Site icon Vistara News

IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

IPL Ticket Scam

ಬೆಂಗಳೂರು: ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್​(CSK)​ ಮತ್ತು ಆರ್​ಸಿಬಿ(RCB vS CSK) ಪಂದ್ಯದ ಟಿಕೆಟ್​ ಖರೀದಿಸಲು(IPL Ticket Scam) ಹೋಗಿ ಬೆಂಗಳೂರು ಮೂಲದ ಅಭಿಮಾನಿಯೊಬ್ಬ ಬರೋಬ್ಬರಿ 3 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಬದ್ಧ ಎದುರಾಳಿಗಳಾಗಿರುವ, ಪ್ಲೇ ಆಫ್​(IPL 2024) ಹಂತಕ್ಕೇರಲು ಮಹತ್ವದ ಪಂದ್ಯವಾಗಿರುವ ಕಾರಣ ಈ ಪಂದ್ಯದ ಕಾವು ಹೆಚ್ಚಾಗಿದೆ. ಹೀಗಾಗಿ ಈ ಪಂದ್ಯ ನೋಡಲು ಅಭಿಮಾನಿಗಳು ಕಾಳಸಂತೆಯಲ್ಲಿ ದುಬಾರಿ ಬೆಲೆ ಕೊಟ್ಟು ಟಿಕೆಟ್​ ಖರೀದಿ ಮಾಡುತ್ತಿದ್ದಾರೆ.

ಪದ್ಮ ಸಿನ್ಹಾ ವಿಜಯ್‌ ಕುಮಾರ್‌ ಎನ್ನುವಾತ ipl_2024_tickets_24 ಎಂಬ ಖಾತೆಯ ಮೂಲಕ ಪಂದ್ಯಗಳ ಟಿಕೆಟ್​ ಬುಕ್ಕಿಂಗ್​ ಮಾಡಿಕೊಡಲಾಗುವುದು ಎಂದು ಹೇಳಿ ತನ್ನ ಮೊಬೈಲ್‌ ಸಂಖ್ಯೆ ಮತ್ತು ಆಧಾರ್‌ ಮಾಹಿತಿ ಎಲ್ಲವನ್ನೂ ಹಂಚಿಕೊಂಡು, ಪ್ರತಿ ಟಿಕೆಟ್‌ಗೆ 2,300 ರೂ. ದರದಂತೆ 3 ಟಿಕೆಟ್‌ಗೆ 7,900 ರೂ. ನಿಗದಿ ಪಡಿಸಿದ್ದ. ಈ ಮೂಲಕ ಟಿಕೆಟ್‌ ಖರೀದಿಸಲು ಬರುವವರ ವಿಶ್ವಾಸ ಸಂಪಾದಿಸಿದ್ದ. ಇದನ್ನು ನಂಬಿದ ಬೆಂಗಳೂರು ಮೂಲದ 28 ವರ್ಷದ ಅಭಿಮಾನಿಯೊಬ್ಬ ಟಿಕೆಟ್​ ಖರೀದಿಸಲು ಮುಂದಾಗಿ ತನ್ನ ಖಾತೆಯಲ್ಲಿದ್ದ 3 ಲಕ್ಷ ಕಳೆದುಕೊಂಡಿದ್ದಾನೆ.

ಇದನ್ನೂ ಓದಿ RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

ವಿಜಯ್‌ ಕುಮಾರ್‌ ಆನ್‌ಲೈನ್‌ ಪಾವತಿ ಭರವಸೆ ನೀಡಿದ್ದಂತೆ ಈ ಅಭಿಮಾನಿಗೆ 3 ಇ-ಟಿಕೆಟ್‌ಗಳನ್ನು ವರ್ಗಾಯಿಸಿದ್ದಾನೆ. ಆದರೆ, ಹಣ ಪಾವತಿ ನಿಲ್ಲದೆ ಆಗಾಗ ಈ ಅಭಿಮಾನಿಯ ಖಾತೆಯಿಂದ 7,900 ರೂ.ಗಳಂತೆ ಹಣ ವರ್ಗಾವಣೆ ಆಗಿ 3 ಲಕ್ಷ ರೂ,ಗಳಿಗೂ ಅಧಿಕ ಮೊತ್ತ ವಂಚಕನ ಖಾತೆಗೆ ಸೇರಿದೆ. ಈ ವೇಳೆ ಅಭಿಮಾನಿ ವಿಜಯ್‌ ಕುಮಾರ್‌ಗೆ ಕರೆ ಮಾಡಿ ವಿಚಾರಿಸಿದಾಗ ತಾಂತ್ರಿಕ ದೋಷ ಕಾರಣ ಹೀಗಾಗಿದ್ದು, ಹಣವನ್ನು ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾನೆ. ಆ ಬಳಿಕವೂ ಕೂಡ ಹಣ ವರ್ಗಾವಣೆ ನಡೆದ ಕಾರಣ ಅನುಮಾನಗೊಂಡ ಅಭಿಮಾನಿ ಪೊಲೀಸರಿಗೆ ದೂರು ನೀಡಿದ್ದಾನೆ. ಹಣ ಪಾವತಿಯನ್ನು ತಡೆಯುವ ಹೊತ್ತಿಗಾಗಲೇ 3 ಲಕ್ಷ ರೂ. ಗಳಿಗೂ ಅಧಿಕ ಮೊತ್ತವನ್ನು ಕಳೆದುಕೊಂಡಿದ್ದ. ಸದ್ಯ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.

​ಭಾರೀ ಮಳೆ ಎಚ್ಚರಿಕೆ


ಚೆನ್ನೈ ಮತ್ತು ಆರ್​ಸಿಬಿ ನಡುವಣ ಪಂದ್ಯಕ್ಕೆ ಹವಾಮಾನ ಇಲಾಖೆ ಶೇ.89 ರಷ್ಟು ಮಳೆ(Rain forecast for Bengaluru) ಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಶುಕ್ರವಾರ ಬೆಳಗ್ಗಿನಿಂದಲೇ ಭಾರೀ ಮಳೆಯೂ ಆಗಿದೆ. ಹೀಗಾಗಿ ಶನಿವಾರವೂ ಮಳೆ ಇರುವುದು ಖಚಿತಗೊಂಡಿದೆ. ಒಂದೊಮ್ಮೆ ಮಳೆ ಬಂದು ಪಂದ್ಯ ರದ್ದಾದರೆ ಆರ್​ಸಿಬಿ ಪ್ಲೇ ಆಫ್​ನಿಂದ ಹೊರಬೀಳಲಿದೆ. 15 ಅಂಕ ಪಡೆಯುವ ಚೆನ್ನೈ ಪ್ಲೇ ಆಫ್​ಗೆ ಎಂಟ್ರಿ ಕೊಡಲಿದೆ. ಈಗಾಗಲೇ ಮೂರು ತಂಡಗಳಾದ ಕೆಕೆಆರ್​, ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ಪ್ಲೇ ಆಫ್​ ತಲುಪಿದೆ.

ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

Exit mobile version