ಬೆಂಗಳೂರು: ಬಹುನಿರೀಕ್ಷಿತ ಐಪಿಎಲ್ 2024ರ 17ನೇ ಆವೃತ್ತಿಯ ಐಪಿಎಲ್ಗಾಗಿ ಆಟಗಾರರ ಮಿನಿ ಹರಾಜು ಪ್ರಕ್ರಿಯೆಗೆ(IPL Auction 2024) ಕ್ಷಣಗಣನೆ ಶುರುವಾಗಿದ್ದು, ಹರಾಜು ನಾಳೆ(ಡಿ.19) ದುಬೈನಲ್ಲಿ ನಡೆಯಲಿದೆ. ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಿರುವ ಫ್ರಾಂಚೈಸಿಗಳು ದುಬೈಗೆ ತಲುಪಿದೆ. 214 ಭಾರತೀಯ ಆಟಗಾರರ ಪಟ್ಟಿಯಲ್ಲಿ 14 ಮಂದಿ ಕರ್ನಾಟಕದ ಆಟಗಾರರು ಕಾಣಿಸಿಕೊಂಡಿದ್ದಾರೆ.
ಮನೀಷ್ ಪಾಂಡೆ, ಜಗದೀಶ್ ಸುಚಿತ್, ಶುಭಾಂಗ್ ಹೆಗ್ಡೆ, ನಿಹಾಲ್ ಉಲ್ಲಾಳ್, ಬಿ.ಆರ್ ಶರತ್, ಮನ್ವಂತ್ ಕುಮಾರ್, ಎಲ್.ಆರ್ ಚೇತನ್, ಕೆ.ಎಲ್ ಶ್ರೀಜಿತ್, ಎಂ. ವೆಂಕಟೇಶ್, ಮೋನಿಶ್ ರೆಡ್ಡಿ, ಅಭಿಲಾಷ್ ಶೆಟ್ಟಿ ಹರಾಜಿನಲ್ಲಿ ಕಾಣಿಸಿಕೊಂಡ ಕರ್ನಾಟಕದ ಆಟಗಾರರು.
ಆರ್‌ಸಿಬಿ ಕಣ್ಣಿಟ್ಟಿರುವ ಆಟಗಾರರು
ಮನೀಷ್ ಪಾಂಡೆ
ಆರ್‌ಸಿಬಿಯ ಮಾಜಿ ಆಟಗಾರನಾಗಿರುವ ಮನೀಷ್ ಪಾಂಡೆ ಅವರನ್ನು ಮತ್ತೆ ಆರ್‌ಸಿಬಿ ಖರೀದಿಸಲು ಮುಂದಾಗಿದೆ ಎಂದು ವರದಿಯಾಗಿದೆ. 170 ಐಪಿಎಲ್ ಆಡಿರುವ ಪಾಂಡೆ 3808 ರನ್ ಬಾರಿಸಿದ್ದಾರೆ. 1 ಶತಕ ಮತ್ತು 22 ಅರ್ಧಶತಕ ಬಾರಿಸಿದ್ದಾರೆ. 114 ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ.
ಬಿ.ಆರ್ ಶರತ್
ಬಿ.ಆರ್ ಶರತ್ ಅವರು ದೇಶೀಯ ಟೂರ್ನಿಯಲ್ಲಿ ಕರ್ನಾಟಕದ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ. ವಿಕೆಟ್‌ಕೀಪರ್-ಬ್ಯಾಟರ್ ಆಗಿರುವ ಅವರು ಆರಂಭಿಕ ಬ್ಯಾಟರ್ ಆಗಿದ್ದಾರೆ. ಈಗಾಗಲೇ ಅವರು ತಮ್ಮ ಸ್ಫೋಟ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಈ ಬಾರಿಯ ಮಿನಿ ಹರಾಜಿನಲ್ಲಿ ಆರ್‌ಸಿಬಿ ಇವರ ಮೇಲೆ ಕಣ್ಣಿಟ್ಟಿದೆ.
Just a sleep away 🥳#IPLAuction | #IPL pic.twitter.com/jIqI78aTgb
— IndianPremierLeague (@IPL) December 18, 2023
ಶುಭಾಂಗ್ ಹೆಗ್ಡೆ
22 ವರ್ಷ ವಯಸ್ಸಿನ ಆಲ್ ರೌಂಡರ್ ಆಗಿರುವ ಶುಭಾಂಗ್ ಹೆಗ್ಡೆ ಕಳೆದ ವರ್ಷ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡದ ಪರ ಶ್ರೇಷ್ಠ ಪ್ರದರ್ಶನ ತೋರಿದ್ದರು. ಅಲ್ಲದೆ ಬೆಳಗಾವಿ ಪ್ಯಾಂಥರ್ಸ್ ತಂಡದಲ್ಲಿಯೂ ಉತ್ತಮ ಆಟವಾಡಿದ್ದಾರೆ. 4 ಟಿ20 ಪಂದ್ಯ ಆಡಿರುವ ಅವರು 2 ವಿಕೆಟ್ ಉರುಳಿಸಿದ್ದಾರೆ. ಲಿಸ್ಟ್ ಎ ಕ್ರಿಕೆಟ್‌ನಲ್ಲಿ 3 ವಿಕೆಟ್ ಹಾಗೂ 30 ರನ್, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 9 ವಿಕೆಟ್ ಹಾಗೂ 135 ರನ್ ಬಾರಿಸಿದ್ದಾರೆ.
ಇದನ್ನೂ ಓದಿ IPL Auction 2024: ಮಿನಿ ಹರಾಜಿಗೆ ಕ್ಷಣಗಣನೆ; ಬಹುಬೇಡಿಕೆಯ ಟಾಪ್ 5 ಆಟಗಾರರು ಯಾರು?
119 ಮಂದಿ ವಿದೇಶಿ ಆಟಗಾರರು
ಎಲ್ಲ ಪ್ರಾಂಚೈಸಿಗಳು ಬಿಡ್ಡಿಂಗ್ನಲ್ಲಿ ಆಟಗಾರರನ್ನು ಖರೀದಿಸಲು ಸಕಲ ಸಿದ್ಧತೆ ನಡೆಸಿವೆ. ಇದೀಗ ಐಪಿಎಲ್ ಮಂಡಳಿಯು ಹರಾಜಿಗೆ ಒಳಗಾಗಲಿರುವ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಿದೆ. ಒಟ್ಟು 333 ಮಂದಿ ಆಟಗಾರರು ಹರಾಜಿನ ಭಾಗವಾಗಲಿದ್ದಾರೆ. ಇದರಲ್ಲಿ 214 ಭಾರತೀಯರು ಮತ್ತು 119 ಮಂದಿ ವಿದೇಶಿ ಆಟಗಾರರು ಸೇರಿದ್ದಾರೆ. ಅಸೋಸಿಯೇಟ್ ದೇಶಗಳ ಇಬ್ಬರು ಆಟಗಾರರು ಕಾಣಿಸಿಕೊಂಡಿದ್ದಾರೆ.
23 ಆಟಗಾರರಿಗೆ ಎರಡು ಕೋಟಿ ಮೂಲಬೆಲೆ
ಒಟ್ಟು 333 ಆಟಗಾರರ ಪೈಕಿ ಕೇವಲ 23 ಆಟಗಾರರಿಗೆ ಮಾತ್ರ ಎರಡು ಕೋಟಿ ರೂ. ಮೂಲಬೆಲೆ ನಿಗದಿ ಮಾಡಲಾಗಿದೆ. ಆದರೆ ಇದರಲ್ಲಿ ಕೇವಲ ಮೂರು ಮಂದಿ ಮಾತ್ರ ಭಾರತೀಯ ಆಟಗಾರರು ಕಾಣಿಸಿಕೊಂಡಿದ್ದಾರೆ. ಅವರೆಂದರೆ, ಆರ್ಸಿಬಿಯಿಂದ ಬಿಡುಗಡೆಯಾದ ಹರ್ಷಲ್ ಪಟೇಲ್, ಕೆಕೆಆರ್ನಿಂದ ಬಿಡುಗಡೆಯಾದ ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್. ಕಳೆದ ಬಾರಿ ಹರಾಜಾಗದ ಆಸೀಸ್ನ ಸ್ಟೀವನ್ ಸ್ಮಿತ್ ಅವರು ಈ ಬಾರಿ 2 ಕೋಟಿ ರೂ. ಮೂಲಬೆಲೆಯಲ್ಲಿ ಕಾಣಿಸಿಕೊಂಡಿದ್ದಾರೆ.