ಬೆಂಗಳೂರು: ಕಳೆದ ವರ್ಷ ಚೀನಾದ ಹ್ಯಾಂಗ್ ಝೂನಲ್ಲಿ ನಡೆದಿದ್ದ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಪದಕ ಗೆದ್ದ ಕರ್ನಾಟಕದ ಗಾಲ್ಫರ್ ಅದಿತಿ ಅಶೋಕ್(Aditi Ashok), ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿಯೂ(Paris Olympics) ಪದಕವೊಂದನ್ನು ಗೆಲ್ಲಲಿದ್ದಾರೆ ಎಂದು ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್(Kapil Dev) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿಯೂ ಅದಿತಿ ಅಮೋಘ ಪ್ರದರ್ಶನ ತೋರಿ 4 ನೇ ಸ್ಥಾನ ಗಳಿಸಿ ದೇಶದ ಗಮನ ಸೆಳೆದಿದ್ದರು. ಈ ಬಾರಿ ಐತಿಹಾಸಿಕ ಪದಕ ಗೆಲ್ಲುವುದು ಖಚಿರ ಎಂದು ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಹೇಳಿದ್ದಾರೆ. ಪ್ರೊಫೆಷನಲ್ ಗಾಲ್ಫ್ ಟೂರ್ ಆಫ್ ಇಂಡಿಯಾ (ಪಿಜಿಟಿಐ) ಅಧ್ಯಕ್ಷರಾಗಿರುವ ಕಪಿಲ್, ಸಂದರ್ಶನದಲ್ಲಿ ಮಾತನಾಡುವ ವೇಳೆ ಈ ವಿಚಾರವನ್ನು ಹೇಳಿದ್ದಾರೆ.
ಇದನ್ನೂ ಓದಿ Kapil Dev Birthday: 65ನೇ ವಸಂತಕ್ಕೆ ಕಾಲಿಟ್ಟ ಚೊಚ್ಚಲ ವಿಶ್ವಕಪ್ ಹೀರೋ ಕಪಿಲ್ ದೇವ್
‘ಅದಿತಿಯವರು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ತೋರಿದ್ದ ದಿಟ್ಟತನದ ಆಟವನ್ನು ಪ್ಯಾರಿಸ್‌ನಲ್ಲಿಯೂ ಮತ್ತೊಮ್ಮೆ ತೋರುವ ವಿಶ್ವಾಸ ನನಗಿದೆ. ಅವರು ತಮ್ಮ ನೈಜ ಲಯದಲ್ಲಿ ಆಡಿದರೆ ಪದಕ ನಿಶ್ಚಿತ’ ಎಂದಿದ್ದಾರೆ. ಬೆಂಗಳೂರಿನ ಅದಿತಿ ಅಶೋಕ್ ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದು ಈ ಕ್ರೀಡಾಕೂಟದ ಗಾಲ್ಫ್ ಕ್ರೀಡೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ದಾಖಲೆ ಬರೆದಿದ್ದರು. ಕಪಿಲ್ ಅವರ ಭವಿಷ್ಯದಂತೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿಯೂ ಅವರು ಪದಕ ಗೆಲ್ಲುವಂತಾಗಲಿ ಎನ್ನುವುದು ಎಲ್ಲರ ಹಾರೈಕೆ.
ನಾಲ್ಕು ಮಂದಿಯ ಭಾರತದ ಗಾಲ್ಫ್ ತಂಡದಲ್ಲಿ 24ನೇ ರ್‍ಯಾಂಕ್‌ನೊಡನೆ ಅದಿತಿ ಅರ್ಹತೆ ಪಡೆದರೆ, ದೀಕ್ಷಾ 40ನೇ ರ್‍ಯಾಂಕ್‌ನೊಡನೆ ಅವಕಾಶ ಪಡೆದರು. ಪುರುಷರ ವಿಭಾಗದಲ್ಲಿ ಅಗ್ರಮಾನ್ಯ ಗಾಲ್ಫರ್ ಶುಭಂಕರ್ ಶರ್ಮಾ ಮತ್ತು ಗಗನ್‌ಜೀತ್ ಭುಲ್ಲರ್ ಈಗಾಗಲೇ ಅರ್ಹತೆ ಪಡೆದಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಕ್ರೀಡಾಕೂಟ ಜುಲೈ 26ರಿಂದ ಆರಂಭವಾಗಿ, ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಾಲಿಂಪಿಕ್ಸ್ ಆಗಸ್ಟ್ 28 ರಿಂದ ಸೆಪ್ಟೆಂಬರ್ 8ರವರೆಗೆ ನಿಗದಿಯಾಗಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.
ಒಲಿಂಪಿಕ್ಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್ ವರೆಗೆ ಬೋಟ್‌ಗಳಲ್ಲೇ ಪರೇಡ್ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.