Site icon Vistara News

IPL 2024: ಎಲ್ಲ ಅನುಮಾನಗಳಿಗೂ ತೆರೆ; ಆರ್​ಸಿಬಿ ಸೇರಿದ ಇಂಗ್ಲೆಂಡ್​ ಆಲ್​ರೌಂಡರ್​

Tom Curran

ಬೆಂಗಳೂರು: ಬಿಗ್ ಬ್ಯಾಷ್ ಲೀಗ್​ನಲ್ಲಿ ಮೊಣಕಾಲಿನ( Knee Injury) ಗಾಯಕ್ಕೆ ತುತ್ತಾಗಿದ್ದ ಟಾಮ್​ ಕರನ್(Tom Curran) ಅವರು ಈ ಬಾರಿಯ ಐಪಿಎಲ್(IPL 2024) ಆಡುವುದು ಅನುಮಾನ ಎನ್ನಲಾಗಿತ್ತು. ಇದರಿಂದ ಆರ್​ಸಿಬಿ(RCB) ತಂಡಕ್ಕೆ ಆತಂಕವೊಂದು ಸೃಷ್ಟಿಯಾಗಿತ್ತು. ಆದರೆ. ಇದೀಗ ಈ ಆತಂಕ ದೂರ ಆಗಿದೆ. ಟಾಮ್​ ಕರನ್ ಅವರು ಫುಲ್​ ಫಿಟ್​ ಆ್ಯಂಡ್​ ಫೈನ್​ ಆಗಿ ತಂಡ ಸೇರಿದ್ದಾರೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ ದುಬೈನಲ್ಲಿ ನಡೆದಿದ್ದ ಆಟಗಾರರ ಮಿನಿ ಹರಾಜಿನಲ್ಲಿ ಆರ್​ಸಿಬಿ ಫ್ರಾಂಚೈಸಿ ಕರನ್ ಅವರನ್ನು 1.5 ಕೋಟಿ ರೂ. ನೀಡಿ ಖರೀದಿ ಮಾಡಿತ್ತು. ಬಿಗ್ ಬ್ಯಾಷ್ ಲೀಗ್​ನಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿ ಈ ಟೂರ್ನಿಯಿಂದ ಅವರು ಹೊರಬಿದ್ದಿದ್ದರು. ಈ ವೇಳೆ ಅವರು ಐಪಿಎಲ್​ನಿಂದಲೂ ಹೊರಬೀಳಲಿದ್ದಾರೆ ಎಂದು ವರದಿಯಾಗಿತ್ತು. ಅವರು ಆರ್​ಸಿಬಿ ತಂಡ ಸೇರುವ ಮೂಲಕ ಎಲ್ಲ ಅನುಮಾನಗಳಿಗೂ ತೆರೆ ಬಿದ್ದಿದೆ. ಸೋಮವಾರ ತಡರಾತ್ರಿ ಆರ್​ಸಿಬಿ ತಂಡ ಸೇರಿದ್ದಾರೆ. ಅವರನ್ನು ಫ್ರಾಂಚೈಸಿಯು ಕ್ಯಾಪ್​ ನೀಡಿ ಸ್ವಾಗತಿಸಿದ ಫೋಟೊ ವೈರಲ್​ ಆಗಿದೆ.

ಇದನ್ನೂ ಓದಿ Virat Kohli: ಧೋನಿಯ ಹೇರ್‌ಸ್ಟೈಲ್‌ ಕಾಪಿ ಮಾಡಿದ ವಿರಾಟ್​ ಕೊಹ್ಲಿ

ಹರಾಜಿನಲ್ಲಿ ಆರ್​ಸಿಬಿ ಖರೀದಿಸಿದ ಆಟಗಾರರು

ಅಲ್ಜಾರಿ ಜೋಸೆಫ್ (11.5 ಕೋಟಿ), ಯಶ್ ದಯಾಳ್ (5 ಕೋಟಿ), ಟಾಮ್ ಕರ್ರನ್ (1.5 ಕೋಟಿ), ಲಾಕಿ ಫರ್ಗುಸನ್ (2 ಕೋಟಿ), ಸ್ವಪ್ನಿಲ್ ಸಿಂಗ್ (0.2 ಕೋಟಿ), ಸೌರವ್ ಚೌಹಾಣ್ (0.2 ಕೋಟಿ).

ಆರ್​ಸಿಬಿ ತಂಡ


ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್​ವೆಲ್​, ವಿರಾಟ್ ಕೊಹ್ಲಿ, ಕ್ಯಾಮರಾನ್ ಗ್ರೀನ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಯಾಂಕ್ ದಾಗರ್, ಮಹಿಪಾಲ್ ಲೊಮ್ರೊರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ವೈಶಾಕ್ ವಿಜಯ್ ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟಾಪ್ಲೆ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್.

ಚೆನ್ನೈ ಮೊದಲ ಎದುರಾಳಿ


ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2024) 17ನೇ ಆವೃತ್ತಿ ಆರಂಭವಾಗಲು ಇನ್ನು ಕೇವಲ 3 ದಿನ ಮಾತ್ರ ಬಾಕಿ ಉಳಿದಿದೆ. ಮಾರ್ಚ್ 22ರಂದು ಲೀಗ್​ನ ಸಾಂಪ್ರದಾಯಿಕ ಬದ್ದ ಎದುರಾಳಿಗಳಾದ ಆರ್‌ಸಿಬಿ(Royal Challengers Bangalore) ಮತ್ತು ಸಿಎಸ್‌ಕೆ(rcb vs csk) ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಚಾಲನೆ ಸಿಗಲಿದೆ. ಈ ಪಂದ್ಯಕ್ಕೆ ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂ ಅಣಿಯಾಗಿದೆ. ಪಂದ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ಉಭಯ ತಂಡಗಳ ಅಭಿಮಾನಿಗಳು ಕಾದು ಕುಳಿತಿದ್ದಾರೆ.

Exit mobile version