Ishan Kishan: ದಕ್ಷಿಣ ಆಫ್ರಿಕಾ ಟೆಸ್ಟ್​ ಸರಣಿಯಿಂದ ದಿಢೀರ್​ ಹಿಂದೆ ಸರಿದ ಇಶಾನ್​ ಕಿಶನ್ - Vistara News

ಕ್ರಿಕೆಟ್

Ishan Kishan: ದಕ್ಷಿಣ ಆಫ್ರಿಕಾ ಟೆಸ್ಟ್​ ಸರಣಿಯಿಂದ ದಿಢೀರ್​ ಹಿಂದೆ ಸರಿದ ಇಶಾನ್​ ಕಿಶನ್

ಇಶಾನ್ ಕಿಶನ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹಿಂದೆ ಸರಿದಿದ್ದಾರೆ.

VISTARANEWS.COM


on

Ishan Kishan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯಿಂದ ಟೀಮ್​ ಇಂಡಿಯಾದ ಯುವ ಬ್ಯಾಟರ್​ ಕಮ್​ ಕೀಪರ್​ ಇಶಾನ್​ ಕಿಶನ್(Ishan Kishan)​ ಅವರು ಹಿಂದೆ ಸರಿದಿದ್ದಾರೆ. ಬದಲಿ ಆಟಗಾರನಾಗಿ ಶ್ರೀಕರ್​ ಭರತ್​(KS Bharat) ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಇಶಾನ್​ ಅವರು ಸರಣಿಯಿಂದ ಹಿಂದೆ ಸರಿದ ವಿಚಾರವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಪ್ರಕಟಿಸಿದೆ.

“ಇಶಾನ್ ಕಿಶನ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹಿಂದೆ ಸರಿಯುವಂತೆ ಕೋರಿ ಮನವಿ ಮಾಡಿದ್ದಾರೆ. ಅವರ ಮನವಿಯಂತೆ ಅವರನ್ನು ಸರಣಿಯಿಂದ ಕೈಬಿಡಲಾಗಿದೆ. ಅವರ ಸ್ಥಾನಕ್ಕೆಎ ವಿಕೆಟ್​ ಕೀಪರ್​-ಬ್ಯಾಟರ್​ ಆಗಿರುವ ಶ್ರೀಕರ್​ ಭರತ್​ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ” ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.

ಶನಿವಾರವಷ್ಟೇ ಅನುಭವಿ ಬೌಲರ್​ ಮೊಹಮ್ಮದ್​ ಶಮಿ ಅವರು ಫಿಟ್​ ಇಲ್ಲದ ಕಾರಣ ಟೆಸ್ಟ್​ ಸರಣಿಯಿಂದ ಹೊರಬಿದ್ದಿದ್ದರು. ಆದರೆ ಅವರ ಸ್ಥಾನಕ್ಕೆ ಬೌಲರ್​ ಆಯ್ಕೆ ಮಾಡುವ ಬದಲು ಶ್ರೇಯಸ್​ ಅಯ್ಯರ್​ ಅವರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಅಯ್ಯರ್​ ಅವರನ್ನು 2 ಏಕದಿನ ಪಂದ್ಯದಿಂದ ಕೈ ಬಿಡಲಾಯಿತು.

ಭಾರತ ಟೆಸ್ಟ್​ ಪರಿಷ್ಕೃತ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಕೆ.ಎಲ್ ರಾಹುಲ್ (ವಿಕೆಟ್​ ಕೀಪರ್​), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್​ಪ್ರೀತ್​ ಬುಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ, ಕೆ.ಎಸ್ ಭರತ್ (ವಿಕೆಟ್​ ಕೀಪರ್​).

ಇದನ್ನೂ ಓದಿ IND vs SA: ಅರ್ಶ್​ದೀಪ್ ‘ಆವೇಶ’ ಬೌಲಿಂಗ್ ದಾಳಿಗೆ ನಲುಗಿದ ​ದಕ್ಷಿಣ ಆಫ್ರಿಕಾ

ರಿಷಭ್​ ಪಂತ್​ ಅವರು ಕಾರು ಅಪಘಾತದಲ್ಲಿ ಗಾಯಗೊಂಡ ಕಾರಣ ಅವರ ಬದಲಿಗೆ ಭರತ್​ ಅವರಿಗೆ ಟೆಸ್ಟ್​ನಲ್ಲಿ ಟೀಮ್​ ಇಂಡಿಯಾದಲ್ಲಿ ವಿಕೆಟ್​ ಕೀಪಿಂಗ್​ ಜವಾಬ್ದಾರಿ ನೀಡಲಾಗಿತ್ತು. ಆಸೀಸ್​ ವಿರುದ್ಧದ ಬಾರ್ಡರ್​ ಗವಾಸ್ಕರ್​ ಟೆಸ್ಟ್​ ಸರಣಿಯಲ್ಲಿ ಅವರು ಟೀಮ್​ ಇಂಡಿಯಾಕ್ಕೆ ಪಪಾರ್ಪಣೆ ಮಾಡಿದ್ದರು. ಆದರೆ ಅವರು ಇದುವರೆಗೂ ನಿರೀಕ್ಷಿತ ಪ್ರದರ್ಶನ ತೋರಿಲ್ಲ. ಸದ್ಯ ಭಾರತ ಪರ 5 ಟೆಸ್ಟ್​ ಆಡಿರುವ ಅವರು 129 ರನ್​ ಬಾರಿಸಿದ್ದಾರೆ.

ದಕ್ಷಿಣ ಆಫ್ರಿಕಾ ಸರಣಿಗೆ ಆಯ್ಕೆಯಾದರೂ ಕೂಡ ಭರತ್​ ಆಡುವ ಬಳಗಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಕನ್ನಡಿಗ ಕೆ.ಎಲ್​ ರಾಹುಲ್​ ಅವರು ಪ್ರಧಾನ ಕೀಪರ್​ ಆಗಿದ್ದಾರೆ. ರಾಹುಲ್ ವಿಶ್ರಾಂತಿ ಬಯಿಸಿದರೆ ಮಾತ್ರ ಅವರಿಗೆ ಅವಕಾಶ ಸಿಗಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

ICC Women’s T20 World Cup: ಐಸಿಸಿ ಮಹಿಳಾ ಟಿ20 ವಿಶ್ವಕಪ್​ ಟೂರ್ನಿಯ(ICC Women’s T20 World Cup) ವೇಳಾಪಟ್ಟಿ ಪ್ರಕಟಗೊಂಡಿದ್ದು, ಭಾರತ ತಂಡ ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.

VISTARANEWS.COM


on

ICC Women's T20 World Cup
Koo

ದುಬೈ: ಒಂಬತ್ತನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್​ ಟೂರ್ನಿಯ(ICC Women’s T20 World Cup) ವೇಳಾಪಟ್ಟಿ ಪ್ರಕಟಗೊಂಡಿದ್ದು, ಭಾರತ ತಂಡ ಹಾಲಿ ಚಾಂಪಿಯನ್​ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್​ ಮತ್ತು ಪಾಕಿಸ್ತಾನ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ವರ್ಷದ ಅಕ್ಟೋಬರ್ 3 ರಿಂದ 20 ರವರೆಗೆ ಬಾಂಗ್ಲಾದೇಶದಲ್ಲಿ ಟೂರ್ನಿ ನಡೆಯಲಿದೆ. ಸಿಲ್ಹೆಟ್‌ನಲ್ಲಿ ತಮ್ಮ ಎಲ್ಲಾ ಗುಂಪು ಪಂದ್ಯಗಳು ನಡೆಯಲಿದ್ದು, ಭಾರತವು ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ.

ಸಾಂಪ್ರದಾಯಿ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತದ ವನಿತೆಯರು ಅಕ್ಟೋಬರ್ 6 ರಂದು ಪಂದ್ಯವನ್ನಾಡಲಿದ್ದಾರೆ. ಅಕ್ಟೋಬರ್ 13 ರಂದು ಆರು ಬಾರಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾದ ವಿರುದ್ಧ ಆಡಲಿದೆ. ಒಂದು ಪಂದ್ಯ ಕ್ವಾಲಿಫೈಯರ್​ನಲ್ಲಿ ಗೆದ್ದು ಬಂದ ತಂಡದ ವಿರುದ್ಧ ಆಡಲಿದೆ. ಆತಿಥೇಯ ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಇದನ್ನೂ ಓದಿ T20 World Cup : ಉನ್ಮುಕ್ತ್​ ಚಾಂದ್​ಗೆ ತೆರೆಯದ ಭಾಗ್ಯದ ಬಾಗಿಲು; ಯುಎಸ್​ ತಂಡದಲ್ಲಿ ಇಲ್ಲ ಚಾನ್ಸ್​!

ಟೂರ್ನಮೆಂಟ್‌ನಲ್ಲಿ ಪ್ರತಿ ತಂಡವು ನಾಲ್ಕು ಗುಂಪು ಪಂದ್ಯಗಳನ್ನು ಆಡುತ್ತದೆ, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿದೆ. ಸೆಮಿಫೈನಲ್​ ಪಂದ್ಯಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯಲಿದೆ. ಫೈನಲ್​ ಪಂದ್ಯ ಅಕ್ಟೋಬರ್​ 20 ರಂದು ಢಾಕಾದಲ್ಲಿ ನಡೆಯಲಿದೆ ಎಂದು ಐಸಿಸಿ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ. ಅರ್ಹತಾ ಸುತ್ತಿನಲ್ಲಿ ಫೈನಲ್​ ಪ್ರವೇಶಿಸಿದ 2 ತಂಡಗಳು ಪ್ರಧಾನ ಸುತ್ತಿನಲ್ಲಿ ಆಡಲಿದೆ.

ಟೂರ್ನಿಯಲ್ಲಿ ಒಟ್ಟು 23 ಪಂದ್ಯಗಳನ್ನು ಆಡಲಾಗುತ್ತದೆ. 19 ದಿನ ಪಂದ್ಯಾವಳಿ ಸಾಗಲಿದೆ. ಢಾಕಾ ಮತ್ತು ಸಿಲ್ಹೆಟ್‌ನಲ್ಲಿ ಪಂದ್ಯಗಳು ನಡೆಯಲಿವೆ. ಲೀಗ್​ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನವಿಲ್ಲ. ಕೇಲವ ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮಾತ್ರ ಮೀಸಲು ದಿನ ನಿಗದಿಯಾಗಿದೆ.

Continue Reading

ಕ್ರೀಡೆ

Viral News: ಎಐ ತಂತ್ರಜ್ಞಾನದ ಮೂಲಕ ತಂಡ ಆಯ್ಕೆ ಮಾಡಿ ಟಿ20 ಸರಣಿ ಗೆದ್ದ ಇಂಗ್ಲೆಂಡ್​ ಮಹಿಳಾ ತಂಡ

viral news: ಕೃತಕ ಬುದ್ದಿಮತ್ತೆ ತಂತ್ರಜ್ಞಾನವು ಬಲಿಷ್ಠ ತಂಡದ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿ ನಿರ್ಣಾಯಕ ಅಭಿಪ್ರಾಯಗಳನ್ನು ನೀಡಿತು ಮತ್ತು ಆಸ್ಟ್ರೆಲಿಯಾ ವಿರುದ್ಧದ ಟಿ20 ಸರಣಿಯನ್ನು ಗೆಲ್ಲಲು ಇದು ಸಹಾಯ ಮಾಡಿತು ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

viral news
Koo

ಲಂಡನ್​: ಕೃತಕ ಬುದ್ಧಿಮತ್ತೆ ತಂತ್ರಜ್ಞಾನಕ್ಕೆ (Artificial Intelligence) ಜಗತ್ತೇ ತೆರೆದುಕೊಳ್ಳುತ್ತಿದೆ. ಅದರಲ್ಲೂ, ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್‌ಜಿಪಿಟಿಯಂತಹ ಚಾಟ್‌ಬಾಟ್‌ಗಳು (ChatBot) ಪ್ರಬಂಧ ಬರೆಯುವುದರಿಂದ ಹಿಡಿದು, ಕೋಡ್‌ ರಚನೆವರೆಗೆ ಛಾಪು ಮೂಡಿಸುತ್ತಿವೆ. ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಪ್ರಾಮುಖ್ಯತೆಯನ್ನು ಇದು ಸಾರುತ್ತಿದೆ. ಇದೀಗ ಈ ತಂತ್ರಜ್ಞಾನವನ್ನು ಇಂಗ್ಲೆಂಡ್​ ಮಹಿಳಾ ಕ್ರಿಕೆಟ್(England women’s cricket team)​ ತಂಡವೂ ಇದರ ಲಾಭ ಪಡೆದಿದೆ.

ಆಡುವ ಹನ್ನೊಂದರ ಬಳಗವನ್ನು ಆರಿಸಲು ಕೃತಕ ಬುದ್ದಿಮತ್ತೆಯನ್ನು (ಎಐ) ಬಳಸುತ್ತಿರುವುದಾಗಿ ತಂಡದ ಮುಖ್ಯ ಕೋಚ್​ ಜಾನ್​ ಲೆವಿಸ್​ ಬಹಿರಂಗಪಡಿಸಿದ್ದಾರೆ. ತಂತ್ರಜ್ಞಾನವು ಬಲಿಷ್ಠ ತಂಡದ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿ ನಿರ್ಣಾಯಕ ಅಭಿಪ್ರಾಯಗಳನ್ನು ನೀಡಿತು ಮತ್ತು ಆಸ್ಟ್ರೆಲಿಯಾ ವಿರುದ್ಧದ ಟಿ20 ಸರಣಿಯನ್ನು ಗೆಲ್ಲಲು ಇದು ಸಹಾಯ ಮಾಡಿತು ಎಂದು ಅವರು ತಿಳಿಸಿದ್ದಾರೆ.

ಲಂಡನ್​ ಮೂಲದ ‘ಪಿಎಸ್​ಐ’ ಕಂಪನಿ ತಯಾರಿಸುವ ತಂತ್ರಜ್ಞಾನವನ್ನು ಬಳಸಿಕೊಂಡು ಈ ಪ್ರಯೋಗ ಮಾಡಲಾಯಿತು(Viral News) ಎಂದು ಲೆವಿಸ್​ ತಿಳಿಸಿದ್ದಾರೆ. ಉತ್ತಮ ಫಾಮ್​ರ್ನಲ್ಲಿರುವ ಇಬ್ಬರು ಆಟಗಾರ್ತಿಯರ ಪೈಕಿ ಒಬ್ಬರನ್ನು ಮಾತ್ರ ಆರಿಸುವ ಸಂಕಷ್ಟದ ಸಮಯದಲ್ಲಿ ಎಐ ನಮಗೆ ಯಶಸ್ವಿಯಾಗಿ ಸಹಾಯ ಮಾಡಿದೆ ಎಂದು ಅವರು​ ಹೇಳಿಕೊಂಡಿದ್ದಾರೆ.

ಕೃತಕ ಬುದ್ಧಿಮತ್ತೆ ಕೌಶಲ ಅಭಿವೃದ್ಧಿಯಲ್ಲಿ ಯಾವ ದೇಶಗಳು ಎಷ್ಟು ಪ್ರಗತಿ ಸಾಧಿಸಿವೆ ಎಂಬ ಕುರಿತು ಅಮೆರಿಕದ ಸ್ಟ್ಯಾನ್‌ಫೋರ್ಡ್‌ ವಿಶ್ವವಿದ್ಯಾಲಯವು ಇತ್ತೀಚೆಗೆ ಎಐ ಇಂಡೆಕ್ಸ್‌ ವರದಿ (AI Index Report 2023) ಪ್ರಕಟಿಸಿತ್ತು. ಜಾಗತಿಕವಾಗಿ ಕೃತಕ ಬುದ್ಧಿಮತ್ತೆ ಕ್ರಾಂತಿ ಸೃಷ್ಟಿಮಾಡುವಲ್ಲಿ ಭಾರತದ ಪಾತ್ರ ಮಹತ್ವದ್ದಾಗಿದೆ ಎಂದೂ ವರದಿಯಲ್ಲಿ ಉಲ್ಲೇಖಿಸಿರುವುದು ಸಕಾರಾತ್ಮಕ ಸಂಗತಿಯಾಗಿದೆ.

ಇದನ್ನೂ ಓದಿ IPL 2024: ಇಂದು ಐಪಿಎಲ್​ನಲ್ಲಿ ಡಬಲ್​ ಹೆಡರ್​ ಪಂದ್ಯ; ಮೊದಲ ಪಂದ್ಯ ಯಾವುದು?

2022ರಲ್ಲಿ ಜಗತ್ತಿನಲ್ಲಿ ಮೂರು ರಾಷ್ಟ್ರಗಳು ಕೃತಕ ಬುದ್ಧಿಮತ್ತೆ ಕೌಶಲ ವೃದ್ಧಿಯಲ್ಲಿ ಅಗ್ರ ಸ್ಥಾನ ಪಡೆದಿವೆ. ಭಾರತವು 3.2 ರೇಟಿಂಗ್‌ನೊಂದಿಗೆ ಅಗ್ರಸ್ಥಾನಿಯಾದರೆ, ಅಮೆರಿಕ 2.2 ಹಾಗೂ ಜರ್ಮನಿ 1.7 ರೇಟಿಂಗ್‌ ಪಡೆದಿವೆ. ನೀತಿ ಆಯೋಗದ ಮಾಜಿ ಸಿಇಒ ಅಮಿತಾಭ್‌ ಕಾಂತ್‌ ಅವರು ಭಾರತದ ಏಳಿಗೆ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ. “ಭಾರತದ ಚಾಣಾಕ್ಷತೆಯು ಜಾಗತಿಕವಾಗಿ ಮಿನುಗುತ್ತಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಭಾರತವು ಜಾಗತಿಕ ಶಿಕ್ಷಣ, ಆರೋಗ್ಯ, ಪೌಷ್ಟಿಕಾಂಶ ಸೇರಿ ಹಲವು ಕ್ಷೇತ್ರಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದೆ” ಎಂದು ಪೋಸ್ಟ್​ ಮಾಡಿತ್ತು.

ಇಟ್ಟು ಮರೆತು ಹೋದ ವಸ್ತುಗಳನ್ನು ಹುಡುಕಲು ‘ಕೃತಕ ಜ್ಞಾಪಕ ಶಕ್ತಿ’ ಅಭಿವೃದ್ಧಿ!

ಇಟ್ಟಿರುವ ಸಾಮಾನು ಟೈಮ್‌ಗೆ ಸರಿಯಾಗಿ ಕೈಗೆ ಸಿಗುವುದಿಲ್ಲ ಎಂದು ಮನೆಯಲ್ಲಿ ಆಗಾಗ ಹಿರಿಯರು ಮಾತನಾಡಿಕೊಳ್ಳವುದನ್ನು ಕೇಳಿದ್ದೇವೆ. ಇನ್ನು ಆ ಚಿಂತೆ ಇಲ್ಲ ಬಿಡಿ. ಯಾಕೆಂದರೆ, ಸಂಶೋಧಕರು ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ತಂತ್ರಜ್ಞಾನವನ್ನು ಬಳಸಿಕೊಂಡು ರೋಬಾಟ್‌ಗಳು, ವಿಶೇಷವಾಗಿ ಮರೆವಿನ ಕಾಯಿಲೆಯಿಂದ ಬಳಲುತ್ತಿರುವವರಿಗೆ, ಔಷಧಗಳು, ಕನ್ನಡಕ, ಫೋನ್‌ಗಳು ಮತ್ತಿತರ ವಸ್ತುಗಳನ್ನು ಹುಡುಕಿಕೊಡಲು ನೆರವು ನೀಡಲಿವೆ.

ಮೆರೆವು ಕಾಯಿಲೆಯು, ಮೆದುಳಿನ ಕಾರ್ಯನಿರ್ವಹಣೆಯನ್ನು ನಿರ್ಬಂಧಿಸುತ್ತದೆ. ಇದರಿಂದಾಗಿ ಗೊಂದಲ, ನೆನಪು ನಷ್ಟ ಮತ್ತು ಅಂಗವೈಕಲ್ಯವನ್ನು ಉಂಟುಮಾಡುತ್ತದೆ. ಈ ಸ್ಥಿತಿಯನ್ನು ಹೊಂದಿರುವ ಅನೇಕ ಜನರು ದಿನನಿತ್ಯದ ವಸ್ತುಗಳ ಸ್ಥಳವನ್ನು ಪದೇ ಪದೇ ಮರೆತುಬಿಡುತ್ತಾರೆ. ಇದು ಅವರ ಜೀವನದ ಗುಣಮಟ್ಟವನ್ನು ಕುಗ್ಗಿಸುತ್ತದೆ. ಹಾಗಾಗಿ ಆರೈಕೆ ಮಾಡುವವರ ಮೇಲೆ ಹೆಚ್ಚುವರಿ ಹೊರೆಯಾಗುತ್ತದೆ. ಈ ಹೊರೆಯನ್ನು ಕಡಿಮೆ ಮಾಡಲು ಈ ತಂತ್ರಜ್ಞಾನವು ನೆರವು ಒದಗಿಸಲಿದೆ.

Continue Reading

ಕ್ರೀಡೆ

Virat- Anushka: ಕೊಹ್ಲಿ ಮಾಡಿದ ರನೌಟ್​ ಕಂಡು ಆಶ್ಚರ್ಯ ಚಕಿತರಾದ ಅನುಷ್ಕಾ

Virat- Anushka: ಎರಡನೇ ಮಗುವಾದ ಬಳಿಕ ಅನುಷ್ಕಾ ಇದುವರೆಗೂ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ವಿರಾಟ್​ ಕೊಹ್ಲಿಗೆ(Virat Kohli) ಸ್ಫೂರ್ತಿ ನೀಡಲೆಂದೇ ಐಪಿಎಲ್​ನ ದ್ವಿತಿಯಾರ್ಧದ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಇದೀಗ ಅವರು ಸ್ಟೇಡಿಯಂನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು ಪತಿಗೆ ಚಿಯರ್ ಅಪ್ ಮಾಡಿದ್ದಾರೆ.

VISTARANEWS.COM


on

Virat- Anushka
Koo

ಬೆಂಗಳೂರು: ಶನಿವಾರ ನಡೆದ ಗುಜರಾತ್​ ಟೈಟಾನ್ಸ್​ ವಿರುದ್ಧದ ಪಂದ್ಯದ ಆರ್​ಸಿಬಿ 4 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat- Anushka) ಅವರು ಎದುರಾಳಿ ತಂಡದ ಆಟಗಾರ ಶಾರೂಖ್​ ಖಾನ್​ ಅವರನ್ನು ಮಿಂಚಿನ ಎಸೆತದ ಮೂಲಕ ರನೌಟ್​ ಮಾಡಿ ಗಮನಸೆಳೆದರು. ಬುಲೆಟ್​ ಚಿಮ್ಮಿದ ವೇಗದಲ್ಲಿ ರನೌಟ್​ ಮಾಡಿದ್ದನ್ನು ಕಂಡು ಪತ್ನಿ ಅನುಷ್ಕಾ(Anushka Sharma) ದಂಗಾಗಿದ್ದಾರೆ. ಇದರ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿದೆ.


ಆರಂಭಿಕ ಆಘಾತ ಕಂಡಿದ್ದ ಗುಜರಾತ್​ಗೆ ಶಾರೂಖ್​ ಖಾನ್​ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್​ ಮೂಲಕ ಆಸರೆಯಾಗಿದ್ದರು. 24 ಎಸೆತಗಳಿಂದ 37 ರನ್​ ಗಳಿಸಿ ನಾನ್​ಸ್ಟ್ರೈಕ್​ನಲ್ಲಿದ್ದ ಶಾರೂಖ್ ಇಲ್ಲದ ರನ್​ ಕದಿಯಲು ಯತ್ನಿಸಿದ ವೇಳೆ ಚಿರತೆ ವೇಗದಲ್ಲಿ ಫೀಲ್ಡಿಂಗ್​ ನಡೆಸಿ ಕೊಹ್ಲಿ ಚೆಂಡನ್ನು ನೇರವಾಗಿ ವಿಕೆಟ್​ಗೆ ಎಸೆದು ರನೌಟ್​ ಮಾಡಿದರು. ಒಂದೊಮ್ಮೆ ಕೊಹ್ಲಿ ಈ ರನೌಟ್​ ಮಾಡದಿದ್ದರೆ ಶಾರೂಖ್​ ಆರ್​ಸಿಬಿಗೆ ಅಪಾಯಕಾರಿಯಾಗಿ ಗೋಚರಿಸುವ ಸಾಧ್ಯತೆಯೂ ಇತ್ತು.

ಎರಡನೇ ಮಗುವಾದ ಬಳಿಕ ಅನುಷ್ಕಾ ಇದುವರೆಗೂ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ವಿರಾಟ್​ ಕೊಹ್ಲಿಗೆ(Virat Kohli) ಸ್ಫೂರ್ತಿ ನೀಡಲೆಂದೇ ಐಪಿಎಲ್​ನ ದ್ವಿತಿಯಾರ್ಧದ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಇದೀಗ ಅವರು ಸ್ಟೇಡಿಯಂನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು ಪತಿಗೆ ಚಿಯರ್ ಅಪ್ ಮಾಡಿದ್ದಾರೆ. ಹಿಂದೆ ಅನೇಕ ಬಾರಿ ಅನುಷ್ಕಾ ಮೈದಾನದಲ್ಲಿದ್ದು, ಪತಿ ಕೊಹ್ಲಿಗೆ ಚಿಯರ್ ಅಪ್ ಮಾಡಿದ್ದರು. ಕಳೆದ ಬಾರಿ ಏಕದಿನ ವಿಶ್ವಕಪ್ ಟೂರ್ನಿಯ ವೇಳೆಯೂ ಬಹುತೇಖ ಪಂದ್ಯಗಳಲ್ಲಿ ಅನುಷ್ಕಾ ಅವರು ಕೊಹ್ಲಿಗೆ ಹುರಿದುಂಬಿಸಿದ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿತ್ತು.

ಇದನ್ನೂ ಓದಿ IPL 2024: ಇಂದು ಐಪಿಎಲ್​ನಲ್ಲಿ ಡಬಲ್​ ಹೆಡರ್​ ಪಂದ್ಯ; ಮೊದಲ ಪಂದ್ಯ ಯಾವುದು?

ಗುಜರಾತ್​ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 27 ಎಸೆತಗಳಿಂದ 4 ಸಿಕ್ಸರ್​ ಮತ್ತು 2 ಬೌಂಡರಿ ನೆರವಿನಿಂದ 42 ರನ್​ ಬಾರಿಸಿದರು. ಇದೇ ವೇಳೆ ಮತ್ತೆ ಆರೆಂಜ್​ ಕ್ಯಾಪ್​ ತನ್ನದಾಗಿಸಿಕೊಂಡರು. ಸದ್ಯ ಕೊಹ್ಲಿ 542 ರನ್​ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ಇಂದು ನಡೆಯುವ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಚೆನ್ನೈ ನಾಯಕ ಋತುರಾಜ್​ ಗಾಯಕ್ವಾಡ್(509)​ 34 ರನ್​ ಬಾರಿಸಿದರೆ ಈ ಕ್ಯಾಪ್ ಗಾಯಕ್ವಾಡ್ ಪಾಲಾಗಲಿದೆ.

​ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​​ಸಿಬಿ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಗುಜರಾತ್ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿದ ಕಾರಣ 19.3 ಓವರ್​ಗಳಲ್ಲಿ 147 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆರ್​ಸಿಬಿ ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು.

Continue Reading

ಕ್ರೀಡೆ

IPL 2024: ಇಂದು ಐಪಿಎಲ್​ನಲ್ಲಿ ಡಬಲ್​ ಹೆಡರ್​ ಪಂದ್ಯ; ಮೊದಲ ಪಂದ್ಯ ಯಾವುದು?

IPL 2024: ಪಂಜಾಬ್​-ಚೆನ್ನೈ(PBKS vs CSK) ಮೊದಲ ಪಂದ್ಯದಲ್ಲಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸೆಣಸಾಟಕ್ಕೆ ಇಳಿಯಲಿವೆ. ಇದು ಈ ಆವೃತ್ತಿಯಲ್ಲಿ ಇಲ್ಲಿ ನಡೆಯುವ ಮೊದಲ ಐಪಿಎಲ್(IPL 2024)​ ಪಂದ್ಯವಾಗಿದೆ. ಕಳೆದ ಪಂದ್ಯದಲ್ಲಿ ತವರಿನಲ್ಲೇ 7 ವಿಕೆಟ್​ ಸೋಲಿಗೆ ಪಂಜಾಬ್​ಗೆ ಅವರ ತವರಿನ ಅಂಗಳದಲ್ಲಿ ಸೇಡು ತೀರಿಸಿಕೊಳ್ಳುವುದು ಹಾಲಿ ಚಾಂಪಿಯನ್‌ ಗುರಿಯಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಭಾನುವಾರದ ಐಪಿಎಲ್​ನಲ್ಲಿ(IPL 2024) ಡಬಲ್​ ಹೆಡರ್​ ಪಂದ್ಯಗಳು ನಡೆಯಲಿವೆ. ಪಂಜಾಬ್​ ಕಿಂಗ್ಸ್(Punjab Kings)​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಹಗಲು ಪಂದ್ಯದಲ್ಲಿ ಮುಖಾಮುಖಿಯಾದರೆ, ರಾತ್ರಿಯ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ ಮತ್ತು ಕೆಕೆಆರ್(Kolkata Knight Riders)​ ಸೆಣಸಾಟ ನಡೆಸಲಿವೆ. ಎಲ್ಲ ನಾಲ್ಕು ತಂಡಗಳಿಗೂ ಪ್ಲೇ ಆಫ್​ ಪ್ರವೇಶದ ನಿಟ್ಟಿನಲ್ಲಿ ಇದು ಮಹತ್ವದ ಪಂದ್ಯವಾಗಿದೆ. ಹೀಗಾಗಿ ಪಂದ್ಯಗಳು ತೀವ್ರ ಪೈಪೋಟಿಯಿಂದ ಕೂಡಿರುವ ಸಾಧ್ಯತೆ ಅಧಿಕವಾಗಿದೆ.

ಬ್ಯಾಟಲ್​ ಆಫ್​ ದಿ ಕಿಂಗ್ಸ್​ಗೆ ಚೆನ್ನೈ-ಪಂಜಾಬ್​ ರೆಡಿ


ಪಂಜಾಬ್​-ಚೆನ್ನೈ(PBKS vs CSK) ಮೊದಲ ಪಂದ್ಯದಲ್ಲಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸೆಣಸಾಟಕ್ಕೆ ಇಳಿಯಲಿವೆ. ಇದು ಈ ಆವೃತ್ತಿಯಲ್ಲಿ ಇಲ್ಲಿ ನಡೆಯುವ ಮೊದಲ ಐಪಿಎಲ್(IPL 2024)​ ಪಂದ್ಯವಾಗಿದೆ. ಕಳೆದ ಪಂದ್ಯದಲ್ಲಿ ತವರಿನಲ್ಲೇ 7 ವಿಕೆಟ್​ ಸೋಲಿಗೆ ಪಂಜಾಬ್​ಗೆ ಅವರ ತವರಿನ ಅಂಗಳದಲ್ಲಿ ಸೇಡು ತೀರಿಸಿಕೊಳ್ಳುವುದು ಹಾಲಿ ಚಾಂಪಿಯನ್‌ ಗುರಿಯಾಗಿದೆ.

ಚೆನ್ನೈ(Chennai Super Kings) ತಂಡ ಆರಂಭಿಕ ಪಂದ್ಯಗಳಲ್ಲಿ ಉತ್ತಮ ಬೌಲಿಂಗ್​ ಪ್ರದರ್ಶನದ ಮೂಲಕ ಸತತ ಗೆಲುವು ಸಾಧಿಸಿತ್ತು. ಆದರೆ ಈಗ ಹಿಂದಿನ ಲಯ ಕಳೆದುಕೊಂಡಿದ್ದು ತವರಿನಲ್ಲೇ ಸೋಲಿನ ಅವಮಾನಕ್ಕೆ ಸಿಲುಕಿದೆ. ಬಾಂಗ್ಲಾ ಎಡಗೈ ವೇಗಿ ಮುಸ್ತಫಿಜುರ್​ ರೆಹಮಾನ್​ ಕೂಡ ಟಿ20 ವಿಶ್ವಕಪ್​ಗೆ ಸಿದ್ಧತೆ ನಡೆಸುವ ಸಲುವಾಗಿ ತಂಡ ತೊರೆದಿದ್ದಾರೆ. ಶಾರ್ದೂಲ್​ ಠಾಕೂರ್​ ಕೂಡ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ದೀಪಕ್ ಚಹಾರ್, ರಿಚರ್ಡ್ ಗ್ಲೀಸನ್ ಕೂಡ ದುಬಾರಿಯಾಗುತ್ತಿದ್ದಾರೆ. ಜಡೇಜಾ ಕೂಡ ಸ್ಪಿನ್​ ಮಾಡುತಿಲ್ಲ. ಸದ್ಯಕ್ಕೆ ಪತಿರಾಣ ಮಾತ್ರ ಘಾತಕ ಬೌಲಿಂಗ್​ ನಡೆಸುತ್ತಿದ್ದಾರೆ.

ಇದನ್ನೂ ಓದಿ IPL 2024: ಹ್ಯಾಟ್ರಿಕ್​ ಗೆಲುವು ಸಾಧಿಸಿದ ಆರ್​ಸಿಬಿಯ ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ?

ಪಂಜಾಬ್​(Punjab Kings) ತಂಡದಲ್ಲಿ ಅನುಭವಿಗಳಾದ ಕಗಿಸೊ ರಬಾಡ, ಅರ್ಶ್​ದೀಪ್​ ಸಿಂಗ್​, ಹರ್ಷಲ್​ ಪಟೇಲ್ ಅವರಂತಹ ಘಾತಕ ಬೌಲರ್​​ ಇದ್ದರೂ ಕೂಡ ಇವರಿಂದ ಇದುವರೆಗೆ ನಿರೀಕ್ಷಿತ ಮಟ್ಟದ ಬೌಲಿಂಗ್ ಪ್ರದರ್ಶನ ಕಂಡುಬಂದಿಲ್ಲ.​ ಪಂಜಾಬ್​ ಗೆದ್ದಿರುವುದು ಬ್ಯಾಟಿಂಗ್​ ಬಲದಿಂದ. ಹೀಗಾಗಿ ಈ ಪಂದ್ಯದಲ್ಲಿಯೂ ಪಂಜಾಬ್​ ಬ್ಯಾಟಿಂಗ್​ ಬಲವನ್ನೇ ನಂಬಿದೆ. ಕಳೆದೊಂದು ವರ್ಷದಿಂದ ತೀವ್ರ ಬ್ಯಾಟಿಂಗ್​ ಬರ ಎದುರಿಸಿದ್ದ ಜಾನಿ ಬೇರ್​ಸ್ಟೋ ಪ್ರಚಂಡ ಫಾರ್ಮ್​ಗೆ ಮರಳಿದ್ದಾರೆ. ಇದು ಪಂಜಾಬ್​ಗೆ ಆನೆ ಬಲ ಬಂದಂತಾಗಿದೆ. ಮಧ್ಯಮ ಕ್ರಮಾಂಕದಲ್ಲಿ ಶಶಾಂಕ್​ ಸಿಂಗ್​ ಮತ್ತು ಅಶುತೋಷ್ ಶರ್ಮಾ ಸಿಡಿಲಬ್ಬರ ಬ್ಯಾಟಿಂಗ್​ ಮೂಲಕ ತಂಡಕ್ಕೆ ನೆರವಾಗಬಲ್ಲರು. ಒಟ್ಟಾರೆಯಾಗಿ ಪಂಜಾಬ್​ಗೆ ಬ್ಯಾಟಿಂಗ್​ಗೇ ಮುಖ್ಯ ಬಲವಾಗಿದೆ.

ಲಕ್ನೋ ಸವಾಲು ಗೆದ್ದೀತೇ ಕೆಕೆಆರ್​


ದಿನದ ಮತ್ತೊಂದು ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಮತ್ತು ಕೆಕೆಆರ್​ ಮುಖಾಮುಖಿಯಾಗಲಿವೆ. ರಾಹುಲ್​ ಪಡೆಗೆ ಇದು ತವರಿನ ಪಂದ್ಯವಾಗಿದೆ. ಸದ್ಯ ಅಂಕಪಟ್ಟಿಯಲ್ಲಿ ಕೆಕೆಆರ್​ 2ನೇ ಸ್ಥಾನಿಯಾಗಿದ್ದರೆ, ಲಕ್ನೋ 3ನೇ ಸ್ಥಾನದಲ್ಲಿದೆ. ಶರವೇಗದ ಎಸೆತಗಾರ ಮಾಯಾಂಕ್​ ಯಾದವ್​ ಟೂರ್ನಿಯಿಂದ ಹೊರಬಿದ್ದಿರುವುದರಿಂದ ಲಕ್ನೋ ಬೌಲಿಂಗ್​ ವಿಭಾಗಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಕೆಕೆಆರ್​ ಎಲ್ಲ ವಿಭಾಗದಲ್ಲಿಯೂ ಬಲಿಷ್ಠವಾಗಿದೆ.

Continue Reading
Advertisement
Police Officer
ದೇಶ8 mins ago

Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

Covishield Vaccine
ದೇಶ28 mins ago

Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

ICC Women's T20 World Cup
ಕ್ರೀಡೆ47 mins ago

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

Pakistan
ವಿದೇಶ1 hour ago

Pakistan: ಪಾಕಿಸ್ತಾನಕ್ಕೂ ಕಾಲಿಟ್ಟ ಯೋಗ; ಅಧಿಕೃತವಾಗಿ ತರಗತಿ ಆರಂಭ

Prajwal Revanna Case HD Revanna arrest is correct says R Ashok
ರಾಜಕೀಯ2 hours ago

Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

Vicky Pedia New reels about heat in Karnataka
ವೈರಲ್ ನ್ಯೂಸ್2 hours ago

Vicky Pedia: ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ: ಫ್ಯಾನ್ಸ್‌ ಫಿದಾ!

Lok Sabha Election 2024
Lok Sabha Election 20242 hours ago

Lok Sabha Election 2024: ಬಿಜೆಪಿಯ ʼಮೊಟ್ಟೆʼ ವಿಡಿಯೊ ವಿರುದ್ಧ ಕಾಂಗ್ರೆಸ್‌ ಕೆಂಡಾಮಂಡಲ; ಅಂತಹದ್ದೇನಿದೆ?

Prajwal Revanna Case Siddaramaiah tweets vote for Prajwal Full class from BJP!
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

bajrang punia Suspended
ಕ್ರೀಡೆ2 hours ago

Bajrang Punia: ಬಜರಂಗ್​ಗೆ ಅಮಾನತು ಶಿಕ್ಷೆ ವಿಧಿಸಿದ ರಾಷ್ಟ್ರೀಯ ಉದ್ದೀಪನ ನಿಗ್ರಹ ಸಂಸ್ಥೆ; ಪ್ಯಾರಿಸ್ ಒಲಿಂಪಿಕ್ಸ್​ಗೆ ಹಿನ್ನಡೆ

Kannada New Movie Adhipatra audio rights
ಸಿನಿಮಾ2 hours ago

Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ರೂಪೇಶ್ ಶೆಟ್ಟಿ-ಜಾಹ್ನವಿ ಸಿನಿಮಾ ಆಡಿಯೊ ರೈಟ್ಸ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌