Ravindra Jadeja | ತಮಿಳುನಾಡು ವಿರುದ್ಧ 7 ವಿಕೆಟ್​ ಪಡೆದು ಅದ್ಧೂರಿ ಮರುಪ್ರವೇಶ ಮಾಡಿದ ಜಡೇಜಾ - Vistara News

ಕ್ರಿಕೆಟ್

Ravindra Jadeja | ತಮಿಳುನಾಡು ವಿರುದ್ಧ 7 ವಿಕೆಟ್​ ಪಡೆದು ಅದ್ಧೂರಿ ಮರುಪ್ರವೇಶ ಮಾಡಿದ ಜಡೇಜಾ

ಭಾರತ ತಂಡಕ್ಕೆ ಮರು ಪ್ರವೇಶ ಮಾಡಲು ಸಜ್ಜಾಗಿರುವ ಆಲ್​ರೌಂಡರ್​ ರವೀಂದ್ರ ಜಡೇಜಾ (Ravindra jadeja) ಹಾಲಿ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ತಮಿಳುನಾಡು ವಿರುದ್ಧ ಏಳು ವಿಕೆಟ್​ ಕಬಳಿಸಿದ್ದಾರೆ.

VISTARANEWS.COM


on

Ravindra jadeja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ : ಭಾರತ ತಂಡದ ಸ್ಟಾರ್​ ಆಲ್​ರೌಂಡರ್​ ರವೀಂದ್ರ ಜಡೇಜಾ (Ravindra Jadeja) ಗಾಯದ ಸಮಸ್ಯೆಯಿಂದ ಸಂಪೂರ್ಣವಾಗಿ ಸುಧಾರಿಸಿಕೊಂಡಿದ್ದಾರೆ. ಆದರೆ. ಅವರ ಫಿಟ್ನೆಸ್​ ಪರೀಕ್ಷೆಯ (Fitness Test) ವರದಿ ಇನ್ನೂ ಕೈ ಸೇರಿಲ್ಲ. ಆದಾಗ್ಯೂ ಅವರು ಟೀಮ್​ ಇಂಡಿಯಾಗೆ (Team India) ಮರಳುವ ದಿನಗಳ ಎಣಿಕೆ ಶುರುವಾಗಿದೆ. ಏತನ್ಮಧ್ಯೆ ಅವರು ರಣಜಿ ಟ್ರೋಫಿಯಲ್ಲಿ (Ranji Trophy) ಸೌರಾಷ್ಟ್ರ ತಂಡದ ಪರವಾಗಿ ತಮಿಳುನಾಡು ವಿರುದ್ಧ ಆಡುತ್ತಿದ್ದಾರೆ. ಈ ಪಂದ್ಯದಲ್ಲಿ ಅವರು ಎದುರಾಳಿ ತಂಡದ ಏಳು ವಿಕೆಟ್ ಪಡೆಯುವ ಮೂಲಕ ಅದ್ಧೂರಿ ಮರುಪ್ರವೇಶ ಮಾಡಿದ್ದಾರೆ.

ಚೆನ್ನೈನ ಚೆಪಾಕ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ಹಣಾಹಣಿಯಲ್ಲಿ ಅವರು ತಮಿಳುನಾಡು ತಂಡದ ಎರಡನೇ ಇನಿಂಗ್ಸ್​ನಲ್ಲಿ 53 ರನ್​ಗಳಿಗೆ 7 ವಿಕೆಟ್​ ಉರುಳಿಸಿದ್ದಾರೆ. ಅವರ ಮಾರಕ ಬೌಲಿಂಗ್​ ದಾಳಿಗೆ ತತ್ತರಿಸಿರುವ ತಮಿಳುನಾಡು ತಂಡ 133 ರನ್​ಗಳಿಗೆ ಆಲ್​ಔಟ್ ಆಗಿದೆ. ಅವರ ಸಾಧನೆಯ ನೆರವಿನಿಂದ ಸೌರಾಷ್ಟ್ರ ತಂಡದ ಗೆಲುವಿಗೆ 266 ರನ್​ಗಳ ಗುರಿ ಎದುರಾಗಿದೆ.

ಪಂದ್ಯದಲ್ಲಿ ಮೊದಲು ಬ್ಯಾಟ್​ ಮಾಡಿದ ತಮಿಳುನಾಡು ತಂಡ 324 ರನ್ ಪೇರಿಸಿತ್ತು. ಪ್ರತಿಯಾಗಿ ಆಡಿದ್ದ ಸೌರಾಷ್ಟ್ರ 192 ರನ್​ಗಳಿಗೆ ಆಲ್​ಔಟ್​ ಆಗಿ ಇನಿಂಗ್ಸ್ ಹಿನ್ನಡೆಗೆ ಒಳಗಾಗಿತ್ತು. ಇದೀಗ ತಮಿಳುನಾಡು ತಂಡವೂ 133 ರನ್​ಗಳಿಗೆ ಆಲ್​ಔಟ್​ ಆಗಿರುವ ಕಾರಣ ಪಂದ್ಯ ಕುತೂಹಲ ಸೃಷ್ಟಿಸಿದೆ.

ಇದನ್ನೂ ಓದಿ : Ravindra Jadeja | ಫೆಬ್ರವರಿ 1ರಂದು ರವೀಂದ್ರ ಜಡೇಜಾ ಫಿಟ್ನೆಸ್ ರಿಪೋರ್ಟ್​ ಬಿಡುಗಡೆ

ಸೌರಾಷ್ಟ್ರ ತಂಡದ ನಾಯಕರಾಗಿ ಆಡಿರುವ ರವೀಂದ್ರ ಜಡೇಜಾ ಅವರಿಗೆ ಇದು ಪ್ರಮುಖ ಪಂದ್ಯವಾಗಿದೆ. ಯಾಕೆಂದರೆ ಸುಮಾರು ನಾಲ್ಕು ತಿಂಗಳ ಬಳಿಕ ತಂಡಕ್ಕೆ ಮರಳುತ್ತಿರುವ ಅವರು ಆಯ್ಕೆಗಾರರಿಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Nitish Reddy : ಐಪಿಎಲ್​ನಲ್ಲಿ ಮಿಂಚಿದ ಈ ಆಟಗಾರನಿಗೆ ಎಪಿಎಲ್​ನಲ್ಲಿ ಸಿಕ್ಕಿತು ಭರ್ಜರಿ ದುಡ್ಡು

Nitish Reddy : ಯುವ ಆಟಗಾರನ ಪ್ರತಿಕ್ರಿಯೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ನಿತೀಶ್ ಕುಮಾರ್ ರೆಡ್ಡಿ ಅವರನ್ನು ಎಸ್​ಆರ್​ಎಚ್​ 20 ಲಕ್ಷ ರೂ.ಗೆ ಖರೀದಿಸಿತ್ತು. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಆರು ತಂಡಗಳ ಪಂದ್ಯಾವಳಿಯಾದ ಆಂಧ್ರ ಪ್ರೀಮಿಯರ್ ಲೀಗ್​​ನಲ್ಲಿ ದಾಖಲೆಯ ಬಿಡ್​ನೊಂದಿಗೆ ಅವರು ಹೆಚ್ಚುಕಡಿಮೆ ಅಷ್ಟೇ ಮೊತ್ತ ಗಳಿಸಿದ್ದಾರೆ.

VISTARANEWS.COM


on

Nitish Kumar Reddy
Koo

ನವದೆಹಲಿ: ಆಂಧ್ರ ಪ್ರೀಮಿಯರ್ ಲೀಗ್ (APL) ನಲ್ಲಿ ಸನ್​ರೈಸರ್ಸ್​ ಹೈದರಬಾದ್​ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ನಿತೀಶ್ ಕುಮಾರ್ ರೆಡ್ಡಿ (Nitish Reddy) ಭರ್ಜರಿ ಮೊತ್ತವನ್ನು ಪಡೆದಿದ್ದಾರೆ. ಈ ಬಗ್ಗೆ ಅವರು ಖುಷಿ ವ್ಯಕ್ತಪಡಿಸಿದ್ದಾರೆ. ಯಾಕೆಂದರೆ ನಿತೀಶ್​ ಈಗ ಈ ಟಿ20 ಲೀಗ್​ನ ಹರಾಜಿನ ಮೂರು ಆವೃತ್ತಿಗಳ ಅತ್ಯಂತ ದುಬಾರಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಂದ ಹಾಗೆ 20 ವರ್ಷದ ಆಟಗಾರನನ್ನು ಗೋದಾವರಿ ಟೈಟಾನ್ಸ್ ತಂಡ 15.6 ಲಕ್ಷ ರೂ.ಗೆ ಖರೀದಿಸಿದೆ. ಹೈದರಾಬಾದ್​​ನ ಹೋಟೆಲ್ ಕೊಠಡಿಯಿಂದ ಎಪಿಎಲ್ 2024 ಹರಾಜನ್ನು ವೀಕ್ಷಿಸುತ್ತಿದ್ದ ನಿತೀಶ್​​ ತನ್ನ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. ಐಪಿಎಲ್​ನಲ್ಲಿ (IPL 2024) ಅವರು ಎಸ್​ಆರ್​ಎಚ್ ತಂಡದ ಆಟಗಾರ.

ನಿತೀಶ್ ಕುಮಾರ್ ರೆಡ್ಡಿ ಅವರು ಹೋಟೆಲ್ ಕೋಣೆಯಲ್ಲಿ ಸಂಭ್ರಮಿಸುತ್ತಿರುವುದನ್ನು ಅವರ ಸಹ ಆಟಗಾರರೊಬ್ಬರು ಚಿತ್ರೀಕರಿಸಿದ್ದಾರೆ. ಯುವ ಆಟಗಾರನ ಪ್ರತಿಕ್ರಿಯೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ನಿತೀಶ್ ಕುಮಾರ್ ರೆಡ್ಡಿ ಅವರನ್ನು ಎಸ್​ಆರ್​ಎಚ್​ 20 ಲಕ್ಷ ರೂ.ಗೆ ಖರೀದಿಸಿತ್ತು. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಆರು ತಂಡಗಳ ಪಂದ್ಯಾವಳಿಯಾದ ಆಂಧ್ರ ಪ್ರೀಮಿಯರ್ ಲೀಗ್​​ನಲ್ಲಿ ದಾಖಲೆಯ ಬಿಡ್​ನೊಂದಿಗೆ ಅವರು ಹೆಚ್ಚುಕಡಿಮೆ ಅಷ್ಟೇ ಮೊತ್ತ ಗಳಿಸಿದ್ದಾರೆ.

ಐಪಿಎಲ್ 2024 ರಲ್ಲಿ ಸನ್​ರೈಸರ್ಸ್​ ಜೊತೆಗಿನ ನಿತೀಶ್ ಅವರ ಯಶಸ್ಸು ಗುರುವಾರ ನಡೆದ ಆಂಧ್ರ ಟಿ 20 ಲೀಗ್ ಹರಾಜಿನಲ್ಲಿ ಪ್ರತಿಫಲನಗೊಂಡಿತು. ಗೋದಾವರಿ ಟೈಟಾನ್ಸ್ ತಂಡದ ಖಜಾನೆ ಒಡೆದ ಅವರು ಗರಿಷ್ಠ ಮೊತ್ತವನ್ನು ಪಡೆದರು.

ಸನ್ರೈಸರ್ಸ್​ ಪರ ಅದ್ಭುತ ಪ್ರದರ್ಶನ ನೀಡುತ್ತಿರುವ ನಿತೀಶ್ 239 ರನ್ ಗಳಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಅವರರನ್ನು ತಂಡ ಆಧಾರಸ್ತಂಭವೆಂದು ಹೇಳಲಾಗಿದೆ. ಮಯಾಂಕ್ ಅಗರ್ವಾಲ್ ಗಾಯದ ನಂತರ ಅವಕಾಶ ಪಡೆದ ನಿತೀಶ್, 150 ಕ್ಕೂ ಹೆಚ್ಚು ರನ್ ಗಳಿಸುವ ಜತೆಗೆ 3 ವಿಕೆಟ್ ಪಡೆದು ಮಿಂಚಿದರು.

ಇದನ್ನೂ ಓದಿ: Sunil Chhetri: ಭಾರತದ ಫುಟ್ಬಾಲ್‌ ಮಾಂತ್ರಿಕ ಸುನೀಲ್ ಚೆಟ್ರಿ ಕುರಿತ 8 ಕುತೂಹಲಕರ ಸಂಗತಿಗಳಿವು!

19 ವರ್ಷದೊಳಗಿನವರ ಮಟ್ಟದಲ್ಲಿ ಭಾರತ ಬಿ ಪರ ಆಡಿದ ನಿತೀಶ್ ಕುಮಾರ್ ರೆಡ್ಡಿ 17 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 566 ರನ್ ಮತ್ತು 22 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದು, 36.63 ಸರಾಸರಿಯಲ್ಲಿ 403 ರನ್ ಗಳಿಸಿದ್ದಾರೆ.

ರಣಜಿ ಟ್ರೋಫಿಯಲ್ಲಿ ಅವರ ಪ್ರದರ್ಶನವು ನಿತೀಶ್ ಅವರ ಅತ್ಯಂತ ಗಮನಾರ್ಹ ಸಾಧನೆಗಳಲ್ಲಿ ಒಂದಾಗಿದೆ. ಅಲ್ಲಿ ಅವರು ಪ್ರಾಥಮಿಕವಾಗಿ ಬೌಲಿಂಗ್ ಆಲ್ರೌಂಡರ್ ಆಗಿ ಆಡಿದರು ಮತ್ತು ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಗಮನಾರ್ಹ ಕೊಡುಗೆ ನೀಡಿದರು. 2023 ರ ಋತುವಿನಲ್ಲಿ, ನಿತೀಶ್ 18.76 ಸರಾಸರಿಯಲ್ಲಿ 25 ವಿಕೆಟ್​​ಗಳನ್ನು ಪಡೆದರು ಮತ್ತು 36.60 ಸರಾಸರಿಯಲ್ಲಿ 366 ರನ್ ಗಳಿಸಿದ್ದಾರೆ.

Continue Reading

ಕ್ರಿಕೆಟ್

Viral Video: ವಿಚ್ಛೇದನ ಕೇಸ್​ ಹೆಚ್ಚಳಕ್ಕೆ ಇದುವೇ ಪ್ರಮುಖ ಕಾರಣ ಎಂದ ಪಾಕ್​ ಕ್ರಿಕೆಟ್​ ತಂಡದ ಮಾಜಿ ನಾಯಕ

Viral Video: ಕಳೆದ ಮೂರು ವರ್ಷಗಳಲ್ಲಿ ಪಾಕಿಸ್ತಾನದಲ್ಲಿ ವಿಚ್ಛೇದನ ಪ್ರಮಾಣ ಸುಮಾರು 30 ಪ್ರತಿಶತದಷ್ಟು ಹೆಚ್ಚಳವಾಗಿದೆ. ಮಹಿಳೆಯರು ಕೆಲಸ ಮಾಡಲು ಆರಂಭಿಸಿದ್ದೇ ಇದಕ್ಕೆ ಪ್ರಮುಖ ಕಾರಣ ಎಂದು ಪಾಕಿಸ್ತಾನ ಮಾಜಿ ನಾಯಕ ಸಯೀದ್ ಅನ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

VISTARANEWS.COM


on

viral video
Koo

ಕರಾಚಿ: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಕೇಸ್​ ಹೆಚ್ಚಳವಾಗಲು(Rising divorce rate) ಪ್ರಮುಖ ಕಾರಣ ಏನೆಂಬುದನ್ನು ಪಾಕಿಸ್ತಾನ ಮಾಜಿ ಆಟಗಾರ ಮತ್ತು ನಾಯಕ ಸಯೀದ್ ಅನ್ವರ್(Saeed Anwar) ವಿವರಿಸಿದ್ದಾರೆ. ಮಹಿಳೆಯರು ಕೆಲಸ ಮಾಡಲು ಆರಂಭಿಸಿದ್ದೇ ವಿಚ್ಛೇದನ ಹೆಚ್ಚಳಕ್ಕೆ ಕಾರಣ ಎಂದು ಹೇಳಿದ್ದಾರೆ. ಅವರು ನೀಡಿರುವ ಈ ಹೇಳಿಕೆ ಇದೀಗ ಭಾರೀ ವಿವಾದ ಮತ್ತು ವೈರಲ್(Viral Video) ಆಗಿದೆ.

ಕಳೆದ ಮೂರು ವರ್ಷಗಳಲ್ಲಿ ಪಾಕಿಸ್ತಾನದಲ್ಲಿ ವಿಚ್ಛೇದನ ಪ್ರಮಾಣ ಸುಮಾರು 30 ಪ್ರತಿಶತದಷ್ಟು ಹೆಚ್ಚಳವಾಗಿದೆ. ಮಹಿಳೆಯರ ದುಡಿಯಲು ಆರಂಭಿಸಿದ ಕಾರಣ ಅವರು ಕೂಡ ಆರ್ಥಿಕವಾಗಿ ಸಧೃಡವಾಗಿದ್ದಾರೆ. ಹೀಗಾಗಿ ಅವರು ಮನೆಯ ಮೇಲೆ ನಿಯಂತ್ರಣವನ್ನು ಸಾಧಿಸುತ್ತಾರೆ. ಬೈಗುಳ ಕೇಳಿ ನರಕದಲ್ಲಿ ಜೀವನ ಮಾಡುವುದಕ್ಕಿಂತ, ನಾನೇ ಸಂಪಾದಿಸಬಲ್ಲೆ. ನಾನು ಸ್ವಂತವಾಗಿ ಸಂಸಾರ ನಡೆಸಬಲ್ಲೆ ಎಂಬ ಬಲವಾದ ನಂಬಿಕೆ ಬರುತ್ತದೆ. ಇದೇ ಕಾರಣದಿಂದ ವಿಚ್ಛೇದನ ಪ್ರಮಾಣ ಹೆಚ್ಚಾಗಿದೆ ಎಂದು ಅನ್ವರ್ ಹೇಳಿದರು.

“1.05 ನಿಮಿಷಗಳ ವಿಡಿಯೊದಲ್ಲಿ ಮಾತನಾಡಿದ ಅನ್ವರ್, ನಾನು ಜಗತ್ತಿನ ಹಲವು ರಾಷ್ಟ್ರಗಳಿಗೆ ಪ್ರಯಾಣಿಸಿದ್ದೇನೆ. ನಾನು ಈಗಷ್ಟೇ ಆಸ್ಟ್ರೇಲಿಯಾ, ಯುರೋಪ್‍ನಿಂದ ಹಿಂತಿರುಗುತ್ತಿದ್ದೇನೆ. ಅಲ್ಲಿ ಯುವಕರು ನರಳುತ್ತಿದ್ದಾರೆ. ಕುಟುಂಬಗಳು ಕೆಟ್ಟ ಸ್ಥಿತಿಯಲ್ಲಿವೆ. ದಂಪತಿಗಳು ಜಗಳವಾಡುತ್ತಿದ್ದಾರೆ. ವ್ಯವಹಾರದ ಸ್ಥಿತಿ ತುಂಬಾ ಕೆಟ್ಟದಾಗಿದೆ. ನ್ಯೂಜಿಲ್ಯಾಂಡ್​ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಆಸ್ಟ್ರೇಲಿಯಾದ ಮಾಜಿ ಆಟಗಾರ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಅನ್ವರ್ ಹೇಳಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಅನ್ವರ್ ಹೇಳಿಕೆಗೆ ಅನೇಕರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಮೂಲಭೂತವಾಗಿ ನೀವು ಮಹಿಳೆಯರನ್ನು ಗುಲಾಮರನ್ನಾಗಿ ಮಾಡಬೇಕೆಂದು ಹೇಳುತ್ತಿದ್ದೀರಿ. ಮಹಿಳೆಯರಿಗೂ ರೆಕ್ಕೆಗಳನ್ನು ಬಿಚ್ಚಿ ಹಾರಾಡುವ ಅಕಾಶ ನೀಡಬೇಕು. ಆದರೆ ನೀವು ಅವರನ್ನು ಸಾಕುಪ್ರಾಣಿಗಳಂತೆ ಪುರುಷರಿಗೆ ಸೇವೆ ಸಲ್ಲಿಸಬೇಕೆಂಬ ಮನಸ್ಥಿತಿ ಹೊಂದಿದ್ದೀರಿ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ Viral Video: ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌.. ಜೊಮ್ಯಾಟೊದಿಂದ ಮತ್ತೊಂದು ಎಡವಟ್ಟು

“ಮಹಿಳೆಯರು ಕೆಲಸ ಮಾಡಲು ಮತ್ತು ಅವರ ಸಾಮರ್ಥ್ಯವನ್ನು ಅರಿತುಕೊಳ್ಳಲು ಸುರಕ್ಷಿತ ವಾತಾವರಣವನ್ನು ಕೇಳುವ ಬದಲು, ಅವರು ಮಹಿಳೆಯರನ್ನು ಮನೆಯಲ್ಲಿಯೇ ಇರಲು ಕೇಳುತ್ತಿದ್ದಾರೆ. ಸಿದ್ಧಾಂತದಲ್ಲಿ ಏನೋ ತಪ್ಪಾಗಿದೆ” ಎಂದು ಮತ್ತೊಬ್ಬ ಮಹಿಳೆ ಕಮೆಂಟ್​ ಮಾಡಿದ್ದಾರೆ. “ ಜಗತ್ತು ಮತಾಂತರಗೊಳ್ಳಬೇಕೆಂದು ಬಯಸುವ ನಿಮ್ಮಿಂದ ಇನ್ನೇನು ನಿರೀಕ್ಷಿಸಬಹುದು. “ಇದು ಮಹಿಳೆಯರಿಗೆ ತುಂಬಾ ಅವಮಾನಕರವಾಗಿದೆ” ಹೀಗೆ ಹಲವು ಮಹಿಳೇಯರು ಅನ್ವರ್​ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

T20 World Cup 2024: ಸಿಎಂ ಸಿದ್ದರಾಮಯ್ಯ(Siddaramaiah) ಅವರು ಗುರುವಾರ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ ಹರ್ಷ ವ್ಯಕ್ತಪಡಿಸಿ, ‘ನಂದಿನಿ’ ಲಾಂಛನ ಜಾಗತಿಕ ಬ್ರ್ಯಾಂಡ್‌ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ–20 ಕ್ರಿಕೆಟ್‌ ವಿಶ್ವಕಪ್‌(T20 World Cup 2024) ಟೂರ್ನಿಯಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿ(KMF) ಸ್ಕಾಟ್ಲೆಂಡ್(Scotland) ಮತ್ತು ಐರ್ಲೆಂಡ್(Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ. ‘ನಂದಿನಿ’ ಲಾಂಛನ(nandini milk logo) ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ತಂಡ ಬುಧವಾರ ಬಿಡುಗಡೆ ಮಾಡಿತ್ತು. ಕೆಎಂಎಫ್‌ ಕೇಂದ್ರ ಕಚೇರಿಯಲ್ಲಿ ನಡೆದ ವರ್ಚುವಲ್‌ ಮಾದರಿಯ ಸಭೆಯಲ್ಲಿ ಈ ಜೆರ್ಸಿಯನ್ನು ಬಿಡುಗಡೆಗೊಳಿಸಲಾಗಿತ್ತು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಗುರುವಾರ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ ಹರ್ಷ ವ್ಯಕ್ತಪಡಿಸಿ, ‘ನಂದಿನಿ’ ಲಾಂಛನ ಜಾಗತಿಕ ಬ್ರ್ಯಾಂಡ್‌ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ.

“ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ನಂದಿನಿಯ ಹೆಸರು ರಾರಾಜಿಸಲಿದೆ. ಕನ್ನಡದ ಕಂಪು ಕಂಗೊಳಿಸಲಿದೆ” ಎಂದು ಬಣ್ಣಿಸಿದ್ದಾರೆ.

ಈಗಾಗಲೇ ಮಲೇಷ್ಯಾ, ವಿಯೆಟ್ನಾಂ, ಸಿಂಗಾಪುರ, ಅಮೆರಿಕ, ದುಬೈ, ಯುಎಇ ಸೇರಿ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದರು.

ಕೆಎಂಎಫ್‌ ಕ್ರಿಕೆಟ್‌ ಲೋಕಕ್ಕೆ ಕಾಲಿಟ್ಟು ನಂದಿನಿ(nandini milk) ಲೋಗೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಜತೆಗೆ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲಿದೆ. ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

ಇದನ್ನೂ ಓದಿ T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕನ್ನಡ ಮತ್ತು ಇಂಗ್ಲೀಸ್​ನಲ್ಲಿ ಕಾಣಿಸಿಕೊಳ್ಳಲಿದೆ. ಐರ್ಲೆಂಡ್ ತಂಡ ಜೆರ್ಸಿ ಇನ್ನಷ್ಟೇ ಅನಾವರಣಗೊಳ್ಳಬೇಕಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಮೋಹನ್‌ದಾಸ್‌ ಪೈ ವಿರೋಧ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading

ಕ್ರೀಡೆ

Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

Head Coach: ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಹಲವು ಬಾರಿ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ಕೋಚ್ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಯಶಸ್ಸು ಕಂಡಿದ್ದರು. ಹೀಗಾಗಿ ದ್ರಾವಿಡ್​ ಬಳಿಕ ಟೀಮ್​ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ವಿವಿಎಸ್ ಲಕ್ಷ್ಮಣ್ ಸೂಕ್ತ ಎಂದು ಬಿಸಿಸಿಐ ನಿರ್ಧರಿಸಿತ್ತು. ಆದರೆ ಲಕ್ಷ್ಮಣ್ ಕೂಡಾ ಈ ಹುದ್ದೆಯನ್ನು ಅಲಂಕರಿಸಲು ನಿರಾಕರಿಸಿದ್ದಾರೆ

VISTARANEWS.COM


on

Head Coach
Koo

ಮುಂಬಯಿ: ರಾಹುಲ್​ ದ್ರಾವಿಡ್(Rahul Dravid)​ ಅವರು ಭಾರತ ಕ್ರಿಕೆಟ್​ ತಂಡದ ಮುಖ್ಯ ಹುದ್ದೆಯಲ್ಲಿ(Head Coach) ಮುಂದುವರಿಯಲು ಆಸಕ್ತಿ ತೋರದ ಕಾರಣ ಬಿಸಿಸಿಐ ಹೊಸ ಕೋಚ್​ಗಾಗಿ ಅರ್ಜಿ ಆಹ್ವಾನಿಸಿದೆ. ದ್ರಾವಿಡ್​ ಬಳಿಕ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್​ಸಿಎ) ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್(VVS Laxman) ಅವರು ಮುಂದಿನ ಕೋಚ್ ಆಗಲಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಲಕ್ಷ್ಮಣ್ ಕೂಡಾ ಈ ಹುದ್ದೆಯನ್ನು ಅಲಂಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಕೆಲ ದಿನಗಳ ಹಿಂದೆ ಕೆಲವು ಹಿರಿಯ ಆಟಗಾರರು ಡ್ರಾವಿಡ್​ಗೆ​ ರೆಡ್​ ಬಾಲ್​ ಟೆಸ್ಟ್ ತಂಡದ ಕೋಚ್​ ಆಗಿ ಮುಂದುವರಿಯುವಂತೆ ಮನವಿ ಮಾಡಿದ್ದರು. ಆದರೆ, ದ್ರಾವಿಡ್​ ಇದನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ದ್ರಾವಿಡ್​ ಮೊದಲ ಬಾರಿಗೆ ಭಾರತ ತಂಡ ಮುಖ್ಯ ಕೋಚ್ ಆಗಲು ನಿರಾಸಕ್ತಿ ತೋರಿದ್ದರು. ಆದರೆ ಹಲವರ ಒತ್ತಾಯದ ಮೇರೆಗೆ ಅವರು ಕೋಚ್ ಜವಾಬ್ದಾರಿ ವಹಿಸಿಕೊಂಡಿದ್ದರು. ಇದೀಗ ಅವರು ಎರಡನೇ ಅವಧಿಗೆ ಕೋಚ್ ಆಗಿ ಮುಂದುವರಿಯಲು ಮನಸ್ಸು ಮಾಡಿಲ್ಲ. ಹೀಗಾಗಿ ಬಿಸಿಸಿಐ ವಿದೇಶಿ ಕೋಚ್​ ಬದಲು ಈ ಸ್ಥಾನಕ್ಕೆ ವಿವಿಎಸ್ ಲಕ್ಷ್ಮಣ್ ಅವರನ್ನು ಆಯ್ಕೆ ಮಾಡಲು ಮನಸ್ಸು ಮಾಡಿದೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಹಲವು ಬಾರಿ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ಕೋಚ್ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. 2022ರಲ್ಲಿ ಜಿಂಬಾಬ್ವೆ ಹಾಗೂ ಐರ್ಲೆಂಡ್ ನಡುವಿನ ಸರಣಿಗೆ ಲಕ್ಷ್ಮಣ್ ಕೋಚ್ ಆಗಿ ಕಾರ್ಯನಿರ್ವಹಿಸಿ ಯಶಸ್ಸು ಕಂಡಿದ್ದರು. ಇವರ ಮಾರ್ಗದರ್ಶನದಲ್ಲೇ ಅಂಡರ್ 19 ವಿಶ್ವ ಕಪ್ ಕೂಡ ಟೀಮ್​ ಇಂಡಿಯಾ ಗೆದ್ದಿತ್ತು. ಹೀಗಾಗಿ ದ್ರಾವಿಡ್​ ಬಳಿಕ ಟೀಮ್​ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ವಿವಿಎಸ್ ಲಕ್ಷ್ಮಣ್ ಸೂಕ್ತ ಎಂದು ಬಿಸಿಸಿಐ ನಿರ್ಧರಿಸಿತ್ತು. ಇದೀಗ ಲಕ್ಷ್ಮಣ್ ಕೋಚಿಂಗ್​ ಬಗ್ಗೆ ಆಸಕ್ತಿ ಹೊಂದಿಲ್ಲ, ಅವರು ಅರ್ಜಿ ಸಲ್ಲಿಸಲು ಹಿಂದೇಟು ಹಾಕಿದ್ದಾರೆ ಎಂದು ವರದಿಯಾಗಿದೆ.

ಸ್ಪೋರ್ಟ್‌ಸ್ಟಾರ್‌ನ ವರದಿಯ ಪ್ರಕಾರ, ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ರಾಹುಲ್ ದ್ರಾವಿಡ್, ವೈಯಕ್ತಿಕ ಕಾರಣಗಳಿಗಾಗಿ ಇನ್ನು ಮುಂದೆ ಕೋಚ್​ ಹುದ್ದೆಯಲ್ಲಿ ಮತ್ತೊಂದು ವಿಸ್ತರಣೆಯನ್ನು ಬಯಸುವುದಿಲ್ಲ ಎಂದು ಮಂಡಳಿಗೆ ಮೊದಲೇ ತಿಳಿಸಿದ್ದರು. ಆದರೆ ಟಿ20 ವಿಶ್ವಕಪ್​ ತನಕ ತಂಡಕ್ಕೆ ಮಾರ್ಗದರ್ಶನ ಮಾಡುವಂತೆ ಬಿಸಿಸಿಐ ಒತ್ತಾಯಿಸಿದ ಕಾರಣ ದ್ರಾವಿಡ್​ ತಮ್ಮ ಕೋಚಿಂಗ್​ ಅವಧಿಯನ್ನು ಟಿ20 ವಿಶ್ವಕಪ್​ ತನ ಮುಂದುವರಿಸಿದರು. ಇದೀಗ ಟಿ20 ಮುಗಿದ ತಕ್ಷಣ ಅವರು ಈ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಇದೇ ಕಾರಣಕ್ಕೆ ಬಿಸಿಸಿಐ ನೂತನ ಕೋಚ್​ ಹುಡುಕಾಟದಲ್ಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ.

Continue Reading
Advertisement
Nitish Kumar Reddy
Latest46 seconds ago

Nitish Reddy : ಐಪಿಎಲ್​ನಲ್ಲಿ ಮಿಂಚಿದ ಈ ಆಟಗಾರನಿಗೆ ಎಪಿಎಲ್​ನಲ್ಲಿ ಸಿಕ್ಕಿತು ಭರ್ಜರಿ ದುಡ್ಡು

Medicine Price
ದೇಶ9 mins ago

Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

Belagavi News Masked man stabs TC and four others for asking them to show tickets on train
ಕ್ರೈಂ12 mins ago

Belagavi News: ರೈಲಲ್ಲಿ ಟಿಕೆಟ್‌ ತೋರಿಸು ಎಂದಿದ್ದಕ್ಕೆ ಟಿಸಿ ಸೇರಿ ನಾಲ್ವರಿಗೆ ಚಾಕು ಇರಿದ ಮುಸುಕುಧಾರಿ; ಒಬ್ಬ ಸಾವು, ನಾಲ್ವರು ಗಂಭೀರ

Skin Care Tips in Kannada
ಆರೋಗ್ಯ27 mins ago

Skin Care Tips in Kannada: ಈ ಕಾರಣಕ್ಕಾಗಿ ನೀವು ಸನ್‌ಸ್ಕ್ರೀನ್‌ ಹಚ್ಚಿಕೊಳ್ಳಲೇಬೇಕು!

Car Care tips
ಪ್ರಮುಖ ಸುದ್ದಿ45 mins ago

Car Care Tips : ನಿಮ್ಮ ಕಾರಿನ ಈ ಬಿಡಿಭಾಗಗಳಿಗೂ ಇವೆ ಎಕ್ಸ್​ಪೈರಿ ಡೇಟ್​​; ಅವುಗಳು ಯಾವವು ಎಂಬುದು ತಿಳಿದಿರಲಿ

ASOS brand products are available at Reliance Retail
ದೇಶ45 mins ago

Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

OTT Release
ಒಟಿಟಿ47 mins ago

OTT Release: ಒಟಿಟಿಯಲ್ಲಿ ಈ ವಾರ ಬ್ರಿಡ್ಜರ್‌ಟನ್‌, ಬಾಹುಬಲಿ ಸರಣಿ; ಇನ್ನೂ ಏನೇನಿವೆ?

Yogendra Yadav
Lok Sabha Election 202453 mins ago

Yogendra Yadav: ಈ ಬಾರಿ ಬಿಜೆಪಿಗೆ ಬಹುಮತ ಬರಲ್ಲವೆಂದ ಯೋಗೇಂದ್ರ ಯಾದವ್; ಇವರ ಹಿಂದಿನ ಭವಿಷ್ಯ ನಿಜವಾಗಿತ್ತಾ?

KEA Department of Technical Education Director Prasanna has been appointed as the Executive Director of KEA
ಬೆಂಗಳೂರು2 hours ago

KEA : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ; ಕೆಇಎ ಎಕ್ಸಿಕ್ಯುಟಿವ್‌ ಡೈರೆಕ್ಟರ್‌ ರಮ್ಯಾ ಎತ್ತಂಗಡಿ

Udupi
ಕರ್ನಾಟಕ2 hours ago

Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ6 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು9 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌