ಹೈದರಾಬಾದ್: ಟೀಮ್ ಇಂಡಿಯಾದ ವಿಕೆಟ್ ಕೀಪರ್ ಕಮ್ ಬ್ಯಾಟರ್ ಶ್ರೀಕರ್ ಭರತ್(KS Bharat) ಅವರು ತಮ್ಮ ಜೆರ್ಸಿಯನ್ನು ತೆಲುಗು ಚಿತ್ರರಂಗದ ಖ್ಯಾತ ನಟ, ಮೆಗಾಸ್ಟಾರ್ ಚಿರಂಜೀವಿ(superstar chiranjeevi) ಅವರಿಗೆ ವಿಶೇಷ ಉಡುಗೊರೆಯಾಗಿ ನೀಡಿದ್ದಾರೆ. ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೂರಲ್ ಆಗಿದೆ.
ಕೆ.ಎಸ್ ಭರತ್ ಕೂಡ ಆಂಧ್ರಪ್ರದೇಶದ ವಿಶಾಖಪಟ್ಟಣದವರಾಗಿದ್ದಾರೆ. ಹೀಗಾಗಿ ಅವರು ತಮ್ಮ ನೆಚ್ಚಿನ ನಟ ಚಿರಂಜೀವಿ ಅವರಿಗೆ ತಮ್ಮ ಟೀಮ್ ಇಂಡಿಯಾದ 14 ನಂಬರ್ನ ಜೆರ್ಸಿಯನ್ನು ವಿಶೇಷ ಉಡುಗೊರೆಯಾಗಿ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ದ್ವಿತೀಯ ಪಂದ್ಯ ವಿಶಾಖಪಟ್ಟಣದ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಭರತ್ ಅವರು ಚಿರಂಜೀವಿ ಅವರನ್ನು ಭೇಟಿಯಾಗದರು.
KS Bharat gifted his Indian test jersey to Superstar Chiranjeevi.
— Johns. (@CricCrazyJohns) January 29, 2024
– Great gesture by Bharat. 👏 pic.twitter.com/EcmnXdzNky
ರಿಷಭ್ ಪಂತ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಕೆಯಲ್ಲಿರುವ ಕಾರಣ ಅವರ ಬದಲಿಗೆ ಭರತ್ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾದಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. 30 ವರ್ಷದ ಅವರು ಇದುವರೆಗೆ ಭಾರತ ಪರ 6 ಟೆಸ್ಟ್‌ಗಳನ್ನು ಆಡಿದ್ದಾರೆ. ಕಳೆದ ಆಸೀಸ್ ವಿರುದ್ಧದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅವರು ಟೀಮ್ ಇಂಡಿಯಾಕ್ಕೆ ಪಪಾರ್ಪಣೆ ಮಾಡಿದ್ದರು. ಇದುವರೆಗೆ 6 ಪಂದ್ಯದಲ್ಲಿ 198 ರನ್ ಗಳಿಸಿದ್ದಾರೆ. ಇದರಲ್ಲಿ 44 ರನ್ ಅವರ ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ.
ಇಂಗ್ಲೆಂಡ್ ವಿರುದ್ಧ ಹೈದರಾಬಾದ್ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 41, ದ್ವಿತೀಯ ಇನಿಂಗ್ಸ್ನಲ್ಲಿ 28 ರನ್ ಬಾರಿಸಿದ್ದರು. ಇದೀಗ ತವರಿನನಲ್ಲಿ ನಡೆಯುವ ದ್ವಿತೀಯ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್ ಮಾಡುವ ವಿಶ್ವಾಸದಲ್ಲಿದ್ದಾರೆ.
ಇದನ್ನೂ ಓದಿ Ind vs Eng : ಎರಡನೇ ಪಂದ್ಯಕ್ಕೆ ಜಡೇಜಾ, ರಾಹುಲ್ ಔಟ್; ಇನ್ನಿಬ್ಬರಿಗೆ ಅವಕಾಶ
ಇಂಗ್ಲೆಂಡ್ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ಭಾರತ ಎ ಮತ್ತು ಇಂಗ್ಲೆಂಡ್ ಲಯನ್ಸ್ (India vs England Test Series) ನಡುವಣ ಮೊದಲ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭರತ್ 116 ರನ್ ಬಾರಿಸಿ ಮಿಂಚಿದ್ದರು. ಶತಕ ಪೂರ್ತಿಗೊಳ್ಳುತ್ತಿದ್ದಂತೆ ಬಿಲ್ಲು ಬಾಣ ಹೊಡೆಯುವ ಶೈಲಿಯನ್ನು ತೋರಿಸಿ ತಮ್ಮ ಶತಕವನ್ನು ಶ್ರೀರಾಮನಿಗೆ ಸಮರ್ಪಿಸಿದ್ದರು. ಜತೆಗೆ ತಮ್ಮ ತೋಳಿನಲ್ಲಿರುವ ರಾಮನ ಟ್ಯಾಟು ಕೂಡ ತೋರಿಸಿದ್ದರು. ಈ ಪಂದ್ಯ ಡ್ರಾದಲ್ಲಿ ಮುಕ್ತಾಯ ಕಂಡಿತ್ತು.
KS Bharat dedicated his century against England Lions to Shree Ram ahead of the 'Pran Pratishtha'. pic.twitter.com/awSgaIfvP7
— Mufaddal Vohra (@mufaddal_vohra) January 21, 2024