Site icon Vistara News

KL Rahul : ಮದುವೆ ಆ್ಯನಿವರ್ಸರಿ ಕ್ಯೂಟ್ ವಿಡಿಯೊ ಪೋಸ್ಟ್​ ಮಾಡಿದ ಕೆ. ಎಲ್​ ರಾಹುಲ್​

KL Rahul

ಬೆಂಗಳೂರು: ಟೀಂ ಇಂಡಿಯಾ ವಿಕೆಟ್​ಕೀಪರ್​ ಬ್ಯಾಟರ್​ ಕೆ.ಎಲ್.ರಾಹುಲ್ (KL Rahul) ತಮ್ಮ ಪತ್ನಿ ಅಥಿಯಾ ಶೆಟ್ಟಿ ಅವರೊಂದಿಗೆ ತಮ್ಮ ಮೊದಲ ವಿವಾಹ ವಾರ್ಷಿಕೋತ್ಸವದ ಖುಷಿಯನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 31 ವರ್ಷದ ರಾಹುಲ್​ ಜನವರಿ 23ರಂದು ಇನ್​ಸ್ಟಾಗ್ರಾಮ್​ನಲ್ಲಿ ಒಂದು ನಿಮಿಷದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅಂದರೆ ಇಂಗ್ಲೆಂಡ್ ವಿರುದ್ಧದ ಭಾರತದ ಐದು ಪಂದ್ಯಗಳ ಟೆಸ್ಟ್ ಸರಣಿ ತಯಾರಾಗುತ್ತಿರುವ ಅವರು ವಾರ್ಷಿಕೋತ್ಸವದ ಖುಷಿಯನ್ನು ಅನುಭವಿಸಿದ್ದಾರೆ.

ಜನವರಿ 23, 2023ರಂದು ಭಾರತದ ವಿಕೆಟ್ ಕೀಪರ್-ಬ್ಯಾಟರ್​ ಕೆಎಲ್ ರಾಹುಲ್ ದೀರ್ಘಕಾಲದ ಸಂಗಾತಿ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಅವರನ್ನು ವಿವಾಹವಾದರು. ಕ್ರಿಕೆಟಿಗ ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಭಾರತದ ಟೆಸ್ಟ್ ಪಂದ್ಯಕ್ಕಾಗಿ ಹೈದರಾಬಾದ್​ನಲ್ಲಿರುವ ಅವರು ಮದುವೆಯ ಖುಷಿಯ ಸಂದರ್ಭಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಾಕಿಕೊಂಡಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕೆ.ಎಲ್. ರಾಹುಲ್ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತದ 16 ಆಟಗಾರರ ಆಯ್ಕೆಯಾದರು. ದಕ್ಷಿಣ ಆಫ್ರಿಕಾದಲ್ಲಿ ನಡೆದ ಹಿಂದಿನ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ ಗ್ಲವ್ಸ್​​ ಧರಿಸಿದ್ದರೂ 49 ಪಂದ್ಯಗಳ ಅನುಭವಿ ಆಟಗಾರ ಸಂಪೂರ್ಣವಾಗಿ ಬ್ಯಾಟರ್​ ಆಗಿ ಈ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಡಿಸೆಂಬರ್​ನಲ್ಲಿ ಸೆಂಚೂರಿಯನ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಶತಕ ಬಾರಿಸಿದ ಬಲಗೈ ಬ್ಯಾಟ್ಸ್ಮನ್, ಅಫ್ಘಾನಿಸ್ತಾನ ವಿರುದ್ಧದ ತವರು ಸರಣಿಗೆ ಭಾರತದ ಟಿ 20ಐ ತಂಡದಲ್ಲಿ ಆಡಿರಲಿಲ್ಲ. ಜನವರಿ ಮತ್ತು ಮಾರ್ಚ್ ನಡುವೆ ಭಾರತವು ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಆಡಲು ಸಜ್ಜಾಗಿದೆ. ಈ ಪಂದ್ಯಗಳು ನಡೆಯುತ್ತಿರುವ 2023-25 ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ (ಡಬ್ಲ್ಯುಟಿಸಿ) ಋತುವಿನ ಭಾಗವಾಗಿದೆ.

ಇದನ್ನೂ ಓದಿ : BCCI Award : ಅದ್ಧೂರಿಯಾಗಿ ನಡೆದ ಬಿಸಿಸಿಐ ಪ್ರಶಸ್ತಿ ಪ್ರದಾನ, ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ

ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯ ಜನವರಿ 25ರಿಂದ ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್​ ಅಲ್ಲ, ಮತ್ಯಾರಿಗೆ ಹೊಣೆ?

ಬೆಂಗಳೂರು: ಜನವರಿ 25ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ (Ind vs Eng) 5 ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಸಜ್ಜಾಗಿದೆ. ಹೈದರಾಬಾದ್​​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಟೆಸ್ಟ್ ಸಮೀಪಿಸುತ್ತಿರುವುದರಿಂದ ಭಾರತ ವಿರುದ್ಧದ ಸರಣಿಗೆ ಭಾರತದ ವಿಕೆಟ್ ಕೀಪರ್ ಯಾರು ಎಂಬ ಬಗ್ಗೆ ಅನೇಕ ಚರ್ಚೆಗಳು ನಡೆದಿವೆ.

ಕೆಎಲ್ ರಾಹುಲ್, ಕೆಎಸ್ ಭರತ್ ಮತ್ತು ಧ್ರುವ್ ಜುರೆಲ್ ಸೇರಿದಂತೆ ಮೂವರು ವಿಕೆಟ್​ಕೀಪರ್​ಗಳು ಭಾರತ ತಂಡದಲ್ಲಿದ್ದಾರೆ. ಆದರೆ, ಇಂಗ್ಲೆಂಡ್ ವಿರುದ್ಧ ಭಾರತ ತಂಡಕ್ಕಾಗಿ ಯಾರು ಗ್ಲವ್ಸ್​ ಧರಿಸುತ್ತಾರೆ ಎಂಬ ಬಗ್ಗೆ ಅನೇಕ ಚರ್ಚೆಗಳು ನಡೆಯುತತಿದೆ. ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಈ ವಿಷಯಕ್ಕೆ ಕೊನೆ ಹಾಡಲು ಮುಂದಾಗಿದ್ದು ರಾಹುಲ್ ಗ್ಲವ್ಸ್​ ಹಾಕುವುದಿಲ್ಲ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ವಿಕೆಟ್ ಕೀಪಿಂಗ್ ಮಾಡುವಲ್ಲಿ ರಾಹುಲ್ ಅದ್ಭುತ ಕೆಲಸ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟಿರುವ ರಾಹುಲ್, ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೈಗವಸು ಧರಿಸುವುದಿಲ್ಲ. ತಂಡವು ಆಯ್ಕೆ ಮಾಡಿದ ಇತರ ಎರಡು ಆಟಗಾರರ ನಡುವೆ ಆಯ್ಕೆ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Exit mobile version