Site icon Vistara News

ಇಂಡೋ-ಪಾಕ್​ ಪಂದ್ಯದ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದು ತಪ್ಪು; ಉದಯನಿಧಿ ಸ್ಟಾಲಿನ್ ಟೀಕೆ

The Narendra Modi stadium was heavily populated during the game

ಹೈದರಾಬಾದ್: ಇತ್ತೀಚೆಗೆ ಸನಾತನ ಧರ್ಮ (Sanatana Dharma) ಬಗ್ಗೆ ಅತ್ಯಂತ ಅವಹೇಳನಕಾರಿ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಕಾರಣವಾಗಿದ್ದ ತಮಿಳುನಾಡು ಸಚಿವ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌(Udhayanidhi Stalin) ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ಪಾಕಿಸ್ತಾನ(IND vs PAK) ವಿರುದ್ಧದ ಪಂದ್ಯದ ವೇಳೆ ಅಭಿಮಾನಿಗಳು ಜೈ ಶ್ರೀರಾಮ್(Jai Shri Ram)​ ಎಂದು ಘೋಷಣೆ ಕೂಗಿದ್ದು ತಪ್ಪು ಎಂದು ಟ್ವಿಟರ್​ನಲ್ಲಿ ಖಂಡಿಸಿದ್ದಾರೆ. ಇದಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

ಕಳೆದ ತಿಂಗಳು ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮವನ್ನು ಮಲೇರಿಯಾ, ಡೆಂಗ್ಯೂ, ಕೊರೊನಾಗೆ ಹೋಲಿಸಿ ವಿವದಾತ್ಮಕ ಹೇಳಿಕೆ ನೀಡಿದ್ದರು. ತಮಿಳುನಾಡಿನ ಚೆನ್ನೈನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಉಲ್ಲೇಖ ಮಾಡಿದ್ದರು.

“ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದಂತೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದ್ದರು. ಉದಯನಿಧಿ ಸ್ಟಾಲಿನ್‌ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ IND vs PAK: ಜೆರ್ಸಿ ಪಡೆದ ಬಾಬರ್​ಗೆ ತೀಕ್ಷ್ಣ ಮಾತುಗಳಿಂದ ಕುಟುಕಿದ ವಾಸಿಂ ಅಕ್ರಮ್

ನಿಜಕ್ಕೂ ಖಂಡನೀಯ

ಇದೀಗ ಮತ್ತೆ ಇದೇ ರೀತಿಯ ಹೇಳಿಕೆಯೊಂದನ್ನು ನೀಡಿ ಸುದ್ದಿಯಾಗಿದ್ದಾರೆ. “ಭಾರತವು ತನ್ನ ಕ್ರೀಡಾ ಮನೋಭಾವ ಮತ್ತು ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಆದಾಗ್ಯೂ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನದ ಆಟಗಾರರ ಮುಂದೆ ಅಭಿಮಾನಿಗಳು ತೋರಿದ ವರ್ತನೆ ಸ್ವೀಕಾರಾರ್ಹವಲ್ಲ. ಕ್ರೀಡೆಗಳು ದೇಶಗಳ ನಡುವೆ ಒಗ್ಗೂಡಿಸುವ ಶಕ್ತಿಯಾಗಬೇಕು, ನಿಜವಾದ ಸಹೋದರತ್ವವನ್ನು ಬೆಳೆಸಬೇಕು. ದ್ವೇಷವನ್ನು ಹರಡುವ ಸಾಧನವಾಗಿ ಬಳಸುತ್ತಿರುವುದು ನಿಜಕ್ಕೂ ಖಂಡನೀಯ” ಎಂದು ಅಭಿಮಾನಿಗಳು ಜೈ ಶ್ರೀರಾಮ್​ ಎಂದು ಘೋಷಣೆ ಕೂಗುತ್ತಿರುವ ವಿಡಿಯೊವನ್ನು ಟ್ವೀಟರ್​ನಲ್ಲಿ ಹಂಚಿಕೊಂಡಿದ್ದಾರೆ.

“ಚೆನ್ನೈಗೆ ಬರಲಿರುವ ಪಾಕಿಸ್ತಾನ ತಂಡಕ್ಕೆ ಆತ್ಮೀಯವಾಗಿ ಸ್ವಾಗತಿಸಿ. ಈ ರೀತಿಯ ವರ್ತನೆಯನ್ನು ತೋರದಿರಿ” ಎಂದು ಇಲ್ಲಿನ ಸ್ಥಳೀಯ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಉದಯನಿಧಿ ಸ್ಟಾಲಿನ್‌ ವಿರುದ್ಧ ಅನೇಕರು ಕಿಡಿ ಕಾರಿದ್ದಾರೆ.

ನೀನೊಬ್ಬ ಸನಾತನ ಧರ್ಮ ವಿರೋಧಿ ಮಾತ್ರವಲ್ಲ ದೇಶ ದ್ರೋಹಿ ಉಗ್ರ ಎಂಬುದು ಈಗ ತಿಳಿದಿದೆ. ಭಾರತದಲ್ಲಿ ಇದ್ದುಕೊಂಡು ಪಾಕಿಸ್ತಾನಕ್ಕೆ ಬೆಂಬಲ ಸೂಚಿಸುವ ನಿನ್ನ ನೀಚ ಬುದ್ಧಿಗೆ ನಮ್ಮ ವಿರೋಧವಿದೆ. ನೀನು ತಕ್ಷಣ ದೇಶ ಬಿಟ್ಟು ತೊಲಗಬೇಕು. ಹೀಗೆ ಉದಯನಿಧಿ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version