Site icon Vistara News

IND vs ENG: ರಾಂಚಿ ಟೆಸ್ಟ್​ ಪಂದ್ಯಕ್ಕೆ ಖಲಿಸ್ತಾನಿ ಉಗ್ರನಿಂದ ಬೆದರಿಕೆ; ಸ್ಟೇಡಿಯಂಗೆ ಬಿಗಿ ಭದ್ರತೆ!

Gurpatwant Singh Pannun

ರಾಂಚಿ: ಭಾರತ ಮತ್ತು ಇಂಗ್ಲೆಂಡ್​(India vs England 4th test) ನಡುವೆ ಫೆ.23ರಿಂದ ರಾಂಚಿಯಲ್ಲಿ ಆರಂಭಗೊಳ್ಳಲಿರುವ ನಾಲ್ಕನೇ ಟೆಸ್ಟ್​ ಪಂದ್ಯವನ್ನು(IND vs ENG) ರದ್ದು ಮಾಡುವಂತೆ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಬೆದರಿಕೆಯೊಡ್ಡಿದ್ದಾನೆ. ಸಿಪಿಐ (ಮಾವೋವಾದಿ)ಗೆ ಗಲಭೆ ಸೃಷ್ಟಿಸುವಂತೆ ವಿಡಿಯೊ ಮೂಲಕ ಒತ್ತಾಯಿಸಿದ್ದಾನೆ.

ಭಾರತ ಮತ್ತು ಇಂಗ್ಲೆಂಡ್ ಆಟಗಾರರು ಈಗಾಗಲೇ ರಾಂಚಿ ತಲುಪಿದ್ದು ಅಭ್ಯಾಸ ಕೂಡ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಗುರುಪತ್ವಂತ್ ಸಿಂಗ್ ಬೆದರಿಕೆ ಹಾಕಿದ್ದಾನೆ. ಈ ಬೆದರಿಕೆಯ ಹಿನ್ನೆಲೆಯಲ್ಲಿ ಜಾರ್ಖಂಡ್ ಪೊಲೀಸರು ಅಲರ್ಟ್ ಆಗಿದ್ದು ಪಂದ್ಯ ನಡೆಯುವ ಜೆಎಸ್​ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣ(JSCA International Stadium Complex, Ranchi) ಸಂಕೀರ್ಣದಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಿದ್ದಾರೆ ಮಾಡಿದ್ದಾರೆ. ಜತೆಗೆ ಪ್ರಚೋಧನೆ ನೀಡಿರುವ ಗುರುಪತ್ವಂತ್ ವಿರುದ್ಧ ದೂರ್ವಾ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣದ ಬಗ್ಗೆ ಪಿಟಿಐಗೆ ಮಾಹಿತಿ ನೀಡಿರುವ ಇಲ್ಲಿನ ಡಿಎಸ್ಪಿ ಪಿ.ಕೆ.ಮಿಶ್ರಾ, ಪಂದ್ಯಕ್ಕೆ ಯಾರು ಅಡ್ಡಿಪಡಿಸದಂತೆ ಸಂಪೂರ್ಣ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಯಾರಿಗೂ ಭಯ ಬೇಡ. ಗುರುಪತ್ವಂತ್ ಸಿಂಗ್ ಈ ರೀತಿಯ ಬೆದರಿಕೆ ಒಡ್ಡುತ್ತಿರುವುದು ಇದೇ ಮೊದಲೆನಲ್ಲ. ಇದಕ್ಕೂ ಮುನ್ನ ಹಲವು ಬಾರಿ ಈ ರೀತಿಯ ಬೆದರಿಕೆ ಹಾಕಿದ್ದಾನೆ. ಈ ಹಿಂದೆ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಬೆದರಿಕೆಯೊಡ್ಡಿದ್ದ. ಈ ಕಾರಣಕ್ಕಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಆತನ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ Ind vs Eng : ನಾಲ್ಕನೇ ಟೆಸ್ಟ್​ಗೆ ಜಸ್​ಪ್ರಿತ್ ಬುಮ್ರಾ ಬಿಡುಗಡೆ ​, ರಾಹುಲ್ ಔಟ್​

ಇದಕ್ಕೂ ಮೊದಲು ಪನ್ನುನ್ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೇ ಬೆದರಿಕೆ ಹಾಕಿದ್ದ. ಡಿಸೆಂಬರ್ 30ರಂದು ಪ್ರಧಾನಿಯವರ ಅಯೋಧ್ಯೆ ರೋಡ್‌ಶೋ ಅನ್ನು ಹಾಳುಗೆಡಹುವಂತೆ ಮುಸ್ಲಿಮರನ್ನು ಪ್ರಚೋದಿಸಲು ಯತ್ನಿಸಿದ್ದ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Punjab CM Bhagwant Mann) ಮತ್ತು ಡಿಜಿಪಿ ಗೌರವ್ ಯಾದವ್ ಅವರನ್ನು ಕೂಡ ಕೊಲ್ಲುವುದಾಗಿಯೂ ಬೆದರಿಕೆ ಹಾಕಿದ್ದ. ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವದಂದು ಸಿಎಂ ಮಾನ್ ಮೇಲೆ ದಾಳಿ ಮಾಡಲು ಒಟ್ಟಾಗುವಂತೆ ಪನ್ನುನ್‌, ಇತರ ಖಲಿಸ್ತಾನಿ ಗ್ಯಾಂಗ್‌ಸ್ಟರ್‌ಗಳಿಗೆ ಕರೆ ನೀಡಿದ್ದ.

ಜನವರಿ 22ರಂದು ಅಯೋಧ್ಯೆ ರಾಮ ಮಂದಿರದ (Ayodhya Ram Mandir) ಶಂಕುಸ್ಥಾಪನೆ ಸಮಾರಂಭದಲ್ಲಿ ವಿಧ್ವಂಸಕ ಕೃತ್ಯ ಎಸಗುವುದಾಗಿ ಬೆದರಿಕೆ ಹಾಕಿದ್ದ. ʼಬಾಬರಿ ಮಸೀದಿಯನ್ನು ನಾಶ ಮಾಡಿ ನಿರ್ಮಿಸಲಾದ ಸಮಾರಂಭವನ್ನು ವಿರೋಧಿಸಿʼ ಎಂದು ಕೂಡ ಈತ ಮುಸ್ಲಿಂ ಸಮುದಾಯವನ್ನು ಒತ್ತಾಯಿಸಿದ್ದಾನೆ. ಹತರಾದ ಸಾವಿರಾರು ಮುಸ್ಲಿಮರ ದೇಹಗಳ ಮೇಲೆ ದೇವಾಲಯವನ್ನು ನಿರ್ಮಿಸಲಾಗಿದೆ ಎಂದಿದ್ದಾನೆ ಆತ. ಪ್ರಧಾನಿ ನರೇಂದ್ರ ಮೋದಿ (pm narendra modi) ಅವರನ್ನು ಪನ್ನುನ್‌ ʼಮುಸ್ಲಿಮರ ಜಾಗತಿಕ ಶತ್ರುʼ ಎಂದು ಕರೆದಿದ್ದ.

ಗುರುಪತ್ವಂತ್ ಸಿಂಗ್ ಪನ್ನುನ್ ಅವರು ಸಿಖ್ಸ್ ಫಾರ್ ಜಸ್ಟಿಸ್ (SFJ) ಎಂಬ ಪ್ರತ್ಯೇಕತಾವಾದಿ ಸಂಘಟನೆಯ ಸಂಸ್ಥಾಪಕರಲ್ಲಿ ಒಬ್ಬನಾಗಿದ್ದಾನೆ. 2007 ರಲ್ಲಿ ಸ್ಥಾಪಿತವಾದ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯನ್ನು ಭಾರತ ಸರ್ಕಾರ 2019 ರಲ್ಲಿ ನಿಷೇಧಿಸಿತು. ಅಂದಿನಿಂದ ಪನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ ಕಣ್ಗಾವಲಿನಲ್ಲಿದ್ದ. ಕಾನೂನುಬಾಹಿರ ಚಟುವಟಿಕೆಗಳ ಕಾಯಿದೆಯಡಿ 2020 ರಲ್ಲಿ ಭಾರತ ಸರ್ಕಾರವು ಪನ್ನುವನ್ನು ಭಯೋತ್ಪಾದಕ ಎಂದು ಘೋಷಿಸಿತು. ಹೊರಡಿಸಿತು.

Exit mobile version