Site icon Vistara News

IPL Streaming Case: ಏನಿದು ಐಪಿಎಲ್​ ಲೈವ್ ಸ್ಟ್ರೀಮಿಂಗ್ ಕೇಸ್​; ತಮನ್ನಾ,ಜಾಕ್ವೆಲಿನ್, ಸಂಜಯ್​ ದತ್​ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದೇಕೆ?

Tamannaah Bhatia and Sanjay Dutt

ಮುಂಬೈ: ಬಹುಭಾಷಾ ನಟಿ ತಮನ್ನಾ ಭಾಟಿಯಾ, ಸಂಜಯ್​ ದತ್, ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಸಿಂಗರ್​ ಬಾದ್​ಶಾ ಅವರಿಗೆ ಮುಂಬೈನ ಸೈಬರ್ ಕ್ರೈಂ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಅಲ್ಲದೆ ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಇವರಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ನಟ ಸಂಜಯ್ ದತ್ ತಾನು ವಿದೇಶದಲ್ಲಿರುವ ಕಾರಣ ವಿಚಾರಣೆಗೆ ಬೇರೊಂದು ಸಮಯ ಮತ್ತು ದಿನಾಂಕ ನಿಗದಿಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ತಮನ್ನಾ ಮತ್ತು ಸಂಜಯ್ ದತ್ ಅವರು ಮಹದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ನ ಅಂಗಸಂಸ್ತೆ ಫೇರ್‌ಪ್ಲೆ (FairPlay) ಅಪ್ಲಿಕೇಶನ್ ಅನ್ನು ಪ್ರಚಾರ ಮಾಡಿದ ಮತ್ತು ಪ್ರತಿನಿಧಿಸಿದ ಆರೋಪ ಎದುರಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಹಲವು ಪ್ರಾಡಕ್ಟ್​ಗಳ ಪ್ರಚಾರ ಮಾಡುತ್ತಾರೆ. ಅನೇಕ ಬಾರಿ ತಾವು ಪ್ರಮೋಷನ್ ಮಾಡುತ್ತಿರುವ ಸಂಸ್ಥೆ ಎಂಥದ್ದು, ಅದರ ಹಿನ್ನೆಲೆ ಏನು ಎಂಬುದನ್ನು ತಿಳಿಯದೇ ದುಡ್ಡಿದಾಗಿ ಜಾಹೀರಾತು ಮಾಡಿಕೊಡುತ್ತಾರೆ. ಸಂಸ್ಥೆಗಳು ಈ ರೀತಿ ತೊಂದರೆಗೆ ಸಿಲುಕಿದಾಗ ಅದರ ಪ್ರಚಾರ ಮಾಡಿದವರೂ ವಿಚಾರಣೆ ಎದುರಿಸಬೇಕಾಗುತ್ತದೆ. ಇದೇ ರೀತಿ ಈ ನಟ ಮತ್ತು ನಟಿಯರಿಗೂ ಈಗ ಸಮಸ್ಯೆ ಎದುರಾಗಿದೆ.

ಇದನ್ನೂ ಓದಿ IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

ವಯಾಕಾಮ್‌ಗೆ ಅಪಾರ ನಷ್ಟ


2023ರ ಐಪಿಎಲ್ ಒಟಿಟಿ ಹಕ್ಕು ಜಿಯೋ ಸಿನಿಮಾ ಪಡೆದಿತ್ತು. ಆದರೆ ಯಾವುದೇ ಬ್ರಾಡ್​ಕಾಸ್ಟಿಂಗ್ ಹಕ್ಕು ಪಡೆಯದೇ ಆ ವರ್ಷ ಐಪಿಎಲ್​​ನ ಫೇರ್​ಪ್ಲೇ ಆ್ಯಪ್​​ನಲ್ಲಿ ಪ್ರಸಾರ ಮಾಡಲಾಗಿತ್ತು. ಇದರಿಂದ ಅಧಿಕೃತವಾಗಿ ಪ್ರಸಾರ ಹಕ್ಕು ಪಡೆದ ಜಿಯೋ ಸಿನಿಮಾಗೆ ಸಾಕಷ್ಟು ನಷ್ಟ ಆಗಿತ್ತು. ಹೀಗಾಗಿ, ಫೇರ್​ಪ್ಲೇ ಆ್ಯಪ್​ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ನೊಟೀಸ್ ಜಾರಿಯಾದ ಹಿನ್ನೆಲೆಯಲ್ಲಿ ನಟಿ ತಮನ್ನಾ ಏಪ್ರಿಲ್ 29 ರಂದು ಮಹಾರಾಷ್ಟ್ರದ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ತನಿಖೆಗೆ ನೋಡಲ್ ಏಜೆನ್ಸಿಯ ಮುಂದೆ ಹಾಜರಾಗಬೇಕಾಗಿದೆ.

Exit mobile version