1. ವೈಭವದ ಜಂಬೂ ಸವಾರಿಗೆ ಸಿಎಂ ಚಾಲನೆ; ರಾಜ ಬೀದಿಯಲ್ಲಿ ಚಾಮುಂಡಿ ವಿಲಾಸ
ಮೈಸೂರು: ಐತಿಹಾಸಿಕ 414ನೇ ದಸರಾ ಮಹೋತ್ಸವ (Mysore Dasara) ಅಂತಿಮ ಘಟ್ಟವನ್ನು ತಲುಪಿದೆ. ಮಂಗಳವಾರ (ಅಕ್ಟೋಬರ್ 24) ಸಂಜೆ 4.40ರಿಂದ 5ರವರೆಗೆ ಸಂದ ಶುಭ ಮೀನ ಲಗ್ನದಲ್ಲಿ (Meena Lagna) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಕುಳಿತಿರುವ ಮಾತೆ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಅರಮನೆ ಅಂಗಳದಲ್ಲಿ ಕ್ಯಾಪ್ಟನ್ ಅಭಿಮನ್ಯು (Captain Abhimanyu) ಹೊತ್ತು ತಂದ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿದ್ದ ತಾಯಿ ಚಾಮುಂಡೇಶ್ವರಿ ಮೂರ್ತಿಗೆ (Chamundeshwari Statue) ಸಮೀಪಿಸುತ್ತಿದ್ದಂತೆ ಪುಷ್ಪಾರ್ಚನೆ ಸಲ್ಲಿಸಿ, ದೇವಿಗೆ ಕೈಮುಗಿದರು. ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar), ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸಾಥ್ ನೀಡಿದರು. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: Mysore Dasara: ದಸರಾ ಸ್ತಬ್ಧಚಿತ್ರಗಳ ಮೆರವಣಿಗೆ; ಕರುನಾಡ ಕಲಾ ವೈಭವ ಅನಾವರಣ
ದಸರಾ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:
2. ಬೆಂಗಳೂರಿಗರಿಗೆ ಯಾವುದೇ ಕಾರಣಕ್ಕೂ ಭೂಮಿ ಮಾರಬೇಡಿ ಎಂದ ಡಿಕೆಶಿ!
ಕನಕಪುರ: ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಕನಕಪುರ ತಾಲೂಕಿನ ಈ ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಮನವಿ ಮಾಡಿದರು. ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ (Veerabhadra swamy temple) ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಕೆಎಂಎಫ್ ಡೇರಿ ಇದೆ, ಕನಕಪುರ ಪಟ್ಟಣವಾಗಿ ಇಲ್ಲಿಯ ತನಕ ಬೆಳೆಯಲಿದೆ. ಆದ್ದರಿಂದ, ಎಲ್ಲರಲ್ಲಿ ಮನವಿ ಮಾಡುತ್ತೇನೆ, ಭೂಮಿ ಮಾರಾಟ ಮಾಡಬೇಡಿʼʼ ಎಂದು ಹೇಳಿದರು. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಡಿಕೆಶಿ ಹೇಳಿಕೆಗೆ ಎಚ್‌ಡಿಕೆ ಆಕ್ಷೇಪ
3. ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು ದೇಶದ ಏಳಿಗೆ ಸಹಿಸಲ್ಲ; ಮೋಹನ್ ಭಾಗವತ್ ಆಕ್ರೋಶ
ಮುಂಬೈ: “ದೇಶದಲ್ಲಿ ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು ಭಾರತದ ಏಳಿಗೆಯನ್ನು ಸಹಿಸುತ್ತಿಲ್ಲ ಹಾಗೂ ಅವರು ಹಗೆತನವನ್ನು ಪಸರಿಸುತ್ತಿದ್ದಾರೆ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು. ವಿಜಯ ದಶಮಿ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಕಚೇರಿಯಲ್ಲಿ ಆಯೋಜಿಸಿದ್ದ ವಿಜಯ ದಶಮಿ ಉತ್ಸವದಲ್ಲಿ ಮಾತನಾಡುವ ವೇಳೆ ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳ ವಿರುದ್ಧ ಹರಿಹಾಯ್ದರು. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ದಿನಾಂಕ ಫಿಕ್ಸ್; ವಿಜಯ ದಶಮಿ ದಿನ ಮೋಹನ್ ಭಾಗವತ್ ಘೋಷಣೆ
4. ಗರ್ಭಿಣಿಯ ಹೊಟ್ಟೆ ಸೀಳಿ, ಭ್ರೂಣದ ರುಂಡ ಕತ್ತರಿಸಿದ ಹಮಾಸ್ ಉಗ್ರರು; ಇವರೆಂಥಾ ರಾಕ್ಷಸರು!
ಜೆರುಸಲೇಂ: ಹಮಾಸ್ ಉಗ್ರರು ಹಾಗೂ ಇಸ್ರೇಲ್ ಸೇನೆಯ ನಡುವಿನ ಸಮರವು (Israel Palestine War) 18ನೇ ದಿನಕ್ಕೆ ಕಾಲಿಟ್ಟಿದೆ. ಅದರಲ್ಲೂ, ಇಸ್ರೇಲ್‌ನಲ್ಲಿ ಮನೆ ಮನೆಗೆ ನುಗ್ಗಿ ಹಮಾಸ್ ಉಗ್ರರು (Hamas Terrorists) ಹತ್ಯೆ ಮಾಡುತ್ತಿದ್ದಾರೆ. ಇಸ್ರೇಲ್ ನಾಗರಿಕರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡು, ಅವರಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಗರ್ಭಿಣಿಯೊಬ್ಬರ ಹೊಟ್ಟೆ ಸೀಳಿದ ಹಮಾಸ್ ಉಗ್ರರು, ಭ್ರೂಣವನ್ನು ಹೊರತೆಗೆದು, ಅದರ ರುಂಡವನ್ನು ಕತ್ತರಿಸುವ ಮೂಲಕ ರಕ್ಕಸ ಕೃತ್ಯ ಎಸಗಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ:Israel Palestine War: ಹಮಾಸ್ ಉಗ್ರರನ್ನು ನಿರ್ನಾಮ ಮಾಡದೆ ಬಿಡಲ್ಲ; ಇಸ್ರೇಲ್ ಶಪಥ
5. ಮಳೆಯಾಟ ಬಂದ್; ಇನ್ನೆರಡು ದಿನ ಕರ್ನಾಟಕ ಸಿಕ್ಕಾಪಟ್ಟೆ Hot
ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರಲಿದೆ. ಮಲೆನಾಡು ಮತ್ತು ಕರಾವಳಿಯ ಪ್ರತ್ಯೇಕ ಕಡೆಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ (Rain News) ಮಳೆಯಾಗಲಿದೆ. ಉಳಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ.
6. ಬೆಂಗಳೂರಿಗರ ಉಸಿರು ಸೇರುತ್ತಿರುವ ವಿಷ ಗಾಳಿ!
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೆಮ್ಮದಿಯ ಉಸಿರಾಟಕ್ಕೂ ಇನ್ನು ಮುಂದೆ ಕಷ್ಟವಾಗಲಿದೆ. ಕಾರಣ ಗಾಳಿಯ ಮಾನದಂಡಕ್ಕಿಂತ ಐದು ಪಟ್ಟು ವಿಷ ಗಾಳಿಯನ್ನು ಜನರು (Air Pollution) ಸೇವಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ನಗರದ ಹಲವು ಭಾಗಗಳಲ್ಲಿ ಗಣನೀಯ ಮಟ್ಟದಲ್ಲಿ ವಾಯು ಹದಗೆಡುತ್ತಿದೆ. ಹಾಗಾದರೆ ನಗರದಲ್ಲಿನ ಮಾಲಿನ್ಯ ಪ್ರಮಾಣ ಹೇಗಿದೆ? ಯಾವ ಏರಿಯಾದಲ್ಲಿ ವಾಯುಮಾಲಿನ್ಯ (Bengaluru News) ಹೆಚ್ಚಾಗಿದೆ ಎಂಬುದರ ವಿವರ ಇಲ್ಲಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ.
7. ಪಾಕ್ ವಿರುದ್ಧ ಅಫಘಾನಿಸ್ತಾನದ ಗೆಲುವಿನಲ್ಲಿ ಭಾರತದ ಮಾಜಿ ಕ್ರಿಕೆಟಿಗನ ಕೈವಾಡ
ನವದೆಹಲಿ: ಅಕ್ಟೋಬರ್ 23 ರಂದು ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ (ICC World Cup 2023) ಅಫ್ಘಾನಿಸ್ತಾನವು ಪಾಕಿಸ್ತಾನವನ್ನು ಹೀನಾಯವಾಗಿ ನಂತರ ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮತ್ತು ಪಾಕಿಸ್ತಾನದ ಮಾಜಿ ನಾಯಕ ಶೋಯೆಬ್ ಮಲಿಕ್ ಅವರು ಅಫಘಾನಿಸ್ತಾನ ತಂಡದ ಮೆಂಟರ್ ಅಜಯ್ ಜಡೇಜಾ ಅವರನ್ನು ಶ್ಲಾಘಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: ಪಾಕ್ ಉಪಟಳಕ್ಕೆ ಗಡಿಪಾರಾದ ಆಫ್ಘನ್ನರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಅರ್ಪಿಸಿದ ಜದ್ರಾನ್
8. ಕದನ, ಬಿಕ್ಕಟ್ಟೇ ಎಲ್ಲ; ಚುನಾವಣೆಗೆ ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಇಲ್ಲ
ನವದೆಹಲಿ: 2024ರಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ (Lok Sabha Election 2024) ರಣಾಂಗಣ ಸಿದ್ಧವಾಗುತ್ತಿದೆ. ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ, ನರೇಂದ್ರ ಮೋದಿ (Narendra Modi) ಅವರ ವರ್ಚಸ್ಸು, ಎನ್‌ಡಿಎ ಮೈತ್ರಿಕೂಟದ ಒಗ್ಗಟ್ಟು ಸೇರಿ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಆದರೆ, ಶತಾಯ ಗತಾಯ ಬಿಜೆಪಿಯನ್ನು ಸೋಲಿಸಬೇಕು ಎಂಬ ದೃಷ್ಟಿಯಿಂದ 26 ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟದಲ್ಲಿ (INDIA Bloc) ಬಿಕ್ಕಟ್ಟು, ಗೊಂದಲ, ಒಮ್ಮತದ ಅಭಿಪ್ರಾಯದ ಕೊರತೆಯಿಂದಾಗಿ ಇದುವರೆಗೆ ಸೀಟು ಹಂಚಿಕೆಯ ಬಗ್ಗೆಯೇ ತೀರ್ಮಾನವಾಗಿಲ್ಲ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ.
9. ಗೌರೀಶ್ ಅಕ್ಕಿ ಪ್ರಕಾರ ಈ ಬಾರಿ ಬಿಗ್ ಬಾಸ್ ವಿನ್ನರ್ ಇವರೇ..; ಯಾರವರು?
ಎಲ್ಲವೂ ಇತ್ತು ಅಲ್ಲಿ… ಊಟ ಇತ್ತು, ನಿದ್ರೆ ಇತ್ತು, ಆಟ ಇತ್ತು, ಸ್ಪರ್ಧಿಗಳಿದ್ದರು, ಜನ ಇದ್ರು ಎಲ್ಲಾನೂ ಇತ್ತು. ಆದ್ರೆ ಅಲ್ಲಿ ಒಂದೇ ಒಂದು ಇರ್ಲಿಲ್ಲ. ಅದು ಸ್ವಾತಂತ್ರ್ಯ! ಕಂಡೀಷನ್ಡ್ ಸ್ವಾತಂತ್ರ್ಯ ಇದೆ ಅಲ್ಲಿ. ಅದ್ರ ಬ್ಯೂಟಿನೇ ಅದು’- ಹೀಗೆಂದವರು ಬೇರೆ ಯಾರೂ ಅಲ್ಲ. ಕಳೆದ ವಾರ ಬಿಗ್‌ಬಾಸ್ ಮನೆಯಿಂದ (BBK Season 10) ಹೊರಬಿದ್ದ ಹಿರಿಯ ಪತ್ರಕರ್ತ, ನಿರ್ದೇಶಕ ಗೌರೀಶ ಅಕ್ಕಿ (Gowrish Akki). ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ.
10. ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿರಲು ಇಷ್ಟು ವಯಸ್ಸು ಆಗಿರಲೇಬೇಕು, ಹೈಕೋರ್ಟ್ ಆದೇಶ
ಲಖನೌ: 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿರುವುದು (Live In Relationship) ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 19 ವರ್ಷದ ಯುವತಿಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ 17 ವರ್ಷದ ಬಾಲಕನ ವಿರುದ್ಧ ದಾಖಲಾದ ಪ್ರಕರಣದಲ್ಲಿ ಭದ್ರತೆ ನೀಡಬೇಕು ಎಂದು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿರಲು 18 ವರ್ಷ ವಯಸ್ಸಾಗಿರಲೇಬೇಕು ಎಂದು ಸ್ಪಷ್ಟಪಡಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ.