Site icon Vistara News

ಲೆಜಿಸ್ಲೇಚರ್ ಕಪ್-2024 ಚೆಸ್ ಟೂರ್ನಿ: ಜೇವರ್ಗಿ ಶಾಸಕ ಅಜಯ್ ಸಿಂಗ್ ಚಾಂಪಿಯನ್

Legislature Cup-2024 Chess Tournament: Jewargi MLA Ajay Singh Champion

ಬೆಂಗಳೂರು: ಚೆಸ್ ಆಟವನ್ನು ಜನರಿಗೆ ಇನ್ನಷ್ಟು ಪರಿಚಯ ಮಾಡುವ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಚೆಸ್ ಹಬ್ಬ ಹಮ್ಮಿಕೊಳ್ಳಲಾಗಿತ್ತು. ವಿಧಾನಸಭೆ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ನಡೆದ ಲೆಜಿಸ್ಲೇಜರ್ ಕಪ್-2024 ಚೆಸ್ ಟೂರ್ನಿ(Legislature Cup-2024 Chess Tournament) ಇದಾಗಿತ್ತು. ಚೊಚ್ಚಲ ಆವೃತ್ತಿಯಲ್ಲೇ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್(MLA Ajay Singh) ಅವರು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.

ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಮಂಡಲ ಮತ್ತು ಅಖಿಲ ಭಾರತ ಚೆಸ್ ಫೆಡರೇಷನ್ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಚೆಸ್ ದಿನಾಚರಣೆ ಹಾಗೂ ಶತಮಾನೋತ್ಸವದ ಅಂಗವಾಗಿ ಈ ಹಬ್ಬ ಆಯೋಜಿಸಲಾಗಿತ್ತು. ಸಚಿವರು, ಶಾಸಕರು ಮತ್ತು ಅಧಿಕಾರಿ/ಸಿಬ್ಬಂದಿಗಾಗಿ ಓಪನ್ ರಾಪಿಡ್ ಚೆಸ್ ಟೂರ್ನ್‌ಮೆಂಟ್ 2024 ಲೆಜಿಸ್ಲೇಚರ್ ಕಪ್-2024 ಚೆಸ್ ಪಂದ್ಯವನ್ನು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಿದ್ದರು.


ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಎಲ್ಲ ಸುತ್ತಿನಲ್ಲಿಯೂ ಗೆದ್ದು ಚಾಂಪಿಯನ್​ ಆಗಿ ಹೊರಹೊಮ್ಮಿದ್ದಾರೆ. ಪ್ರಶಸ್ತಿ ಮೊತ್ತವಾಗಿ ಅವರು 2 ಲಕ್ಷ ನಗದು ಮತ್ತು ಟ್ರೋಫಿ ಪಡೆದುಕೊಂಡರು. ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ಅವರು ದ್ವಿತೀಯ ಬಹುಮಾನ ಮತ್ತು ಪ್ರತಾಪ್ ಸಿಂಹ ನಾಯಕ್ ಅವರು ತೃತೀಯ ಬಹುಮಾನ ಗಳಿಸಿದರು. ವಿಜೇತರೆಲ್ಲರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಿಸಿ ಶುಭ ಹಾರೈಸಿದರು.

ಇದನ್ನೂ ಓದಿ Union Budget 2024: ಪ್ರಧಾನಿ ಮೋದಿ ಕುರ್ಚಿ ಉಳಿಸೋಕೆ ಆಂಧ್ರ, ಬಿಹಾರಕ್ಕೆ ವಿಶೇಷ ಅನುದಾನ: ಸಿಎಂ ಕಿಡಿ

ವಿಧಾನಸಭೆಯಲ್ಲಿ ಸಿನಿ‌, ಸಾಂಸ್ಕೃತಿಕ ಕಾರ್ಯಕರ್ತರ ಮಸೂದೆ ಅಂಗೀಕಾರ; ಸಿನಿಮಾ ಟಿಕೆಟ್, OTT ಶುಲ್ಕ ಭಾರಿ ಏರಿಕೆ!

ಬೆಂಗಳೂರು: ವಿಧಾನಸಭೆಯಲ್ಲಿ (Assembly Session) ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ 2024 ಹಾಗೂ ಕರ್ನಾಟಕ ವಿಧಾನಮಂಡಲ ಅನರ್ಹತಾ‌ ನಿವಾರಣಾ ಎರಡನೇ ತಿದ್ದುಪಡಿ ವಿಧೇಯಕ 2024 ಸರ್ವಾನುಮತದಿಂದ ಅಂಗೀಕಾರಗೊಂಡಿವೆ. ಸುದೀರ್ಘ ಚರ್ಚೆ ಬಳಿಕ ವಿಪಕ್ಷಗಳ ವಿರೋಧದ ನಡುವೆಯೂ ಎರಡು ಮಸೂದೆಗಳಿಗೆ ಅಂಗೀಕಾರ ‌ನೀಡಲಾಗಿದೆ. ಇನ್ನು ವಿಧಾನ ಪರಿಷತ್‌ನಲ್ಲೂ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ 2024 ಅಂಗೀಕಾರಗೊಂಡು, ಕಾಯ್ದೆ ಜಾರಿಯಾದರೆ ಸಿನಿಮಾ ಪ್ರಿಯರಿಗೆ ದರ ಏರಿಕೆ ಬಿಸಿ ತಟ್ಟಲಿದೆ.

ಏನಿದು ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ 2024?

ರಾಜ್ಯ ಸರ್ಕಾರ, ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ 2024 ಅನ್ನು ಮಂಗಳವಾಡ ಮಂಡಿಸಿ ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿದೆ. ಈ ಮಸೂದೆಯಲ್ಲಿ ಸಿನಿಮಾ, ಸಾಂಸ್ಕೃತಿಕ ಕಲಾವಿದರ ಅನುಕೂಲಕ್ಕಾಗಿ ಸಿನಿಮಾ ಟಿಕೆಟ್‌ ಮತ್ತು ಒಟಿಟಿ ಸಬ್‌ಸ್ಕ್ರಿಪ್ಶನ್ ಶುಲ್ಕದ ಮೇಲೆ ಶೇಕಡ 1ರಿಂದ 2ರಷ್ಟು ಹೊಸ ಸೆಸ್ ವಿಧಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಇದರಿಂದ ಸಿನಿಮಾ, ಸಾಂಸ್ಕೃತಿಕ ಕಲಾವಿದರಿಗೆ ಇಎಸ್ಐ, ಪಿಎಫ್ ಸೇರಿದಂತೆ ಅನೇಕ ಅನುಕೂಲಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದೆ.

ರಾಜ್ಯದಲ್ಲಿನ ಸಿನಿಮಾ, ಸಾಂಸ್ಕೃತಿಕ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿ ಎಂಬ ನಿಧಿ ಸ್ಥಾಪಿಸಲಾಗುವುದು ಎಂದು ಮಸೂದೆಯಲ್ಲಿ ತಿಳಿಸಲಾಗಿದೆ. ಇದರಿಂದ ಸಿನಿಮಾ ಟಿಕೆಟ್ ಹಾಗೂ ಒಟಿಟಿ ಚಂದಾದಾರಿಕೆ ಮೇಲೆ ಶೇಕಡ 2 ಪರ್ಸೆಂಟ್ ಮೀರದಂತೆ ಶೇಕಡ 1 ಪರ್ಸೆಂಟ್​ಗಿಂತ ಕಡಿಮೆಯಾಗದಂತೆ ಸೆಸ್‌ ವಿಧಿಸಲಿದೆ. ಈ ಸೆಸ್ ಅನ್ನು ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದೆ.

ಪೆಟ್ರೋಲ್‌, ಡೀಸೆಲ್‌ ಏರಿಕೆ ಬೆನ್ನಲ್ಲೇ ಇದೀಗ ಮನರಂಜನೆ ಕ್ಷೇತ್ರದ ಮೇಲೆ ರಾಜ್ಯ ಸರ್ಕಾರ ಕಣ್ಣಿಟ್ಟು, ಸಿನಿಮಾ ಟಿಕೆಟ್ ಮತ್ತು ಒಟಿಟಿ ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್ ವಿಧಿಸಲು ಸರ್ಕಾರ ಮುಂದಾಗಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ರಾಜ್ಯ ಸರ್ಕಾರದ ನಿರ್ಧಾರವನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿತ್ತು. ಎಲ್ಲದರ ಮೇಲೂ ತೆರಿಗೆಯನ್ನು ಹೇರಿರುವ ಸಿದ್ದರಾಮಯ್ಯ ಸರ್ಕಾರ, ಇದೀಗ ಸಿನಿಮಾ ಪ್ರೇಕ್ಷಕರ ಮೇಲೂ ತೆರಿಗೆ ಪ್ರಹಾರ (Movie ticket price hike) ಮಾಡಲು ‘ಕೈ’ ಎತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿತ್ತು. ಇದೀಗ ವಿಪಕ್ಷ ನಾಯಕರ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಮಸೂದೆ ಮಸೂದೆ ಅಂಗೀಕಾರಗೊಂಡಿದೆ.

Exit mobile version