Site icon Vistara News

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರಮುಖ ಬೇಡಿಕೆ ಮುಂದಿಟ್ಟ ಫ್ರಾಂಚೈಸಿಗಳು

IPL 2025

IPL 2025: IPL franchises' wishlist: mega auction every five years, eight RTM options

ಮುಂಬಯಿ: ಮುಂದಿನ ವರ್ಷದ ಐಪಿಎಲ್(IPL 2025)​ 18ನೇ ಆವೃತ್ತಿಗೆ ಮುನ್ನ ಆಟಗಾರರ ಮೆಗಾ ಹರಾಜು(IPL 2025 Mega Auction) ಪ್ರಕ್ರಿಯೆ ನಡೆಯಲಿದೆ ಎಂದು ಈಗಾಗಲೇ ಐಪಿಎಲ್​ ಮುಖ್ಯಸ್ಥ ಅರುಣ್​ ಧುಮಾಲ್(Arun Dhumal) ಖಚಿತಪಡಿಸಿದ್ದಾರೆ. ಹಲವು ಸ್ಟಾರ್​ ಆಟಗಾರರು ಕೂಡ ಈ ಬಾರಿ ಹರಾಜಿಗೆ ತಮ್ಮನ್ನು ಬಿಟ್ಟುಕೊಡಬೇಕೆಂದು ಮೂಲ ತಂಡಗಳಿಗೆ ಮನವಿಯನ್ನೂ ಕೂಡ ಮಾಡಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಫ್ರಾಂಚೈಸಿಗಳು ಬಿಸಿಸಿಐ(BCCI)ಗೆ ಕೆಲ ವಿಶೇಷ ಬೇಡಿಕೆಗಳನ್ನು ಇರಿಸಿದೆ ಎಂದು ವರದಿಯಾಗಿದೆ.

ಪ್ರತಿ ತಂಡ 3-4 ಆಟಗಾರರನ್ನು ಮಾತ್ರ ರಿಟೇನ್​ ಮಾಡಿಕೊಳ್ಳಲು ಮಾತ್ರ ಅವಕಾಶ ಲಭಿಸಲಿದೆ ಎಂದು ಹೇಳಲಾಗಿತ್ತು. ಇದೀಗ ಎಲ್ಲ ಫ್ರಾಂಚೈಸಿಗಳು 8 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಅನುಮತಿ ನೀಡುವಂತೆ ಬಿಸಿಸಿಐ ಮತ್ತು ಐಪಿಎಲ್​ ಆಡಳಿತ ಮಂಡಳಿಗೆ ಬೇಡಿಕೆ ಇರಿಸಿದೆ ಎನ್ನಲಾಗಿದೆ.

ಇದು ಮಾತ್ರವಲ್ಲದೆ ಮೆಗಾ ಹರಾಜಿನಲ್ಲಿ ಮತ್ತೊಮ್ಮೆ RTM(ರೈಟ್ ಟು ಮ್ಯಾಚ್ ಕಾರ್ಡ್ ಬಳಕೆ) ಕಾರ್ಡ್ ಬಳಸುವ ಬಗ್ಗೆಯೂ ಫ್ರಾಂಚೈಸಿ ಡಿಮ್ಯಾಂಡ್ ಮಾಡಲಿದೆ. 2018ರ ಮೆಗಾ ಹರಾಜಿನಲ್ಲಿ RTMಗೆ ಅವಕಾಶವಿತ್ತು. ಆದರೆ 2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಇದನ್ನು ಕೈಬಿಡಲಾಗಿತ್ತು, ಇದೀಗ ಮತ್ತೆ ಈ ನಿಯವನ್ನು ಜಾರಿಗೆ ತರಲು ಫ್ರಾಂಚೈಸಿಗಳು ಒಳವು ತೋರಿದೆ ಎನ್ನಲಾಗಿದೆ.

ಏನಿದು ಆರ್​ಟಿಎಂ ಕಾರ್ಡ್​?

ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ.

5 ವರ್ಷಗಳಿಗೊಮ್ಮೆ ಮೆಗಾ ಹರಾಜು?

ಐಪಿಎಲ್ ಮೆಗಾ ಹರಾಜನ್ನು ಇನ್ನು ಮುಂದೆ ಐದು ವರ್ಷಗಳಿಗೊಮ್ಮೆ ನಡೆಸುವಂತೆಯೂ ಕೆಲವು ಫ್ರಾಂಚೈಸಿಗಳು ಮನವಿ ಮಾಡಿದೆ ಎನ್ನಲಾಗಿದೆ. ಈ ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಒಂದೊಮ್ಮೆ ಈ ಬೇಡಿಕೆಗೆ ಬಿಸಿಸಿಐ ಸಮ್ಮತಿಸಿದರೆ. ಮುಂದಿನ ಮೆಗಾ ಹರಾಜು 2029ರಲ್ಲಿ ನಡೆಯಲಿದೆ. ಇದರ ನಡುವೆ ಮಿನಿ ಹರಾಜು ಮಾತ್ರ ನಡೆಯಲಿದೆ. ಈ ತಿಂಗಳಾಂತ್ಯದಲ್ಲಿ ಐಪಿಎಲ್ ಮಾಲೀಕರೊಂದಿಗೆ ಬಿಸಿಸಿಐ ಸಭೆ ನಡೆಸಿ ಮೆಗಾ ಹರಾಜಿನ ಅಂತಿಮ ರೂಪುರೇಷೆಗಳ ಬಗ್ಗೆ ಚರ್ಚಿಸಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ IPL 2025: ಆರ್​ಸಿಬಿ ಸೇರಲಿದ್ದಾರೆ ಹಿಟ್​ಮ್ಯಾನ್​ ರೋಹಿತ್​ ಶರ್ಮ!

ಏನಿದು ಆರ್​ಟಿಎಂ ಕಾರ್ಡ್​?

ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ.

ಇಂಪ್ಯಾಕ್ಟ್​ ನಿಯಮ ಕೈಬಿಡುವ ಸಾಧ್ಯತೆ!

ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಹಲವು ಅನುಭವಿ ಆಟಗಾರರಿಂದ ಇಂಪ್ಯಾಕ್ಟ್​ ನಿಯಮದ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಬಿಸಿಸಿಐ ಕೂಡ ಮುಂದಿನ ಬಾರಿ ಈ ನಿಯಮದ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿತ್ತು. ಹೀಗಾಗಿ ಮುಂದಿನ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ನಿಯಮ ಕೈ ಬಿಟ್ಟರೂ ಅಚ್ಚರಿಯಿಲ್ಲ. ಧೋನಿ ಅವರು ಇಂಪ್ಯಾಕ್ಟ್​ ನಿಯಮ ಇಲ್ಲವಾದರೆ ಮುಂದಿನ ಆವೃತ್ತಿ ಆಡುವುದು ಅನುಮಾನ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ಹೇಳಿದ್ದರು. ಒಂದೊಮ್ಮೆ ಈ ನಿಯಮ ಕೈಬಿಟ್ಟರೆ ಆಗ ಧೋನಿ ಆಡುತ್ತಾರಾ ಎನ್ನುವ ಪ್ರಶ್ನೆಯೊಂದು ಮೂಡುವುದು ಸಹಜ.

Exit mobile version