ಮಡಿಕೇರಿ: ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ 25ನೇ ವರ್ಷದ ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ (Kodagu News) ಚಾಲನೆ ದೊರೆಯಿತು.
ಕಾರ್ಯಕ್ರಮವನ್ನು ವಿಧಾನಸಭೆ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೊಡಗು ಗೌಡ ಯುವ ವೇದಿಕೆಯು ಕ್ರೀಡಾಕೂಟದ ಆಯೋಜನೆಯೊಂದಿಗೆ ಉತ್ತಮ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಇದನ್ನೂ ಓದಿ: LSG vs CSK: ಗೆಲುವಿನ ಹಳಿ ಏರೀತೇ ಲಕ್ನೋ?; ಚೆನ್ನೈ ಎದುರಾಳಿ
ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಮಾತನಾಡಿ, ಕೊಡಗು ಗೌಡ ಯುವ ವೇದಿಕೆ ಈ ಹಿಂದೆ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುತ್ತಿತ್ತು. ಪ್ರಸ್ತುತ ಕ್ರೀಡಾ ಪ್ರತಿಭೆಗಳ ಬೆಳವಣಿಗೆಗೆ ಪೂರಕವಾಗಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆಗೆ ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.
ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಗಣ್ಯರು ಪಂದ್ಯಾವಳಿಯ ಆಕರ್ಷಕ ಟ್ರೋಫಿಯನ್ನು ಅನಾವರಣ ಗೊಳಿಸಿದರು. ಮಡಿಕೇರಿಯ ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.
ಇದನ್ನೂ ಓದಿ: Navya Naveli Nanda: ಆರಾಧ್ಯ ಬಚ್ಚನ್ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು!
ಈ ಸಂದರ್ಭದಲ್ಲಿ ರಣಜಿ ಕ್ರಿಕಟ್ ಆಟಗಾರ ಸುಳ್ಯಕೋಡಿ ರಿಷಿ ಬೋಪಣ್ಣ, ವೇದಿಕೆಯ ಸ್ಥಾಪಕಾಧ್ಯಕ್ಷ ಪೊನ್ನಚ್ಚನ ಮಧು ಸೋಮಣ್ಣ, ಗೌರವ ಸಲಹೆಗಾರ ಕಟ್ಟೆಮನೆ ಸೋನಾಜಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.