ನವದೆಹಲಿ: ಭಾರತದಲ್ಲಿ ಜಾವೆಲಿನ್ ಎಸೆತವನ್ನು ಜನಪ್ರಿಯಗೊಳಿಸಿದ ಕೀರ್ತಿಗೆ ಪಾತ್ರರಾಗಿರುವ ಹಾಲಿ ಒಲಿಂಪಿಕ್ ಚಾಂಪಿಯನ್ ಚಿನ್ನದ ಹುಡುಗ ನೀರಜ್ ಚೋಪ್ರಾ ತಮ್ಮ ನೆಚ್ಚಿನ ಮತ್ತು ಭಾರತದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ತಮ್ಮ ವೇಗವನ್ನು ಹೆಚ್ಚಿಸುವ ಕುರಿತು ಒಳನೋಟದ ಸಲಹೆ ನೀಡಿದ್ದಾರೆ. ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸಿದ್ದ ನೀರಜ್, ಬುಮ್ರಾ ಅವರ ವಿಶಿಷ್ಟ ಬೌಲಿಂಗ್ ಶೈಲಿಯನ್ನು ಶ್ಲಾಘಿಸಿದ್ದಾರೆ. ಇದೇ ವೇಳೆ ಅವರನ್ನು ತಮ್ಮ ಆದ್ಯತೆಯ ವೇಗದ ಬೌಲರ್ ಎಂದು ಹೇಳಿದ್ದಾರೆ.
“ನಾನು ಜಸ್ಪ್ರೀತ್ ಬುಮ್ರಾ ಅವರನ್ನು ಸಾಕಷ್ಟು ಇಷ್ಟಪಡುತ್ತೇನೆ. ಅವರ ಬೌಲಿಂಗ್ ಶೈಲಿಯನ್ನು ವಿಶೇಷವಾಗಿ ಆಸ್ವಾದಿಸುತ್ತೇನೆ ” ಎಂದು ನೀರಜ್ ಇಂಡಿಯನ್ ನ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ವಿಶ್ವಕಪ್ನಲ್ಲಿ ಬುಮ್ರಾ ಅವರ ಅಸಾಧಾರಣ ಪ್ರದರ್ಶನದಿಂದಾಗಿ ಅವರಿಗೆ 20 ವಿಕೆಟ್ಗಳನ್ನು ಗಳಿಸಲು ಸಹಾಯ ಮಾಡಿತು. ಚೆಂಡನ್ನು ಎರಡೂ ರೀತಿಯಲ್ಲಿ ಸ್ವಿಂಗ್ ಮಾಡುವ ಅವರ ಅಸಾಧಾರಣ ಸಾಮರ್ಥ್ಯವು ಭಾರತದ ಯಶಸ್ಸಿಗೆ ಕೊಡುಗೆ ನೀಡಿದೆ. ಬುಮ್ರಾ ಅವರ ಅದ್ಭುತ ಪ್ರದರ್ಶನದ ಹೊರತಾಗಿಯೂ, ಚೋಪ್ರಾ ಅವರ ವೇಗವನ್ನು ಹೆಚ್ಚಿಸಬೇಕು ಎಂಬ ಸಣ್ಣ ಬದಲಾವಣೆಯನ್ನೂ ಸೂಚಿಸಿದ್ದಾರೆ.
ಹೆಚ್ಚು ದೂರ ಓಡಲಿ
ತಮ್ಮ ಎಸೆತಗಳಿಗೆ ಇನ್ನಷ್ಟು ವೇಗ ನೀಡಲು ಬುಮ್ರಾ ತಮ್ಮ ರನ್-ಅಪ್ ಅನ್ನು ಹೆಚ್ಚಿಸಬೇಕು ಎಂದು ನಾನು ಭಾವಿಸುತ್ತೇನೆ. ಜಾವೆಲಿನ್ ಎಸೆತಗಾರರಾಗಿ ನಾನು ಹೇಳುವುದಾದರೆ ಬೌಲರ್ಗಳು ತಮ್ಮ ರನ್-ಅಪ್ ಅನ್ನು ಸ್ವಲ್ಪ ಹಿಂದಿನಿಂದ ಪ್ರಾರಂಭಿಸಿದರೆ ವೇಗವನ್ನು ವೃದ್ದಿಸಲು ಸಾಧ್ಯವಿದೆ ಎಂದು ಹೇಳುತ್ತೇನೆ. ಆದರೆ, ಬುಮ್ರಾ ಅವರ ಬೌಲಿಂಗ್ ಶೈಲಿಯನ್ನು ನಾನು ಇಷ್ಟಪಡುತ್ತೇನೆ, “ಎಂದು ಅವರು ಹೇಳಿದರು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ನಲ್ಲಿ ಭಾಗವಹಿಸಿದ್ದ ವೇಳೆ ಕ್ರಿಕೆಟ್ ಅಭಿಮಾನಿಯಾಗಿ ತಮ್ಮ ಅನುಭವವನ್ನು ಹೇಳಿಕೊಂಡ ನೀರಜ್, “ನಾನು ಕ್ರಿಕೆಟ್ ಪಂದ್ಯವನ್ನು ಸಂಪೂರ್ಣವಾಗಿ ನೋಡಿದ್ದು ಇದೇ ಮೊದಲು. ನಾನು ವಿಮಾನದಲ್ಲಿದ್ದಾಗ ಭಾರತ ಮೂರು ವಿಕೆಟ್ ಕಳೆದುಕೊಂಡಿತ್ತು. ನಾನು ತಲುಪಿದಾಗ ವಿರಾಟ್ (ಕೊಹ್ಲಿ) ಭಾಯ್ ಮತ್ತು ಕೆಎಲ್ ರಾಹುಲ್ ಬ್ಯಾಟಿಂಗ್ ಮಾಡುತ್ತಿದ್ದರು. ಕ್ರಿಕೆಟ್ನಲ್ಲಿ ನನಗೆ ಅರ್ಥವಾಗದ ಕೆಲವು ತಾಂತ್ರಿಕ ವಿಷಯಗಳಿವೆ. ಹಗಲಿನಲ್ಲಿ ಬ್ಯಾಟಿಂಗ್ ಮಾಡುವುದು ತುಂಬಾ ಸುಲಭವಾಗಿರಲಿಲ್ಲ. ಸಂಜೆ ಮೇಲೆ ಬ್ಯಾಟಿಂಗ್ ಸುಲಭವಾಯಿತು ಎಂದು ನಾನು ಭಾವಿಸುತ್ತೇನೆ. ಆದರೆ ನಮ್ಮ ಆಟಗಾರರ ಉತ್ತಮವಾಗಿ ಪ್ರಯತ್ನಿಸಿದರು. ಕೆಲವೊಮ್ಮೆ, ಅದು ನಮ್ಮ ದಿನ ಆಗಿರುವುದಿಲ್ಲ್ಲಲ ಆದರೆ, ಪ್ರಾಮಾಣಿಕವಾಗಿ, ಪ್ರತಿಯೊಬ್ಬರೂ ಉತ್ತಮ ಟೂರ್ನಿಯನ್ನು ಹೊಂದಿದ್ದರು ಎಂದು ನೀರಜ್ ಹೇಳಿದ್ದಾರೆ.
ಆಸ್ಟ್ರೇಲಿಯಾ ಮನಸ್ಥಿತಿಯೇ ಕಾರಣ
ಬಹುಶಃ, ಮಾನಸಿಕವಾಗಿ, ಆಸ್ಟ್ರೇಲಿಯಾ ತಂಡವು ಆರಂಭದಲ್ಲಿ ಮೇಲುಗೈ ಸಾಧಿಸಿತು. ಅವರು ಬೌಲಿಂಗ್ ಮಾಡಿದಾಗ ಅವರು ಉತ್ತಮm ಮನಸ್ಥಿತಿಯನ್ನು ಹೊಂದಿದ್ದಾರೆಂದು ನಾನು ಕಂಡುಕೊಂಡೆ. ಕೊನೆಯಲ್ಲಿ ಅವರು ಅದನ್ನು ಸಂಪೂರ್ಣವಾಗಿ ಬಳಸಿಕೊಂಡರು. ಅವರು ತಮ್ಮ ಆಟದ ಬಗ್ಗೆ ವಿಶ್ವಾಸ ಹೊಂದಿದ್ದರು ಎಂದು ನೀರಜ್ ಹೇಳಿದ್ದಾರೆ. ಇದೇ ವೇಳೆ ಅವರು ಆ ದಿನದ ಸವಾಲಿನ ಬ್ಯಾಟಿಂಗ್ ಪರಿಸ್ಥಿತಿಗಳನ್ನು ಒಪ್ಪಿಕೊಂಡಿದ್ದಾರೆ
ಚೋಪ್ರಾ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ಶಿಪ್ ಪ್ರಶಸ್ತಿಗಳನ್ನು ಗೆದ್ದ ಮೂರನೇ ಜಾವೆಲಿನ್ ಎಸೆತಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ, ವಿಶ್ವ ದಾಖಲೆ ಹೊಂದಿರುವ ಜೆಕ್ ಗಣರಾಜ್ಯದ ಜಾನ್ ಜೆಲೆಜ್ನಿ ಮತ್ತು ನಾರ್ವೆಯ ಆಂಡ್ರಿಯಾಸ್ ಥೋರ್ಕಿಲ್ಡ್ಸೆನ್ ಅವರು ಈ ಪಟ್ಟಿಯ ಇನ್ನಿಬ್ಬರು ಅಥ್ಲೀಟ್ಗಳು.