Heart Attack: ಬ್ಯಾಡ್ಮಿಂಟನ್‌ ಆಡುತ್ತಿದ್ದವನ ಬಾಳಲ್ಲಿ ಆಟವಾಡಿದ ವಿಧಿ; ಹೃದಯಾಘಾತದಿಂದ ಸಾವು - Vistara News

ಕ್ರೀಡೆ

Heart Attack: ಬ್ಯಾಡ್ಮಿಂಟನ್‌ ಆಡುತ್ತಿದ್ದವನ ಬಾಳಲ್ಲಿ ಆಟವಾಡಿದ ವಿಧಿ; ಹೃದಯಾಘಾತದಿಂದ ಸಾವು

Heart Attack: ನೊಯ್ಡಾ 11ನೇ ಸೆಕ್ಟರ್‌ ನಿವಾಸಿ ಮಹೇಂದ್ರ ಶರ್ಮಾ ಅವರು ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸುತ್ತಿದ್ದರು. ಕಳೆದ ಐದು ವರ್ಷದಿಂದ ಅವರು ನಿತ್ಯ ಬ್ಯಾಡ್ಮಿಂಟನ್‌ ಆಡುತ್ತಿದ್ದರು. ಆದರೆ, ಅವರಿಗೆ ಶನಿವಾರ ಬೆಳಗ್ಗೆ ಹೃದಯಾಘಾತವಾಗಿದೆ. ಇದಾದ ಕೆಲವೇ ನಿಮಿಷದಲ್ಲಿ ಅವರು ಮೃತಪಟ್ಟಿದ್ದಾರೆ.

VISTARANEWS.COM


on

Man Dies Of Heart Attack In Noida
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೊಯ್ಡಾ: ಇತ್ತೀಚೆಗೆ ಹೃದಯಾಘಾತಕ್ಕೀಡಾಗಿ, ಮೃತಪಡುತ್ತಿರುವವರ ಸಂಖ್ಯೆ ಜಾಸ್ತಿಯಾದ ಕಾರಣ ಜನರ ಬದುಕು ಮತ್ತಷ್ಟು ಅನಿಶ್ಚಿತತೆಯಿಂದ ಕೂಡಿದೆ. ನಮ್ಮೆದುರು ಚೆನ್ನಾಗಿ ಇರುವವರು ಕೆಲವೇ ಗಂಟೆಯಲ್ಲಿ ಹೃದಯಾಘಾತದಿಂದ ಸಾವಿಗೀಡಾಗುತ್ತಿರುವುದು ಭೀತಿ ಹುಟ್ಟಿಸಿದೆ. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ ನೊಯ್ಡಾದಲ್ಲಿ ಬ್ಯಾಡ್ಮಿಂಟನ್‌ ಆಡುತ್ತಿರುವಾಗಲೇ ಹೃದಯಾಘಾತದಿಂದ (Heart Attack) ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಸೆಕ್ಟರ್‌ 21 ಎನಲ್ಲಿರುವ ನೊಯ್ಡಾ ಸ್ಟೇಡಿಯಂನಲ್ಲಿ 52 ವರ್ಷದ ಮಹೇಂದ್ರ ಶರ್ಮಾ ಅವರು ಬ್ಯಾಡ್ಮಿಂಟನ್‌ ಆಡುತ್ತಿದ್ದರು. ಬ್ಯಾಡ್ಮಿಂಟನ್‌ ಆಡುತ್ತಿರುವಾಗಲೇ ಅವರು ಕುಸಿದುಬಿದ್ದಿದ್ದಾರೆ. ಅವರು ಕುಸಿದು ಬೀಳುತ್ತಲೇ ಸ್ಟೇಡಿಯಂನಲ್ಲಿದ್ದ ತುರ್ತು ವೈದ್ಯಕೀಯ ತಂಡ ಆಗಮಿಸಿ ತಪಾಸಣೆ ಮಾಡಿದೆ. ವೈದ್ಯರು ಮಹೇಂದ್ರ ಶರ್ಮಾ ಅವರ ಎದೆ ಒತ್ತಿ, ತಿಕ್ಕಿದ್ದಾರೆ. ಆದರೂ, ಮಹೇಂದ್ರ ಶರ್ಮಾ ಅವರು ಸುಧಾರಿಸಿಕೊಳ್ಳದ ಕಾರಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹೇಂದ್ರ ಶರ್ಮಾ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. “ಶನಿವಾರ ಬೆಳಗ್ಗೆ 7.30ರ ಸುಮಾರಿಗೆ ಮಹೇಂದ್ರ ಶರ್ಮಾ ಅವರು ಬ್ಯಾಡ್ಮಿಂಟನ್‌ ಆಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Heart attack: 16,000 ಹೃದ್ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯ ಹೃದಯಾಘಾತಕ್ಕೆ ಬಲಿ

ಸೆಕ್ಟರ್‌ 11ನೇ ನಿವಾಸಿಯಾಗಿರುವ ಮಹೇಂದ್ರ ಶರ್ಮಾ ಅವರು ಕಳೆದ ಐದು ವರ್ಷದಿಂದ ಬ್ಯಾಡ್ಮಿಂಟನ್‌ ಆಡುತ್ತಿದ್ದರು. ಅಷ್ಟರಮಟ್ಟಿಗೆ ಅವರು ಆರೋಗ್ಯದ ಕಡೆ ಗಮನ ಹರಿಸುತ್ತಿದ್ದರು. ಆದರೆ, ಏಕಾಏಕಿ ಹಾರ್ಟ್‌ ಅಟಾಕ್‌ ಆಗಿ ಅವರು ಮೃತಪಟ್ಟಿರುವುದು ದುಃಖದ ವಿಚಾರ ಎಂದು ಮಹೇಂದ್ರ ಶರ್ಮಾ ಗೆಳೆಯರು ವಿಷಾದ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಇತ್ತೀಚೆಗೆ ಹೃದಯಾಘಾತದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ, ಕಡಿಮೆ ವಯಸ್ಸಿನವರು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕ ಮೂಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

Gukesh D: 12ನೇ ವರ್ಷದಲ್ಲೇ ಗ್ರ್ಯಾಂಡ್‌ಮಾಸ್ಟರ್‌ ಆಗಿ ಹೊರಹೊಮ್ಮಿದ್ದ ಗುಕೇಶ್‌, ಕ್ಯಾಂಡಿಡೇಟ್ಸ್‌ ಟೂರ್ನಿ ಗೆದ್ದ ವಿಶ್ವದ ಅತಿ ಕಿರಿಯ ಚೆಸ್‌ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪ್ರಶಸ್ತಿ ಗೆದ್ದ 2ನೇ ಭಾರತೀಯ ಎಂಬ ಕೀರ್ತಿಯೂ ಅವರದ್ದಾಗಿದೆ. ವಿಶ್ವನಾಥನ್‌ ಆನಂದ್‌ ಮೊದಲಿಗ. ಅವರು 2014ರಲ್ಲಿ ಕ್ಯಾಂಡಿಡೇಟ್ಸ್‌ ಪ್ರಶಸ್ತಿ ಗೆದ್ದಿದ್ದರು.

VISTARANEWS.COM


on

Gukesh D
Koo

ಬೆಂಗಳೂರು: ಭಾನುವಾರ ನಡೆದಿದ್ದ ಫಿಡೆ ಕ್ಯಾಂಡಿಡೇಟ್ಸ್‌ ಚೆಸ್‌ನಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಚಾಂಪಿಯನ್​ ಪಟ್ಟ ಅಲಂಕರಿಸಿದ ಭಾರತದ ಚೆಸ್‌ ಗ್ರ್ಯಾಂಡ್‌ಮಾಸ್ಟರ್ ಡಿ.ಗುಕೇಶ್‌(Gukesh D) ಅವರ ಸಾಧನೆಯ ಹಿಂದೆ ಅವರ ತಂದೆಯ ಅಪಾರ ಶ್ರಮವಿದೆ. ಮಗನ ಚೆಸ್​ ಸಾಧನೆಗೆ ಯಾವುದೇ ಅಡೆತಡೆ ಉಂಟಾಗಬಾರದೆಂದು ತಂದೆ ತಂದೆ ಡಾ.ರಜನೀಕಾಂತ್‌(Rajinikanth) ಅವರು ತಮ್ಮ ವೈದ್ಯ ವೃತ್ತಿಯನ್ನೇ ತಾತ್ಕಾಲಿಕವಾಗಿ ತೊರೆದಿದ್ದರು.

ಹೌದು, ಬಾಲ್ಯದಲ್ಲೇ ಚೆಸ್‌ ಮೇಲೆ ಒಲವು ಹೊಂದಿದ್ದ ಗುಕೇಶ್‌ಗೆ ಕೋಚಿಂಗ್‌, ಟೂರ್ನಿಯ ಸಿದ್ಧತೆ, ಪ್ರಯಾಣಕ್ಕಾಗಿ ಪೋಷಕರು ಆರ್ಥಿಕ ಸಮಸ್ಯೆ ಎದುರಿಸಿದ್ದರು. ಆದರೆ, ಮಗನ ಸಾಧನೆಗೆ ಹಣಕಾಸಿನ ಕೊರತೆ ಅಡ್ಡಿಯಾಗಬಾರದೆಂದು ತಂದೆ ಡಾ.ರಜನೀಕಾಂತ್‌, ತಾಯಿ ಪದ್ಮಾ ದೃಢನಿರ್ಧಾರ ಕೈಗೊಂಡಿದ್ದರು. ಹಣ ಹೊಂದಿಸಲು ಕ್ರೌಂಡ್‌ ಪಂಡಿಂಗ್ ಕೂಡಾ ನಡೆಸಿದ್ದರು. ಇದು ಮಾತ್ರವಲ್ಲದೆ ಗುಕೇಶ್‌ ಜತೆ ಟೂರ್ನಿಗಳಲ್ಲಿ ಪಾಲ್ಗೊಳ್ಳಲು ವಿದೇಶಕ್ಕೆ ಹೋಗುವ ಕಾರಣಕ್ಕಾಗಿ ಅವರ ತಂದೆ 2017-18ರಲ್ಲಿ ತಮ್ಮ ವೈದ್ಯ ವೃತ್ತಿಯನ್ನೇ ತಾತ್ಕಾಲಿಕವಾಗಿ ತೊರೆದಿದ್ದರು.

ಇದನ್ನೂ ಓದಿ D Gukesh: 17ನೇ ವಯಸ್ಸಿಗೇ ‘ಚೆಸ್‌ ಕ್ಯಾಂಡಿಡೇಟ್ಸ್‌’ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಗುಕೇಶ್!

ಪೋಷಕರ ತ್ಯಾಗ ಮತ್ತು ಶ್ರಮಕ್ಕೆ ಇಂದು ಗುಕೇಶ್‌ ಚೆಸ್​ನಲ್ಲಿ ಮಿಂಚುವ ಮೂಲಕ ಅವರಿಗೂ ಕೀರ್ತಿ ತಂದಿದ್ದಾನೆ. 12ನೇ ವರ್ಷದಲ್ಲೇ ಗ್ರ್ಯಾಂಡ್‌ಮಾಸ್ಟರ್‌ ಆಗಿ ಹೊರಹೊಮ್ಮಿದ್ದ ಗುಕೇಶ್‌, ಕ್ಯಾಂಡಿಡೇಟ್ಸ್‌ ಟೂರ್ನಿ ಗೆದ್ದ ವಿಶ್ವದ ಅತಿ ಕಿರಿಯ ಚೆಸ್‌ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪ್ರಶಸ್ತಿ ಗೆದ್ದ 2ನೇ ಭಾರತೀಯ ಎಂಬ ಕೀರ್ತಿಯೂ ಅವರದ್ದಾಗಿದೆ. ವಿಶ್ವನಾಥನ್‌ ಆನಂದ್‌ ಮೊದಲಿಗ. ಅವರು 2014ರಲ್ಲಿ ಕ್ಯಾಂಡಿಡೇಟ್ಸ್‌ ಪ್ರಶಸ್ತಿ ಗೆದ್ದಿದ್ದರು.

ಡಿ.ಗುಕೇಶ್‌ ವಿಶ್ವ ಚಾಂಪಿಯನ್‌ ಎನಿಸಿಕೊಳ್ಳಲು ಇನ್ನೊಂದೇ ಹೆಜ್ಜೆ ಬಾಕಿ ಇದೆ. ಈ ಸ್ಪರ್ಧೆಯಲ್ಲಿ ಚೀನಾದ ಡಿಂಗ್‌ ಲಿರೆನ್‌ ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ವರ್ಷಾಂತ್ಯದಲ್ಲಿ ಪಂದ್ಯ ನಡೆಯಲಿದ್ದು, ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ. ಭಾರತದಿಂದ ಈ ವರೆಗೂ ವಿಶ್ವನಾಥನ್‌ ಆನಂದ್ ಮಾತ್ರ ವಿಶ್ವ ಚಾಂಪಿಯನ್‌ ಆಗಿದ್ದಾರೆ. ಅವರು 5 ಬಾರಿ ಪ್ರಶಸ್ತಿ ಗೆದ್ದಿದ್ದಾರೆ.

ಭಾನುವಾರ ತಡರಾತ್ರಿ ಕೆನಡಾದ ಟೊರೊಂಟೊದಲ್ಲಿ ನಡೆದ ಮುಕ್ತ ವಿಭಾಗದ 14 ಹಾಗೂ ಕೊನೆ ಸುತ್ತಿನ ಹಣಾಹಣಿಯಲ್ಲಿ ಗುಕೇಶ್‌ ಅವರು ಅಮೆರಿಕದ ಹಿಕರು ನಕಮುರಾ ವಿರುದ್ಧ ಡ್ರಾ ಸಾಧಿಸಿದರು. ಇದರೊಂದಿಗೆ ಗುಕೇಶ್‌ ಅಂಕ ಗಳಿಕೆಯನ್ನು 9ಕ್ಕೆ ಹೆಚ್ಚಿಸಿ ಅಗ್ರಸ್ಥಾನ ಕಾಯ್ದುಕೊಂಡರು. ರಷ್ಯಾದ ಇಯಾನ್‌ ನೆಪೊಮ್ನಿಯಾಚಿ ಹಾಗೂ ಫ್ಯಾಬಿಯಾನೊ ಕರುನಾ ನಡುವಿನ ಪಂದ್ಯ ಡ್ರಾಗೊಳ್ಳುವುದರೊಂದಿಗೆ ಗುಕೇಶ್‌ ಚಾಂಪಿಯನ್‌ ಎನಿಸಿಕೊಂಡರು.

ಇದೇ ವೇಳೆ ಗುಕೇಶ್‌ 40 ವರ್ಷಗಳ ದಾಖಲೆಯನ್ನು ಅಳಿಸಿ ಹಾಕಿ, ನೂತನ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಗುಕೇಶ್‌ ಕ್ಯಾಂಡಿಡೇಟ್ಸ್‌ ಟೂರ್ನಿ ಗೆದ್ದ ವಿಶ್ವದ ಅತಿ ಕಿರಿಯ ಚೆಸ್‌ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರಷ್ಯಾದ ದಿಗ್ಗಜ ಚೆಸ್‌ ಪಟು ಗ್ಯಾರಿ ಕಾಸ್ಪರೋವ್‌ 1984ರಲ್ಲಿ ತಮ್ಮ 22ನೇ ವರ್ಷದಲ್ಲಿ ಕ್ಯಾಂಡಿಡೇಟ್ಸ್‌ ಟೂರ್ನಿ ಗೆದ್ದಿದ್ದರು. ಇದು ಈವರೆಗಿನ ಟೂರ್ನಿಯ ಇತಿಹಾಸವಾಗಿತ್ತು. ಆದರೆ ಗುಕೇಶ್‌ 17ನೇ ವಯಸ್ಸಿಗೆ ಚಾಂಪಿಯನ್​ ಆಗುವ ಮೂಲಕ ಕಾಸ್ಪರೋವ್‌ ದಾಖಲೆ ಮುರಿದರು.

Continue Reading

ಕ್ರೀಡೆ

Viral Video: ಐಪಿಎಲ್​​ ಪಂದ್ಯದ ವೇಳೆ ಪಾಕಿಸ್ತಾನ ಟಿ20 ವೀಕ್ಷಿಸಿದ ಅಭಿಮಾನಿ

Viral Video: ಅಭಿಮಾನಿಯೊಬ್ಬ ಐಪಿಎಲ್​ ಪಂದ್ಯವನ್ನು ವೀಕ್ಷಿಸುವ ಮಧ್ಯೆಯೂ ಪಾಕ್​ ಮತ್ತು ಕಿವೀಸ್​ ನಡುವಣ ಟಿ20 ಪಂದ್ಯವನ್ನು ವೀಕ್ಷಿಸಿ ಕ್ರಿಕೆಟ್​ ಮೇಲಿರುವ ಪ್ರೀತಿಯನ್ನು ತೋರಿಸಿಕೊಟ್ಟಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

VISTARANEWS.COM


on

Viral Video
Koo

ಜೈಪುರ: ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ಸನ್​ರೈಸರ್ಸ್ ಹೈದರಾಬಾದ್(SRH vs DC)​ ತಂಡಗಳು ಏಪ್ರಿಲ್​ 20ರಂದು ಐಪಿಎಲ್​ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯದ ವೇಳೆ ಕ್ರಿಕೆಟ್​ ಅಭಿಮಾನಿಯೊಬ್ಬ ಗ್ಯಾಲರಿಯಲ್ಲಿ ಕುಳಿತು ತನ್ನ ಮೊಬೈಲ್​ನಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್(PAK vs NZ)​ ನಡುವಣ 2ನೇ ಟಿ20 ಪಂದ್ಯವನ್ನು ವೀಕ್ಷಿಸಿದ್ದಾನೆ. ಈ ವಿಡಿಯೊ 3 ದಿನಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

ಅಭಿಮಾನಿಯೊಬ್ಬ ಐಪಿಎಲ್​ ಪಂದ್ಯವನ್ನು ವೀಕ್ಷಿಸುವ ಮಧ್ಯೆಯೂ ಪಾಕ್​ ಮತ್ತು ಕಿವೀಸ್​ ನಡುವಣ ಟಿ20 ಪಂದ್ಯವನ್ನು ವೀಕ್ಷಿಸಿ ಕ್ರಿಕೆಟ್​ ಮೇಲಿರುವ ಪ್ರೀತಿಯನ್ನು ತೋರಿಸಿಕೊಟ್ಟಿದ್ದಾನೆ. ಈ ವಿಡಿಯೊವನ್ನು ಪಾಕಿಸ್ತಾನ ಮೂಲದ ನವಾಝ್​​ ಎನ್ನುವಾತ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡು ‘ಸಹೋದರ ಕ್ರೀಡಾಂಗಣದಲ್ಲಿ ಕುಳಿತು ಐಪಿಎಲ್​ ಪಂದ್ಯದ ಬದಲು ಪಾಕಿಸ್ತಾನ-ನ್ಯೂಜಿಲ್ಯಾಂಡ್​ ಪಂದ್ಯ ವೀಕ್ಷಿಸುತ್ತಿದ್ದಾನೆ’ ಎಂದು ಬರೆದುಕೊಂಡಿದ್ದಾರೆ. ಈ ಪಂದ್ಯವನ್ನು ಪಾಕಿಸ್ತಾನ 7 ವಿಕೆಟ್​ ಅಂತರದಿಂದ ಗೆದ್ದು ಬೀಗಿತ್ತು.

ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ನಡೆದಿದ್ದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಹೈದರಾಬಾದ್​ ತಂಡಕ್ಕೆ ಆರಂಭಿಕರಾದ ಟ್ರಾವಿಸ್​ ಹೆಡ್​(89) ಮತ್ತು ಅಭಿಷೇಕ್​ ಶರ್ಮ(46) ಜಿದ್ದಿಗೆ ಬಿದ್ದವರಂತೆ ಬ್ಯಾಟ್ ಬೀಸಿ ಅಮೋಘ ಆರಂಭ ಒದಗಿಸಿದರು. ಇವರ ಈ ಬ್ಯಾಟಿಂಗ್​ ಪರಾಕ್ರಮದಿಂದ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 266 ರನ್​ ಬಾರಿಸಿತು. ಸವಾಲಿನ ಮೊತ್ತವನ್ನು ದಿಟ್ಟ ರೀತಿಯಲ್ಲಿ ಬೆನ್ನಟ್ಟಿಕೊಂಡು ಹೋದ ಡೆಲ್ಲಿ ಕ್ಯಾಪಿಟಲ್ಸ್​ ಅಂತಿಮವಾಗಿ 19.1 ಓವರ್​ಗಳಲ್ಲಿ 199 ರನ್​ಗೆ ಸರ್ವಪತನ ಕಂಡಿತ್ತು.

ಇದನ್ನೂ ಓದಿ SRH vs DC: ಬೃಹತ್​ ಮೊತ್ತದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಹೈದರಾಬಾದ್

ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್​ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯುತ್ತಿದ್ದು. ಈಗಾಗಲೇ ಮೂರು ಪಂದ್ಯಗಳು ಮುಕ್ತಾಯ ಕಂಡಿದೆ. ಉಭಯ ತಂಡಗಳು ಕೂಡ ತಲಾ ಒಂದೊಂದು ಪಂದ್ಯಗಳನ್ನು ಗೆದ್ದಿವೆ. ಮೊದಲ ಪಂದ್ಯ ಮಳೆಯಿಂದ ರದ್ದುಗೊಂಡಿತ್ತು. ನಾಲ್ಕನೇ ಪಂದ್ಯ ಏಪ್ರಿಲ್​ 25ರಂದು ನಡೆಯಲಿದೆ.

3ನೇ ಪಂದ್ಯದಲ್ಲಿ ಕಿವೀಸ್​ಗೆ ಗೆಲುವು


ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್​ ತಂಡ 7 ವಿಕೆಟ್​ಗಳಿಂದ ಪಾಕಿಸ್ತಾನವನ್ನು ಮಣಿಸುವಲ್ಲಿ ಯಶಸ್ವಿಯಾಗಿದೆ. ಭಾನುವಾರ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಪಾಕಿಸ್ತಾನ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 178 ರನ್​ ಬಾರಿಸಿತು. ಇದನ್ನು ಬೆನ್ನಟ್ಟಿದ ನ್ಯೂಜಿಲ್ಯಾಂಡ್​ 18.2 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 179 ರನ್​ ಬಾರಿಸಿ ಗೆಲುವು ಸಾಧಿಸಿತ್ತು.

Continue Reading

ಕ್ರೀಡೆ

Karun Nair: ತ್ರಿಶತಕ ಬಾರಿಸಿದರೂ ಭಾರತ ತಂಡದಲ್ಲಿ ಕಡೆಗಣನೆ; ಕೌಂಟಿಯಲ್ಲಿ ದ್ವಿಶತಕ ಬಾರಿಸಿದ ಕರುಣ್ ನಾಯರ್

Karun Nair: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್ ಅಜೇಯ ತ್ರಿಶತಕ ಬಾರಿಸಿದ್ದರು. ಈ ಮೂಲಕ ವೀರೆಂದ್ರ ಸೆಹವಾಗ್ ಬಳಿಕ ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ಏಕೈಕ ಭಾರತೀಯ ಬ್ಯಾಟರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಆದರೆ ಇದಾದ ಬಳಿಕ ಕರುಣ್ ನಾಯರ್ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು.

VISTARANEWS.COM


on

Karun Nair
Koo

ಲಂಡನ್​: ಇಂಗ್ಲೆಂಡ್​ ವಿರುದ್ಧ 2016ರಲ್ಲಿ ಚೆನ್ನೈನಲ್ಲಿ ನಡೆದ ಟೆಸ್ಟ್​ ಪಂದ್ಯದಲ್ಲಿ ತ್ರಿಶತಕ ಸಿಡಿಸಿ ಭರವಸೆ ಮೂಡಿಸಿದ್ದ ಕರುಣ್​ ನಾಯರ್​ ಬಳಿಕ ರಾಷ್ಟ್ರೀಯ ತಂಡದಲ್ಲಿ ಸರಿಯಾದ ಅವಕಾಶ ಸಿಗದೆ ಸುಮಾರು ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ದೇಶೀಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ ಕೂಡ ಅವರನ್ನು ಟೀಮ್​ ಇಂಡಿಯಾ ಕಡೆಗಣಿಸುತ್ತಲೇ ಬಂದಿತ್ತು. ಇದೀಗ ಕರುಣ್​ ನಾಯರ್(Karun Nair)​ ಕೌಂಟಿ ಕ್ರಿಕೆಟ್​ನಲ್ಲಿ(County Championship) ದ್ವಿಶತಕ ಬಾರಿಸಿ ಮಿಂಚಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್ ಅಜೇಯ ತ್ರಿಶತಕ ಬಾರಿಸಿದ್ದರು. ಈ ಮೂಲಕ ವೀರೆಂದ್ರ ಸೆಹವಾಗ್ ಬಳಿಕ ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ಏಕೈಕ ಭಾರತೀಯ ಬ್ಯಾಟರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಆದರೆ ಇದಾದ ಬಳಿಕ ಕರುಣ್ ನಾಯರ್ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. ಕಳೆದ ವರ್ಷ ಪ್ರೀತಿಯ ಕ್ರಿಕೆಟ್, ನನಗೆ ಇನ್ನೂ ಒಂದು ಅವಕಾಶ ನೀಡಿ.” ಎಂದು ಕರುಣ್​ ಟ್ವೀಟ್​ ಮೂಲಕ ಕೇಳಿಕೊಂಡಿದ್ದರು. ಆದರೂ ಕೂಡ ಅವರಿಗೆ ಅವಕಾಶ ಸಿಗಲಿಲ್ಲ. ದೇಶೀಯ ಕ್ರಿಕೆಟ್​ನಲ್ಲಿಯೂ ಕರ್ನಾಟಕ ತಂಡದ ಪರ ಸರಿಯಾದ ಅವಕಾಶ ಸಿಗದೇ ಇದ್ದ ಹಿನ್ನೆಲೆ ಅವರು ರಾಜ್ಯ ತಂಡ ತೊರೆದು ವಿದರ್ಭ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. 2023-24ನೇ ಸಾಲಿನ ರಣಜಿಯಲ್ಲಿ ವಿದರ್ಭ ಪರ ಉತ್ತಮ ಬ್ಯಾಟಿಂಗ್​ ಪ್ರದರ್ಶನವನ್ನೂ ತೋರಿದ್ದರು.

ಕೌಂಟಿ ಚಾಂಪಿಯನ್‌ಶಿಪ್​ನಲ್ಲಿ ನಾರ್ಥಾಂಪ್ಟನ್‌ಶೈರ್ ತಂಡವನ್ನು ಪ್ರತಿನಿಧಿಸುತ್ತಿರುವ ಕರುಣ್, ಗ್ಲಾಮೋರ್ಗನ್ ತಂಡದ ವಿರುದ್ಧ ಅಜೇಯ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. 253 ಎಸೆತಗಳನ್ನು ಎದುರಿಸಿ ಅಜೇಯ 202 ರನ್ ಗಳಿಸಿದರು. ನಾಯರ್ ಅವರ ಈ ಅಮೋಘ ಆಟದಿಂದಾಗಿ ನಾರ್ಥಾಂಪ್ಟನ್‌ಶೈರ್ ತಂಡ 334 ರನ್‌ಗಳಿಸಿ ಮೊದಲ ಇನ್ನಿಂಗ್ಸ್ ಮುನ್ನಡೆಯೊಂದಿಗೆ 6 ವಿಕೆಟ್‌ಗೆ 605 ರನ್ ಗಳಿಸಿದೆ.

32 ವರ್ಷದ ಕರುಣ್ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 6 ಟೆಸ್ಟ್ ಮತ್ತು 2 ಏಕ ದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ನಲ್ಲಿ ತ್ರಿಶತಕ ಸೇರಿದಂತೆ ಒಟ್ಟು 374 ರನ್ ಗಳಿಸಿದ್ದಾರೆ. ಇದರ ಜತೆಗೆ ಏಕ ದಿನ ಕ್ರಿಕೆಟ್‌ನಲ್ಲಿ 2 ಪಂದ್ಯಗಳಲ್ಲಿ 46 ರನ್ ಗಳಿಸಿದ್ದಾರೆ. ಜೂನ್ 2016 ರಂದು ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನು ಆಡಿದ್ದರು. ಇದಾಗ ಬಳಿಕ ಅವರು ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿಲ್ಲ.

ಇದನ್ನೂ ಓದಿ IPL 2024 Points Table: ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ರಾಜಸ್ಥಾನ್​

ದೇಶೀಯ ಕ್ರಿಕೆಟ್​ನಲ್ಲಿ ಉತ್ತಮ ಸಾಧನೆ

ಕರುಣ್ ನಾಯರ್ ಪ್ರಥಮ ದರ್ಜೆ ಕ್ರಿಕೆಟ್‌ ನಲ್ಲಿ 49.75 ಸರಾಸರಿಯಲ್ಲಿ 19 ಶತಕ ಮತ್ತು 32 ಅರ್ಧ ಶತಕಗಳೊಂದಿಗೆ 7164 ರನ್ ಗಳಿಸಿದ್ದಾರೆ. 101 ಲಿಸ್ಟ್ ‘ಎ’ ಪಂದ್ಯಗಳಲ್ಲಿ 3 ಶತಕ ಮತ್ತು 13 ಅರ್ಧಶತಕಗಳೊಂದಿಗೆ 2349 ರನ್ ಗಳಿಸಿದ್ದಾರೆ. 157 ಟಿ20 ಪಂದ್ಯಗಳಲ್ಲಿ ಅವರು 2 ಶತಕ ಮತ್ತು 18 ಅರ್ಧ ಶತಕಗಳ ಜತೆಗೆ 132.41 ಸ್ಟ್ರೈಕ್ ರೇಟ್‌ನಲ್ಲಿ 3207 ರನ್ ಗಳಿಸಿದ್ದಾರೆ.

Continue Reading

ಕ್ರೀಡೆ

CSK vs LSG: ಇಂದಿನ ಲಕ್ನೋ-ಚೆನ್ನೈ ಪಂದ್ಯಕ್ಕೆ ಮಳೆ ಭೀತಿ

CSK vs LSG: ಚೆನ್ನೈಯ ಕರಾವಳಿ ಭಾಗದಲ್ಲಿಯೂ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿದಂಬರಂ ಸ್ಟೇಡಿಯಂ ಕೂಡ ಸಮುದ್ರ ತಟದಲ್ಲಿರುವ ಕಾರಣ ರಾತ್ರಿ ಮೇಳೆ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

CSK vs LSG
Koo

ಚೆನ್ನೈ: ಶುಕ್ರವಾರವಷ್ಟೇ ಚೆನ್ನೈ ಸೂಪರ್​ ಕಿಂಗ್ಸ್(CSK vs LSG)​ ವಿರುದ್ಧ ತವರಿನಲ್ಲಿ ಅಮೋಘ ಗೆಲುವು ಸಾಧಿಸಿದ ಕನ್ನಡಿಗ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ಸೂಪರ್​ ಜೈಂಟ್ಸ್​ ಮತ್ತೆ ಚೆನ್ನೈ ವಿರುದ್ಧ ಇಂದು ಪಂದ್ಯವನ್ನಾಡಲು ಸಜ್ಜಾಗಿದೆ. ಈ ಬಾರಿ ಚೆನ್ನೈಯಲ್ಲಿ ಪಂದ್ಯ ಸಾಗಲಿದೆ. ಈ ಪಂದ್ಯಕ್ಕೆ ಮಳೆಯ ಭೀತಿ ಕೂಡ ಎದುರಾಗಿದೆ.

ಈವರೆಗೆ ತವರಿನಲ್ಲಿ ಅಜೇಯ ದಾಖಲೆ ಕಾಯ್ದುಕೊಂಡು ಬಂದಿರುವ ಚೆನ್ನೈಗೆ ಲಕ್ನೋ ಮೊದಲ ಸೋಲುಣಿಸಿತೇ ಎನ್ನುವುವುದು ಇಂದಿನ ಪಂದ್ಯದ ಕೌತುಕ. ಕೆ.ಎಲ್​ ರಾಹುಲ್​ ಅವರು ಚೆಪಾಕ್​ ಮೈದಾನದಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ. ಇಲ್ಲಿ ಹಲವು ಶತಕ ಕೂಡ ಬಾರಿಸಿದ್ದಾರೆ. ಹೀಗಾಗಿ ಅವರಿಗೆ ಇದು ನೆಚ್ಚಿನ ಮೈದಾನವಾಗಿದೆ.

ಮಳೆ ಸಾಧ್ಯತೆ


ಕರ್ನಾಟಕದ ಕರಾವಳಿ ಭಾಗದಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದ್ದು. ಚೆನ್ನೈಯ ಕರಾವಳಿ ಭಾಗದಲ್ಲಿಯೂ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿದಂಬರಂ ಸ್ಟೇಡಿಯಂ ಕೂಡ ಸಮುದ್ರ ತಟದಲ್ಲಿರುವ ಕಾರಣ ರಾತ್ರಿ ಮೇಳೆ ಮಳೆಯಾಗುವ ಸಾಧ್ಯತೆ ಇದೆ. ಒಂದೊಮ್ಮೆ ಇಂದಿನ ಪಂದ್ಯಕ್ಕೆ ಮಳೆ ಬಂದು ಪಂದ್ಯ ರದ್ದಾದರೆ ಉಭಯ ತಂಡಗಳ ಪ್ಲೇ ಆಫ್​ ಹಾದಿಗೆ ಹಿನ್ನಡೆಯಾಗಲಿದೆ. ಸದ್ಯ ಅಂಕಪಟ್ಟಿಯಲ್ಲಿ ಚೆನ್ನೈ ಮತ್ತು ಲಕ್ನೋ ಕ್ರಮವಾಗಿ 4 ಮತ್ತು 5ನೇ ಸ್ಥಾನಿಯಾಗಿದೆ.

ಈ ಪಂದ್ಯಕ್ಕೂ ಮಾಯಾಂಕ್‌ ಗೈರು


ಈ ಬಾರಿಯ ಐಪಿಎಲ್​ನಲ್ಲಿ ಶರವೇಗದ ಸೆತಗಳನ್ನು ಎಸೆದು ಭಾರೀ ಸಂಚಲನ ಮೂಡಿಸಿದ ಮಾಯಾಂಕ್‌ ಯಾದವ್‌ ಅವರು ಈ ಪಂದ್ಯಕ್ಕು ಗೈರಾಗಲಿದ್ದಾರೆ. ಗಾಯದಿಂದ ಸಂಪೂರ್ಣವಾಗಿ ಚೇತರಿಕೆ ಕಾಣದ ಅವರಿಗೆ ಈ ಪಂದ್ಯಕ್ಕೂ ವಿಶ್ರಾಂತಿ ನೀಡಲಾಗಿದೆ. ಮುಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ.

ಇದನ್ನೂ ಓದಿ IPL 2024 : ಮುಂಬೈ ವಿರುದ್ಧ ರಾಜಸ್ಥಾನ್​ ತಂಡಕ್ಕೆ 9 ವಿಕೆಟ್​ ಅಮೋಘ​ ಗೆಲುವು

ಚೆನ್ನೈ ತಂಡದ ಪರ ಆರಂಭಿಕ ಹಂತದಲ್ಲಿ ಮಿಂಚಿದ್ದ ನ್ಯೂಜಿಲ್ಯಾಂಡ್​ನ ಆಟಗಾರರಾದ ರಚಿನ್​ ರವೀಂದ್ರ ಮತ್ತು ಡೇರಿಯಲ್ ಮಿಚೆಲ್​ ಈಗ ಮಂಕಾಗಿದ್ದಾರೆ. ಕಳೆದ 3 ಮೂರುಗಳನ್ನು ಗಮನಿಸುವಾಗ ಅವರ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿ ಕಂಡುಬಂದಿಲ್ಲ. ಇಂಪ್ಯಾಕ್ಟ್​ ಆಟಗಾರನಾಗಿ ಆಡುತ್ತಿರುವ ಶಿವಂ ದುಬೆ ಪ್ರತಿ ಪಂದ್ಯದಲ್ಲಿಯೂ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಮಾಜಿ ನಾಯಕ ಧೋನಿ ಕೂಡ ಕೆಳ ಕ್ರಮಾಂಕದಲ್ಲಿ ಆಡಲಿಳಿದು ದೊಡ್ಡ ಹೊಡೆತಗಳ ಮೂಲಕ ರನ್​ ಗಳಿಸುವಲ್ಲಿ ಯಶಸ್ಸು ಕಾಣುತ್ತಿದ್ದಾರೆ.​

ಸಂಭಾವ್ಯ ತಂಡ


ಲಕ್ನೋ
: ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್.

ಚೆನ್ನೈ: ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆ), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮುಸ್ತಫಿಜುರ್ ರೆಹಮಾನ್, ಮತೀಶ ಪತಿರಾಣ.

Continue Reading
Advertisement
Narendra Modi and Siddaramaiah
ರಾಜಕೀಯ10 mins ago

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

Gukesh D
ಕ್ರೀಡೆ10 mins ago

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

baba ramdev supreme court
ಪ್ರಮುಖ ಸುದ್ದಿ11 mins ago

Patanjali Case: ಜಾಹೀರಾತು ಗಾತ್ರದಲ್ಲೇ ಕ್ಷಮಾಪಣೆ ಕೇಳಿ: ಬಾಬಾ ರಾಮ್‌ದೇವ್‌ ಬೆವರಿಳಿಸಿದ ಸುಪ್ರೀಂ ಕೋರ್ಟ್‌

Murder Case in raichur
ರಾಯಚೂರು15 mins ago

Murder Case : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ

Lok Sabha Election-2024
Latest20 mins ago

Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

Lok Sabha Election 2024 KP Nanjundi resigns from Legislative Council
Lok Sabha Election 202440 mins ago

Lok Sabha Election 2024: ವಿಧಾನ ಪರಿಷತ್‌ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ; ಕಾಂಗ್ರೆಸ್‌ ಸೇರ್ಪಡೆ?

gold rate today kajal
ಚಿನ್ನದ ದರ46 mins ago

Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Bengaluru Karaga 2024
ಬೆಂಗಳೂರು53 mins ago

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

balakot airstrike RKS bhadauria
ಪ್ರಮುಖ ಸುದ್ದಿ1 hour ago

Balakot Airstrike: ನಮ್ಮ ಯೋಧರ ಕೂದಲೂ ಕೊಂಕದಂತೆ ಪಾಕ್‌ ವಾಯುಪಡೆ ಭೇದಿಸಿ ದಾಳಿ ನಡೆಸಲಾಗಿತ್ತು: ಮಾಜಿ ಐಎಎಫ್‌ ಮುಖ್ಯಸ್ಥ

Viral Video
ಕ್ರೀಡೆ1 hour ago

Viral Video: ಐಪಿಎಲ್​​ ಪಂದ್ಯದ ವೇಳೆ ಪಾಕಿಸ್ತಾನ ಟಿ20 ವೀಕ್ಷಿಸಿದ ಅಭಿಮಾನಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು20 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ21 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು23 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌