Site icon Vistara News

IPL 2024: ‘ಬ್ರೋಕನ್‌ ಹಾರ್ಟ್‌’ ಎಮೋಜಿ; ಐಪಿಎಲ್​ಗೆ ಸೂರ್ಯಕುಮಾರ್ ಡೌಟ್​

Suryakumar Yadav

ಮುಂಬಯಿ: ಮುಂಬೈ ಇಂಡಿಯನ್ಸ್‌ ತಂಡದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್‌ ಯಾದವ್‌(suryakumar yadav) ಅವರು ಐಪಿಎಲ್(IPL 2024)​ ಟೂರ್ನಿಯ ಆರಂಭಿಕ ಕೆಲ ಪಂದ್ಯಗಳಲ್ಲಿ ಆಡುವುದು ಅನುಮಾನ ಎನ್ನಲಾಗಿತ್ತು. ಇದೀಗ ಈ ಸುದ್ದಿ ನಿಜವಾದಂತಿದೆ. ಸೂರ್ಯಕುಮಾರ್​ ಅವರು ಇನ್ನೂ ನ್ಯಾಶನಲ್‌ ಕ್ರಿಕೆಟ್‌ ಅಕಾಡೆಮಿಯಿಂದ (National Cricket Academy) ಫಿಟ್‌ನೆಸ್‌ ಸರ್ಟಿಫಿಕೆಟ್‌ ಪಡೆದಿಲ್ಲ. ಫಿಟ್​ನೆಸ್​ ಫೇಲ್​ ಆದ ಕಾರಣದಿಂದಲೇ ಸೂರ್ಯ ಒಡೆದು ಹೋದ ಎಮೋಜಿಯ ಫೋಟೊ ಹಾಕಿ ಐಪಿಎಲ್​ ಗೈರಿನ ಸುಳಿವು ನೀಡಿದಂತಿದೆ.

ಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಕೆ ಕಂಡಿರುವ ಸೂರ್ಯ ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದಾರೆ. ಕಳೆದ ಜನವರಿಯಲ್ಲಿ ಸೂರ್ಯ ನ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಫಿಟ್​ ಆಗದ ಕಾರಣ ಅವರು ಐಪಿಎಲ್​ನ(IPL 2024) ಆರಂಭಿಕ 2 ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆ ಇದೆ. ಇನ್ನೂ ಕೆಲವು ಸುತ್ತಿನ ಫಿಟ್‌ನೆಸ್‌ ಪರೀಕ್ಷೆಗೆ ಒಳಗಾಗಬೇಕಿರುವ ಕಾರಣ ಸೂರ್ಯ ಐಪಿಎಲ್​ ಆಡುವ ಕುರಿತು ಮುಂದಿನ ವಾರ ಸ್ಪಷ್ಟ ಚಿತ್ರಣ ಸಿಗಲಿದೆ.

5 ಬಾರಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡ ಈ ಬಾರಿ ಟೂರ್ನಿಯಲ್ಲಿ ಕಳೆದ ಬಾರಿಯ ರನ್ನರ್‌-ಅಪ್‌ ಗುಜರಾತ್‌ ಟೈಟಾನ್ಸ್‌ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಮಾರ್ಚ್ 24ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ದ್ವಿತೀಯ ಪಂದ್ಯವನ್ನು ಮಾರ್ಚ್​ 27ರಂದು ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಸೆಣಸಾಡಲಿದೆ.

ಇದನ್ನೂ ಓದಿ IPL 2024: ಐಪಿಎಲ್‌ನಲ್ಲಿ ಸ್ಮಾರ್ಟ್‌ ರಿಪ್ಲೆ; ಹೊಸ ಟೆಕ್ನಾಲಜಿಯಿಂದ ಏನು ಲಾಭ?


ಸೂರ್ಯಕುಮಾರ್‌ ಈ ವರೆಗೂ 60 ಟಿ20 ಪಂದ್ಯಗಳನ್ನಾಡಿದ್ದು, 171+ ಸ್ಟ್ರೈಕ್‌ರೇಟ್‌ನೊಂದಿಗೆ 2141 ರನ್‌ ಕಲೆಹಾಕಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ಅವರು 4 ಶತಕಗಳನ್ನೂ ಬಾರಿಸಿದ್ದಾರೆ. ಟಿ20 ಬ್ಯಾಟಿಂಗ್​ ಶ್ರೇಯಾಂಕದಲ್ಲಿಯೂ ಸೂರ್ಯ ನಂ.1 ಸ್ಥಾನ ಪಡೆದಿದ್ದಾರೆ. ನಟರಾಜ ಶೈಲಿಯಲ್ಲಿ ಬ್ಯಾಟ್​ ಬೀಸುವ ಇವರು ಹಲವು ಪಂದ್ಯಗಳಲ್ಲಿ ಮುಂಬೈ ತಂಡಕ್ಕೆ ಸ್ಮರಣೀಯ ಗೆಲುವು ಕೂಡ ತಂದುಕೊಟ್ಟಿದ್ದಾರೆ. ಕಳೆದ ವರ್ಷ ದಕ್ಷಿಣ ಆಫ್ರಿಕಾ ಎದುರಿನ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್​ ಎಡ ಪಾದದ ನೋವಿಗೆ ಸಿಲುಕಿದ್ದರು. ಬಳಿಕ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.  

ಬೆಂಗಳೂರಿನಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್​ಸಿಎ)ಯಲ್ಲಿ ಫಿಟ್​ನೆಸ್​ ತರಬೇತಿ ಪಡೆಯುತ್ತಿರುವ ಸೂರ್ಯಕುಮಾರ್ ಯಾದವ್​ ಅವರು ಇತ್ತೀಚೆಗೆ ಇಲ್ಲಿನ ಪಿಚ್​ ಕ್ಯೂರೆಟರ್​ ಜತೆಗೆ ರೋಲರ್​ನಲ್ಲಿ ಸಂಚಾರ ಮಾಡಿದ್ದ ವಿಡಿಯೊವನ್ನು ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ(suryakumar yadav instagram) ಹಂಚಿಕೊಂಡಿದ್ದರು.

ಮುಂಬೈ ತಂಡ


ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್. ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್​ಪ್ರೀತ್​ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್, ರೊಮಾರಿಯೋ ಶೆಫರ್ಡ್.

Exit mobile version