LLC 2023: Confused Pak bowler for Uthappa Sixers; The video is viral LLC 2023: ಉತ್ತಪ್ಪ ಸಿಕ್ಸರ್​ಗೆ ಕಂಗಾಲಾದ ಪಾಕ್ ಬೌಲರ್​; ವಿಡಿಯೊ ವೈರಲ್​ Vistara News LLC 2023: ಉತ್ತಪ್ಪ ಸಿಕ್ಸರ್​ಗೆ ಕಂಗಾಲಾದ ಪಾಕ್ ಬೌಲರ್​; ವಿಡಿಯೊ ವೈರಲ್​
Connect with us

ಕ್ರಿಕೆಟ್

LLC 2023: ಉತ್ತಪ್ಪ ಸಿಕ್ಸರ್​ಗೆ ಕಂಗಾಲಾದ ಪಾಕ್ ಬೌಲರ್​; ವಿಡಿಯೊ ವೈರಲ್​

ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ ಟಿ20 ಟೂರ್ನಿಯಲ್ಲಿ ರಾಬಿನ್‌ ಉತ್ತಪ್ಪ ಅವರು ಒಂದೇ ಓವರ್​ನಲ್ಲಿ 23 ರನ್​ ಚಚ್ಚಿ ಗಮನಸೆಳೆದಿದ್ದಾರೆ.

VISTARANEWS.COM


on

LLC 2023 Confused Pak bowler for Uthappa Sixers The video is viral
Koo

ದುಬೈ: ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ ಟಿ20 ಟೂರ್ನಿಯಲ್ಲಿ(Legends League Cricket) ಇಂಡಿಯಾ ಮಹಾರಾಜಸ್‌ ತಂಡ ಏಷ್ಯಾ ಲಯನ್ಸ್‌ ವಿರುದ್ಧ 10 ವಿಕೆಟ್​ಗ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಕನ್ನಡಿಗ ರಾಬಿನ್‌ ಉತ್ತಪ್ಪ(Robin Uthappa) ಸಿಡಿಲಬ್ಬರದ ಬ್ಯಾಟಿಂಗ್​ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ.

ಮಂಗಳವಾರ(ಮಾರ್ಚ್ 14) ದೋಹಾದ ವೆಸ್ಟ್‌ ಎಂಡ್‌ ಪಾರ್ಕ್‌ ಇಂಟರ್‌ನ್ಯಾಷನಲ್ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಏಷ್ಯಾ ಲಯನ್ಸ್‌ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 157 ರನ್​ ಬಾರಿಸಿತು. ಗುರಿ ಬೆನ್ನಟ್ಟಿದ ಇಂಡಿಯಾ ಮಹಾರಾಜಸ್‌ ಗೌತಮ್ ಗಂಭೀರ್(​Gautam Gambhir) ಮತ್ತು ಉತ್ತಪ್ಪ ಅವರ ಸ್ಫೋಟಕ ಬ್ಯಾಟಿಂಗ್​ ನೆರವಿನಿಂದ ಕೇವಲ 12.3 ಓವರ್​ಗಳಲ್ಲಿ ವಿಕೆಟ್​ ನಷ್ಟವಿಲ್ಲದೆ 159 ರನ್ ಬಾರಿಸಿ ಗೆಲುವು ದಾಖಲಿಸಿತು.

ಇದನ್ನೂ ಓದಿ IND VS AUS: ಮುಂಬಯಿ ತಲುಪಿದ ಆಸ್ಟ್ರೇಲಿಯಾ​ ಆಟಗಾರರು

ಕಳೆದ ವರ್ಷ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ರಾಬಿನ್‌ ಉತ್ತಪ್ಪ ಅವರು ಈ ಪಂದ್ಯದಲ್ಲಿ ಮೊಹಮ್ಮದ್‌ ಹಫೀಜ್​ ಅವರ ಒಂದೇ ಓವರ್‌ನಲ್ಲಿ ಮೂರು ಸಿಕ್ಸರ್​ ಸಹಿತ 23 ರನ್‌ ಸಿಡಿದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಒಟ್ಟು 39 ಎಸೆತ ಎದುರಿಸಿದ ಅವರು 11 ಬೌಂಡರಿ ಮತ್ತು 5 ಸಿಕ್ಸರ್​ ನೆರವಿನಿಂದ ಅಜೇಯ 88 ರನ್​ ಬಾರಿಸಿದರು. ಇವರ ಜತೆಗಾರ ಗೌತಮ್​ ಗಂಭೀರ್​ 12 ಬೌಂಡರಿ ನೆರವಿನಿಂದ ಅಜೇಯ 61 ರನ್​ ಗಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ಕ್ರಿಕೆಟ್

IPL 2023: ಧೋನಿಗೆ ಗಾಯ; ಮೊದಲ ಪಂದ್ಯಕ್ಕೆ ಅನುಮಾನ; ಸ್ಟೋಕ್ಸ್​ ನಾಯಕತ್ವ ಸಾಧ್ಯತೆ

ಮೊಣ ಕಾಲಿನ ಗಾಯಕ್ಕೆ ತುತ್ತಾಗಿರುವ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್​ ಧೋನಿ ಅವರು ಇಂದು ನಡೆಯುವ ಗುಜರಾತ್​ ಟೈಟಾನ್ಸ್​ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Edited by

IPL 2023 Dhoni injured Doubt for the first game
Koo

ಅಹಮದಾಬಾದ್: ಇನ್ನೇನು ಕೆಲವೇ ಗಂಟೆಗಳಲ್ಲಿ ಕ್ಯಾಶ್​ ರಿಚ್​ ಕ್ರಿಕೆಟ್​ ಲೀಗ್​ ಐಪಿಎಲ್​ಗೆ(IPL 2023) ಚಾಲನೆ ದೊರೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​(Chennai Super Kings) ಮತ್ತು ಗುಜರಾತ್​ ಟೈಟಾನ್ಸ್(Gujarat Titans)​ ಮುಖಾಮುಖಿಯಾಗಲು ಸಜ್ಜಾಗಿದೆ. ಆದರೆ ಇದೀಗ ಚೆನ್ನೈ ತಂಡಕ್ಕೆ ಮತ್ತು ತಂಡದ ಅಭಿಮಾನಿಗಳಿಗೆ ಆಘಾತ ಎದುರಾಗಿದೆ. ಎಡ ಮೊಣಕಾಲಿನ ಗಾಯಕ್ಕೆ ತುತ್ತಾಗಿರುವ ಧೋನಿ ಅವರು ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಚೆನ್ನೈಯ ಚೆಪಾಕ್​ ಕ್ರಿಕೆಟ್​ ಮೈದಾನದಲ್ಲಿ ಅಭ್ಯಾಸ ನಡೆಸುವ ವೇಳೆ ಧೋನಿ ಅವರ ಎಡ ಮೊಣಕಾಲಿಗೆ ಗಾಯವಾಗಿದೆ. ಹೀಗಾಗಿ ಅವರು ಗುರುವಾರ ತಂಡದ ಆಟಗಾರರೊಂದಿಗೆ ಅಭ್ಯಾಸ ನಡೆಸಿಲ್ಲ. ಹೀಗಾಗಿ ಅವರು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಅನುಮಾನ ಮೂಡಿದೆ.

16ನೇ ಆವೃತ್ತಿಯ ಈ ಐಪಿಎಲ್​ಗೆ ಈಗಾಗಲೇ ಹಲವು ಆಟಗಾರರು ಗಾಯದ ಸಮಸ್ಯೆಯಿಂದ ಅಲಭ್ಯರಾಗಿದ್ದಾರೆ. ಇದೇ ಕಾರಣಕ್ಕೆ ಈ ಬಾರಿಯ ಐಪಿಎಲ್​ ಟೂರ್ನಿಯನ್ನು ಇಂಜುರಿ ಟೂರ್ನಿ ಎಂದು ಕರೆಯಲಾಗುತ್ತಿದೆ. ಇದೀಗ ಧೋನಿ ಕೂಡ ಗಾಯಕ್ಕೆ ತುತ್ತಾಗಿರುವುದು ಅವರ ಅಭಿಮಾನಿಗಳಿಗೆ ಭಾರಿ ಚಿಂತೆ ಉಂಟುಮಾಡಿದೆ.

ಧೋನಿ ಅವರು ಮೊದಲ ಪಂದ್ಯಕ್ಕೆ ಅಲಭ್ಯರಾಗುವ ಸುಳಿವನ್ನು ಚೆನ್ನೈ ಸೂಪರ್​ ಕಿಂಗ್ಸ್ ತಂಡ ಸಿಇಒ ನೀಡಿದ್ದಾರೆ. ಆದರೆ ಅವರ ಹೇಳಿಕೆ ಒಂದು ರೀತಿ ಗೊಂದಲದಿಂದ ಕೂಡಿದೆ. ಆರಂಭದಲ್ಲಿ “ನನಗೆ ತಿಳಿದಿರುವಂತೆ ಧೋನಿ ಶೇ 100 ರಷ್ಟು ಆಡುತ್ತಾರೆ. ಬೇರೆ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ” ಎಂದು ಹೇಳಿದರು. ಆ ಬಳಿಕ ಒಂದು ವೇಳೆ ಧೋನಿ ಆಡದಿದ್ದರೆ, ಡೆವೊನ್ ಕಾನ್ವೇ ಅಥವಾ ಅಂಬಾಟಿ ರಾಯುಡು ವಿಕೆಟ್ ಕೀಪಿಂಗ್ ಮಾಡಬಹುದು. ಟೀಮ್​ನಲ್ಲಿ ಧೋನಿ ಬಿಟ್ಟರೆ ಇವರಿಬ್ಬರು ಕೀಪಿಂಗ್​ ಸಾಮರ್ಥ್ಯ ಹೊಂದಿದ್ದಾರೆ” ಎಂದರು. ಒಟ್ಟಾರೆ ಇವರ ಈ ಹೇಳಿಕೆ ಗಮನಿಸುವಾಗ ಧೋನಿ ಆಡುವುದು ಅನುಮಾನ ಎಂಬಂತಿದೆ.

ಇದನ್ನೂ ಓದಿ IPL 2023: ಧೋನಿ ವಿಶ್ವದ ಗ್ರೇಟ್​ ಫಿನಿಶರ್; ರಿಯಾನ್ ಪರಾಗ್

ಇತ್ತೀಚೆಗೆ ಸಿಎಸ್​ಕೆ ತನ್ನ ಟ್ವಿಟರ್​ನಲ್ಲಿ ಧೋನಿ ಅಭ್ಯಾಸಕ್ಕೆ ಮೈದಾನಕ್ಕೆ ಬರುತ್ತಿರುವ ವಿಡಿಯೊ ಹಂಚಿಕೊಂಡಿತ್ತು.​ ಇದು ಕೆಲವೇ ಗಂಟೆಯಲ್ಲಿ ವೈರಲ್​ ಆದದ್ದಲ್ಲದೇ, ಮೈದಾನಕ್ಕಿಳಿಯುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟುವಂತಿತ್ತು. ಈ ಬಾರಿಯ ಐಪಿಎಲ್​ ಬಳಿಕ ಧೋನಿ ಅವರು ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗಳು ಜೋರಾಗಿ ಹರಿದಾಡುತ್ತಿದೆ. ಅವರ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರನ ಆಟವನ್ನು ಕೊನೆಯಾ ಬಾರಿ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ ಈ ಮಧ್ಯೆ ಧೋನಿ ಅವರಿಗೆ ಮೊಣಕಾಲಿನ ಗಾಯವಾಗಿರುವುದು ಅವರ ಅಭಿಮಾನಿಗಳಿಗೆ ಆತಂಕ ಉಂಟುಮಾಡಿದೆ. ಒಂದೊಮ್ಮೆ ಧೋನಿ ಅವರು ಮೊದಲ ಪಂದ್ಯದಿಂದ ಹೊರಗುಳಿದರೆ ಬೆನ್​ ಸ್ಟೋಕ್ಸ್​ ಅವರು ತಂಡದ ನಾಯಕತ್ವ ನಿರ್ವಹಿಸುವ ಸಾಧ್ಯತೆ ಇದೆ.

Continue Reading

ಕ್ರಿಕೆಟ್

IPL 2023: ಧೋನಿ ವಿಶ್ವದ ಗ್ರೇಟ್​ ಫಿನಿಶರ್; ರಿಯಾನ್ ಪರಾಗ್

16ನೇ ಆವೃತ್ತಿಯ ಐಪಿಎಲ್​ ಟೂರ್ನಿ ಶುಕ್ರವಾರ ಆರಂಭಗೊಳ್ಳಲಿದೆ. ಉದ್ಘಾಟನ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ಸಾರಥ್ಯದ ಗುಜರಾತ್​ ಟೈಟಾನ್ಸ್​ ಮತ್ತು ಧೋನಿ ನಾಯಕತ್ವದ ಚೆನ್ನೈ ಸೂಪರ್​ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

VISTARANEWS.COM


on

Edited by

IPL 2023 Dhoni Worlds Greatest Finisher Ryan Parag
Koo

​ಅಹಮದಾಬಾದ್​: ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರಂತೆ ಫಿನಿಶರ್​ ಪಾತ್ರವನ್ನು ಯಾರೂ ನಿರ್ವಹಿಸಲು ಸಾಧ್ಯವಿಲ್ಲ ಎಂದು ರಾಜಸ್ಥಾನ್​ ರಾಯಲ್ಸ್​ ತಂಡದ ಆಲ್​ರೌಂಡರ್​ ರಿಯಾನ್ ಪರಾಗ್(riyan parag)​ ಹೇಳಿದ್ದಾರೆ.

16ನೇ ಆವೃತ್ತಿಯ ಐಪಿಎಲ್​ ಟೂರ್ನಿ ಶುಕ್ರವಾರ ಆರಂಭಗೊಳ್ಳಲಿದೆ. ಉದ್ಘಾಟನ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ಸಾರಥ್ಯದ ಗುಜರಾತ್​ ಟೈಟಾನ್ಸ್​ ಮತ್ತು ಧೋನಿ ನಾಯಕತ್ವದ ಚೆನ್ನೈ ಸೂಪರ್​ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ನಡೆಸಿದ ಸಂದರ್ಶನವೊಂದರಲ್ಲಿ ಮಾತನಾಡಿದ ಧೋನಿ ಅವರ ಅಪ್ಪಟ ಅಭಿಮಾನಿಯಾಗಿರುವ ರಿಯಾನ್​ ಪರಾಗ್​, ನಾನು ಕೂಡ ಧೋನಿಯಂತೆ ಫಿನಿಶರ್​ ರೋಲ್ ನಿರ್ವಹಿಸಲು ಬಯಸುತ್ತಿದ್ದೇನೆ ಆದರೆ ಅವರಂತೆ ಗ್ರೇಟ್​ ಫಿನಿಶರ್ ಆಗಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ IPL 2023: ಬಹುನಿರೀಕ್ಷಿತ ಐಪಿಎಲ್​ ಟೂರ್ನಿಗೆ ಕ್ಷಣಗಣನೆ; ಈ ಬಾರಿ ಟೂರ್ನಿಯ ಮಾದರಿ ಹೇಗಿದೆ?

“ಕಳೆದ ಮೂರು ವರ್ಷಗಳಿಂದ ನಾನು ಫಿನಿಶಿಂಗ್ ಪಾತ್ರ ನಿಭಾಯಿಸುತ್ತಿದ್ದೇನೆ. ಫಿನಿಶಿಂಗ್​ ವಿಚಾರಕ್ಕೆ ಬಂದಾಗ ನನ್ನ ನೆನಪಿಗೆ ಬರುವ ಒಂದೇ ಒಂದು ಹೆಸರು ಎಂದರೆ ಅದು ಧೋನಿ ಸರ್​, ಈ ಹಿಂದೆಯೂ ಇದನ್ನೇ ಹೇಳಿದ್ದೆ. ಧೋನಿ ಹೊರತುಪಡಿಸಿ ಫಿನಿಶಿಂಗ್​ ಕಲೆಯನ್ನು ಬೇರೆ ಯಾರೂ ಉತ್ತಮವಾಗಿ ನಿರ್ವಹಿಸಲು ಸಾಧ್ಯವಿಲ್ಲ. ನಾನು ಕೂಡ ಅವರಂತೆ ಆಗಲು ಪ್ರಯತ್ನಿಸುತ್ತಿದ್ದೇನೆ” ಎಂದು ಪರಾಗ್​ ಅಭಿಪ್ರಾಯಪಟ್ಟರು.

ತಮ್ಮ ಆಟದ ಸಾಮರ್ಥ್ಯದ ಬಗ್ಗೆ ಮಾತನಾಡಿದ ಅವರು, “ಈ ಋತುವಿನ ದೇಶಿಯಾ ಕ್ರಿಕೆಟ್​ ಟೂರ್ನಿಗಳಲ್ಲಿ ನಾನು ಬ್ಯಾಟಿಂಗ್​ ಜತೆಗೆ ಸಾಕಷ್ಟು ಬೌಲಿಂಗ್​ ಮಾಡಿದ್ದೇನೆ. ಇದರಿಂದ ಬೌಲಿಂಗ್​ನಲ್ಲಿಯೂ ದೊಡ್ಡ ಮಟ್ಟದ ಸುಧಾರಣೆಯಾಗಿದೆ. ಆದ್ದರಿಂದ ನಾನು ಈ ಬಾರಿ ಆಲ್​ರೌಂಡರ್​ ಪ್ರದರ್ಶ ತೋರಲಿದ್ದೇನೆ” ಎಂದು ತಿಳಿಸಿದರು.

2018ರ ಅಂಡರ್​-19 ವಿಶ್ವಕಪ್ ವಿಜೇತ ತಂಡದಲ್ಲಿ ಸ್ಥಾನ ಪಡೆದಿದ್ದ ಪರಾಗ್ ಅವರು 2022-23ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಐದನೇ ಅತಿ ಹೆಚ್ಚು ರನ್​ಗಳಿಸಿದ್ದ ಆಟಗಾರರಾಗಿದ್ದರು. 69 ಸರಾಸರಿಯೊಂದಿಗೆ 552 ರನ್​ಗಳನ್ನು ಗಳಿಸಿದ್ದ ಪರಾಗ್​ ಮೂರು ಶತಕ ಮತ್ತು ಒಂದು ಅರ್ಧಶತಕ ಸಿಡಿಸಿದ್ದರು. ಸೈಯದ್ ಮುಷ್ತಾಕ್ ಅಲಿ ಟ20 ಟ್ರೋಫಿಯಲ್ಲಿ ಎರಡು ಅರ್ಧಶತಕಗಳೊಂದಿಗೆ 253 ರನ್ ಗಳಿಸಿದ್ದರು. ಇದೀಗ 16ನೇ ಆವೃತ್ತಿಯ ಐಪಿಎಲ್​ನಲ್ಲಿ ಮಿಂಚಲು ಕಾತರರಾಗಿದ್ದಾರೆ.

ಇದನ್ನೂ ಓದಿ IPL 2023: ಗುರು ಶಿಷ್ಯರ ಕಾದಾಟ; ಯಾರಿಗೆ ಒಲಿಯಲಿದೆ ಗೆಲುವಿನ ಶುಭಾರಂಭ

ಐಪಿಎಲ್​ಗೆ ವಿದಾಯ ಹೇಳಲಿದ್ದಾರಾ ಧೋನಿ?

ಈ ಬಾರಿಯ ಐಪಿಎಲ್​ ಬಳಿಕ ಧೋನಿ(ms dhoni) ಅವರು ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡಲಾರಂಭಿಸಿದೆ. ಆದರೆ ಈ ಬಗ್ಗೆ ಧೋನಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಸದ್ಯಕ್ಕೆ ಧೋನಿ ಅವರು ಹಲವು ದಾಖಲೆಗಳನ್ನು ನಿರ್ಮಿಸುತ್ತ ಚಿತ್ತ ನೆಟ್ಟಿದ್ದಾರೆ.

5000 ರನ್ ಸನಿಹದಲ್ಲಿ ಧೋನಿ

ಕೂಲ್​ ಕ್ಯಾಪ್ಟನ್​ ಖ್ಯಾತಿಯ ಮಹೇಂದ್ರ ಸಿಂಗ್​ ಧೋನಿ ಅವರು ಈ ವರೆಗೆ 234 ಪಂದ್ಯಗಳಿಂದ 4978 ರನ್ ಗಳಿಸಿದ್ದಾರೆ. ಈ ಟೂರ್ನಿಯಲ್ಲಿ ಅವರು 22 ರನ್ ಗಳಿಸಿದರೆ 5 ಸಾವಿರ ರನ್ ಪೂರೈಸಿದ ಮೊದಲ ವಿಕೆಟ್ ಕೀಪರ್ ಎಂಬ ದಾಖಲೆ ಬರೆಯಲಿದ್ದಾರೆ. ಇದರ ಜತೆಗೆ 185 ರನ್ ಬಾರಿಸಿದರೆ ಆರ್‌ಸಿಬಿ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ (5162) ಅವರನ್ನು ಹಿಂದಿಕ್ಕಲಿದ್ದಾರೆ. ಆ ಮೂಲಕ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ 6ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

ಸಿಕ್ಸರ್ ದಾಖಲೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ದಾಖಲೆ ಯುನಿವರ್ಸ್​ ಬಾಸ್​ ಖ್ಯಾತಿಯ ವಿಂಡೀಸ್​ ಕ್ರಿಕೆಟಿಗ ಕ್ರಿಸ್​ ಗೇಲ್ ಹೆಸರಿನಲ್ಲಿದೆ ಅವರು 357 ಸಿಕ್ಸರ್​ಗಳನ್ನು ಬಾರಿಸಿ ಅಗ್ರ ಸ್ಥಾನದಲ್ಲಿದ್ದಾರೆ. ಸದ್ಯ ಧೋನಿ 229 ಸಿಕ್ಸರ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಈ ಬಾರಿ ಅವರು 23 ಸಿಕ್ಸ್ ಸಿಡಿಸಿದರೆ 250 ಸಿಕ್ಸರ್‌ ಕ್ಲಬ್​ಗೆ ಸೇರುವ ಜತೆಗೆ ಎಬಿಡಿ ಅವರ ದಾಖಲೆಯನ್ನು ಮುರಿಯಲಿದ್ದಾರೆ ಎಬಿಡಿ 251 ಸಿಕ್ಸರ್​ ಬಾರಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 240 ಸಿಕ್ಸರ್ ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ ಅವರಿಗೂ ಎಬಿಡಿ ಅವರ ದಾಖಲೆ ಮುರಿಯುವ ಅವಕಾಶವಿದೆ.

250ನೇ ಐಪಿಎಲ್‌ ಪಂದ್ಯ

ಐಪಿಎಲ್​ನ ಇದುವರೆಗಿನ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯವನ್ನಾಡಿದ ದಾಖಲೆ ಧೋನಿ ಹೆಸರಿನಲ್ಲಿದೆ. ಸದ್ಯ ಅವರು 234 ಪಂದ್ಯಗಳನ್ನಾಡಿದ್ದಾರೆ. ಈ ಬಾರಿ ಅವರು 16 ಪಂದ್ಯಗಳಲ್ಲಿ ಆಡಿದರೆ 250 ಪಂದ್ಯಗಳನ್ನು ಪೂರೈಸಿದ ಮೊದಲ ಆಟಗಾರ ಎಂಬ ಮೈಲುಗಲ್ಲು ಸ್ಥಾಪಿಸಲಿದ್ದಾರೆ. ಆರ್​ಸಿಬಿ ಆಟಗಾರ ದಿನೇಶ್​ ಕಾರ್ತಿಕ್​ 229 ಪಂದ್ಯಗಳನ್ನಾಡಿ ಈ ಸಾಧನೆ ಮಾಡಿದವರ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಈ ಬಾರಿಯೂ ಅವರು ಆಡುತ್ತಿರುವ ಕಾರಣ ಪಂದ್ಯಗಳ ಸಂಖ್ಯೆ ಇನ್ನೂ ಹೆಚ್ಚಾಗಲಿದೆ.

Continue Reading

ಕ್ರಿಕೆಟ್

IPL 2023: ಬಹುನಿರೀಕ್ಷಿತ ಐಪಿಎಲ್​ ಟೂರ್ನಿಗೆ ಕ್ಷಣಗಣನೆ; ಈ ಬಾರಿ ಟೂರ್ನಿಯ ಮಾದರಿ ಹೇಗಿದೆ?

ಇಂದು(ಶುಕ್ರವಾರ ಮಾರ್ಚ್​ 31) ನಡೆಯುವ ಐಪಿಎಲ್​ನ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Edited by

IPL 2023 Countdown to the much awaited IPL tournament How is the format of the tournament this time
Koo

ಅಹಮದಾಬಾದ್​: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್​ ಲೀಗ್​ ಐಪಿಎಲ್(IPL 2023)​ 16ನೇ ಆವೃತ್ತಿಗೆ ಇಂದು(ಶುಕ್ರವಾರ ಮಾರ್ಚ್​ 31) ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಅದ್ಧೂರಿಯಾಗಿ ಚಾಲನೆ ದೊರೆಯಲಿದೆ. ಮುಂದಿನ 2 ತಿಂಗಳು ದೇಶದಲ್ಲಿ ಕ್ರಿಕೆಟ್‌ ಹಬ್ಬದ ವಾತಾವರಣ ಇರಲಿದೆ. ಈ ಬಾರಿಯ ಟೂರ್ನಿ ಕೆಲ ನೂತನ ನಿಯಮಗಳಿಂದ ಸುದ್ದಿಯಾಗಿದೆ. ಈ ನಿಯಗಳು ಯಾವುದು ಮತ್ತು ಈ ಬಾರಿಯ ವಿಶೇಷತೆಗಳೇನು ಎಂಬ ಸಂಪೂರ್ಣ ಮಾಹಿತಿ ಇಂತಿದೆ.

ಪಂದ್ಯಗಳ ಮಾದರಿ

ಈ ಬಾರಿಯ ಟೂರ್ನಿಯಲ್ಲಿ ಹತ್ತು ತಂಡಗಳನ್ನು ತಲಾ 5 ತಂಡಗಳ ಎರಡು ಗುಂಪುಗಳಾಗಿ ಬಿಂಗಡಿಸಲಾಗಿದೆ. ಗುಂಪು ಹಂತದಲ್ಲಿ ತಂಡವೊಂದು ತನ್ನದೇ ಗುಂಪಿನ ಉಳಿದ 4 ತಂಡಗಳ ವಿರುದ್ಧ ತಲಾ 2 ಪಂದ್ಯಗಳನ್ನು ಆಡಬೇಕು. ಆಗ ತಂಡವೊಂದು 8 ಪಂದ್ಯಗಳನ್ನು ಆಡಿದಂತಾಗುತ್ತದೆ. ಬಳಿಕ ಎರಡೂ ಗುಂಪುಗಳ ತಂಡಗಳ ನಡುವೆ ಪಂದ್ಯಗಳು ಆರಂಭವಾಗುತ್ತವೆ. ಅಂದರೆ ಮೊದಲ ಗುಂಪಿನ ಒಂದು ತಂಡ, ಇನ್ನೊಂದು ಗುಂಪಿನ ತಂಡವೊಂದರ ವಿರುದ್ಧ ತಲಾ 2 ಪಂದ್ಯಗಳನ್ನು ಆಡುತ್ತದೆ. ಇತರ ನಾಲ್ಕು ತಂಡಗಳ ವಿರುದ್ಧ ತಲಾ 1 ಪಂದ್ಯ ಆಡಲಾಗುತ್ತದೆ. ಇದೇ ಮಾದರಿ ಇತರ ತಂಡಗಳಿಗೂ ಈ ಅನ್ವಯವಾಗುತ್ತದೆ. ಅಲ್ಲಿಗೆ ತಂಡವೊಂದು ಲೀಗ್‌ ಹಂತದಲ್ಲಿ 14 ಪಂದ್ಯಗಳನ್ನಾಡಿದಂತಾಗುತ್ತದೆ.

ಇದನ್ನೂ ಓದಿ IPL 203 : ಐಪಿಎಲ್​ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ

ಇಂಪ್ಯಾಕ್ಟ್ ಪ್ಲೇಯರ್‌

ಆಸ್ಟ್ರೇಲಿಯದ ಪ್ರತಿಷ್ಠಿತ ಬಿಗ್‌ಬಾಶ್‌ ಟಿ20 ಲೀಗ್‌ನಲ್ಲಿ ಚಾಲ್ತಿಯಲ್ಲಿರುವ ಇಂಪ್ಯಾಕ್ಟ್ ಪ್ಲೇಯರ್‌ ನಿಯಮವನ್ನು ಈ ಬಾರಿ ಐಪಿಎಲ್​ನಲ್ಲಿಯೂ ಪರಿಚಯಿಸಲಾಗಿದೆ. ಈ ನಿಯಮದ ಪ್ರಮಾರ ತಂಡವೊಂದು ಆಡುತ್ತಿರುವಾಗ ಪರಿಸ್ಥಿತಿಗೆ ಅನುಗುಣವಾಗಿ ಒಬ್ಬ ಬದಲಿ ಆಟಗಾರನನ್ನು ಕಣಕ್ಕಿಳಿಸಬಹುದು. ಪ್ಲೇಯಿಂಗ್​ ಇಲೆವನ್​ ಬಳಗದಿಂದ ಹೊರಗಿರುವ ಒಬ್ಬ ಆಟಗಾರನನ್ನು ತಂಡಕ್ಕೆ ಆಡುವ ಬಳಗಕ್ಕೆ ಸೇರಿಸಿಕೊಳ್ಳಬಹುದು. ಇನಿಂಗ್ಸ್‌ ಆರಂಭಕ್ಕೂ ಮುನ್ನ, ಒಂದು ಓವರ್‌ ಮುಗಿದ ಮೇಲೆ, ವಿಕೆಟ್‌ ಬಿದ್ದಾಗ, ಓವರ್‌ಗಳ ನಡುವಿನ ವಿರಾಮದಲ್ಲಿ ಈ ನಿಯಮವನ್ನು ಬಳಸಬಹುದು. ಈ ನಿಯಮದನ್ವಯ ಒಬ್ಬ ಬದಲಿ ಆಟಗಾರನನ್ನು ಮಾತ್ರ ಬದಲಿಸಲು ಅವಕಾಶವಿರಲಿದೆ.

ಇದನ್ನೂ ಓದಿ IPL 2023: ಅಹಮದಾಬಾದ್​ನಲ್ಲಿ ಭಾರಿ ಮಳೆ; ಚೆನ್ನೈ-ಗುಜರಾತ್​ ಪಂದ್ಯ ಅನುಮಾನ

ವೈಡ್‌, ನೋಬಾಲ್‌ಗ‌ಳೂ ಡಿಆರ್‌ಎಸ್‌

ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಜಾರಿಗೆ ತರಲಾಗಿದ್ದ ವೈಡ್‌, ನೋಬಾಲ್‌ ಡಿಆರ್‌ಎಸ್‌ ನಿಯಮವನ್ನು ಈ ಬಾರಿಯ ಐಪಿಎಲ್​ನಲ್ಲಿಯೂ ಅಳವಡಿಸಲಾಗಿದೆ. ಅಂಪೈರ್​ಗಳು ನೀಡಿದ ವೈಡ್‌, ನೋಬಾಲ್‌ ಕರೆಗಳನ್ನು ಡಿಆರ್‌ಎಸ್‌ ಮೂಲಕ ಈಗ ಆಟಗಾರರಿಗೆ ಪ್ರಶ್ನಿಸಬಹುದಾಗಿದೆ.

ಈ ಹಿಂದೆ ಟಾಸ್​ಗೂ ಮುನ್ನ ಪ್ಲೇಯಿಂಗ್​ ಇಲೆವೆನ್​ ಪಟ್ಟಿ ಸಲ್ಲಿಸಬೇಕಿತ್ತು. ಆದರೆ ಇದೀಗ ತಂಡಗಳ ನಾಯಕರು ಟಾಸ್‌ ಹಾರಿಸುವಾಗ 11 ಆಟಗಾರರ ಅಂತಿಮಪಟ್ಟಿಯನ್ನು ನೀಡಬೇಕಾಗಿಲ್ಲ. ಟಾಸ್‌ ಫ‌ಲಿತಾಂಶ ನೋಡಿಕೊಂಡು ಬಳಿಕ 11ರ ಪಟ್ಟಿಯನ್ನು ಪ್ರಕಟಿಸಬಹುದು.

ಗುವಾಹಟಿಯಲ್ಲಿ 2 ಪಂದ್ಯ

ಫುಟ್ಬಾಲ್​ ಕ್ರೀಡೆಯನ್ನು ಹೆಚ್ಚಾಗಿ ನೆಚ್ಚಿಕೊಂಡಿರುವ ಅಸ್ಸಾಂನ ಗುವಾಹಟಿಯಲ್ಲಿ ಈ ಬಾರಿ ಐಪಿಎಲ್ ಪಂದ್ಯಗಳು​ ನಡೆಯಲಿವೆ. ಈ ಮೂಲಕ ಇಲ್ಲಿನ ಫುಟ್ಬಾಲ್​ ಅಭಿಮಾನಿಗಳಿಗೆ ಕ್ರಿಕೆಟ್‌ನಲ್ಲೂ ಆಸಕ್ತಿ ಹುಟ್ಟಿಸಲು ಬಿಸಿಸಿಐ ಮುಂದಾಗಿದೆ. ಗುವಾಹಟಿಯಲ್ಲಿ ಈ ಬಾರಿ ಎರಡು ಪಂದ್ಯಗಳು ನಡೆಯಲಿದೆ. ರಾಜಸ್ಥಾನ ರಾಯಲ್ಸ್‌ನ ಎರಡು ತವರಿನ ಪಂದ್ಯಗಳು ಅಸ್ಸಾಂ ಕ್ರಿಕೆಟ್‌ ಅಸೋಸಿಯೇಶನ್‌ ಕ್ರೀಡಾಂಗಣದಲ್ಲಿ ನಡೆಯಲಿದೆ.

Continue Reading

ಕ್ರಿಕೆಟ್

IPL 2023: ಅಹಮದಾಬಾದ್​ನಲ್ಲಿ ಭಾರಿ ಮಳೆ; ಚೆನ್ನೈ-ಗುಜರಾತ್​ ಪಂದ್ಯ ಅನುಮಾನ

ಅಹಮಾದಾಬಾದ್​ನಲ್ಲಿ ಭಾರಿ ಮಳೆಯಾಗುತ್ತಿದ್ದು ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್(IPL 2023)​ ಶುಕ್ರವಾರದ ಉದ್ಘಾಟನಾ ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ.

VISTARANEWS.COM


on

Edited by

IPL 2023 Heavy rains in Ahmedabad Chennai Gujarat match in doubt
Koo

ಅಹಮಾದಾಬಾದ್​: ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್(IPL 2023)​ ಇಂದಿನಿಂದ ಆರಂಭಗೊಳ್ಳಲಿದೆ. ಕೋವಿಡ್‌ ನಂತರ ಮೊದಲ ಬಾರಿಗೆ ಐಪಿಎಲ್‌ ಉದ್ಘಾಟನಾ ಸಮಾರಂಭ ನಡೆಸಲು ಬಿಸಿಸಿಐ ಎಲ್ಲ ಸಿದ್ಧತೆ ಪೂರ್ಣಗೊಳಿಸಿದೆ. ಆದರೆ ಇದೀಗ ಈ ಸಮಾರಂಭ ಮತ್ತು ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ. ಅಹಮದಾಬಾದ್​ನಲ್ಲಿ ಭಾರಿ ಮಳೆಯಾಗುತ್ತಿದ್ದು ಶುಕ್ರವಾರವು ಮಳೆ ಅಬ್ಬರ ಇರಲಿದೆ ಎಂದು ತಿಳಿದುಬಂದಿದೆ.

ಗುರುವಾರ ಗುಜರಾತ್ ಮತ್ತು ಚೆನ್ನೈ ತಂಡದ ಆಟಗಾರರು ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವಾಗ ದಿಢೀರ್ ಮಳೆ ಸುರಿದಿದೆ. ನಂತರ ಆಟಗಾರರು ಮಳೆಗೆ ಒದ್ದೆಯಾಗಿ ಡ್ರೆಸ್ಸಿಂಗ್ ರೂಮ್​ಗೆ ತೆರಳುತ್ತಿರುವ ಫೋಟೊ ಇದೀಗ ವೈರಲ್​ ಆಗಿದೆ. ಗುಜರಾತ್​ ತಂಡದ ಕೋಚ್​ ಆಶೀಸ್​ ನೆಹ್ರಾ ಅವರು ಮಳೆಗೆ ಒದ್ದೆಯಾಗುತ್ತಿರುವ ಫೋಟೊವನ್ನು ಗುಜರಾತ್​ ಟೈಟಾನ್ಸ್​ ತಂಡ ಟ್ವಿಟರ್​ನಲ್ಲಿ ಹಂಚಿಕೊಂಡಿದೆ.

ಇದನ್ನೂ ಓದಿ IPL 2023 : ಚೆನ್ನೈ ಸೂಪರ್​ ಕಿಂಗ್ಸ್​ ಬಳಗ ಸೇರಿದ ರಾಜಸ್ಥಾನ್​ ರಾಯಲ್ಸ್​ನ ಮಾಜಿ ಬೌಲರ್​

ನರೇಂದ್ರ ಮೋದಿ ಕ್ರೀಡಾಂಗಣ ಮೊದಲ ಪಂದ್ಯಕ್ಕೆ ಸಂಪೂರ್ಣ ಸಜ್ಜಾಗಿ ನಿಂತಿದೆ. ಆದರೆ ಅಹಮದಾಬಾದ್​ನಲ್ಲಿ ಗುರುವಾರ ಸಂಜೆ ಭಾರಿ ಮಳೆ ಆಗಿದ್ದು ಇದೀಗ ಮೊದಲ ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ. ಹವಾಮಾನ ಇಲಾಖೆ ಶುಕ್ರವಾರವೂ ಮಳೆಯ ಮುನ್ಸೂಚನೆ ನೀಡಿದೆ. ಹೀಗಾಗಿ ಅಭಿಮಾನಿಗಳಿಗೆ ಚಿಂತೆಗೀಡು ಮಾಡಿದೆ.

ಸಂಜೆ 7.30ಕ್ಕೆ ಉದ್ಘಾಟನಾ ಪಂದ್ಯ ನಡೆಯುವ ಒಂದು ಗಂಟೆ ಮೊದಲು ಸಿನೆಮಾ ತಾರೆಗಳಾದ ತಮನ್ನಾ ಭಾಟಿಯಾ ಮತ್ತು ರಶ್ಮಿಕಾ ಮಂದಣ್ಣ ನೃತ್ಯ ಕಾರ್ಯಕ್ರಮದ ಮೂಲಕ ಈ ಟೂರ್ನಿಗೆ ಅದ್ಧೂರಿ ಚಾಲನೆ ನೀಡಲಾಗುವುದು. ಇದೇ ವೇಳೆ ಕ್ರಿಕೆಟ್‌ನ ಮಾಜಿ ದಿಗ್ಗಜರಾದ ಸಚಿನ್​ ತೆಂಡೂಲ್ಕರ್​, ಸುನೀಲ್ ಗವಾಸ್ಕರ್​, ರವಿಶಾಸ್ತ್ರಿ ಸೇರಿ ಹಲವು ಕ್ರಿಕೆಟಿಗರು ಈ ಸಮಾರಂಭದ ಭಾಗವಾಗಲಿದ್ದಾರೆ. ಆದರೆ ಮಳೆಯಾರ ಇದಕ್ಕೆ ಅಡ್ಡಿ ಪಡಿಸಬಾರದು.

Continue Reading
Advertisement
Dakshina Kannada District 1st PUC result 2023 declared; here how to check
ಶಿಕ್ಷಣ7 mins ago

1st PUC Result 2023 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

Producer K Manju from Padmanabha Nagar assembly constituency Entry into the political arena
ರಾಜಕೀಯ9 mins ago

K. Manju: ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ನಿರ್ಮಾಪಕ ಕೆ ಮಂಜು? ರಾಜಕೀಯ ಅಖಾಡಕ್ಕೆ ಎಂಟ್ರಿ?

is State is Impotent? why did stop hate speech, asks supreme Court
ಕೋರ್ಟ್12 mins ago

Supreme Court: ದ್ವೇಷ ಭಾಷಣ ತಡೆಗೆ ಸರ್ಕಾರಕ್ಕೆ ಶಕ್ತಿ ಇಲ್ಲವೇ?: ಕೇಂದ್ರ ವಿರುದ್ಧ ಸುಪ್ರೀಂ ಕೋರ್ಟ್ ಗರಂ

karnataka election AT Ramaswamy and NY Gopalakrishna resigns
ಕರ್ನಾಟಕ21 mins ago

Karnataka Election: ಜೆಡಿಎಸ್‌, ಬಿಜೆಪಿಯ ತಲಾ ಒಂದು ವಿಕೆಟ್‌ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ

T Chandrasekhar Former city council president Hiriyur
ಕರ್ನಾಟಕ32 mins ago

Hiriyur News: ಕಾಂಗ್ರೆಸ್ ಸೇರಿದ ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್; ಬಿಜೆಪಿಗೆ ಆಘಾತ

MLA scrapes off the asphalt Of Road In Uttar Pradesh Video Viral
ದೇಶ33 mins ago

Viral Video: ರಸ್ತೆ ಅಂತಾರಾ ಇದಕ್ಕೆ?-ಆಕ್ರೋಶದಿಂದ ಕೂಗುತ್ತ, ತಮ್ಮ ಬೂಟು ಕಾಲಿನಿಂದ ಡಾಂಬರು ಕೆದರಿದ ಶಾಸಕ!

IPL 2023: Dhoni injured; Doubt for the first game
ಕ್ರಿಕೆಟ್35 mins ago

IPL 2023: ಧೋನಿಗೆ ಗಾಯ; ಮೊದಲ ಪಂದ್ಯಕ್ಕೆ ಅನುಮಾನ; ಸ್ಟೋಕ್ಸ್​ ನಾಯಕತ್ವ ಸಾಧ್ಯತೆ

WinLife Trust shivamogga
ಆರೋಗ್ಯ38 mins ago

Shivamogga News: ವಿನ್‌ಲೈಫ್ ಟ್ರಸ್ಟ್ ವತಿಯಿಂದ ಏ. 2ರಂದು ಆರೋಗ್ಯ ಉತ್ಸವ ಜನ ಜಾಗೃತಿ ಸಮಾವೇಶ

NY Gopalakrishna resigns
ಉತ್ತರ ಕನ್ನಡ38 mins ago

Karnataka Elections : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್‌ವೈ ಗೋಪಾಲಕೃಷ್ಣ; ಕಾಂಗ್ರೆಸ್‌ ಸೇರಲ್ಲ, ಚುನಾವಣೆಯಲ್ಲಿ ಸ್ಪರ್ಧಿಸಲ್ಲ!

Question paper leak
ಕರ್ನಾಟಕ46 mins ago

SSLC Exam 2023: ಕಲಬುರಗಿಯಲ್ಲಿ ಎಸ್ಎಸ್ಎಲ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ; ವಾಟ್ಸಾಪ್‌ನಲ್ಲಿ ಹರಿದಾಡಿದ ಕನ್ನಡ ಪೇಪರ್‌

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Sphoorti Salu
ಸುವಚನ9 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ2 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ20 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ1 day ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!