ನವದೆಹಲಿ: ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಆಟಗಾರ ಕೆವಿನ್ ಪೀಟರ್ಸನ್(Kevin Pietersen) ಅವರು ಪ್ರಧಾನಿ ನರೇಂದ್ರ ಮೋದಿ(PM Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರನ್ನು ಭೇಟಿ ಮಾಡಿದ್ದಾರೆ. ಉಭಯ ರಾಜಕೀಯ ನಾಯಕರನ್ನು ಭೇಟಿಯಾದ ಫೋಟೊವನ್ನು ಪೀಟರ್ಸನ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಶನಿವಾರದಿಂದ(ಮಾರ್ಚ್ 4) ಮುಂಬೈಯಲ್ಲಿ ಆರಂಭವಾಗಲಿರುವ ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ವೀಕ್ಷಕ ವಿವರಣೆ ಮಾಡಲು ಪೀಟರ್ಸನ್ ಭಾರತಕ್ಕೆ ಬಂದಿದ್ದಾರೆ. ಇದೇ ವೇಳೆ ಅವರು ಫ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ
ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಫೋಟೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡ ಪೀಟರ್ಸನ್ “ನಿಮ್ಮನ್ನು ಭೇಟಿಯಾಗಿರುವುದು ನನ್ನ ಜೀವನದ ಸ್ಮರಣೀಯ ನೆನಪುಗಳಲ್ಲಿ ಒಂದಾಗಲಿದೆ. ನಿಮ್ಮ ಈ ನಗು ಮತ್ತು ನೀವು ಅತಿಥಿಗಳನ್ನು ಸ್ವಾಗತಿಸುವ ರೀತಿ ನನಗೆ ತುಂಬಾ ಇಷ್ಟ” ಎಂದು ಪೀಟರ್ಸನ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ WPL 2023: ಮಹಿಳಾ ಪ್ರೀಮಿಯರ್ ಲೀಗ್ನ 5 ತಂಡಗಳ ಮಾಹಿತಿ
ನರೇಂದ್ರ ಮೋದಿ ಮತ್ತು ಅಮಿತ್ ಅವರನ್ನು ಕೆವಿನ್ ಪೀಟರ್ಸನ್ ಭೇಟಿಯಾದ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.