ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿರುವ ಟೀಮ್ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ. ಜಸ್ಪ್ರೀತ್ ಬುಮ್ರಾ(Jasprit Bumrah) ಅವರು ಬಾರ್ಡರ್-ಗವಾಸ್ಕರ್(border gavaskar trophy) ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.
ಆಸೀಸ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಫಿಟ್ನೆಸ್ ಹೊಂದಿದರೆ ಅಂತಿಮ ಎರಡು ಪಂದ್ಯಗಳಲ್ಲಿ ಅವರನ್ನು ಆಡಿಸುವುದಾಗಿ ಬಿಸಿಸಿಐ ತಿಳಿಸಿತ್ತು. ಆದರೆ ಇದೀಗ ಬುಮ್ರಾ ಅವರು ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಬುಮ್ರಾ ಅವರು ಬೆನ್ನು ನೋವಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರೂ ಫಿಟ್ ಆಗಿಲ್ಲ. ಒಂದೊಮ್ಮೆ ಅವರನ್ನು ಆಡಿಸಿದರೆ ಮತ್ತೆ ಗಾಯದ ಸಮಸ್ಯೆ ಕಾಡಬಹುದು. ಇದೇ ವರ್ಷ ಏಕದಿನ ವಿಶ್ವ ಕಪ್ ಟೂರ್ನಿಯೂ ಇರುವುದರಿಂದ ಬಿಸಿಸಿಐ ಬುಮ್ರಾ ಅವರನ್ನು ಆಸೀಸ್ ಟೆಸ್ಟ್ ಸರಣಿಯಿಂದ ಕೈ ಬಿಟ್ಟಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ IND VS AUS: ಜಡೇಜಾ ಬೆರಳಿಗೆ ಹಚ್ಚಿಕೊಂಡಿದ್ದೇನು?; ಸ್ಪಷ್ಟೀಕರಣ ನೀಡಿದ ಬಿಸಿಸಿಐ
ಬೆನ್ನು ನೋವಿನ ಕಾರಣದಿಂದಾಗಿ ಕಳೆದ ವರ್ಷ ಏಷ್ಯಾ ಕಪ್ ಬಳಿಕ ಬುಮ್ರಾ ಇದುವರೆಗೆ ಕ್ರಿಕೆಟ್ ಆಡಿಲ್ಲ. ಪ್ರಸ್ತುತ ಅವರು ಬೆಂಗಳೂರಿನ ಎನ್ಸಿಎಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.