ಬೆಂಗಳೂರು: ಜನವರಿ 25ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ (Ind vs Eng) 5 ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಸಜ್ಜಾಗಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಟೆಸ್ಟ್ ಸಮೀಪಿಸುತ್ತಿರುವುದರಿಂದ ಭಾರತ ವಿರುದ್ಧದ ಸರಣಿಗೆ ಭಾರತದ ವಿಕೆಟ್ ಕೀಪರ್ ಯಾರು ಎಂಬ ಬಗ್ಗೆ ಅನೇಕ ಚರ್ಚೆಗಳು ನಡೆದಿವೆ.
ಕೆಎಲ್ ರಾಹುಲ್, ಕೆಎಸ್ ಭರತ್ ಮತ್ತು ಧ್ರುವ್ ಜುರೆಲ್ ಸೇರಿದಂತೆ ಮೂವರು ವಿಕೆಟ್ಕೀಪರ್ಗಳು ಭಾರತ ತಂಡದಲ್ಲಿದ್ದಾರೆ. ಆದರೆ, ಇಂಗ್ಲೆಂಡ್ ವಿರುದ್ಧ ಭಾರತ ತಂಡಕ್ಕಾಗಿ ಯಾರು ಗ್ಲವ್ಸ್ ಧರಿಸುತ್ತಾರೆ ಎಂಬ ಬಗ್ಗೆ ಅನೇಕ ಚರ್ಚೆಗಳು ನಡೆಯುತತಿದೆ. ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಈ ವಿಷಯಕ್ಕೆ ಕೊನೆ ಹಾಡಲು ಮುಂದಾಗಿದ್ದು ರಾಹುಲ್ ಗ್ಲವ್ಸ್ ಹಾಕುವುದಿಲ್ಲ ಎಂದು ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ವಿಕೆಟ್ ಕೀಪಿಂಗ್ ಮಾಡುವಲ್ಲಿ ರಾಹುಲ್ ಅದ್ಭುತ ಕೆಲಸ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟಿರುವ ರಾಹುಲ್, ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೈಗವಸು ಧರಿಸುವುದಿಲ್ಲ. ತಂಡವು ಆಯ್ಕೆ ಮಾಡಿದ ಇತರ ಎರಡು ಆಟಗಾರರ ನಡುವೆ ಆಯ್ಕೆ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : KL Rahul: ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನ ಪಡೆದ ಕ್ರಿಕೆಟಿಗ ಕೆ.ಎಲ್ ರಾಹುಲ್
“ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಆಡುವುದಿಲ್ಲ. ನಾವು ಇನ್ನೂ ಇಬ್ಬರು ವಿಕೆಟ್ ಕೀಪರ್ಗಳನ್ನು ಆಯ್ಕೆ ಮಾಡಿದ್ದೇವೆ. ನಿಸ್ಸಂಶಯವಾಗಿ ರಾಹುಲ್ ದಕ್ಷಿಣ ಆಫ್ರಿಕಾದಲ್ಲಿ ನಮಗಾಗಿ ಅದ್ಭುತ ಕೆಲಸ ಮಾಡಿದ್ದರು. ಸರಣಿಯನ್ನು ಡ್ರಾ ಮಾಡಲು ನಮಗೆ ಸಹಾಯ ಮಾಡುವಲ್ಲಿ ನಿಜವಾಗಿಯೂ ದೊಡ್ಡ ಪಾತ್ರ ವಹಿಸಿದರು. ಆದರೆ ಐದು ಟೆಸ್ಟ್ ಪಂದ್ಯಗಳನ್ನು (ಇಂಗ್ಲೆಂಡ್ ವಿರುದ್ಧ) ಭಾರತದಲ್ಲಿ ಆಡುವ ಪರಿಸ್ಥಿತಿಯನ್ನು ಪರಿಗಣಿಸಿ ಇತರ ಇಬ್ಬರು ಕೀಪರ್ಗಳಿಗೆ ಆದ್ಯತೆ ನೀಡುತ್ತೇವೆ.”ಎಂದು ದ್ರಾವಿಡ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಸ್ಪೆಷಲಿಸ್ಟ್ ವಿಕೆಟ್ಕೀಪರ್ಗಳು ಬೇಕು
ಭಾರತೀಯ ಪಿಚ್ಗಳು ಸ್ಪಿನ್ನರ್ಗಳಿಗೆ ಅನುಕೂಲ ಮಾಡಿಕೊಡುವ ಕಾರಣ ಚೆಂಡಿನ ತಿರುವು ಹೆಚ್ಚಿರುತ್ತದೆ. ಹೀಗಾಗಿ ಇಂಗ್ಲೆಂಡ್ ಸರಣಿಗೆ ವಿಶೇಷ ವಿಕೆಟ್ಕೀಪರ್ ಆಯ್ಕೆ ಮಾಡಲು ತಂಡ ಬಯಸಿದೆ ಎಂದು ದ್ರಾವಿಡ್ ಮಾಹಿತಿ ನೀಡಿದ್ದಾರೆ.
ಭಾರತದಲ್ಲಿನ ಪಿಚ್ಗಳ ಸ್ವರೂಪವು ವಿಕೆಟ್ ಕೀಪರ್ಗೆ ಹೆಚ್ಚಿನ ಹೊರೆಯನ್ನು ನೀಡುತ್ತದೆ. ತಿರುವು ಪಡೆಯುವ ಚೆಂಡುಗಳನ್ನು ಅವರು ಎದುರಿಸಬೇಕಾಗುತ್ತದೆ. ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರು ಬೌಲಿಂಗ್ ಮಾಡುವ ವೇಳೆ ವಿಶೇಷ ವಿಕೆಟ್ಕೀಪರ್ಗೆ ಆ ಸ್ಥಾನ ಒದಗಿಸುತ್ತೇವೆ ಎಂದು ಹೇಳಿದರು.
ರಾಹುಲ್ ಸ್ಟಂಪ್ಗಳ ಹಿಂದೆ ಇರದಂತೆ ನೋಡಿಕೊಳ್ಳಬೇಕಾಗಿದೆ. ಅವರನ್ನು ಜವಾಬ್ದಾರಿಯಿಂದ ಮುಕ್ತಗೊಳಿಸುವುದರಿಂದ ಅವರು ತಮ್ಮ ಬ್ಯಾಟಿಂಗ್ ಮೇಲೆ ಮಾತ್ರ ಗಮನ ಹರಿಸಲು ಸಾಧ್ಯವಾಗುತ್ತದೆ. ಇಂಗ್ಲೆಂಡ್ ವಿರುದ್ಧ ಭಾರತ ತಂಡಕ್ಕೆ ಬೃಹತ್ ಮೊತ್ತ ಗಳಿಸಲು ನೆರವಾಗುತ್ತದೆ ಎಂದು ಅವರು ಹೇಳಿದರು.