James Anderson: ವಿಶ್ವ ದಾಖಲೆಯ ಸನಿಹ ಇಂಗ್ಲೆಂಡ್​ ವೇಗಿ ಜೇಮ್ಸ್ ಆಂಡರ್ಸನ್ - Vistara News

ಕ್ರೀಡೆ

James Anderson: ವಿಶ್ವ ದಾಖಲೆಯ ಸನಿಹ ಇಂಗ್ಲೆಂಡ್​ ವೇಗಿ ಜೇಮ್ಸ್ ಆಂಡರ್ಸನ್

ಮೂರನೇ ಟೆಸ್ಟ್(James Anderson,India vs England 3rd Test)​ ಪಂದ್ಯದಲ್ಲಿ ಇಂಗ್ಲೆಂಡ್​ನ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್(James Anderson) ಐದು ವಿಕೆಟ್ ಪಡೆದರೆ 700 ವಿಕೆಟ್‌ಗಳ ಸರದಾರನಾಗಲಿದ್ದಾರೆ.

VISTARANEWS.COM


on

James Anderson
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜ್​ಕೋಟ್​: ಭಾರತ ಎದುರಿನ ಮೂರನೇ ಟೆಸ್ಟ್(James Anderson,India vs England 3rd Test)​ ಪಂದ್ಯದಲ್ಲಿ ಇಂಗ್ಲೆಂಡ್​ನ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್(James Anderson) ಐದು ವಿಕೆಟ್ ಪಡೆದರೆ ವಿಶ್ವ ದಾಖಲೆಯೊಂದನ್ನು ಬರೆಯಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳ ಸರದಾರನಾಗಲಿದ್ದಾರೆ. ಜತೆಗೆ ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್​ ಎನಿಸಿಕೊಳ್ಳಲಿದ್ದಾರೆ.

41 ವರ್ಷದ ಜೇಮ್ಸ್ ಆಂಡರ್ಸನ್ ಇದುವರೆಗೆ 184 ಟೆಸ್ಟ್ ಪಂದ್ಯಗಳಲ್ಲಿ 695* ವಿಕೆಟ್‌ಗಳನ್ನು ಪಡೆದಿದ್ದಾರೆ. ಇದೀಗ ಮೂರನೇ ಪಂದ್ಯದಲ್ಲಿ ಅವರು 5 ವಿಕೆಟ್​ ಕಡೆವಿದರೆ ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್​ಗಳ ಮೈಲುಗಲ್ಲು ತಲುಪಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬೌಲರ್ ಆಗಲಿದ್ದಾರೆ. ಶ್ರೀಲಂಕಾದ ಮಾಜಿ ಆಟಗಾರ ಮುತ್ತಯ್ಯ ಮುರಳೀಧರನ್ ಮತ್ತು ಆಸ್ಟ್ರೇಲಿಯಾದ ಶೇನ್ ವಾರ್ನ್ ಈ ಸಾಧಕರ ಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನ ಪಡೆದಿದ್ದಾರೆ. ಪ್ರಸಕ್ತ ಕ್ರಿಕೆಟ್​ ಆಡುತ್ತಿರುವ ಆಟಗಾರರ ಪೈಕಿ ಟೆಸ್ಟ್​ನಲ್ಲಿ ಅತಿ ಹೆಚ್ಚು ವಿಕೆಟ್​ ಕಿತ್ತ ದಾಖಲೆ ಕೂಡ ಜೇಮ್ಸ್ ಆಂಡರ್ಸನ್ ಹೆಸರಿನಲ್ಲಿದೆ. 512* ವಿಕೆಟ್​ ಪಡೆದಿರುವ ಆಸ್ಟ್ರೇಲಿಯಾದ ಸ್ಪಿನ್ನರ್​ ನಥಾನ್​ ಲಿಯೋನ್​ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅಶ್ವಿನ್​ಗೆ ಮೂರನೇ ಸ್ಥಾನ.

2002ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯವನ್ನಾಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಜೇಮ್ಸ್​ ಆ್ಯಂಡರ್ಸನ್​ ಅವರು ಇಂಗ್ಲೆಂಡ್​ ಕಂಡ ಶ್ರೇಷ್ಠ ಬೌಲರ್​ಗಳಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. 2003ರಲ್ಲಿ ಅವರು ಟೆಸ್ಟ್​ ಕ್ರಿಕೆಟ್​ಗೆ ಅಡಿ ಇರಿಸಿದ್ದರು. ಇದುವರೆಗೆ ಇಂಗ್ಲೆಂಡ್​ ಪರ ಅವರು 184 ಟೆಸ್ಟ್​ ಪಂದ್ಯ ಆಡಿ 695* ವಿಕೆಟ್​ ಕಿತ್ತಿದ್ದಾರೆ. 32 ಬಾರಿ 5 ವಿಕೆಟ್​ ಗೊಂಚಲು ಪಡೆದ ಸಾಧನೆ ಮಾಡಿದ್ದಾರೆ. ಮೂರು ಸಲ 10 ವಿಕೆಟ್​ ಪಡೆದಿದ್ದಾರೆ. 194 ಏಕದಿನ ಪಂದ್ಯ ಆಡಿದ್ದರೂ ಕೂಡ ಆ್ಯಂಡರ್ಸನ್ ಯಶಸ್ಸು ಸಾಧಿಸಿದ್ದು ಟೆಸ್ಟ್​ ಕ್ರಿಕೆಟ್​ನಲ್ಲಿ.

ಇದನ್ನೂ ಓದಿ IND vs ENG: ಇಂಗ್ಲೆಂಡ್​ ವಿರುದ್ಧದ ಮೂರು ಟೆಸ್ಟ್​ಗೆ ಇಂದು ಭಾರತ ತಂಡ ಪ್ರಕಟ

ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್​ ಪಡೆದ ಸಾಧಕರು

ಆಟಗಾರದೇಶವಿಕೆಟ್​
ಮುತ್ತಯ್ಯ ಮುರಳೀಧರನ್ಶ್ರೀಲಂಕಾ800
ಶೇನ್ ವಾರ್ನ್ ಆಸ್ಟ್ರೇಲಿಯಾ708
ಜೇಮ್ಸ್ ಆಂಡರ್ಸನ್ ಇಂಗ್ಲೆಂಡ್​695*
ಅನಿಲ್ ಕುಂಬ್ಳೆಭಾರತ619
ಸ್ಟುವರ್ಟ್ ಬ್ರಾಡ್ಇಂಗ್ಲೆಂಡ್​604
ಗ್ಲೆನ್ ಮೆಕ್‌ಗ್ರಾತ್ಆಸ್ಟ್ರೇಲಿಯಾ563
ಕರ್ಟ್ನಿ ವಾಲ್ಷ್ ವೆಸ್ಟ್​ ಇಂಡೀಸ್​519
ನಾಥನ್ ಲಿಯಾನ್ಆಸ್ಟ್ರೇಲಿಯಾ512*
ರವಿಚಂದ್ರನ್ ಅಶ್ವಿನ್ಭಾರತ499*
ಡೇಲ್ ಸ್ಟೈನ್ದಕ್ಷಿಣ ಆಫ್ರಿಕಾ439

ದಾಖಲೆಯ ಸನಿಹ ಆರ್​.ಅಶ್ವಿನ್​


ಮೂರನೇ ಟೆಸ್ಟ್​ ಪಂದ್ಯದಲ್ಲಿ ಟೀಮ್​ ಇಂಡಿಯಾದ ಅನುಭವಿ ಹಾಗೂ ಹಿರಿಯ ಸ್ಪಿನ್ನರ್​ ಆರ್​. ಅಶ್ವಿನ್(Ravichandran Ashwin)​ ಅವರು ಕೇವಲ ಒಂದು ವಿಕೆಟ್​ ಕಿತ್ತರೆ 500 ಟೆಸ್ಟ್ ವಿಕೆಟ್​ ಕಿತ್ತ ಸಾಧಕರಾಗಲಿದ್ದಾರೆ. ಈ ಸಾಧನೆ ಮಾಡಿದ ಈ ಸಾಧನೆ ಮಾಡಿದ 2ನೇ ಭಾರತೀಯ ಹಾಗೂ ವಿಶ್ವದ 9ನೇ ಬೌಲರ್​ ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ.

37 ವರ್ಷದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇದುವರೆಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ 97 ಟೆಸ್ಟ್ ಪಂದ್ಯಗಳನ್ನು ಆಡಿ 499 ವಿಕೆಟ್​ಗಳನ್ನು ಉರುಳಿಸಿದ್ದಾರೆ. 34 ಬಾರಿ ಇನಿಂಗ್ಸ್​ ಒಂದರಲ್ಲಿ 5 ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ. ದ್ವಿತೀಯ ಟೆಸ್ಟ್​ ಪಂದ್ಯದಲ್ಲಿಯೇ ಅಶ್ವಿನ್​ಗೆ 500 ವಿಕೆಟ್​ ಸಾಧನೆ ಮಾಡಬಹುದಿತ್ತು. ಆದರೆ ಅವರು ಮೊದಲ ಇನಿಂಗ್ಸ್​ನಲ್ಲಿ ವಿಕೆಟ್​ ಕೀಳುವಲ್ಲಿ ವಿಫಲರಾಗಿದ್ದರು. ದ್ವಿತೀಯ ಇನಿಂಗ್ಸ್​ನಲ್ಲಿ 3 ವಿಕೆಟ್​ ಕಡೆವಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Team India: ನ್ಯೂಜಿಲೆಂಡ್​​ನ ಮಾಜಿ ನಾಯಕ ಸ್ಟೀಫನ್ ಫ್ಲೆಮಿಂಗ್ 2009 ರಿಂದ ಸಿಎಸ್​​ಕೆ ಕೋಚ್ ಹುದ್ದೆಯನ್ನು ಅಲಂಕರಿಸಿದ್ದಾರೆ ಮತ್ತು ಅವರ ಮಾರ್ಗದರ್ಶನದಲ್ಲಿ ಫ್ರಾಂಚೈಸಿ ಐದು ಐಪಿಎಲ್ ಟ್ರೋಫಿಗಳನ್ನು ಗೆದ್ದಿದೆ. ರಾಹುಲ್ ದ್ರಾವಿಡ್ ಅವರ ಒಪ್ಪಂದ ಮುಗಿದ ನಂತರ ಸ್ಟೀಫನ್ ಫ್ಲೆಮಿಂಗ್ ಸೂಕ್ತ ಅಭ್ಯರ್ಥಿ ಎಂದು ಕೆಲವು ಉನ್ನತ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

VISTARANEWS.COM


on

Team India
Koo

ಬೆಂಗಳೂರು: ಭಾರತ ಕ್ರಿಕೆಟ್ ತಂಡದ (Team India ) ಕೋಚ್ ಆಗಿ ರಾಹುಲ್ ದ್ರಾವಿಡ್ (Rahul Dravid) ಅವರ ಅಧಿಕಾರಾವಧಿ ಜೂನ್​​ನಲ್ಲಿ ಕೊನೆಗೊಳ್ಳಲಿದ್ದು, ಅವರ ಸ್ಥಾನವನ್ನು ತುಂಬಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈಗಾಗಲೇ ಭರ್ಜರಿ ಹುಡುಕಾಟ ಆರಂಭಿಸಿದೆ. ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಮ್ ಇಂಡಿಯಾ ಜೂನ್​ನಲ್ಲಿ ಟಿ 20 ವಿಶ್ವಕಪ್ 2024 ಆಡಲಿದ್ದು, ಪಂದ್ಯಾವಳಿಯ ನಂತರ ಹೊಸ ತರಬೇತುದಾರರನ್ನು ಹೊಂದುವ ಎಲ್ಲಾ ಸಂಭವಗಳಿವೆ. ಈ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ (Stephen Fleming) ಅವರು ರಾಹುಲ್ ದ್ರಾವಿಡ್ ಅವರ ನಂತರ ಭಾರತೀಯ ಕ್ರಿಕೆಟ್ ತಂಡದ ಕೋಚ್ ಆಗಬಹುದು ಎಂದು ಇಂಡಿಯನ್ ಎಕ್ಸ್​ಪ್ರೆಸ್​​ ವರದಿ ಮಾಡಿದೆ.

ನ್ಯೂಜಿಲೆಂಡ್​​ನ ಮಾಜಿ ನಾಯಕ ಸ್ಟೀಫನ್ ಫ್ಲೆಮಿಂಗ್ 2009 ರಿಂದ ಸಿಎಸ್​​ಕೆ ಕೋಚ್ ಹುದ್ದೆಯನ್ನು ಅಲಂಕರಿಸಿದ್ದಾರೆ ಮತ್ತು ಅವರ ಮಾರ್ಗದರ್ಶನದಲ್ಲಿ ಫ್ರಾಂಚೈಸಿ ಐದು ಐಪಿಎಲ್ ಟ್ರೋಫಿಗಳನ್ನು ಗೆದ್ದಿದೆ. ರಾಹುಲ್ ದ್ರಾವಿಡ್ ಅವರ ಒಪ್ಪಂದ ಮುಗಿದ ನಂತರ ಸ್ಟೀಫನ್ ಫ್ಲೆಮಿಂಗ್ ಸೂಕ್ತ ಅಭ್ಯರ್ಥಿ ಎಂದು ಕೆಲವು ಉನ್ನತ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಸ್ಟೀಫನ್ ಫ್ಲೆಮಿಂಗ್​ ಆಯ್ಕೆಯಾಗಿರುತ್ತದೆ. ಭಾರತೀಯ ಕ್ರಿಕೆಟ್ ತಂಡಕ್ಕೆ ತರಬೇತಿ ನೀಡುವ ತರಬೇತುದಾರರು ತೀವ್ರವಾದ ಕೆಲಸದ ಹೊರೆಯನ್ನು ಅನುಭವಿಸಬೇಕಾಗುತ್ತದೆ. ರಾಷ್ಟ್ರೀಯ ತಂಡಗಳ ಪ್ರವಾಸದ ನಡುವೆ ಖಾಸಗಿ ಸಮಯ ಮೀಸಲಿಡುವ ಸವಾಲು ಎದುರಾಗುತ್ತವೆ. ಅವರು ಈ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧರಿದ್ದಾರೆಯೇ ಎಂದು ನೋಡಬೇಕಾಗಿದೆ.

ಮೂರು ವರ್ಷಗಳ ಅವಧಿಗೆ ಕೋಚ್​

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾತನಾಡಿ, ಬಿಸಿಸಿಐ ಕನಿಷ್ಠ ಮೂರು ವರ್ಷಗಳ ದೀರ್ಘಾವಧಿಯ ಒಪ್ಪಂದದೊಂದಿಗೆ ಹೊಸ ತರಬೇತುದಾರನನ್ನು ಹುಡುಕುತ್ತಿದೆ ಎಂದು ಹೇಳಿದ್ದಾರೆ. ವಿಭಜಿತ ಕೋಚಿಂಗ್ ಕಲ್ಪನೆಗೆ ಮಂಡಳಿಯು ಮುಕ್ತವಾಗಿದ್ದರೂ ಅವರು ವೈಯಕ್ತಿಕವಾಗಿ ಆಟದ ಎಲ್ಲಾ ಮೂರು ಸ್ವರೂಪಗಳಿಗೆ ಒಬ್ಬ ಮುಖ್ಯ ತರಬೇತುದಾರನನ್ನು ಬಯಸುತ್ತಾರೆ.

ಇದನ್ನೂ ಓದಿ: KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

ಭಾರತೀಯ ಕ್ರಿಕೆಟ್​​ನಲ್ಲಿ ವಿಭಿನ್ನ ಸ್ವರೂಪಗಳಿಗೆ ವಿಭಿನ್ನ ತರಬೇತುದಾರರ ಪೂರ್ವನಿದರ್ಶನವಿಲ್ಲ. ಇದಲ್ಲದೆ, ನಾವು ಎಲ್ಲಾ ಸ್ವರೂಪದ ಆಟಗಾರರನ್ನು ಹೊಂದಿರುವ ಹಲವಾರು ಆಟಗಾರರನ್ನು ಹೊಂದಿದ್ದೇವೆ. ಅಂತಿಮವಾಗಿ, ಇದು ಕ್ರಿಕೆಟ್ ಸಲಹಾ ಸಮಿತಿಯ (ಸಿಎಸಿ) ನಿರ್ಧಾರವಾಗಿದೆ. ಅವರು ಏನು ನಿರ್ಧರಿಸುತ್ತಾರೋ ಅದನ್ನು ನಾನು ಕಾರ್ಯಗತಗೊಳಿಸಬೇಕಾಗಿದೆ” ಎಂದು ಜಯ್ ಶಾ ಹೇಳಿದ್ದರು.

2014 ರಲ್ಲಿ ಡಂಕನ್ ಫ್ಲೆಚರ್ ನಿರ್ಗಮಿಸಿದ ನಂತರ ಭಾರತಕ್ಕೆ ವಿದೇಶಿ ಕೋಚ್ ನೇಮಿಸಿಲ್ಲ. ವರದಿಗಳ ಪ್ರಕಾರ, ಈ ಹುದ್ದೆಗೆ ವಿದೇಶಿ ಅಭ್ಯರ್ಥಿಯನ್ನು ಪರಿಗಣಿಸಲು ಬಿಸಿಸಿಐಗೆ ಯಾವುದೇ ಸಮಸ್ಯೆ ಇಲ್ಲ.

ಸ್ಟೀಫನ್ ಫ್ಲೆಮಿಂಗ್ ಏಕೆ?

ಸ್ಟೀಫನ್ ಫ್ಲೆಮಿಂಗ್ ಐಪಿಎಲ್​​ನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ತರಬೇತುದಾರರಾಗಿದ್ದಾರೆ ಮತ್ತು ಆಟಗಾರರಿಂದ ಅತ್ಯುತ್ತಮವಾದುದನ್ನು ಹೊರತೆಗೆಯುವಲ್ಲಿ ಹೆಸರುವಾಸಿಯಾಗಿದ್ದಾರೆ. ಆಟದ ಬಗ್ಗೆ ಅವರ ತಿಳುವಳಿಕೆ ಮತ್ತು ಔಟ್-ಆಫ್-ಬಾಕ್ಸ್ ವಿಧಾನಗಳು ಆಟಗಾರರಿಗೆ ಆಟವನ್ನು ಹೊಸ ದೃಷ್ಟಿಕೋನದಿಂದ ಸಮೀಪಿಸಲು ಸಹಾಯ ಮಾಡುತ್ತದೆ. ಭಾರತದ ಆಂತರಿಕ ಕ್ರಿಕೆಟ್ ವಲಯವು ಸ್ಟೀಫನ್ ಫ್ಲೆಮಿಂಗ್ ಅವರನ್ನು ಮೆಚ್ಚುತ್ತದೆ. ಅವರು ಭಾರತದ ಭವಿಷ್ಯದ ನಾಯಕರನ್ನು ಬೆಳೆಸಿದ ನಾಯಕತ್ವ ಕಾರ್ಯಕ್ರಮಕ್ಕೆ ಹೆಸರುವಾಸಿಯಾಗಿದ್ದಾರೆ.

Continue Reading

ಕ್ರೀಡೆ

KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

KL Rahul: 9ನೇ ಓವರ್ ನ 2ನೇ ಎಸೆತದಲ್ಲಿ ರವಿ ಬಿಷ್ಣೋಯ್ ಅವರು ಚೆಂಡನ್ನು ಎಸೆದರು. ಶಾಯ್ ಹೋಪ್ ಅದಕ್ಕೆ ಭರ್ಜರಿಯಾಗಿ ಹೊಡೆದರು. ಕವರ್ ಪ್ರದೇಶದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಕೆಎಲ್ ರಾಹುಲ್ ಚೆಂಡನ್ನು ಹಿಡಿಯಲು ಯತ್ನಿಸಿದರು. ಅದರೆ, ಅದರು ಕೈಯಿಂದ ಜಾರಿತು. ಬಳಿಕ ಅವರು ನೆಗೆದು ಆ ಚೆಂಡನ್ನು ಹಿಡಿದರು. ಅದ್ಭುತ ಡೈವ್ ಮಾಡಿದ ನಾಯಕನ ಪ್ರಯತ್ನಗಳನ್ನು ಶ್ಲಾಘಿಸಿದ ಸಂಜೀವ್ ಗೋಯೆಂಕಾ ಚಪ್ಪಾಳೆ ತಟ್ಟಿದರು.

VISTARANEWS.COM


on

KL Rahul
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರಲ್ಲಿ (IPL 2024) ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ನಾಯಕ ಕೆಎಲ್ ರಾಹುಲ್ (KL Rahul) ಮೈದಾನದಲ್ಲಿ ಭರ್ಜರಿ ಫೀಲ್ಡಿಂಗ್ ಮಾಡಿದರು. ಈ ವೇಳೆ ಲಕ್ನೊ ಸೂಪರ್ ಜೈಂಟ್ಸ್ ಮಾಲೀಕರಾದ ಸಂಜೀವವ ಗೋಯೆಂಕಾ ಅವರು ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ಚಪ್ಪಾಳೆ ತಟ್ಟಿದರು. ಈ ಮೂಲಕ ಅವರಿಬ್ಬರ ನಡುವಿನ ಜಗಳ ಅಂತ್ಯಗೊಂಡಿತು.

ಪಂದ್ಯದಲ್ಲಿ ಡೆಲ್ಲಿ ತಂಡ ಜೇಕ್ ಫ್ರೇಸರ್-ಮೆಗ್​ಕುರ್ಕ್​ ಅವರನ್ನು ಬೇಗನೆ ಕಳೆದುಕೊಂಡರೂ ನಂತರದಲ್ಲಿ ಅಭಿಷೇಕ್ ಪೊರೆಲ್ ಮತ್ತು ಶಾಯ್ ಹೋಪ್ ಜೋಡಿ ಲಕ್ನೋ ಸೂಪರ್ ಜೈಂಟ್ಸ್ ಬೌಲರ್​ಗಳ ಮೇಳೆ ಅಬ್ಬರಿಸಿದರು. ವಿಶೇಷವಾಗಿ ಶಾಯ್ ಹೋಪ್ ದೃಢವಾಗಿ ಕಾಣುತ್ತಿದ್ದರು. ಅವರು ದೊಡ್ಡ ಇನ್ನಿಂಗ್ಸ್ ಗೆ ಸಜ್ಜಾಗುತ್ತಿದ್ದರು. ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆ.ಎಲ್.ರಾಹುಲ್ ಅವರು ಅವರ ವಿಕೆಟ್ ಪಡೆಯಲು ವಿಶೇಷ ಯೋಜನೆ ರೂಪಿಸಿದರು. ಅಲ್ಲದೇ ತಾವೇ ಉತ್ತಮ ಕ್ಯಾಚ್​ ಹಿಡಿಯುವ ಮೂಲಕ ಅವರನ್ನು ಪೆವಿಲಿಯನ್​ಗೆ ಅಟ್ಟಿದರು.

9ನೇ ಓವರ್ ನ 2ನೇ ಎಸೆತದಲ್ಲಿ ರವಿ ಬಿಷ್ಣೋಯ್ ಅವರು ಚೆಂಡನ್ನು ಎಸೆದರು. ಶಾಯ್ ಹೋಪ್ ಅದಕ್ಕೆ ಭರ್ಜರಿಯಾಗಿ ಹೊಡೆದರು. ಕವರ್ ಪ್ರದೇಶದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಕೆಎಲ್ ರಾಹುಲ್ ಚೆಂಡನ್ನು ಹಿಡಿಯಲು ಯತ್ನಿಸಿದರು. ಅದರೆ, ಅದರು ಕೈಯಿಂದ ಜಾರಿತು. ಬಳಿಕ ಅವರು ನೆಗೆದು ಆ ಚೆಂಡನ್ನು ಹಿಡಿದರು. ಅದ್ಭುತ ಡೈವ್ ಮಾಡಿದ ನಾಯಕನ ಪ್ರಯತ್ನಗಳನ್ನು ಶ್ಲಾಘಿಸಿದ ಸಂಜೀವ್ ಗೋಯೆಂಕಾ ಚಪ್ಪಾಳೆ ತಟ್ಟಿದರು.

ರಾಹುಲ್ ಆರ್​ಸಿಬಿಗೆ ಬರಲ್ಲ

ಲಕ್ನೋ: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ 10 ವಿಕೆಟ್​ಗಳ ಹೀನಾಯ ಸೋಲು ಕಂಡ ಬೇಸರದಲ್ಲಿ ಸಿಟ್ಟಿಗೆದ್ದ ಫ್ರಾಂಚೈಸಿ ಮಾಲಿಕ ಸಂಜೀವ್ ಗೋಯೆಂಕಾ(Sanjiv Goenka) ಮೈದಾನದಲ್ಲೇ ನಾಯಕ ಕೆ.ಎಲ್​ ರಾಹುಲ್(KL Rahul)​ ಜತೆ ಜಗಳವಾಡಿದ್ದರು. ಈ ಘಟನೆ ಬಳಿಕ ಅನೇಕ ಮಾಜಿ ಆಟಗಾರರು ಗೋಯೆಂಕಾ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಗೆ ಸಂಬಂಧಿಸಿ ರಾಹುಲ್​ ಲಕ್ನೋ ತಂಡ ತೊರೆಯಲಿದ್ದಾರೆ, ಆರ್​ಸಿಬಿ ಸೇರಲಿದ್ದಾರೆ, ತಂಡದ ಆಟಗಾರರೊಂದಿಗೆ ಪ್ರಯಾಣಿಸದೆ ಪ್ರತ್ಯೇಕವಾಗಿ ಪ್ರಯಾಣಿಸಿದ್ದಾರೆ ಹೀಗೆ ಹಲವು ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಈ ಎಲ್ಲ ಊಹಾಪೋಹಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ.

ಸಂಜೀವ್ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಡಿನ್ನರ್​ಗೆ ಕರೆದು ತಬ್ಬಿಕೊಂಡಿರುವ ಫೋಟೊ ಒಂದು ವೈರಲ್​ ಆಗಿದೆ. ಈ ಮೂಲಕ ನಮ್ಮ ಮಧ್ಯೆ ಯಾವುದೇ ಮುನಿಸು ಇಲ್ಲ ಎನ್ನುವ ಸಂದೇಶ ನೀಡಿದಂತಿದೆ. ಸದ್ಯ ವೈರಲ್​ ಆಗುತ್ತಿರುವ ಫೋಟೊದಲ್ಲಿ ರಾಹುಲ್​ ಅವರನ್ನು ಗೋಯೆಂಕಾ ತಬ್ಬಿಕೊಂಡಿರಿವಂತೆ ಕಾಣುತ್ತಿದೆ. ರಾಹುಲ್​ ಕೂಡ ನಗುಮುಗದಿಂದಲೇ ಕಾಣಿಸಿಕೊಂಡಿದ್ದಾರೆ. ಆದರೆ, ಗೋಯೆಂಕಾ ಅವರ ಮುಖ ಮಾತ್ರ ಸ್ಪಷ್ಟವಾಗಿ ಗೋಚರಿಸಿಲ್ಲ. ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿದ್ದು “ಚಂಡಮಾರುತದ ನಂತರ ಶಾಂತ” ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ರಾಹುಲ್​ ಮತ್ತು ಗೋಯೆಂಕಾ ನಡುವಿನ ಮುನಿಸು ಶಮನವಾದಂತೆ ಕಾಣುತ್ತಿದೆ.

ಇದನ್ನೂ ಓದಿ: IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

ಕಳೆದ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಮಾತ್ರವಲ್ಲದೆ, ಬೌಲಿಂಗ್​ನಲ್ಲಿಯೂ ಲಕ್ನೋ ಅತ್ಯಂತ ಕಳಪೆ ಪ್ರದರ್ಶನ ತೋರಿತ್ತು. ಕನಿಷ್ಠ 1 ವಿಕೆಟ್​ ಕೂಡ ಕೀಳಲಾಗದ ಘೋರ ವೈಫಲ್ಯ ಕಂಡಿತ್ತು. ಈ ಹೀನಾಯ ಸೋಲಿನಿಂದ ಸಿಟ್ಟಿಗೆದ್ದ ಸಂಜೀವ್ ಗೋಯೆಂಕಾ ನಾಯಕ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವಂತೆ ಕಂಡುಬಂದಿತ್ತು. ಇವರಿಬ್ಬರ ನಡುವಣ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲವಾಗಿದ್ದರೂ, ಈ ದೃಶ್ಯ ನೋಡುವಾಗ ಇದು ಅಸಮಾಧಾನದ ನುಡಿ ಎಂದು ತಿಳಿದು ಬಂದಿತ್ತು.

ಗೋಯೆಂಕಾ ಮಾತಿಗೆ ರಾಹುಲ್ ಪ್ರತಿಕ್ರಿಯೆ ನೀಡಲು ಮುಂದಾದರೂ ಕೂಡ ಇದನ್ನು ಗೋಯೆಂಕಾ ಒಪ್ಪಿಕೊಳ್ಳದೆ ಏನೋ ಬೈಯುತ್ತಿರುವಂತೆ ದೃಶ್ಯದಲ್ಲಿ ಕಂಡುಬಂದಿತ್ತು. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುಗಿತ್ತು. ಈ ಘಟನೆಯಿಂದ ರಾಹುಲ್​ ನೊಂದಿದ್ದಾರೆ ಎನ್ನಲಾಗಿತ್ತು. ಪಂದ್ಯದಲ್ಲಿ ಟಾಸ್​ ಗೆದ್ದು ಆಮೆ ಗತಿಯ ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 165 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ ಯಾವುದೇ ವಿಕೆಟ್​ ನಷ್ಟವಿಲ್ಲದೆ ಕೇವಲ 9.4 ಓವರ್​ಗಳಲ್ಲಿ 167 ರನ್​ ಬಾರಿಸಿ ಭರ್ಜರಿ 10 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದ ಹೆಡ್ ಮತ್ತು ಅಭಿಷೇಕ್​​ ಸ್ಟೇಡಿಯಂನ ಮೂಲೆ ಮೂಲೆಗೂ ಚೆಂಡನ್ನು ಬಾರಿಸಿದ್ದರು.

Continue Reading

ಪ್ರಮುಖ ಸುದ್ದಿ

IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

IPL 2024: ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರು ಇದೀಗ ಆಲ್​ರೌಂಡರ್​ ಪಾಂಡ್ಯ ಬೆಂಬಲಕ್ಕೆ ನಿಂತಿದ್ದಾರೆ. ಅವರು ಎಬಿ ಡಿವಿಲಿಯರ್ಸ್ ಮತ್ತು ಪೀಟರ್ಸನ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರಿಬ್ಬರ ಹೇಳಿಕೆಗಳು ಸರಿಯಲ್ಲ ಎಂದು ಹೇಳಿದ್ದಾರೆ. ಆ ರೀತಿ ಹೇಳುವುದಕ್ಕೆ ನಾಯಕರಾಗಿ ಅವರಿಬ್ಬರ ಟ್ರ್ಯಾಕ್ ರೆಕಾರ್ಡ್ ಎಷ್ಟಿದೆ ಎಂಬುದನ್ನು ಪ್ರಶ್ನಿಸಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024) ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ (Hardik Pandya) ವಿಫಲಗೊಂಡಿದ್ದಾರೆ. ಪ್ಲೇ ಆಫ್ ರೇಸ್ ನಿಂದ ಹೊರಗುಳಿದ ಮೊದಲ ತಂಡ ಎಂಬ ಕುಖ್ಯಾತಿಗೆ ಮುಂಬಯಿ ತಂಡ ಪಾತ್ರವಾಗಿದೆ. ಹಾರ್ದಿಕ್ ಪಾಂಡ್ಯ ನಾಯಕನಾ ಬಳಿಕದಿಂದ ಅವರು ಸಾಕಷ್ಟು ಅವಮಾನಗಳನ್ನು ಎದುರಿಸಿದ್ದಾರೆ. ಅಭಿಮಾನಿಗಳ ಕೀಟಲೆಗಳ ಜತೆಗೆ ಅನೇಕ ಹಿರಿಯ ಆಟಗಾರರ ಮೂದಲಿಕೆಗಳನ್ನೂ ಕೇಳುವಂತಾಗಿದೆ. ಇಂಗ್ಲೆಂಡ್​ನ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಮತ್ತು ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಹಾರ್ದಿಕ್ ನಾಯಕತ್ವದ ಶೈಲಿಯನ್ನು ಸತತವಾಗಿ ಪ್ರಶ್ನಿಸಿದ್ದರು. ತಮ್ಮ ತಂಡದ ವೈಫಲ್ಯಕ್ಕೆ ಹಾರ್ದಿಕ್ ಕಾರಣ ಎಂದು ಇಬ್ಬರೂ ಷರಾ ಬರೆದಿದ್ದರು.

ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರು ಇದೀಗ ಆಲ್​ರೌಂಡರ್​ ಪಾಂಡ್ಯ ಬೆಂಬಲಕ್ಕೆ ನಿಂತಿದ್ದಾರೆ. ಅವರು ಎಬಿ ಡಿವಿಲಿಯರ್ಸ್ ಮತ್ತು ಪೀಟರ್ಸನ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರಿಬ್ಬರ ಹೇಳಿಕೆಗಳು ಸರಿಯಲ್ಲ ಎಂದು ಹೇಳಿದ್ದಾರೆ. ಆ ರೀತಿ ಹೇಳುವುದಕ್ಕೆ ನಾಯಕರಾಗಿ ಅವರಿಬ್ಬರ ಟ್ರ್ಯಾಕ್ ರೆಕಾರ್ಡ್ ಎಷ್ಟಿದೆ ಎಂಬುದನ್ನು ಪ್ರಶ್ನಿಸಿದ್ದಾರೆ.

ಈ ಇಬ್ಬರು ನಾಯಕರಾಗಿದ್ದ ವೇಳೆ ಅವರು ಉತ್ತಮ ಪ್ರದರ್ಶನ ನೀಡಿರಲಿಲ್ಲ. ಕೆವಿನ್ ಪೀಟರ್ಸನ್ ಮತ್ತು ಎಬಿ ಡಿವಿಲಿಯರ್ಸ್ ನಾಯಕರಾಗಿ ಗಮನಾರ್ಹವಾಗಿ ಏನನ್ನೂ ಸಾಧಿಸಿಲ್ಲ. ನೀವು ಅವರ ದಾಖಲೆಗಳನ್ನು ಮೊದಲು ನೋಡಿಕೊಳ್ಳಿ. ಅದು ಚೆನ್ನಾಗಿದ್ದರೆ ಉಳಿದವರ ದಾಖಲೆಗಳನ್ನು ವಿಮರ್ಶೆ ಮಾಡುವುದು ಸೂಕ್ತ ಎಂದು ಗಂಭೀರ್ ಟೀಕಿಸಿದ್ದಾರೆ.

ಇದನ್ನೂ ಓದಿ: Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

ಐಪಿಎಲ್​​ನಲ್ಲಿ ಎಬಿ ಡಿವಿಲಿಯರ್ಸ್ ಎಂದಿಗೂ ನಾಯಕತ್ವ ವಹಿಸಿಲ್ಲ. ಎಬಿಡಿ ಸಾಧನೆ ಎಂದರೆ ಸ್ವಂತ ಸ್ಕೋರ್​ಗಳು. ಅದನ್ನು ಹೊರತುಪಡಿಸಿ ಅವರು ಏನನ್ನೂ ಸಾಧಿಸಿದ್ದಾರೆ ಎಂದು ನಾನು ಭಾವಿಸುವುದಿಲ್ಲ ಎಂದು ಗಂಭೀರ್​ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ ಐಪಿಎಲ್ ವಿಜೇತ ನಾಯಕ. ಆದ್ದರಿಂದ ನೀವು ಕಿತ್ತಳೆಯನ್ನು ಕಿತ್ತಳೆಗೆ ಹೋಲಿಸಬೇಕು ಮತ್ತು ಕಿತ್ತಳೆಯನ್ನು ಸೇಬುಗಳಿಗೆ ಹೋಲಿಸಬಾರದು ಎಂದು ಗೌತಮ್ ಗಂಭೀರ್ ಹೇಳಿಕೆ ನೀಡಿದ್ದಾರೆ.

Continue Reading

ಕ್ರೀಡೆ

Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

Team India New Head Coach: ಕ್ರಿಕೆಟ್ ಆಸ್ಟ್ರೇಲಿಯಾ ಕಂಡ ಯಶಸ್ವಿ ಕೋಚ್ ಗಳಲ್ಲಿ ಒಬ್ಬರಾದ ಜಸ್ಟಿನ್ ಲ್ಯಾಂಗರ್ ತಾವಾಗಿಯೇ ಕೋಚಿಂಗ್​ ಬಗ್ಗೆ ಆಸಕ್ತಿ ತೋರಿರುವ ಕಾರಣ ಬಿಸಿಸಿಐ ಅವರಿಗೆ ಮಣೆ ಹಾಕಿದರೂ ಅಚ್ಚರಿಯಿಲ್ಲ. ಲ್ಯಾಂಗರ್ ಮಾರ್ಗದರ್ಶನದಲ್ಲಿ ಆಸೀಸ್ ತಂಡ ಟಿ20 ವಿಶ್ವಕಪ್, ಇಂಗ್ಲೆಂಡ್​ ಎದುರಿನ ಪ್ರತಿಷ್ಠಿತ ಆ್ಯಶಸ್​ ಟೆಸ್ಟ್​ ಸರಣಿ ಗೆದ್ದಿತ್ತು

VISTARANEWS.COM


on

Team India New Head Coach
Koo

ನವದೆಹಲಿ: ಟಿ20 ವಿಶ್ವಕಪ್​ ಬಳಿಕ ಟೀಮ್​ ಇಂಡಿಯಾಕ್ಕೆ ಯಾರಾಗಲಿದ್ದಾರೆ ನೂತನ ಕೋಚ್(Team India New Head Coach) ಎಂಬ ಬಿಸಿ ಬಿಸಿ ಚರ್ಚೆಯ ಮಧ್ಯೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಕೋಚ್​, ಪ್ರಸ್ತುತ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಕೋಚ್​ ಆಗಿರುವ ಜಸ್ಟಿನ್ ಲ್ಯಾಂಗರ್(Justin Langer) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಭಾರತ ತಂಡದ ಮುಖ್ಯ ಕೋಚ್ ಸ್ಥಾನವು ಅಸಾಮಾನ್ಯ ಪಾತ್ರವಾಗಿದೆ ಎಂದು ಹೇಳುವ ಮೂಲಕ ಕೋಚಿಂಗ್​ ಬಗ್ಗೆ ಒಲವು ತೋರಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯಕ್ಕೂ ಮುನ್ನ ಟೈಮ್ಸ್ ಆಫ್ ಇಂಡಿಯಾದೊಂದಿಗೆ ಮಾತನಾಡಿದ ಲ್ಯಾಂಗರ್, ಭಾರತ ತಂಡ ಕೋಚಿಂಗ್​ ಮಾಡುವುದು ಅಸಾಮಾನ್ಯ ಪಾತ್ರವಾಗಿದೆ. ನನಗೂ ಕೋಚಿಂಗ್​ ಮಾಡಲು ಕುತೂಹಲವಿದೆ. ಇಲ್ಲಿ ಅಪಾರ ಸಂಖ್ಯೆಯ ಕ್ರಿಕೆಟ್ ಪ್ರತಿಭೆಗಳಿದ್ದಾರೆ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ಗಮನಿಸುವಾಗ ಕೋಚಿಂಗ್​ ಹುದ್ದೆಗೆ ಅರ್ಜಿ ಸಲ್ಲಿಸುವ ಸೂಚನೆಯೊಂದು ಲಭಿಸಿದೆ. ಸೋಮವಾರ ಬಿಸಿಸಿಐ ಕೋಚ್ ಹುದ್ದೆಗಾಗಿ(Team India Coach) ಬಿಸಿಸಿಐ(BCCI) ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ.

ಶುಕ್ರವಾರವಷ್ಟೇ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ನಾವು 3 ವರ್ಷಗಳ ದೀರ್ಘ ಅವಧಿಗಾಗಿ ಕೋಚ್​ ಹುಡುಕಾಟದಲ್ಲಿದ್ದೇವೆ ಎಂದು ಹೇಳಿದ್ದರು. ಜತೆಗೆ ದ್ರಾವಿಡ್ ಅವರಿಗೂ​ ಮರುಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದರು. ಆದರೆ, ದ್ರಾವಿಡ್​ ಕೋಚ್​ ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ ಹೊಂದಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಬಿಸಿಸಿಐ ನೂತನ ಕೋಚ್​ ಹುಡುಕಾಟದಲ್ಲಿದೆ.

ಬಿಸಿಸಿಐ ಕೂಡ ವಿದೇಶಿ ಕೋಚ್​ ಆಯ್ಕೆಯ ಬಗ್ಗೆ ಆಲೋಚನೆ ನಡೆಸುತ್ತಿದೆ ಎನ್ನುವ ಮಾತುಗಳು ಈ ಹಿಂದೆಯೇ ಕೇಳಿ ಬಂದಿತ್ತು. 2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಯೋಚಿಸಿದೆ ಎನ್ನಲಾಗಿದೆ.

ಇದನ್ನೂ ಓದಿ Rahul Dravid : ವಿಶ್ವ ಕಪ್​ ಬಳಿಕ ದ್ರಾವಿಡ್​ ಭಾರತದ ಕೋಚ್ ಅಗಿರುವುದಿಲ್ಲ; ಮುಂದೆ ಯಾರು?

ಕ್ರಿಕೆಟ್ ಆಸ್ಟ್ರೇಲಿಯಾ ಕಂಡ ಯಶಸ್ವಿ ಕೋಚ್ ಗಳಲ್ಲಿ ಒಬ್ಬರಾದ ಜಸ್ಟಿನ್ ಲ್ಯಾಂಗರ್ ತಾವಾಗಿಯೇ ಕೋಚಿಂಗ್​ ಬಗ್ಗೆ ಆಸಕ್ತಿ ತೋರಿರುವ ಕಾರಣ ಬಿಸಿಸಿಐ ಅವರಿಗೆ ಮಣೆ ಹಾಕಿದರೂ ಅಚ್ಚರಿಯಿಲ್ಲ. ಲ್ಯಾಂಗರ್ ಮಾರ್ಗದರ್ಶನದಲ್ಲಿ ಆಸೀಸ್ ತಂಡ ಟಿ20 ವಿಶ್ವಕಪ್, ಇಂಗ್ಲೆಂಡ್​ ಎದುರಿನ ಪ್ರತಿಷ್ಠಿತ ಆ್ಯಶಸ್​ ಟೆಸ್ಟ್​ ಸರಣಿ ಗೆದ್ದಿತ್ತು. ಮೂರು ವರ್ಷಗಳ ಕಾಲ ಅವರು ಆಸೀಸ್​ ತಂಡದ ಕೋಚ್​ ಆಗಿ ಕರ್ತವ್ಯ ನಿರ್ವಹಿಸಿದ್ದರು. ಒಟ್ಟಾರೆಯಾಗಿ ಟಿ20 ವಿಶ್ವಕಪ್​ ಮುಗಿದ ಬಳಿಕ ಭಾರತ ತಂಡದ ಕೋಚ್​ ಯಾರಾಗಲಿದ್ದಾರೆ ಎನ್ನುವ ಸ್ಪಷ್ಟ ಚಿತ್ರಣ ಸಿಗಲಿದೆ.

Continue Reading
Advertisement
Team India
ಪ್ರಮುಖ ಸುದ್ದಿ4 mins ago

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Victoria Hospital
ಕರ್ನಾಟಕ16 mins ago

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

KL Rahul
ಕ್ರೀಡೆ32 mins ago

KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Bank Loan Fraud
ಪ್ರಮುಖ ಸುದ್ದಿ2 hours ago

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
ಉತ್ತರ ಕನ್ನಡ2 hours ago

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Swati Maliwal
ಪ್ರಮುಖ ಸುದ್ದಿ2 hours ago

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

Karnataka weather Man from Siddapura killed in lightning Heavy rain warning for four more days
ಕರ್ನಾಟಕ2 hours ago

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Manjappa Magodi
ಚಿತ್ರದುರ್ಗ3 hours ago

Manjappa Magodi: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಡಾಕ್ಟರೇಟ್

Viral News
ವಿದೇಶ3 hours ago

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ4 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20246 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202410 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ10 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು11 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ18 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

ಟ್ರೆಂಡಿಂಗ್‌