Jonny Bairstow's unavailability guaranteed, Matthew Short's joins Punjab teamIPL 2023 : ಜಾನಿ ಬೇರ್​ಸ್ಟೋವ್​ ಅಲಭ್ಯತೆ ಖಾತರಿ, ಪಂಜಾಬ್​ ತಂಡ ಸೇರಿದ ಮ್ಯಾಥ್ಯೂ ಶಾರ್ಟ್ಸ್​​ - Vistara News

ಕ್ರಿಕೆಟ್

IPL 2023 : ಜಾನಿ ಬೇರ್​ಸ್ಟೋವ್​ ಅಲಭ್ಯತೆ ಖಾತರಿ, ಪಂಜಾಬ್​ ತಂಡ ಸೇರಿದ ಮ್ಯಾಥ್ಯೂ ಶಾರ್ಟ್ಸ್​​

ಜಾನಿ ಬೇರ್​ಸ್ಟೋವ್​ ಐಪಿಎಲ್​ (IPL 2023) ಆಡುವುದಕ್ಕೆ ಫಿಟ್​ ಆಗಿಲ್ಲ ಎಂದು ಇಂಗ್ಲೆಡ್​ ಮತ್ತು ವೇಲ್ಸ್ ಕ್ರಿಕೆಟ್​ ಮಂಡಳಿ ಬಿಸಿಸಿಐಗೆ ಮಾಹಿತಿ ನೀಡಿದೆ.

VISTARANEWS.COM


on

Jonny Bairstow's unavailability guaranteed, Matthew Short's joins Punjab team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಮುಂಬರುವ ಐಪಿಎಲ್​ (IPL 2023) ಟೂರ್ನಿಯು ಆಟಗಾರರ ಗಾಯದ ಸಮಸ್ಯೆಯಿಂದಾಗಿ ಸುದ್ದಿಯಲ್ಲಿದೆ. ಪ್ರಮುಖ ಆಟಗಾರರು ನಾನಾ ಬಗೆಯ ಗಾಯಗಳ ಕಾರಣಕ್ಕೆ ಅಲಭ್ಯತೆಯನ್ನು ಪ್ರಕಟಿಸಿದ್ದಾರೆ. ಅಂತೆಯೇ ಪಂಜಾಬ್​ ಕಿಂಗ್ಸ್​ ತಂಡದ ಪ್ರಮುಖ ಆಟಗಾರರೆನಿಸಿಕೊಂಡಿರುವ ಜಾನಿ ಬೇರ್​ಸ್ಟೋವ್ ಕೂಡ ಈ ಬಾರಿ ಆಡುವುದಿಲ್ಲ. ಕಾಲಿನ ಮೂಳೆ ಮುರಿತಕ್ಕೆ ಒಳಗಾಗಿರುವ ಅವರು ಸಂಪೂರ್ಣವಾಗಿ ಫಿಟ್ ಎನಿಸಿಕೊಳ್ಳದ ಕಾರಣ ಇಂಗ್ಲೆಂಡ್​ ಮತ್ತು ವೇಲ್ಸ್​ ಕ್ರಿಕೆಟ್​ ಮಂಡಳಿ ಅವರಿಗೆ ನಿರಾಕ್ಷೇಪಣಾ ಪತ್ರ ಕೊಟ್ಟಿಲ್ಲ. ಹೀಗಾಗಿ ಅವರಿಗೆ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಇಎಸ್​ಪಿಎನ್​ ಕ್ರಿಕ್​ ಇನ್ಫೋ ವರದಿ ಮಾಡಿದೆ. ಬೇರ್​ಸ್ಟೋವ್​ ಬದಲಿಗೆ ಆಸ್ಟ್ರೇಲಿಯಾದ ಯುವ ಬ್ಯಾಟರ್​ ಮ್ಯಾಥ್ಯೂ ಶಾರ್ಟ್ಸ್​ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ ಪಂಜಾಬ್​ ಕಿಂಗ್ಸ್​ ಫ್ರಾಂಚೈಸಿ.

ಜಾನಿ ಬೇರ್​ಸ್ಟೋವ್ ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಗಾಯಗೊಂಡಿದ್ದರು. ಆದರೆ, ಹಲವು ತಿಂಗಳ ಸುಧಾರಣೆ ಬಳಿಕ ಇತ್ತೀಚೆಗೆ ಯಾರ್ಕ್​ಶೈರ್​ನಲ್ಲಿ ನೆಟ್​ಪ್ರಾಕ್ಟೀಸ್ ಮಾಡಿದ್ದರು. ಹೀಗಾಗಿ ಇಸಿಬಿಯ ಪ್ರತಿಕ್ರಿಯೆಗಾಗಿ ಬಿಸಿಸಿಐ ಕಾದಿತ್ತು. ಬೇರ್​ಸ್ಟೋವ್​ ಆಡಲು ಲಭ್ಯರಿರುತ್ತಾರೆ ಎಂಬ ನಿರೀಕ್ಷೆಯನ್ನು ಪಂಜಾಬ್​ ಕಿಂಗ್ಸ್​ ಕೂಡ ವ್ಯಕ್ತಪಡಿಸಿತ್ತು. ಇಸಿಬಿಯಿಂದ ಯಾವುದೇ ಪ್ರತಿಕ್ರಿಯೆ ಬರದ ಕಾರಣ, ಬದಲಿ ಆಟಗಾರನನ್ನು ಸೇರಿಸಿಕೊಳ್ಳುವಂತೆ ಬಿಸಿಸಿಐ, ಪಂಜಾಬ್​ ಕಿಂಗ್ಸ್​ ತಂಡಕ್ಕೆ ಸೂಚನೆ ಕೊಟ್ಟಿದೆ. ಹೀಗಾಗಿ ಇನ್ನೂ ಅಂತಾರಾಷ್ಟ್ರೀಯ ಪಂದ್ಯವನ್ನೇ ಆಡದ ಆಸ್ಟ್ರೇಲಿಯಾದ ಬ್ಯಾಟರ್​ ಅನ್ನು ಹುಡುಕಿದ್ದಾರೆ.

ಇದನ್ನೂ ಓದಿ :IPL 2023 : ಐಪಿಎಲ್​ ಫ್ರಾಂಚೈಸಿಗಳಿಗೆ ಗಾಯದ ಗೋಳು ​; ಇದುವರೆಗೆ 10 ಆಟಗಾರರು ಔಟ್​!

ವಿಕೆಟ್​ಕೀಪರ್ ಬ್ಯಾಟರ್​ ಜಾನಿ ಬೇರ್​ಸ್ಟೋವ್​ ಐಪಿಎಲ್​ನಲ್ಲಿ ಉತ್ತಮ ಸಾಧನೆ ಹೊಂದಿದ್ದಾರೆ. ಆರಂಭಿಕ ಬ್ಯಾಟರ್​ ಆಗಿ ಕಣಕ್ಕಿಳಿಯುವ ಅವರು ಪವರ್​ಪ್ಲೇನಲ್ಲಿ ರನ್ ಗಳಿಸುವುದರಲ್ಲಿ ನಿಸ್ಸೀಮರು. ಹೀಗಾಗಿ ಪಂಜಾಬ್​ ಕಿಂಗ್ಸ್​ ತಂಡ ಅವರ ಸೇವೆಯ ನಿರೀಕ್ಷೆಯಲ್ಲಿತ್ತು. ಇದೀಗ ಅನುಭವಿ ಆಟಗಾರನ ಅಲಭ್ಯತೆಯಿಂದಾಗಿ ಪಂಜಾಬ್ ಬಳಗಕ್ಕೆ ಹಿನ್ನಡೆ ಉಂಟಾಗಿದೆ.

ಏನಾಗಿತ್ತು ಬೇರ್​ಸ್ಟೋವ್​ಗೆ?

ಕಳೆದ ವರ್ಷ ಸೆಪ್ಟೆಂಬರ್​ 2ರಂದು ಬೇರ್​ಸ್ಟೋವ್ ಅವರ ಕಾಲು ಮೂಳೆ ಮುರಿತವಾಗಿತ್ತು. ದಕ್ಷಿಣ ಆಫ್ರಿಕಾ ವಿರುದ್ಧದ ತವರಿನ ಸರಣಿಯ ಕೊನೇ ಪಂದ್ಯದ ಎರಡು ದಿನ ಮೊದಲು ಗೆಳೆಯರ ಜತೆ ಗಾಲ್ಫ್​ ಆಡುವಾಗ ಎಡವಿ ಬಿದ್ದಿದ್ದರು. ಈ ವೇಳೆ ಅವರ ಕಾಲಿನ ಮೂಳೆ ಮುರಿತವಾಗುವ ಜತೆಗೆ ಮಂಡಿಗೂ ಏಟಾಗಿತ್ತು. ಕೆಲವು ದಿನಗಳ ಬಳಿಕ ಅವರು ಸರ್ಜರಿಗೆ ಒಳಗಾಗಿದ್ದರು. ಈ ಗಾಯದಿಂದಾಗಿ ಬೇರ್​ಸ್ಟೋವ್​ ಒಂದು ವರ್ಷದಿಂದ ಹಲವಾರು ಟೂರ್ನಿಗಳಲ್ಲಿ ಆಡುವ ಅವಕಾಶ ಕಳೆದುಕೊಂಡಿದ್ದಾರೆ. ಟಿ20 ವಿಶ್ವ ಕಪ್​, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್​ ಹಾಗೂ ಬಾಂಗ್ಲಾದೇಶ ಪ್ರವಾಸದಲ್ಲಿ ಆಡುವ ಅವಕಾಶ ನಷ್ಟ ಮಾಡಿಕೊಂಡಿದ್ದರು. ಅದೇ ರೀತಿ ಐಎಲ್​ಟಿಯಲ್ಲಿ ಅಬುಧಾಬಿ ನೈಟ್​ರೈಡರ್ಸ್​ ತಂಡದಲ್ಲೂ ಸ್ಥಾನ ಪಡೆದಿದ್ದರು.

ಬೇರ್​​ಸ್ಟೋವ್​ ಅವರಲ್ಲದೆ ಐಪಿಎಲ್​ನಲ್ಲಿ ಹಲವಾರು ಆಟಗಾರರು ಗಾಯದ ಸಮಸ್ಯೆಯಿಂದ ಆಡುವ ಅವಕಾಶ ಕಳೆದಕೊಂಡಿದ್ದಾರೆ. ವಿಲ್​ ಜಾಕ್​, ಜಸ್​ಪ್ರಿತ್​ ಬುಮ್ರಾ, ಶ್ರೇಯಸ್​ ಅಯ್ಯರ್​ ಸೇರಿದಂತೆ ಪ್ರಮುಖ ಆಟಗಾರರ ಅಲಭ್ಯತೆಯಿಂದಾಗಿ ಈ ಬಾರಿಯ ಐಪಿಎಲ್​ನ ಕಳೆಗುಂದಲಿದೆ ಎಂದು ಹೇಳಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

IPL 2024: ಮೋಹಿತ್​ ಶರ್ಮ ಎಸೆತ ಅಂತಿಮ ಓವರ್​ನಲ್ಲಿ ಪಂತ್​ 4 ಸಿಕ್ಸರ್​ ಮತ್ತು ಒಂದು ಬೌಂಡರಿ ಸಿಡಿಸಿ 31 ರನ್ ದೋಚಿದರು. ಹೀಗಾಗಿ ಅಂತಿಮ 18 ಎಸೆತಗಳಲ್ಲಿ ಡೆಲ್ಲಿಗೆ ಬರೋಬ್ಬರಿ 67 ರನ್​ ಹರಿದು ಬಂತು. ಕೇವಲ 43 ಎಸೆತ ಎದುರಿಸಿದ ಪಂತ್​ ಬರೋಬ್ಬರಿ 8 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿ ಅಜೇಯ 88 ರನ್​ ಬಾರಿಸಿದರು.

VISTARANEWS.COM


on

IPL 2024
Koo

ನವದೆಹಲಿ: ಗುಜರಾತ್​ ಟೈಟಾನ್ಸ್(DC vS GT)​ ವಿರುದ್ಧ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಸಿಕ್ಸರ್​ಗಳ ಸುರಿಮಳೆ ಸುರಿಸಿದ್ದ ರಿಷಭ್​ ಪಂತ್(Rishabh Pant)​ ಅವರ ಒಂದು ಸಿಕ್ಸರ್​ ಕ್ಯಾಮೆರಮನ್​ಗೆ ತಲುಲಿದೆ. ಈ ಚೆಂಡಿನೇಡಿಗೆ ಗಾಯಗೊಂಡಿರುವ ಕ್ಯಾಮೆರಮನ್​ಗೆ ಪಂತ್​ ಅವರು ಪಂದ್ಯದ ಬಳಿಕ ಕ್ಷಮೆ ಕೇಳಿ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ. ಈ ವಿಡಿಯೊವನ್ನು ಐಪಿಎಲ್​(IPL 2024) ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಪಂದ್ಯದ ಮುಕ್ತಾಯದ ಬಳಿಕ ರಿಷಭ್​ ಪಂತ್​ ಮತ್ತು ತಂಡದ ಹೆಡ್​ ಕೋಚ್​ ರಿಕಿ ಪಾಂಟಿಂಗ್​ ಈ ಘಟನೆಯ ಬಗ್ಗೆ ಮಾತನಾಡಿ, ಪಂತ್ ಅವರು ನಾನು ಉದ್ದೇಶ ಪೂರ್ವಕವಾಗಿ ಇದನ್ನು ಮಾಡಿಲ್ಲ. ಕ್ಷಮಿಸು ಸಹೋದರ, ಆದಷ್ಟು ಶೀಘ್ರವಾಗಿ ಚೇತರಿಕೆ ಕಾಣುವಂತಾಗಲಿ ಎಂದು ಕ್ಯಾಮೆರಮೆನ್​ಗೆ ಕ್ಷಮೆ ಕೇಳಿದ್ದಾರೆ.

44 ರನ್​ಗೆ ಮೂರು ವಿಕೆಟ್​ ಕಳೆದುಕೊಂಡ ವೇಳೆ ಕ್ರೀಸ್​ಗಿಳಿದ ಎಡಗೈ ಬ್ಯಾಟರ್​ಗಳಾದ ರಿಷಭ್​ ಪಂತ್​ ಮತ್ತು ಅಕ್ಷರ್​ ಪಟೇಲ್​ ಆರಂಭದಲ್ಲಿ ತಾಳ್ಮೆಯುತ ಬ್ಯಾಟಿಂಗ್​ ನಡೆಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಅರ್ಧಶತಕ ಪೂರ್ತಿಗೊಂಡ ತಕ್ಷಣ ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸಿ ಗುಜರಾತ್​ ಬೌಲರ್​ಗಳ ಮೇಲೆ ಸವಾರಿ ಮಾಡಿದರು. 17ನೇ ಓವರ್​ ತನಕ ಕ್ರೀಸ್​ನಲ್ಲಿದ್ದ ಅಕ್ಷರ್​ ಪಟೇಲ್ 5 ಬೌಂಡರಿ ಮತ್ತು 4 ಸಿಕ್ಸರ್​ ನೆರವಿನಿಂದ 66 ರನ್​ ಚಚ್ಚಿದರು. ಈ ಜೋಡಿ 4ನೇ ವಿಕೆಟ್​ಗೆ 113 ರನ್​ ಒಟ್ಟುಗೂಡಿಸಿತು.

ಮೋಹಿತ್​ ಶರ್ಮ ಎಸೆತ ಅಂತಿಮ ಓವರ್​ನಲ್ಲಿ ಪಂತ್​ 4 ಸಿಕ್ಸರ್​ ಮತ್ತು ಒಂದು ಬೌಂಡರಿ ಸಿಡಿಸಿ 31 ರನ್ ದೋಚಿದರು. ಹೀಗಾಗಿ ಅಂತಿಮ 18 ಎಸೆತಗಳಲ್ಲಿ ಡೆಲ್ಲಿಗೆ ಬರೋಬ್ಬರಿ 67 ರನ್​ ಹರಿದು ಬಂತು. ಕೇವಲ 43 ಎಸೆತ ಎದುರಿಸಿದ ಪಂತ್​ ಬರೋಬ್ಬರಿ 8 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿ ಅಜೇಯ 88 ರನ್​ ಬಾರಿಸಿದರು.

4 ರನ್​ ಅಂತರದಿಂದ ಗೆದ್ದ ಡೆಲ್ಲಿ

ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್​ ರಿಷಭ್​ ಪಂತ್​(88*) ಮತ್ತು ಅಕ್ಷರ್​ ಪಟೇಲ್​(66) ಅವರ ಸಮಯೋಚಿತ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 224 ರನ್​ ಪೇರಿಸಿತು. ಜವಾಬಿತ್ತ ಗುಜರಾತ್ ದಿಟ್ಟ ಹೋರಾಟ ನಡೆಸಿದರೂ 8 ವಿಕೆಟ್​ಗೆ 220 ರನ್​ ಬಾರಿಸಿ ಸಣ್ಣ ಅಂತರದಿಂದ ​ಸೋಲೊಪ್ಪಿಕೊಂಡಿತು. ಡೆಲ್ಲಿ ಈ ಗೆಲುವಿನ ಮೂಲಕ ಪ್ಲೇ ಆಫ್​ ರೇಸ್​ ಜೀವಂತವಾಗಿದೆ.

Continue Reading

ಕ್ರೀಡೆ

leopard Attack: ಚಿರತೆ ದಾಳಿ; ಜಿಂಬಾಬ್ವೆ ಮಾಜಿ ಕ್ರಿಕೆಟಿಗನಿಗೆ ತೀವ್ರ ಗಾಯ

Guy Whittal: ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿಟ್ಟಲ್ ಅವರ ಫೋಟೋಗಳನ್ನು ಅವರ ಪತ್ನಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ವಿಟ್ಟಲ್ ಅವರು ಬ್ಯಾಂಡೇಜ್ ಮತ್ತು ರಕ್ತಸಿಕ್ತ ಅಂಗಿಯನ್ನು ಧರಿಸಿರುವುದನ್ನು ಕಾಣಬಹುದಾಗಿದೆ. ಸದ್ಯ ಅವರು ಮಿಲ್ಟನ್ ಪಾರ್ಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

VISTARANEWS.COM


on

leopard Attack
Koo

ಬಫಲೋ( ಜಿಂಬಾಬ್ವೆ): ಜಿಂಬಾಬ್ವೆಯ ಮಾಜಿ ಖ್ಯಾತ ಕ್ರಿಕೆಟಿಗ ಗೈ ವಿಟ್ಟಲ್(Guy Whittall) ಅವರು ಚಿರತೆ(Leopard) ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ಜಿಂಬಾಬ್ವೆಯ ಬಫಲೋ ರೇಂಜ್‌ನಿಂದ ವಿಮಾನದ ಮೂಲಕ ತುರ್ತು ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಯಿತು.

ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿಟ್ಟಲ್ ಅವರ ಫೋಟೋಗಳನ್ನು ಅವರ ಪತ್ನಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ವಿಟ್ಟಲ್ ಅವರು ಬ್ಯಾಂಡೇಜ್ ಮತ್ತು ರಕ್ತಸಿಕ್ತ ಅಂಗಿಯನ್ನು ಧರಿಸಿರುವುದನ್ನು ಕಾಣಬಹುದಾಗಿದೆ. ಸದ್ಯ ಅವರು ಮಿಲ್ಟನ್ ಪಾರ್ಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಟ್ಟಲ್​ ಅವರು ಕಾಡುಪ್ರಾಣಿಯಿಂದ ಸಮಸ್ಯೆ ಎದುರಿಸುತ್ತಿರುವುದು ಇದೇ ಮೊದಲಲ್ಲ. 2013 ರಲ್ಲಿ, 8 ಅಡಿ ಉದ್ದದ ಮೊಸಳೆ ದಾಳಿಯಿಂದಲೂ ಪಾರಾಗಿದ್ದರು. ಈ ಮೊಸಳೆ ವಿಟ್ಟಲ್​ ಅವರ ಹಾಸಿಗೆಯ ಕೆಳಗೆ ಅವಿತಿತ್ತು. 150 ಕೆ.ಜಿ ತೂಕದ ಮೊಸಳೆ ಜಿಂಬಾಬ್ವೆಯ ಹುಮಾನಿ ಲಾಡ್ಜ್‌ಗೆ ನುಸುಳಿತು ಮತ್ತು ಇಡೀ ರಾತ್ರಿ ಸದ್ದಿಲ್ಲದೆ ಮಲಗಿತು. ಮರುದಿನ ವಿಟ್ಟಲ್​ ಬೆಳಗ್ಗೆ ಅಡುಗೆಮನೆಯಲ್ಲಿ ಉಪಾಹಾರ ಸೇವಿಸುತ್ತಿದ್ದ ವೇಳೆ ಮನೆಕೆಲಸದವಳ ಭಯಭೀತ ಕಿರುಚಾಟ ಕೇಳಿದಾಗ ಮೊಸಳೆ ಪತ್ತೆಯಾಗಿತ್ತು.

ಇದನ್ನೂ ಓದಿ IPL 2024: ಧೋನಿ, ಚೆನ್ನೈ ಪಂದ್ಯ ನೋಡಲು ದೆಹಲಿ ವರೆಗೂ ನಡೆದುಕೊಂಡು ಹೋಗುವೆ ಎಂದ ಶತಾಯುಷಿ ಅಭಿಮಾನಿ; ವಿಡಿಯೊ ವೈರಲ್​

51 ವರ್ಷದ ವಿಟ್ಟಲ್ ಜಿಂಬಾಬ್ವೆ ಪರ 46 ಟೆಸ್ಟ್ ಮತ್ತು 147 ಏಕದಿನ ಪಂದ್ಯಗಳನ್ನಾಡಿದ್ದಾರೆ. ಬ್ಯಾಟಿಂಗ್​ ಆಲ್​ರೌಂಡರ್​​ ಆಗಿದ್ದ ಇವರು ಟೆಸ್ಟ್​ನಲ್ಲಿ 2207 ರನ್​, ಏಕದಿನದಲ್ಲಿ 2705 ರನ್​ ಬಾರಿಸಿದ್ದಾರೆ. ಟೆಸ್ಟ್​ನಲ್ಲಿ 4 ಶತಕ ಕೂಡ ಬಾರಿಸಿದ್ದಾರೆ. ಬೌಲಿಂಗ್​ನಲ್ಲಿಯೂ ಉತ್ತಮ ಪ್ರದರ್ಶನ ತೋರಿರುವ ಇವರು, ಟೆಸ್ಟ್​ನಲ್ಲಿ 51 ಮತ್ತು ಏಕದಿನದಲ್ಲಿ 88 ವಿಕೆಟ್​ ಕಿತ್ತಿದ್ದಾರೆ.

Continue Reading

South Cinema

Tamannaah Bhatia: ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ; ನಟಿ ತಮನ್ನಾಗೆ ಸಮನ್ಸ್‌!

Tamannaah Bhatia: ಏಪ್ರಿಲ್ 23ರಂದು ನಟ ಸಂಜಯ್ ದತ್ ಅವರಿಗೂ ಈ ಸಂಬಂಧ ಸಮನ್ಸ್ ನೀಡಲಾಗಿತ್ತು. ಆದರೆ ಅವರು ಹಾಜರಾಗಿರಲಿಲ್ಲ. ತಾವು ಭಾರತದಲ್ಲಿ ಇಲ್ಲ ಎಂದು ವಿಚಾರಣೆಗೆ ಹಾಜಾರಾಗಲು ಹೊಸ ಡೇಟ್‌ ನೀಡಲು ಕೋರಿದ್ದರು. ಇದೀಗ ನಟಿ ತಮನ್ನಾಗೆ ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಆದೇಶ ನೀಡಲಾಗಿದೆ ಎನ್ನಲಾಗಿದೆ.

VISTARANEWS.COM


on

Tamannaah Bhatia Summoned in Illegal IPL Streaming Case
Koo

ಮುಂಬೈ: ಫೇರ್‌ಪ್ಲೇ ಆ್ಯಪ್‌ನಲ್ಲಿ ಅಕ್ರಮ ಐಪಿಎಲ್ ಪಂದ್ಯಗಳ ಸ್ಟ್ರೀಮಿಂಗ್ (Illegal IPL Streaming Case) ಪ್ರಕರಣದಲ್ಲಿ ಟಾಲಿವುಡ್‌ ನಟಿ ತಮನ್ನಾ ಭಾಟಿಯಾ (Tamannaah Bhatia) ಹೆಸರು ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯನ್ನು ಮಹಾರಾಷ್ಟ್ರ ಸೈಬರ್ ಸೆಲ್ (Maharashtra Cyber Cell ) ವಿಚಾರಣೆಗೆ ಕರೆಸಿದೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಆದೇಶ ನೀಡಲಾಗಿದೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಹೆಸರು ಕೂಡ ಈ ಮುಂಚೆ ಕೇಳಿಬಂದಿತ್ತು.

ಫೇರ್‌ಪ್ಲೇ ಆ್ಯಪ್‌ನಲ್ಲಿ (Fairplay App) ಐಪಿಎಲ್ 2023ರ ಅಕ್ರಮ ಸ್ಟ್ರೀಮಿಂಗ್‌ಗೆ ಸಂಬಂಧಿಸಿದಂತೆ ವಯಾಕಾಮ್‌ಗೆ ಕೋಟ್ಯಂತರ ರೂ. ನಷ್ಟ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸೈಬರ್ ಸೆಲ್‌ ನಟಿ ತಮನ್ನಾ ಭಾಟಿಯಾ ಅವರನ್ನು ವಿಚಾರಣೆಗೆ ಕರೆದಿದೆ. ಏಪ್ರಿಲ್ 29ರಂದು ಮಹಾರಾಷ್ಟ್ರ ಸೈಬರ್‌ಗೆ ಹಾಜರಾಗುವಂತೆ ನಟಿಗೆ ತಿಳಿಸಲಾಗಿದೆ ಎಂದು ಎಎನ್‌ಐ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಏಪ್ರಿಲ್ 23ರಂದು ನಟ ಸಂಜಯ್ ದತ್ ಅವರಿಗೂ ಈ ಸಂಬಂಧ ಸಮನ್ಸ್ ನೀಡಲಾಗಿತ್ತು. ಆದರೆ ಅವರು ಹಾಜರಾಗಿರಲಿಲ್ಲ. ತಾವು ಭಾರತದಲ್ಲಿ ಇಲ್ಲ ಎಂದು ವಿಚಾರಣೆಗೆ ಹಾಜಾರಾಗಲು ಹೊಸ ಡೇಟ್‌ ನೀಡಲು ಕೋರಿದ್ದರು.

ಇದನ್ನೂ ಓದಿ: Tamannaah Bhatia : ಪಾಕ್​ ಕ್ರಿಕೆಟಿಗ ರಜಾಕ್ ಜತೆ ಚಿನ್ನದ ಮಳಿಗೆಗೆ ಹೋದ ಕಹಿ ಘಟನೆ ನೆನೆದ ತಮನ್ನಾ

ಫೇರ್ ಪ್ಲೇ ಪ್ಲಾಟ್‌ಫಾರ್ಮ್ ಬೆಟ್ಟಿಂಗ್‌ ಅಪ್ಲಿಕೇಶನ್‌ ಆಗಿದೆ. ವಯಾಕಾಮ್‌ 18 ಐಪಿಎಲ್‌ ಅಧಿಕೃತ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಬೆಟ್ಟಿಂಗ್ ಅಪ್ಲಿಕೇಶನ್ ಫೇರ್ ಪ್ಲೇ ಪ್ಲಾಟ್‌ಫಾರ್ಮ್ ಅಕ್ರಮವಾಗಿ ಪಂದ್ಯಗಳನ್ನು ಸ್ಟ್ರೀಮ್ ಮಾಡುತ್ತಿದೆ ಎಂದು ವಯಾಕಾಮ್‌ ಎಫ್‌ಐಆರ್‌ ದಾಖಲಿಸಿತ್ತು . ವಯಾಕಾಮ್‌ 18ಗೆ 100 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ವರದಿಯಾಗಿದೆ. ಎಫ್‌ಐಆರ್ ದಾಖಲಿಸಿದ ಬಳಿಕ ಬಾದ್‌ಶಾ, ಸಂಜಯ್ ದತ್, ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ತಮನ್ನಾ ಸೇರಿದಂತೆ ಹಲವಾರು ತಾರೆಯರನ್ನು ವಿಚಾರಣೆಗೆ ಕರೆಯಲಾಯಿದೆ ಎಂದು ವರದಿಯಾಗಿದೆ. ಡಿಸೆಂಬರ್ 2023 ರಲ್ಲಿ, ಬೆಟ್ಟಿಂಗ್ ಅಪ್ಲಿಕೇಶನ್‌ನ ಉದ್ಯೋಗಿಯನ್ನು ಬಂಧಿಸಲಾಯಿತ್ತು.

Continue Reading

ಕ್ರೀಡೆ

IPL 2024: ಧೋನಿ, ಚೆನ್ನೈ ಪಂದ್ಯ ನೋಡಲು ದೆಹಲಿ ವರೆಗೂ ನಡೆದುಕೊಂಡು ಹೋಗುವೆ ಎಂದ ಶತಾಯುಷಿ ಅಭಿಮಾನಿ; ವಿಡಿಯೊ ವೈರಲ್​

IPL 2024: 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಧೋನಿಯನ್ನು(MS Dhoni) ಭೇಟಿ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಜತೆಗೆ ಚೆನ್ನೈ ಮತ್ತು ಧೋನಿಯನ್ನು ನೋಡಲು ದೆಹಲಿಯ ವರೆಗೂ ನಡೆದುಕೊಂಡೇ ಹೋಗುವೆ ಎಂದು ಹೇಳಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

VISTARANEWS.COM


on

IPL 2024
Koo

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಹಾಗೂ ಮಹೇಂದ್ರ ಸಿಂಗ್​ ಧೋನಿಯ ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಧೋನಿಯನ್ನು(MS Dhoni) ಭೇಟಿ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಜತೆಗೆ ಚೆನ್ನೈ ಮತ್ತು ಧೋನಿಯನ್ನು ನೋಡಲು ದೆಹಲಿಯ ವರೆಗೂ ನಡೆದುಕೊಂಡೇ ಹೋಗುವೆ ಎಂದು ಹೇಳಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ರಾಮದಾಸ್ ಅವರು ಕ್ರಿಕೆಟ್​ನ ಕಟ್ಟಾ ಅಭಿಮಾನಿಯಾಗಿದ್ದು ಇಂದಿಗೂ ಐಪಿಎಲ್ ಪಂದ್ಯಗಳನ್ನು ವೀಕ್ಷಿಸಲು ಸಮಯ ತೆಗೆದುಕೊಳ್ಳುತ್ತಾರೆ. ಬ್ರಿಟಿಷ್ ಮಿಲಿಟರಿಯ ಸೈನ್ಯದ ಭಾಗವಾಗಿದ್ದ ರಾಮದಾಸ್ ಕ್ರಿಕೆಟ್ ಆಡಲು ಹೆದರುತ್ತಿದ್ದರಂತೆ. ಆದರೆ ಸಿಎಸ್‌ಕೆ ಜರ್ಸಿ ಧರಿಸಿ ಟಿವಿ ಮುಂದೆ ಕುಳಿತು ಐಪಿಎಲ್ ಆಟವನ್ನು ನೋಡಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಮಗ ತಂದೆಯ ಬಳಿ ನೀವು ಎಂಎಸ್ ಧೋನಿಯನ್ನು ಭೇಟಿಯಾಗಲು ಬಯಸುತ್ತೀರಾ ಎಂದು ಕೇಳಿದಾಗ “ಓಹ್ ಹೌದು” ಎಂದಿದ್ದಾರೆ. ಸೂಪರ್ ಕಿಂಗ್ಸ್ ಒಳಗೊಂಡ ಐಪಿಎಲ್ ಪಂದ್ಯವನ್ನು ಮತ್ತು ಧೋನಿಯನ್ನು ನೋಡಲು ರಾಜಧಾನಿಗೆ ಪ್ರಯಾಣಿಸಲು ನೀವು ಸಿದ್ಧರಿದ್ದೀರಾ ಎಂದು ಕೇಳಿದಾಗ “ನಾನು ದೆಹಲಿಯವರೆಗೂ ನಡೆದುಕೊಂಡು ಹೋಗುತ್ತೇನೆ” ಎಂದು ರಾಮದಾಸ್ ಹೇಳಿದರು. 103 ವರ್ಷದ ಈ ಅಭಿಮಾನಿಯ ವಿಡಿಯೊ ವೈರಲ್​ ಆಗಿದೆ. ಮುಂದಿನ ಪಂದ್ಯದಲ್ಲಿ ಈ ಶತಾಯುಷಿ ಅಭಿಮಾನಿಗೆ ಚೆನ್ನೈ ಪಂದ್ಯ ವೇಳೆ ಕಾಣಿಸಿಕೊಂಡು ಧೋನಿಯನ್ನು ಭೇಟಿಯಾದರೂ ಅಚ್ಚರಿಯಿಲ್ಲ.

ಎಂ.ಎಸ್.ಧೋನಿ(MS Dhoni), ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

ಇದನ್ನೂ ಓದಿ IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾದ ಆರ್​ಸಿಬಿ

ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಕಳೆದ ವರ್ಷ ಮುಂಬೈಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿಯೇ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಕಳೆದ ಮುಂಬೈ ಮತ್ತು ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ನಡೆಸಿದ ವೇಳೆ ಕುಂಟುತಾ ನಡೆದಾಡಿದ ಫೋಟೊ ಮತ್ತು ವಿಡಿಯೊ ವೈರಲ್​ ಆಗಿತ್ತು. ಕಳೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯಗೆ ಹ್ಯಾಟ್ರಿಕ್​ ಸಿಕ್ಸರ್​ಗಳ ರುಚಿ ತೋರಿಸಿದ್ದರು. ವಯಸ್ಸು 42 ಆದರೂ, ತಮ್ಮ ಬ್ಯಾಟಿಂಗ್​ ಫಾರ್ಮ್​ ಮಾತ್ರ ಈ ಹಿಂದಿನಂತೆಯೇ ಇದೆ.​

Continue Reading
Advertisement
Lok Sabha Election 2024 vote for better future and 98 year old woman dies when returning officer arrives at home to cast her vote
ಪ್ರಮುಖ ಸುದ್ದಿ6 mins ago

Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

Horlicks Label
ದೇಶ8 mins ago

Horlicks Label: ಹಾರ್ಲಿಕ್ಸ್‌ ಇನ್ನು ಹೆಲ್ತ್‌ ಡ್ರಿಂಕ್ಸ್‌ ಅಲ್ಲ ಎಂದ ಹಿಂದುಸ್ತಾನ್‌ ಯುನಿಲಿವರ್;‌ ಕಾರಣ ಏನು?

Salaar Movie In star suvarna
ಕಿರುತೆರೆ10 mins ago

Salaar Movie: ಕಿರುತೆರೆಗೆ ಬಂದೇ ಬಿಡ್ತು ಬ್ಲಾಕ್ ಬಸ್ಟರ್ ಸಿನಿಮಾ ‘ಸಲಾರ್’!

Ranbir Kapoor trainer shares transformation Of Ranbir
ಬಾಲಿವುಡ್11 mins ago

Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

Road Accident in Chamarajanagar
ಚಾಮರಾಜನಗರ21 mins ago

Road Accident : ಶಾಸಕ ಎಆರ್ ಕೃಷ್ಣಮೂರ್ತಿ ಕಾರು ಅಪಘಾತ; ಚಲಿಸುತ್ತಿದ್ದಾಗಲೇ ಕಾರ್‌ ಟೈರ್‌ ಸ್ಫೋಟ

IPL 2024
ಕ್ರೀಡೆ36 mins ago

IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

gold rate today 34
ಚಿನ್ನದ ದರ40 mins ago

Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

Lok sabha election 2024
Lok Sabha Election 20241 hour ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

leopard Attack
ಕ್ರೀಡೆ1 hour ago

leopard Attack: ಚಿರತೆ ದಾಳಿ; ಜಿಂಬಾಬ್ವೆ ಮಾಜಿ ಕ್ರಿಕೆಟಿಗನಿಗೆ ತೀವ್ರ ಗಾಯ

Madhavi Latha
Lok Sabha Election 20241 hour ago

Kompella Madhavi Latha: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಆಸ್ತಿ ಎಷ್ಟಿದೆ ನೋಡಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌