KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ? - Vistara News

ಕ್ರೀಡೆ

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

KKR vs SRH IPL Final: ಚೆನ್ನೈಯ ಎಂ.ಎ.ಚಿದಂಬರಂ ಮೈದಾನ ಪಿಚ್​ ನಿಧಾನಗತಿಯಿಂದ ಕೂಡಿದೆ. ಸ್ಪಿನ್‌ ಸ್ನೇಹಿಯಾಗಿದ್ದರೂ ಕೂಡ ಈ ಮೈದಾನ ಹೈ ಸ್ಕೋರಿಂಗ್‌ ಪಂದ್ಯ ಕೂಡ ಕಂಡುಬಂದಿದೆ. ಚೆನ್ನೈ ಮತ್ತು ಲಕ್ನೋ ನಡುವಣ ಪಂದ್ಯದಲ್ಲಿ ಚೆನ್ನೈ 210 ರನ್‌ ಬಾರಿಸಿತ್ತು. ಈ ಬೃಹತ್​ ಮೊತ್ತವನ್ನು ಲಕ್ನೋ ತಂಡ 19.3 ಓವನ್‌ನಲ್ಲೇ ಗುರಿ ತಲುಪಿತ್ತು.

VISTARANEWS.COM


on

KKR vs SRH IPL Final
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಸನ್​ರೈಸರ್ಸ್​ ಹೈದರಾಬಾದ್(KKR vs SRH Final 2024)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) ವಿದುದ್ಧದ ಐಪಿಎಲ್​-2024ರ(IPL 2024) ಫೈನಲ್​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಉಭಯ ತಂಡಗಳ ಪ್ರಶಸ್ತಿ ಕಾಳಗಕ್ಕೆ ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂ ಅಣಿಯಾಗಿದೆ.

ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್(Sunrisers Hyderabad)​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಪಿಚ್​ ರಿಪೋರ್ಟ್​


ಚೆನ್ನೈಯ ಎಂ.ಎ.ಚಿದಂಬರಂ ಮೈದಾನ ಪಿಚ್​ ನಿಧಾನಗತಿಯಿಂದ ಕೂಡಿದೆ. ಸ್ಪಿನ್‌ ಸ್ನೇಹಿಯಾಗಿದ್ದರೂ ಕೂಡ ಈ ಮೈದಾನ ಹೈ ಸ್ಕೋರಿಂಗ್‌ ಪಂದ್ಯ ಕೂಡ ಕಂಡುಬಂದಿದೆ. ಚೆನ್ನೈ ಮತ್ತು ಲಕ್ನೋ ನಡುವಣ ಪಂದ್ಯದಲ್ಲಿ ಚೆನ್ನೈ 210 ರನ್‌ ಬಾರಿಸಿತ್ತು. ಈ ಬೃಹತ್​ ಮೊತ್ತವನ್ನು ಲಕ್ನೋ ತಂಡ 19.3 ಓವನ್‌ನಲ್ಲೇ ಗುರಿ ತಲುಪಿತ್ತು. ಹೀಗಾಗಿ ಪಿಚ್​ ವರ್ತನೆಯನ್ನು ಸ್ಪಷ್ಟವಾಗಿ ಹೇಳುವುದು ಕೊಂಚ ಕಷ್ಟವಾಗಿದೆ. ಮಂಜಿನ ಕಾಟ ಇರುವ ಕಾರಣ ಟಾಸ್‌ ಗೆಲ್ಲುವ ತಂಡ ಬೌಲಿಂಗ್‌ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚು.

ಮುಖಾಮುಖಿ


ಕೆಕೆಆರ್​ ಮತ್ತು ಸನ್​ರೈಸರ್ಸ್ ಹೈದರಾಬಾದ್​ ತಂಡಗಳು ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ 27 ಪಂದ್ಯಗಳನ್ನು ಆಡಿದೆ. ಈ ಪೈಕಿ 18 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಲೀಗ್​ ಮತ್ತು ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಸೋಲು ಕಂಡಿತ್ತು. ಈ ಲೆಕ್ಕಾಚಾರವನ್ನು ನೋಡುವಾಗ ಇಂದಿನ ಪಂದ್ಯದಲ್ಲಿಯೂ ಕೆಕೆಆರ್​ ಗೆಲುವಿನ ಫೇವರಿಟ್ ತಂಡವಾಗಿದೆ. ಫೈನಲ್​ನಲ್ಲಿ ಇತ್ತಂಡಗಳು ಪರಸ್ಪರ ಎದುರಾಗುತ್ತಿರುವುದು ಇದೇ ಮೊದಲು.

ಇದನ್ನೂ ಓದಿ KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಆಸ್ಟ್ರೇಲಿಯಾದ ನಾಯಕನಾಗಿರುವ ಪ್ಯಾಟ್​ ಕಮಿನ್ಸ್​ 2 ವಿಶ್ವಕಪ್​ ಗೆದ್ದ ನಾಯಕ. ಅದು ಕೂಡ ಚೊಚ್ಚಲ ಪ್ರಯತ್ನದಲ್ಲೇ ಈ ಸಾಧನೆ ಮಾಡಿದ್ದಾರೆ. ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವರು ಟ್ರೋಫಿ ಗೆದ್ದಿದ್ದಾರೆ. ಹೀಗಾಗಿ ಇವರು ಹೈದರಾಬಾದ್​ಗೂ ತಮ್ಮ ನಾಯಕತ್ವದಲ್ಲಿ ಕಪ್​ ಗೆಲ್ಲಬಹುದು ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ನಂಬಿಕೆ. ಮೊತ್ತೊಂದೆಡೆ ಆಸ್ಟ್ರೇಲಿಯಾ ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಗೆಲುವಿನ ಹೀರೊ ಎನಿಸಿಕೊಂಡಿದ್ದ ಟ್ರಾವಿಸ್​ ಹೆಡ್​ ಕೂಡ ಹೈದರಾಬಾದ್​ ತಂಡದಲ್ಲಿದ್ದಾರೆ. ಹೀಗಾಗಿ ಫೈನಲ್​ನಲ್ಲಿಯೂ ಇವರ ಸ್ಫೋಟಕ ಬ್ಯಾಟಿಂಗ್​ ನಿರೀಕ್ಷೆ ಮಾಡಲಾಗಿದೆ.

ಕೆಕೆಆರ್​ ಪಾಲಿನ ದೊಡ್ಡ ಬಲವೆಂದರೆ ಆಟಗಾರರ ಸಂಘಟಿತ ಪ್ರದರ್ಶನ. ಬ್ಯಾಟಿಂಗ್​, ಬೌಲಿಂಗ್​ ಎರಡೂ ವಿಭಾಗದಲ್ಲಿ ಸಮರ್ಥವಾಗಿದೆ. ಸೀಮಿತ ಆಗಾರರ ಪ್ರದರ್ಶನದ ಮೇಲೆ ತಂಡ ನೆಚ್ಚಿಕೊಂಡಿಲ್ಲ. ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದರೂ ಕೂಡ ಇವರ ಸ್ಥಾನದಲ್ಲಿ ಕಳೆದ ಪಂದ್ಯದಲ್ಲಿ ಆಡಲಿಳಿದಿದ್ದ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದರು. ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

AFG vs SA Semi Final: ಚೊಚ್ಚಲ ಫೈನಲ್​ ನಿರೀಕ್ಷೆಯಲ್ಲಿ ಆಫ್ಘನ್​-ದಕ್ಷಿಣ ಆಫ್ರಿಕಾ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್?​

AFG vs SA Semi Final: ವೇಳಾಪಟ್ಟಿಯಂತೆ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ನಡುವಣ ಪಂದ್ಯ ಜೂನ್​ 26(ಇಂದು) ನಡೆಯುವ ಸ್ಪರ್ಧೆಯಾಗಿದೆ. ವಿಂಡೀಸ್​ನಲ್ಲಿ ಇದು ರಾತ್ರಿ ಪಂದ್ಯವಾದರೆ ಭಾರತೀಯ ಕಾಲಮಾನದಂತೆ ಗುರುವಾರ ಬೆಳಗ್ಗೆ ಪ್ರಸಾರಗೊಳ್ಳಲಿದೆ.

VISTARANEWS.COM


on

AFG vs SA Semi Final
Koo

ಟ್ರಿನಿಡಾಡ್: ಟಿ20 ವಿಶ್ಕಪ್​ ಟೂರ್ನಿಯ ಸೆಮಿಫೈನಲ್​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಭಾರತೀಯ ಕಾಲಮಾನದಂತೆ ನಾಳೆ ಟರೂಬದಲ್ಲಿ ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ-ಅಫಘಾನಿಸ್ಥಾನ(AFG vs SA Semi Final) ಮುಖಾಮುಖೀ ಆಗಲಿವೆ. ಇದೇ ದಿನ ರಾತ್ರಿ ಗಯಾನಾದ ಪ್ರೊವಿಡೆನ್ಸ್‌ನಲ್ಲಿ ನಡೆಯುವ ಮೊತ್ತೊಂದು ಸೆಮಿ ಪಂದ್ಯದಲ್ಲಿ ಭಾರತ ಮತ್ತು ಹಾಲಿ ಚಾಂಪಿಯನ್‌ ಇಂಗ್ಲೆಂಡ್​ ತಂಡದ ಸವಾಲನ್ನು ಎದುರಿಸಲಿದೆ.

ವೇಳಾಪಟ್ಟಿಯಂತೆ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ನಡುವಣ ಪಂದ್ಯ ಜೂನ್​ 26(ಇಂದು) ನಡೆಯುವ ಸ್ಪರ್ಧೆಯಾಗಿದೆ. ವಿಂಡೀಸ್​ನಲ್ಲಿ ಇದು ರಾತ್ರಿ ಪಂದ್ಯವಾದರೆ ಭಾರತೀಯ ಕಾಲಮಾನದಂತೆ ಗುರುವಾರ ಬೆಳಗ್ಗೆ ಪ್ರಸಾರಗೊಳ್ಳಲಿದೆ. ಈ ಪಂದ್ಯಕ್ಕೆ ಮಳೆ ಬಂದರೂ ಕೂಡ ಮೀಸಲು ದಿನವಿದೆ.

ಹಾಲಿ ಟಿ20 ವಿಶ್ವಕಪ್‌(T20 World Cup 2024) ಕ್ರಿಕೆಟ್‌ ಪಂದ್ಯಾವಳಿಯಲ್ಲಿ ನ್ಯೂಜಿಲ್ಯಾಂಡ್​, ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳಿಗೆ ಸೊಕ್ಕಡಗಿಸಿ ಕನಸಿನ ಓಟ ಬೆಳೆಸಿರುವ ಅಫಘಾನಿಸ್ತಾನ(AFG vs SA) ಸೆಮಿಫೈನಲ್​ನಲ್ಲಿಯೂ ಗೆಲುವು ಸಾಧಿಸುವ ಇರಾದೆಯಲ್ಲಿದೆ. ಅತ್ತ ಕೂಟದ ಅಜೇಯ ತಂಡವಾದ ದಕ್ಷಿಣ ಆಫ್ರಿಕಾದ (South Africa vs Afghanistan Semi Final 1) ಮೊದಲ ಬಾರಿಗೆ ಫೈನಲ್​ ಪ್ರವೇಶಿಸಿ ಚಾಂಪಿಯನ್​ ಪಟ್ಟ ಅಲಂಕರಸಿ ಚೋಕರ್ಸ್​ ಹಣೆಪಟ್ಟಿಯನ್ನು ಅಳಿಸಿ ಹಾಕುವ ಪಣತೊಟ್ಟಿದೆ. ಹೀಗಾಗಿ ಈ ಪಂದ್ಯವನ್ನು ಜಿದ್ದಾಜಿದ್ದಿನ ಪಂದ್ಯ ಎಂದಉ ನಿರೀಕ್ಷೆ ಮಾಡಬಹುದು.

ಇತ್ತಂಡಗಳಿಗೂ ಇದೆ ಅದೃಷ್ಟದ ಬಲ


ಈ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳಿಗೂ ಕೂಡ ಅದೃಷ್ಟ ಕೈ ಹಿಡಿದಿದೆ. ಲೀಗ್​ ಹಂತದಲ್ಲಿ ಸೋಲುವ ಪಂದ್ಯಗಳನ್ನು ಗೆದ್ದು ಸೂಪರ್​-8 ಹಂತಕ್ಕೇರಿತ್ತು. ಪ್ರತಿ ಐಸಿಸಿ ಟೂರ್ನಿಯಲ್ಲಿ ಗೆಲ್ಲುವ ಪಂದ್ಯಗಳನ್ನು ಸೋಲುವ ಮತ್ತು ಮಳೆಯಿಂದ ಹೊನ್ನಡೆ ಅನುಭವಿಸಿ ಚೋಕರ್ಸ್​ ಎನಿಸಿಕೊಳ್ಳುತ್ತಿದ್ದ ದಕ್ಷಿಣ ಆಫ್ರಿಕಾದ ನಸೀಬು ಈ ಬಾರಿ ಬದಲಾದಂತಿದೆ. ಲೀಗ್​ ಹಂತದಲ್ಲಿ ಬಾಂಗ್ಲಾ ವಿರುದ್ಧ 1 ರನ್​ ಅಂತರದಿಂದ ಗೆದ್ದದ್ದು, ಸೂಪರ್​-8 ಪಂದ್ಯದಲ್ಲಿ ವಿಂಡೀಸ್​ ಎದುರು ಮಳೆ ಪೀಡಿತ ಪಂದ್ಯವನ್ನು ಜಯಿಸಿದ್ದು ನೋಡುವಾಗ ಹರಿಣ ಪಡೆ ಈ ಬಾರಿ ಚೋಕರ್ಸ್​ ಹಣೆಪಟ್ಟಿಯನ್ನು ಕಳಚಿಕೊಳ್ಳುವ ಸಾಧ್ಯತೆಯೊಂದು ಕಂಡಿಬಂದಿದೆ.

ಇದನ್ನೂ ಓದಿ IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

ಸಿಡಿಯಬೇಕಿದೆ ಮಾರ್ಕ್ರಮ್​, ಕ್ಲಾಸೆನ್​, ಮಿಲ್ಲರ್​

ದಕ್ಷಿಣ ಆಫ್ರಿಕಾ ಪರ ಡಿ ಕಾಕ್​ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟರ್​ ಇದುವರೆಗೂ ನಿರೀಕ್ಷತ ಬ್ಯಾಟಿಂಗ್​ ಪ್ರದರ್ಶನ ತೋರದಿದ್ದರು. ಕೂಡ ಬೌಲಿಂಗ್​ ಮತ್ತು ಫೀಲ್ಡಿಂಗ್​ನಲ್ಲಿ ಉತ್ಕೃಷ್ಟ ಮಟ್ಟದ ಪ್ರದರ್ಶನ ತೋರುವ ಮೂಲಕ ಪಂದ್ಯವನ್ನು ಗೆದ್ದಿದ್ದಾರೆ. ಆದರೆ, ಸೆಮಿಫೈನಲ್​ನಲ್ಲಿಯೂ ಇದೇ ರೀತಿಯಲ್ಲಿ ಪಂದ್ಯವನ್ನು ಗೆಲ್ಲಬಹುದೆಂದು ಯೋಚಿಸಿ ಕುಳಿತರೆ ಸೋಲು ಎದುರಾಗುವುದು ಖಚಿತ ಎನ್ನಲಡ್ಡಿಯಿಲ್ಲ. ಏಕೆಂದರೆ, ಅಫಘಾನಿಸ್ತಾನ 100 ರನ್​ ಬಾರಿಸಿದರೂ ಕೂಡ ಇದನ್ನು ಹಿಡಿದು ನಿಲ್ಲಿಸುವ ತಾಕತ್ತು ಈ ತಂಡದ ಬೌಲರ್​ಗಳಿಗಿದೆ. ಸ್ಪಿನ್​, ಸ್ಪೀಡ್​ ಎರಡೂ ವಿಭಾಗದಲ್ಲಿಯೂ ವೈವಿಧ್ಯಮಯವಾಗಿದೆ. ಬ್ಯಾಟಿಂಗ್​ನಲ್ಲಿ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಪ್ರತಿ ಪಂದ್ಯದಲ್ಲಿಯೂ ಶ್ರೇಷ್ಠ ಬ್ಯಾಟಿಂಗ್​ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಮಧ್ಯಮ ವೇಗಿ ನವೀನ್​ ಉಲ್​ ಹಕ್​ ಕೂಡ ಘಾತಕ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

ಬಲಾಬಲ

ಅಫಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೂ ಟಿ20 ಕ್ರಿಕೆಟ್​ನಲ್ಲಿ 2 ಬಾರಿ ಮುಖಾಮುಖಿಯಾಗಿವೆ. ಈ ಎರಡೂ ಪಂದ್ಯಗಳನ್ನು ಕೂಡ ದಕ್ಷಿಣ ಆಫ್ರಿಕಾವೇ ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹರಿಣ ಪಡೆಯೇ ಬಲಿಷ್ಠವಾಗಿ ಗೋಚರಿಸಿದೆ. ಆದರೂ ಕೂಡ ಅಪಾಯಕಾರಿ ಆಫ್ಘನ್​ ಸವಾಲನ್ನು ಹಗುರವಾಗಿ ಕಾಣಬಾರದು. ಏಕೆಂದರೆ ಹೊಡಿ ಬಡಿ ಆಟವಾದ ಟಿ20 ಕ್ರಿಕೆಟ್​ನಲ್ಲಿ ಕೊನೆಯ ಎಸೆತದಲ್ಲಿಯೂ ಪಂದ್ಯದ ಫಲಿತಾಂಶ ಬದಲಾದ ನಿದರ್ಶನವಿದೆ.

Continue Reading

ಕ್ರೀಡೆ

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

IND vs ENG Semi Final: ಇಂಗ್ಲೆಂಡ್​ ನಾಯಕ ಜಾಸ್​ ಬಟ್ಲರ್‌, ಫಿಲ್​ ಸಾಲ್ಟ್​, ಜಾನಿ ಬೇರ್‌ಸ್ಟೊ, ಹ್ಯಾರಿ ಬ್ರೂಕ್​, ಸ್ಯಾಮ್​ ಕರನ್​, ಮೊಯಿನ್​ ಅಲಿ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ಟಿ20ಗೆ ಹೇಳಿ ಮಾಡಿಸಿದಂತಿದೆ. ಇವರನ್ನು ನಿಯಂತ್ರಿಸುವುದರಲ್ಲಿ ಭಾರತದ ಯಶಸ್ಸು ಅಡಗಿದೆ.

VISTARANEWS.COM


on

Koo

ಟರೂಬ/ಪ್ರೊವಿಡೆನ್ಸ್‌: ಚುಟುಕು ಕ್ರಿಕೆಟ್‌ನಲ್ಲಿ ತನ್ನದೇ ಹೆಗ್ಗುರುತು ಸ್ಥಾಪಿಸಿರುವ ಟೀಮ್‌ ಇಂಡಿಯಾ ನಾಳೆ (ಗುರುವಾರ) ನಡೆಯುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯ ಸೆಮಿಫೈನಲ್​(IND vs ENG Semi Final) ಪಂದ್ಯದಲ್ಲಿ ಇಂಗ್ಲೆಂಡ್(IND vs ENG)​ ವಿರುದ್ಧ ಅದೃಷ್ಠ ಪರೀಕ್ಷೆಗೆ ಇಳಿಯಲಿದೆ. ಸೀಮಿತ ಓವರ್‌ಗಳ ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ಕಳೆದ ಕೆಲವು ವರ್ಷಗಳಿಂದ ಸ್ಥಿರತೆಯನ್ನು ಕಾಪಾಡಿಕೊಂಡು ಬಂದಿದೆ. ಅತ್ತ ಹಾಲಿ ಚಾಂಪಿಯನ್​ ಆಗಿರುವ ಇಂಗ್ಲೆಂಡ್​ ಸಹ ಇತ್ತೀಚೆಗೆ ಟಿ20ಗಳಲ್ಲಿ ಬಲಾಡ್ಯ ತಂಡವಾಗಿ ಹೊರಹೊಮ್ಮಿದೆ. ಹೀಗಾಗಿ ಇತ್ತಂಡಗಳ ನಡುವಿನ ಕ್ರಿಕೆಟ್‌ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಭಾರತಕ್ಕೆ ಕೊಹ್ಲಿಯದ್ದೇ ಚಿಂತೆ


ಪ್ರತಿ ಐಸಿಸಿ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ತೋರುವ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿಯ ಬ್ಯಾಟ್​ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಸದ್ದು ಮಾಡುತ್ತಿಲ್ಲ. ಇದು ಭಾರತ ತಂಡಕ್ಕೆ ದೊಡ್ಡ ಚಿಂತೆ ಉಂಟು ಮಾಡಿದೆ. ಆಡಿದ 7 ಪಂದ್ಯಗಳಲ್ಲಿ 2 ಶೂನ್ಯ ಸುತ್ತಿದ್ದಾರೆ. ಒಂದು ಪಂದ್ಯದಲ್ಲಿ ಮಾತ್ರ ಎರಡಂಕಿ ದಾಟಿದ್ದಾರೆ. ಹೀಗಾಗಿ ಕೊಹ್ಲಿ ಇಂಗ್ಲೆಂಡ್‌ ವಿರುದ್ಧ ಸಿಡಿದು ನಿಲ್ಲಬೇಕಾದುದ ಅನಿವಾರ್ಯತೆ ಇದೆ. ಕೊಹ್ಲಿ ಜತೆಗೆ ಶಿವಂ ದುಬೆ ಕೂಡ ಸಿಡಿದು ನಿಲ್ಲಬೇಕಿದೆ. ಐಪಿಎಲ್​ನಲ್ಲಿ ತೋರಿದ ಬ್ಯಾಟಿಂಗ್​ ಆರ್ಭಟವನ್ನು ದುಬೆ ಈ ಟೂರ್ನಿಯಲ್ಲಿ ಇದುವರೆಗೆ ತೋರಿಸಿಲ್ಲ. ಎಲ್ಲ ಪಂದ್ಯಗಳಲ್ಲಿಯೂ ಆಮೆ ಗತಿಯ ಬ್ಯಾಟಿಂಗ್​ ನಡೆಸಿ ತಂಡದ ಬೃಹತ್​ ಮೊತ್ತಕ್ಕೆ ಹಿನ್ನಡೆ ಉಂಟುಮಾಡುತ್ತಿದ್ದಾರೆ.

ಉಪನಾಯಕ ಹಾರ್ದಿಕ್​ ಪಾಂಡ್ಯ ಅವರು ಈ ಬಾರಿಯ ಐಪಿಎಲ್​ನಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಘೋರ ವೈಫಲ್ಯ ಕಂಡಿದ್ದರು. ಅವರನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಿದಾಗ ಭಾರೀ ಟೀಕೆಗಳು ವ್ಯಕ್ತವಾಗಿತ್ತು. ಆದರೆ, ಪಾಂಡ್ಯ ಪ್ರತಿ ಪಂದ್ಯದಲ್ಲಿಯೂ ತಂಡಕ್ಕೆ ನೆರವಾಗುವ ಮೂಲಕ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಂದು ಪಾಂಡ್ಯ ಬೇಡ ಎಂದವರು ಇಂದು ಪಾಂಡ್ಯ ಇಲ್ಲದೇ ಇದ್ದರೆ ಗೆಲುವು ಕಷ್ಟ ಎನ್ನುತ್ತಿದ್ದಾರೆ. ಕಳೆದ ಆಸೀಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ನಡೆಸಿದ ನಾಯಕ ರೋಹಿತ್​ ಶರ್ಮ ಅವರ ಬ್ಯಾಟಿಂಗ್​ ಮೇಲೆ ಈ ಪಂದ್ಯದಲ್ಲಿಯೂ ತಂಡ ನಂಬಿಕೆ ಇರಿಸಿದೆ.

ಇದನ್ನೂ ಓದಿ IND vs ENG: ಇಂಗ್ಲೆಂಡ್‌ ಎದುರು ಭಾರತಕ್ಕೆ ಸೇಡಿನ ಪಂದ್ಯ; ನಾಳೆ ದ್ವಿತೀಯ ಸೆಮಿಫೈನಲ್​

ಇಂಗ್ಲೆಂಡ್​ ಕೂಡ ಬಲಿಷ್ಠ

ಇಂಗ್ಲೆಂಡ್​ ನಾಯಕ ಜಾಸ್​ ಬಟ್ಲರ್‌, ಫಿಲ್​ ಸಾಲ್ಟ್​, ಜಾನಿ ಬೇರ್‌ಸ್ಟೊ, ​ಲಿವಿಂಗ್​​ಸ್ಟೋನ್​, ಹ್ಯಾರಿ ಬ್ರೂಕ್​, ಸ್ಯಾಮ್​ ಕರನ್​, ಮೊಯಿನ್​ ಅಲಿ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ಟಿ20ಗೆ ಹೇಳಿ ಮಾಡಿಸಿದಂತಿದೆ. ಇವರನ್ನು ನಿಯಂತ್ರಿಸುವುದರಲ್ಲಿ ಭಾರತದ ಯಶಸ್ಸು ಅಡಗಿದೆ. ಕಳೆದ ಕೆಲವು ವರ್ಷಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದ ಘಾತಕ ವೇಗಿ ಜೋಫ್ರಾ ಆರ್ಚರ್​ ಕೂಡ ತಂಡಕ್ಕೆ ಮರಳಿದ್ದು ಇಂಗ್ಲೆಂಡ್​ ಬೌಲಿಂಗ್​ ಬಲವನ್ನು ಹೆಚ್ಚಿಸಿದೆ.

ಸೇಡಿನ ಪಂದ್ಯ

2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಇಂಗ್ಲೆಂಡ್​ ತಂಡ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ. ಇದರಲ್ಲಿ ರೋಹಿತ್​ ಬಳಗ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದೊಂದು ಕುತೂಹಲ.

Continue Reading

ಕ್ರೀಡೆ

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Para Badminton Ranking: ಹೊಸದಾಗಿ ಪ್ರಕಟಗೊಂಡ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಸುಹಾಸ್‌ ಒಂದು ಸ್ಥಾನ ಏರಿಕೆ ಕಾಣುವ ಮೂಲಕ ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಫ್ರಾನ್ಸ್‌ನ ಲುಕಾಸ್‌ ಮಜುರ್‌ರನ್ನು ಹಿಂದಿಕ್ಕಿದರು

VISTARANEWS.COM


on

Para Badminton Ranking
Koo

ನವದೆಹಲಿ: ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ, ಕನ್ನಡಿಗ ಸುಹಾಸ್ ಯತಿರಾಜ್(Suhas Lalinakere Yathiraj) ಅವರು ಪ್ಯಾರಾ ಬ್ಯಾಡ್ಮಿಂಟನ್‌ ಪುರುಷರ ಸಿಂಗಲ್ಸ್‌ನ(Para Badminton Ranking) ಎಸ್‌ಎಲ್‌4 ವಿಭಾಗದಲ್ಲಿ ವಿಶ್ವ ನಂ.1 ಸ್ಥಾನಕ್ಕೇರಿದ್ದಾರೆ. ಈ ಸಂತಸ ವಿಚಾರವನ್ನು ಸುಹಾಸ್(Suhas L Yathiraj) ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

ಹೊಸದಾಗಿ ಪ್ರಕಟಗೊಂಡ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಸುಹಾಸ್‌ ಒಂದು ಸ್ಥಾನ ಏರಿಕೆ ಕಾಣುವ ಮೂಲಕ ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಫ್ರಾನ್ಸ್‌ನ ಲುಕಾಸ್‌ ಮಜುರ್‌ರನ್ನು ಹಿಂದಿಕ್ಕಿದರು. ಸುಹಾಸ್​ ಇದೇ ವರ್ಷ ಥಾಯ್ಲೆಂಡ್‌ನಲ್ಲಿ ನಡೆದಿದ್ದ ಪ್ಯಾರಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದ ಜಯಿಸಿದ್ದರು. ಪ್ಯಾರಾ ಏಷ್ಯನ್‌ ಗೇಮ್ಸ್‌ನಲ್ಲಿ 2 ಬಾರಿ ಸ್ವರ್ಣ ಪದಕ ಗೆದ್ದಿರುವ ಅವರು ಮುಂದಿನ ತಿಂಗಳು ನಡೆಯುವ ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ.

“ಅಂತಿಮವಾಗಿ ವಿಶ್ವ ನಂಬರ್ 1… ಈ ವಿಚಾರವನ್ನು ಹಂಚಿಕೊಳ್ಳಲು ಸಂತೋಷವಾಗಿದೆ. ಪುರುಷರ ಸಿಂಗಲ್ಸ್ ವಿಭಾಗಕ್ಕೆ ಘೋಷಿಸಲಾದ ಇತ್ತೀಚಿನ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಪ್ಯಾರಾ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ, ನಾನು ವಿಶ್ವದ ಅಗ್ರ ಶ್ರೇಯಾಂಕವನ್ನು ಪಡೆದುಕೊಂಡಿದ್ದೇನೆ. ಜೀವನದಲ್ಲಿ ಮೊದಲ ಬಾರಿಗೆ ಈ ಸಾಧನೆ ಮಾಡಿ ಫ್ರಾನ್ಸ್‌ನ ಲೂಕಾಸ್ ಮಜೂರ್ ಅವರ ಸ್ಥಾನವನ್ನು ವಶಪಡಿಸಿಕೊಂಡಿರುವೆ. ನಿಮ್ಮ ಆಶೀರ್ವಾದ ಮತ್ತು ಹಾರೈಕೆ ಹೀಗೆ ಇರಲಿ. ಜೈ ಹಿಂದ್” ಎಂದು ಸುಹಾಸ್ ಯತಿರಾಜ್ ಟ್ವಿಟರ್​ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ Spanish Para-Badminton: ಕಂಚಿನ ಪದಕ ವಿಜೇತ ಕನ್ನಡಿಗ ಸುಹಾಸ್ ಸ್ವದೇಶಕ್ಕೆ ಆಗಮನ

ಉತ್ತರ ಪ್ರದೇಶದ ಗೌತಮ್‌ ಬುದ್ಧ ನಗರದ ಜಿಲ್ಲಾಧಿಕಾರಿಯಾಗಿರುವ ಸುಹಾಸ್‌ ಹಾಸನ ಮೂಲದ ಐಎಎಸ್ ಅಧಿಕಾರಿಯಾಗಿದ್ದಾರೆ. ಎಸ್‌ಎಲ್‌4 ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಅವರು ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಫೈನಲ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು. ಈ ಮೂಲಕ ಪ್ಯಾರಾಲಿಂಪಿಕ್ಸ್‌ ಪದಕ ಗೆದ್ದ ಮೊದಲ ಐಎಎಸ್‌ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಿದ್ದರು.

2007ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಸುಹಾಸ್‌, ದುರ್ಬಲ ಕಾಲನ್ನು ಹೊಂದಿದ್ದಾರೆ. ಕಾಲಿನಲ್ಲಿ ತೀವ್ರ ಬಲಹೀನತೆಯಿದ್ದರೆ ಅಂತಹವರನ್ನು ಎಸ್‌ಎಲ್‌4 ವಿಭಾಗಕ್ಕೆ ಸೇರಿಸಲಾಗುತ್ತದೆ. ಇಂತಹ ಸಮಸ್ಯೆಗಳ ಮಧ್ಯೆಯೂ ಸುಹಾಸ್‌ ಐಎಎಸ್‌ ಅಧಿಕಾರಿಯಾಗಿದ್ದಾರೆ.

ಸುಹಾಸ್‌ ಅವರು ಹಿಂದೆಮ್ಮೊ ಸಂದರ್ಶನದಲ್ಲಿ ಮಾತನಾಡುವ ವೇಳೆ “ದೇಶವನ್ನು ಪ್ರತಿನಿಧಿಸುವುದು ಗೌರವದ ವಿಷಯ. ಅದರಲ್ಲೂ ದೇಶಕ್ಕಾಗಿ ಪದಕ ಗೆಲ್ಲುವುದು ತುಂಬಾ ಹೆಮ್ಮೆ ಮತ್ತು ಸಂತೋಷದ ಕ್ಷಣವಾಗಿರುತ್ತದೆ. ಯಾವಾಗಲೂ ಅತ್ಯುತ್ತಮ ಪ್ರದರ್ಶನಕ್ಕೆ ಪ್ರಯತ್ನ ನಡೆಸುತ್ತಿರುತ್ತೇನೆ” ಎಂದು ಹೇಳಿದ್ದರು. ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಜಯಿಸಲಿ ಎನ್ನುವುದು ಎಲ್ಲ ಕನ್ನಡಿಗರ ಆಶಯವಾಗಿದೆ.

Continue Reading

ಕ್ರೀಡೆ

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

1983 World Cup: ವೆಸ್ಟ್​ ಇಂಡೀಸ್​ನಲ್ಲಿರುವ ಟೀಮ್​ ಇಂಡಿಯಾ ಆಟಗಾರರಾದ ರಿಷಭ್​ ಪಂತ್​, ಮೊಹಮ್ಮದ್​ ಸಿರಾಜ್​, ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಅಗರ್ಕರ್​ ಸೇರಿ ಕೆಲ ಆಟಗಾರರು ಲೆಜಂಡರಿ ಕ್ರಿಕೆಟಿಗರ ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಕೇಕ್ ಕತ್ತರಿಸಿ ಅಂದಿನ ಚೊಚ್ಚಲ ವಿಶ್ವಕಪ್​ ಗೆಲುವನ್ನು ಸಂಭ್ರಮಿಸಿದರು

VISTARANEWS.COM


on

1983 World Cup
Koo

ಗಯಾನ: ಭಾರತೀಯ ಕ್ರಿಕೆಟಿನ ದಿಕ್ಕನ್ನೇ ಬದಲಿಸಿದ ಈ ಮಹಾ ವಿಜಯಕ್ಕೆ(1983 World Cup) ಮಂಗಳವಾರ 41 ವರ್ಷ ತುಂಬಿತು(1983 WC Win Anniversary). 1983ರ ಜೂ. 25ರಂದು ಐತಿಹಾಸಿಕ ಲಾರ್ಡ್ಸ್‌ ಅಂಗಳದಲ್ಲಿ ಎರಡು ಬಾರಿಯ ಹಾಲಿ ಚಾಂಪಿಯನ್‌, ಭಯಾನಕ ವೆಸ್ಟ್‌ ಇಂಡೀಸ್​ ತಂಡವನ್ನು ಫೈನಲ್‌ನಲ್ಲಿ 43 ರನ್ನುಗಳಿಂದ ಉರುಳಿಸಿದ “ಕಪಿಲ್‌ ಡೆವಿಲ್ಸ್‌’ ಹೊಸ ಇತಿಹಾಸ ಬರೆದ ಅದ್ಭುತ ಕ್ಷಣವದು. ಈ ಸಂಭ್ರಮಕ್ಕೆ 41 ವರ್ಷ ತುಂಬಿದ ನಿಟ್ಟಿನಲ್ಲಿ ಅಂದಿನ ವಿಶ್ವಕಪ್​ ತಂಡದ ಸದಸ್ಯರಾದ ರವಿಶಾಸ್ತ್ರಿ(Ravi Shastri), ಸುನೀಲ್ ಗವಾಸ್ಕರ್(Sunil Gavaskar)​ ಮತ್ತು ಪ್ರಸ್ತುತ ಬಿಸಿಸಿಐ ಅಧ್ಯಕ್ಷರಾಗಿರುವ ರೋಜರ್ ಬಿನ್ನಿ(Roger Binny) ಅವರು ಹಾಲಿ ಟಿ20 ವಿಶ್ವಕಪ್​ ಆಡುತ್ತಿರುವ ಟೀಮ್​ ಇಂಡಿಯಾ ಆಟಗಾರರೊಂದಿಗೆ ಸಂಭ್ರಮಾಚರಣನೆ ನಡೆಸಿದ್ದಾರೆ.

ವೆಸ್ಟ್​ ಇಂಡೀಸ್​ನಲ್ಲಿರುವ ಟೀಮ್​ ಇಂಡಿಯಾ ಆಟಗಾರರಾದ ರಿಷಭ್​ ಪಂತ್​(Rishabh Pant), ಮೊಹಮ್ಮದ್​ ಸಿರಾಜ್​, ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಅಗರ್ಕರ್​ ಸೇರಿ ಕೆಲ ಆಟಗಾರರು ಲೆಜಂಡರಿ ಕ್ರಿಕೆಟಿಗರ ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಕೇಕ್ ಕತ್ತರಿಸಿ ಅಂದಿನ ಚೊಚ್ಚಲ ವಿಶ್ವಕಪ್​ ಗೆಲುವನ್ನು ಸಂಭ್ರಮಿಸಿದರು. ಈ ಸುಂದರ ಕ್ಷಣದ ಫೋಟೊವನ್ನು ರವಿಶ್ರಾಸ್ತ್ರಿ ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟನ್ನು ಐಸಿಸಿ ಕೂಡ ಶೇರ್​ ಮಾಡಿದೆ.

ಆ ಕಾಲಕ್ಕೆ ಭಾರತದಲ್ಲಿ ಇನ್ನೂ ಕ್ರಿಕೆಟ್​ ಅಷ್ಟಾಗಿ ಖ್ಯಾತಿ ಪಡೆದಿರಲಿಲ್ಲ. ಭಾರತ ತಂಡವೂ ಕೂಡ ಬಲಿಷ್ಠವಾಗಿರಲಿಲ್ಲ. ಕೇವಲ ಲೆಕ್ಕ ಭರ್ತಿಗೆ ಇದ್ದ ತಂಡ ಎಂದು ಎಲ್ಲರಿಂದಲೂ ಅಪಹಾಸ್ಯಕ್ಕೆ ಒಳಗಾಗಿತ್ತು. ಜತೆಗೆ ಭಾರತೀಯ ಆಟಗಾರರಿಗೂ ಇದೊಂದು ವಿದೇಶ ಪ್ರವಾಸ ಎಂಬ ಭಾವನೆ ಇದ್ದಿತ್ತು. ಆದರೆ ಲಂಡನ್​ನಲ್ಲಿ ನಡೆದದ್ದೇ ಬೇರೆ.

ಫೈನಲ್​ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್​ ಎದುರಾದಾಗ ಇಡೀ ವಿಶ್ವವೇ ಮತ್ತೊಮ್ಮೆ ವಿಂಡೀಸ್​ ಚಾಂಪಿಯನ್​ ಆಗಲಿದೆ ಎಂದು ಹೇಳಿದ್ದರು. ಆದರೆ, ಕಪಿಲ್​ದೇವ್​ ನೇತೃತ್ವದ ಭಾರತ ತಂಡ ಅಸಾಧಾರಣ ಪ್ರದರ್ಶನ ತೋರಿ ಹ್ಯಾಟ್ರಿಕ್​​ ಹಾದಿಯಲ್ಲಿದ್ದ ವಿಂಡೀಸ್​ ತಂಡವನ್ನು ಕಟ್ಟಿಹಾಕಿ ಇತಿಹಾಸ ನಿರ್ಮಿಸಿದರು.

ಇದನ್ನೂ ಓದಿ 1983 World Cup: ಕಪಿಲ್‌ ಪಡೆಯ ಏಕದಿನ ವಿಶ್ವಕಪ್‌ ವಿಜಯ ದಿವಸಕ್ಕೆ 40ರ ಸಂಭ್ರಮ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ 183 ರನ್​ಗಳಿಗೆ ಆಲೌಟ್​ ಆಯಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ವಿಂಡೀಸ್​ಗೆ ಛಲ ಬಿಡದ ಮದನ್​ಲಾಲ್​ ಮತ್ತು ಮೊಹಿಂದರ್​ ಅಮರ್​ನಾಥ್​(Mohinder Amarnath) ಉತ್ಕೃಷ್ಟ ಮಟ್ಟದ ಬೌಲಿಂಗ್​ ನಡೆಸಿ ತಲಾ 3 ವಿಕೆಟ್​ ಕೆಡವಿದರು. ಅಂತಿಮವಾಗಿ ಕೆರೆಬಿಯನ್ನರನ್ನು 140 ರನ್​​ಗೆ ಆಲೌಟ್​ ಮಾಡುವ ಮೂಲಕ 43 ರನ್​ಗಳಿಂದ ಗೆಲುವು ಸಾಧಿಸಿ ದೇಶಕ್ಕೆ ಮೊದಲ ಏಕದಿನ ವಿಶ್ವಕಪ್​ ತಂದುಕೊಟ್ಟರು. ನಾಯಕ ಕಪಿಲ್​ದೇವ್​ ಅವರು ಲಾರ್ಡ್ಸ್​ನಲ್ಲಿ ಕಪ್​ ಎತ್ತಿ ಭಾರತದ ವಿಜಯ ಪತಾಕೆ ಹಾರಿಸಿದ್ದರು.

ಅಂದಿನ ಕಪಿಲ್‌ ಪಡೆಯ ಓರ್ವ ಸದಸ್ಯ ಸಯ್ಯದ್‌ ಕಿರ್ಮಾನಿ ಹೇಳಿದಂತೆ “ನಮ್ಮ 1983ರ ವಿಶ್ವಕಪ್‌ ಗೆಲುವು ಮೊದಲ ಪ್ರೀತಿಯಂತೆ, ಯಾವತ್ತೂ ಮರೆಯಲಾಗದ್ದು” ನಿಜಕ್ಕೂ ಈ ಮಾತು ಇಂದಿಗೂ ಮರೆಯಲಾಗದಂತೆ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದುಕೊಂಡಿದೆ.

Continue Reading
Advertisement
Bhaavaramayana Ramavatarana book release programme on June 29 in Bengaluru
ಕರ್ನಾಟಕ2 mins ago

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Varthur Santhosh Animal Transport Rules Violation Allegation
ಕ್ರೈಂ5 mins ago

Varthur Santhosh: ಹಳ್ಳಿಕಾರ್ ರೇಸ್ ನಡೆಸಲು ಸಜ್ಜಾಗುತ್ತಿದ್ದ ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು

Hijab Ban
ದೇಶ6 mins ago

Hijab Ban: ತರಗತಿಯಲ್ಲಿ ಹಿಜಾಬ್‌, ಬುರ್ಖಾ ನಿಷೇಧ; ಕಾಲೇಜು ಆದೇಶ ಎತ್ತಿಹಿಡಿದ ಹೈಕೋರ್ಟ್‌

honey trap harish gowda
ಕ್ರೈಂ11 mins ago

Honey Trap: ಎಂಎಲ್‌ಎ ಹರೀಶ್‌ ಗೌಡಗೆ ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್‌ ಸೆರೆ, ಇವರ ಖತರ್‌ನಾಕ್‌ ಐಡಿಯಾ ನೋಡಿ!

Kangana Ranaut Chirag Paswan In Parliament
ಬಾಲಿವುಡ್23 mins ago

Kangana Ranaut: ಸಂಸತ್ತಿನ ಹೊರಗೆ ಕೈ ಕುಲುಕಿ ಸಂತಸದ ಕ್ಷಣ ಹಂಚಿಕೊಂಡ ಚಿರಾಗ್ ಪಾಸ್ವಾನ್-ಕಂಗನಾ!

Viral Video
Latest41 mins ago

Viral Video: ಸಿಮೆಂಟ್, ಕಲ್ಲಿನಿಂದ ವಾಷಿಂಗ್ ಮೆಷಿನ್ ತಯಾರಿಸಿದ ಮಹಿಳೆ; ಹೇಗೆ ಕೆಲಸ ಮಾಡುತ್ತೆ ನೋಡಿ!

Terrorist Killed
ದೇಶ41 mins ago

Terrorist Killed: ಮುಂದುವರಿದ ಉಗ್ರರ ಬೇಟೆ; ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

Viral Video
Latest45 mins ago

Viral Video: ಮುಂದಿನ ಐದು ಸಾಲಿನಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ! ಇದು ಸ್ವಾಮೀಜಿಯೊಬ್ಬರ ಕಂಡೀಷನ್‌!

AFG vs SA Semi Final
ಕ್ರೀಡೆ53 mins ago

AFG vs SA Semi Final: ಚೊಚ್ಚಲ ಫೈನಲ್​ ನಿರೀಕ್ಷೆಯಲ್ಲಿ ಆಫ್ಘನ್​-ದಕ್ಷಿಣ ಆಫ್ರಿಕಾ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್?​

Development of Gaanagapura kshethra on Pandharpur, Thulajapur model says DC Fauzia Tarannum
ಕಲಬುರಗಿ58 mins ago

Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌