ಬೆಂಗಳೂರು: ಬೆನ್ನು ನೋವಿನ ಸಮಸ್ಯೆಗೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಟೀಮ್ ಇಂಡಿಯಾದ ಪ್ರಧಾನ ವೇಗಿ ಜಸ್ಪ್ರೀತ್ ಬುಮ್ರಾ(Jasprit Bumrah) ಸುಮಾರು ಒಂದುವರೆ ವರ್ಷಗಳಿಂದ ಕ್ರಿಕೆಟ್ನಿಂದ ದೂರ ಉಳಿದಿದ್ದಾರೆ. ಅವರ ಕಮ್ಬ್ಯಾಕ್ಗೆ ಅಭಿಮಾನಿಗಳು ಮತ್ತು ಟೀಮ್ ಇಂಡಿಯಾ ಕಾದು ಕುಳಿದೆ. ಸದ್ಯ ಬೆಂಗಳೂರಿನ ಎನ್ಸಿಎಯಲ್ಲಿ(NCA) ತರಬೇತಿ ಪಡೆಯುತ್ತಿರುವ ಬುಮ್ರಾ ತಮ್ಮ ಫಿಟ್ನೆಸ್(Jasprit Bumrah Fitness) ಕುರಿತು ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ.
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್ ಸಿಎ) ಫಿಟ್ನೆಸ್ ತರಬೇತಿ ಪಡೆಯುತ್ತಿರುವ ಬುಮ್ರಾ ಅವರು ಮುಂಬರುವ ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಸೇರಲಿದ್ದಾರೆ ಎಂದು ಕೆಲ ದಿನಗಳ ಹಿಂದೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಬುಮ್ರಾ ಅವರು ಬೌಲಿಂಗ್ ಅಭ್ಯಾಸ, ಫಿಲ್ಡಿಂಗ್ ಮತ್ತು ವ್ಯಾಯಾಮ ನಡೆಸುತ್ತಿರುವ ಫೋಟೊಗಳನ್ನು ಕೊಲಾಜ್ ಮಾಡಿ ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಫಿಟ್ನೆಸ್ ಮತ್ತು ಐರ್ಲೆಂಡ್ ಸರಣಿಯಲ್ಲಿ ಕಮ್ಬ್ಯಾಕ್ ಮಾಡುವ ಸುಳಿವೊಂದನ್ನು ನೀಡಿದ್ದಾರೆ.
Jasprit Bumrah back in action soon 🔥. pic.twitter.com/fttcHZPubZ
— MI Fans Army™ (@MIFansArmy) July 18, 2023
ಎರಡು ದಿನಗಳ ಹಿಂದೆ ಇಂಡಿಯನ್ ಎಕ್ಸ್‌ಪ್ರೆಸ್ ಜಸ್ಪ್ರೀತ್ ಬುಮ್ರಾ ಅವರ ಕಮ್ಬ್ಯಾಕ್ ಬಗ್ಗೆ ವರದಿಯೊಂದನ್ನು ಪ್ರಕಟಿಸಿತ್ತು. ಈ ವರದಿಯ ಪ್ರಕಾರ ಬುಮ್ರಾ ಅವರು ಸಂಪೂರ್ಣವಾಗಿ ಫಿಟ್ ಆಗಿದ್ದು, ಮುಂಬರುವ ಐರ್ಲೆಂಡ್ ವಿರುದ್ಧ ಟಿ20 ಸರಣಿಗೆ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿತ್ತು. ಬೆಂಗಳೂರಿನ ಎನ್ಸಿಎಯಲ್ಲಿರುವ ಬುಮ್ರಾ ದಿನಕ್ಕೆ 8ರಿಂದ 10 ಓವರ್ ಬೌಲಿಂಗ್ ನಡೆಸುತ್ತಿದ್ದಾರೆ. ಬುಮ್ರಾ ಅವರ ಫಿಟ್ನೆಸ್ ಬಗ್ಗೆ ಎನ್ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ವರದಿ ಮಾಡಿತ್ತು.
ಇದನ್ನೂ ಓದಿ IPL 2023: ಜಸ್ಪ್ರೀತ್ ಬುಮ್ರಾ ಬದಲು ಮುಂಬೈ ಸೇರಿದ ಸಂದೀಪ್ ವಾರಿಯರ್
ತೀವ್ರ ತರದ ಬೆನ್ನುನೋವಿನಿಂದ ಬಳಲುತ್ತಿದ್ದ ಬುಮ್ರಾ ಅವರು ವರ್ಷಾರಂಭದಲ್ಲಿ ನ್ಯೂಜಿಲ್ಯಾಂಡ್ನ ಕ್ರೈಸ್ಟ್‌ಚರ್ಚ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯದ ಭಾರತ ಪ್ರವಾಸದಲ್ಲಿ 29 ರ ಹರೆಯದ ವೇಗಿ ಎರಡು ಟಿ20 ಪಂದ್ಯಗಳನ್ನು ಆಡಿದ ನಂತರ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದರು. ಏಷ್ಯಾ ಕಪ್, ಟಿ20 ವಿಶ್ವಕಪ್ ಐಪಿಎಲ್ ಸೇರಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕೂಡ ಆಡಲು ಸಾಧ್ಯವಾಗಿರಲಿಲ್ಲ.