Rishabh Pant | ರಿಷಭ್​ ಪಂತ್​ ಆರೋಗ್ಯ ವಿಚಾರಿಸಲು ಧೋನಿ ಆಸ್ಪತ್ರೆಗೆ ಭೇಟಿ ನೀಡಿದ್ದು ಸುಳ್ಳಾ? ಹಾಗಾದರೆ ಚಿತ್ರದಲ್ಲಿರುವುದು ಯಾರು? - Vistara News

ಕ್ರಿಕೆಟ್

Rishabh Pant | ರಿಷಭ್​ ಪಂತ್​ ಆರೋಗ್ಯ ವಿಚಾರಿಸಲು ಧೋನಿ ಆಸ್ಪತ್ರೆಗೆ ಭೇಟಿ ನೀಡಿದ್ದು ಸುಳ್ಳಾ? ಹಾಗಾದರೆ ಚಿತ್ರದಲ್ಲಿರುವುದು ಯಾರು?

ಶಾರುಖ್​ ಖಾನ್​ ದುಬೈನ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿದ್ದ ಚಿತ್ರವನ್ನು ಎಡಿಟ್​ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್​ ಮಾಡಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಬಯಿ: ಡೆಲ್ಲಿ- ಡೆಹ್ರಾಡೂನ್​ ಎಕ್ಸ್​ಪ್ರೆಸ್​ವೇನಲ್ಲಿ ನಡೆದ ಭೀಕರ ಕಾರು ಅವಘಡದಲ್ಲಿ ಗಾಯಗೊಂಡಿರುವ ಭಾರತ ತಂಡದ ವಿಕೆಟ್​ಕೀಪರ್​ ಬ್ಯಾಟರ್​ ರಿಷಭ್ ಪಂತ್ (Rishabh Pant)​ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬಯಿಯ ಕೋಕಿಲಾ ಬೆನ್​ ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲಿಗೆ ಟೀಮ್​ ಇಂಡಿಯಾದ ಮಾಜಿ ನಾಯಕ ಹಾಗೂ ವಿಕೆಟ್​ಕೀಪರ್​ ಬ್ಯಾಟರ್​ ಮಹೇಂದ್ರ ಸಿಂಗ್ ಧೋನಿ ಭೇಟಿ ನೀಡಿ ಪಂತ್​ ಅರೋಗ್ಯ ವಿಚಾರಿಸಿದ್ದರೆ ಎಂಬ ಸುದ್ದಿಯೊಂದು ಹರಿದಾಡಿತ್ತು. ಅದಕ್ಕೆ ಪೂರಕವಾಗಿರುವ ಚಿತ್ರವೊಂದನ್ನೂ ಹಾಕಲಾಗಿದೆ. ಆದರೆ, ಈ ಸುದ್ದಿಯೇ ಸುಳ್ಳು ಎಂಬುದಾಗಿ ಇದೀಗ ಹೇಳಲಾಗುತ್ತಿದೆ.

ಮೂಲ ಚಿತ್ರ ಈ ರೀತಿ ಇದೆ.

ಹಾಗಾದರೆ, ಪಂತ್​ ಆರೋಗ್ಯ ವಿಚಾರಿಸಲು ಧೋನಿ ಹೋಗಿಲ್ಲವೇ? ಹಾಗಾದರೆ ಚಿತ್ರ ಯಾರದ್ದು ಎಂಬ ಪ್ರಶ್ನೆ ಸಹಜ. ಆದರೆ, ಇಂಟರ್ನೆಟ್​ ಯುಗದಲ್ಲಿ ಫೋಟೋಗಳನ್ನು ಎಡಿಟ್​ ಮಾಡಿ ಹರಿಬಿಡುವ ಕೃತ್ಯಗಳು ಹೆಚ್ಚಾಗುತ್ತಿವೆ. ಹಾಗೆಯೆ ಈ ಚಿತ್ರವನ್ನೂ ಎಡಿಟ್​ ಮಾಡಿ ಹಾಕಲಾಗಿದೆ. ಅಂದರೆ ನಿಜವಾದ ಪೋಟೋ ಯಾರದ್ದು ಎಂಬ ಪ್ರಶ್ನೆಯೂ ಸಹಜ. ಆ ಚಿತ್ರವೂ ಕೋಕಿಲಾ ಬೆನ್​ ಆಸ್ಪತ್ರೆಯದ್ದಲ್ಲ. ಬದಲಾಗಿದೆ. ಬಾಲಿವುಡ್​ ಬಾದ್​ಶಾ ಶಾರುಖ್​ ಖಾನ್​ ಅವರ ಚಿತ್ರ. ಅವರ ದೇಹಕ್ಕೆ ಧೋನಿಯ ತಲೆಯನ್ನಿಟ್ಟು ಪ್ರಕಟಿಸಲಾಗಿದೆ.

ಶಾರುಖ್​ ಖಾನ್ ಅವರು 2017ರ ಮೇ 8ರಂದು ದುಬೈನ ಅಲ್​ ಜಲಿಲಾ ಆಸ್ಪತ್ರೆಗೆ ಭೇಟಿ ನೀಡಿ ಪುಟಾಣಿ ಮಗುವೊಂದರ ಆರೋಗ್ಯ ವಿಚಾರಿಸಿದ್ದರು. ಆ ಚಿತ್ರವನ್ನು ದುಬೈ ಸರಕಾರ ತನ್ನ ವೆಬ್​ಸೈಟ್​ನಲ್ಲಿ ಪ್ರಕಟಿಸಿತ್ತು. ಅದೇ ಚಿತ್ರದಲ್ಲಿ ಶಾರುಖ್​ ದೇಹಕ್ಕೆ ಧೋನಿಯ ತಲೆಯನ್ನಿಟ್ಟು, ಬೆಡ್​ಮೇಲೆ ಗಾಯಗೊಂಡ ರಿಷಭ್ ಪಂತ್​ ಅವರ ಚಿತ್ರವನ್ನು ಇರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ.

ಇದನ್ನೂ ಓದಿ | Rishabh Pant | ರಿಷಭ್​ ಪಂತ್​ ಮೊಣಕಾಲಿನ ಶಸ್ತ್ರಚಿಕಿತ್ಸೆ ಯಶಸ್ವಿ; ಬಿಸಿಸಿಐ ಮಾಹಿತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಕಿಂಗ್ ಕೊಹ್ಲಿಗಾಗಿ ಪುಟಾಣಿ ಫ್ಯಾನ್ ಹಠ: ಹೋಟೆಲ್ ಸಿಬ್ಬಂದಿ ತಡೆದಿದ್ದಕ್ಕೆ ಕಣ್ಣೀರು ಹಾಕಿದ ಬಾಲಕ

VISTARANEWS.COM


on

ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್‌ಸಿಬಿ ಜಯಗಳಿಸಿದ ನಂತರ, ಹೋಟೆಲ್‌ನಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಪುಟಾಣಿ ಬಾಲಕನೊಬ್ಬ ಬ್ಯಾಟ್ ಹಿಡಿದು ಬಹಳ ಹೊತ್ತು ಕಾತರದಿಂದ ಕಾಯುತ್ತಿದ್ದ. ಆದರೆ ಕೊಹ್ಲಿ ಹೋಟೆಲ್‌ಗೆ ಆಗಮಿಸಿದಾಗ ಭದ್ರತಾ ಸಿಬ್ಬಂದಿ ಬಾಲಕನನ್ನು ಹತ್ತಿರ ಹೋಗಲು ಬಿಡದೆ ತಡೆದಿದ್ದಾರೆ. ಇದರಿಂದ ಮನನೊಂದ ಬಾಲಕ ತನ್ನ ಕೈಯಲ್ಲಿದ್ದ ಬ್ಯಾಟನ್ನು ನೆಲಕ್ಕೆ ಎಸೆದು ಗಳಗಳನೇ ಅತ್ತಿದ್ದಾನೆ.

ಹೋಟೆಲ್ ಪ್ರವೇಶಿಸಿದ ವಿರಾಟ್ ಕೊಹ್ಲಿ ಸುತ್ತಲೂ ಸಿಬ್ಬಂದಿಗಳು ಬೌನ್ಸರ್‌ಗಳಂತೆ ನಿಂತು ಯಾರೂ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತಿದ್ದರು. ಈ ವೇಳೆ ಓಡೋಡಿ ಬಂದ ಬಾಲಕನನ್ನು ಸಿಬ್ಬಂದಿ ಬಲವಂತವಾಗಿ ತಡೆದಿದ್ದಾರೆ. ಇತ್ತ ಕೊಹ್ಲಿ ಕೂಡ ಬಾಲಕನತ್ತ ಗಮನ ಹರಿಸದೆ ನೇರವಾಗಿ ಮುಂದೆ ಸಾಗಿದ್ದಾರೆ. ತನ್ನ ನೆಚ್ಚಿನ ಕ್ರಿಕೆಟಿಗನನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂಬ ನೋವಿನಿಂದ ಬಾಲಕ ಪೋಷಕರ ಬಳಿ ತೆರಳಿ ಜೋರಾಗಿ ಅಳಲಾರಂಭಿಸಿದನು. ಪೋಷಕರು ಎಷ್ಟೇ ಸಮಾಧಾನ ಪಡಿಸಿದರೂ ಆ ಪುಟ್ಟ ಅಭಿಮಾನಿಯ ಸಿಟ್ಟು ಮತ್ತು ಬೇಸರ ಮಾತ್ರ ಕಡಿಮೆಯಾಗಲಿಲ್ಲ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. “ಕೊಹ್ಲಿ ಕನಿಷ್ಠ ಪಕ್ಷ ಆ ಮಗುವಿಗೆ ಕೈಬೀಸಿ ವಿಶ್ ಮಾಡಬೇಕಿತ್ತು, ಆಗ ಆ ಮಗುವಿನ ಮುಖದಲ್ಲಿ ನಗು ಮೂಡುತ್ತಿತ್ತು” ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು, “ಕೊಹ್ಲಿಗೆ ಆ ಸಮಯದಲ್ಲಿ ಬಾಲಕ ಅವರ ಗಮನಕ್ಕೆ ಬಂದಿರಲಿಕ್ಕಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಏನೇ ಇರಲಿ, ಕ್ರಿಕೆಟ್ ತಾರೆಗಳ ಮೇಲಿರುವ ಅಭಿಮಾನವು ಕೆಲವೊಮ್ಮೆ ಇಂತಹ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುವುದು ಸಹಜ ಎಂಬ ಚರ್ಚೆಗಳು ನಡೆಯುತ್ತಿವೆ.

Continue Reading

Latest

ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾದ RCB! ಹೇಗಿರಲಿದೆ ಹೈವೋಲ್ಟೇಜ್‌ ಮ್ಯಾಚ್‌?

VISTARANEWS.COM


on

ಇಂದು (ಏಪ್ರಿಲ್ 27) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026ರ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ಮುಖಾಮುಖಿಯಾಗಲಿವೆ. ಏಪ್ರಿಲ್ 19 ರಂದು ಬೆಂಗಳೂರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳಲು ಹಾಲಿ ಚಾಂಪಿಯನ್ ಆರ್‌ಸಿಬಿ ಸರ್ವಸನ್ನದ್ಧವಾಗಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆರ್‌ಸಿಬಿ, ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸಿ ಭರ್ಜರಿ ಫಾರ್ಮ್‌ನಲ್ಲಿದೆ. ಆದರೆ, ಫಿಲ್ ಸಾಲ್ಟ್ ಅವರ ಗಾಯದ ಸಮಸ್ಯೆ ತಂಡಕ್ಕೆ ಸಣ್ಣ ತಲೆನೋವು ತಂದಿದ್ದು, ಅವರ ಸ್ಥಾನದಲ್ಲಿ ಜಾಕೋಬ್ ಬೆಥೆಲ್ ಕಣಕ್ಕಿಳಿಯುವ ಸಾಧ್ಯತೆಯಿದೆ.

ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ತೀವ್ರ ಒತ್ತಡದಲ್ಲಿದೆ. ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 264 ರನ್ ಗಳಿಸಿದ್ದರೂ ಸಹ, ಟಿ20 ಇತಿಹಾಸದ ದಾಖಲೆಯ ರನ್ ಚೇಸ್‌ಗೆ ಬಲಿಯಾಗಿ ಸೋಲೊಪ್ಪಿಕೊಂಡಿತ್ತು. ಕೆ.ಎಲ್ ರಾಹುಲ್ ಅವರ ಅಮೋಘ 152 ರನ್‌ಗಳ ಇನಿಂಗ್ಸ್ ಕೂಡ ತಂಡಕ್ಕೆ ಜಯ ತಂದುಕೊಡಲಿಲ್ಲ. ಸದ್ಯ ಏಳು ಪಂದ್ಯಗಳಲ್ಲಿ ಕೇವಲ ಮೂರು ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ತಂಡಕ್ಕೆ, ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಲುಂಗಿ ಎನ್‌ಗಿಡಿ ಅವರ ಅನುಪಸ್ಥಿತಿ ಡೆಲ್ಲಿಯ ಬೌಲಿಂಗ್ ವಿಭಾಗಕ್ಕೆ ಹಿನ್ನಡೆಯಾಗುವ ಭೀತಿ ಎದುರಾಗಿದೆ.

ಇತಿಹಾಸದ ಅಂಕಿಅಂಶಗಳನ್ನು ಗಮನಿಸಿದರೆ ಆರ್‌ಸಿಬಿ ತಂಡವು ಡೆಲ್ಲಿ ವಿರುದ್ಧ ಸ್ಪಷ್ಟ ಪ್ರಾಬಲ್ಯ ಹೊಂದಿದೆ. ಈವರೆಗೆ ನಡೆದ 34 ಮುಖಾಮುಖಿಗಳಲ್ಲಿ ಆರ್‌ಸಿಬಿ 20 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ 13 ರಲ್ಲಿ ಮಾತ್ರ ಜಯ ಸಾಧಿಸಿದೆ. ದೆಹಲಿಯ ಮೈದಾನದಲ್ಲೂ ಆಡಿದ 11 ಪಂದ್ಯಗಳಲ್ಲಿ 7 ಬಾರಿ ಬೆಂಗಳೂರು ಜಯಭೇರಿ ಬಾರಿಸಿದೆ. ಇಂದಿನ ಪಂದ್ಯವು ಸಂಜೆ 7:30ಕ್ಕೆ ಆರಂಭವಾಗಲಿದ್ದು, ಗೆಲುವಿನ ಲಯದಲ್ಲಿರುವ ರಜತ್ ಪಾಟಿದಾರ್ ಸೈನ್ಯವು ಹತಾಶ ಸ್ಥಿತಿಯಲ್ಲಿರುವ ಡೆಲ್ಲಿಯನ್ನು ಅವರದ್ದೇ ತವರಿನಲ್ಲಿ ಮಣಿಸಿ ಸೇಡು ತೀರಿಸಿಕೊಳ್ಳುತ್ತದೆಯೇ ಎಂದು ಕಾದು ನೋಡಬೇಕಿದೆ.

Continue Reading

Latest

ಮುಂದಿನ ಪಂದ್ಯದಿಂದ ‘ಯಂಗ್ ಸೆನ್ಸೇಷನ್’ ಔಟ್? ವೈಭವ್ ಸೂರ್ಯವಂಶಿ ಬಗ್ಗೆ ಕೋಚ್ ಕೊಟ್ಟ ಅಪ್ಡೇಟ್ ಏನು?

VISTARANEWS.COM


on

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 38 ಎಸೆತಗಳಲ್ಲಿ 103 ರನ್ ಚಚ್ಚಿ ಐಪಿಎಲ್‌ನಲ್ಲಿ ಸಂಚಲನ ಸೃಷ್ಟಿಸಿದ್ದ ರಾಜಸ್ಥಾನ ರಾಯಲ್ಸ್ ತಂಡದ ಬ್ಯಾಟರ್ ವೈಭವ್ ಸೂರ್ಯವಂಶಿ ಈಗ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ. ಹೈದರಾಬಾದ್ ವಿರುದ್ಧದ ಅಮೋಘ ಶತಕದ ನಂತರ ಫೀಲ್ಡಿಂಗ್‌ಗೆ ಬಂದಿದ್ದ ವೈಭವ್, ಮಂಡಿರಜ್ಜು (Hamstring) ಸಮಸ್ಯೆಯಿಂದಾಗಿ ಮೈದಾನದಿಂದ ಹೊರನಡೆದಿದ್ದರು. ಫಿಸಿಯೋಗಳ ನೆರವಿನೊಂದಿಗೆ ಕುಂಟುತ್ತಾ ಮೈದಾನ ತೊರೆದ ಅವರು ಮತ್ತೆ ಫೀಲ್ಡಿಂಗ್‌ಗೆ ಮರಳದಿದ್ದದ್ದು ಅಭಿಮಾನಿಗಳಲ್ಲಿ ಮುಂದಿನ ಪಂದ್ಯದ ಲಭ್ಯತೆಯ ಬಗ್ಗೆ ಆತಂಕ ಮೂಡಿಸಿತ್ತು.

ಈ ಕುರಿತು ಪಂದ್ಯದ ಬಳಿಕ ಮಾಹಿತಿ ನೀಡಿದ ರಾಜಸ್ಥಾನ ತಂಡದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಸೂರ್ಯವಂಶಿ ಅವರ ಗಾಯ ಅಷ್ಟೊಂದು ಗಂಭೀರವಾಗಿಲ್ಲ ಎಂದು ತಿಳಿಸಿದ್ದಾರೆ. “ವೈಭವ್ ಅವರ ಮಂಡಿರಜ್ಜು ಭಾಗದಲ್ಲಿ ಸ್ವಲ್ಪ ಅಸ್ವಸ್ಥತೆ ಇರುವುದು ನಿಜ, ಆದರೆ ಸದ್ಯ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಗುಣಮುಖರಾಗುತ್ತಿದ್ದಾರೆ. ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಅವರ ಫಿಟ್‌ನೆಸ್ ಬಗ್ಗೆ ಸಂಪೂರ್ಣ ಸ್ಪಷ್ಟತೆ ಸಿಗಲಿದೆ” ಎಂದು ಹೇಳುವ ಮೂಲಕ ಸೂರ್ಯವಂಶಿ ಮುಂದಿನ ಪಂದ್ಯಕ್ಕೆ ಮರಳುವ ಆಶಾವಾದ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನ ರಾಯಲ್ಸ್ ತಂಡವು ಏಪ್ರಿಲ್ 28 ರಂದು ಸತತ ಆರು ಗೆಲುವುಗಳೊಂದಿಗೆ ಅಜೇಯವಾಗಿರುವ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಪ್ರಸ್ತುತ ಟೂರ್ನಿಯಲ್ಲಿ ಆರ್‌ಆರ್ ತಂಡದ ಪ್ರಮುಖ ರನ್ ಸ್ಕೋರರ್ ಆಗಿರುವ ವೈಭವ್ ಸೂರ್ಯವಂಶಿ ಅಲಭ್ಯರಾದರೆ, ಅದು ತಂಡಕ್ಕೆ ದೊಡ್ಡ ಹೊಡೆತ ನೀಡಲಿದೆ. ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಸಂಜು ಸ್ಯಾಮ್ಸನ್ ಪಡೆಗೆ ಪ್ಲೇ-ಆಫ್ ಹಾದಿ ಸುಗಮಗೊಳಿಸಲು ಈ ಯಂಗ್ ಸೆನ್ಸೇಷನ್ ಆಟಗಾರನ ಫಿಟ್‌ನೆಸ್ ಅತ್ಯಂತ ನಿರ್ಣಾಯಕವಾಗಿದೆ.

Continue Reading

Latest

ಹೋಮ್‌ಗ್ರೌಂಡ್‌ನಲ್ಲಿ ಆರ್‌ಸಿಬಿಗಿಂದು ಕೊನೆ ಲೀಗ್‌ ಪಂದ್ಯ! ಗುಜರಾತ್ ಟೈಟನ್ಸ್ ಸವಾಲಿಗೆ ಸಜ್ಜಾದ ವಿರಾಟ್‌ ಪಡೆ

VISTARANEWS.COM


on

ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಈ ಬಾರಿಯ ಐಪಿಎಲ್ ಸೀಸನ್‌ನಲ್ಲಿ ತನ್ನ ತವರು ಮೈದಾನವಾದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಅಂತಿಮ ಲೀಗ್ ಪಂದ್ಯವನ್ನು ಆಡಲಿದೆ. ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ವಿರುದ್ಧ ನಡೆಯಲಿರುವ ಈ ಹಣಾಹಣಿಯಲ್ಲಿ ಗೆಲುವಿನ ಮೂಲಕ ತವರಿನ ಪ್ರೇಕ್ಷಕರಿಗೆ ಸ್ಮರಣೀಯ ವಿದಾಯ ಹೇಳಲು ಬೆಂಗಳೂರು ಪಡೆ ಸಜ್ಜಾಗಿದೆ. ಈ ಪಂದ್ಯದ ನಂತರ ಆರ್‌ಸಿಬಿ ತನ್ನ ಮುಂದಿನ ಪಂದ್ಯಗಳಿಗಾಗಿ ರಾಯ್ಪುರಕ್ಕೆ ಪ್ರಯಾಣ ಬೆಳೆಸಲಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ ಭದ್ರ ನೆಲೆ ಕಂಡುಕೊಳ್ಳಲು ಈ ಗೆಲುವು ಉಭಯ ತಂಡಗಳಿಗೂ ಅತ್ಯಂತ ನಿರ್ಣಾಯಕವಾಗಿದೆ.

ಆರ್‌ಸಿಬಿ ಈ ವರ್ಷ ಚಿನ್ನಸ್ವಾಮಿ ಮೈದಾನದಲ್ಲಿ ಆಡಿದ 4 ಪಂದ್ಯಗಳ ಪೈಕಿ 3ರಲ್ಲಿ ಜಯ ಸಾಧಿಸಿ ಭರ್ಜರಿ ಫಾರ್ಮ್‌ನಲ್ಲಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಅನುಭವಿಸಿದ ಸೋಲಿನ ಆಘಾತದಿಂದ ಹೊರಬಂದು, ಮತ್ತೆ ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿ ರಜತ್ ಪಾಟೀದಾರ್ ಸೈನ್ಯವಿದೆ. ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ, ನಾಯಕ ರಜತ್ ಪಾಟೀದಾರ್ ಮತ್ತು ಫಿಲ್ ಸಾಲ್ಟ್ ಅಬ್ಬರಿಸುತ್ತಿದ್ದು, ತಂಡಕ್ಕೆ ಬಲಿಷ್ಠ ಅಡಿಪಾಯ ಹಾಕುತ್ತಿದ್ದಾರೆ. ವಿಶೇಷವಾಗಿ ಟಿಮ್ ಡೇವಿಡ್ ಅವರ 203.52 ರ ಸ್ಟ್ರೈಕ್ ರೇಟ್ ತಂಡದ ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಬಲ ತಂದಿದೆ. ಬೌಲಿಂಗ್‌ನಲ್ಲಿ ಹೇಜಲ್‌ವುಡ್ ಮತ್ತು ಭುವನೇಶ್ವರ್ ಕುಮಾರ್ ಜೋಡಿ ಎದುರಾಳಿಗಳನ್ನು ಕಟ್ಟಿಹಾಕಲು ಸನ್ನದ್ಧವಾಗಿದೆ.

ಇನ್ನೊಂದೆಡೆ, ಗುಜರಾತ್ ಟೈಟನ್ಸ್ ತಂಡವು ಸ್ಥಿರ ಪ್ರದರ್ಶನದ ಹುಡುಕಾಟದಲ್ಲಿದ್ದು, ಪ್ರಬಲ ಬೌಲಿಂಗ್ ಪಡೆಯನ್ನು ನೆಚ್ಚಿಕೊಂಡಿದೆ. ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್ ಮತ್ತು ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರನ್ನೊಳಗೊಂಡ ವೇಗದ ಪಡೆ ಆರ್‌ಸಿಬಿಯ ಸ್ಫೋಟಕ ಬ್ಯಾಟರ್‌ಗಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಅದರಲ್ಲೂ ಪ್ರಸಿದ್ಧ್ ಕೃಷ್ಣ ತಮ್ಮ ತವರು ಮೈದಾನದಲ್ಲಿ ಹಳೆಯ ತಂಡದ ವಿರುದ್ಧ ಹೇಗೆ ಮಿಂಚಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಉಭಯ ತಂಡಗಳ ನಡುವೆ ಇದುವರೆಗೆ ನಡೆದ 6 ಮುಖಾಮುಖಿಗಳಲ್ಲಿ ಎರಡೂ ತಂಡಗಳು ತಲಾ 3 ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿರುವುದರಿಂದ, ಇಂದಿನ ಪಂದ್ಯವು ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡುವುದರಲ್ಲಿ ಸಂಶಯವಿಲ್ಲ.

Continue Reading
Advertisement
Latest16 minutes ago

ಅಪ್ಪು ಸರ್ ಕೊಟ್ಟ ಆ ಪ್ರೋತ್ಸಾಹವೇ ನನ್ನ ಯಶಸ್ಸಿನ ಗುಟ್ಟು: ಕನ್ನಡಿಗರ ನೆಚ್ಚಿನ ‘ಅಂಜನಿಪುತ್ರ’ನ ಬಗ್ಗೆ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಹೇಳಿದ್ದೇನು?

bigbreaking35 minutes ago

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

Latest1 hour ago

ಕಿಂಗ್ ಕೊಹ್ಲಿಗಾಗಿ ಪುಟಾಣಿ ಫ್ಯಾನ್ ಹಠ: ಹೋಟೆಲ್ ಸಿಬ್ಬಂದಿ ತಡೆದಿದ್ದಕ್ಕೆ ಕಣ್ಣೀರು ಹಾಕಿದ ಬಾಲಕ

Latest2 hours ago

ಹಣ ಪಡೆಯಲು ಬ್ಯಾಂಕಿಗೆ ಸಹೋದರಿಯ ಅಸ್ಥಿಪಂಜರವನ್ನೇ ತಂದ ವ್ಯಕ್ತಿ!

Latest4 hours ago

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರಾ? ಪರಮೇಶ್ವರ್ ಮೌನದ ಹಿಂದೆ ಅಡಗಿದೆಯೇ ದೊಡ್ಡ ರಹಸ್ಯ?

Latest5 hours ago

ಸಾಲದ ಸುಳಿಯಲ್ಲಿ ರಾಜ್ಯ ಸರ್ಕಾರ! ಆರ್ಥಿಕ ಶಿಸ್ತಿನ ಬಗ್ಗೆ ಹೆಚ್‌ಡಿಕೆ ಆತಂಕ

Latest5 hours ago

ರಿಷಬ್ ಶೆಟ್ಟಿ ಸಿನಿಮಾದ ತೆಲುಗು ವರ್ಷನ್ ರೆಡಿ: ಟಾಲಿವುಡ್‌ನಲ್ಲಿ ಬಿಡುಗಡೆಗೆ ದಿನಾಂಕ ನಿಗದಿ! ಯಾವುದು ಆ ಸಿನಿಮಾ?

Latest6 hours ago

‘ಕೆಡಿ’ ಹಾಡಿನ ವಿವಾದಕ್ಕೆ ತೆರೆ: ಕ್ಷಮೆಯಾಚಿಸಿ 50 ಬುಡಕಟ್ಟು ಹುಡುಗಿಯರ ಶಿಕ್ಷಣದ ಜವಾಬ್ದಾರಿ ಹೊತ್ತ ಸಂಜಯ್ ದತ್!

Latest6 hours ago

ಜಕಾರ್ತಾದಲ್ಲಿ ರೈಲುಗಳ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು, 81 ಜನರಿಗೆ ಗಾಯ! ಅಪಘಾತಕ್ಕೆ ಕಾರಣವಾಯಿತೇ ಟ್ಯಾಕ್ಸಿ?

Latest23 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌