Site icon Vistara News

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

KKR vs SRH Final 2024

KKR vs SRH Final 2024: Who Will Win IPL 2024 Final?

ಚೆನ್ನೈ: ಈ ಬಾರಿಯ ಐಪಿಎಲ್​ನ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಮುಖಾಮುಖಿಯಾಗಿದ್ದ ಸನ್​ರೈಸರ್ಸ್​ ಹೈದರಾಬಾದ್(KKR vs SRH Final 2024)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) ತಂಡಗಳು ಮತ್ತೊಮ್ಮೆ ಸೆಣಸಾಟ ನಡೆಸಲು ಸಜ್ಜಾಗಿದೆ. ನಾಳೆ (ಭಾನುವಾರ) ನಡೆಯುವ ಫೈನಲ್​ ಪಂದ್ಯದಲ್ಲಿ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.

ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್(Sunrisers Hyderabad)​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಲಕ್ಕಿ ಕ್ಯಾಪ್ಟನ್​ ಕಮಿನ್ಸ್​


ಆಸ್ಟ್ರೇಲಿಯಾದ ನಾಯಕನಾಗಿರುವ ಪ್ಯಾಟ್​ ಕಮಿನ್ಸ್​ 2 ವಿಶ್ವಕಪ್​ ಗೆದ್ದ ನಾಯಕ. ಅದು ಕೂಡ ಚೊಚ್ಚಲ ಪ್ರಯತ್ನದಲ್ಲೇ ಈ ಸಾಧನೆ ಮಾಡಿದ್ದಾರೆ. ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವರು ಟ್ರೋಫಿ ಗೆದ್ದಿದ್ದಾರೆ. ಹೀಗಾಗಿ ಇವರು ಹೈದರಾಬಾದ್​ಗೂ ತಮ್ಮ ನಾಯಕತ್ವದಲ್ಲಿ ಕಪ್​ ಗೆಲ್ಲಬಹುದು ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ನಂಬಿಕೆ. ಮೊತ್ತೊಂದೆಡೆ ಆಸ್ಟ್ರೇಲಿಯಾ ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಗೆಲುವಿನ ಹೀರೊ ಎನಿಸಿಕೊಂಡಿದ್ದ ಟ್ರಾವಿಸ್​ ಹೆಡ್​ ಕೂಡ ಹೈದರಾಬಾದ್​ ತಂಡದಲ್ಲಿದ್ದಾರೆ. ಹೀಗಾಗಿ ಫೈನಲ್​ನಲ್ಲಿಯೂ ಇವರ ಸ್ಫೋಟಕ ಬ್ಯಾಟಿಂಗ್​ ನಿರೀಕ್ಷೆ ಮಾಡಲಾಗಿದೆ.

ಕೆಕೆಆರ್​ ಪಾಲಿನ ದೊಡ್ಡ ಬಲವೆಂದರೆ ಆಟಗಾರರ ಸಂಘಟಿತ ಪ್ರದರ್ಶನ. ಬ್ಯಾಟಿಂಗ್​, ಬೌಲಿಂಗ್​ ಎರಡೂ ವಿಭಾಗದಲ್ಲಿ ಸಮರ್ಥವಾಗಿದೆ. ಸೀಮಿತ ಆಗಾರರ ಪ್ರದರ್ಶನದ ಮೇಲೆ ತಂಡ ನೆಚ್ಚಿಕೊಂಡಿಲ್ಲ. ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದರೂ ಕೂಡ ಇವರ ಸ್ಥಾನದಲ್ಲಿ ಕಳೆದ ಪಂದ್ಯದಲ್ಲಿ ಆಡಲಿಳಿದಿದ್ದ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದರು. ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

ಇದನ್ನೂ ಓದಿ IPL Final 2024: ಫೈನಲ್​ನಲ್ಲಿ ಕೆಕೆಆರ್​ ಗೆಲ್ಲಬಹುದು ಎಂದು ಭವಿಷ್ಯ ನುಡಿದ ಕರುನಾಡ ಕ್ರಿಕೆಟಿಗ

ಗಾಯದಿಂದ ಚೇತರಿಕೆ ಕಂಡು ಕಮ್​ಬ್ಯಾಕ್​ ಮಾಡಿರುವ ನಿತೇಶ್​ ರಾಣಾ, ವೆಂಕಟೇಶ್​ ಅಯ್ಯರ್​ ಮತ್ತು ನಾಯಕ ಶ್ರೇಯಸ್​ ಅಯ್ಯರ್​ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ನೆರವು ನೀಡಲಿದ್ದಾರೆ. 24 ಕೋಟಿ ವೀರ ಮಿಚೆಲ್​ ಸ್ಟಾರ್ಕ್​ ಲೀಗ್​ ಹಂತದ ಪಂದ್ಯದಲ್ಲಿ ವಿಫಲರಾಗಿದ್ದರೂ ಕೂಡ ಮಹತ್ವದ ಕ್ವಾಲಿಫೈಯರ್​ ಪಂದ್ಯದಲ್ಲಿ ಘಾತಕ ದಾಳಿ ನಡೆಸಿ ಮಿಂಚಿದ್ದರು. ಹೀಗಾಗಿ ಫೈನಲ್​ನಲ್ಲಿಯೂ ಇದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ.

ಸಂಭಾವ್ಯ ತಂಡಗಳು


ಹೈದರಾಬಾದ್​:
 ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Exit mobile version