ಕ್ರೀಡೆ
Malaysia Masters: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸಿಂಧು, ಶ್ರೀಕಾಂತ್, ಪ್ರಣಯ್
ಮಲೇಷ್ಯ ಮಾಸ್ಟರ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಶಟ್ಲರ್ಗಳಾದ .ವಿ. ಸಿಂಧು, ಶ್ರೀಕಾಂತ್ ಮತ್ತು ಎಚ್. ಎಸ್. ಪ್ರಣಯ್ ಅವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಕೌಲಾಲಂಪುರ: ಅವಳಿ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು, ಶ್ರೀಕಾಂತ್ ಮತ್ತು ಎಚ್. ಎಸ್. ಪ್ರಣಯ್ ಅವರು ಉತ್ತಮ ಪ್ರದರ್ಶನ ತೋರುವ ಮೂಲಕ ಮಲೇಷ್ಯ ಮಾಸ್ಟರ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ಗೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ ಭಾರತಕ್ಕೆ ಪದಕ ಭರವಸೆ ಮೂಡಿಸಿದ್ದಾರೆ. ಆದರೆ ಯುವ ಆಟಗಾರ ಲಕ್ಷ್ಯ ಸೇನ್ ಸೋತು ಟೂರ್ನಿಯಿಂದ ನಿರ್ಗಮಿಸಿದ್ದಾರೆ.
ಗುರುವಾರ ಇಲ್ಲಿ ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಸ್ಪರ್ಧೆಯಲ್ಲಿ ಆರನೇ ಶ್ರೇಯಾಂಕದ ಸಿಂಧು ಅವರು ಜಪಾನಿನ ಆಯಾ ಒಹೋರಿ ವಿರುದ್ಧ 21-16, 21-11 ಗೇಮ್‌ಗಳಿಂದ ಗೆದ್ದು ಬೀಗಿದರು. ಆರಂಭದಿಂದಲೇ ಆಕ್ರಮಣ ಆಟಕ್ಕೆ ಒತ್ತು ಕೊಟ್ಟ ಸಿಂಧು ಎದುರಾಳಿ ವಿರುದ್ಧ ಸುಲಭ ಗೆಲುವು ದಾಖಲಿಸಿದರು. ಕಳೆದ ಪಂದ್ಯದಲ್ಲಿ ಸಿಂಧು ಡೆನ್ಮಾರ್ಕ್‌ನ ಲಿನೆ ಕ್ರಿಸ್ಟೋಫರ್ಸನ್ ಅವರನ್ನು 21-13, 17-21, 21-18 ಗೇಮ್‌ಗಳಿಂದ ಸೋಲಿಸಿದ್ದರು.
ಇದನ್ನೂ ಓದಿ Malaysia Masters: ಪ್ರಧಾನ ಸುತ್ತು ಪ್ರವೇಶಿಸಿದ ಮಾಳವಿಕಾ, ಅಶ್ಮಿತಾ
ಪುರುಷರ ಸಿಂಗಲ್ಸ್ ವಿಭಾಗದ ಹಣಾಹಣಿಯಲ್ಲಿ ಕಿದಂಬಿ ಶ್ರೀಕಾಂತ್ ಅವರು 21-19, 21-19 ಅಂತರದಿಂದ ಥಾಯ್ಲೆಂಡಿನ ಕುನ್ಲಾವುತ್ ವಿಟಿಸರ್ನ್ ಅವರನ್ನು ಮಣಿಸುವಲ್ಲಿ ಯಶಸ್ವಿಯಾದರು. ಮೊದಲ ಸುತ್ತಿನ ಪಂದ್ಯದಲ್ಲಿ ಶ್ರೀಕಾಂತ್ ಫ್ರಾನ್ಸ್‌ನ ಜೂನಿಯರ್ ಪೊಪೋವ್ ಅವರನ್ನು ಹಿಮ್ಮಟ್ಟಿಸಿದ್ದರು. ದಿನದ ಮತ್ತೊಂದು ಪುರುಷರ ಸಿಂಗಲ್ಸ್ನಲ್ಲಿ ಎಚ್.ಎಸ್. ಪ್ರಣಯ್ ಚೀನಾದ ಶಿ ಫೆಂಗ್ ಲಿ ಎದುರು 13-21, 21-16, 21-11 ಪ್ರಯಾಸದ ಗೆಲುವು ಕಂಡರು. ಅತ್ಯಂತ ಜಿದ್ದಾಜಿದ್ದಿನಿಂದ ನಡೆದ ಈ ಹೋರಾಟದಲ್ಲಿ ಮೊದಲ ಗೇಮ್ನಲ್ಲಿ ಪ್ರಣಯ್ ಹಿನ್ನಡೆ ಕಂಡರು. ಆದರೆ ಮುಂದಿನ ಎರಡು ನಿರ್ಣಾಯಕ ಗೇಮ್ಗಳಲ್ಲಿ ತಿರುಗಿ ಬಿದ್ದು ಪಂದ್ಯವನ್ನು ತಮ್ಮ ಕೈವಶ ಮಾಡಿಕೊಂಡರು. ಆದರೆ ಭರವಸೆಯ ಆಟಗಾರನಾಗಿದ್ದ ಲಕ್ಷ್ಯ ಸೇನ್ ಅವರು ಅಗುಂಸ್ ನಾ ಲಾಂಗ್ ವಿರುದ್ಧ 14-21, 19-21 ನೇರ ಗೇಮ್ಗಳ ಅಂತರದಿಂದ ಸೋತು ನಿರಾಸೆ ಮೂಡಿಸಿದರು.
ಕ್ರಿಕೆಟ್
WTC Final 2023: ಟ್ರೋಲ್ಗಳಿಗೆ ಸಿಕ್ಸರ್ ಬಾರಿಸಿದ ವಿರಾಟ್ ಕೊಹ್ಲಿ
ಆಹಾರ ಸೇವಿಸಿದ ವಿಚಾರಕ್ಕೆ ಟ್ರೋಲ್(troll) ಮಾಡಿದ ನೆಟ್ಟಿಗರಿಗೆ ಕಿಂಗ್ ಕೊಹ್ಲಿ ತಕ್ಕ ಉತ್ತರ ನೀಡಿದ್ದಾರೆ.
ಲಂಡನ್: ಔಟಾದ ಬಳಿಕ ಆಹಾರ ಸೇವಿಸಿದ ವಿಚಾರಕ್ಕೆ ಅತ್ಯಂತ ಕೀಳು ಮಟ್ಟದಲ್ಲಿ ಟ್ರೋಲ್(troll) ಮಾಡಿದ ನೆಟ್ಟಿಗರಿಗೆ ವಿರಾಟ್ ಕೊಹ್ಲಿ ಅವರು ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಈ ಮೂಲಕ ತಮ್ಮ ವಿರುದ್ಧ ಟೀಕೆ ಮಾಡುವವರ ಬಾಯಿ ಮುಚ್ಚಿಸಿದ್ದಾರೆ.
ಲಂಡನ್ನ ಓವಲ್ ಮೈದಾನದಲ್ಲಿ(WTC Final 2023) ದ್ವಿತೀಯ ದಿನದಾಟದ ವೇಳೆ ಭಾರತೀಯ ಆಟಗಾರರ ವಿಕೆಟ್ ಒಂದೆಡೆ ಬೀಳುತ್ತಿದ್ದರೂ ಯಾವುದೇ ಚಿಂತೆ ಇಲ್ಲದಂತೆ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ತೆರಳಿದ ತಕ್ಷಣ ಇಶಾನ್ ಕಿಶನ್ ಮತ್ತು ಗಿಲ್ ಜತೆ ಹರಾಟೆ ಹೊಡೆಯುತ್ತಾ ಆಹಾರ ಸೇವಿಸಿದ್ದರು. ಇದರ ಫೋಟೊ ಮತ್ತು ವಿಡಿಯೊ ಎಲ್ಲಡೆ ವೈರಲ್ ಆಗಿತ್ತು.
ಕೊಹ್ಲಿಯ ಈ ವರ್ತನೆ ಕಂಡ ಅನೇಕ ಟೀಮ್ ಇಂಡಿಯಾದ ಅಭಿಮಾನಿಗಳು ಮತ್ತು ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದರು. ಐಪಿಎಲ್ನಲ್ಲಿ ಪಂದ್ಯ ಸೋತಾಗ ಕಣ್ಣೀರು ಸುರಿಸುವ ನೀವು ಭಾರತ ತಂಡಕ್ಕೆ ಆಡುವಾಗ ಮಾತ್ರ ಈ ರೀತಿ ಮಾಡುತ್ತೀರಿ ಇದರ ಅರ್ಥ ನೀವು ಹಣಕ್ಕಾಗಿ ಆಡುತ್ತೀರಿ, ದೇಶಕಾಕ್ಕಾಗಿ ಅಲ್ಲ ಎಂದು ತೀಕ್ಷ್ಣ ಮಾತುಗಳಿಂದ ಕೊಹ್ಲಿಯನ್ನು ಟ್ರೋಲ್ ಮಾಡಿದ್ದರು.
“ಎಷ್ಟ್ರೇ ಸಾಧನೆ ಮಾಡಿದ್ದರೂ ಹಣಕ್ಕೆ ಆಸೆಪಡುವ ವಿರಾಟ್ ಕೊಹ್ಲಿಯನ್ನು ಸಚಿನ್ ತೆಂಡೂಲ್ಕರ್ ಜತೆ ಯಾವತ್ತೂ ಹೋಲಿಕೆ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಎಲ್ಲ ಟೀಕೆ ಮತ್ತು ಟ್ರೋಲ್ಗಳಿಗೆ ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿಯೊಂದನ್ನು ಹಾಕುವ ಮೂಲಕ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ WTC Final 2023: ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಆಡು; ಔಟಾದ ಬಳಿಕ ಊಟದ ಜತೆ ಬೈಗುಳ ತಿಂದ ಕೊಹ್ಲಿ
Latest Instagram story of Virat Kohli.
— Pari (@BluntIndianGal) June 9, 2023
Just want to let this man know that he is not disliked. He has carried us enough to be acknowledged than being the victim every time for minutest of thing. Imagine being targeted for eating a meal after fielding and batting. pic.twitter.com/33OzDk3vGL
ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಹಾಕಿರುವ ಕೊಹ್ಲಿ, ಅಮೆರಿಕದ ಖ್ಯಾತ ಲೇಖಕ ಮಾರ್ಕ್ ಮ್ಯಾನ್ಸನ್ ಅವರ, “ಇತರ ಜನರ ಅಭಿಪ್ರಾಯದ ಸೆರೆಮನೆಯಿಂದ ನಿಮ್ಮನ್ನು ಮುಕ್ತಗೊಳಿಸಲು ನೀವು ಇಷ್ಟಪಡದಿರುವ ಸಾಮರ್ಥ್ಯವನ್ನು ಉತ್ತಮವಾಗಿ ಬೆಳೆಸಿಕೊಳ್ಳಬೇಕು” ಎಂಬ ಹೇಳಿಕೆಯನ್ನು ಫೋಸ್ಟ್ ಮಾಡುವ ಮೂಲಕ ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿರುವವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ. ಸದ್ಯ ಕೊಹ್ಲಿ ಈ ಪೋಸ್ಟ್ ಎಲ್ಲಡೆ ವೈರಲ್ ಆಗಿದೆ. ಕೊಹ್ಲಿ ಅವರು ಮೊದಲ ಇನಿಂಗ್ಸ್ನಲ್ಲಿ 14 ರನ್ ಗಳಿಸಿದ್ದರು.
ಕ್ರಿಕೆಟ್
ICC World Cup 2023: ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ
ಐಸಿಸಿ ಏಕದಿನ ವಿಶ್ವ ಕಪ್ ಟೂರ್ನಿಯ ವೇಳಾಪಟ್ಟಿ ಜೂನ್ 10, ಶನಿವಾರ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.
ಲಂಡನ್: ಭಾರತದ ಆತಿಥ್ಯದಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವ ಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಐಸಿಸಿ ಮೂಲಗಳ ಪ್ರಕಾರ ಜೂನ್ 10 ಶನಿವಾರ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ವರದಿಯಾಗಿದೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಲಂಡನ್ನಲ್ಲಿ ನಡೆಯುತ್ತಿದ್ದರು. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸುತ್ತಿದೆ. ಈ ಪಂದ್ಯ ವೀಕ್ಷಣೆಗೆ ಬಿಸಿಸಿಐ ಅಧಿಕಾರಿಗಳು ಮತ್ತು ಐಸಿಸಿ ಅಧಿಕಾರಿಗಳು ಲಂಡನ್ನಲ್ಲಿ ಸೇರಿದ್ದಾರೆ. ಇದೇ ವೇಳೆ ಸಭೆ ನಡೆಸಿ ಏಕದಿನ ಟೂರ್ನಿಯ ವೇಳಾಪಟ್ಟಿ ಮತ್ತು ತಾಣಗಳನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಶನಿವಾರ ಇದು ಅಧಿಕೃತ ಪ್ರಕಟನೆ ಮೂಲಕ ಹೊರಬೀಳಲಿದೆ ಎನ್ನಲಾಗಿದೆ. ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ಈ ಕ್ರೀಡಾಕೂಟ ನಡೆಯುವ ಸಾಧ್ಯತೆ ಇದೆ.
ಟೂರ್ನಿಗಾಗಿ ಕನಿಷ್ಠ 10ಕ್ಕೂ ಹೆಚ್ಚು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕೊತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈ ಈ ಪಟ್ಟಿಯಲ್ಲಿ ಸೇರಿವೆ ಎನ್ನಲಾಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಚೆನ್ನೈನಲ್ಲಿ ನಡೆಯುವ ಸಾಧ್ಯತೆಯಿದೆ. ಪಾಕಿಸ್ತಾನದ ಹೆಚ್ಚಿನ ಪಂದ್ಯಗಳು ಬೆಂಗಳೂರು ಮತ್ತು ಚೆನ್ನೈನಲ್ಲಿ ನಡೆಯಲಿದೆ. ಬಾಂಗ್ಲಾದೇಶದ ಪಂದ್ಯಗಳು ಕೋಲ್ಕತ್ತಾ ಮತ್ತು ಗುವಾಹಟಿಯಲ್ಲಿ ನಡೆಯುವ ಸಾಧ್ಯತೆ ಇದೆ. ಭಾರತ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಪಾಕಿಸ್ತಾನ ತಂಡ ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ಆಡುವುದಿಲ್ಲ ಎಂದು ಹೇಳಿದೆ. ಅಂತಿಮ ಪಟ್ಟಿ ಹೇಗೆ ಇರಲಿದೆ ಎಂದು ಶನಿವಾರ ಉತ್ತರ ಸಿಗುವ ಸಾಧ್ಯತೆ ಇದೆ.
ಇದನ್ನೂ ಓದಿ World Cup 2023: ಈ ಸ್ಟೇಡಿಯಂನಲ್ಲಿ ಪಾಕ್ ತಂಡ ಭಾರತ ವಿರುದ್ಧ ವಿಶ್ವ ಕಪ್ ಆಡಲ್ಲವಂತೆ!
48 ಪಂದ್ಯಗಳು
ಒಟ್ಟು ಹತ್ತು ತಂಡಗಳನ್ನು ಎರಡು ಗುಂಪುಗಳಾಗಿ ಆಡಿಸಲಾಗುತ್ತದೆ. ಹೀಗಾಗಿ 46 ದಿನಗಳಲ್ಲಿ 48 ಪಂದ್ಯಗಳು ನಡೆಯಲಿವೆ. ಅಕ್ಟೋಬರ್-ನವೆಂಬರ್ನಲ್ಲಿ ಕೆಲ ಪ್ರದೇಶಗಳಲ್ಲಿ ಹಿಂಗಾರು ಮಳೆ ಸಾಧ್ಯತೆ ಇರುವುದರಿಂದ ಅಭ್ಯಾಸ ನಡೆಸುವ ತಾಣಗಳನ್ನು ಬಿಸಿಸಿಐ ಶಿಘ್ರದಲ್ಲೇ ಪ್ರಕಟಿಸಲಿದೆ ಎಂದು ವರದಿ ಮಾಡಿದೆ.
ಕ್ರಿಕೆಟ್
WTC Final 2023: ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಆಡು; ಔಟಾದ ಬಳಿಕ ಊಟದ ಜತೆ ಬೈಗುಳ ತಿಂದ ಕೊಹ್ಲಿ
ವಿರಾಟ್ ಕೊಹ್ಲಿ ಅವರು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಔಟಾದ ತಕ್ಷಣ ಡಗೌಟ್ನಲ್ಲಿ ಆಹಾರ ಸೇವಿಸಿದ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.
ಲಂಡನ್: ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ನಿರೀಕ್ಷಿತ ಮಟ್ಟದ ಬ್ಯಾಟಿಂಗ್ ಪ್ರದರ್ಶನ ತೋರುವಲ್ಲಿ ಎಡವಿದ್ದಾರೆ. ಆದರೆ ಅವರು ಔಟ್ ಆಗಿರುವ ವಿಚಾರವನ್ನು ಹೊರತುಪಡಿಸಿ ಬೇರೆಯೇ ಕಾರಣಕ್ಕೆ ಇದೀಗ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಲಂಡನ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ದಿನದಾಟದ ವೇಳೆ ವಿರಾಟ್ ಅವರು 14 ರನ್ ಗಳಿಸಿ ವಿಕೆಟ್ ಕೈಚೆಲ್ಲಿದರು. ಪೆವಿಲಿಯನ್‌ಗೆ ತೆರಳಿದ ವಿರಾಟ್ ಕೊಹ್ಲಿ ಯಾವುದೇ ಚಿಂತೆ ಇಲ್ಲದವರಂತೆ ಇಶಾನ್ ಕಿಶನ್ ಮತ್ತು ಗಿಲ್ ಜತೆ ಹರಾಟೆ ಹೊಡೆಯುತ್ತಾ ಆಹಾರ ಸೇವಿಸಿದ್ದಾರೆ. ಇದರ ಫೋಟೊ ಮತ್ತು ವಿಡಿಯೊ ಎಲ್ಲಡೆ ವೈರಲ್ ಆಗಿದೆ.
ಕೊಹ್ಲಿಯ ಈ ವರ್ತನೆ ಕಂಡ ಅನೇಕ ಟೀಮ್ ಇಂಡಿಯಾದ ಅಭಿಮಾನಿಗಳು ಮತ್ತು ಕೆಲವು ಕ್ರಿಕೆಟ್ ಪಂಡಿತರು ಟೀಕೆ ವ್ಯಕ್ತಪಡಿಸಿದ್ದಾರೆ. ಜತೆಗೆ ಅವರನ್ನು ತೀಕ್ಷ್ಣ ಮಾತುಗಳಿಂದ ಟ್ರೋಲ್ ಮಾಡಿದ್ದಾರೆ. ಐಪಿಎಲ್ನಲ್ಲಿ ಪಂದ್ಯ ಸೋತಾಗ ಕಣ್ಣೀರು ಸುರಿಸುವ ನೀವು ಭಾರತ ತಂಡಕ್ಕೆ ಆಡುವಾಗ ಮಾತ್ರ ಈ ರೀತಿ ಮಾಡುತ್ತೀರಿ ಇದರ ಅರ್ಥ ನೀವು ಹಣಕ್ಕಾಗಿ ಆಡುತ್ತೀರಿ, ದೇಶಕಾಕ್ಕಾಗಿ ಅಲ್ಲ ಎಂದು ನೆಟ್ಟಿಗರೊಬ್ಬರು ಟ್ರೋಲ್ ಮಾಡಿದ್ದಾರೆ.
ಇದನ್ನೂ ಓದಿ WTC Final 2023: ಇನಿಂಗ್ಸ್ ಹಿನ್ನಡೆ ಭಯದಲ್ಲಿ ಟೀಮ್ ಇಂಡಿಯಾ
Seriousness of Virat Kohli for IPL vs India#INDvAUS pic.twitter.com/4CKM9LK80K
— Ctrl C Ctrl Memes (@Ctrlmemes_) June 8, 2023
ತಂಡ ಸಂಕಷ್ಟದಲ್ಲಿದ್ದರೂ ನೀವು ಈ ರೀತಿ ಆನಂದದಲ್ಲಿರುವುದನ್ನು ಕಾಣುವಾಗ ಭಾರತ ತಂಡಕ್ಕಿಂತ ನಿಮಗೆ ಐಪಿಎಲ್ ಟೂರ್ನಿಯೇ ಹೆಚ್ಚಾದಂತೆ ಕಾಣುತ್ತಿದೆ ಎಂದು ಮತ್ತೊಬ್ಬ ನೆಟ್ಟಿಗ ಟ್ರೋಲ್ ಮಾಡಿದ್ದಾರೆ. ಇನ್ನಿ ಕೆಲವರು ಅರೇ ನೀವು ತಿನ್ನುತ್ತಿರುವ ಆಹಾರ ಯಾವುದು? ಎಂದು ಪ್ರಶ್ನೆ ಮಾಡುವ ಮೂಲಕ ಕೊಹ್ಲಿಯ ಕಾಲೆಳೆದಿದ್ದಾರೆ.
Never compare great Sachin Tendulkar with money makers like Virat Kohli#INDvAUS pic.twitter.com/ML58p3jdxc
— Ctrl C Ctrl Memes (@Ctrlmemes_) June 8, 2023
ಎಷ್ಟ್ರೇ ಸಾಧನೆ ಮಾಡಿದ್ದರೂ ಹಣಕ್ಕೆ ಆಸೆಪಡುವ ವಿರಾಟ್ ಕೊಹ್ಲಿಯನ್ನು ಸಚಿನ್ ತೆಂಡೂಲ್ಕರ್ ಜತೆ ಯಾವತ್ತೂ ಹೋಲಿಕೆ ಮಾಡಬೇಡಿ ಎಂದು ನೆಟ್ಟಿಗೊರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಕೊಹ್ಲಿಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹಲವು ಕಾರಣಕ್ಕೆ ಟ್ರೋಲ್ ಆಗುತ್ತಿದೆ.
Live News
WTC Final 2023: ಭಾರತ-ಆಸೀಸ್ ಮೂರನೇ ದಿನದಾಟದ ಹೈಲೆಟ್ಸ್
ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೂರನೇ ದಿನದಾಟದ ಹೈಲೆಟ್ಸ್ ಇಲ್ಲಿದೆ.
ಲಂಡನ್: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೂರನೇ ದಿನದಾಟದ ಹೈಲೆಟ್ಸ್ ಇಲ್ಲಿದೆ.
-
ಸುವಚನ13 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ19 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
ದೇಶ18 hours ago
ಬದುಕುಳಿಯಲಿಲ್ಲ ಬೋರ್ವೆಲ್ಗೆ ಬಿದ್ದ ಕಂದಮ್ಮ; ಸಾವಿನ ವಿರುದ್ಧ 50 ಗಂಟೆ ಹೋರಾಟದಲ್ಲಿ ಗೆದ್ದಿದ್ದು ವಿಧಿ
-
South Cinema24 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema23 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ದೇಶ21 hours ago
ಸಹಕಾರಿ ಬ್ಯಾಂಕ್ಗಳು ಕೂಡ ಸುಸ್ತಿದಾರರ ಜತೆ ರಾಜಿ, ಸಾಲ ರೈಟ್-ಆಫ್ ಮಾಡಬಹುದು; ಆರ್ಬಿಐ ಮಹತ್ವದ ಘೋಷಣೆ
-
ಕರ್ನಾಟಕ23 hours ago
Fraud Case: ಬೆಳದಿಂಗಳ ಬಾಲೆ ಪ್ರಕರಣಕ್ಕೆ ಟ್ವಿಸ್ಟ್; ಸ್ವಾಮೀಜಿ ವಂಚನೆ ಕೇಸಲ್ಲಿ ಎ2 ಆರೋಪಿ ಈಗ ಎ1!
-
ದೇಶ10 hours ago
Miss World- 2023: 27 ವರ್ಷಗಳ ಬಳಿಕ ಭಾರತಕ್ಕೆ ಬರುತ್ತಿರುವ ʼಮಿಸ್ ವರ್ಲ್ಡ್ʼ