ದುಬೈ: ಆ್ಯಶಸ್ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಐಸಿಸಿ ನೂತನ ಟೆಸ್ಟ್ ಶ್ರೇಯಾಂಕ ಪಟ್ಟಿ(ICC Test Ranking) ಪ್ರಕಟಿಸಿದೆ. ಈ ಬಾರಿ ಹಲವು ಬದಲಾವಣೆಗಳು ಸಂಭವಿಸಿದೆ. ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮ(Rohit Sharma) ಒಂದು ಸ್ಥಾನ ಕುಸಿತ ಕಂಡು 10ನೇ ಸ್ಥಾನ ಪಡೆದಿದ್ದಾರೆ. ಕಳೆದ 5 ತಿಂಗಳಿನಿಂದ ಕ್ರಿಕೆಟ್ ಆಡದೆ ನಂ.1 ಸ್ಥಾನ ಪಡೆದಿದ್ದ ನ್ಯೂಜಿಲ್ಯಾಂಡ್ನ ಕೇನ್ ವಿಲಿಯಮ್ಸನ್(Kane Williamson) ನೂತನ ಶ್ರೇಯಾಂಕದಲ್ಲಿಯೂ ತಮ್ಮ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಕಳೆದ ವಾರ ಮೂರನೇ ಶ್ರೇಯಾಂಕದಲ್ಲಿದ್ದ ಇಂಗ್ಲೆಂಡ್ನ ಮಾಜಿ ನಾಯಕ ಜೋ ರೂಟ್(Joe Root) ಅವರು ಒಂದು ಸ್ಥಾನ ಪ್ರಗತಿ ಕಾಣುವ ಮೂಲಕ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಆದರೆ ದ್ವಿತೀಯ ಸ್ಥಾನದಲ್ಲಿದ್ದ ಆಸೀಸ್ನ ಮಾರ್ನಸ್ ಲಬುಶೇನ್(Marnus Labuschagne) ಅವರು ಮೂರು ಸ್ಥಾನಗಳ ಕುಸಿತ ಕಂಡು 5ನೇ ಸ್ಥಾನ ಪಡೆದಿದ್ದಾರೆ. ಸ್ಮಿತ್ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಬೌಲಿಂಗ್ ಶ್ರೇಯಾಂಕದಲ್ಲಿ ಆರ್. ಅಶ್ವಿನ್(Ravichandran Ashwin) ಅವರು ತಮ್ಮ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ರವೀಂದ್ರ ಜಡೇಜಾ ಅವರು 2 ಸ್ಥಾನ ಪ್ರಗತಿ ಸಾಧಿಸಿ ಮೂರನೇ ಸ್ಥಾನ ಪಡೆದಿದ್ದಾರೆ. ಆಲ್ ರೌಂಡರ್ಗಳ ಪಟ್ಟಿಯಲ್ಲಿಯೂ ಜಡೇಜಾ(Ravindra Jadeja) ಅಗ್ರ ಸ್ಥಾನ ಪಡೆದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಸ್ಟುವರ್ಟ್ ಬ್ರಾಡ್ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.
ಇದನ್ನೂ ಓದಿ IND vs WI 1st T20: ಭಾರತ-ವಿಂಡೀಸ್ ಟಿ20 ಮುಖಾಮುಖಿ, ಸಂಭಾವ್ಯ ತಂಡ, ಹವಾಮಾನ ವರದಿ ಹೀಗಿದೆ!
Two Ashes stars close in on top in the @MRFWorldwide ICC Men's Test Batters Rankings 👀
— ICC (@ICC) August 2, 2023
More 👇https://t.co/MfxyYmdXxX
ರಿಷಭ್ ಪಂತ್(Rishabh Pant) 12ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕಾರು ಅಪಘಾತದಲ್ಲಿ ಗಾಯಗೊಂಡು ಸುಮಾರು 8 ತಿಂಗಳಿನಿಂದ ಕ್ರಿಕೆಟ್ನಿಂದ ದೂರ ಉಳಿದಿರುವ ಪಂತ್ ಸದ್ಯ ಉತ್ತಮ ಚೇತರಿಕೆ ಕಂಡಿದ್ದು ಬೆಂಗಳೂರಿನ ಎನ್ಸಿಎಯಲ್ಲಿ ಫಿಟ್ನೆಸ್ ತರಬೇತಿ ಪಡೆಯುತ್ತಿದ್ದಾರೆ. ಮುಂದಿನ ವರ್ಷ ಪಂತ್ ಕ್ರಿಕೆಟ್ಗೆ ಮರಳುವ ಸಾಧ್ಯತೆ ಇದೆ. ವಿಂಡೀಸ್ ವಿರುದ್ಧದ ದ್ವಿತೀಯ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ 76ನೇ ಅಂತಾರಾಷ್ಟ್ರೀಯ ಶತಕ ಪೂರೈಸಿದ ವಿರಾಟ್ ಕೊಹ್ಲಿ 14ನೇ ಸ್ಥಾನದಲ್ಲೇ ಮುಂದುವರಿದಿದ್ದಾರೆ.