading

ಪ್ರಮುಖ ಸುದ್ದಿ

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

IPL 2024: ಜೋಸ್ ಬಟ್ಲರ್ ಈಗಾಗಲೇ ರಾಜಸ್ಥಾನ್​​ ತಂಡ ತೊರೆದಿದ್ದಾರೆ. ಈ ಬೆಳವಣಿಗೆಯ 2008 ರ ಚಾಂಪಿಯನ್ಸ್​ ತಂಡಕ್ಕೆ ದೊಡ್ಡ ಹೊಡೆತವಾಗಿದೆ. ರಾಜಸ್ಥಾನ್ ರಾಯಲ್ಸ್ ಪರ ಆಡಿರುವ ಬಟ್ಲರ್ 39.88ರ ಸರಾಸರಿಯಲ್ಲಿ 359 ರನ್ ಗಳಿಸಿದ್ದಾರೆ. ಅವರ ಒಂದು ಶತಕವು ಐಪಿಎಲ್ ಇತಿಹಾಸದಲ್ಲಿ ಜಂಟಿಯಾಗಿ ಅತಿ ಹೆಚ್ಚು ಯಶಸ್ವಿ ರನ್ ಚೇಸ್ ದಾಖಲಿಸಲು ರಾಯಲ್ಸ್​ಗೆ ಸಹಾಯ ಮಾಡಿದೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ಕ್ಕೆ (IPL 2024) ಇಂಗ್ಲೆಂಡ್ ಕ್ರಿಕೆಟಿಗರು ವಿದಾಯ ಹೇಳಲು ಪ್ರಾರಂಭಿಸಿದ್ದಾರೆ. ಮೇ 22ರಿಂದ ಆರಂಭವಾಗಲಿರುವ 4 ಪಂದ್ಯಗಳ ಟಿ20 ಸರಣಿಯಲ್ಲಿ ಇಂಗ್ಲೆಂಡ್​ ತಂಡ ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಈ ವರ್ಷದ ಕೊನೆಯಲ್ಲಿ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (ಯುಎಸ್ಎ) ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ತಯಾರಿ ನಡೆಸಲು ಇಂಗ್ಲಿಷ್ ಕ್ರಿಕೆಟಿಗರು ಐಪಿಎಲ್ ಅನ್ನು ಬೇಗನೆ ತೊರೆಯುತ್ತಾರೆ ಎಂದು ಈ ಹಿಂದೆ ತಿಳಿದುಬಂದಿತ್ತು. ಇದೀಗ ಅವರೆಲ್ಲರೂ ಹೊರಟಿದ್ದಾರೆ.

ಜೋಸ್ ಬಟ್ಲರ್ ಈಗಾಗಲೇ ರಾಜಸ್ಥಾನ್​​ ತಂಡ ತೊರೆದಿದ್ದಾರೆ. ಈ ಬೆಳವಣಿಗೆಯ 2008 ರ ಚಾಂಪಿಯನ್ಸ್​ ತಂಡಕ್ಕೆ ದೊಡ್ಡ ಹೊಡೆತವಾಗಿದೆ. ರಾಜಸ್ಥಾನ್ ರಾಯಲ್ಸ್ ಪರ ಆಡಿರುವ ಬಟ್ಲರ್ 39.88ರ ಸರಾಸರಿಯಲ್ಲಿ 359 ರನ್ ಗಳಿಸಿದ್ದಾರೆ. ಅವರ ಒಂದು ಶತಕವು ಐಪಿಎಲ್ ಇತಿಹಾಸದಲ್ಲಿ ಜಂಟಿಯಾಗಿ ಅತಿ ಹೆಚ್ಚು ಯಶಸ್ವಿ ರನ್ ಚೇಸ್ ದಾಖಲಿಸಲು ರಾಯಲ್ಸ್​ಗೆ ಸಹಾಯ ಮಾಡಿದೆ.

ರಾಯಲ್ಸ್ ‘ಎಕ್ಸ್’ ನಲ್ಲಿ ಒಂದು ಪೋಸ್ಟ್ ಮಾಡಿದ್ದು, ಅದರಲ್ಲಿ ಬಟ್ಲರ್ ತಂಡವನ್ನು ತೊರೆಯುತ್ತಿರುವುದು ಕಂಡುಬಂದಿದೆ. ನಾವು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ, ಜೋಸ್ ಭಾಯ್!” ಎಂದು ಬರೆಯಲಾಗಿದೆ. ಬಟ್ಲರ್ ಅನುಪಸ್ಥಿತಿಯಲ್ಲಿ, ರಾಜಸ್ಥಾನ್ ತಂಡವು ​ 190 ಟಿ 20 ಪಂದ್ಯಗಳಲ್ಲಿ 1 ಶತಕ ಮತ್ತು 34 ಅರ್ಧಶತಕಗಳೊಂದಿಗೆ 4734 ರನ್ ಗಳಿಸಿರುವ ಟಾಮ್ ಕೊಹ್ಲರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಿದೆ.

ರಾಯಲ್ಸ್ ಇನ್ನೂ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಕಾಯ್ದಿರಿಸಿಲ್ಲ. ಸಂಜು ಸ್ಯಾಮ್ಸನ್ ಪಡೆ ಆಡಿರುವ ಮೊದಲ 9 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಸಾಧಿಸಿದ್ದು, 3 ಪಂದ್ಯಗಳಲ್ಲಿ ಸೋತಿದೆ.

ಆರ್​ಸಿಬಿ ತೊರೆದ ಜಾಕ್ಸ್, ಟಾಪ್ಲೆ


ಆಟಗಾರರು ಬಿಟ್ಟು ಹೋಗುತ್ತಿರುವ ಮತ್ತೊಂದು ತಂಡ ಆರ್​ಸಿಬಿ. ಇಲ್ಲಿನ ಇಬ್ಬರು ಇಂಗ್ಲಿಷ್ ತಾರೆಯರು ಹೊರಗುಳಿದಿದ್ದಾರೆ. 12 ಅಂಕಗಳು ಮತ್ತು +0.387 ನೆಟ್ ರನ್ ರೇಟ್​ನೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ಚಾಲೆಂಜರ್ಸ್ ಪ್ಲೇ ಆಫ್​ಗೆ ಪ್ರವೇಶಿಸಲು ಬಹಳ ದೂರವಿಲ್ಲ.

ಇದನ್ನೂ ಓದಿ: IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಋತುರಾಜ್ ಗಾಯಕ್ವಾಡ್ ಅವರ ಸಿಎಸ್​ಕೆ ವಿರುದ್ಧದ ಕೊನೆಯ ಲೀಗ್ ಪಂದ್ಯಕ್ಕೆ ವಿಲ್ ಜಾಕ್ಸ್ ಮತ್ತು ರೀಸ್ ಟಾಪ್ಲೆ ಅವರ ಸೇವೆ ಲಭ್ಯವಿರುವುದಿಲ್ಲ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಆರ್​ಸಿಬಿ ಸತತ 5 ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ಆಸೆ ಜೀವಂತವಾಗಿರಿಸಿದೆ.

ಲಿಯಾಮ್ ಲಿವಿಂಗ್​ಸ್ಟನ್​ ಕೂಡ ನಿರ್ಗಮಿಸಿದ್ದಾರೆ. ಆದರೂ ಪಿಬಿಕೆಎಸ್ ಈಗಾಗಲೇ ಸ್ಪರ್ಧೆಯಿಂದ ಹೊರಗುಳಿದಿರುವುದರಿಂದ ಇದು ಯಾವುದೇ ವ್ಯತ್ಯಾಸವನ್ನುಂಟು ಮಾಡುವುದಿಲ್ಲ.

Continue Reading

ಪ್ರಮುಖ ಸುದ್ದಿ

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

IPL 2024: ಪಂದ್ಯವು ಟಾಸ್​ ಸೇರಿದಂತೆ ಒಂದೇ ಒಂದು ಎಸೆತ ಕಾಣದೇ ರದ್ದಾಯಿತು. ಸ್ಟೇಡಿಯಮ್​ನಲ್ಲಿ ಸೇರಿದ್ದ 45,000 ಅಭಿಮಾನಿಗಳು ಪಂದ್ಯ ಆರಂಭವಾಗುವ ನಿರೀಕ್ಷೆಯಿಂದ ಸ್ಥಳದಿಂದ ಕದಲಲಿಲ್ಲ. ರಾತ್ರಿ 10:56 ಕ್ಕೆ 5 ಓವರ್​ಗಳ ಪಂದ್ಯದ ಕಟ್ ಆಫ್ ಸಮಯವಾಗಿತ್ತು. ಮೈದಾನದ ಸಿಬ್ಬಂದಿ ಎಲ್ಲ ಪ್ರಯತ್ನಗಳನ್ನು ಮಾಡಿದ ಹೊರತಾಗಿಯೂ ಆಡಿಲು ಯಾವುದೇ ಅವಕಾಶ ದೊರೆಯಲಿಲ್ಲ. ರಾತ್ರಿ 10:40 ರ ಸುಮಾರಿಗೆ ಅಧಿಕಾರಿಗಳು ಪಂದ್ಯವನ್ನು ರದ್ದುಗೊಳಿಸಿದರು.

VISTARANEWS.COM


on

IPL 2024
Koo

ಅಹಮದಾಬಾದ್​​: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜನೆಗೊಂಡಿದ್ದ ಗುಜರಾತ್​ ಜೈಂಟ್ಸ್​ ಮತ್ತು ಕೋಲ್ಕೊತಾ ನೈಟ್​ ರೈಡರ್ಸ್​ ನಡುವಿನ ಪಂದ್ಯ ರದ್ದಾಗಿದೆ. ಇದು ಹಾಲಿ ಆವೃತ್ತಿಯಲ್ಲಿ ಮಳೆಯಿಂದ ರದ್ದಾಗಿರುವ ಮೊದಲ ಪಂದ್ಯವಾಗಿದೆ. ಹೀಗಾಗಿ ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ಹಂಚಲಾಯಿತು. ಈ ಫಲಿತಾಂಶದಿಂದಾಗಿ ಜಿಟಿ ತಂಡದ ಪ್ಲೇಆಫ್​ ಅವಕಾಶ ಅಂತ್ಯವಾಯಿತು. ಇದೇ ವೇಳೆ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ಅಗ್ರ 2 ರಲ್ಲಿ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಪಂದ್ಯವು ಟಾಸ್​ ಸೇರಿದಂತೆ ಒಂದೇ ಒಂದು ಎಸೆತ ಕಾಣದೇ ರದ್ದಾಯಿತು. ಸ್ಟೇಡಿಯಮ್​ನಲ್ಲಿ ಸೇರಿದ್ದ 45,000 ಅಭಿಮಾನಿಗಳು ಪಂದ್ಯ ಆರಂಭವಾಗುವ ನಿರೀಕ್ಷೆಯಿಂದ ಸ್ಥಳದಿಂದ ಕದಲಲಿಲ್ಲ. ರಾತ್ರಿ 10:56 ಕ್ಕೆ 5 ಓವರ್​ಗಳ ಪಂದ್ಯದ ಕಟ್ ಆಫ್ ಸಮಯವಾಗಿತ್ತು. ಮೈದಾನದ ಸಿಬ್ಬಂದಿ ಎಲ್ಲ ಪ್ರಯತ್ನಗಳನ್ನು ಮಾಡಿದ ಹೊರತಾಗಿಯೂ ಆಡಿಲು ಯಾವುದೇ ಅವಕಾಶ ದೊರೆಯಲಿಲ್ಲ. ರಾತ್ರಿ 10:40 ರ ಸುಮಾರಿಗೆ ಅಧಿಕಾರಿಗಳು ಪಂದ್ಯವನ್ನು ರದ್ದುಗೊಳಿಸಿದರು.

ಎಂಐ ಮತ್ತು ಪಿಬಿಕೆಎಸ್ ನಂತರ ಟೈಟಾನ್ಸ್ ಸ್ಪರ್ಧೆಯಿಂದ ಹೊರಗುಳಿದ ಮೂರನೇ ತಂಡವಾಗಿದೆ. ಏತನ್ಮಧ್ಯೆ, ನೈಟ್ಸ್ 13 ಪಂದ್ಯಗಳಲ್ಲಿ 9 ರಲ್ಲಿ ಗೆಲುವು ಸಾಧಿಸಿ 19 ಅಂಕಗಳೊಂದಿಗೆ +1.428 ನೆಟ್ ರನ್ ರೇಟ್​ನೊಂದಿಗೆ ಅಗ್ರಸ್ಥಾನ ಉಳಿಸಿಕೊಂಡಿದೆ. 2012 ಮತ್ತು 2014ರಲ್ಲಿ ಕೆಕೆಆರ್ ಅಗ್ರ 2ರಲ್ಲಿ ಸ್ಥಾನ ಪಡೆದಿತ್ತು. ಗುವಾಹಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ಮೇ 19 ರ ಭಾನುವಾರ ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ರಾಯಲ್ಸ್ ತಂಡವನ್ನು ಸೋಲಿಸಿದರೆ ಈ ಬಾರಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವಿದೆ. ಗೌತಮ್ ಗಂಭೀರ್ ಕೆಕೆಆರ್​​ಗೆ ಮರಳಿದ ಕಾರಣ ತಂಡಕ್ಕೆ ಭಾರೀ ಅನುಕೂಲಗಳು ಆಗಿವೆ.

ಗುಜರಾತ್​ಗೆ ನಿರಾಶಾದಾಯಕ ಅಭಿಯಾನ

ಗುಜರಾತ್​ ಟೈಟಾನ್ಸ್ ಪ್ಲೇಆಫ್​ನಲ್ಲಿ ಸ್ಥಾನ ಪಡೆಯುವ ರೇಸ್​​ನಿಂದ ಹೊರಗುಳಿದಿದೆ. ಹಾರ್ದಿಕ್ ಪಾಂಡ್ಯ ನಿರ್ಗಮನ ಮತ್ತು ಮೊಹಮ್ಮದ್ ಶಮಿ ಗಾಯಗೊಂಡ ನಂತರ ಜಿಟಿಗೆ ಉತ್ತಮ ಅನುಕೂಲಗಳು ಸಿಗಲಿಲ್ಲ. ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ಮುಂದಿನ ಸುತ್ತಿಗೆ ಪ್ರವೇಶಿಸುವ ಅವಕಾಶ ಆ ತಂಡಕ್ಕೆ ಇತ್ತು. ಆದರೆ, ಮಳೆ ಅವರ ಭರವಸೆಗಳನ್ನು ಭಗ್ನಗೊಳಿಸಿತು.

ಇದನ್ನೂ ಓದಿ: IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣ

ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೇ 16 ರಂದು ನಡೆಯಲಿರುವ ಪಂದ್ಯದಲ್ಲಿ ಶುಭ್ಮನ್ ಗಿಲ್ ಪಡೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. 2022ರಲ್ಲಿ, ಜಿಟಿ ತಮ್ಮ ಮೊದಲ ಪ್ರವೇಶದಲ್ಲಿ ಪ್ರಶಸ್ತಿ ಗೆದ್ದಿತ್ತು. 2023ರಲ್ಲಿ ಸಿಎಸ್​ಕೆ ತಂಡವನ್ನು ಮಣಿಸುವಲ್ಲಿ ವಿಫಲವಾದ ಬಳಿಕ ರನ್ನರ್ ಅಪ್ ಸ್ಥಾನ ಪಡೆದಿತ್ತು. ಆದರೆ ಈ ಋತುವಿನಲ್ಲಿ ಗಿಲ್ ಒತ್ತಡದ ನಡುವೆ ನಾಯಕತ್ವ ಹಾಗೂ ಬ್ಯಾಟಿಂಗ್​ನಲ್ಲಿ ವೈಫಲ್ಯ ಕಂಡಿದ್ದರು.

Continue Reading
Advertisement
US Sanction
ವಿದೇಶ4 mins ago

US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

Prajwal Revanna Case Devaraje Gowda
ಕ್ರೈಂ23 mins ago

Prajwal Revanna Case: ವಕೀಲ ದೇವರಾಜೇಗೌಡ ಇಂದು ಪೊಲೀಸ್‌ ಕಸ್ಟಡಿಗೆ

Federation Cup
ಕ್ರೀಡೆ29 mins ago

Federation Cup: ಫೆಡರೇಷನ್ ಕಪ್‌ ಫೈನಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ನೀರಜ್ ಚೋಪ್ರಾ

Israel-Hamas Conflict
ವಿದೇಶ36 mins ago

Israel-Hamas Conflict: ಗಾಜಾದಲ್ಲಿ ಭಾರತೀಯ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

IPL 2024 Points Table
ಕ್ರೀಡೆ54 mins ago

IPL 2024 Points Table: ಟೂರ್ನಿಯಿಂದ ಹೊರಬಿದ್ದ ಗುಜರಾತ್​ ಟೈಟಾನ್ಸ್​

jayanagar murder case
ಕ್ರೈಂ58 mins ago

Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Viral News
ದೇಶ2 hours ago

Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

HD Revanna Bail
ಪ್ರಮುಖ ಸುದ್ದಿ2 hours ago

HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

Kalki 2898 AD
ಸಿನಿಮಾ2 hours ago

Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

mumbai hoarding collapse
ಪ್ರಮುಖ ಸುದ್ದಿ2 hours ago

Hoarding Collapse: ಹೋರ್ಡಿಂಗ್‌ ಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿಕೆ, ಇನ್ನಷ್ಟು ಜನ ಅದರಡಿಯಲ್ಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ15 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ15 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ15 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ16 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ16 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ23 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌