ಸುಬ್ರಹ್ಮಣ್ಯ: ಟೀಮ್ ಇಂಡಿಯಾದ ಆಟಗಾರ ಕೆ.ಎಲ್. ರಾಹುಲ್ (KL Rahul) ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತಮ್ಮ ಸ್ನೇಹಿತರೊಂದಿಗೆ ಆಗಮಿಸಿ, ದೇವರ ದರ್ಶನ ಪಡೆದರು. ಪ್ರಾರ್ಥನೆ ಸಲ್ಲಿಸಿದ ಬಳಿಕ ಅವರು ದೇಗುಲದಲ್ಲಿ ಪ್ರಸಾದ ಸ್ವೀಕರಿಸಿದರು.
ಟಿ20 ವಿಶ್ವ ಕಪ್‌ನ ವೈಫಲ್ಯದ ನಿರಾಸೆಯ ನಡುವೆ ವೈಯಕ್ತಿಕ ಜೀವನದಲ್ಲಿ ದೊಡ್ಡ ನಿರ್ಧಾರ ಕೈಗೊಂಡಿರುವ ಕೆ.ಎಲ್. ರಾಹುಲ್ ಮುಂದಿನ ವರ್ಷದ ಜನವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸ್ನೇಹಿತರ ಜತೆಗೆ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ಮಹಾಪೂಜೆಯಲ್ಲೂ ಕೂಡ ಭಾಗಿಯಾದರು. ಈ ಸಮಯದಲ್ಲಿ ದೇವಳದ ವತಿಯಿಂದ ಕೆ.ಎಲ್. ರಾಹುಲ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಮತ್ತಿತರರು ದೇವಸ್ಥಾನದ ವತಿಯಿಂದ ರಾಹುಲ್ ಅವರನ್ನು ಗೌರವಿಸಿದರು.
ಇದನ್ನೂ ಓದಿ | IND VS NZ | ಭಾರತ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ ಅಂತಿಮ ಟಿ20 ಪಂದ್ಯ ಟೈನಲ್ಲಿ ಅಂತ್ಯ; ಸರಣಿ ಗೆದ್ದ ಭಾರತ