KKR vs SRH: ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ: ಅಯ್ಯರ್​-ಕಮಿನ್ಸ್​ ಪಡೆಗಳ ಫೈನಲ್‌ ರೇಸ್‌ - Vistara News

ಕ್ರೀಡೆ

KKR vs SRH: ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ: ಅಯ್ಯರ್​-ಕಮಿನ್ಸ್​ ಪಡೆಗಳ ಫೈನಲ್‌ ರೇಸ್‌

KKR vs SRH: ಆಸ್ಟ್ರೇಲಿಯಾದ ಎಡಗೈ ಬ್ಯಾಟರ್​ ಟ್ರಾವಿಸ್​ ಹೆಡ್​ ಇದೇ ಸ್ಟೇಡಿಯಂನಲ್ಲಿ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಶತಕದ ಆಟವಾಡುವ ಮೂಲಕ ಭಾರತದ ಗೆಲುವನ್ನು ಕಸಿದಿದ್ದರು. ಹೀಗಾಗಿ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿಯೂ ಅವರ ಬ್ಯಾಟಿಂಗ್​ ಮೇಲೆ ಭಾರೀ ನಿರೀಕ್ಷೆ ಇರಿಸಲಾಗಿದೆ

VISTARANEWS.COM


on

KKR vs SRH
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​: 17ನೇ ಆವೃತ್ತಿಯ ಐಪಿಎಲ್​ನ(IPL 2024) ಮೊದಲ ಕ್ವಾಲಿಫೈಯರ್(KKR vs SRH) ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಪಂದ್ಯದಲ್ಲಿ ಕೆಕೆಆರ್​(Kolkata Knight Riders) ಮತ್ತು ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡಗಳು ಕಾದಾಟ ನಡೆಸಲಿದೆ. ಇತ್ತಂಡಗಳ ಈ ಹೋರಾಟಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ ಅಣಿಯಾಗಿದೆ. ಸೋಮವಾರ ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳವು (ATS) ಅಹಮದಾಬಾದ್‌ ಏರ್‌ಪೋರ್ಟ್‌ನಲ್ಲಿ ನಾಲ್ವರು ಐಸಿಸ್‌ ಉಗ್ರರನ್ನು (ISIS Terrorists) ಬಂಧಿಸಿತ್ತು. ಹೀಗಾಗಿ ಇಂದಿನ ಪಂದ್ಯಕ್ಕೆ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಇತ್ತಂಡಗಳಲ್ಲಿ ಕೆಕೆಆರ್​ ಲೀಗ್‌ ಹಂತದ ಅಗ್ರಸ್ಥಾನಿ ಎಂಬ ಹೆಗ್ಗಳಿಕೆ ಇದೆ. ಅಷ್ಟೇ ಅಲ್ಲ, ಲೀಗ್‌ ಹಂತದಲ್ಲಿ ಎದುರಾದ ಒಂದು ಪಂದ್ಯಗಳಲ್ಲಿ ಹೈದರಾಬಾದ್​ಗೆ 4 ರನ್​ ಅಂತರದ ಸೋಲುಣಿಸಿದ ಹಿರಿಮೆಯನ್ನೂ ಹೊಂದಿದೆ. ಜತೆಗೆ ಉಭಯ ತಂಡಗಳು 26 ಬಾರಿ ಮುಖಾಮುಖಿಯಾಗಿದ್ದು ಈ ಪೈಕಿ ಕೆಕೆಆರ್​ 17 ಪಂದ್ಯ ಗೆದ್ದಿದೆ. ಹೈದರಾಬಾದ್​ ಗೆದ್ದಿರುವುದು ಕೇವಲ 9 ಪಂದ್ಯ ಮಾತ್ರ. ಈ ಲೆಕ್ಕಾಚಾರದಲ್ಲಿ ಕೆಕೆಆರ್​ ನೆಚ್ಚಿನ ತಂಡ ಎಂಬುದರಲ್ಲಿ ಅನುಮಾನವಿಲ್ಲ.

ಹೆಡ್​-ಅಭಿಷೇಕ್​ ಮೇಲೆ ಭಾರೀ ನಿರೀಕ್ಷೆ


ಆಸ್ಟ್ರೇಲಿಯಾದ ಎಡಗೈ ಬ್ಯಾಟರ್​ ಟ್ರಾವಿಸ್​ ಹೆಡ್​ ಇದೇ ಸ್ಟೇಡಿಯಂನಲ್ಲಿ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಶತಕದ ಆಟವಾಡುವ ಮೂಲಕ ಭಾರತದ ಗೆಲುವನ್ನು ಕಸಿದಿದ್ದರು. ಹೀಗಾಗಿ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿಯೂ ಅವರ ಬ್ಯಾಟಿಂಗ್​ ಮೇಲೆ ಭಾರೀ ನಿರೀಕ್ಷೆ ಇರಿಸಲಾಗಿದೆ. ಜತೆಗೆ 25 ವರ್ಷದ ಎಡಗೈ ದಾಂಡಿಗ ಅಭಿಷೇಕ್​ ಶರ್ಮ ಬ್ಯಾಟಿಂಗ್​ ಮೇಲು ತಂಡ ಹೆಚ್ಚಿನ ನಂಬಿಕೆ ಇರಿಸಿದೆ.

ಈ ಆವೃತ್ತಿಯ ಐಪಿಎಲ್​ನಲ್ಲಿ ಹೆಡ್ ಮತ್ತು ಅಭಿಷೇಕ್​ ​​ ಜಿದ್ದಿಗೆ ಬಿದ್ದವತರಂತೆ ಬ್ಯಾಟ್​ ಬೀಸಿ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಈ ಜೋಡಿ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರುವುದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಈ ಜೋಡಿ ಲೀಗ್​ನಲ್ಲಿ ಅಬ್ಬರದ ಬ್ಯಾಟಿಂಗ್​ ನಡೆಸಿ 5 ಓವರ್​ನಲ್ಲಿಯೇ 100ರ ಗಡಿ ದಾಟಿದ ದಾಖಲೆಯನ್ನು ಕೂಡ ಹೊಂದಿದ್ದಾರೆ. ಅಭಿಷೇಕ್​ ಶರ್ಮ ಈ ಬಾರಿಯ ಕೂಟದಲ್ಲಿ 41 ಸಿಕ್ಸರ್​ ಬಾರಿಸಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್​ ಕ್ಲಾಸೆನ್​, ಐಡೆನ್​ ಮಾರ್ಕ್ರಮ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಬೌಲಿಂಗ್​ನಲ್ಲಿ ನಾಯಕ ಪ್ಯಾಟ್​ ಕಮಿನ್ಸ್​, ಭುವನೇಶ್ವರ್​ ಕುಮಾರ್​, ಟಿ. ನಟರಾಜನ್​ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಸಮರ್ಥರಿದ್ದಾರೆ.

ಕೆಕೆಆರ್​ ಕೂಡ ಸಮರ್ಥ ತಂಡ


ಗೌತಮ್​ ಗಂಭಿರ್​ ಅವರ ಮಾರ್ಗದರ್ಶನ ಮತ್ತು ಆಟಗಾರರ ಸಂಘಟಿತ ಪ್ರದರ್ಶನ ಕೆಕೆಆರ್​ ಪಾಲಿನ ಬಲ. ಅದರಲ್ಲೂ ಆಲ್​ರೌಂಡರ್​ ಸುನೀಲ್​ ನರೈನ್​ ಅವರಂತು ಈ ಬಾರಿ ಪ್ರಚಂಡ ಫಾರ್ಮ್​ನಲ್ಲಿದ್ದಾರೆ. ತಂಡಕ್ಕೆ ಹಿನ್ನಡೆಯಾಗಿರುವುದೆಂದರೆ ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದು. ಹೀಗಾಗಿ ಅವರ ತಂಡ ಇವರ ಸೇವೆ ಕಳೆದುಕೊಂಡಿದೆ. ಇವರ ಸ್ಥಾನದಲ್ಲಿ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಈ ಪಂದ್ಯದಲ್ಲಿ ಆಡಲಿದ್ದಾರೆ. ಮೊದಲ ಪಂದ್ಯವನ್ನಾಡುತ್ತಿರುವ ಕಾರಣ ಅವರ ಫಾರ್ಮ್​ ಹೇಗಿರಲಿದೆ ಎನ್ನುವುದು ಕೂಡ ಇಲ್ಲಿ ಮುಖ್ಯವಾಗಿದೆ.

ಇದನ್ನೂ ಓದಿ KKR vs SRH: ಕೆಕೆಆರ್​-ಹೈದರಾಬಾದ್​ ಕ್ವಾಲಿಫೈಯರ್​ ಪಂದ್ಯದ ಹವಾಮಾನ ವರದಿ ಹೇಗಿದೆ?

ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರಿದ್ದಾರೆ. ಯುವ ಆಟಗಾರ ಆಂಗ್ಕ್ರಿಶ್ ರಘುವಂಶಿ, ಗಾಯದಿಂದ ಚೇತರಿಕೆ ಕಂಡು ಕಮ್​ಬ್ಯಾಕ್​ ಮಾಡಿರುವ ನಿತೇಶ್​ ರಾಣಾ, ವೆಂಕಟೇಶ್​ ಅಯ್ಯರ್​ ಮತ್ತು ನಾಯಕ ಶ್ರೇಯಸ್​ ಅಯ್ಯರ್​ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ನೆರವು ನೀಡಲಿದ್ದಾರೆ. ರಿಂಕು ಸಿಂಗ್​ ಕಳೆದ ಆವೃತ್ತಿಯಲ್ಲಿ ತೋರಿದ ಪ್ರದರ್ಶನ ಇದುವರೆಗೂ ತೋರಿಲ್ಲ. ಹೀಗಾಗಿ ಈ ಮಹತ್ವದ ಪಂದ್ಯದಲ್ಲಿ ಅವರು ಅಬ್ಬರಿಸುವ ಅನಿವಾರ್ಯತೆ ಇದೆ. 24 ಕೋಟಿ ವೀರ ಮಿಚೆಲ್​ ಸ್ಟಾರ್ಕ್​ ಈ ಪಂದ್ಯದಲ್ಲಾದರೂ ತಾವು ಪಡೆದ ಈ ಮೊತ್ತಕ್ಕೆ ನ್ಯಾಯ ಒದಗಿಸಲೇ ಬೇಕು. ದುಬಾರಿ ಮೊತ್ತ ಪಡೆದರೂ ಕೂಡ ಅವರಿಂದ ನಿರೀಕ್ಷಿತ ಪ್ರದರ್ಶನ ಕಂಡುಬಂದಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs BAN: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ

IND vs BNG: ನಾಯಕ ರೋಹಿತ್​ ಮತ್ತು ಕೊಹ್ಲಿ(Virat Kohli) ಜೋಡಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ವಿಫಲರಾಗಿದ್ದಾರೆ. ಹೀಗಾಗಿ ಕೊಹ್ಲಿ ಬದಲು ರೋಹಿತ್​ ಮತ್ತು ಜೈಸ್ವಾಲ್​ ಆರಂಭಿಕರಾಗಿ ಆಡುವ ಸಾಧ್ಯತೆ ಇದೆ. ಜೈಸ್ವಾಲ್​ ವಿಂಡೀಸ್​ ನೆಲದಲ್ಲಿ ಉತ್ತಮ ಬ್ಯಾಟಿಂಗ್​ ದಾಖಲೆ ಕೂಡ ಹೊಂದಿದ್ದಾರೆ.

VISTARANEWS.COM


on

IND vs BAN
Koo

ಆ್ಯಂಟಿಗುವಾ: ಬಾಂಗ್ಲಾದೇಶ(IND vs BAN) ವಿರುದ್ಧ ಇಂದು ನಡೆಯುವ ಸೂಪರ್​-8 ಪಂದ್ಯಕ್ಕೆ ಟೀಮ್​ ಇಂಡಿಯಾ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆ ಇದೆ. ಕಳೆದ ಪಂದ್ಯದಲ್ಲಿ ಮೊಹಮ್ಮದ್​ ಸಿರಾಜ್​ ಅವರನ್ನು ಕೈ ಬಿಟ್ಟು ಅವರ ಸ್ಥಾನದಲ್ಲಿ ಕುಲ್​ದೀಪ್​ಗೆ ಅವಕಾಶ ನೀಡಲಾಗಿತ್ತು. ಇದೀಗ ಬಾಂಗ್ಲಾ ಎದುರಿನ ಪಂದ್ಯದಲ್ಲಿ ಶಿವಂ ದುಬೆ(Shivam Dube) ಅವರನ್ನು ಬೆಂಚ್​ ಕಾಯಿಸುವುದು ಬಹುತೇಖ ಖಚಿತ ಎನ್ನುತ್ತಿವೆ ಮೂಲಗಳು.

ಐಪಿಎಲ್​​ನ ಆರಂಭಿಕ ಕೆಲ ಪಂದ್ಯಗಳಲ್ಲಿ ಸತತವಾಗಿ ಬಿರುಸಿನ ಬ್ಯಾಟಿಂಗ್​ ಮೂಲಕ ಅರ್ಧಶತಕ ಬಾರಿಸಿ ಗಮನಸೆಳೆದಿದ್ದ ದುಬೆ, ಟಿ20 ವಿಶ್ವಕಪ್​ನಲ್ಲಿ ರನ್​ ಗಳಿಸಲು ಪರದಾಟ ನಡೆಸುತ್ತಿದ್ದಾರೆ. ಆಡಿದ ಎಲ್ಲ ಪಂದ್ಯಗಳಲ್ಲಿಯೂ ವೈಫಲ್ಯ ಕಂಡಿದ್ದಾರೆ. ಹೀಗಾಗಿ ಇವರನ್ನು ಕೈ ಬಿಟ್ಟು ಹೊಡಿ-ಬಡಿ ಆಟಕ್ಕೆ ಹೆಸರುವಾಸಿಯಾಗಿರುವ ಸಂಜು ಸ್ಯಾಮ್ಸನ್​ ಅಥವಾ ಯಶಸ್ವಿ ಜೈಸ್ವಾಲ್(Yashasvi Jaiswal)​ ಅವರನ್ನು ಆಡಿಸುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಯಶಸ್ವಿ ಜೈಸ್ವಾಲ್​ಗೆ ಇಂದಿನ ಪಂದ್ಯದಲ್ಲಿ ಅವಕಾಶ ಸಿಗುವುದು ಖಚಿತ ಎನ್ನಲಾಗಿತ್ತಿದೆ. ಏಕೆಂದರೆ ತಂಡ ಪವರ್‌ ಪ್ಲೇಯಲ್ಲಿ ನಿರೀಕ್ಷಿತ ಆರಂಭ ಪಡೆಯಲು ವಿಫ‌ಲವಾಗುತ್ತಿದೆ. ನಾಯಕ ರೋಹಿತ್​ ಮತ್ತು ಕೊಹ್ಲಿ(Virat Kohli) ಜೋಡಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ವಿಫಲರಾಗಿದ್ದಾರೆ. ಹೀಗಾಗಿ ಕೊಹ್ಲಿ ಬದಲು ರೋಹಿತ್​ ಮತ್ತು ಜೈಸ್ವಾಲ್​ ಆರಂಭಿಕರಾಗಿ ಆಡುವ ಸಾಧ್ಯತೆ ಇದೆ. ಜೈಸ್ವಾಲ್​ ವಿಂಡೀಸ್​ ನೆಲದಲ್ಲಿ ಉತ್ತಮ ಬ್ಯಾಟಿಂಗ್​ ದಾಖಲೆ ಕೂಡ ಹೊಂದಿದ್ದಾರೆ. ತಮ್ಮ ಚೊಚ್ಚಲ ಟೆಸ್ಟ್​ನಲ್ಲಿಯೇ ಶತಕ ಬಾರಿಸಿ ಮಿಂಚಿದ್ದರು. ಹಕವು ಮಾಜಿ ಆಟಗಾರರು ಕೂಡ ಕೊಹ್ಲಿಯನ್ನು ಆರಂಭಿಕನಾಗಿ ಆಡಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಜೈಸ್ವಾಲ್​ ಅವಕಾಶ ಪಡೆಯಬಹುದು.

ಸಿರಾಜ್‌ ಬದಲು ಕುಲದೀಪ್‌ ಅವರನ್ನು ಆಡಿಸಿದ ಪ್ರಯೋಗ ಯಶಸ್ವಿಯಾಗಿದೆ. ಹೀಗಾಗಿ ಸಿರಾಜ್​ ಈ ಪಂದ್ಯದಲ್ಲಿಯೂ ಬೆಂಚ್​ ಕಾಯಬೇಕಾಗಬಹುದು. ರಿಷಭ್​ ಪಂತ್​ಗೆ ಬ್ಯಾಕ್​ ಅಪ್​ ಕೀಪರ್ ಆಗಿ ತಂಡದಲ್ಲಿ ಸ್ಥಾನ ಪಡೆದಿರುವ​ ಸಂಜುಗೆ ಅವಕಾಶ ಸಿಗುವುದು ಅನುಮಾನ. ಏಕೆಂದರೆ, ಸಂಜು ಆಡಿ ಒಂದೊಮ್ಮೆ​ ಗಾಯಗೊಂಡರೆ ತಂಡದಲ್ಲಿ ಬೇರೆ ಮೀಸಲು ಕೀಪರ್​ ಇಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸಂಜು ಆಡಿಸುವುದು ಕಷ್ಟ ಸಾಧ್ಯ.

ಇದನ್ನೂ ಓದಿ IND vs BAN: ಇಂದು ಭಾರತ-ಬಾಂಗ್ಲಾ ಸೂಪರ್​-8 ಸೆಣಸಾಟ; ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಸಂಭಾವ್ಯ ತಂಡ


ರೋಹಿತ್​ ಶರ್ಮ, ಯಶಸ್ವಿ ಜೈಸ್ವಾಲ್​, ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌, ಸೂರ್ಯಕುಮಾರ್‌ ಯಾದವ್, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್, ಜಸ್​ಪ್ರೀತ್​ ಬುಮ್ರಾ, ಕುಲದೀಪ್​ ಯಾದವ್, ಅರ್ಶ್‌ದೀಪ್‌ ಸಿಂಗ್.

ಮಳೆ ಭೀತಿ ಇಲ್ಲ


ಹವಾಮಾನ ವರದಿಗಳ ಪ್ರಕಾರ, ಶನಿವಾರ ಈ ಸ್ಥಳದ ತಾಪಮಾನವು ಹಗಲಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಮತ್ತು ರಾತ್ರಿ 27 ಡಿಗ್ರಿ ಸೆಲ್ಸಿಯಸ್ ಗೆ ಇಳಿಯುತ್ತದೆ. ಮಧ್ಯಾಹ್ನ ಸ್ವಲ್ಪ ಮೋಡ ಕವಿದ ವಾತಾವರಣ ಕಂಡು ಬಂದರೂ ಕೂಡ ಮಳೆಯಾಗುವ ಸಾಧ್ಯತೆ ಶೇ.1ರಷ್ಟಿದೆ. ತೇವಾಂಶವು 68% ಆಗಿರುತ್ತದೆ. ಭಾರತದಲ್ಲಿ ಈ ಪಂದ್ಯ ರಾತ್ರಿ ಪ್ರಸಾರಗೊಳ್ಳಲಿದೆ. ಈ ಕ್ರೀಡಾಂಗಣದಲ್ಲಿ ಒಟ್ಟು 34 ಟಿ 20 ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು 16 ಪಂದ್ಯಗಳನ್ನು ಗೆದ್ದಿದ್ದರೆ, ಎರಡನೇ ಬ್ಯಾಟಿಂಗ್ ಮಾಡುವ ತಂಡಗಳು 16 ಪಂದ್ಯಗಳನ್ನು ಗೆದ್ದಿವೆ.

Continue Reading

ಕ್ರಿಕೆಟ್

MS Dhoni Friends Birthday: ಗೆಳೆಯನ ಹುಟ್ಟುಹಬ್ಬ ಆಚರಿಸಿದ ಧೋನಿ; ವಿಡಿಯೊ ವೈರಲ್‌

MS Dhoni Friends Birthday: ಎಂ.ಎಸ್ ಧೋನಿ ಜೀವನಾಧಾರಿತ ‘ಎಂ.ಎಸ್ ಧೋನಿ, ದಿ ಅನ್‌ಟೋಲ್ಡ್ ಸ್ಟೋರಿ’ ಬಾಲಿವುಡ್ ಚಿತ್ರ 2016ರಲ್ಲಿ ಭಾರಿ ಸದ್ದು ಮಾಡಿತ್ತು. ಧೋನಿ ಯಶೋಗಾಥೆಯ ಈ ಚಿತ್ರ ಬಾಲಿವುಡ್ ಬಾಕ್ಸ್ ಆಫೀಸ್‌ನಲ್ಲಿ ಮಾತ್ರವಲ್ಲ, ಚಿತ್ರ ಪ್ರೀಯರ ಮೆಚ್ಚುಗೆಗೂ ಪಾತ್ರವಾಗಿತ್ತು. ಈ ಸಿನೆಮಾದಲ್ಲಿ ಧೋನಿ ಅವರು ಕ್ರಿಕೆಟ್​ ಆಟಗಾರನಾಗಿ ಬೆಳೆದು ಬಂದ, ಅವರಿಗೆ ನೆರವು ನೀಡಿದ ಸ್ನೇಹಿತರ ಕುರಿತಾಗಿಯೂ ತೋರಿಸಲಾಗಿತ್ತು.

VISTARANEWS.COM


on

MS Dhoni Friends Birthday
Koo

ರಾಂಚಿ: ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ಭಾರತ ತಂಡದ ಮಾಜಿ ಆಟಗಾರ ಎಂ.ಎಸ್ ಧೋನಿ(MS Dhoni) ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ ಕೆಲವು ವರ್ಷಗಳಾಗಿವೆ. ಕೇವಲ ಐಪಿಎಲ್​ ಟೂರ್ನಿಯಲ್ಲಿ(IPL) ಮಾತ್ರ ಆಡುತ್ತಿದ್ದಾರೆ. ಧೋನಿ ಎಷ್ಟೇ ದೊಡ್ಡ ಖ್ಯಾತಿ ಗಳಿಸಿದ್ದರೂ ಕೂಡ ತಮ್ಮ ಬಾಲ್ಯದ ಸ್ನೇಹಿತರನ್ನು ಇಂದಿಗೂ ಮರೆತಿಲ್ಲ. ಧೋನಿ ಅವರು ತಮ್ಮ ಗೆಳೆಯರೊಬ್ಬರ(MS Dhoni Friends Birthday) ಹುಟ್ಟುಹಬ್ಬ ಆಚರಿಸಿದ ವಿಡಿಯೊವೊಂದು ವೈರಲ್‌(viral video) ಆಗಿದೆ.

ರಾಂಚಿಯಲ್ಲಿರುವ ಧೋನಿ ತಮ್ಮ ಬಾಲ್ಯದ ಗೆಳೆಯನ ಮನೆಯಲ್ಲಿ ಬರ್ತ್‌ಡೇ ಪಾರ್ಟಿ ಮಾಡಿದ್ದಾರೆ. ಗೆಳೆಯನಿಗೆ ಕೇಕ್‌ ತಿನ್ನಿಸಿ ಶುಭ ಹಾರೈಸಿದ್ದಾರೆ. ಧೋನಿಯ ಈ ಸರಳತೆಯನ್ನು ಕಂಡು ಅನೇಕ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಎಷ್ಟೇ ದೊಡ್ಡ ಶ್ರೀಮಂತನಾದರೂ ಧೋನಿ ಗೆಳೆಯರನ್ನು ಮರೆತಿಲ್ಲ ಗೆಳೆತನ ಎಂದರೆ ಇದು ಎಂದು ಕಮೆಂಟ್‌ ಮಾಡಿದ್ದಾರೆ. 2 ವರ್ಷಗಳ ಹಿಂದೆ ಧೋನಿ ದುಬೈಗೆ ತೆರಳಿ ಗೆಳೆಯರೊಬ್ಬರ ಬರ್ತ್‌ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಈ ವಿಡೊಯೊ ಕೂಡ ವೈರಲ್‌ ಆಗಿತ್ತು.

ಎಂ.ಎಸ್ ಧೋನಿ ಜೀವನಾಧಾರಿತ ‘ಎಂ.ಎಸ್ ಧೋನಿ, ದಿ ಅನ್‌ಟೋಲ್ಡ್ ಸ್ಟೋರಿ’ ಬಾಲಿವುಡ್ ಚಿತ್ರ 2016ರಲ್ಲಿ ಭಾರಿ ಸದ್ದು ಮಾಡಿತ್ತು. ಧೋನಿ ಯಶೋಗಾಥೆಯ ಈ ಚಿತ್ರ ಬಾಲಿವುಡ್ ಬಾಕ್ಸ್ ಆಫೀಸ್‌ನಲ್ಲಿ ಮಾತ್ರವಲ್ಲ, ಚಿತ್ರ ಪ್ರೀಯರ ಮೆಚ್ಚುಗೆಗೂ ಪಾತ್ರವಾಗಿತ್ತು. ಈ ಸಿನೆಮಾದಲ್ಲಿ ಧೋನಿ ಅವರು ಕ್ರಿಕೆಟ್​ ಆಟಗಾರನಾಗಿ ಬೆಳೆದು ಬಂದ, ಅವರಿಗೆ ನೆರವು ನೀಡಿದ ಸ್ನೇಹಿತರ ಕುರಿತಾಗಿಯೂ ತೋರಿಸಲಾಗಿತ್ತು.

ಇದನ್ನೂ ಓದಿ MS Dhoni: ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ತಡೆದು ನಿಲ್ಲಿಸಿ ಫೋಟೊ ತೆಗೆಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

ಇದೇ ಆವೃತ್ತಿಯ ಐಪಿಎಲ್‌ ವೇಳೆ ಧೋನಿ ಅಭ್ಯಾಸ ಮಾಡುವಾಗ ತಮ್ಮ ಬ್ಯಾಟ್‌ನಲ್ಲಿ ಬಾಲ್ಯದ ಗೆಳೆಯನ ಕ್ರೀಡಾ ಪರಿಕರಗಳ ಶಾಪ್​ನ ಹೆಸರನ್ನು ಹಾಕಿಕೊಂಡಿದ್ದರು. ‘ಪ್ರೈಮ್ ಸ್ಪೋರ್ಟ್ಸ್’ ಎಂದು ಬರೆದುಕೊಂಡಿರುವ ಸ್ಟಿಕ್ಕರ್ ​ ಹಾಕಿದ್ದರು.  ಧೋನಿ ವೃತ್ತಿಜೀವನದ ಆರಂಭಿಕ ಹಂತದಲ್ಲಿ ಅವರಿಗೆ ಬ್ಯಾಟ್​ ಮತ್ತು ಕ್ರಿಕೆಟ್​ ಕಿಟ್​ಗಳನ್ನು ಈ ಶಾಪ್​ನ ಗೆಳೆಯನೇ ನೀಡಿದ್ದರಂತೆ. ತನ್ನ ಗೆಳೆಯನ ಶಾಪ್​ನ ಪ್ರಚಾರಕ್ಕಾಗಿ ಧೋನಿ ಈ ಶಾಪ್​ನ ಹೆಸರನ್ನು ತನ್ನ ಬ್ಯಾಟ್​ನಲ್ಲಿ ಬರೆದುಕೊಂಡಿದ್ದರು.

ಈ ಆವೃತ್ತಿಯಲ್ಲಿ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗಿತ್ತು. ಆದರೆ ಧೋನಿ ಇದುವರೆಗೆ ತಮ್ಮ ನಿವೃತ್ತಿ ಪ್ರಕಟಿಸಿಲ್ಲ. ಮುಂದಿನ ಬಾರಿಯೂ ಅವರು ಆಡಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ಮಾಹಿತಿ ನೀಡಿದೆ.

ಆರ್​ಸಿಬಿ ವಿರುದ್ಧ ಸೋಲುವ ಮೂಲಕ ಚೆನ್ನೈ ಸೂಪರ್​ ಕಿಂಗ್ಸ್​(CSK) ತಂಡ 17ನೇ ಆವೃತ್ತಿಯ ಐಪಿಎಲ್​ನಿಂದ ಹೊರಬಿದ್ದಿತ್ತು. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಚೆನ್ನೈ 27 ರನ್​ಗಳ ಅಂತರದಿಂದ ಸೋಲು ಕಂಡಿತ್ತು. ಈ ಸೋಲಿನ ಮರು ದಿನವೇ ಧೋನಿ(MS Dhoni) ತಮ್ಮ ತವರಾದ ರಾಂಚಿಗೆ ಮರಳಿದ್ದರು. ತವರಿನಲ್ಲಿ ಬೈಕ್​ ರೈಡಿಂಗ್​ ಮಾಡಿದ್ದರು. ಅವರು ಬೈಕ್​ನಲ್ಲಿ ಸುತ್ತಾಡಿಕೊಂಡು ವಾಪಸ್​ ಮನೆಗೆ ಬರುತ್ತಿರುವ ವಿಡಿಯೊ ವೈರಲ್​ ಆಗಿತ್ತು.

Continue Reading

ಕ್ರೈಂ

Thane Roof Collapse: ಟಿನ್ ರೂಫ್‌ ಬಿದ್ದು ಫುಟ್ಬಾಲ್​ ಆಡುತ್ತಿದ್ದ 9 ಮಕ್ಕಳಿಗೆ ಗಾಯ; 5 ಮಂದಿ ಗಂಭೀರ

Thane Roof Collapse: ಭಾರೀ ಗಾಳಿ ಮಳೆಯಿಂದ ಮೇಲ್ಛಾವಣಿಗೆ ಅಳವಡಿಸಿದ್ದ ಟಿನ್​​ ರೂಫ್(tin roof falls on football)​ ತುಂಡಾಗಿ ಮೈದಾನದಲ್ಲಿ ಆಡವಾಡುತ್ತಿದ್ದ ಮಕ್ಕಳ ಮೇಲೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

VISTARANEWS.COM


on

Thane Roof Collapse
Koo

ಥಾಣೆ: ಫುಟ್ಬಾಲ್ ಮೈದಾನದ ಮೇಲ್ಛಾವಣಿಗೆ ಅಳವಡಿಸಿದ್ದ ಟಿನ್​​ ರೂಫ್​ ಬಿದ್ದ(Thane Roof Collapse) ಪರಿಣಾಮ ಒಂಬತ್ತು ಮಕ್ಕಳು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಸಂಭವಿಸಿದೆ. ಈ ಪೈಕಿ ಐವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ಭಾರೀ ಗಾಳಿ ಮಳೆಯಿಂದ ಮೇಲ್ಛಾವಣಿಗೆ ಅಳವಡಿಸಿದ್ದ ಟಿನ್​​ ರೂಫ್(tin roof falls on football)​ ತುಂಡಾಗಿ ಮೈದಾನದಲ್ಲಿ ಆಡವಾಡುತ್ತಿದ್ದ ಮಕ್ಕಳ ಮೇಲೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಥಾಣೆಯ ಉಪವನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡಿರುವ ಮಕ್ಕಳನ್ನು ಸಮೀಪದ ಬೆಥನಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಅಟಲ್‌ ಸೇತುಗೆ ಚಾಲನೆ ಸಿಕ್ಕ ಐದೇ ತಿಂಗಳಲ್ಲಿ ಬಿರುಕು


ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ಗೆ (Mumbai Trans Harbour Link-MTHL) ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಐದೇ ತಿಂಗಳಲ್ಲಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬುದಾಗಿ ಕಾಂಗ್ರೆಸ್‌ ಆರೋಪಿಸಿದೆ. ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಳೆ (Nana Patole) ಅವರು ರಸ್ತೆ ಮೇಲೆ ಸಂಚರಿಸಿ, ಬಿರುಕು ಬಿಟ್ಟ ಜಾಗವನ್ನು ಜನರಿಗೆ ತೋರಿಸಿ ರಸ್ತೆ ಸುರಕ್ಷತೆಯನ್ನು ಪರಿಶೀಲಿಸಿದ್ದಾರೆ. ಹಾಗೆಯೇ, ಭಾರಿ ಭ್ರಷ್ಟಾಚಾರ ನಡೆದಿದೆ ಎಂಬುದಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ Deep fake Scam: ಮುಖೇಶ್‌ ಅಂಬಾನಿಯ ಡೀಪ್‌ ಫೇಕ್‌ ವಿಡಿಯೋ; ನಿಜವೆಂದೇ ನಂಬಿದ್ದ ವೈದ್ಯೆಗೆ 7 ಲಕ್ಷ ರೂ ವಂಚನೆ

ನವಿ ಮುಂಬೈನ ಉಲ್ವೆ ಕಡೆ ಹೋಗುವ ಸೇತುವೆ ಮಾರ್ಗದಲ್ಲಿ ಬಿರುಕು ಕಾಣಿಸಿಕೊಂಡಿವೆ. “ನಾನು ಬರೀ ಆರೋಪ ಮಾಡುವ ಬದಲು ನಿಜವಾಗಿಯೂ ಏನಾಗಿದೆ ಎಂಬುದನ್ನು ಜನರಿಗೆ ತೋರಿಸಲು ಬಂದಿದ್ದೇನೆ. ಸರ್ಕಾರವು ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತದೆ. ಆದರೆ, ಇಲ್ಲಿ ಎಷ್ಟರಮಟ್ಟಿಗೆ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ನೋಡಿ. ಸೇತುವೆ ಮೇಲಿನ ರಸ್ತೆ ಬಿರುಕು ಬಿಟ್ಟಿದೆ. ಸರ್ಕಾರವು ಜನರ ದುಡ್ಡನ್ನು ಜೇಬಿಗೆ ಇಳಿಸಿಕೊಂಡು, ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುತ್ತಿದೆ. ಇಂತಹ ಭ್ರಷ್ಟ ಸರ್ಕಾರವನ್ನು ಜನ ಕಿತ್ತೆಸೆಯಬೇಕು. ಸೇತುವೆಗೆ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿಟ್ಟಿದ್ದಾರೆ. ನಮಗೆ ಅವರ ಬಗ್ಗೆ ಗೌರವ ಇದೆ. ಆದರೆ, ಅವರ ಹೆಸರಿನ ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ಮೋದಿ ಅವರು ಈ ಕುರಿತು ಗಮನಿಸಬೇಕು” ಎಂದು ನಾನಾ ಪಟೋಳೆ ಆರೋಪಿಸಿದ್ದಾರೆ. 

ಈ ಸೇತುವೆ ನಿರ್ಮಾಣಕ್ಕೆ ತಗುಲಿದ ವೆಚ್ಚ ಬರೋಬ್ಬರಿ 17,840 ಕೋಟಿ ರೂಪಾಯಿ. ಈ ಪೈಕಿ 15,000 ಕೋಟಿ ರೂ. ಸಾಲ ಪಡೆದುಕೊಳ್ಳಲಾಗಿದೆ. ಇದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವೀ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೇಗದ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಮುಂಬೈನಿಂದ ಪುಣೆ, ಗೋವಾ ಮತ್ತು ದಕ್ಷಿಣ ಭಾರತಕ್ಕೆ ಇರುವ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಎಂಟಿಎಚ್ಎಲ್‌ನಲ್ಲಿ ಕಾರು, ಲಘು ವಾಹನಗಳು, ಮಿನಿ ಬಸ್‌ಗಳು ಮತ್ತು ಬಸ್‌ಗಳ ಗರಿಷ್ಠ ವೇಗದ ಮಿತಿ ಗಂಟೆಗೆ 100 ಕಿ.ಮೀ. ಬೈಕ್‌ಗಳು ಸೇರಿದಂತೆ ದ್ವಿಚಕ್ರ ವಾಹನಗಳು, ಆಟೋರಿಕ್ಷಾಗಳು ಮತ್ತು ಟ್ರ್ಯಾಕ್ಟರ್‌ಗಳ ಪ್ರವೇಶ ನಿಷೇಧಿಸಲಾಗಿದೆ.

Continue Reading

ಕ್ರೀಡೆ

Viral Video: ಗೆಲುವಿನ ಬಳಿಕ ಡ್ರೆಸ್ಸಿಂಗ್​ ರೂಮ್​ನಲ್ಲಿ ವಿಭಿನ್ನ ಸಂಭ್ರಮಾಚರಣೆ ಮಾಡಿದ ದಕ್ಷಿಣ ಆಫ್ರಿಕಾ ಆಟಗಾರರು

Viral Video:ಚೇಸಿಂಗ್​ ವೇಳೆ ಇಂಗ್ಲೆಂಡ್ ಪರ ಮಧ್ಯಮ ಕ್ರಮಾಂಕದಲ್ಲಿ ಹ್ಯಾರಿ ಬ್ರೂಕ್ 53(37 ಎಸೆತ) ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್ 33(17 ಎಸೆತ) ಬಾರಿಸಿದರೂ ಕೂಡ ಇವರಿಂದ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

VISTARANEWS.COM


on

Viral Video
Koo

ಗ್ರಾಸ್‌ ಐಲೆಟ್‌: ಶುಕ್ರವಾರ ರಾತ್ರಿ ನಡೆದ ಇಂಗ್ಲೆಂಡ್‌ ಎದುರಿನ ಸೂಪರ್‌-8(T20 World Cup 2024) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 7 ರನ್​ಗಳ ರೋಚಕ ಜಯ ಸಾಧಿಸಿ ಸೆಮಿಫೈನಲ್ ಬಾಗಿಲಿಗೆ ಬಂದು ನಿಂತಿದೆ. ಪಂದ್ಯದ ಗೆಲುವಿನ ಬಳಿಕ ದಕ್ಷಿಣ ಆಫ್ರಿಕಾ ಆಟಗಾರರು ಡ್ರೆಸ್ಸಿಂಗ್​ ರೂಮ್​ನಲ್ಲಿ ಸಂಭ್ರಮಾಚರಣೆ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

‘ಬಿ’ ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ಆರಂಭಕಾರ ಕ್ವಿಂಟನ್‌ ಡಿ ಕಾಕ್‌ ಅವರ ಅರ್ಧಶತಕದ ನೆರವಿನಿಂದ 6 ವಿಕೆಟಿಗೆ 163 ರನ್‌ ಗಳಿಸಿತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಉತ್ತಮ ಆರಂಭ ಪಡೆದರೂ ಅಂತಿಮ ಹಂತದಲ್ಲಿ ಎಡವಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಚೇಸಿಂಗ್​ ವೇಳೆ ಇಂಗ್ಲೆಂಡ್ ಪರ ಮಧ್ಯಮ ಕ್ರಮಾಂಕದಲ್ಲಿ ಹ್ಯಾರಿ ಬ್ರೂಕ್ 53(37 ಎಸೆತ) ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್ 33(17 ಎಸೆತ) ಬಾರಿಸಿದರೂ ಕೂಡ ಇವರಿಂದ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಕಳೆದ ವಿಂಡೀಸ್​ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್​ ನಡೆಸಿದ್ದ ಆರಂಭಿಕ ಆಟಗಾರ ಫಿಲ್​ ಸಾಲ್ಟ್(11) ಮತ್ತು ಜಾನಿ ಬೇರ್​ಸ್ಟೊ(16) ಈ ಪಂದ್ಯದಲ್ಲಿ ವಿಫಲರಾದರು. ಇದು ತಂಡಕ್ಕೆ ಹಿನ್ನಡೆಯಾಯಿತು.

ಪಂದ್ಯದ ತಿರುವು


ಅಂತಿಮ ಓವರ್​ನಲ್ಲಿ ಇಂಗ್ಲೆಂಡ್​ ಗೆಲುವಿಗೆ 14 ರನ್​ ಬೇಕಿತ್ತು. ಅರ್ಧಶತಕ ಬಾರಿಸಿದ್ದ ಹ್ಯಾರಿ ಬ್ರೂಕ್ ಕ್ರೀಸ್​ನಲ್ಲಿದ್ದರು. ಹೀಗಾಗಿ ಇಂಗ್ಲೆಂಡ್​ಗೆ ಗೆಲುವಿನ ಅವಕಾಶ ಅಧಿಕವಾಗಿತ್ತು. ಅನ್ರಿಚ್​ ನೋರ್ಜೆ ಎಸೆದ ಈ ಓವರ್​ನ ಮೊದಲ ಎಸೆತದಲ್ಲೇ ಬ್ರೂಕ್ ಸ್ಟ್ರೈಟ್​ ಡೆಲಿವರಿ ಕಡೆ ಚೆಂಡನ್ನು ಬಾರಿಸಿದರು. ಗಾಳಿಯಲ್ಲಿದ್ದ ಚೆಂಡನ್ನು ಚಿರತೆ ವೇಗದಲ್ಲಿ ಹಿಮ್ಮುಖವಾಗಿ ಓಡಿ ಐಡೆನ್​ ಮಾರ್ಕ್ರಮ್​ ಸೂಪರ್​ ಮ್ಯಾನ್​ ರೀತಿಯಲ್ಲಿ ಕ್ಯಾಚ್​ ಹಿಡಿಯುವಲ್ಲಿ ಯಶಸ್ವಿಯಾದರು. ಇದು ಪಂದ್ಯಕ್ಕೆ ಮಹತ್ವದ ತಿರುವು ಕೊಟ್ಟಿತು. ಈ ವಿಕೆಟ್​ ಪತನಗೊಳ್ಳುತ್ತಿದ್ದಂತೆ ಹರಿಣ ಪಡೆ ಮೇಲುಗೈ ಸಾಧಿಸಿತು. ಅಂತಿಮವಾಗಿ 7 ರನ್​ಗಳ ರೋಚಕ ಗೆಲುವು ಸಾಧಿಸಿತು.

ಇದನ್ನೂ ಓದಿ WI vs USA: ಹೋಪ್‌ ಬ್ಯಾಟಿಂಗ್​ ಆರ್ಭಟಕ್ಕೆ ತಲೆಬಾಗಿದ ಅಮೆರಿಕ; ವಿಂಡೀಸ್​ ಸೆಮಿ ಆಸೆ ಜೀವಂತ

ಈ ಗೆಲುವಿನ ಬಳಿಕ ದಕ್ಷಿಣ ಆಫ್ರಿಕಾ ಆಟಗಾರರು ಡ್ರೆಸ್ಸಿಂಗ್​ ರೂಮ್​ನಲ್ಲಿ ಕೊಂಚ ಅಗ್ರೆಸಿವ್​ ಆಗಿ ಸಂಭ್ರಮಾಚರಣೆ ನಡೆಸಿದರು. ಕಾಗಿಸೊ ರಬಾಡ ಎಸ್…ಎಸ್​​ ಎಂದು ಕಿರುಚುತ್ತಾ ಕೈಗಳನ್ನು ಟೇಬಲ್​ಗೆ ಬಡಿದರು. ಮಾರ್ಕೊ ಜಾನ್ಸೆನ್​ ಟೇಬಲ್​ಗೆ ತಮ್ಮ ಕ್ಯಾಪ್​ ಬಡಿದು ಸಂಭ್ರಮಿಸಿದರು. ಹೀಗೆ ಎಲ್ಲ ಆಟಗಾರರು ವಿಭಿನ್ನವಾಗಿ ಸಂಭ್ರಮಾಚರಣೆ ಮಾಡಿದರು. ಈ ಬಾರಿ ತಂಡದ ಪ್ರದರ್ಶನ ಮತ್ತು ಲಕ್​ ನೋಡುವಾಗ ಕಪ್​ ಗೆದ್ದು ಚೋಕರ್ಸ್​ ಹಣೆಪಟ್ಟಿಯನ್ನು ಕಳಚಿಕೊಳ್ಳುವ ಸಾಧ್ಯತೆಯೊಂದು ಕಂಡುಬಂದಿದೆ.

Continue Reading
Advertisement
Rushikonda Palace
ರಾಜಕೀಯ14 mins ago

Rushikonda Palace: 500 ಕೋಟಿಯ ʼಋಷಿಕೊಂಡ ಅರಮನೆʼ ಖರೀದಿಸಲು ಕ್ರಿಮಿನಲ್‌ ಸುಕೇಶ್ ಚಂದ್ರಶೇಖರ್ ರೆಡಿ!

Accident Case
ವಿಜಯಪುರ22 mins ago

Accident News : ಕಂಟಕವಾದ ಕಾರ ಹುಣ್ಣಿಮೆ ಕರಿ ದಿನ; ಎತ್ತು ಬೆದರಿಸಲು ಹೋಗಿ ಮುಗ್ಗರಿಸಿ ಬಿದ್ದ ಜನ್ರು

Horse Racing
ಕರ್ನಾಟಕ34 mins ago

Horse Racing: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್‌ಗೆ ತಡೆ ನೀಡಿದ ಹೈಕೋರ್ಟ್

Atal Setu
ದೇಶ35 mins ago

Atal Setu: “ಅಟಲ್‌ ಸೇತು ಸುಭದ್ರವಾಗಿದೆ..ಯಾವುದೇ ಬಿರುಕಿಲ್ಲ”- ಕಾಂಗ್ರೆಸ್‌ ಆರೋಪಕ್ಕೆ MMRDA ಸ್ಪಷ್ಟನೆ

Viral Video
Latest37 mins ago

Viral Video: ಮಕ್ಕಳನ್ನು ಖಾಸಗಿ ವಾಹನದಲ್ಲಿ ಶಾಲೆಗೆ ಕಳುಹಿಸುವ ಪೋಷಕರಲ್ಲಿ ಆತಂಕ ಮೂಡಿಸುವ ವಿಡಿಯೊ ಇದು!

Actor Darshan Ram Gopal Varma says ELEPHANT attacking a DOG
ಸ್ಯಾಂಡಲ್ ವುಡ್49 mins ago

Actor Darshan: ರೇಣುಕಾಸ್ವಾಮಿ ಹತ್ಯೆ ಶ್ವಾನದ ಮೇಲೆ ʻಆನೆʼ ದಾಳಿ ಮಾಡಿದಂತೆ ಎಂದ ರಾಮ್​ ಗೋಪಾಲ್ ವರ್ಮಾ!

Bengaluru News Accident Case Dj Halli
ಬೆಂಗಳೂರು1 hour ago

Bengaluru news : ಸೋಪಿನ ಮೇಲೆ ಕಾಲಿಟ್ಟು ಆಯತಪ್ಪಿ ಕಟ್ಟಡದ ಮೇಲಿಂದ ಹಾರಿ ಬಿದ್ದಳು; ಎದೆ ಝಲ್​ ಎನಿಸುವ ದೃಶ್ಯ ಸೆರೆ

Actor Darshan fans turn against D boss
ಸ್ಯಾಂಡಲ್ ವುಡ್1 hour ago

Actor Darshan: ಕಸ್ಟಡಿಯಲ್ಲಿ ʻಡಿ ಬಾಸ್‌ʼ; ನೆಚ್ಚಿನ ನಟನ ವಿರುದ್ಧ ತಿರುಗಿ ಬಿದ್ರಾ ʻದಚ್ಚುʼ ಫ್ಯಾನ್ಸ್?

IND vs BAN
ಕ್ರೀಡೆ1 hour ago

IND vs BAN: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ

Actress Ramya
ಕರ್ನಾಟಕ1 hour ago

Actress Ramya: ದರ್ಶನ್, ಪ್ರಜ್ವಲ್‌, ಸೂರಜ್, ಯಡಿಯೂರಪ್ಪ ಹೆಸರು ಉಲ್ಲೇಖಿಸಿ ಮತ್ತೆ ಕಿಡಿ ಕಾರಿದ ರಮ್ಯಾ; ಪೋಸ್ಟ್‌ನಲ್ಲಿ ಏನಿದೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌