ದುಬೈ: ಪ್ರಸಕ್ತ ಸಾಗುತ್ತಿರುವ ಐಪಿಎಲ್ 2024 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ ಅವರು ಬೃಹತ್ ಮೊತ್ತಕ್ಕೆ ಸೇಲ್ ಆಗುವ ಮೂಲಕ ಐಪಿಎಲ್ನಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ. ಅತಿ ಹೆಚ್ಚು ಮೊತ್ತಕ್ಕೆ ಸೇಲ್ ಆದ ಆಟಗಾರ ಎನಿಸಿಕೊಂಡಿದ್ದಾರೆ.
ಇಂಗ್ಲೆಂಡ್ ಆಲ್ ರೌಂಡರ್ ಸ್ಯಾಮ್ ಕರ್ರನ್ ಅವರು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಹಣ ಪಡೆದ ಆಟಗಾರ ಎನಿಸಿಕೊಂಡಿದ್ದರು. 2023ರಲ್ಲಿ ಅವರನ್ನು ಪಂಜಾಬ್ ಕಿಂಗ್ಸ್ ತಂಡವು 18.50 ಕೋಟಿ ರೂ ನೀಡಿ ಖರೀದಿ ಮಾಡಿತ್ತು. ಆದರೆ ಈಗ ಈ ದಾಖಲೆ ಪತನಗೊಂಡಿದೆ. ಕಮಿನ್ಸ್ ಅವರು 20.50 ಕೋಟಿಗೆ ಸೇಲ್ ಆಗುವ ಮೂಲಕ ಈ ದಾಖಲೆಯನ್ನು ಮುರಿದಿದ್ದಾರೆ.
THE BIGGEST IPL BID EVER 😱
— IndianPremierLeague (@IPL) December 19, 2023
HISTORY CREATED here at the #IPLAuction
Australia's World Cup winning captain Pat Cummins is SOLD to @SunRisers for a HISTORIC INR 20.5 Crore 💰💰💰💰#IPL pic.twitter.com/bpHJjfKwED
ನಿರೀಕ್ಷೆಯಂತೆ ದೊಡ್ಡ ಮೊತ್ತ ಪಡೆದ ಡ್ಯಾರಿಲ್ ಮಿಚೆಲ್
ನ್ಯೂಜಿಲ್ಯಾಂಡ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಮತ್ತು ಆಲ್ರೌಂಡರ್ ಆಗಿರುವ ಡ್ಯಾರಿಲ್ ಮಿಚೆಲ್ ಅವರಿಗೂ ದೊಡ್ಡ ಮೊತ್ತ ಸಿಗುವ ನಿರೀಕ್ಷೆ ಮಾಡಲಾಗಿತ್ತು. ಅದರಂತೆ ಅವರು ದೊಡ್ಡ ಮೊತ್ತ ಜೇಬಿಗಿಳಿಸಿದ್ದಾರೆ.14 ಕೋಟಿ ರೂ. ಮೊತ್ತಕ್ಕೆ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇಲ್ ಆಗಿದ್ದಾರೆ
ಯಾವುದೇ ಹಂತದಲ್ಲಿಯೂ ತಂಡಕ್ಕೆ ಆಸರೆಯಾಗಿ ನಿಂತು ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಇವರಿಗಿದೆ. ಈ ಬಾರಿಯ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿಯೂ ಮಿಚೆಲ್ ಗಮನಾರ್ಹ ಪ್ರದರ್ಶನ ತೋರಿದ್ದರು. 552 ರನ್ ಬಾರಿಸಿ ವಿಶ್ವಕಪ್ನಲ್ಲಿ ಅತ್ಯಧಿಕ ರನ್ಗಳಿಸಿದ 5ನೇ ಆಟಗಾರನಾಗಿ ಹೊರಮೊಮ್ಮಿದ್ದರು.
ಇದನ್ನೂ ಓದಿ IPL Auction 2024 Live: ನಿರೀಕ್ಷೆಯಂತೆ ದೊಡ್ಡ ಮೊತ್ತ ಪಡೆದ ಡ್ಯಾರಿಲ್ ಮಿಚೆಲ್
ಹೆಡ್-ರಚಿನ್ಗೆ ಸಿಗಲಿಲ್ಲ ದೊಡ್ಡ ಮೊತ್ತ
ಟ್ರಾವಿಸ್ ಹೆಡ್ ಮತ್ತು ರಚಿನ್ ರವೀಂದ್ರ ಅವರಿಗೆ ಈ ಬಾರಿಯ ಹರಾಜಿನಲ್ಲಿ ಕನಿಷ್ಠ 15 ಕೋಟಿ ಮೊತ್ತಕ್ಕೆ ಸೇಲ್ ಆಗಬಹುದೆಂದು ನಿರೀಕ್ಷೆ ಮಾಡಲಾಗಿತ್ತು. ಅಲ್ಲದೆ ಉಭಯ ಆಟಗಾರರು ಹರಾಜಿನ ಹೈಲೆಟ್ ಕೂಡ ಆಗಿದ್ದರು. ಆದರೆ ಈ ಎಲ್ಲ ನಿರೀಕ್ಷೆ ಹುಸಿಯಾಗಿದೆ. ಹಡ್ ಕೇವಲ 6.80 ಕೋಟಿ ರೂ.ಗೆ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೇಲ್ ಆದರೆ, ರಚಿನ್ ಅವರು 1.80 ಕೋಟಿ ರೂ.ಗೆ ಚೆನ್ನೈ ಸೂಪರ್ ಕಿಂಗ್ಸ್ ಸೇರಿದ್ದಾರೆ. ಅವರ ಮೂಲಬೆಲೆ 50 ಲಕ್ಷ ಆಗಿತ್ತು.
The Punjab Kings have a valuable buy in the form of Harshal Patel for a whopping price of INR 11.75 Crore 🔥🔥#IPLAuction | #IPL pic.twitter.com/YNyDPOzaQk
— IndianPremierLeague (@IPL) December 19, 2023
ಆಸ್ಟ್ರೇಲಿಯಾದ ಸ್ಟಾರ್ ಅನುಭವಿ ಆಟಗಾರ ಸ್ಟೀವನ್ ಸ್ಮಿತ್ ಅವರು ಮೊದಲ ಸುತ್ತಿನ ಹರಾಜಿನಲ್ಲಿ ಅನ್ ಸೋಲ್ಡ್ ಆಗಿದ್ದಾರೆ. ಕಳೆದ ಬಾರಿಯೂ ಅವರನ್ನು ಯಾವುದೇ ತಂಡ ಖರೀದಿ ಮಾಡಿರಲಿಲ್ಲ. ಹೀಗಾಗಿ ಅವರು ಐಪಿಎಲ್ ಕಾಮೆಂಟ್ರಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆರ್ಸಿಬಿಯ ಮಾಜಿ ಆಟಗಾರ ಹರ್ಷಲ್ ಪಟೇಲ್ ಅವರನ್ನು ಪಂಜಾಬ್ ಕಿಂಗ್ಸ್ ತಂಡ 11.75 ಕೋಟಿ. ರೂ ನೀಡಿ ಖರೀದಿ ಮಾಡಿದೆ.
ಇತ್ತೀಚೆಗೆ ಮುಕ್ತಾಯ ಕಂಡಿದ್ದ ಏಕದಿನ ವಿಶ್ವಕಪ್ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ್ದ ದಕ್ಷಿಣ ಆಫ್ರಿಕಾದ ಯುವ ಬೌಲರ್ ಜೆರಾಲ್ಡ್ ಕೊಯೆಟ್ಜಿ ಅವರನ್ನು 5 ಕೋಟಿ ಮೊತ್ತ ನೀಡಿ ಮುಂಬೈ ಇಂಡಿಯನ್ಸ್ ಖರೀದಿ ಮಾಡಿದೆ. ವೆಸ್ಟ್ ಇಂಡೀಸ್ನ ರೋಮನ್ ಪೊವೆಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡ 7.40 ಕೋಟಿ ರೂ. ನೀಡಿ ಖರೀದಿಸಿದೆ. ಅವರ ಮೂಲಬೆಲೆ 1 ಕೋಟಿ ಆಗಿತ್ತು. ಕಳೆದ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು.