James Anderson: 22 ವರ್ಷಗಳ ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ ಜೇಮ್ಸ್​ ಆ್ಯಂಡರ್ಸನ್; ಭಾವನಾತ್ಮಕವಾಗಿ ಹಾರೈಸಿದ ಸಚಿನ್ - Vistara News

ಕ್ರೀಡೆ

James Anderson: 22 ವರ್ಷಗಳ ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ ಜೇಮ್ಸ್​ ಆ್ಯಂಡರ್ಸನ್; ಭಾವನಾತ್ಮಕವಾಗಿ ಹಾರೈಸಿದ ಸಚಿನ್

James Anderson: 2003ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಆ್ಯಂಡರ್ಸನ್‌, ಈವರೆಗೂ 188 ಪಂದ್ಯಗಳಲ್ಲಿ 704 ವಿಕೆಟ್‌ ಗಳಿಸಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ ಹಾಗೂ ಆಸ್ಟ್ರೇಲಿಯಾದ ಶೇನ್‌ ವಾರ್ನ್‌ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದವರ ಸ್ಥಾನದಲ್ಲಿ ಆ್ಯಂಡರ್ಸನ್‌ ಇದ್ದಾರೆ

VISTARANEWS.COM


on

James Anderson
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಲಂಡನ್​: ಇಂಗ್ಲೆಂಡ್​ ತಂಡದ ಹಿರಿಯ ವೇಗಿ ಜೇಮ್ಸ್​ ಆ್ಯಂಡರ್ಸನ್(James Anderson)​ ಅವರು ತಮ್ಮ 22 ವರ್ಷಗಳ ಸುದೀರ್ಘ ಅಂತಾರಾಷ್ಟೀಯ ಕ್ರಿಕೆಟ್‌ ವೃತ್ತಿ ಬದುಕಿಗೆ ತೆರೆ ಎಳೆದಿದ್ದಾರೆ. ವೆಸ್ಟ್​ ಇಂಡೀಸ್​ ವಿರುದ್ಧ ಇಂದು(ಶುಕ್ರವಾರ) ಮುಕ್ತಾಯ ಕಂಡ ಟೆಸ್ಟ್​ ಪಂದ್ಯ ಅವರಿಗೆ ಕೊನೆಯ ಪಂದ್ಯವಾಯಿತು. ಈ ಪಂದ್ಯವನ್ನು ಇಂಗ್ಲೆಂಡ್​ ಇನಿಂಗ್ಸ್​ ಹಾಗೂ 114 ರನ್​ಗಳಿಂದ ಗೆದ್ದು ಬೀಗಿತು. ಆ್ಯಂಡರ್ಸನ್​ಗೂ ಗೆಲುವಿನ ವಿದಾಯ ಲಭಿಸಿತು. ಸಾರ್ವಕಾಲಿಕ ಶ್ರೇಷ್ಠ ಬೌಲರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ 41 ವರ್ಷದ ಆ್ಯಂಡರ್ಸನ್, ವಿದಾಯಕ್ಕೆ ಸಚಿನ್​ ತೆಂಡೂಲ್ಕರ್(Sachin Tendulkar) ಭಾವನಾತ್ಮಕ​ ಟ್ವೀಟ್​ ಮೂಲಕ ಶುಭ ಹಾರೈಸಿದ್ದಾರೆ.

‘ಹೇ ಜಿಮ್ಮಿ!.. ನಿಮ್ಮ ಆ ನಂಬಲಾಗದ 22 ವರ್ಷಗಳ ಕ್ರಿಕೆಟ್​ ವೃತ್ತಿ ಜೀವನದಲ್ಲಿ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದೀರಿ. ನೀಮ್ಮ ವಿದಾಯದ ಸಂದರ್ಭದಲ್ಲಿ ನನ್ನದೊಂದು ಸಣ್ಣ ಹಾರೈಕೆ ಇದೆ. ನೀವು ಬೌಲಿಂಗ್ ಮಾಡುವುದನ್ನು ವೀಕ್ಷಿಸುವುದೇ ಒಂದು ರೀತಿಯ ಸಂತೋಷ. ಆ ನಿಮ್ಮ ಶೈಲಿ, ವೇಗ, ನಿಖರತೆ, ಸ್ವಿಂಗ್ ಮತ್ತು ಫಿಟ್ನೆಸ್ ಮುಂದಿನ ಪೀಳಿಗೆಯ ಬೌಲರ್​ಗಳಿಗೆ ಸ್ಫೂರ್ತಿ. ಮುಂದಿನ ಜೀವನವನ್ನು ಕುಟುಂಬದೊಂದಿಗೆ ಆನಂದಿಸಿ” ಎಂದು ಹಾರೈಸಿದ್ದಾರೆ.

ಆ್ಯಂಡರ್ಸನ್​ ಇಂಗ್ಲೆಂಡ್‌ ಪರ ಅತಿ ಹೆಚ್ಚು ವಿಕೆಟ್‌ ಪಡೆದ, ಟೆಸ್ಟ್ ಕ್ರಿಕೆಟ್‌ನಲ್ಲಿ 700ಕ್ಕೂ ಅಧಿಕ ವಿಕೆಟ್‌ ಪಡೆದ ವಿಶ್ವದ ಮೊದಲ ವೇಗಿ ಹಾಗೂ ಒಟ್ಟಾರೆ ಮೂರನೇ ಬೌಲರ್‌ ಎನಿಸಿಕೊಂಡಿದ್ದಾರೆ. ವಿದಾಯ ಪಂದ್ಯದಲ್ಲೇ ಆ್ಯಂಡರ್ಸನ್​ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದು ಕೂಡ ವಿಶೇಷ. ದ್ವಿತೀಯ ಇನಿಂಗ್ಸ್​ನಲ್ಲಿ 10 ಓವರ್​ ಪೂರ್ತಿಗೊಳಿಸುವ ಮೂಲಕ ಜೇಮ್ಸ್​ ಆ್ಯಂಡರ್ಸನ್ 40 ಸಾವಿರ ಚೆಂಡೆಸೆದ ದಾಖಲೆ ನಿರ್ಮಿಸಿದರು. ಈ ದಾಖಲೆ ಮಾಡಿದ ವಿಶ್ವದ ಮೊದಲ ವೇಗಿ ಎನಿಸಿಕೊಂಡರು. ಅತಿ ಹೆಚ್ಚು ಎಸೆತಗಳನ್ನು ಎಸೆದ ವಿಶ್ಚ ದಾಖಲೆ ಶ್ರೀಲಂಕಾದ ಮಾಜಿ ಆಟಗಾರ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಮುರಳೀಧರನ್ 44039 ಎಸೆತಗಳನ್ನು ಎಸೆದಿದ್ದಾರೆ. ಕನ್ನಡಿಗ ಅನಿಲ್ ಕುಂಬ್ಳೆ 40850 ಎಸೆತಗಳೊಂದಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ. ವಿದಾಯ ಪಂದ್ಯದಲ್ಲಿ ಆ್ಯಂಡರ್ಸನ್​ ಒಟ್ಟು 4 ವಿಕೆಟ್​ ಕಿತ್ತು ಮಿಂಚಿದರು.

ಇದನ್ನೂ ಓದಿ Viral Video: ಆ್ಯಂಡರ್ಸನ್ ಬೌಲಿಂಗ್​ಗೆ ನೆಟ್​ ಫ್ರಾಕ್ಟೀಸ್ ಮಾಡಿ ತಂಡ ಸೇರುವ ಬಯಕೆ ವ್ಯಕ್ತಪಡಿಸಿದ ಬ್ರಿಟನ್​ ಪ್ರಧಾನಿ

3 ತಿಂಗಳ ಹಿಂದೆ ಆ್ಯಂಡರ್ಸನ್​ ಅವರು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ನಿವೃತ್ತಿಯನ್ನು ಘೋಷಿಸಿದ್ದರು. “ಎಲ್ಲರಿಗೂ ನಮಸ್ಕಾರ, ಈ ಬೇಸಿಗೆಯಲ್ಲಿ ಲಾರ್ಡ್ಸ್‌ನಲ್ಲಿ ನಡೆಯುವ ವೆಸ್ಟ್‌ ಇಂಡೀಸ್‌ ವಿರುದ್ಧದ ಮೊದಲ ಟೆಸ್ಟ್ ಪಂದ್ಯ, ನನ್ನ ಕೊನೆಯ ಪಂದ್ಯವಾಗಿರಲಿದೆ. ಬಾಲ್ಯದಿಂದ ಇಷ್ಟಪಟ್ಟಿದ ಆಟವನ್ನು ಆಡಲು, ನನ್ನ ದೇಶವನ್ನು ಪ್ರತಿನಿಧಿಸಿದ 20 ಅದ್ಭುತ ವರ್ಷಗಳಿವು. ಇಂಗ್ಲೆಂಡ್ ತಂಡಕ್ಕಾಗಿ ಆಡುವುದನ್ನು ನಾನು ಮಿಸ್‌ ಮಾಡಿಕೊಳ್ಳುತ್ತೇನೆ’ ಎಂದು ಬರೆದುಕೊಂಡಿದ್ದರು. 

2003ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಆ್ಯಂಡರ್ಸನ್‌, ಈವರೆಗೂ 188 ಪಂದ್ಯಗಳಲ್ಲಿ 704 ವಿಕೆಟ್‌ ಗಳಿಸಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ ಹಾಗೂ ಆಸ್ಟ್ರೇಲಿಯಾದ ಶೇನ್‌ ವಾರ್ನ್‌ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದವರ ಸ್ಥಾನದಲ್ಲಿ ಆ್ಯಂಡರ್ಸನ್‌ ಇದ್ದಾರೆ. 194 ಏಕದಿನ ಪಂದ್ಯಗಳನ್ನು ಆಡಿರುವ ಅವರು, 269 ವಿಕೆಟ್‌ಗಳನ್ನು ಪಡೆದಿದ್ದಾರೆ.

 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಆರ್‌ಸಿಬಿ ಪ್ಲೇಯಿಂಗ್ 11 ಅಪ್‌ಡೇಟ್: ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್?

VISTARANEWS.COM


on

ನವದೆಹಲಿ: ಐಪಿಎಲ್ 2026ರ ಮೊದಲಾರ್ಧದಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈಗ ಮತ್ತೊಂದು ಮಹತ್ವದ ಸವಾಲಿಗೆ ಸಜ್ಜಾಗಿದೆ. ಈವರೆಗೆ ಆಡಿರುವ 7 ಪಂದ್ಯಗಳಲ್ಲಿ 5 ಗೆಲುವುಗಳೊಂದಿಗೆ 10 ಅಂಕಗಳನ್ನು ಗಳಿಸಿರುವ ಆರ್‌ಸಿಬಿ, ನಾಳೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವನ್ನು ಎದುರಿಸಲಿದೆ. ಆದರೆ, ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ತಂಡದ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆ ಇರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ತಂಡದ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅವರು ಅಭ್ಯಾಸದ ವೇಳೆ ಉಂಟಾದ ಗಾಯದ ಸಮಸ್ಯೆಯಿಂದಾಗಿ ಕಳೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದಲೂ ಹೊರಗುಳಿದಿದ್ದರು. ಈಗ ಅವರ ಗಾಯದ ಸಮಸ್ಯೆ ಇನ್ನೂ ಪೂರ್ಣವಾಗಿ ವಾಸಿಯಾಗದ ಕಾರಣ, ಅವರು ಡೆಲ್ಲಿ ವಿರುದ್ಧದ ಪಂದ್ಯವನ್ನೂ ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ಇವರ ಜೊತೆಗೆ ಯುವ ವೇಗಿ ರಾಸಿಖ್ ಸಲಾಂ ದಾರ್ ಕಳೆದ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೆ (Muscle Cramp) ಒಳಗಾಗಿ ಮೈದಾನ ತೊರೆದಿದ್ದರು. ಫಿಟ್ನೆಸ್ ಸಮಸ್ಯೆಯ ಕಾರಣ ರಾಸಿಖ್ ಕೂಡ ನಾಳೆಯ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಈ ಇಬ್ಬರು ಆಟಗಾರರ ಅನುಪಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇಯಿಂಗ್ 11 ನಲ್ಲಿ ಮಹತ್ವದ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ. ಫಿಲ್ ಸಾಲ್ಟ್ ಬದಲಿಗೆ ಮತ್ತೊಬ್ಬ ಸ್ಫೋಟಕ ಆಟಗಾರ ಜೇಕಬ್ ಬೆಥೆಲ್ ಅವರು ವಿರಾಟ್ ಕೊಹ್ಲಿ ಜೊತೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಇನ್ನು ಬೌಲಿಂಗ್ ವಿಭಾಗದಲ್ಲಿ ರಾಸಿಖ್ ಸಲಾಂ ಬದಲಿಗೆ ಬಲಗೈ ವೇಗಿ ಅಭಿನಂದನ್ ಸಿಂಗ್ ಅವರಿಗೆ ಚಾನ್ಸ್ ಸಿಗುವ ನಿರೀಕ್ಷೆಯಿದೆ. ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ ತಂಡವು ಈ ಬದಲಾವಣೆಗಳೊಂದಿಗೆ ದೆಹಲಿ ನೆಲದಲ್ಲಿ ಗೆಲುವಿನ ನಾಗಾಲೋಟ ಮುಂದುವರಿಸಲು ಹರಸಾಹಸ ಪಡಬೇಕಿದೆ.

ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11:
ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಜೇಕಬ್ ಬೆಥೆಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೋಶ್ ಹೇಝಲ್‌ವುಡ್, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್/ಸುಯಶ್ ಶರ್ಮಾ.

Continue Reading

Latest

ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಬಿಸಿನೆಸ್‌ನಲ್ಲೂ ಸಚಿನ್ ಅವರದ್ದೇ ಸಿಕ್ಸರ್! ತೆಂಡೂಲ್ಕರ್‌ ಒಟ್ಟು ಆಸ್ತಿ ಎಷ್ಟು ಗೊತ್ತಾ?

VISTARANEWS.COM


on

ಕೆಟ್ ಮೈದಾನದಲ್ಲಿ ಶತಕಗಳ ಸರದಾರನಾಗಿ ಮೆರೆದ ‘ಮಾಸ್ಟರ್ ಬ್ಲಾಸ್ಟರ್’ ಸಚಿನ್ ತೆಂಡೂಲ್ಕರ್, ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ದಶಕದ ನಂತರವೂ ವ್ಯವಹಾರ ಲೋಕದ ಅಧಿಪತಿಯಾಗಿ ಮುಂದುವರಿದಿದ್ದಾರೆ. ಅಭಿಮಾನಿಗಳಿಂದ ‘ಕ್ರಿಕೆಟ್ ದೇವರು’ ಎಂದು ಆರಾಧಿಸಲ್ಪಡುವ ಸಚಿನ್, ಈಗ ಕೇವಲ ಕ್ರೀಡಾಪಟುವಾಗಿ ಉಳಿಯದೆ ಒಬ್ಬ ಚಾಣಾಕ್ಷ ಉದ್ಯಮಿ ಮತ್ತು ಹೂಡಿಕೆದಾರನಾಗಿ ಹೊರಹೊಮ್ಮಿದ್ದಾರೆ. ಏಪ್ರಿಲ್ 2026ರ ಇತ್ತೀಚಿನ ವರದಿಗಳ ಪ್ರಕಾರ, ಸಚಿನ್ ಅವರ ಒಟ್ಟು ಆಸ್ತಿ ಮೌಲ್ಯವು ಸುಮಾರು 170 ಮಿಲಿಯನ್ ಡಾಲರ್ (₹1,400 ಕೋಟಿಗೂ ಅಧಿಕ) ಎಂದು ಅಂದಾಜಿಸಲಾಗಿದೆ. 2025ರ ಸಾಲೊಂದರಲ್ಲೇ ಅವರು ಬ್ರ್ಯಾಂಡ್ ಒಪ್ಪಂದಗಳು ಮತ್ತು ಹೂಡಿಕೆಗಳ ಮೂಲಕ ಸರಿಸುಮಾರು ₹50 ಕೋಟಿ ಸಂಪಾದಿಸುವ ಮೂಲಕ ತಮ್ಮ ಆರ್ಥಿಕ ಸಾಮ್ರಾಜ್ಯವನ್ನು ಮತ್ತಷ್ಟು ವಿಸ್ತರಿಸಿದ್ದಾರೆ.

ಸಚಿನ್ ಅವರ ಈ ಬೃಹತ್ ಆದಾಯದ ಹಿಂದೆ ಅವರ ದೂರದೃಷ್ಟಿಯ ಹೂಡಿಕೆಗಳಿವೆ. ಬಳಸಿದ ಕಾರುಗಳ ವೇದಿಕೆ ‘Spinny’, ಗೇಮಿಂಗ್ ಸ್ಟಾರ್ಟ್-ಅಪ್ ‘JetSynthesys’ ಮತ್ತು ಸೋಲಾರ್ ಕ್ಷೇತ್ರದ ‘Truzon Solar’ ಸೇರಿದಂತೆ ‘Zepto’ ಮತ್ತು ‘Vahdam Teas’ ನಂತಹ ಪ್ರಮುಖ ಸಂಸ್ಥೆಗಳಲ್ಲಿ ಅವರು ಬಂಡವಾಳ ಹೂಡಿದ್ದಾರೆ. ಇಷ್ಟೇ ಅಲ್ಲದೆ, ತಮ್ಮದೇ ಆದ ‘Ten XU’ ಸ್ಪೋರ್ಟ್ಸ್‌ವೇರ್ ಬ್ರ್ಯಾಂಡ್ ಮತ್ತು ‘True Blue’ ಫ್ಯಾಷನ್ ಲೇಬಲ್ ಮೂಲಕ ಉದ್ಯಮ ರಂಗದಲ್ಲಿ ಸಕ್ರಿಯರಾಗಿದ್ದಾರೆ. ಸಚಿನ್ ಎಂಬ ಹೆಸರೇ ಒಂದು ಶಕ್ತಿಯುತ ಬ್ರ್ಯಾಂಡ್ ಆಗಿರುವುದರಿಂದ, ಅಪೋಲೋ ಟೈರ್ಸ್‌ನಿಂದ ಹಿಡಿದು ಪ್ರಮುಖ ಬ್ಯಾಂಕ್‌ಗಳವರೆಗೆ ಹಲವು ಕಂಪನಿಗಳು ಇಂದಿಗೂ ಅವರ ವಿಶ್ವಾಸಾರ್ಹ ಇಮೇಜ್ ಅನ್ನು ಬಳಸಿಕೊಳ್ಳಲು ಕೋಟಿ ಕೋಟಿ ಸಂಭಾವನೆ ನೀಡುತ್ತಿವೆ.

ಇನ್ನು ರಿಯಲ್ ಎಸ್ಟೇಟ್ ವಿಷಯಕ್ಕೆ ಬಂದರೆ, ಸಚಿನ್ ಅವರ ಆಸ್ತಿಗಳು ಯಾರಿಗೂ ಕಡಿಮೆ ಇಲ್ಲದಂತಿವೆ. ಮುಂಬೈನ ಬಾಂದ್ರಾದಲ್ಲಿರುವ ಐಷಾರಾಮಿ ಬಂಗಲೆ, ದಕ್ಷಿಣ ಮುಂಬೈನ ಫ್ಲಾಟ್ ಮತ್ತು ಅಲಿಬಾಗ್‌ನಲ್ಲಿರುವ ಆಸ್ತಿಗಳ ಒಟ್ಟು ಮೌಲ್ಯವೇ ಸುಮಾರು ₹300 ಕೋಟಿ ಮೀರಿದೆ ಎಂದು ಅಂದಾಜಿಸಲಾಗಿದೆ. ಮೈದಾನದಲ್ಲಿ ರನ್ ಮಳೆ ಸುರಿಸಿದ ಮಾದರಿಯಲ್ಲೇ, ವ್ಯವಹಾರ ಲೋಕದಲ್ಲಿ ಸರಿಯಾದ ಕಾರ್ಯತಂತ್ರ ಮತ್ತು ಹೂಡಿಕೆಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಸಚಿನ್ ಸಾವಿರಾರು ಕೋಟಿಗಳ ಸಾಮ್ರಾಜ್ಯವನ್ನು ಕಟ್ಟಿದ್ದಾರೆ. ಒಟ್ಟಾರೆಯಾಗಿ, ನಿವೃತ್ತಿಯ ನಂತರವೂ ಸಚಿನ್ ಅವರ ಈ ‘ಸೆಕೆಂಡ್ ಇನ್ನಿಂಗ್ಸ್’ ಯುವ ಉದ್ಯಮಿಗಳಿಗೆ ದೊಡ್ಡ ಸ್ಫೂರ್ತಿಯಾಗಿದೆ.

Continue Reading

Latest

ಹೋಮ್‌ಗ್ರೌಂಡ್‌ನಲ್ಲಿ ಆರ್‌ಸಿಬಿಗಿಂದು ಕೊನೆ ಲೀಗ್‌ ಪಂದ್ಯ! ಗುಜರಾತ್ ಟೈಟನ್ಸ್ ಸವಾಲಿಗೆ ಸಜ್ಜಾದ ವಿರಾಟ್‌ ಪಡೆ

VISTARANEWS.COM


on

ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಈ ಬಾರಿಯ ಐಪಿಎಲ್ ಸೀಸನ್‌ನಲ್ಲಿ ತನ್ನ ತವರು ಮೈದಾನವಾದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಅಂತಿಮ ಲೀಗ್ ಪಂದ್ಯವನ್ನು ಆಡಲಿದೆ. ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ವಿರುದ್ಧ ನಡೆಯಲಿರುವ ಈ ಹಣಾಹಣಿಯಲ್ಲಿ ಗೆಲುವಿನ ಮೂಲಕ ತವರಿನ ಪ್ರೇಕ್ಷಕರಿಗೆ ಸ್ಮರಣೀಯ ವಿದಾಯ ಹೇಳಲು ಬೆಂಗಳೂರು ಪಡೆ ಸಜ್ಜಾಗಿದೆ. ಈ ಪಂದ್ಯದ ನಂತರ ಆರ್‌ಸಿಬಿ ತನ್ನ ಮುಂದಿನ ಪಂದ್ಯಗಳಿಗಾಗಿ ರಾಯ್ಪುರಕ್ಕೆ ಪ್ರಯಾಣ ಬೆಳೆಸಲಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ ಭದ್ರ ನೆಲೆ ಕಂಡುಕೊಳ್ಳಲು ಈ ಗೆಲುವು ಉಭಯ ತಂಡಗಳಿಗೂ ಅತ್ಯಂತ ನಿರ್ಣಾಯಕವಾಗಿದೆ.

ಆರ್‌ಸಿಬಿ ಈ ವರ್ಷ ಚಿನ್ನಸ್ವಾಮಿ ಮೈದಾನದಲ್ಲಿ ಆಡಿದ 4 ಪಂದ್ಯಗಳ ಪೈಕಿ 3ರಲ್ಲಿ ಜಯ ಸಾಧಿಸಿ ಭರ್ಜರಿ ಫಾರ್ಮ್‌ನಲ್ಲಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಅನುಭವಿಸಿದ ಸೋಲಿನ ಆಘಾತದಿಂದ ಹೊರಬಂದು, ಮತ್ತೆ ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿ ರಜತ್ ಪಾಟೀದಾರ್ ಸೈನ್ಯವಿದೆ. ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ, ನಾಯಕ ರಜತ್ ಪಾಟೀದಾರ್ ಮತ್ತು ಫಿಲ್ ಸಾಲ್ಟ್ ಅಬ್ಬರಿಸುತ್ತಿದ್ದು, ತಂಡಕ್ಕೆ ಬಲಿಷ್ಠ ಅಡಿಪಾಯ ಹಾಕುತ್ತಿದ್ದಾರೆ. ವಿಶೇಷವಾಗಿ ಟಿಮ್ ಡೇವಿಡ್ ಅವರ 203.52 ರ ಸ್ಟ್ರೈಕ್ ರೇಟ್ ತಂಡದ ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಬಲ ತಂದಿದೆ. ಬೌಲಿಂಗ್‌ನಲ್ಲಿ ಹೇಜಲ್‌ವುಡ್ ಮತ್ತು ಭುವನೇಶ್ವರ್ ಕುಮಾರ್ ಜೋಡಿ ಎದುರಾಳಿಗಳನ್ನು ಕಟ್ಟಿಹಾಕಲು ಸನ್ನದ್ಧವಾಗಿದೆ.

ಇನ್ನೊಂದೆಡೆ, ಗುಜರಾತ್ ಟೈಟನ್ಸ್ ತಂಡವು ಸ್ಥಿರ ಪ್ರದರ್ಶನದ ಹುಡುಕಾಟದಲ್ಲಿದ್ದು, ಪ್ರಬಲ ಬೌಲಿಂಗ್ ಪಡೆಯನ್ನು ನೆಚ್ಚಿಕೊಂಡಿದೆ. ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್ ಮತ್ತು ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರನ್ನೊಳಗೊಂಡ ವೇಗದ ಪಡೆ ಆರ್‌ಸಿಬಿಯ ಸ್ಫೋಟಕ ಬ್ಯಾಟರ್‌ಗಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಅದರಲ್ಲೂ ಪ್ರಸಿದ್ಧ್ ಕೃಷ್ಣ ತಮ್ಮ ತವರು ಮೈದಾನದಲ್ಲಿ ಹಳೆಯ ತಂಡದ ವಿರುದ್ಧ ಹೇಗೆ ಮಿಂಚಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಉಭಯ ತಂಡಗಳ ನಡುವೆ ಇದುವರೆಗೆ ನಡೆದ 6 ಮುಖಾಮುಖಿಗಳಲ್ಲಿ ಎರಡೂ ತಂಡಗಳು ತಲಾ 3 ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿರುವುದರಿಂದ, ಇಂದಿನ ಪಂದ್ಯವು ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡುವುದರಲ್ಲಿ ಸಂಶಯವಿಲ್ಲ.

Continue Reading

Latest

ತಾಯಿ ನಿಧನದ ಶೋಕದಲ್ಲೂ ತಂಡಕ್ಕಾಗಿ ಕಣಕ್ಕಿಳಿದ ಮುಖೇಶ್ ಚೌಧರಿ! ಗೆಲುವನ್ನು ಅರ್ಪಿಸಿ ಮಾನವೀಯತೆ ಮೆರೆದ ನಾಯಕ ಗಾಯಕ್ವಾಡ್

VISTARANEWS.COM


on

ವಾಂಖೆಡೆ ಮೈದಾನದಲ್ಲಿ ಏಪ್ರಿಲ್ 23ರಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 103 ರನ್‌ಗಳ ಬೃಹತ್ ಜಯ ದಾಖಲಿಸಿದೆ. ಈ ಗೆಲುವಿಗಿಂತಲೂ ಮಿಗಿಲಾಗಿ ಅಭಿಮಾನಿಗಳ ಗಮನ ಸೆಳೆದಿದ್ದು ವೇಗಿ ಮುಖೇಶ್ ಚೌಧರಿ ಅವರ ಅಪ್ರತಿಮ ವೃತ್ತಿಧರ್ಮ. ತಮ್ಮ ತಾಯಿ ಪ್ರೇಮಾ ದೇವಿ ನಿಧನರಾದ ಕೇವಲ ಎರಡೇ ದಿನಕ್ಕೆ, ತಾಯಿಯ ಅಂತ್ಯಕ್ರಿಯೆ ಮುಗಿಸಿ ಮೈದಾನಕ್ಕಿಳಿದ ಮುಖೇಶ್, ತಂಡದ ಗೆಲುವಿಗಾಗಿ ಸರ್ವಸ್ವವನ್ನೂ ಧಾರೆ ಎರೆದರು. ಅವರ ಈ ಬದ್ಧತೆ ಕ್ರೀಡಾ ಜಗತ್ತಿನಲ್ಲಿ ಹೊಸ ಸಂಚಲನ ಮೂಡಿಸಿದೆ.

ಪಂದ್ಯದ ನಿರ್ಣಾಯಕ ಹಂತದಲ್ಲಿ ಕ್ವಿಂಟನ್ ಡಿ ಕಾಕ್ ಅವರ ವಿಕೆಟ್ ಪಡೆದ ಮುಖೇಶ್, ಯಾವುದೇ ಅಬ್ಬರದ ಸಂಭ್ರಮಾಚರಣೆ ಮಾಡದೆ ಮೌನವಾಗಿ ಆಕಾಶದತ್ತ ಕೈ ತೋರಿಸಿ “ಅಮ್ಮ ಇದು ನಿನಗಾಗಿ” ಎಂದು ತಮ್ಮ ಪ್ರದರ್ಶನವನ್ನು ಸಮರ್ಪಿಸಿದ ಕ್ಷಣ ಭಾವುಕವಾಗಿತ್ತು. ಸುಮಾರು ಒಂದು ವರ್ಷದಿಂದ ಅನಾರೋಗ್ಯದ ವಿರುದ್ಧ ಹೋರಾಡುತ್ತಿದ್ದ ತಾಯಿಯನ್ನು ಕಳೆದುಕೊಂಡ ನೋವಿನ ನಡುವೆಯೂ, ತಂಡಕ್ಕೆ ತನ್ನ ಅವಶ್ಯಕತೆ ಇದೆ ಎಂದು ಅರಿತು ಮೈದಾನಕ್ಕೆ ಮರಳಿದ ಅವರ ಸ್ಥೈರ್ಯಕ್ಕೆ ಕ್ರಿಕೆಟ್ ಲೋಕವೇ ಶರಣಾಗಿದೆ. ಮುಖೇಶ್ ಅವರ ಶಿಸ್ತುಬದ್ಧ ಬೌಲಿಂಗ್ ಮುಂಬೈ ಪಡೆಯನ್ನು ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿತು.

ಇನ್ನು ಪಂದ್ಯ ಮುಗಿದ ಬಳಿಕ ಸಿಎಸ್‌ಕೆ ನಾಯಕ ರುತುರಾಜ್ ಗಾಯಕ್ವಾಡ್ ಅವರು ಮುಖೇಶ್ ಅವರನ್ನು ಅಪ್ಪಿಕೊಂಡು ಸಾಂತ್ವನ ಹೇಳುವ ಮೂಲಕ ಮಾನವೀಯತೆ ಮೆರೆದರು. ಇಂತಹ ಕಠಿಣ ಪರಿಸ್ಥಿತಿಯಲ್ಲೂ ತಂಡಕ್ಕಾಗಿ ಮರಳಿದ ಮುಖೇಶ್ ಅವರ ಮಾನಸಿಕ ಶಕ್ತಿಯನ್ನು ಶ್ಲಾಘಿಸಿದ ಗಾಯಕ್ವಾಡ್, ಈ ಭರ್ಜರಿ ಗೆಲುವನ್ನು ಮುಖೇಶ್ ಮತ್ತು ಅವರ ತಾಯಿಗೆ ಅರ್ಪಿಸುವುದಾಗಿ ಘೋಷಿಸಿದರು. ನಾಯಕನ ಈ ನಿರ್ಧಾರ ಮತ್ತು ಮುಖೇಶ್ ಅವರ ಕರ್ತವ್ಯ ಪ್ರಜ್ಞೆ ಸಿಎಸ್‌ಕೆ ತಂಡದ ಒಗ್ಗಟ್ಟನ್ನು ಸಾಬೀತುಪಡಿಸಿದೆ.

Continue Reading
Advertisement
Latest7 minutes ago

ಆರ್‌ಸಿಬಿ ಪ್ಲೇಯಿಂಗ್ 11 ಅಪ್‌ಡೇಟ್: ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್?

Latest53 minutes ago

ಬಿಗಿ ಭದ್ರತೆಯ ನಡುವೆಯೂ ಟ್ರಂಪ್ ಪಾರ್ಟಿಗೆ ಅತಿಥಿಯಂತೆ ಬಂದಿದ್ದ ದಾಳಿಕೋರ! ಸೀಕ್ರೆಟ್ ಸರ್ವಿಸ್ ಕಣ್ಣು ತಪ್ಪಿಸಿದ್ದು ಹೇಗೆ?

ಕರ್ನಾಟಕ2 hours ago

ಹುಬ್ಬಳ್ಳಿಯಲ್ಲಿ ವಾರದಲ್ಲಿ ಮೂರನೇ ಬಾರಿ ವಿಮಾನ ಲ್ಯಾಂಡಿಂಗ್ ಸಮಸ್ಯೆ; ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

Latest2 hours ago

ದೆಹಲಿ ಏರ್‌ಪೋರ್ಟ್‌ನಲ್ಲಿ ಅಪಘಾತ: ಟೇಕಾಫ್ ಆಗುವಾಗ ಸ್ವಿಸ್ ಏರ್ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಆರು ಮಂದಿಗೆ ಗಾಯ!

Latest20 hours ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

Latest20 hours ago

ಟೆಹರಾನ್‌ನಲ್ಲಿ ವಿಮಾನ ಹಾರಾಟ ಪುನರಾರಂಭ: ಪಾಕ್‌ಗೆ ಆಗಮಿಸಿದ ಇರಾನ್‌ ನಿಯೋಗ: ಯುದ್ಧದ ಅಂತ್ಯದ ಮುನ್ಸೂಚನೆಯೇ ?

Latest21 hours ago

ಪರಮಾಣು ಶಸ್ತ್ರಾಸ್ತ್ರಗಳು ಶಾಂತಿಯ ಉದ್ದೇಶಕ್ಕೆ ಬಳಕೆಯಾಗಲಿ: ವಿಶ್ವಸಂಸ್ಥೆ ಕಳಕಳಿ

Latest22 hours ago

ರಾಜಕುಮಾರ್‌ ಸಮಾಧಿಗೆ ಭೂಮಿ: ವಿವಾದ ಹುಟ್ಟು ಹಾಕಿದ ನಟ ಚೇತನ್‌ ವಿರುದ್ಧ ಅಭಿಮಾನಿಗಳ ಆಕ್ರೋಶ; ದೂರು ದಾಖಲು

Latest22 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಅನರ್ಹತೆ ಭೀತಿ; ಶಿಕ್ಷೆ ರದ್ದುಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಶಾಸಕ ವಿನಯ್‌ ಕುಲಕರ್ಣಿ

Latest23 hours ago

ಕಲಬುರಗಿ ಜಿಲ್ಲೆಯ ಮಕ್ಕಳನ್ನು ಅವಮಾನಿಸಬೇಡಿ, ಅವರೂ ಬುದ್ದಿವಂತರು; ಬಿಜೆಪಿ ಮುಖಂಡರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌