Korea Open 2023: ಕೊರಿಯಾ ಓಪನ್​ನಲ್ಲಿ ಫೈನಲ್​ ಪ್ರವೇಶಿಸಿದ ಸಾತ್ವಿಕ್‌-ಚಿರಾಗ್ ಜೋಡಿ - Vistara News

ಕ್ರೀಡೆ

Korea Open 2023: ಕೊರಿಯಾ ಓಪನ್​ನಲ್ಲಿ ಫೈನಲ್​ ಪ್ರವೇಶಿಸಿದ ಸಾತ್ವಿಕ್‌-ಚಿರಾಗ್ ಜೋಡಿ

ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕೊರಿಯಾ ಓಪನ್ ಸೂಪರ್ 500 ಟೂರ್ನಿಯ ಪಂದ್ಯದಲ್ಲಿ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ.

VISTARANEWS.COM


on

File image of Indian badminton players Chirag Shetty and Satwiksairaj Rankireddy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯೆಯೊಸು: ಭಾರತದ ಸ್ಟಾರ್ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ(Satwiksairaj Rankireddy) ಮತ್ತು ಚಿರಾಗ್ ಶೆಟ್ಟಿ(Chirag Shetty) ಕೊರಿಯಾ ಓಪನ್ ಸೂಪರ್ 500 ಟೂರ್ನಿಯ(Korea Open 2023) ಪಂದ್ಯದಲ್ಲಿ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ ಪ್ರಶಸ್ತಿಯೊಂದನ್ನು ಖಾತ್ರಿ ಪಡಿಸಿಕೊಮಡಿದ್ದಾರೆ.

ಶನಿವಾರ ನಡೆದ ಪುರುಷರ ಡಬಲ್ಸ್‌ನ ಸೆಮಿಫೈನಲ್​ ಕಾದಾಟದಲ್ಲಿ ಸಾತ್ವಿಕ್ ಮತ್ತು ಚಿರಾಗ್ ಜೋಡಿ 2021ರ ವಿಶ್ವ ಚಾಂಪಿಯನ್‌ ಆಗಿರುವ ಚೀನಾದ ಎರಡನೇ ಶ್ರೇಯಾಂಕದ ವೀ ಕೆಂಗ್ ಲಿಯಾಂಗ್ ಮತ್ತು ಚಾಂಗ್ ವಾಂಗ್ ಅವರನ್ನು 21-15, 24-22 ನೇರ ಗೇಮ್​ಗಳಿಂದ ಹಿಮ್ಮಟಿಸಿದರು.

ವೀ ಕೆಂಗ್ ಲಿಯಾಂಗ್ ಮತ್ತು ಚಾಂಗ್ ವಾಂಗ್ ಎರಡನೇ ಶ್ರೇಯಾಂಕದ ಜೋಡಿಯಾಗಿದ್ದರೂ ಭಾರತೀಯರ ಮುಂದೆ ಆಟ ನಡೆಯಲಿಲ್ಲ. ದ್ವಿತೀಯ ಸೆಟ್​ನಲ್ಲಿ ತೀವ್ರ ಹೋರಾಟ ನಡೆಸಿದರೂ ಅದೃಷ್ಟ ಭಾರತದ ಜೋಡಿಗೆ ಲಭಿಸಿತು. ಶುಕ್ರವಾರ ನಡೆದ ಕ್ವಾರ್ಟರ್​ ಫೈನಲ್​ನಲ್ಲಿ ಜಪಾನ್‌ನ ಟಕುರೊ ಹಾಕಿ ಮತ್ತು ಯುಗೊ ಕೊಬಯಾಶಿ ವಿರುದ್ಧ ನೇರ ಗೇಮ್‌ಗಳ ಜಯ ಸಾಧಿಸಿ ಸೆಮಿಫೈನಲ್‌ ಪ್ರವೇಶಿಸಿದ್ದರು. ಐದನೇ ಶ್ರೇಯಾಂಕದ ಜಪಾನಿನ ಜೋಡಿಯನ್ನು 21-14 21-17 ರಿಂದ ಮಣಿಸಿತ್ತು.

ಇದನ್ನೂ ಓದಿ Satwiksairaj And Chirag | ವಿಶ್ವ ಬ್ಯಾಡ್ಮಿಂಟನ್‌ ರ‍್ಯಾಂಕಿಂಗ್‌; ಸಾತ್ವಿಕ್‌ ಸಾಯಿರಾಜ್‌ ,ಚಿರಾಗ್‌ ಶೆಟ್ಟಿ ಜೋಡಿ 5ನೇ ಸ್ಥಾನಕ್ಕೆ ಲಗ್ಗೆ

ಕಳೆದ ತಿಂಗಳು ಭಾರತೀಯ ಜೋಡಿ “ಇಂಡೋನೇಷ್ಯಾ ಓಪನ್‌” ಬ್ಯಾಡ್ಮಿಂಟನ್‌(Indonesia Open) ಟೂರ್ನಿಯಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿ ಇತಿಹಾಸ ನಿರ್ಮಿಸಿದ್ದರು. ಈ ಮೂಲಕ ಸೂಪರ್‌-1000ನಲ್ಲಿ ಈ ಸಾಧನೆ ಮಾಡಿದ ಮೊದಲ ಜೋಡಿ ಎಂಬ ಹಿರಿಮೆ ಪಾತ್ರರಾಗಿದ್ದರು. ಇದಕ್ಕೂ ಮುನ್ನ ಸ್ವಿಸ್‌ ಓಪನ್‌ ಸೂಪರ್‌ ಸೀರೀಸ್‌-300 ಬ್ಯಾಡ್ಮಿಂಟನ್‌(Swiss Open) ಪಂದ್ಯಾವಳಿಯಲ್ಲಿ ಗೆದ್ದಿದ್ದರು. ಇದೀಗ ಮೂನರೇ ವರ್ಷದ ಮೂರನೇ ಪ್ರತಿಷ್ಠಿತ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.

ವೇಗದ ಸ್ಮ್ಯಾಶ್​ ಹೊಡೆದು ವಿಶ್ವ ದಾಖಲೆ ನಿರ್ಮಿಸಿದ್ದ ಸಾತ್ವಿಕ್

ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮಂಗಳವಾರ ಬ್ಯಾಡ್ಮಿಂಟನ್​ ಕ್ಷೇತ್ರದಲ್ಲಿ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದರು. ಇತ್ತೀಚೆಗೆ ಮುಕ್ತಾಯಗೊಂಡ ಇಂಡೋನೇಷ್ಯಾ ಓಪನ್​ ಸೂಪರ್​ ಟೂರ್ನಿಯ ಪಂದ್ಯವೊಂದರಲ್ಲಿ 565 ಕಿ.ಮೀ ವೇಗದಲ್ಲಿ ಸ್ಮ್ಯಾಶ್​ ಬಾರಿಸುವ ಮೂಲಕ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸಿದ ಹಿರಿಮೆಗೆ ಪಾತ್ರರಾದರು. 2013ರ ಮೇ ತಿಂಗಳಲ್ಲಿ ಮಲೇಷ್ಯಾದ ಟಾನ್ ಬೂನ್ ಹ್ಯೋಂಗ್ ಬಾರಿಸಿದ್ದ ಗಂಟೆಗೆ 493 ಕಿ.ಮೀ ವೇಗದ ಸ್ಮ್ಯಾಶ್​ ದಾಖಲೆಯನ್ನು ಮುರಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

IPL 2025 Mega Auction: ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಹಲವು ಅನುಭವಿ ಆಟಗಾರರಿಂದ ಇಂಪ್ಯಾಕ್ಟ್​ ನಿಯಮದ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಬಿಸಿಸಿಐ ಕೂಡ ಮುಂದಿನ ಬಾರಿ ಈ ನಿಯಮದ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿತ್ತು. ಹೀಗಾಗಿ ಮುಂದಿನ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ನಿಯಮ ಕೈ ಬಿಟ್ಟರೂ ಅಚ್ಚರಿಯಿಲ್ಲ

VISTARANEWS.COM


on

IPL 2025 Mega Auction
Koo

ನವದೆಹಲಿ: ಮುಂದಿನ ವರ್ಷ ನಡೆಯುವ 18ನೇ ಆವೃತ್ತಿಯ ಐಪಿಎಲ್​ ಟೂರ್ನಿಗೆ(IPL 2025 Mega Auction) ಇದೇ ವರ್ಷಾಂತ್ಯದಲ್ಲಿ ಆಟಗಾರರ ಮಿನಿ ಹರಾಜು ನಡೆಯಲಿದೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಎಲ್ಲ 10 ತಂಡಗಳಿಗೆ ಗರಿಷ್ಠ 3 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ಕಲ್ಪಿಸಲಿದೆ ಎಂದು ವರದಿಯಾಗಿದೆ. ಜತೆಗೆ ಹರಾಜಿನಲ್ಲಿ ಒಂದು ರೈಟ್​ ಟು ಮ್ಯಾಚ್​ (ಆರ್​ಟಿಎಂ) ಕಾರ್ಡ್​ ಬಳಸಲು ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.

ಈ ಆವೃತ್ತಿಯ ಐಪಿಎಲ್(IPL)​ ಟೂರ್ನಿ ನಡೆಯುತ್ತಿದ್ದ ವೇಳೆ ಐಪಿಎಲ್​ ಮುಖ್ಯಸ್ಥ ಅರುಣ್​ ಧುಮಾಲ್​ 3 ರಿಂದ 4 ಆಟಗಾರರನ್ನು ಮಾತ್ರ ರಿಟೇನ್​ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದರು. ಆದರೆ ಕೆಲ ಫ್ರಾಂಚೈಸಿಗಳು 6-8 ಆಟಗಾರರನ್ನೂ ರಿಟೇನ್​ ಮಾಡಿಕೊಳ್ಳಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿತ್ತು. ಇನ್ನು ಕೆಲ ಫ್ರಾಂಚೈಸಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಹೆಚ್ಚಿನ ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದರೆ ಇದು ನಿರುಪಯುಕ್ತ ಎನಿಸಲಿದೆ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದರು. ಸದ್ಯ ಮಾಹಿತಿ ಪ್ರಕಾರ ಬಿಸಿಸಿಐ ಗರಿಷ್ಠ 3 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಮತ್ತು ಒಂದು ರೈಟ್​ ಟು ಮ್ಯಾಚ್​ (ಆರ್​ಟಿಎಂ) ಕಾರ್ಡ್​ ಬಳಸುವ ಅವಕಾಶ ಮಾತ್ರ ನೀಡಲಿದೆ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ಏನಿದು ಆರ್​ಟಿಎಂ ಕಾರ್ಡ್​?


ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ.

ಇಂಪ್ಯಾಕ್ಟ್​ ನಿಯಮ ಕೈಬಿಡುವ ಸಾಧ್ಯತೆ!


ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಹಲವು ಅನುಭವಿ ಆಟಗಾರರಿಂದ ಇಂಪ್ಯಾಕ್ಟ್​ ನಿಯಮದ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಬಿಸಿಸಿಐ ಕೂಡ ಮುಂದಿನ ಬಾರಿ ಈ ನಿಯಮದ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿತ್ತು. ಹೀಗಾಗಿ ಮುಂದಿನ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ನಿಯಮ ಕೈ ಬಿಟ್ಟರೂ ಅಚ್ಚರಿಯಿಲ್ಲ. ಧೋನಿ ಅವರು ಇಂಪ್ಯಾಕ್ಟ್​ ನಿಯಮ ಇಲ್ಲವಾದರೆ ಮುಂದಿನ ಆವೃತ್ತಿ ಆಡುವುದು ಅನುಮಾನ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ಹೇಳಿದ್ದರು. ಒಂದೊಮ್ಮೆ ಈ ನಿಯಮ ಕೈಬಿಟ್ಟರೆ ಆಗ ಧೋನಿ ಆಡುತ್ತಾರಾ ಎನ್ನುವ ಪ್ರಶ್ನೆಯೊಂದು ಮೂಡುವುದು ಸಹಜ.

Continue Reading

ಪ್ರಮುಖ ಸುದ್ದಿ

Rohit Sharma : ಹಿರಿಯರಿರುವ ತಂಡಕ್ಕಿಂತ ಕಿರಿಯರ ತಂಡವೇ ಬೆಸ್ಟ್​ ಎಂದ ರೋಹಿತ್ ಶರ್ಮಾ; ಯಾಕೆ ಗೊತ್ತಾ?

Rohit Sharma :ಒಲಿ ಪೋಪ್ ಅವರನ್ನು ಔಟ್​ ಮಾಡುವಾಗ ಅವರ ಚಲನೆಯನ್ನು ಮೊದಲು ಗಮನಿಸಿದ್ದು ಯಾರು ಎಂಬ ಪ್ರಶ್ನೆ ಎದ್ದಿತ್ತು. ಪೋಪ್ ಅವರನ್ನು ಔಟ್ ಮಾಡುವ ಮೊದಲು ವಿಕೆಟ್​ ಹಿಂದಿನಿಂದ ಬಂದ ಧ್ವನಿ ಜುರೆಲ್ ಅವರದ್ದು ಎಂದು ಹೇಳಲಾಗಿತ್ತು. ಆದರೆ, ಸರ್ಫರಾಜ್ ಇದಕ್ಕೆ ವ್ಯತಿರಿಕ್ತವಾಗಿ, ಲೆಗ್ ಸ್ಲಿಪ್​ನಲ್ಲಿ ನಿಂತಿದ್ದ ನಾನೇ ಎಚ್ಚರಿಸಿದ್ದೆ ಎಂದು ಹೇಳಿದ್ದರು.

VISTARANEWS.COM


on

Rohit Sharma
Koo

ಬೆಂಗಳೂರು: ಮೂರು ತಿಂಗಳ ಹಿಂದೆ ನಡೆದ ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 4-1 ಮುನ್ನಡೆ ಸಾಧಿಸಿತ್ತು. ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಮೊಹಮ್ಮದ್ ಶಮಿ ಅವರಂತಹ ಹಿರಿಯ ಆಟಗಾರರು ವಿವಿಧ ಕಾರಣಗಳಿಂದಾಗಿ ಅಲಭ್ಯರಾಗಿದ್ದರಿಂದ ಸರಣಿಯಲ್ಲಿ ಸಾಕಷ್ಟು ಯುವ ಆಟಗಾರರು ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಸರಣಿಯ ಸಮಯದಲ್ಲಿ ವಿಕೆಟ್ ಕೀಪಿಂಗ್ ಕರ್ತವ್ಯಗಳಿಗಾಗಿ ಧ್ರುವ್ ಜುರೆಲ್ ಅವರನ್ನು ಕ್ರಮವಾಗಿ ಮೂರು, ನಾಲ್ಕನೇ ಮತ್ತು ಐದನೇ ಪಂದ್ಯಕ್ಕೆ ಆಯ್ಕೆಯಾಗಿದ್ದರು. ಆದರೆ, ರೋಹಿತ್ ಶರ್ಮಾ (Rohit Sharma) ನೇತೃತ್ವದ ಬಳಗ ಸರಣಿಯನ್ನು ಸುಲಭವಾಗಿ ವಶಕ್ಕೆ ತೆಗೆದುಕೊಂಡಿತ್ತು.

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್ ಅವರ ನಡುವೆ ನಡೆದ ಸ್ಟಂಪಿಂಗ್​ ವಿಚಾರದ ನಡುವಿನ ಚರ್ಚೆ ವ್ಯಾಪಕ ಗಮನ ಸೆಳೆದಿತ್ತು. ಕುಲ್ದೀಪ್ ಯಾದವ್ ಬೌಲಿಂಗ್​ನಲ್ಲಿ ಒಲಿ ಪೋಪ್ ಅವರನ್ನು ಔಟ್​ ಮಾಡುವಾಗ ಅವರ ಚಲನೆಯನ್ನು ಮೊದಲು ಗಮನಿಸಿದ್ದು ಯಾರು ಎಂಬ ಪ್ರಶ್ನೆ ಎದ್ದಿತ್ತು. ಪೋಪ್ ಅವರನ್ನು ಔಟ್ ಮಾಡುವ ಮೊದಲು ವಿಕೆಟ್​ ಹಿಂದಿನಿಂದ ಬಂದ ಧ್ವನಿ ಜುರೆಲ್ ಅವರದ್ದು ಎಂದು ಹೇಳಲಾಗಿತ್ತು. ಆದರೆ, ಸರ್ಫರಾಜ್ ಇದಕ್ಕೆ ವ್ಯತಿರಿಕ್ತವಾಗಿ, ಲೆಗ್ ಸ್ಲಿಪ್​ನಲ್ಲಿ ನಿಂತಿದ್ದ ನಾನೇ ಎಚ್ಚರಿಸಿದ್ದೆ ಎಂದು ಹೇಳಿದ್ದರು.

ಈ ಎಲ್ಲಾ ಗದ್ದಲಗಳ ನಡುವೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿಕೆಟ್ ಪಡೆದ ಆಟಗಾರ ಯಾರು ಬಹಿರಂಗಪಡಿಸಿದ್ದಾರೆ. ಚೆಂಡನ್ನು ಎಸೆಯುವ ಮೊಲದೇ ಔಟ್ ಆಗಿದ್ದನ್ನು ನಿರೀಕ್ಷಿಸಿದ್ದಕ್ಕಾಗಿ ಅವರು ಸರ್ಫರಾಜ್ ಅವರನ್ನು ಶ್ಲಾಘಿಸಿದ್ದರು. ಹೀಗಾಗಿ ವಿಕೆಟ್ ಕೀಪರ್ ಜುರೆಲ್ ಅವರನ್ನು ರೆಡಿಯಾಗಿ ಇರುವಂಥೆ ಎಚ್ಚರಿಸಿದರು. ಈ ಎಲ್ಲ ಸಂದರ್ಭಗಳನ್ನು ಉಲ್ಲೇಖಿಸಿದ ರೋಹಿತ್ ಶರ್ಮಾ. ಭಾರತೀಯ ತಂಡದ ಯುವ ಬ್ಯಾಚ್​ನೊಂದಿಗೆ ಆಡುವುದನ್ನು ಇಷ್ಟಪಡುತ್ತೇನೆ ಎಂದು ಅವರು ಹೇಳಿದ್ದರು. ವಿಶೇಷವೆಂದರೆ ಆ ರೆಡ್-ಬಾಲ್ ಸರಣಿಯಲ್ಲಿ ಆಶ್ಚರ್ಯಕರ ಸಂಖ್ಯೆಯ ಐದು ಆಟಗಾರರು ಭಾರತಕ್ಕಾಗಿ ಪಾದಾರ್ಪಣೆ ಮಾಡಿದ್ದರು.

ಇದನ್ನೂ ಓದಿ: Cristiano Ronaldo: ಕಿಂಗ್ಸ್ ಕಪ್ ಫೈನಲ್​ನಲ್ಲಿ ಸೋಲು; ಬಿಕ್ಕಿ ಬಿಕ್ಕಿ ಅತ್ತ ಕ್ರಿಸ್ಟಿಯಾನೊ ರೊನಾಲ್ಡೊ

ಅಂದಹಾಗೆ, ಆ ಸ್ಟಂಪಿಂಗ್ ಅದ್ಭುತವಾಗಿತ್ತು. ಅದನ್ನು ನಿರೀಕ್ಷಿಸಿದವರ ಸರ್ಫರಾಜ್ ಖಾನ್. ನಾನು ಅವನನ್ನು ಸ್ವಲ್ಪ ಮುಂದೆ ನಿಲ್ಲಿಸಿದ್ದೆ, ಸರ್ಫರಾಜ್​ ಆಗ ಹೇಳಿದ್ದರು ‘ಈಗ, ಅವರು ಕ್ರೀಸ್ ನಿಂದ ಹೊರಹೋಗುತ್ತಾರೆ. ಸ್ಟಂಪಿಂಗ್ ಗೆ ಸಿದ್ಧರಾಗಿರಿ ಎಂದು ಹೇಳಿದ್ದರು. ಈ ರೀತಿಯ ಎಲ್ಲ ಭಾವನೆಗಳೊಂದಿಗೆ ಹುಡುಗರೊಂದಿಗೆ ಆಡುವುದನ್ನು ನಾನು ಸಂಪೂರ್ಣವಾಗಿ ಆನಂದಿಸಿದೆ. ಭವಿಷ್ಯದಲ್ಲಿ ನಾವು ಖುಷಿಯಿಂದ ಆಡುತ್ತೇವೆ ಎಂದು ಆಶಿಸುತ್ತೇವೆ, “ಎಂದು ಶರ್ಮಾ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಹೇಳಿದ್ದಾರೆ.

ಐಪಿಎಲ್​ನಲ್ಲಿ ಒಂದಾದ ರೋಹಿತ್ ಶರ್ಮಾ

ಐಪಿಎಲ್​​ನ 17 ನೇ ಋತುವಿಗೆ ಮುಂಚಿತವಾಗಿ ಭಾರತದ ನಾಯಕ ಮುಂಬೈ ಇಂಡಿಯನ್ಸ್ (ಎಂಐ) ಗಾಗಿ ತಮ್ಮ ಕರ್ತವ್ಯಗಳನ್ನು ವಹಿಸಿಕೊಂಡಿದ್ದಾರೆ. ಆದರೆ ನಾಯಕನಾಗಿ ಅಲ್ಲ. ಅವರ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಯಶಸ್ವಿ ಫ್ರಾಂಚೈಸಿಯ ನಾಯಕರನ್ನಾಗಿ ನೇಮಿಸಲಾಯಿತು. ಪಾಂಡ್ಯ ಅವರನ್ನು ಗುಜರಾತ್ ಟೈಟಾನ್ಸ್ (ಜಿಟಿ) ಮುಂಬೈ ಇಂಡಿಯನ್ಸ್ 15 ಕೋಟಿ ರೂ.ಗೆ ಖರೀದಿಸಿದ ನಂತರ ಈ ಬದಲಾವಣೆ ಮಾಡಲಾಗಿದೆ. ಭಾರತೀಯ ಆಲ್ರೌಂಡರ್ ಗುಜರಾತ್ ತಂಡಕ್ಕೆ 2022 ರಲ್ಲಿ ಐಪಿಎಲ್ ಟ್ರೋಫಿ ಗೆಲ್ಲಿಸಿಕೊಟ್ಟಿದ್ದರು. 2023 ರಲ್ಲಿ ಫೈನಲ್ ತಲುಪುವಲ್ಲಿ ಯಶಸ್ವಿಯಾದರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​ಕೆ) ವಿರುದ್ಧ ಸೋತಿದ್ದರು.

ಆದಾಗ್ಯೂ, ರೋಹಿತ್ ಶರ್ಮಾ ಮುಂಬೈ ತಂಡವನ್ನು ಐದು ಚಾಂಪಿಯನ್ಶಿಪ್ ಪ್ರಶಸ್ತಿಗಳಿಗೆ ಮುನ್ನಡೆಸಿದ ಅಪೇಕ್ಷಣೀಯ ದಾಖಲೆಯನ್ನು ಹೊಂದಿದ್ದಾರೆ, ನಾಯಕನಾಗಿ ಅಷ್ಟೇ ಸಂಖ್ಯೆಯ ಪ್ರಶಸ್ತಿಗಳನ್ನು ಹೊಂದಿರುವ ಎಂಎಸ್ ಧೋನಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ನಂತರ, ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿ ಜೂನ್ನಿಂದ ಪ್ರಾರಂಭವಾಗಲಿರುವ ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಏಸ್ ಬ್ಯಾಟ್ಸ್ಮನ್ ಭಾರತೀಯ ತಂಡವನ್ನು ಮುನ್ನಡೆಸಲಿದ್ದಾರೆ.

Continue Reading

ಕ್ರೀಡೆ

Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

Gautam Gambhir: ಭಾರತ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ(Sourav Ganguly) ಕೂಡ ಗೌತಮ್​ ಗಂಭೀರ್​ ಟೀಮ್​ ಇಂಡಿಯಾದ ಕೋಚ್​ ಆದರೆ ಉತ್ತಮ ಎಂದಿದ್ದಾರೆ. ‘ಗಂಭೀರ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದರೆ, ನನ್ನ ಬೆಂಬಲವಿದೆ. ಅವರು ಈ ಹುದ್ದಗೆ ಸೂಕ್ತ ಅಭ್ಯರ್ಥಿ’ ಎಂದು ಹೇಳುವ ಮೂಲಕ ಗಂಭೀರ್​ ಪರ ಬ್ಯಾಟ್​ ಬೀಸಿದ್ದಾರೆ.

VISTARANEWS.COM


on

Gautam Gambhir
Koo

ಮುಂಬಯಿ: ಟೀಮ್ ಇಂಡಿಯಾದ(Team India) ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ (Gautam Gambhir) ಭಾರತ ತಂಡದ ಕೋಚ್(team india coach) ಆಗಲಿದ್ದಾರೆ ಎಂದು ವರದಿಯಾಗಿದೆ. ಟಿ20 ವಿಶ್ವಕಪ್ ಮುಕ್ತಾಯದೊಂದಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದ್ದು, ಇದಾದ ಬಳಿಕ ಗಂಭೀರ್ ಅಧಿಕಾರ ಸ್ವೀಕರಿಸುವುದು ಖಚಿತ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಕಳೆದ ತಿಂಗಳು ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ವೇಳೆಯೇ ಗಂಭೀರ್​ ಕೋಚ್​ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಇದಾದ ಬಳಿಕ ಗಂಭೀರ್ ಅವರ ಮಾರ್ಗದರ್ಶನದಲ್ಲಿ ಕೆಕೆಆರ್​ ಚಾಂಪಿಯನ್​ ಪಟ್ಟ ಕೂಡ ಅಲಂಕರಿಸಿತು. ಇದಾದ ಬಳಿಕವಂತೂ ಕೋಚ್​ ಆಗುವ ಮಾತಿಗೆ ಇನ್ನಷ್ಟು ಪುಷ್ಟಿಸಿಕ್ಕಿತು. ಅಲ್ಲದೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಕೂಡ ಗಂಭೀರ್ ಜತೆ ಬಹಳ ಆತ್ಮೀಯವಾಗಿ ಮಾತುಕತೆ ನಡೆಸಿದ್ದರು. ಇದೀಗ ಇಂಡಿಯಾ ಟುಡೆ ಗಂಭೀರ್​ ಕೋಚ್​ ಆಗುವು ನಿಶ್ಚಿತ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಗಂಭೀರ್​ ಐಪಿಎಲ್​ನಲ್ಲಿ ಮೂರು ಸೀಸನ್​ಗಳಲ್ಲಿ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಇದನ್ನೂ ಓದಿ Gautam Gambhir : ಗೌತಮ್ ಗಂಭೀರ್ ಭಾರತ ತಂಡದ ಮುಂದಿನ ಕೋಚ್​; ಐಪಿಎಲ್​ ಫ್ರಾಂಚೈಸಿ ಮಾಲೀಕರಿಂದ ಬಹಿರಂಗ?

ಗಂಭೀರ್​ ಅವರು ಈ ಬಾರಿಯ ಐಪಿಎಲ್​ ಆರಂಭಕ್ಕೂ ಮುನ್ನವೇ, ತಮ್ಮ ತಂಡದ ನಾಯಕ ಮೇ 26ರಂದು ನಡೆಯುವ ಫೈನಲ್​ ಪಂದ್ಯವ ವೇಳೆ ಟಾಸ್​ಗೆ ಸಿದ್ಧರಾಗಿರಬೇಕು ಎಂದು ಹೇಳಿದ್ದರು. ಅದರಂತೆ ಕೆಕೆಆರ್​ ಫೈನಲ್​ ಪ್ರವೇಶಿಸಿ ಕಪ್​ ಕೂಡ ಗೆದ್ದಿತು. ಗಂಭೀರ್​ ತಂಡವನ್ನು ಸಿದ್ಧಪಡಿಸಿದ ರೀತಿ ಮತ್ತು ಕಪ್​ ಗೆಲ್ಲಲೇ ಬೇಕೆಂದು ಪಣ ತೊಟ್ಟಿದೆಲ್ಲ ಫಲ ನೀಡಿತು. ಅವರ ಈ ಸಾಧನೆ ಮತ್ತು ಹಠವನ್ನು ಸೂಕ್ಷವಾಗಿ ಗಮನಿಸಿದ ಬಿಸಿಸಿಐ ಭಾರತ ತಂಡ ಕೋಚ್​ ಹುದ್ದೆ ನೀಡುವ ಯೋಜನೆಯಲ್ಲಿದೆ. ಇನ್ನೊಂದು ಮೂಲಗಳ ಪ್ರಕಾರ ಗಂಭೀರ್​ ಕೋಚ್​ ಆಗುವ ದೃಷ್ಟಿಯಿಂದಲೇ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಎನ್ನಲಾಗಿದೆ.

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಗಂಗೂಲಿ ಕೂಡ ಸಾಥ್​


ಭಾರತ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ(Sourav Ganguly) ಕೂಡ ಗೌತಮ್​ ಗಂಭೀರ್​ ಟೀಮ್​ ಇಂಡಿಯಾದ ಕೋಚ್​ ಆದರೆ ಉತ್ತಮ ಎಂದಿದ್ದಾರೆ. ‘ಗಂಭೀರ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದರೆ, ನನ್ನ ಬೆಂಬಲವಿದೆ. ಅವರು ಈ ಹುದ್ದಗೆ ಸೂಕ್ತ ಅಭ್ಯರ್ಥಿ’ ಎಂದು ಹೇಳುವ ಮೂಲಕ ಗಂಭೀರ್​ ಪರ ಬ್ಯಾಟ್​ ಬೀಸಿದ್ದಾರೆ.

Continue Reading

ಕ್ರೀಡೆ

Cristiano Ronaldo: ಕಿಂಗ್ಸ್ ಕಪ್ ಫೈನಲ್​ನಲ್ಲಿ ಸೋಲು; ಬಿಕ್ಕಿ ಬಿಕ್ಕಿ ಅತ್ತ ಕ್ರಿಸ್ಟಿಯಾನೊ ರೊನಾಲ್ಡೊ

Cristiano Ronaldo: ಬರೋಬ್ಬರಿ 1,700 ಕೋಟಿ ರೂ. (200 ಮಿಲಿಯನ್‌ ಯೂರೋಸ್‌) ಪಡೆದು ಕ್ರಿಸ್ಟಿಯಾನೊ ರೊನಾಲ್ಡೊ 2 ವರ್ಷಗಳ ಒಪ್ಪಂದ ಪ್ರಕಾರ ಅಲ್ ನಾಸ್ಸರ್ ತಂಡಕ್ಕೆ ಸೇರಿದ್ದರು. ತಂಡದ ಪರ ಇದುವರೆಗೆ ಒಟ್ಟು 35 ಗೋಲು ಬಾರಿಸಿದ್ದಾರೆ. ಆದರೆ ತಂಡವನ್ನು ಚಾಂಪಿಯನ್​ ಪಟ್ಟ ಅಲಂಕರಿಸುವಲ್ಲಿ ವಿಫಲರಾಗಿದ್ದಾರೆ.

VISTARANEWS.COM


on

Cristiano Ronaldo
Koo

ದುಬೈ: ಪೋರ್ಚುಗಲ್‌ನ ಸೂಪರ್‌ ಸ್ಟಾರ್‌ ಕ್ರಿಸ್ಟಿಯಾನೊ ರೊನಾಲ್ಡೊ(Cristiano Ronaldo) ಅವರು ತಾನು ಪ್ರತಿನಿಧಿಸುವ ಅಲ್​ ನಾಸ್ಸರ್​(Al Nassr) ತಂಡ ಕಿಂಗ್ಸ್ ಕಪ್ ಫೈನಲ್​ನಲ್ಲಿ(King’s Cup final) ಸೋಲು ಕಂಡ ಬೇಸರದಲ್ಲಿ ಮೈದಾನದಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪ್ರಸಂಗ ನಡೆದಿದೆ. ರೊನಾಲ್ಡೊ ಕಣ್ಣೀರು ಸುರಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​(viral video) ಆಗಿದೆ.

ಮೇ 31, ಶುಕ್ರವಾರ ತಡರಾತ್ರಿ ನಡೆದಿದ್ದ ಕಿಂಗ್ಸ್ ಕಪ್ ಫೈನಲ್‌ನಲ್ಲಿ ಅಲ್ ನಾಸ್ಸರ್ ಮತ್ತು ಅಲ್ ಹಿಲಾಲ್(Al Hilal) ತಂಡಗಳು ಮುಖಾಮುಖಿಯಾಗಿದ್ದವು. ಅತ್ಯಂತ ಜಿದ್ದಾಜಿದ್ದಿನಿಂದ ಸಾಗಿದ ಈ ಪಂದ್ಯ 1-1 ಗೋಲುಗಳಿಂದ ಮುಕ್ತಾಯಕಂಡಿತು. ಹೆಚ್ಚುವರಿ ಸಮಯದ ಆಟದಲ್ಲಿಯೂ ಉಭಯ ತಂಡಗಳಿಂದ ಗೋಲು ಗಳಿಸಲು ಸಾಧ್ಯವಾಗದ ಕಾರಣ ಅಂತಿಮವಾಗಿ ವಿಜೇತರನ್ನು ನಿರ್ಧರಿಸಲು ಪೆನಾಲ್ಟಿ ಶೂಟೌಟ್‌ ಮೊರೆ ಹೋಗಲಾಯಿತು. ಶೂಟೌಟ್​ನಲ್ಲಿ ಅಲ್ ಹಿಲಾಲ್ ತಂಡ 5-4 ಗೋಲುಗಳ ಅಂತರದಿಂದ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿತು.

ತಂಡ ಸೋಲುತ್ತಿದ್ದಂತೆ ಕ್ರಿಸ್ಟಿಯಾನೊ ರೊನಾಲ್ಡೊ ಮೈದಾನದಲ್ಲೇ ಬಿದ್ದು ಅಳತೊಡಗಿದರು. ರೊನಾಲ್ಡೊ ಅವರು ಟರ್ಫ್‌ನ ಮೇಲೆ ಮಲಗಿ ಅಳುತ್ತಿದ್ದ ವೇಳೆ ಸಹ ಆಟಗಾರರು ಮತ್ತು ತಂಡದ ಮಾಲಿಕ ಕೂಡ ಆಗಮಿಸಿ ರೊನಾಲ್ಡೊರನ್ನು ಸಂತೈಸಿದ್ದಾರೆ. ರನ್ನರ್ಸ್-ಅಪ್ ಪದಕ ನೀಡುವ ವೇಳೆಯೂ ರೊನಾಲ್ಡೊ ಕಣ್ಣೀರು ಸುರಿಸುತ್ತಲೇ ಇದ್ದರು. ಈ ದೃಶ್ಯ ಕಂಡು ಅವರ ಅಭಿಮಾನಿಗಳ ಕಣ್ಣಲ್ಲಿಯೂ ನೀರು ಬರುವಂತೆ ಮಾಡಿತು.

ಇದನ್ನೂ ಓದಿ Cristiano Ronaldo: ಅಶ್ಲೀಲ ವರ್ತನೆ ತೋರಿದ ರೊನಾಲ್ಡೊಗೆ ಅಮಾನತು ಶಿಕ್ಷೆ ವಿಧಿಸಿದ ಸೌದಿ ಫುಟ್ಬಾಲ್​ ಫೆಡರೇಷನ್

ಬರೋಬ್ಬರಿ 1,700 ಕೋಟಿ ರೂ. (200 ಮಿಲಿಯನ್‌ ಯೂರೋಸ್‌) ಪಡೆದು ಕ್ರಿಸ್ಟಿಯಾನೊ ರೊನಾಲ್ಡೊ 2 ವರ್ಷಗಳ ಒಪ್ಪಂದ ಪ್ರಕಾರ ಅಲ್ ನಾಸ್ಸರ್ ತಂಡಕ್ಕೆ ಸೇರಿದ್ದರು. ತಂಡದ ಪರ ಇದುವರೆಗೆ ಒಟ್ಟು 35 ಗೋಲು ಬಾರಿಸಿದ್ದಾರೆ. ಆದರೆ ತಂಡವನ್ನು ಚಾಂಪಿಯನ್​ ಪಟ್ಟ ಅಲಂಕರಿಸುವಲ್ಲಿ ವಿಫಲರಾಗಿದ್ದಾರೆ.

67 ವರ್ಷಗಳ ಇತಿಹಾಸ ಹೊಂದಿರುವ ಅಲ್‌ ನಾಸ್ಸರ್​ ಸೌದಿ ಅರೇಬಿಯದ ಅತ್ಯಂತ ಶ್ರೀಮಂತ ಫ‌ುಟ್‌ಬಾಲ್‌ ಕ್ಲಬ್‌. 9 ಸಲ ಚಾಂಪಿಯನ್ಸ್‌ ಲೀಗ್‌ ಪ್ರಶಸ್ತಿ ಜಯಿಸಿದೆ. 6 ಸಲ ಕಿಂಗ್ಸ್‌ ಕಪ್‌ 3 ಸಲ ಕ್ರೌನ್‌ ಪ್ರಿನ್ಸೆಸ್‌ ಕಪ್‌, 3 ಸಲ ಫೆಡರೇಶನ್‌ ಕಪ್‌,2 ಸಲ ಸೌದಿ ಸೂಪರ್‌ ಕಪ್‌, ಚಾಂಪಿಯನ್‌ ಆಗಿ ಮೂಡಿಬಂದ ಹೆಗ್ಗಳಿಕೆ ಈ ಕ್ಲಬ್‌ನದ್ದು.

Continue Reading
Advertisement
100 kg of banned plastic seized by municipal council in Shira
ಕರ್ನಾಟಕ1 min ago

Shira News: ಶಿರಾದಲ್ಲಿ ನಗರಸಭೆಯಿಂದ ಗೋದಾಮಿನ ಮೇಲೆ ದಾಳಿ; 100 ಕೆಜಿ ನಿಷೇಧಿತ ಪ್ಲಾಸ್ಟಿಕ್‌ ವಶ

Selco India SELCO Suryamitra Annual Award to Richard Hansen of America
ಕರ್ನಾಟಕ2 mins ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್ ಹ್ಯಾನ್ಸೆನ್‌ಗೆ ಸೆಲ್ಕೋ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

union Minister Pralhad Joshi latest statement about Valmiki Corporation scam
ಕರ್ನಾಟಕ4 mins ago

Pralhad Joshi: ವಾಲ್ಮೀಕಿ ನಿಗಮದ ಹಗರಣ; ಸಚಿವ ನಾಗೇಂದ್ರರನ್ನು ಬಂಧಿಸಿ, ಸಿಬಿಐ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

Exit Poll 2024
Lok Sabha Election 202418 mins ago

Exit Poll 2024: ಮೋದಿ ಹ್ಯಾಟ್ರಿಕ್‌ ಖಚಿತ, ಇಂಡಿಯಾ ಒಕ್ಕೂಟಕ್ಕೆ ಸೋಲು ನಿಶ್ಚಿತ; ಇಲ್ಲಿದೆ ಎಕ್ಸಿಟ್‌ ಪೋಲ್‌ ವರದಿ

Exit Poll 2024
ದೇಶ46 mins ago

Exit Poll 2024 Live: ಮೋದಿನಾ? ರಾಹುಲ್‌ ಗಾಂಧಿನಾ? ಮತಗಟ್ಟೆ ಸಮೀಕ್ಷೆಯ ಲೈವ್‌ ಇಲ್ಲಿ ವೀಕ್ಷಿಸಿ

Rahul Gandhi
ಕರ್ನಾಟಕ57 mins ago

Rahul Gandhi: ರಾಹುಲ್ ಗಾಂಧಿಗೆ ರಿಲೀಫ್; ಜೂನ್‌ 7ಕ್ಕೆ ವಿಚಾರಣೆಗೆ ಹಾಜರಾಗಲು ಕೋರ್ಟ್‌ ಸೂಚನೆ

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

Star Saree Fashion
ಫ್ಯಾಷನ್1 hour ago

Star Saree Fashion: ಡಿಸೈನರ್‌ ಸೀರೆಯಲ್ಲಿ ನಟಿ ತಾನ್ಯಾ ಹೋಪ್‌ರಂತೆ ಕಾಣಲು ಈ 5 ಸಿಂಪಲ್‌ ರೂಲ್ಸ್ ಫಾಲೋ ಮಾಡಿ!

Arvind Kejriwal
ಪ್ರಮುಖ ಸುದ್ದಿ1 hour ago

Arvind Kejriwal : ಅರವಿಂದ್​ ಕೇಜ್ರಿವಾಲ್​ ಮತ್ತೆ ಜೈಲಿಗೆ ಹೋಗುವುದು ಫಿಕ್ಸ್​

World Milk Day
ಆರೋಗ್ಯ2 hours ago

World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು2 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌