ಚೆನ್ನೈ: 16ನೇ ಆವೃತ್ತಿಯ ಐಪಿಎಲ್ ಟೂರ್ನಿ ಪ್ಲೇ ಆಫ್ ಹಂತಕ್ಕೆ ಬಂದು ನಿಂತಿದೆ. ಪ್ರತಿ ತಂಡಗಳ ಮಧ್ಯೆ ಜಿದ್ದಾಜಿದ್ದಿನ ಪಂದ್ಯಗಳು ಏರ್ಪಟ್ಟಿದೆ. ತಮ್ಮ ನೆಚ್ಚಿನ ತಂಡಗಳ ಪಂದ್ಯವನ್ನು ನೋಡಲು ಅಭಿಮಾನಿಗಳು ಟಿಕೆಟ್ಗಾಗಿ ರಾತ್ರಿ ಹಗಲು ಲೆಕ್ಕಿಸದೆ ಸರತಿ ಸಾಲಿನಲ್ಲಿ ನಿಂತು ಕಾದ ಹಲವು ನಿದರ್ಶನಗಳನ್ನು ನಾವು ಈಗಾಗಲೇ ನೋಡಿದ್ದೇವೆ. ಇನ್ನು ಕೆಲವು ಕಡೆ ಟಿಕೆಟ್ಗಾಗಿ ಮುಗಿಬಿದ್ದ ಜನರನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು ಉಂಟು. ಆದರೆ ಇಲ್ಲೊಬ್ಬ ಭೂಪ ಸ್ಟೇಡಿಯಂಗೆ ತೆರಳಿ ಮೊಬೈಲ್ನಲ್ಲಿ ಪಂದ್ಯ ವೀಕ್ಷಣೆ ಮಾಡಿ ಸುದ್ದಿಯಾಗಿದ್ದಾನೆ.
ಮೇ 10 ರಂದು ಚೆನ್ನೈಯ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಕ್ರಿಕೆಟ್ ಅಭಿಮಾನಿಯೊಬ್ಬ ಸ್ಟೇಡಿಯಂನ ಕುರ್ಚಿಯಲ್ಲಿ ಮಲಗಿ ತನ್ನ ಮೊಬೈಲ್ ಮೂಲಕ ಪಂದ್ಯವನ್ನು ವೀಕ್ಷಿಸಿದ್ದಾನೆ. ಈ ವಿಡಿಯೊವನ್ನು ಹಂಚಿಕೊಂಡಿರುವ ನೆಟ್ಟಿಗರು ಹಲವು ರೀತಿಯಲ್ಲಿ ತಮಾಷೆಯಾಗಿ ಟ್ರೋಲ್ ಮಾಡಿದ್ದಾರೆ. ಕೆಲವರು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಜಡೇಜಾ ಬದಲು ಇವರಿಗೆ ನೀಡಬೇಕಿತ್ತು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಈತ ನಿಜವಾದ ಲೆಜೆಂಡ್ ಎಂದು ಹೇಳಿದ್ದಾರೆ.
ಇದನ್ನೂ ಓದಿ IPL 2023: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಹೈದರಾಬಾದ್
ಪಂದ್ಯದಲ್ಲಿ ಸೋಲು ಕಂಡಿದ್ದ ಡೆಲ್ಲಿ
ಪ್ರಸಕ್ತ ಆವೃತ್ತಿಯ ಐಪಿಎಲ್ನಲ್ಲಿ ಇದೇ ಮೊದಲ ಬಾರಿ ಮುಖಾಮುಖಿಯಾದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ 27 ರನ್ಗಳ ಗೆಲುವು ದಾಖಲಿಸಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಪಾಲಿನ ಆಟದಲ್ಲಿ 8 ವಿಕೆಟ್ ಕಳೆದುಕೊಂಡು 140 ರನ್ ಗಳಿಸಿ ಶರಣಾಗಿತ್ತು.