ಮೆಲ್ಬೋರ್ನ್: ಐಸಿಸಿ ಟಿ 20 ವಿಶ್ವ ಕಪ್(T20 World Cup) ಭಾನುವಾರ ಆರಂಭಗೊಂಡಿದ್ದು, ಈಗಾಗಲೇ ಗ್ರೂಪ್ ಹಂತದ ಮೊದಲೆರಡು ಪಂದ್ಯಗಳು ಕೊನೆಗೊಂಡಿವೆ. ಆದರೆ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಇಂಡೋ-ಪಾಕ್ ಹೈವೋಲ್ಟೇಜ್ ಪಂದ್ಯ ಇದೀಗ ನಡೆಯುವುದು ಅನುಮಾನ ಎನ್ನುವಂತಾಗಿದೆ.
ಮೆಲ್ಬೋರ್ನ್ ಮೈದಾನದಲ್ಲಿ ಅಕ್ಟೋಬರ್ 23 ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ತಯಾರಿ ನಡೆಸಿವೆ. ಅಲ್ಲದೆ ಈ ಪಂದ್ಯಕ್ಕಾಗಿ ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದ್ದು, ಪಂದ್ಯದ ಟಿಕೆಟ್ಗಳು ಸಹ ಮಾರಾಟವಾಗಿವೆ. ಆದರೆ ಎಲ್ಲ ನಿರೀಕ್ಷೆಗಳಿಗೆ ಶಾಕ್ ನೀಡುವಂತಹ ಸುದ್ದಿಯೊಂದು ಮೆಲ್ಬೋರ್ನ್ನಿಂದ ಹೊರಬಿದ್ದಿದೆ. ಭಾರತ-ಪಾಕಿಸ್ತಾನ ಪಂದ್ಯದ ರೋಚಕತೆಗೆ ಹವಾಮಾನ ತಣ್ಣೀರು ಎರಚಲಿದೆ.
ಅಕ್ಟೋಬರ್ 23 ರಂದು ಮೆಲ್ಬೋರ್ನ್ನಲ್ಲಿ ಮಳೆಯಾಗುವ ಸಂಭವವಿದ್ದು, ಮಳೆಯಿಂದ ಪಂದ್ಯಕ್ಕೆ ಹಿನ್ನಡೆಯಾಗುವ ಆತಂಕವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ಸಂಪೂರ್ಣ ಮಳೆಯಿಂದ ಪಂದ್ಯ ರದ್ದಾದರೆ. ಕೂಟದ ನಿಯಮದ ಪ್ರಕಾರ ಇತ್ತಂಡಗಳಿಗೂ ತಲಾ ಒಂದು ಅಂಕ ಲಭಿಸಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳು ಬೇಸರಗೊಂಡಿದ್ದು ಹೇಗಾದರೂ ಪಂದ್ಯ ನಡೆಯಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
ಟಿ20 ವಿಶ್ವಕಪ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಶಮಿ.
ಮೀಸಲು ಆಟಗಾರರು:
ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯಿ, ಶಾರ್ದೂಲ್ ಠಾಕೂರ್.
ಇದನ್ನೂ ಓದಿ | T20 World Cup | ಟಿ20 ವಿಶ್ವ ಕಪ್ ವೇಳಾಪಟ್ಟಿ ಇಂತಿದೆ, ಯಾರಿಗೆ ಯಾರ ವಿರುದ್ಧ ಯಾವಾಗ ಪಂದ್ಯ?