ಮುಂಬಯಿ: ಬೆನ್ನುನೋವಿನ ಕಾರಣದಿಂದ ಟಿ20 ವಿಶ್ವ ಕಪ್ ಮತ್ತು ಏಷ್ಯಾಕಪ್ನಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಪ್ರಧಾನ ವೇಗಿ ಜಸ್ಪ್ರೀತ್ ಬುಮ್ರಾ(Jasprit Bumrah) ಇದೀಗ ಚೇತರಿಸಿಕೊಂಡಿದ್ದು ತಂಡಕ್ಕೆ ಕಮ್ಬ್ಯಾಕ್ ಮಾಡಲು ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ವ್ಯಾಯಾಮ ಮಾಡುತ್ತಿರುವ ವಿಡಿಯೊವನ್ನು ಬುಮ್ರಾ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ಜಸ್ಪ್ರೀತ್ ಬುಮ್ರಾ ಟಿ20 ವಿಶ್ವ ಕಪ್ನಲ್ಲಿ ಪಾಲ್ಗೊಳ್ಳದ ಕಾರಣ ಟೀಮ್ ಇಂಡಿಯಾ ಬೌಲಿಂಗ್ ವಿಭಾಗದಲ್ಲಿ ವೈಫಲ್ಯ ಅನುಭವಿಸಿತ್ತು. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಒಂದೂ ವಿಕೆಟ್ ಕೀಳದ ಅವಮಾನಕ್ಕೆ ಸಿಲುಕಿತ್ತು. ಇದೀಗ ಮತ್ತೆ ತಂಡಕ್ಕೆ ಕಮ್ಬ್ಯಾಕ್ ಮಾಡಲು ಬುಮ್ರಾ ಜಿಮ್ ಮತ್ತು ನೆಟ್ಸ್ನಲ್ಲಿ ಬೆವರು ಹರಿಸುತ್ತಿದ್ದಾರೆ.
ಸೆಪ್ಟೆಂಬರ್ ಅಂತ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ವೇಳೆ ಬುಮ್ರಾ ಗಾಯಗೊಂಡಿದ್ದರು. ಬಳಿಕ ಭಾರತ ಆಡಿದ ಯಾವುದೇ ಸರಣಿಯಲ್ಲಿಯೂ ಅವರು ಕಾಣಿಸಿಕೊಂಡಿರಲಿಲ್ಲ ಇದೀಗ ಚೇತರಿಕೆ ಕಾಣುತ್ತಿರುವ ಬುಮ್ರಾ ಮುಂದಿನ ವರ್ಷ ಮತ್ತೆ ಕ್ರಿಕೆಟ್ ಅಂಗಳಕ್ಕೆ ಮರಳುವ ಸಾಧ್ಯತೆ ಇದೆ.
ಇದನ್ನೂ ಓದಿ | IND VS NZ | ಭಾರತ ಮತ್ತು ಕಿವೀಸ್ ವಿರುದ್ಧದ ದ್ವಿತೀಯ ಏಕದಿನ; ಪಿಚ್ ರಿಪೋರ್ಟ್, ಹವಾಮಾನ ವರದಿ ಹೇಗಿದೆ?