UEFA | ವಿಮೆನ್ಸ್‌ ಚಾಂಪಿಯನ್ಸ್ ಲೀಗ್‌ನಲ್ಲಿ ಆಡಿದ ಭಾರತದ ಮೊದಲ ಮಹಿಳಾ ಫುಟ್ಬಾಲ್ ಆಟಗಾರ್ತಿ ಮನಿಶಾ - Vistara News

ಕ್ರೀಡೆ

UEFA | ವಿಮೆನ್ಸ್‌ ಚಾಂಪಿಯನ್ಸ್ ಲೀಗ್‌ನಲ್ಲಿ ಆಡಿದ ಭಾರತದ ಮೊದಲ ಮಹಿಳಾ ಫುಟ್ಬಾಲ್ ಆಟಗಾರ್ತಿ ಮನಿಶಾ

ಭಾರತದ ಮಹಿಳಾ ಫುಟ್ಬಾಲ್ ಆಟಗಾರ್ತಿ ಮನಿಶಾ ಕಲ್ಯಾಣ್‌ UEFA ವಿಮೆನ್ಸ್‌ ಚಾಂಪಿಯನ್ಸ್ ಲೀಗ್‌ನಲ್ಲಿ ಆಡಿದ ಭಾರತದ ಮೊದಲ ಅಟಗಾರ್ತಿ ಎನಿಸಿಕೊಂಡಿದ್ದಾರೆ.

VISTARANEWS.COM


on

uefa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ : ಭಾರತದ ಯುವ ಸ್ಟ್ರೈಕರ್‌ ಮನಿಶಾ ಕಲ್ಯಾಣ್‌ UEFA ವಿಮೆನ್ಸ್‌ ಚಾಂಪಿಯನ್ಸ್ ಲೀಗ್‌ನಲ್ಲಿ ಆಡಿದ ಭಾರತದ ಮೊದಲ ಮಹಿಳಾ ಫುಟ್ಬಾಲ್‌ ಆಟಗಾರ್ತಿ ಎಂಬ ಖ್ಯಾತಿಯನ್ನು ತಮ್ಮದಾಗಿಕೊಂಡಿದ್ದಾರೆ. ಅವರು ಯುರೋಪಿಯನ್‌ ಕ್ಲಬ್‌ ಕಾಂಪಿಟೀಷನ್‌ನಲ್ಲಿ ಅಪೊಲಾನ್‌ ಲೇಡಿಸ್‌ ಎಫ್‌ಸಿ ಕ್ಲಬ್‌ ಪರ ಕಣಕ್ಕೆ ಇಳಿಯುವ ಮೂಲಕ ಈ ಸಾಧನೆ ಮಾಡಿದ್ದಾರೆ.

೨೦ ವರ್ಷದ ಭಾರತದ ಆಟಗಾರ್ತಿ ಪಂದ್ಯದ ೬೦ನೇ ನಿಮಿಷದಲ್ಲಿ ತಮ್ಮ ತಂಡದ ಮರಿಲಿನಾ ಜಾರ್ಜಿಯೊ ಅವರ ಬದಲಿಗೆ ಮೈದಾನಕ್ಕೆ ಇಳಿಯುವ ಮೂಲಕ ವಿಮೆನ್ಸ್‌ ಚಾಂಪಿಯನ್ಸ್ ಲೀಗ್‌ನಲ್ಲಿ ಆಡಿದ ಶ್ರೇಯಸ್ಸು ತಮ್ಮದಾಗಿಸಿಕೊಂಡರು. ಆ ಪಂದ್ಯದಲ್ಲಿ ಮನಿಶಾ ಅವರ ತಂಡ ಲ್ಯಾಟ್ವಿನಾ ಟಾಪ್‌ ಫೈಟ್ ಕ್ಲಬ್‌ ವಿರುದ್ಧ ೩-೦ ಗೋಲ್‌ಗಳಿಂದ ಜಯ ಸಾಧಿಸಿತು.

ಮನಿಶಾ ಕಲ್ಯಾಣ್‌ ರಾಷ್ಟ್ರೀಯ ತಂಡದಲ್ಲೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಅಲ್ಲದೆ, ಇಂಡಿಯನ್‌ ವಿಮೆನ್ಸ್‌ ಲೀಗ್‌ನಲ್ಲಿ ಗೋಕುಲಮ್‌ ಕೇರಳ ತಂಡದ ಪರವೂ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಅದಕ್ಕಾಗಿ ೨೦೨೧-೨೨ರಲ್ಲಿ ಎಐಎಫ್‌ಎಫ್‌ನ ವರ್ಷದ ಫುಟ್ಬಾಲ್‌ ಆಟಗಾರ್ತಿ ಪ್ರಶಸ್ತಿ ಪಡೆದುಕೊಂಡಿದ್ದರು. ಅತ್ಯುತ್ತಮ ಪ್ರದರ್ಶನ ತೋರುತ್ತಿರುವ ಅವರ ಜತೆ ಅಪೊಲಾನ್‌ ಲೇಡಿಸ್‌ ಎಫ್‌ಸಿ ಕ್ಲಬ್‌ ಒಪ್ಪಂದ ಮಾಡಿಕೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

India women’s squad: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ; ತಂಡಕ್ಕೆ ಮರಳಿದ ಪ್ರಿಯಾ ಪೂನಿಯಾ

India women’s squad: 21 ವರ್ಷದ ಶ್ರೇಯಾಂಕಾ ಪಾಟೀಲ್ ಡಬ್ಲ್ಯುಪಿಎಲ್‌ನಲ್ಲಿ ಈ ಬಾರಿ ಆರ್‌ಸಿಬಿ ತಂಡದ ಪರ 13 ವಿಕೆಟ್‌ ಪಡೆದು ಮಿಂಚಿದ್ದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ಡಿಸೆಂಬರ್ 6ರಂದು ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆಡುವ ಮೂಲಕ ಭಾರತ ಹಿರಿಯರ ಮಹಿಳಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

VISTARANEWS.COM


on

India women’s squad
Koo

ನವದೆಹಲಿ: ಜೂನ್ 16ರಿಂದ ಆರಂಭಗೊಳ್ಳಲಿರುವ ದಕ್ಷಿಣ ಆಫ್ರಿಕಾ(India women’s vs South Africa women’s) ವಿರುದ್ಧದ ಕ್ರಿಕೆಟ್​ ಸರಣಿಗೆ ಭಾರತ ಮಹಿಳಾ ತಂಡ(India women’s squad) ಪ್ರಕಟಗೊಂಡಿದೆ. ಉದಯೋನ್ಮುಖ ಆಟಗಾರ್ತಿ, ಕರ್ನಾಟಕದ ಶ್ರೇಯಾಂಕಾ ಪಾಟೀಲ್​ ಏಕದಿನ ಮತ್ತು ಟಿ20 ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ. ಉಭಯ ತಂಡಗಳ ನಡುವೆ ಟೆಸ್ಟ್​, ಟಿ20 ಮತ್ತು ಏಕದಿನ ಸರಣಿಗಳು ನಡೆಯಲಿವೆ.

ಹರ್ಮನ್‌ಪ್ರೀತ್‌ ಕೌರ್‌ ಅವರು ಮೂರು ಮಾದರಿಯಲ್ಲೂ ಭಾರತ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿದ್ದಾರೆ. ಗಾಯದಿಂದ ವಿಶ್ರಾಂತಿ ಪಡೆದಿದ್ದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಈ ಸರಣಿ ಮೂಲಕ ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ಕಳೆದ ಬಾಂಗ್ಲಾ ವಿರುದ್ಧದ ಸರಣಿಯಿಂದ ಅವರು ಹೊರಗುಳಿದಿದ್ದರು. ವೇಗಿ ಪೂಜಾ ವಸ್ತ್ರಕರ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ದೇಶೀಯ ಕ್ರಿಕೆಟ್​ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿದ್ದ ಅಗ್ರ ಕ್ರಮಾಂಕದ ಬ್ಯಾಟರ್ ಪ್ರಿಯಾ ಪೂನಿಯಾ ಏಕದಿನ ಮತ್ತು ಟೆಸ್ಟ್‌ ತಂಡಕ್ಕೆ ಮರಳಿದ್ದಾರೆ. 21 ವರ್ಷದ ಶ್ರೇಯಾಂಕಾ ಪಾಟೀಲ್ ಡಬ್ಲ್ಯುಪಿಎಲ್‌ನಲ್ಲಿ ಈ ಬಾರಿ ಆರ್‌ಸಿಬಿ ತಂಡದ ಪರ 13 ವಿಕೆಟ್‌ ಪಡೆದು ಮಿಂಚಿದ್ದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ಡಿಸೆಂಬರ್ 6ರಂದು ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆಡುವ ಮೂಲಕ ಭಾರತ ಹಿರಿಯರ ಮಹಿಳಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ಪಂದ್ಯಾವಳಿಗಳು ಜೂನ್ 16ರಿಂದ ಜುಲೈ 9ರ ವರೆಗೆ ನಡೆಯಲಿದೆ. ಒಂದು ಟೆಸ್ಟ್‌, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳು ನಡೆಯಲಿವೆ. ಏಕದಿನ ಪಂದ್ಯಗಳು ಬೆಂಗಳೂರಿನಲ್ಲಿ ಮತ್ತು ಉಳಿದ ಪಂದ್ಯಗಳು ಚೆನ್ನೈನಲ್ಲಿ ನಡೆಯಲಿವೆ.

ಏಕದಿನ ತಂಡ


ಹರ್ಮನ್‌ಪ್ರೀತ್‌ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್‌ ಕೀಪರ್‌), ಉಮಾ ಚೆಟ್ರಿ (ವಿಕೆಟ್ ಕೀಪರ್‌), ದಯಾಳನ್ ಹೇಮಲತಾ, ರಾಧಾ ಯಾದವ್, ಆಶಾ ಶೋಭನ, ಶ್ರೇಯಾಂಕಾ ಪಾಟೀಲ್​, ಸೈಕಾ ಇಶಾಕ್, ಪೂಜಾ ವಸ್ತ್ರಕರ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ಪ್ರಿಯಾ ಪೂನಿಯಾ.

ಟಿ20 ತಂಡ


ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಶುಭಾ ಸತೀಶ್, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆ), ಉಮಾ ಚೆಟ್ರಿ (ವಿಕೆ), ದೀಪ್ತಿ ಶರ್ಮಾ, ಸ್ನೇಹ ರಾಣಾ, ಸೈಕಾ ಇಶಾಕ್, ರಾಜೇಶ್ವರಿ ಗಾಯಕ್‌ವಾಡ್, ಪೂಜಾ ವಸ್ತ್ರಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಮೇಘನಾ ಸಿಂಗ್, ಪ್ರಿಯಾ ಪುನಿಯಾ.

ಇದನ್ನೂ ಓದಿ T20 World Cup 2024: ಬಿಸಿಲಿನಲ್ಲೇ ಬ್ಯಾಟಿಂಗ್​-ಬೌಲಿಂಗ್​ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ ಆಟಗಾರರು

ಟೆಸ್ಟ್ ತಂಡ


ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದಯಾಲನ್ ಹೇಮಲತಾ, ಉಮಾ ಚೆಟ್ರಿ (ವಿಕೆ), ರಿಚಾ ಘೋಷ್ (ವಿಕೆ), ಜೆಮಿಮಾ ರೋಡ್ರಿಗಸ್, ಸಜನಾ ಸಜೀವನ್, ದೀಪ್ತಿ ಶರ್ಮಾ, ಶ್ರೇಯಾಂಕಾ ಪಾಟೀಲ್, ರಾಧಾ ಯಾದವ್, ಅಮಾನ್ಜೋತ್ ಕೌರ್, ಎ. ಸೋಭಾನಾ, ಪೂಜಾ ವಸ್ತ್ರಾಕರ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ. ಸ್ಟ್ಯಾಂಡ್‌ಬೈ: ಸೈಕಾ ಇಶಾಕ್.

Continue Reading

ಕ್ರೀಡೆ

T20 World Cup 2024: ಬಿಸಿಲಿನಲ್ಲೇ ಬ್ಯಾಟಿಂಗ್​-ಬೌಲಿಂಗ್​ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ ಆಟಗಾರರು

T20 World Cup 2024: ಸ್ಥಳೀಯ ವಾತಾವರಣಕ್ಕೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಭಾರತದ ಆಟಗಾರರು ಸುಡು ಬಿಸಿಲನ್ನು ಲೆಕ್ಕಿಸದೆ ಶುಕ್ರವಾರ ಹಗಲಿನಲ್ಲೇ ಅಭ್ಯಾಸ ನಡೆಸಿದ್ದಾರೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್‌: ಟಿ20 ವಿಶ್ವಕಪ್​ಗೆ(T20 World Cup 2024) ಟೀಮ್​ ಇಂಡಿಯಾದ(Team India) ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಶುಕ್ರವಾರ ಬೆಳಗ್ಗೆ ನ್ಯೂಯಾರ್ಕ್‌ನ ಮೈದಾನದಲ್ಲಿ ಆಟಗಾರರು ಬ್ಯಾಟಿಂಗ್​ ಮತ್ತು ಬೌಲಿಂಗ್​ ಅಭ್ಯಾಸದಲ್ಲಿ ಕಾಣಿಸಿಕೊಂಡರು. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಯಕ ರೋಹಿತ್‌ ಶರ್ಮಾ, ಶುಭಮನ್​ ಗಿಲ್​, ಉಪನಾಯಕ ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಜಸ್‌ಪ್ರೀತ್‌ ಬುಮ್ರಾ, ರಿಷಭ್‌ ಪಂತ್‌, ಮೊಹಮದ್ ಸಿರಾಜ್‌, ಸೂರ್ಯಕುಮಾರ್‌ ಯಾದವ್‌, ಕುಲ್ದೀಪ್‌ ಯಾದವ್‌, ಸಂಜು ಸ್ಯಾಮ್ಸನ್‌, ಅರ್ಶ್‌ದೀಪ್‌ ಸಿಂಗ್‌, ಶಿವಂ ದುಬೆ ಸೇರಿದಂತೆ ಬಹುತೇಕ ಆಟಗಾರರು ಬ್ಯಾಟಿಂಗ್​ ಅಭ್ಯಾಸ ನಡೆಸಿದರು. ಅಮೆರಿಕದ ವಾತಾವರಣಕ್ಕೆ ಹೊಂದಿಕೊಳ್ಳುವ ಸಲುವಾಗಿ ಬುಧವಾರ ಮತ್ತು ಗುರುವಾರ ಆಟಗಾರರು ಕೇವಲ ಜಾಗಿಂಗ್‌ ನಡೆಸಿ, ಫುಟ್ಬಾಲ್‌ ಆಡಿದ್ದರು.

ಭಾರತಕ್ಕೆ ಸವಾಲು


ಭಾರತೀಯ ಆಟಗಾರರು ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ವಾತಾವರಣಕ್ಕೆ ಹೊಂದಿಕೊಳ್ಳುವ ಸವಾಲು ಕೂಡ ಇದೆ. ಏಕೆಂದರೆ ಇಲ್ಲಿ ಹಗಲಿನಲ್ಲಿ ಪಂದ್ಯಗಳು ನಡೆಯುತ್ತವೆ. ಹೀಗಾಗಿ ಸ್ಥಳೀಯ ವಾತಾವರಣಕ್ಕೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಭಾರತದ ಆಟಗಾರರು ಸುಡು ಬಿಸಿಲನ್ನು ಲೆಕ್ಕಿಸದೆ ಶುಕ್ರವಾರ ಹಗಲಿನಲ್ಲೇ ಅಭ್ಯಾಸ ನಡೆಸಿದ್ದಾರೆ. ಸಾಮಾನ್ಯವಾಗಿ ಇಲ್ಲಿ 25ರಿಂದ 27 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಹೀಗಾಗಿ ವಿಶ್ವಕಪ್‌ ಆರಂಭಕ್ಕೂ ಮುನ್ನ ಭಾರತೀಯ ಆಟಗಾರರಿಗೆ ಈ ವಾತಾವರಣಕ್ಕೆ ಒಗ್ಗಿಕೊಳ್ಳುವ ಅಗತ್ಯವಿದೆ. ಇದೇ ಮೊದಲ ಬಾರಿ ಅಮೆರಿಕದಲ್ಲಿ ಆಡಲು ಸಜ್ಜಾಗಿದ್ದು, ಕಠಿಣ ಸವಾಲು ಎದುರಾಗಲಿದೆ.

ಇದನ್ನೂ ಓದಿ

‘ಮೊದಲ ಬಾರಿ ನಾವು ನ್ಯೂಯಾರ್ಕ್‌ನಲ್ಲಿ ಕ್ರಿಕೆಟ್‌ ಆಡುತ್ತಿದ್ದೇವೆ. ಇದೊಂದು ಖುಷಿಯ ಸಂದರ್ಭ’ ಎಂದು ಆಲ್‌ರೌಂಡರ್‌ ರವೀಂದ್ರ ಜಡೇಜಾ ಹೇಳಿದರು. ನಾಯಕ ರೋಹಿತ್​ ಕೂಡ ನ್ಯೂಯಾರ್ಕ್​ ವಾತಾವರಣಕ್ಕೆ ಹೊಂದಿಕೊಂಡು ಕ್ರಿಕೆಟ್​ ಆಡುವುದು ಸವಾಲಿನಿಂದ ಕೂಡಿರಲಿದೆ ಎಂದರು. ಭಾರತ ನಾಳೆ(ಜೂನ್​ 1) ನಡೆಯುವ ಏಕೈಕ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆಡಲಿದೆ. ಈ ಪಂದ್ಯ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ನ್ಯೂಯಾರ್ಕ್​ಗೆ ತೆರಳಿದ ಕೊಹ್ಲಿ


ಐಪಿಎಲ್​ ಬಳಿಕ ವಿಶ್ರಾಂತಿ ಪಡೆದಿದ್ದ ವಿರಾಟ್​ ಕೊಹ್ಲಿ ಗುರುವಾರ ತಡರಾತ್ರಿ ಮುಂಬೈ ವಿಮಾನ ನಿಲ್ದಾಣದಿಂದ ನ್ಯೂಯಾರ್ಕ್​ಗೆ ಪ್ರಯಾಣ ಬೆಳೆಸಿದರು. ಈ ವೇಳೆ ಅಭಿಮಾನಿಯೊಬ್ಬ ವಿರಾಟ್​ ಕೊಹ್ಲಿಗೆ ಉಡುಗೊರೆ ನೀಡಿ ಗಮನಸೆಳೆದಿದ್ದಾನೆ. ಕೊಹ್ಲಿ ಬಾಂಗ್ಲಾದೇಶ ವಿರುದ್ಧ ನಾಳೆ ನಡೆಯುವ ಅಭ್ಯಾಸ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಪಂದ್ಯ ನಡೆಯುವ ತಾಣ,ಭಾರತದ ಪಂದ್ಯಗಳ ಪ್ರಸಾರದ ಮಾಹಿತಿ ಹೀಗಿದೆ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ ಪಂದ್ಯ ನಡೆಯುವ ತಾಣ,ಭಾರತದ ಪಂದ್ಯಗಳ ಪ್ರಸಾರದ ಮಾಹಿತಿ ಹೀಗಿದೆ

T20 World Cup 2024: ಟೀಮ್​ ಇಂಡಿಯಾದ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8ಗಂಟೆಗೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಹಾಗೂ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ನೇರ ಪ್ರಸಾರದ ಹಕ್ಕನ್ನು ಹೊಂದಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು OTT ಪ್ಲಾಟ್‌ಫಾರ್ಮ್‌ನಲ್ಲಿ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಬಹುದು.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಒಂಬತ್ತನೇ ಆವೃತ್ತಿಯ ಟಿ20 ವಿಶ್ವಕಪ್‌ ಟೂರ್ನಿ(T20 World Cup 2024) ಆರಂಭಕ್ಕೆ ಅಮೆರಿಕ ಮತ್ತು ವೆಸ್ಟ್ ಸಜ್ಜಾಗಿದೆ. ಉಭಯ ದೇಶಗಳು ಟೂರ್ನಿಯ ಜಂಟಿ ಆತಿಥ್ಯವಹಿಸಿಕೊಂಡಿದೆ. ನಾಳೆ(ಜೂನ್​ 1) ನಡೆಯುವ ಉದ್ಘಾಟನ ಪಂದ್ಯದಲ್ಲಿ ಅಮೆರಿಕ ತಂಡ ಕೆನಡಾ ತಂಡದ ಸವಾಲು ಎದುರಿಸಲಿದೆ. ಅಮೆರಿಕ ಇದೇ ಮೊದಲ ಬಾರಿಗೆ ಐಸಿಸಿ ಕ್ರಿಕೆಟ್​ ಟೂರ್ನಿಯ ಆತಿಥ್ಯವಹಿಸಿಕೊಂಡಿ​ದೆ. ವೆಸ್ಟ್‌ ಇಂಡೀಸ್‌ನಲ್ಲಿ ಆರು ಹಾಗೂ ಅಮೆರಿಕದ ಮೂರು ಸೇರಿದಂತೆ ಒಟ್ಟು ಒಂಬತ್ತು ತಾಣಗಳಲ್ಲಿ ವಿಶ್ವಕಪ್ ಆಯೋಜನೆಯಾಗಲಿದೆ.

ಭಾಗವಹಿಸುವ ತಂಡಗಳು


ಭಾರತ, ವೆಸ್ಟ್‌ ಇಂಡೀಸ್, ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್, ಪಾಕಿಸ್ತಾನ, ನ್ಯೂಜಿಲ್ಯಾಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ನೆದರ್ಲೆಂಡ್ಸ್, ಅಫಘಾನಿಸ್ತಾನ, ಬಾಂಗ್ಲಾದೇಶ, ಐರ್ಲೆಂಡ್, ಸ್ಕಾಟ್ಲೆಂಡ್, ಕೆನಡಾ, ನೇಪಾಳ, ಒಮಾನ್, ನಮೀಬಿಯಾ, ಉಗಾಂಡ ಮತ್ತು ಪಪುವಾ ನ್ಯೂಗಿನಿ.

ಟಿ20 ವಿಶ್ವಕಪ್ ವಿಜೇತ ತಂಡಗಳು

ದೇಶವರ್ಷ
ಭಾರತ2007
ಪಾಕಿಸ್ತಾನ2009
ಇಂಗ್ಲೆಂಡ್2010
ವೆಸ್ಟ್‌ಇಂಡೀಸ್2012
ಶ್ರೀಲಂಕಾ2014
ವೆಸ್ಟ್‌ಇಂಡೀಸ್2016
ಆಸ್ಟ್ರೇಲಿಯಾ2021
ಇಂಗ್ಲೆಂಡ್2022

ಪಂದ್ಯ ನಡೆಯುವ ತಾಣ

ವೆಸ್ಟ್‌ಇಂಡೀಸ್ಅಮೆರಿಕ
ನೌರ್ತ್ ಸೌಂಡ್ (ಆಯಂಟಿಗುವಾ ಮತ್ತು ಬಾರ್ಬುಡಾ)ಫ್ಲೋರಿಡಾ (ಲೌಂಡರ್‌ಹಿಲ್ )
ಬ್ರಿಡ್ಜ್‌ಟೌನ್ (ಬಾರ್ಬಡೋಸ್)ನ್ಯೂಯಾರ್ಕ್
ಜಾರ್ಜ್‌ಟೌನ್ (ಗಯಾನ)ಟೆಕ್ಸಾಸ್ (ಡಲ್ಲಾಸ್)
ಗ್ರಾಸ್‌ ಐಲ್ (ಸೇಂಟ್ ಲೂಸಿಯಾ)
ಕಿಂಗ್ಸ್‌ಟೌನ್ (ಸೇಂಟ್ ವಿನ್ಸೆಂಟ್)
ತರೌಬಾ (ಟ್ರಿನಿಡಾಡ್‌ ಆಯಂಡ್‌ ಟೊಬಾಗೊ).

ನಾಲ್ಕು ಗುಂಪುಗಳು


‘ಎ’ ಗುಂಪು: ಭಾರತ, ಪಾಕಿಸ್ತಾನ, ಅಮೆರಿಕ, ಕೆನಡಾ, ಐರ್ಲೆಂಡ್

‘ಬಿ’ ಗುಂಪು: ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಒಮಾನ್, ಇಂಗ್ಲೆಂಡ್

‘ಸಿ’ ಗುಂಪು: ವೆಸ್ಟ್‌ಇಂಡೀಸ್, ಅಪಘಾನಿಸ್ತಾನ, ಉಗಾಂಡ, ಪಪುವಾ ನ್ಯೂಗಿನಿ, ನ್ಯೂಜಿಲೆಂಡ್.

‘ಡಿ’ ಗುಂಪು: ನೆದರ್ಲೆಂಡ್ಸ್, ನೇಪಾಳ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ.

ಭಾರತದ ಪಂದ್ಯಗಳ ಪ್ರಸಾರ

ಟೀಮ್​ ಇಂಡಿಯಾದ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8ಗಂಟೆಗೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಹಾಗೂ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ನೇರ ಪ್ರಸಾರದ ಹಕ್ಕನ್ನು ಹೊಂದಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು ಈ ವರ್ಷದ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಅನ್ನು OTT ಪ್ಲಾಟ್‌ಫಾರ್ಮ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಡಿಸ್ನಿ + ಹಾಟ್‌ಸ್ಟಾರ್​ನಲ್ಲಿ ಪ್ರಸಾರಗೊಳ್ಳಲಿದೆ. 

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಕ್ಷಣಗಣನೆ; ಭಾರತ ಸೇರಿ ಬಲಿಷ್ಠ ತಂಡಗಳ ಪಂದ್ಯದ ವೇಳಾಪಟ್ಟಿ ಇಲ್ಲಿದೆ

20 ತಂಡಗಳು ಭಾಗಿ


ಈ ಬಾರಿ ಟೂರ್ನಿಯಲ್ಲಿ ಗರಿಷ್ಠ 20 ತಂಡಗಳು ಕಣಕ್ಕಿಳಿಯಲಿವೆ. 2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು. ಟೂರ್ನಿಯಲ್ಲೂ ವಿಭಿನ್ನ ಸ್ವರೂಪವಿದೆ. 20 ತಂಡಗಳನ್ನು ತಲಾ ಐದು ತಂಡಗಳಂತೆ ನಾಲ್ಕು ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಗುಂಪು ವಿಭಾಗದಲ್ಲಿ ಪ್ರತಿ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಲಿವೆ. ಪ್ರತಿ ಗುಂಪಿನಿಂದ ತಲಾ ಎರಡು ತಂಡಗಳು ಸೂಪರ್ ಎಂಟರ ಹಂತಕ್ಕೆ ತೇರ್ಗಡೆ ಪಡೆಯಲಿವೆ. ಅಲ್ಲೂ ತಲಾ ನಾಲ್ಕು ತಂಡಗಳ ಎರಡು ಗುಂಪುಗಳು ಇದ್ದು, ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಲಗ್ಗೆ ಇಡಲಿವೆ.

Continue Reading

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ಗೆ ಕ್ಷಣಗಣನೆ; ಭಾರತ ಸೇರಿ ಬಲಿಷ್ಠ ತಂಡಗಳ ಪಂದ್ಯದ ವೇಳಾಪಟ್ಟಿ ಇಲ್ಲಿದೆ

T20 World Cup 2024: ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಬುನಿರೀಕ್ಷಿತ ಪುರುಷರ ಐಸಿಸಿ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ನಾಳೆಯಿಂದ ಆರಂಭಗೊಳ್ಳಲಿದೆ. ಭರ್ತಿ ಒಂದು ತಿಂಗಳ ಕಾಲ ಟೂರ್ನಿ ನಡೆತಲಿದ್ದು ಕ್ರಿಕೆಟ್​ ಅಭಿಮಾನಿಗಳಿಗೆ ಈ ಒಂದು ತಿಂಗಳು ರಸದೌತಣ ಸಿಗಲಿದೆ. ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಗರಿಷ್ಠ 20 ತಂಡಗಳು ಭಾಗವಹಿಸುತ್ತಿವೆ. ಭಾರತ ಮತ್ತು, ಇನ್ನುಳಿದ ಬಲಿಷ್ಠ ತಂಡಗಳ ಪಂದ್ಯದ(T20 World Cup Schedule) ವೇಳಾಪಟ್ಟಿ ಇಂತಿದೆ.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ

ಮೊದಲ ಸುತ್ತಿನ ಇತರ ಪಂದ್ಯಗಳು

ದಿನಾಂಕಪಂದ್ಯಸ್ಥಳ
ಜೂನ್ 3ಶ್ರೀಲಂಕಾ-ದಕ್ಷಿಣ ಆಫ್ರಿಕಾನ್ಯೂಯಾರ್ಕ್
ಜೂನ್​ 7ನ್ಯೂಜಿಲ್ಯಾಂಡ್​-ಅಫಘಾನಿಸ್ತಾನಗಯಾನ
ಜೂನ್​ 7 ಶ್ರೀಲಂಕಾ-ಬಾಂಗ್ಲಾದೇಶಡಲ್ಲಾಸ್
ಜೂನ್​ 8ಆಸ್ಟ್ರೇಲಿಯಾ-ಇಂಗ್ಲೆಂಡ್ಬಾರ್ಬಡೋಸ್​
ಜೂನ್​ 10ದಕ್ಷಿಣ ಆಫ್ರಿಕಾ-ಬಾಂಗ್ಲಾದೇಶನ್ಯೂಯಾರ್ಕ್
ಜೂನ್​ 12ವೆಸ್ಟ್​ ಇಂಡೀಸ್​-ನ್ಯೂಜಿಲ್ಯಾಂಡ್ನ್ಯೂಯಾರ್ಕ್
ಜೂನ್​ 15ಆಸ್ಟ್ರೇಲಿಯಾ-ಸ್ಕಾಟ್ಲೆಂಡ್ಸೇಂಟ್​ ಲೂಸಿಯಾ
ಜೂನ್​ 17ವೆಸ್ಟ್​ ಇಂಡೀಸ್​-ಅಫಘಾನಿಸ್ತಾನಸೇಂಟ್​ ಲೂಸಿಯಾ

ನಾಕೌಟ್​ ಪಂದ್ಯಗಳ ವೇಳಾಪಟ್ಟಿ

ದಿನಾಂಕಪಂದ್ಯಸ್ಥಳ
ಜೂನ್​ 26 ಮೊದಲ ಸೆಮಿಫೈನಲ್ಗಯಾನ
ಜೂನ್​ 27ದ್ವಿತೀಯ ಸೆಮಿಫೈನಲ್ಟ್ರಿನಿಡಾಡ್
ಜೂನ್​ 29ಫೈನಲ್ಬಾರ್ಬಡೋಸ್

ಅಮೆರಿಕದಲ್ಲೇ ಭಾರತದ ಬಹುಪಾಲು ಪಂದ್ಯ


ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ T20 World Cup 2024: ನಾಳೆಯಿಂದ ಟಿ20 ವಿಶ್ವಕಪ್​ ಸಮರ ಆರಂಭ; 20 ತಂಡಗಳ ಮಾಹಿತಿ ಹೀಗಿದೆ

ಮೀಸಲು ದಿನ


ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

4 ಗುಂಪುಗಳ ತಂಡಗಳ ಪಟ್ಟಿ

ಗುಂಪು ಎ- ಭಾರತ, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ಯುಎಸ್​ಎ.

ಗುಂಪು ಬಿ- ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಓಮನ್.

ಗುಂಪು ಸಿ- ನ್ಯೂಜಿಲ್ಯಾಂಡ್​, ಅಫಘಾನಿಸ್ತಾನ, ವೆಸ್ಟ್ ಇಂಡೀಸ್, ಉಗಾಂಡಾ, ಪಿಎನ್​ಜಿ.

ಗುಂಪು ಡಿ- ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ನೆದರ್ಲ್ಯಾಂಡ್ಸ್, ಶ್ರೀಲಂಕಾ, ನೇಪಾಳ.

ಸ್ವರೂಪ ಬದಲು

2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು. ಆದರೆ 2024ರ ಟೂರ್ನಿಯಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ.  ಹಿಂದಿನ ಆವೃತ್ತಿಗಳಿಗಿಂತ ಈ ಬಾರಿ ಟೂರ್ನಿ ವಿಭಿನ್ನ ಸ್ವರೂಪವನ್ನು ಹೊಂದಿದೆ. ಒಟ್ಟು 20 ತಂಡಗಳನ್ನು ತಲಾ ಐದು ತಂಡಗಳಂತೆ ನಾಲ್ಕು ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಗುಂಪು ವಿಭಾಗದಲ್ಲಿ ಪ್ರತಿ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಲಿವೆ. ಪ್ರತಿ ಗುಂಪಿನಿಂದ ತಲಾ ಎರಡು ತಂಡಗಳು ಸೂಪರ್ ಎಂಟರ ಹಂತಕ್ಕೆ ತೇರ್ಗಡೆ ಪಡೆಯಲಿವೆ. ಅಲ್ಲೂ ತಲಾ ನಾಲ್ಕು ತಂಡಗಳ ಎರಡು ಗುಂಪುಗಳು ಇದ್ದು, ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಲಗ್ಗೆ ಇಡಲಿವೆ.

Continue Reading
Advertisement
Kannada Serials TRP Colors Kannada serials not in top 5 Shravani Subramanya is back on track
ಕಿರುತೆರೆ2 mins ago

Kannada Serials TRP: ಟಾಪ್‌ 5ನಲ್ಲಿಲ್ಲ ಕಲರ್ಸ್‌ ಕನ್ನಡ ಧಾರಾವಾಹಿಗಳು: ಟ್ರ್ಯಾಕ್‌ಗೆ ಮರಳಿದ ʻಶ್ರಾವಣಿ ಸುಬ್ರಮಣ್ಯʼ!

theft Case
ಕ್ರೈಂ5 mins ago

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

bhavani revanna sit notice
ಕ್ರೈಂ8 mins ago

Bhavani Revanna: ʼತನಿಖೆ ಬೇಕಿದ್ರೆ ಮನೆಗೇ ಬನ್ನಿʼ ಎಂದ ಭವಾನಿ ರೇವಣ್ಣ; ʼಆಯ್ತು ಅಲ್ಲಿಗೇ ಬರ್ತೀವಿʼ ಎಂದ ಎಸ್‌ಐಟಿ!

Gold Smuggling
ದೇಶ14 mins ago

Gold Smuggling: ಗುದನಾಳದಲ್ಲಿ 1ಕೆಜಿ ಚಿನ್ನ; ಕೇರಳದಲ್ಲಿ ಗಗನಸಖಿ ಅರೆಸ್ಟ್‌

prajwal Revanna Case
ಪ್ರಮುಖ ಸುದ್ದಿ14 mins ago

Prajwal Revanna Case : ಪ್ರಜ್ವಲ್​ನನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ಬಂಧಿಸಿದ್ದು ಯಾಕೆ?

India women’s squad
ಕ್ರೀಡೆ22 mins ago

India women’s squad: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ; ತಂಡಕ್ಕೆ ಮರಳಿದ ಪ್ರಿಯಾ ಪೂನಿಯಾ

Maharaja trailer released Vijay Sethupathi has a secret
ಟಾಲಿವುಡ್24 mins ago

Maharaja Trailer: ವಿಜಯ್‌ ಸೇತುಪತಿ 50ನೇ ಚಿತ್ರದ ʻಮಹಾರಾಜʼ ಟ್ರೈಲರ್‌ ಔಟ್‌: ಫ್ಯಾನ್ಸ್‌ ಫಿದಾ!

Huligemma Temple Road Accident
ಕೊಪ್ಪಳ42 mins ago

Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

Viral Video
ವೈರಲ್ ನ್ಯೂಸ್53 mins ago

Viral Video: ಬೆಂಕಿ ದುರಂತ ಸ್ಥಳದಲ್ಲಿ ಜಮಾಯಿಸಿದ್ದ ಜನ; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

back benchers Movie Kannada song
ಸ್ಯಾಂಡಲ್ ವುಡ್57 mins ago

Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ22 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌