Site icon Vistara News

James Anderson: ವಿದಾಯದ ಟೆಸ್ಟ್​ ಪಂದ್ಯದಲ್ಲಿ ವಿಶ್ವ ದಾಖಲೆ ಬರೆದ ಜೇಮ್ಸ್​ ಆ್ಯಂಡರ್ಸನ್

James Anderson

James Anderson: Anderson Creates History; Becomes First Pacer In The World To register astonishing feat

ಲಂಡನ್​: ವಿದಾಯದ ಟೆಸ್ಟ್​ ಪಂದ್ಯವನ್ನಾಡುತ್ತಿರುವ ಇಂಗ್ಲೆಂಡ್​ ತಂಡದ ಹಿರಿಯ ವೇಗಿ ಜೇಮ್ಸ್​ ಆ್ಯಂಡರ್ಸನ್​(James Anderson) ಅವರು ಟೆಸ್ಟ್​ ಕ್ರಿಕೆಟ್​ನಲ್ಲಿ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಟೆಸ್ಟ್​ನಲ್ಲಿ ಅತಿ ಹೆಚ್ಚು ಬಾಲ್​ ಎಸೆದ ವಿಶ್ವದ ಮೊದಲ ವೇಗಿ ಎನಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ ಈ ಸಾಧನೆ ಮಾಡಿದ 4ನೇ ಬೌಲರ್​. ವೆಸ್ಟ್​ ಇಂಡೀಸ್​ ವಿರುದ್ಧ ಸಾಗುತ್ತಿರುವ ಮೊದಲ ಟೆಸ್ಟ್​ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 10 ಓವರ್​ ಪೂರ್ತಿಗೊಳಿಸುವ ಮೂಲಕ ಜೇಮ್ಸ್​ ಆ್ಯಂಡರ್ಸನ್ 40 ಸಾವಿರ ಚೆಂಡೆಸೆದ ದಾಖಲೆ ನಿರ್ಮಿಸಿದರು.

ಜೇಮ್ಸ್​ ಆ್ಯಂಡರ್ಸನ್​ ಸದ್ಯ ಟೆಸ್ಟ್​ನಲ್ಲಿ 40,001* ಎಸೆತಗಳನ್ನು ಎಸೆದಿದ್ದಾರೆ. ಈ ದಾಖಲೆ ಮಾಡಿದ ವಿಶ್ವದ ಮೊದಲ ವೇಗಿ ಎನಿಸಿಕೊಂಡರು. ಅತಿ ಹೆಚ್ಚು ಎಸೆತಗಳನ್ನು ಎಸೆದ ವಿಶ್ಚ ದಾಖಲೆ ಶ್ರೀಲಂಕಾದ ಮಾಜಿ ಆಟಗಾರ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಮುರಳೀಧರನ್ 44039 ಎಸೆತಗಳನ್ನು ಎಸೆದಿದ್ದಾರೆ. ಕನ್ನಡಿಗ ಅನಿಲ್ ಕುಂಬ್ಳೆ 40850 ಎಸೆತಗಳೊಂದಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ.

ಟೆಸ್ಟ್​ನಲ್ಲಿ ಅತಿ ಹೆಚ್ಚು ಎಸೆತ ಎಸೆದ ಬೌಲರ್​ಗಳು

ಆಟಗಾರಎಸೆತ
ಮುತ್ತಯ್ಯ ಮುರಳೀಧರನ್ 44,039
ಅನಿಲ್ ಕುಂಬ್ಳೆ40,850
ಶೇನ್​ ವಾರ್ನ್​40,705
ಜೇಮ್ಸ್​ ಆ್ಯಂಡರ್ಸನ್40001*
ಸ್ಟುವರ್ಟ್​ ಬ್ರಾಡ್​33,698

ಸದ್ಯ ವಿಂಡೀಸ್​ ಈ ಪಂದ್ಯದಲ್ಲಿ ಸೋಲುವ ಭೀತಿಯಲ್ಲಿದೆ. ದ್ವಿತೀಯ ಇನಿಂಗ್ಸ್​ನಲ್ಲಿ 79 ರನ್​ಗೆ 6 ವಿಕೆಟ್​ ಕಳೆದುಕೊಂಡು ಇನ್ನೂ 171 ರನ್​ ಹಿನ್ನಡೆಯಲ್ಲಿದೆ. ಆ್ಯಂಡರ್ಸನ್​ ಒಟ್ಟು ಮೂರು ವಿಕೆಟ್​ ಕಬಳಿಸಿದ್ದಾರೆ. ಈ ಮೂಲಕ ತಮ್ಮ ಟೆಸ್ಟ್​ ವಿಕೆಟ್​ಗಳ ಸಂಖ್ಯೆಯನ್ನು 703ಕ್ಕೆ ಹೆಚ್ಚಿಸಿದ್ದಾರೆ.

ಇದನ್ನೂ ಓದಿ James Anderson: 41ನೇ ವಯಸ್ಸಿನಲ್ಲಿಯೂ 7 ವಿಕೆಟ್​ ಕಿತ್ತ ಜೇಮ್ಸ್ ಆಂಡರ್ಸನ್

ಈ ಪಂದ್ಯ ಮುಕ್ತಾಯಗೊಳ್ಳುತ್ತಿದ್ದಂತೆ ಆ್ಯಂಡರ್ಸನ್​ ತಮ್ಮ 20 ವರ್ಷಗಳ ತಮ್ಮ ಸುದೀರ್ಘ ಕ್ರಿಕೆಟ್‌ ಬದುಕಿಗೆ ತೆರೆ ಎಳೆಯಲಿದ್ದಾರೆ. ಸಾರ್ವಕಾಲಿಕ ಶ್ರೇಷ್ಠ ಬೌಲರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ 41 ವರ್ಷದ ಆಂಡರ್ಸನ್, ಇಂಗ್ಲೆಂಡ್‌ ಪರ ಅತಿ ಹೆಚ್ಚು ವಿಕೆಟ್‌ ಪಡೆದುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 700ಕ್ಕೂ ಅಧಿಕ ವಿಕೆಟ್‌ ಪಡೆದ ಮೂವರು ಬೌಲರ್‌ಗಳ ಪೈಕಿ ಆಂಡರ್ಸನ್ ಕೂಡ ಒಬ್ಬರು. ವೇಗಿಗಳ ಪೈಕಿ ಮೊದಲಿಗ.

3 ತಿಂಗಳ ಹಿಂದೆ ಆ್ಯಂಡರ್ಸನ್​ ಅವರು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ನಿವೃತ್ತಿಯನ್ನು ಘೋಷಿಸಿದ್ದರು. “ಎಲ್ಲರಿಗೂ ನಮಸ್ಕಾರ, ಈ ಬೇಸಿಗೆಯಲ್ಲಿ ಲಾರ್ಡ್ಸ್‌ನಲ್ಲಿ ನಡೆಯುವ ವೆಸ್ಟ್‌ ಇಂಡೀಸ್‌ ವಿರುದ್ಧದ ಮೊದಲ ಟೆಸ್ಟ್ ಪಂದ್ಯ, ನನ್ನ ಕೊನೆಯ ಪಂದ್ಯವಾಗಿರಲಿದೆ. ಬಾಲ್ಯದಿಂದ ಇಷ್ಟಪಟ್ಟಿದ ಆಟವನ್ನು ಆಡಲು, ನನ್ನ ದೇಶವನ್ನು ಪ್ರತಿನಿಧಿಸಿದ 20 ಅದ್ಭುತ ವರ್ಷಗಳಿವು. ಇಂಗ್ಲೆಂಡ್ ತಂಡಕ್ಕಾಗಿ ಆಡುವುದನ್ನು ನಾನು ಮಿಸ್‌ ಮಾಡಿಕೊಳ್ಳುತ್ತೇನೆ’ ಎಂದು ಬರೆದುಕೊಂಡಿದ್ದರು. 

2003ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಆ್ಯಂಡರ್ಸನ್‌, ಈವರೆಗೂ 188 ಪಂದ್ಯಗಳಲ್ಲಿ 703 ವಿಕೆಟ್‌ ಗಳಿಸಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ ಹಾಗೂ ಆಸ್ಟ್ರೇಲಿಯಾದ ಶೇನ್‌ ವಾರ್ನ್‌ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದವರ ಸ್ಥಾನದಲ್ಲಿ ಆ್ಯಂಡರ್ಸನ್‌ ಇದ್ದಾರೆ. 194 ಏಕದಿನ ಪಂದ್ಯಗಳನ್ನು ಆಡಿರುವ ಅವರು, 269 ವಿಕೆಟ್‌ಗಳನ್ನು ಪಡೆದಿದ್ದಾರೆ.

Exit mobile version