KPL: ನಾಲ್ಕು ವರ್ಷಗಳ ಬಳಿಕ ಮತ್ತೆ ಆರಂಭಗೊಳ್ಳಲಿದೆ ಕರ್ನಾಟಕ ಪ್ರೀಮಿಯರ್​ ಲೀಗ್​ - Vistara News

ಕ್ರಿಕೆಟ್

KPL: ನಾಲ್ಕು ವರ್ಷಗಳ ಬಳಿಕ ಮತ್ತೆ ಆರಂಭಗೊಳ್ಳಲಿದೆ ಕರ್ನಾಟಕ ಪ್ರೀಮಿಯರ್​ ಲೀಗ್​

ಗ್ರಾಮಾಂತರ ಕ್ರಿಕೆಟ್‌ ಪ್ರತಿಭೆಗಳಿಗೆ ಉತ್ತಮ ವೇದಿಕೆ ಒದಗಿಸುವ ಕರ್ನಾಟಕ ಪ್ರೀಮಿಯರ್ ಲೀಗ್ (Karnataka Premier League)​ ಶೀಘ್ರದಲ್ಲೇ ಮತ್ತೆ ಆರಂಭಗೊಳ್ಳಲಿದೆ ಎಂದು ತಿಳಿದುಬಂದಿದೆ.

VISTARANEWS.COM


on

karnataka premier league logo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮ್ಯಾಚ್ ಫಿಕ್ಸಿಂಗ್ ಹಗರಣ ಮತ್ತು ಕೊರೊನಾ ಬಿಕ್ಕಟ್ಟಿನಿಂದ ಸ್ಥಗಿತವಾಗಿದ್ದ ಕರ್ನಾಟಕ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್(Karnataka Premier League)​ ಪುನರಾರಂಭಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(Karnataka State Cricket Association) ಸಿದ್ಧತೆ ಆರಂಭಿಸಿದೆ. ಮುಂದಿನ ತಿಂಗಳು ಈ ಟೂರ್ನಿ ಆಯೋಜನೆಗೊಳ್ಳುವ ಸಾಧ್ಯತೆ ಇದೆ. 2019ರಲ್ಲಿ ಕೊನೆಯ ಬಾರಿಗೆ ಟೂರ್ನಿ ನಡೆದಿತ್ತು. ಬಳಿಕ ಟೂರ್ನಿ ನಡೆದಿರಲಿಲ್ಲ. ಇದೀಗ ನಾಲ್ಕು ವರ್ಷಗಳ ಬಳಿಕ ಮತ್ತೆ ಆರಂಭಗೊಳ್ಳಲಿದೆ.

ಗ್ರಾಮಾಂತರ ಕ್ರಿಕೆಟ್‌ ಪ್ರತಿಭೆಗಳಿಗೆ ಉತ್ತಮ ವೇದಿಕೆ ಒದಗಿಸುವ ಈ ಟೂರ್ನಿಯಲ್ಲಿ ಮಿಂಚಿದ್ದ ಅನೇಕ ಕ್ರಿಕೆಟಿಗರು ಭಾರತ ತಂಡದ ಪರ ಆಡುವ ಅಕಾಶವನ್ನು ಪಡೆದಿದ್ದರು. ಹೀಗಾಗಿ ಇದು ಸ್ಥಳೀಯ ಕ್ರಿಕೆಟ್​ ಪ್ರತಿಭೆಗಳಿಗೆ ತಮ್ಮ ಪ್ರದರ್ಶನ ತೋರ್ಪಡಿಸಲು ಉತ್ತಮ ವೇದಿಕೆಯಾಗಿದೆ. ಸದ್ಯ 4 ವರ್ಷಗಳಿಂದ ಸ್ಥಗಿತವಾಗಿರುವ ಈ ಟೂರ್ನಿಯನ್ನು ಪುನರಾರಂಭಿಸುವ ಕುರಿತು ರಾಜ್ಯ ಸಂಸ್ಥೆಯಲ್ಲಿ ಚರ್ಚೆಗಳು ನಡೆಯುತ್ತಿವೆ.

ಪ್ರಸ್ತುತ ಬಿಸಿಸಿಐ ಅಧ್ಯಕ್ಷರಾಗಿರುವ ರೋಜರ್​ ಬಿನ್ನಿ(Roger Binny) ಅವರು ಕೆಎಸ್‌ಸಿಎ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕೆಪಿಎಲ್​ಗೆ ಪರ್ಯಾಯವಾಗಿ ಮಹಾರಾಜ ಟ್ರೋಫಿ ಟಿ20 ಲೀಗ್ ಆಯೋಜಿಸಿತ್ತು. ಆದರೆ ಅದು ಫ್ರಾಂಚೈಸಿ ಲೀಗ್ ಆಗಿರಲಿಲ್ಲ. ಪ್ರಾಯೋಜಕತ್ವ ಮಾದರಿಯಲ್ಲಿ ನಡೆದಿತ್ತು. ಇದರಲ್ಲಿ ಆರು ತಂಡಗಳು ಪಾಲ್ಗೊಂಡಿದ್ದವು. ಆಟಗಾರರನ್ನು ಮತ್ತು ನೆರವು ಸಿಬ್ಬಂದಿಗಳನ್ನು ಕೆಎಸ್‌ಸಿಎ ನೇಮಿಸಿದ್ದ ಸಮಿತಿಯು ಆಯ್ಕೆ ಮಾಡಿತ್ತು. ಮೈಸೂರು ಮತ್ತು ಬೆಂಗಳೂರಿನಲ್ಲಿ ಪಂದ್ಯಗಳು ನಡೆದಿದ್ದವು. ಆದರೆ ಈ ಟೂರ್ನಿಗೆ ಸರಿಯಾದ ಬೆಂಬಲ ಸಿಗದೆ ವಿಫಲವಾಗಿತ್ತು. ವೀಕ್ಷಕರ ಸಂಖ್ಯೆಯೂ ಬೆರಳಣಿಕೆಯಷ್ಟೇ ದಾಖಲಾಗಿತ್ತು.

“2009ರಲ್ಲಿ ಆರಂಭಗೊಂಡ ಕೆಪಿಎಲ್​ ಟೂರ್ನಿಯನ್ನು ಮತ್ತೆ ಆರಂಭಿಸುವ ಚಿಂತನೆ ಆರಂಭವಾಗಿದೆ. ಈ ಕುರಿತು ಶೀಘ್ರದಲ್ಲಿಯೇ ಸಂಪೂರ್ಣ ಚರ್ಚೆ ನಡೆಸಿ ಯೋಜನೆ ಸಿದ್ಧಪಡಿಸುತ್ತೇವೆ. ಆಗಸ್ಟ್‌ನಲ್ಲಿಯೇ ಟೂರ್ನಿ ನಡೆಯುವುದು ಬಹುತೇಕ ಖಚಿತ” ಎಂದು ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್(RAGHURAM BHAT A) ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ Raghuram Bhat | ಕೆಎಸ್​ಸಿಎ ಅಧ್ಯಕ್ಷರಾಗಿ ರಘುರಾಮ್ ಭಟ್ ಅವಿರೋಧ ಆಯ್ಕೆ

ಮ್ಯಾಚ್​ ಫಿಕ್ಸಿಂಗ್​ ಕಳಂಕ

ಇದೇ ಟೂರ್ನಿಯಲ್ಲಿ 2019ರಲ್ಲಿ ಮ್ಯಾಚ್‌ ಫಿಕ್ಸಿಂಗ್ ನಡೆದ ಆರೋಪ ಕೇಳಿಬಂದಿತ್ತು. ಟೂರ್ನಿಯಲ್ಲಿ ಆಡಿದ್ದ ರಾಜ್ಯದ ಕೆಲವು ಆಟಗಾರರು, ಕೋಚ್ ಮತ್ತು ಫ್ರ್ಯಾಂಚೈಸಿಯ ಮಾಲೀಕರೊಬ್ಬರನ್ನು ಈ ಆರೋಪದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಘಟನೆ ದೇಶದಲ್ಲಿ ರಾಜ್ಯದಲ್ಲಿ ಭಾರಿ ಸುದ್ದಿಯಾಗಿತ್ತು. ಇದರ ಬೆನ್ನಲೇ ಕೊರೊನಾ ಕೂಡ ದಾಳಿ ಮಾಡಿತ್ತು. ಹೀಗಾಗಿ ಟೂರ್ನಿ ಮತ್ತೆ ಆರಂಭಗೊಂಡಿರಲಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs ENG Semi Final: ಗಯಾನದಲ್ಲಿ ಭಾರೀ ಗಾಳಿ-ಮಳೆ ಶುರು; ರದ್ದಾಗುತ್ತಾ ಸೆಮಿಫೈನಲ್​ ಪಂದ್ಯ?

IND vs ENG Semi Final: ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಜೋರು ಮಳೆ ಸುರಿಯಲು ಆರಂಭವಾಗಿದೆ. ಸದ್ಯ ಬೀಸುತ್ತಿರುವ ಗಾಳಿ ಮಳೆಯನ್ನು ಗಮನಿಸುವಾಗ ಇದು ನಿಲ್ಲುವಂತೆ ಕಾಣುತ್ತಿಲ್ಲ.

VISTARANEWS.COM


on

IND vs ENG Semi Final
Koo

ಪ್ರೊವಿಡೆನ್ಸ್‌: ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯಂತೆ ಗಯಾನದಲ್ಲಿ ಭಾರೀ ಮಳೆ ಸುರಿಯಲು ಆರಂಭಗೊಂಡಿದೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್​(IND vs ENG Semi Final) ನಡುವಣ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯ ನಡೆಯುವುದು ಅನುಮಾನ ಎನ್ನಲಡ್ಡಿಯಿಲ್ಲ. ಗಾಳಿ ಮಳೆಯ ವಿಡಿಯೊವನ್ನು ಎಎನ್​ಐ ಸುದ್ದಿ ಸಂಸ್ಥೆ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ದಿನೇಶ್​ ಕಾರ್ತಿಕ್​ ಅವರು ಮೈದಾನವನ್ನು ಕವರ್​ನಿಂದ ಮುಚ್ಚಿದ ಫೋಟೊ ಮತ್ತು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಪಂದ್ಯಕ್ಕೂ 2 ದಿನ ಮುನ್ನವೇ ಹವಾಮಾನ ಇಲಾಖೆ ಪಂದ್ಯಕ್ಕೆ ಶೇ.88ರಷ್ಟು ಮಳೆ ಎಚ್ಚರಿಕೆ ನೀಡಿತ್ತು. ಜತೆಗೆ ಪಂದ್ಯ ನಡೆಯುವುದು ಕೂಡ ಅನುಮಾನ ಎಂದು ತನ್ನ ವರದಿಯಲ್ಲಿ ತಿಳಿಸಿತ್ತು. ಇದೀಗ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಜೋರು ಮಳೆ ಸುರಿಯಲು ಆರಂಭವಾಗಿದೆ. ಸದ್ಯ ಬೀಸುತ್ತಿರುವ ಗಾಳಿ ಮಳೆಯನ್ನು ಗಮನಿಸುವಾಗ ಇದು ನಿಲ್ಲುವಂತೆ ಕಾಣುತ್ತಿಲ್ಲ.

ಇತ್ತಂಡಗಳ ಈ ಪಂದ್ಯಕ್ಕೆ ಭಾರೀ ಮಳೆ ಭೀತಿ ಇದ್ದರೂ ಕೂಡ ಮೀಸಲು ದಿನದ ಸೌಲಭ್ಯವೂ ಇಲ್ಲ. ಹೆಚ್ಚುವರಿ 250 ನಿಮಿಷವನ್ನು ನೀಡಲಾಗಿದ್ದರೂ, ಫಲಿತಾಂಶ ನಿರ್ಧರಿಸಲು ಉಭಯ ತಂಡಗಳು ಕನಿಷ್ಠ 10 ಓವರ್​ ಆಡುವುದು ಅಗತ್ಯವಾಗಿದೆ. ಒಂದೊಮ್ಮೆ ಪಂದ್ಯ ನಡೆಯದೇ ಇದ್ದರೆ ಸೂಪರ್​-8 ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿರುವ ಭಾರತ ನೇರವಾಗಿ ಫೈನಲ್​ ಪ್ರವೇಶಿಸಲಿದೆ.

​2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಇಂಗ್ಲೆಂಡ್​ ತಂಡ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ. ಇದರಲ್ಲಿ ರೋಹಿತ್​ ಬಳಗ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದೊಂದು ಕುತೂಹಲ.

ಇದನ್ನೂ ಓದಿ IND vs ENG: ಸೆಮಿ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ನಾಯಕ

ಬಲಾಬಲ

ಭಾರತ ಮತ್ತು ಇಂಗ್ಲೆಂಡ್​ ಇದುವರೆಗೆ ಟಿ20 ಕ್ರಿಕೆಟ್​ನಲ್ಲಿ 23 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 12 ಪಂದ್ಯ ಗೆದ್ದಿದ್ದರೆ, ಇಂಗ್ಲೆಂಡ್​ 11 ಪಂದ್ಯಗಳನ್ನು ಗೆದ್ದಿದೆ. ಕಳೆದ 2 ವರ್ಷಗಳಿಂದ ಇಂಗ್ಲೆಂಡ್​ ವಿರುದ್ಧ ಭಾರತ ಗೆಲುವು ಕಂಡಿಲ್ಲ. 2022ರ ಟಿ20 ವಿಶ್ವಕಪ್(T20 World Cup 2024)​ ಸೆಮಿಫೈನಲ್​ ಪಂದ್ಯದ ಬಳಿಕ ಉಭಯ ತಂಡಗಳು ಇದುವರೆಗೂ ಟಿ20ಯಲ್ಲಿ ಮುಖಾಮುಖಿಯಾಗಿಲ್ಲ. ಆ ಪಂದ್ಯದಲ್ಲಿ ಭಾರತ 10 ವಿಕೆಟ್​ ಸೋಲು ಕಂಡಿತ್ತು. ಅಂದಿನ ಸೋಲಿಗೆ ಈ ಬಾರಿಯ ಸೆಮಿ ಕಾದಾಟದಲ್ಲಿ ಭಾರತ ಸೇಡು ತೀರಿಸಿಕೊಂಡೀತೇ ಎಂದು ಕಾದು ನೋಡಬೇಕಿದೆ.

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇತ್ತಂಡಗಳು 4 ಪಂದ್ಯಗಳನ್ನು ಆಡಿ ತಲಾ 2 ಪಂದ್ಯಗಳಲ್ಲಿ ಗೆಲುವು ಮತ್ತು ಸೋಲು ಕಂಡಿವೆ. ಭಾರತ ಕೊನೆಯ ಬಾರಿಗೆ ಇಂಗ್ಲೆಂಡ್​ ವಿರುದ್ಧ ಟಿ20 ಗೆಲುವು ಕಂಡಿದ್ದು 2012ರಲ್ಲಿ. ಆ ಪಂದ್ಯದಲ್ಲಿ ಧೋನಿ ಪಡೆ 90 ರನ್​ ಗೆಲುವು ಸಾಧಿಸಿತ್ತು.

ಸಂಭಾವ್ಯ ತಂಡಗಳು


ಭಾರತ:
 ರೋಹಿತ್​ ಶರ್ಮ(ನಾಯಕ), ವಿರಾಟ್ ಕೊಹ್ಲಿ, ರಿಷಭ್​ ಪಂತ್​(ವಿಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ/ ಸಂಜು ಸ್ಯಾಮ್ಸನ್​, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್​ ಬುಮ್ರಾ.

ಇಂಗ್ಲೆಂಡ್​: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ರೀಸ್ ಟೋಪ್ಲಿ.

Continue Reading

ಕ್ರೀಡೆ

IND vs ENG: ಸೆಮಿ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ನಾಯಕ

IND vs ENG: . ಭಾರತ ತಂಡಕ್ಕೆ ಅನುಕೂಲವಾಗುವಂತೆ ಸೆಮಿಫೈನಲ್ ವೇಳಾಪಟ್ಟಿಯನ್ನು ಮೊದಲೇ ನಿರ್ಧರಿಸಲಾಗಿದೆ ಎಂದು ಇಂಗ್ಲೆಂಡ್​ ಮಾಜಿ ಆಟಗಾರ ಮೈಕೆಲ್ ವಾನ್(Michael Vaughan) ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

VISTARANEWS.COM


on

IND vs ENG
Koo

ಪ್ರೊವಿಡೆನ್ಸ್‌: ಭಾರತ ಮತ್ತು ಇಂಗ್ಲೆಂಡ್(IND vs ENG)​ ನಡುವಣ ಹೈವೋಲ್ಟೇಜ್​ ಸೆಮಿ ಫೈನಲ್​ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈ ಪಂದ್ಯ ಆರಂಭಕ್ಕೂ ಮುನ್ನವೇ ಇಂಗ್ಲೆಂಡ್​ ಮಾಜಿ ಆಟಗಾರ ಮೈಕೆಲ್ ವಾನ್(Michael Vaughan) ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಭಾರತ ತಂಡಕ್ಕೆ ಅನುಕೂಲವಾಗುವಂತೆ ಸೆಮಿಫೈನಲ್ ವೇಳಾಪಟ್ಟಿಯನ್ನು ಮೊದಲೇ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ವಾನ್​ ಅವರು ಈ ಆರೋಪ ಮಾಡಲು ಪ್ರಮುಖ ಕಾರಣವೆಂದರೆ, ಇತ್ತಂಡಗಳ ಈ ಪಂದ್ಯಕ್ಕೆ ಭಾರೀ ಮಳೆ ಭೀತಿ ಇದ್ದರೂ ಕೂಡ ಮೀಸಲು ದಿನದ ಸೌಲಭ್ಯವೂ ಇಲ್ಲ. ಹೆಚ್ಚುವರಿ 250 ನಿಮಿಷವನ್ನು ನೀಡಲಾಗಿದ್ದರೂ, ಫಲಿತಾಂಶ ನಿರ್ಧರಿಸಲು ಉಭಯ ತಂಡಗಳು ಕನಿಷ್ಠ 10 ಓವರ್​ ಆಡುವುದು ಅಗತ್ಯವಾಗಿದೆ. ಒಂದೊಮ್ಮೆ ಪಂದ್ಯ ನಡೆಯದೇ ಇದ್ದರೆ ಸೂಪರ್​-8 ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿರುವ ಭಾರತ ನೇರವಾಗಿ ಫೈನಲ್​ ಪ್ರವೇಶಿಸಲಿದೆ. ಇದು ವಾನ್ ಹಾಗೂ ಇಂಗ್ಲೆಂಡ್​ ಕ್ರಿಕೆಟಿಗರನ್ನು ಸಹಜವಾಗಿಯೇ ಕೆರಳಿಸುವಂತೆ ಮಾಡಿದೆ.

ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ವಾನ್​, ಒಂದು ಸೆಮಿ ಫೈನಲ್​ಗೆ ಮೀಸಲು ದಿನ ನಿಗದಿಪಡಿಸಿ ಮತ್ತೊಂದು ಪಂದ್ಯಕ್ಕೆ ಈ ನಿಯಮ ಅನ್ವಯವಾಗುವುದಿಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ. ನಿಯಮ ಎಂದರೆ ಎಲ್ಲ ತಂಡಗಳಿಗೂ ಮತ್ತು ಪಂದ್ಯಗಳಿಗೂ ಅನ್ವಯವಾಗಬೇಕು. ನನ್ನ ಪ್ರಕಾರ ಭಾರತ ಮತ್ತು ಇಂಗ್ಲೆಂಡ್ ನಡುವಣ ಸೆಮಿಫೈನಲ್ ಮೊದಲು ನಡೆಯಬೇಕಿತ್ತು. ಆದರೆ ಭಾರತ ತಂಡಕ್ಕೆ ಅನುಕೂಲವಾಗುವಂತೆ 2ನೇ ಸೆಮಿಫೈನಲ್​ನಲ್ಲಿ ಟೀಮ್ ಇಂಡಿಯಾವನ್ನು ಆಡಿಸಲಾಗಿದೆ. ಇದು ಪಕ್ಷಪಾತ ಧೋರಣೆ, ಇದರಿಂದ ಇಂಗ್ಲೆಂಡ್​ಗೆ ಅನ್ಯಾಯವಾಗಿದೆ. ಇದರಲ್ಲಿ ಬಿಸಿಸಿಐ ಕೈವಾಡವಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ IND vs ENG Semi Final: ಇಂದಿನ ಪಂದ್ಯಕ್ಕೆ ಭಾರತ ಆಡುವ ಬಳಗದಲ್ಲಿ ಒಂದು ಬದಲಾವಣೆ ಖಚಿತ!

ಐಸಿಸಿ ಪ್ರಕಾರ, ಬಾರ್ಬಡೋಸ್‌ನಲ್ಲಿ ಫೈನಲ್ ಪಂದ್ಯ ಶನಿವಾರ ನಡೆಯಲಿದೆ. ಕೆರಿಬಿಯನ್ ದ್ವೀಪಗಳ ನಡುವಿನ ಪ್ರಯಾಣದ ಯೋಜನೆಗಳನ್ನು ಸರಿಹೊಂದಿಸಲು ಪಂದ್ಯಗಳ ನಡುವೆ 24-ಗಂಟೆಗಳ ಅಂತರವಿರುತ್ತದೆ. ಹೀಗಾಗಿ ಮೀಸಲು ದಿನ ಇರಿಸಿಲ್ಲ ಎನ್ನುವುದು ಐಸಿಸಿ ಹೇಳಿಕೆಯಾಗಿದೆ.

ಇಂಗ್ಲೆಂಡ್​ ನಾಯಕ ಜಾಸ್​ ಬಟ್ಲರ್‌, ಫಿಲ್​ ಸಾಲ್ಟ್​, ಜಾನಿ ಬೇರ್‌ಸ್ಟೊ, ​ಲಿವಿಂಗ್​​ಸ್ಟೋನ್​, ಹ್ಯಾರಿ ಬ್ರೂಕ್​, ಸ್ಯಾಮ್​ ಕರನ್​, ಮೊಯಿನ್​ ಅಲಿ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ಟಿ20ಗೆ ಹೇಳಿ ಮಾಡಿಸಿದಂತಿದೆ. ಇವರನ್ನು ನಿಯಂತ್ರಿಸುವುದರಲ್ಲಿ ಭಾರತದ ಯಶಸ್ಸು ಅಡಗಿದೆ. ಕಳೆದ ಕೆಲವು ವರ್ಷಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದ ಘಾತಕ ವೇಗಿ ಜೋಫ್ರಾ ಆರ್ಚರ್​ ಕೂಡ ತಂಡಕ್ಕೆ ಮರಳಿದ್ದು ಇಂಗ್ಲೆಂಡ್​ ಬೌಲಿಂಗ್​ ಬಲವನ್ನು ಹೆಚ್ಚಿಸಿದೆ.

Continue Reading

ಕರ್ನಾಟಕ

KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

KMH CUP: ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಕ್ರಿಕೆಟ್ ಟೂರ್ನಿ ಆಯೋಜನೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ತಂತ್ರಜ್ಞರಿಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಆಯೋಜಿಸಲಾಗಿರುವ “ಕೆಎಂಎಚ್‌ ಕಪ್” ಕ್ರಿಕೆಟ್ ಟೂರ್ನಿ ಲೋಗೋ ಬಿಡುಗಡೆ ಸಮಾರಂಭ ಈಚೆಗೆ ನಡೆಯಿತು.

VISTARANEWS.COM


on

Actress Bhavana Ramanna is the ambassador for KMH Cup
Koo

ಬೆಂಗಳೂರು: ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಕ್ರಿಕೆಟ್ ಟೂರ್ನಿ ಆಯೋಜನೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ತಂತ್ರಜ್ಞರಿಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಆಯೋಜಿಸಲಾಗಿರುವ “ಕೆಎಂಎಚ್‌ ಕಪ್” ಕ್ರಿಕೆಟ್ ಟೂರ್ನಿ (KMH CUP) ಲೋಗೋ ಬಿಡುಗಡೆ ಸಮಾರಂಭ ಈಚೆಗೆ ನಡೆಯಿತು.

ಈ ಟೂರ್ನಿಯ ರಾಯಭಾರಿ ಆಗಿರುವ ನಟಿ ಭಾವನ ರಾಮಣ್ಣ ಲೋಗೊ ಬಿಡುಗಡೆ ಮಾಡಿದರು. ಕಾಂಗ್ರೆಸ್ ಮುಖಂಡ ದಿನೇಶ್, ಸಂಘದ ಅಧ್ಯಕ್ಷ ಎಸ್. ಬಾಬು ಧರ್ಮೇಂದ್ರ ಹಾಗೂ ಕಾರ್ಯದರ್ಶಿ ದಿನೇಶ್ ಆಚಾರ್ ಈ ವೇಳೆ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘಕ್ಕೆ ಮೂವತ್ತೈದು ವರ್ಷಗಳ ಇತಿಹಾಸವಿದೆ. ಅನೇಕ ಹಿರಿಯರು ಈ ಸಂಘವನ್ನು ಕಟ್ಟಿ ಬೆಳೆಸಿದ್ದಾರೆ. ಇದೇ ಮೊದಲ ಬಾರಿಗೆ ನಮ್ಮ ಸಂಘದ ವತಿಯಿಂದ “ಕೆಎಂಎಚ್‌ ಕಪ್” ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. ಸದಾ ನಮ್ಮ ಸಂಘದ ಜತೆಯಿರುವ ನಟಿ ಭಾವನ ರಾಮಣ್ಣ ಈ ಟೂರ್ನಿಯ ರಾಯಭಾರಿಯಾಗಿದ್ದಾರೆ.

ಇದನ್ನೂ ಓದಿ: Vande Bharath Train: ಬೆಂಗಳೂರು-ಮಧುರೈ ʼವಂದೇ ಭಾರತ್ʼ ರೈಲು ಜುಲೈನಿಂದ ಆರಂಭ

ಜುಲೈ 20 ಹಾಗೂ 21 ಶನಿವಾರ ಹಾಗೂ ಭಾನುವಾರ ವಿಜಯನಗರದ ಬಿ.ಜಿ.ಎಸ್. ಮೈದಾನದಲ್ಲಿ ಈ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯಲಿದೆ. ಬೆಳಿಗ್ಗೆ 8 ರಿಂದ ರಾತ್ರಿ 8 ವರೆಗೂ ಪಂದ್ಯಗಳು ನಡೆಯುತ್ತದೆ. ನಾಕೌಟ್ ಪಂದ್ಯಗಳು ಆರು ಓವರ್ ಇರುತ್ತದೆ. ಫೈನಲ್ ಪಂದ್ಯ ಎಂಟು ಓವರ್ ನದಾಗಿರುತ್ತದೆ. ಗೆದ್ದ ಮೊದಲ ತಂಡಕ್ಕೆ 49,999 ರೂಪಾಯಿ ಹಾಗೂ ರನ್ನರ್ ತಂಡಕ್ಕೆ 24, 999 ರೂಪಾಯಿ ಬಹುಮಾನ ನೀಡಲಾಗುವುದು.

ಟೂರ್ನಿಯಲ್ಲಿ ಭಾಗವಹಿಸುವ ತಂಡಕ್ಕೆ ಹತ್ತು ಸಾವಿರ ಪ್ರವೇಶ ದರ ವಿರುತ್ತದೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಒಳಪಡುವ ಹನ್ನೆರಡು ಸಂಘಗಳು ಹಾಗೂ ಮಾಧ್ಯಮದ ಮಿತ್ರರು ಈ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಹದಿನಾಲ್ಕು ತಂಡಗಳು ಟೂರ್ನಿಯಲ್ಲಿ ಭಾಗಿಯಾಗಲಿದೆ ಎಂದು ಸಂಘದ ಅಧ್ಯಕ್ಷ ಬಾಬು ಧರ್ಮೇಂದ್ರ ತಿಳಿಸಿದರು.

ಇದನ್ನೂ ಓದಿ: Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

ತಮ್ಮ ಮೊದಲ ಚಿತ್ರಕ್ಕೆ ಮೇಕಪ್ ಮಾಡಿದ ವೆಂಕಟೇಶ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ನಟಿ ಭಾವನ ರಾಮಣ್ಣ, ನಾನು ನಟಿಸುವ ಎಲ್ಲಾ ಚಿತ್ರಗಳ ನಿರ್ಮಾಪಕರಿಗೆ ಹೇಳುವುದು ಮೇಕಪ್ ಹಾಗೂ ಕೇಶಾಲಂಕಾರಕ್ಕೆ ಈ ಸಂಘದ ಸದಸ್ಯರೇ ಇರಲಿ ಎಂದು. ಈಗ ಸಾಕಷ್ಟು ಜನ‌ರು ಸಾಮಾಜಿಕ ಜಾಲತಾಣಗಳಲ್ಲಿ ಮೇಕಪ್ ಕುರಿತು ಪ್ರಮೋಷನ್ ಮಾಡಿಕೊಳ್ಳುತ್ತಾರೆ. ಅದರಿಂದ ಇವರಿಗೆ ಸ್ವಲ್ಪ ತೊಂದರೆಯಾಗುತ್ತಿದೆ‌. ಇನ್ನು ಈ ಟೂರ್ನಿಯ ಬಗ್ಗೆ ಹೇಳಬೇಕೆಂದರೆ, ಹೆಚ್ಚಾಗಿ ಕಲಾವಿದರು ಕ್ರಿಕೆಟ್ ಆಡುತ್ತೇವೆ‌. ತಂತ್ರಜ್ಞರು ಆಡುವುದು ಕಡಿಮೆ. ಕಾರ್ಮಿಕರು ಹಾಗೂ ತಂತ್ರಜ್ಞರಿಗಾಗಿ ಆಯೋಜಿಸಿರುವ ಈ ಕ್ರಿಕೆಟ್ ಟೂರ್ನಿಯ ರಾಯಭಾರಿಯಾಗಿದ್ದು ಖುಷಿಯಾಗಿದೆ. ಟೂರ್ನಿ ಯಶಸ್ವಿಯಾಗಲಿ ಎಂದು ತಿಳಿಸಿದರು.

Continue Reading

ಕ್ರೀಡೆ

IND vs ENG Semi Final: ಇಂದಿನ ಪಂದ್ಯಕ್ಕೆ ಭಾರತ ಆಡುವ ಬಳಗದಲ್ಲಿ ಒಂದು ಬದಲಾವಣೆ ಖಚಿತ!

IND vs ENG Semi Final: ಸಂಜು ಸ್ಯಾಮ್ಸನ್​ ಹೊಡಿಬಡಿ ಆಟಕ್ಕೆ ಹೇಳಿ ಮಾಡಿಸಿದ ಆಟಗಾರ. ಐಪಿಎಲ್​ನಲ್ಲಿ ಅವರ ಬ್ಯಾಟಿಂಗ್​ ಸಾಮರ್ಥ್ಯವನ್ನು ಅವರು ಈಗಾಗಲೇ ಸಾಬೀತುಪಡಿಸಿದ್ದಾರೆ. ಒಮ್ಮೆ ಸಿಡಿದು ನಿಂತರೆ ದೊಡ್ಡ ಮೊತ್ತ ಪೇರಿಸುವುದು ಖಚಿತ. ಯಾವುದೇ ಕ್ರಮಾಂಕದಲ್ಲಿಯೂ ಬ್ಯಾಟ್​ ಬೀಸುವ ಚಾಕಚಕ್ಯತೆ ಇವರಲ್ಲಿದೆ.

VISTARANEWS.COM


on

IND vs ENG Semi Final
Koo

ಪ್ರೊವಿಡೆನ್ಸ್‌: ಇಂಗ್ಲೆಂಡ್(IND vs ENG)​ ವಿರುದ್ಧ ಇಂದು ನಡೆಯುವ ಟಿ20 ವಿಶ್ವಕಪ್​(T20 World Cup 2024) ಸೆಮಿಫೈನಲ್​ (IND vs ENG Semi Final)ಪಂದ್ಯಕ್ಕೆ ಭಾರತ ತನ್ನ ಆಡುವ ಬಳಗದಲ್ಲಿ ಒಂದು ಮಹತ್ವದ ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ಕೆಲ ಮೂಲಗಳು ವರದಿ ಮಾಡಿದೆ. ಸತತವಾಗಿ ಬ್ಯಾಟಿಂಗ್​ ವೈಫಲ್ಯ ಕಾಣುತ್ತಿರುವ ಎಡಗೈ ಬ್ಯಾಟರ್​ ಶಿವಂ ದುಬೆ ಅವರನ್ನು ಈ ಪಂದ್ಯದಿಂದ ಕೈಬಿಡಲಾಗುವುದು ಎನ್ನಲಾಗಿದೆ.

ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಪರ ಇಂಪ್ಯಾಕ್ಟ್​ ಆಟಗಾರನಾಗಿ ಪ್ರಚಂಡ ಬ್ಯಾಟಿಂಗ್​ ನಡೆಸುತ್ತಿದ್ದ ದುಬೆ ವಿಶ್ವಕಪ್​ ಟೂರ್ನಿಯಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ. ಬೌಲಿಂಗ್​ ಆಲ್​ರೌಂಡರ್​ ಆಗಿದ್ದರೂ ಕೂಡ ಇದುವರೆಗೆ ಒಂದು ಪಂದ್ಯದಲ್ಲಿ ಮಾತ್ರ ಒಂದು ಓವರ್​ ಬೌಲಿಂಗ್​ ನಡೆಸಿದ್ದಾರೆ. ಫೀಲ್ಡಿಂಗ್​ ಕೂಡ ಕಳಪೆ ಮಟ್ಟದಿಂದ ಕೂಡಿದೆ. ಸತತವಾಗಿ ವಿಫಲರಾಗುತ್ತಿದ್ದರೂ ಕೂಡ ಪದೇಪದೆ ಅವರಿಗೆ ಅವಕಾಶ ನೀಡುತ್ತಿರುವುದಕ್ಕೆ ಹಲವರಿಂದ ವಿರೋಧ ಕೂಡ ವ್ಯಕ್ತವಾಗಿದೆ. ಇದೀಗ ಮಹತ್ವದ ಸೆಮಿ ಪಂದ್ಯದಿಂದ ಇವರನ್ನು ಕೈ ಬಿಟ್ಟು ಸಂಜು ಸ್ಯಾಮ್ಸನ್​ ಅವರನ್ನು ಆಡಿಸುವ ಯೋಜನೆಯೊಂದನ್ನು ರೂಪಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಂಜು ಸ್ಯಾಮ್ಸನ್​ ಹೊಡಿಬಡಿ ಆಟಕ್ಕೆ ಹೇಳಿ ಮಾಡಿಸಿದ ಆಟಗಾರ. ಐಪಿಎಲ್​ನಲ್ಲಿ ಅವರ ಬ್ಯಾಟಿಂಗ್​ ಸಾಮರ್ಥ್ಯವನ್ನು ಅವರು ಈಗಾಗಲೇ ಸಾಬೀತುಪಡಿಸಿದ್ದಾರೆ. ಒಮ್ಮೆ ಸಿಡಿದು ನಿಂತರೆ ದೊಡ್ಡ ಮೊತ್ತ ಪೇರಿಸುವುದು ಖಚಿತ. ಯಾವುದೇ ಕ್ರಮಾಂಕದಲ್ಲಿಯೂ ಬ್ಯಾಟ್​ ಬೀಸುವ ಚಾಕಚಕ್ಯತೆ ಇವರಲ್ಲಿದೆ. ಕೆಳ ಕ್ರಮಾಂಕದಲ್ಲಿ ಆಡಿಸಿದರೆ ಅವರ ಬಿರುಸಿನ ಬ್ಯಾಟಿಂಗ್​ ಸಹಾಯದಿಂದ ತಂಡ ಬೃಹತ್​ ಮೊತ್ತ ಕೂಡ ದಾಖಲಿಸಲು ನೆರವಾಗುತ್ತದೆ. ಹೀಗಾಗಿ ಅವರಿಗೆ ಇಂದಿನ ಪಂದ್ಯದಲ್ಲಿ ಆಡುವ ಅವಕಾಶ ಸಿಗಬಹುದು. ಬ್ಯಾಟಿಂಗ್​ ಮಾತ್ರವಲ್ಲದೆ ಪಾದರಸದಂತೆ ಚುರುಕಿನ ಫೀಲ್ಡಿಂಗ್​ ಕೂಡ ಮಾಡಬಲ್ಲರು. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಸಂಭವಿಸುವ ಸಾಧ್ಯತೆ ಕಡಿಮೆ.

ಇದನ್ನೂ ಓದಿ IND vs ENG: ಹೈವೋಲ್ಟೇಜ್ ಸೆಮಿ ಕಾದಾಟಕ್ಕೆ ಕ್ಷಣಗಣನೆ; ಸೇಡು ತೀರಿಸಲು ರೋಹಿತ್​ ಪಡೆ ಸಜ್ಜು

ಮುಖಾಮುಖಿ


ಭಾರತ ಮತ್ತು ಇಂಗ್ಲೆಂಡ್​ ಇದುವರೆಗೆ ಟಿ20 ಕ್ರಿಕೆಟ್​ನಲ್ಲಿ 23 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 12 ಪಂದ್ಯ ಗೆದ್ದಿದ್ದರೆ, ಇಂಗ್ಲೆಂಡ್​ 11 ಪಂದ್ಯಗಳನ್ನು ಗೆದ್ದಿದೆ. ಕಳೆದ 2 ವರ್ಷಗಳಿಂದ ಇಂಗ್ಲೆಂಡ್​ ವಿರುದ್ಧ ಭಾರತ ಗೆಲುವು ಕಂಡಿಲ್ಲ. 2022ರ ಟಿ20 ವಿಶ್ವಕಪ್(T20 World Cup 2024)​ ಸೆಮಿಫೈನಲ್​ ಪಂದ್ಯದ ಬಳಿಕ ಉಭಯ ತಂಡಗಳು ಇದುವರೆಗೂ ಟಿ20ಯಲ್ಲಿ ಮುಖಾಮುಖಿಯಾಗಿಲ್ಲ. ಆ ಪಂದ್ಯದಲ್ಲಿ ಭಾರತ 10 ವಿಕೆಟ್​ ಸೋಲು ಕಂಡಿತ್ತು. ಅಂದಿನ ಸೋಲಿಗೆ ಈ ಬಾರಿಯ ಸೆಮಿ ಕಾದಾಟದಲ್ಲಿ ಭಾರತ ಸೇಡು ತೀರಿಸಿಕೊಂಡೀತೇ ಎಂದು ಕಾದು ನೋಡಬೇಕಿದೆ.

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇತ್ತಂಡಗಳು 4 ಪಂದ್ಯಗಳನ್ನು ಆಡಿ ತಲಾ 2 ಪಂದ್ಯಗಳಲ್ಲಿ ಗೆಲುವು ಮತ್ತು ಸೋಲು ಕಂಡಿವೆ. ಭಾರತ ಕೊನೆಯ ಬಾರಿಗೆ ಇಂಗ್ಲೆಂಡ್​ ವಿರುದ್ಧ ಟಿ20 ಗೆಲುವು ಕಂಡಿದ್ದು 2012ರಲ್ಲಿ. ಆ ಪಂದ್ಯದಲ್ಲಿ ಧೋನಿ ಪಡೆ 90 ರನ್​ ಗೆಲುವು ಸಾಧಿಸಿತ್ತು.

ಸಂಭಾವ್ಯ ತಂಡಗಳು


ಭಾರತ:
 ರೋಹಿತ್​ ಶರ್ಮ(ನಾಯಕ), ವಿರಾಟ್ ಕೊಹ್ಲಿ, ರಿಷಭ್​ ಪಂತ್​(ವಿಕೀ), ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್​, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್​ ಬುಮ್ರಾ.

ಇಂಗ್ಲೆಂಡ್​: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ರೀಸ್ ಟೋಪ್ಲಿ.

Continue Reading
Advertisement
Lakshmi Hebbalkar visit the Women and Children Nutritious Food Manufacturing Unit at Yaragatti
ಕರ್ನಾಟಕ25 seconds ago

Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್

Post of Additional DCM Those who speak before the media should go to the High Command and speak says DCM DK Shivakumar
ಕರ್ನಾಟಕ2 mins ago

DK Shivakumar: ಹೆಚ್ಚುವರಿ ಡಿಸಿಎಂ ಹುದ್ದೆಗೆ ಹೈಕಮಾಂಡ್ ಬಳಿ ಹೋಗಲಿ; ಡಿ.ಕೆ. ಶಿವಕುಮಾರ್

Paris Olympics 2024
ಕ್ರೀಡೆ27 mins ago

Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

Viral Video
ವೈರಲ್ ನ್ಯೂಸ್31 mins ago

Viral Video: ಅಬ್ಬಾ.. ಎಂಥಾ ಕ್ರೌರ್ಯ! ಮಹಿಳೆ ಮೇಲೆ ಕಿಡಿಗೇಡಿಗಳಿಂದ ಇದೆಂಥಾ ದೌರ್ಜನ್ಯ-ವಿಡಿಯೋ ಇದೆ ನೋಡಿ

Jio Tariffs
ದೇಶ31 mins ago

Jio Tariffs: ಜಿಯೋ ಬಳಕೆದಾರರಿಗೆ ಬ್ಯಾಡ್‌ ನ್ಯೂಸ್;‌ ಶೇ.20ರಷ್ಟು ಶುಲ್ಕ ಹೆಚ್ಚಳ, ನೂತನ ದರಪಟ್ಟಿ ಇಲ್ಲಿದೆ

Internet Addiction
ಆರೋಗ್ಯ41 mins ago

Internet Addiction: ಈ 10 ಲಕ್ಷಣಗಳು ನಿಮ್ಮಲ್ಲಿದ್ದರೆ, ನೀವೂ ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ!

Paris Olympics 2024
ಕ್ರೀಡೆ45 mins ago

Paris Olympics 2024: ಒಲಿಂಪಿಕ್ಸ್​ಗೆ ಅರ್ಹತೆ ಪಡೆದ​ ರಾಜ್ಯದ ಇಬ್ಬರು ಸ್ವಿಮ್ಮರ್​ಗಳು

Illegal ganja storage in Ballari Arrest of two accused Rs 19 10 lakh Valuable ganja seized
ಕರ್ನಾಟಕ1 hour ago

Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

Arvind Kejriwal
ದೇಶ1 hour ago

Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ8 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌