ಕೋಲ್ಕತ್ತಾ: ಪಶ್ಚಿಮ ಬಂಗಾಳ ಕ್ರೀಡಾ ಸಚಿವ, ಟೀಮ್ ಇಂಡಿಯಾದ ಆಟಗಾರ ಮನೋಜ್ ತಿವಾರಿ(Manoj Tiwary) ಅವರು ಎಲ್ಲ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.(Manoj Tiwary announces retirement) ಗುರುವಾರ ಟ್ವಿಟರ್ನಲ್ಲಿ ‘ಧನ್ಯವಾದಗಳು’ ಎಂದು ಪೋಸ್ಟ್ ಮಾಡುವ ಮೂಲಕ ತಮ್ಮ ಕ್ರಿಕೆಟ್ ವಿದಾಯವನ್ನು ಘೋಷಿಸಿದ್ದಾರೆ.
ಮನೋಜ್ ತಿವಾರಿ ಅವರು ಜುಲೈ 14, 2015ರಂದು ಜಿಂಬಾಬ್ವೆ ವಿರುದ್ಧ ಭಾರತ ತಂಡದ ಪರ ತಮ್ಮ ಕೊನೆಯ ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಫಾರ್ಮ್ ಕಳೆದುಕೊಂಡು ತಂಡದಿಂದ ದೂರ ಉಳಿದಿದ್ದರು. ಆದರೆ ಐಪಿಎಲ್ ಮತ್ತು ದೇಶೀಯ ಕ್ರಿಕೆಟ್ನಲ್ಲಿ ಆಟ ಮುಂದುವರಿಸಿದ್ದರು. ಇದೀಗ ಎಲ್ಲ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ಸಂಪೂರ್ಣವಾಗಿ ರಾಜಕೀಯ ಕ್ಷೇತ್ರದಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ Ranji Trophy : ಮುಂದಿನ ಋತುವಿನ ರಣಜಿ ಟ್ರೋಫಿಯ ದಿನಾಂಕ ಬಹಿರಂಗ
ರಣಜಿ ಟ್ರೋಫಿ, ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ರನ್ ಗುಡ್ಡೆ ಹಾಕಿ ಟೀಂ ಇಂಡಿಯಾದ ಕದ ತಟ್ಟಿದ್ದ ಬಂಗಾಲದ ಪ್ರತಿಭಾನ್ವಿತ ಬ್ಯಾಟ್ಸಮನ್ ಮನೋಜ್ ತಿವಾರಿಗೆ ಸರಿಯಾದ ಅವಕಾಶಗಳೇ ಸಿಗಲಿಲ್ಲ. 2008ರಲ್ಲಿ ಟೀಮ್ ಇಂಡಿಯಾ ಏಕದಿನ ತಂಡಕ್ಕೆ ಪದಾರ್ಪಣೆ ಮಾಡಿದ ಮನೋಜ್ ತಿವಾರಿ, ಒಂದು ಪಂದ್ಯದಲ್ಲಿ ಶತಕ ಸಿಡಿಸಿ, ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೂ, ಮುಂದಿನ ಪಂದ್ಯದಲ್ಲೇ ತಂಡದಿಂದ ಹೊರಬಿದ್ದರು. 2011ರ ಚೆನ್ನೈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮ್ಯಾಚ್ ವಿನ್ನಿಂಗ್ ಶತಕ ಬಾರಿಸಿದ್ದರು. ಪಂದ್ಯವನ್ನು ಗೆಲ್ಲಿಸಿದ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು. ಆದರೆ ಮುಂದಿನ ಪಂದ್ಯದಲ್ಲಿ ಪ್ಲೇಯಿಂಗ್ ಇಲೆವೆನ್ನಲ್ಲಿ ತಿವಾರಿ ಇರಲಿಲ್ಲ.
ತಿವಾರಿಗೆ ಅವಕಾಶ ಸಿಕ್ಕಿದ್ದು 14 ಪಂದ್ಯಗಳ ನಂತರ 15 ವರ್ಷದ ಇಂಡಿಯಾ ಜರ್ನಿಯಲ್ಲಿ ತಿವಾರಿ ಆಡಿದ್ದು ಕೇವಲ 12 ಏಕದಿನ ಪಂದ್ಯಗಳನ್ನು ಮಾತ್ರ. ಇದರಲ್ಲಿ ತಲಾ ಒಂದು ಶತಕ ಮತ್ತು ಅರ್ಧಶಕ ಒಳಗೊಂಡಿದೆ. ಬೌಲಿಂಗ್ನಲ್ಲಿಯೂ ಮಿಂಚಿದ್ದ ಅವರು 5 ವಿಕೆಟ್ ಉರುಳಿಸಿದ್ದಾರೆ. ಮೂರು ಟಿ20 ಪಂದ್ಯಗಳನ್ನು ಆಡಿದ್ದಾರೆ. 98 ಐಪಿಎಲ್ ಪಂದ್ಯ ಆಡಿ 1695 ರನ್ ಕಲೆಹಾಕಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಶತಕ ಬಾರಿಸಿ ಫೋಟೊವನ್ನು ಹಾಕಿಯೇ ಅವರು ಕ್ರಿಕೆಟ್ಗೆ ವಿದಾಯ ಹೇಳಿದರು.
THANK YOU 🙏 pic.twitter.com/xFWCJHSVka
— MANOJ TIWARY (@tiwarymanoj) August 3, 2023
“ತಮ್ಮ ವೃತ್ತಿಜೀವನದಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳು. ಈ ಆಟ ನನಗೆ ಎಲ್ಲವನ್ನೂ ನೀಡಿದೆ, ನಾನು ಕನಸು ಕಾಣದ ಪ್ರತಿಯೊಂದು ವಿಷಯವನ್ನೂ ಈ ಆಟದ ಮೂಲಕ ಅರ್ಥೈಸಿಕೊಂಡಿದ್ದೇನೆ. ನನ್ನ ಕ್ರಿಕೆಟ್ ಜೀವನದ ಹಾಗೆ ಯಾವ ಕ್ರಿಕೆಟಿಗನು ಏರಿಳಿತಗಳನ್ನು ಕಂಡರಲು ಸಾಧ್ಯವಿಲ್ಲ” ಎಂದು ಮನೋಜ್ ತಿವಾರಿ ಹೇಳಿದ್ದಾರೆ.