Site icon Vistara News

ಸ್ಟಾರ್​​ ಆಟಗಾರನ ಖರೀದಿಗೆ ಸ್ಕೆಚ್​ ಹಾಕಿದ ಸಖತ್ ಕ್ಯೂಟ್ ಓನರ್ ಕಾವ್ಯ ಮಾರನ್

kavya maran

ಹೈದರಾಬಾದ್​: ಇಂಡಿಯನ್ ಪ್ರೀಮಿಯರ್ ಲೀಗ್ 2024 ಮಿನಿ-ಆಕ್ಷನ್ ಡಿ.19ರಂದು ದುಬೈನಲ್ಲಿ ನಡೆಯಲಿದೆ. ಎಲ್ಲ ಫ್ರಾಂಚೈಸಿಗಳು ಸ್ಟಾರ್​ ಆಟಗಾರರ ಪಟ್ಟಿಯನ್ನು ಸಿದ್ಧ ಪಡಿಸಿದ್ದು ಅವರ ಖರೀದಿಗಾಗಿ ಕಾದು ಕುಳಿತಿದೆ. ಇತ್ತೀಚೆಗೆ ಮುಕ್ತಾಯ ಕಂಡ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್​ ಪ್ರದರ್ಶನ ತೋರಿ ಗಮನಸೆಳೆದ ನ್ಯೂಜಿಲ್ಯಾಂಡ್​ ತಂಡದ ಯುವ ಆಟಗಾರ ರಚಿನ್​ ರವೀಂದ್ರ(Rachin Ravindra) ಅವರನ್ನು ಖರೀದಿ ಮಾಡಲು ಸನ್ ರೈಸರ್ಸ್ ಹೈದರಾಬಾದ್(SunRisers Hyderabad) ತಂಡ ಮುಂದಾಗಿದೆ ಎಂದು ಇರ್ಫಾನ್​ ಪಠಾಣ್​ ಹೇಳಿದ್ದಾರೆ.

ಸ್ಟಾರ್​ ಸ್ಪೋರ್ಟ್ಸ್​ ಜತೆಗಿನ ಸಂವಾದದಲ್ಲಿ ಮಾತನಾಡಿದ ಇರ್ಫಾನ್​, ಈ ಬಾರಿ ಮಿನಿ ಹರಾಜಿನಲ್ಲಿ ರಚಿನ್​ ರವೀಂದ್ರ ಅವರನ್ನು ಎಷ್ಟೇ ಮೊತ್ತ ನೀಡಿಯಾದರೂ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಖರೀದಿ ಮಾಡಲಿದೆ. ಇದಕ್ಕೆ ಬೇಕಾದ ಎಲ್ಲ ತಯಾರಿಯನ್ನು ತಂಡದ ಮಾಲಕಿ ಕಾವ್ಯಾ ಮಾರನ್ ಯೋಜನೆ ರೂಪಿಸಿದ್ದಾರೆ ಎಂದು ಹೇಳಿದ್ದಾರೆ.

ಕಲಾನಿಧಿ ಮಾರನ್ ಅವರ ಪುತ್ರಿ ಕಾವ್ಯಾ ಮಾರನ್ ಅವರು ಸನ್​ ರೈಸರ್ಸ್​ ಹೈದರಾಬಾದ್​ ತಂಡದ ಮಾಲಕಿಯಾದಿನಿಂದ ಪ್ರತಿ ಐಪಿಎಲ್​ ಸೀಸನ್​ನಲ್ಲೂ ಅವರು ಟ್ರೆಂಡಿಂಗ್​ನಲ್ಲಿರುತ್ತಾರೆ. ಎಲ್ಲರ ಗಮನ ಸೆಳೆದು ಸುದ್ದಿಯಾಗುತ್ತಾರೆ. ಐಪಿಎಲ್ ಹರಾಜಿನಲ್ಲಿಯೂ ಹಾಜರಿದ್ದು ಗಮನಸೆಳೆಯುತ್ತಾರೆ.

ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ಹರಾಜಿನಲ್ಲಿ ಅವರು ವಿಶೇಷವಾಗಿ ಭಾಗಿಯಾಗುವ ಮೂಲಕ ಸ್ಟಾರ್​ ಆಟಗಾರರನ್ನು ತಮ್ಮ ತಂಡಕ್ಕೆ ಸೇರಿಕೊಳ್ಳುವ ತನಕ ತಮ್ಮ ಹಠ ಬಿಟ್ಟುಕೊಡದೆ ಬಿಡ್ಡಿಂಗ್​ ಮಾಡಬಲ್ಲರು. ಕಳೆದ ಬಾರಿ ಹ್ಯಾರಿ ಬ್ರೂಕ್ ಅವರನ್ನು 13.25 ಕೋಟಿ ರೂ. ನೀಡಿ ಖರೀದಿ ಮಾಡುವ ಮೂಲಕ ಭಾರಿ ಸುದ್ದಿಯಾಗಿದ್ದರು. ಇದೀಗ ಈ ಬಾರಿ ರಚಿನ್​ ರವೀಂದ್ರ ಮೇಲೆ ಕಣ್ಣಿಟ್ಟಿದ್ದಾರೆ.

ಇದನ್ನೂ ಓದಿ IPL 2024: ಹರಾಜಿನಲ್ಲಿ ಯಾವ ತಂಡಕ್ಕೆ ಎಷ್ಟು ಆಟಗಾರರನ್ನು ಖರೀದಿಸಬಹುದು? ಇಲ್ಲಿದೆ ಮಾಹಿತಿ

31ರ ಹರೆಯದ ಕಾವ್ಯಾ ಯಾವಾಗಲೂ ಐಪಿಎಲ್ ಹರಾಜಿನಲ್ಲಿ ತನ್ನ ಉಪಸ್ಥಿತಿ ತೋರುತ್ತಾರೆ. ತನ್ನ ಅದ್ಭುತ ನೋಟ ಮತ್ತು ಆಟದ ಮೇಲಿನ ಅಪಾರ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದಾರೆ. ಕಾವ್ಯಾ ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ.

ಒಂದು ಬಾರಿಯ ಚಾಂಪಿಯನ್​ ಸನ್​ರೈಸರ್ಸ್​ ಹೈದರಾಬಾದ್​ ತಂಡಕ್ಕೆ 6 ಆಟಗಾರರನ್ನು ಖರೀದಿ ಮಾಡಬಹುದಾಗಿದೆ. ತಲಾ ಮೂರು ಭಾರತೀಯ ಮತ್ತು ವಿದೇಶಿ ಆಟಗಾರರನ್ನು ಬಿಡ್​ ಮಾಡಬಹುದು. ತಂಡದ ಬಳಿ 34 ಕೋಟಿ ರೂ. ಹಣವಿದೆ. ಹೀಗಾಗಿ ರಚಿನ್​ ಅವರನ್ನು ಖರೀದಿ ಮಾಡಬಹುದು.

ಕರ್ನಾಟಕ ಮೂಲಕ ನ್ಯೂಜಿಲ್ಯಾಂಡ್​ ಆಟಗಾರ ರಚಿನ್​ ರವೀಂದ್ರ ಅವರು ಈ ಬಾರಿಯ ವಿಶ್ವಕಪ್​ನಲ್ಲಿ ಅಮೋಘ ಬ್ಯಾಟಿಂಗ್​ ನಡೆಸಿ ಮಿಂಚಿದ್ದರು. ಚೊಚ್ಚಲ ಬಾರಿ ವಿಶ್ವಕಪ್​ನಲ್ಲಿ ಆಡಲಿಳಿದ ಅವರು 3 ಶತಕ ಬಾರಿಸಿ ಗಮನಸೆಳೆದರು. ಅಲ್ಲದೆ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​ ಸೇರಿ ಅನೇಕರ ದಾಖಲೆಗಳನ್ನು ಮುರಿದಿದ್ದರು. ಒಟ್ಟಾರೆ ಅವರು 10 ಪಂದ್ಯಗಳನ್ನು ಆಡಿ 578 ರನ್​ ಬಾರಿಸಿದ್ದರು.

ಆರ್​ಸಿಬಿ ಬಗ್ಗೆ ಒಲವು

ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕೂಡ ರಚಿನ್​ ಅವರನ್ನು ಖರಿದೀಸುವ ರೇಸ್​ನಲ್ಲಿ ಮುಂಚೂಣಿಯಲ್ಲಿದೆ. ಅಲ್ಲದೆ ವಿಶ್ವಕಪ್​ ಆಡುವ ವೇಳೆ ಸ್ವತಃ ರಚಿನ್​ ಅವರು ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡುವ ಆಸೆ ಇದೆ ಎಂದು ಹೇಳಿದ್ದರು. ರಚಿನ್​ ಅವರು ಯಾವ ತಂಡದ ಪಾಲಾಗಲಿದ್ದಾರೆ ಎನ್ನುವುದು ಡಿ.10ಕ್ಕೆ ನಿರ್ಧಾರವಾಗಲಿದೆ.

Exit mobile version