Site icon Vistara News

lPL Auction 2024: ಕೆಲವೇ ಗಂಟೆಯಲ್ಲಿ ಐಪಿಎಲ್​ ಬಿಡ್ಡಿಂಗ್​ ಆರಂಭ;​ ಇಲ್ಲಿದೆ ಪ್ರಮುಖ ಹೈಲೆಟ್ಸ್

IPL 2024 Auction

ದುಬೈ: ಐಪಿಎಲ್​ ಕ್ರಿಕೆಟ್​ ಪ್ರೇಮಿಗಳು ಕಾದು ಕುಳಿತಿರುವ 2024ನೇ ಸಾಲಿನ ಆಟಗಾರರ ಮಿನಿ ಹರಾಜು ಪ್ರಕ್ರಿಯೆ(IPL 2024 Auction)ಗೆ ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿದೆ. ದುಬೈನ(Dubai) ಕೋಕಾ-ಕೋಲಾ ಅರೆನಾದಲ್ಲಿ ಈ ಹರಾಜು ನಡೆಯಲಿದೆ.

1 ಗಂಟೆಗೆ ಆರಂಭ

ಹರಾಜು ಪ್ರಕ್ರಿಯೆ ಭಾರತೀಯ ಕಾಲಮಾನಕ್ಕೆ ತಕ್ಕಂತೆ ಮಧ್ಯಾಹ್ನ 1 ಗಂಟೆಗೆ ಪ್ರಾರಂಭಗೊಳ್ಳುತ್ತದೆ. ಪೂರ್ವ ನಿಗದಿಯಂತೆ ಇದು ಮಧ್ಯಾಹ್ನ 2:30ಕ್ಕೆ ನಡೆಯಬೇಕಿತ್ತು. ಆದರೆ ಬಿಸಿಸಿಐ ಇದನ್ನು ಭಾನುವಾರ ಬದಲಾವಣೆ ಮಾಡಿತ್ತು. ದುಬೈನಲ್ಲಿ ಬೆಳಗ್ಗೆ 11:30ಕ್ಕೆ ಪ್ರಾರಂಭವಾಗುತ್ತದೆ. ಹರಾಜಿನಲ್ಲಿ ಒಟ್ಟು 262.95 ಕೋಟಿ ರೂ. ಹಣದ ಮಿತಿಯಿದೆ.

ಸ್ಟಾರ್ ಸ್ಪೋರ್ಟ್ಸ್​ನಲ್ಲಿ ಪ್ರಸಾರ

ಐಪಿಎಲ್​ನ ನೇರ ಪ್ರಸಾರದ ಹಕ್ಕು ಪಡೆದಿರುವ ಸ್ಟಾರ್​ ಸ್ಪೋರ್ಟ್ಸ್​ನಲ್ಲಿ ಹರಾಜು ಪ್ರಕ್ರಿಯೆ ಪ್ರಸಾರವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ 2, ಸ್ಟಾರ್ ಸ್ಪೋರ್ಟ್ಸ್ 2 ಎಚ್‌ಡಿ, ಸ್ಟಾರ್ ಸ್ಪೋರ್ಟ್ಸ್ ಸೆಲೆಕ್ಟ್ 1, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ, ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ ಹಿಂದಿ, ಸ್ಟಾರ್ ಸ್ಪೋರ್ಟ್ಸ್ 3, ಸ್ಟಾರ್ ಸ್ಪೋರ್ಟ್ಸ್ ಫಸ್ಟ್, ಸ್ಟಾರ್ ಸ್ಪೋರ್ಟ್ಸ್ 1 ತಮಿಳು, ವೀಕ್ಷಕರು ಹರಾಜನ್ನು ಲೈವ್ ಆಗಿ ವೀಕ್ಷಿಸಬಹುದು. ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ ತಮಿಳು, ಸ್ಟಾರ್ ಸ್ಪೋರ್ಟ್ಸ್ 1 ತೆಲುಗು, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ ತೆಲುಗು, ಮತ್ತು ಸ್ಟಾರ್ ಸ್ಪೋರ್ಟ್ಸ್ 1 ಕನ್ನಡ. ಇವುಗಳಲ್ಲಿ ನೇರ ಪ್ರಸಾರ ಇರಲಿದೆ. ಲೈವ್ ಸ್ಟ್ರೀಮಿಂಗ್ ಜಿಯೋ ಸಿನೆಮಾ(JioCinema) ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಇದನ್ನೂ ಓದಿ IPL 2024 : ಐಪಿಎಲ್​ ಹರಾಜು ಬಗ್ಗೆ ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವು

ಒಟ್ಟು ಆಟಗಾರರೆಷ್ಟು?

ಎಲ್ಲ ಪ್ರಾಂಚೈಸಿಗಳು ಬಿಡ್ಡಿಂಗ್​ನಲ್ಲಿ ಆಟಗಾರರನ್ನು ಖರೀದಿಸಲು ಸಕಲ ಸಿದ್ಧತೆ ನಡೆಸಿವೆ. ಇದೀಗ ಐಪಿಎಲ್ ಮಂಡಳಿಯು ಹರಾಜಿಗೆ ಒಳಗಾಗಲಿರುವ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಿದೆ. ಒಟ್ಟು 333 ಮಂದಿ ಆಟಗಾರರು ಹರಾಜಿನ ಭಾಗವಾಗಲಿದ್ದಾರೆ. ಇದರಲ್ಲಿ 214 ಭಾರತೀಯರು ಮತ್ತು 119 ಮಂದಿ ವಿದೇಶಿ ಆಟಗಾರರು ಸೇರಿದ್ದಾರೆ. ಅಸೋಸಿಯೇಟ್ ದೇಶಗಳ ಇಬ್ಬರು ಆಟಗಾರರು ಅವಕಾಶ ಪಡೆದಿದ್ದಾರೆ.

ಒಟ್ಟು 333 ಆಟಗಾರರ ಪೈಕಿ ಕೇವಲ 23 ಆಟಗಾರರಿಗೆ ಮಾತ್ರ ಎರಡು ಕೋಟಿ ರೂ. ಮೂಲಬೆಲೆ ನಿಗದಿ ಮಾಡಲಾಗಿದೆ. ಆದರೆ ಇದರಲ್ಲಿ ಕೇವಲ ಮೂರು ಮಂದಿ ಮಾತ್ರ ಭಾರತೀಯ ಆಟಗಾರರು ಕಾಣಿಸಿಕೊಂಡಿದ್ದಾರೆ. ಅವರೆಂದರೆ, ಆರ್​ಸಿಬಿಯಿಂದ ಬಿಡುಗಡೆಯಾದ ಹರ್ಷಲ್ ಪಟೇಲ್, ಕೆಕೆಆರ್​ನಿಂದ ಬಿಡುಗಡೆಯಾದ ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್. ಕಳೆದ ಬಾರಿ ಹರಾಜಾಗದ ಆಸೀಸ್​ನ ಸ್ಟೀವನ್​ ಸ್ಮಿತ್ ಅವರು ಈ ಬಾರಿ 2 ಕೋಟಿ ರೂ. ಮೂಲಬೆಲೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಕರ್ನಾಟಕದ ಆಟಗಾರರು

ಮನೀಷ್ ಪಾಂಡೆ, ಜಗದೀಶ್ ಸುಚಿತ್​, ಶುಭಾಂಗ್​ ಹೆಗ್ಡೆ, ನಿಹಾಲ್​ ಉಲ್ಲಾಳ್​, ಬಿ.ಆರ್​ ಶರತ್​, ಮನ್ವಂತ್​ ಕುಮಾರ್​, ಎಲ್​.ಆರ್​ ಚೇತನ್​, ಕೆ.ಎಲ್​ ಶ್ರೀಜಿತ್​, ಎಂ. ವೆಂಕಟೇಶ್​, ಮೋನಿಶ್​ ರೆಡ್ಡಿ, ಅಭಿಲಾಷ್​ ಶೆಟ್ಟಿ ಹರಾಜಿನಲ್ಲಿ ಕಾಣಿಸಿಕೊಂಡ ಕರ್ನಾಟಕದ ಆಟಗಾರರು.

Exit mobile version