Site icon Vistara News

Manu Bhaker: ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಮನು ಭಾಕರ್​ಗೆ ತವರಿನಲ್ಲಿ ಅದ್ಧೂರಿ ಸ್ವಾಗತ

Manu Bhaker

Manu Bhaker: Double Olympic Medalist Manu Bhaker Receives Grand Welcome on Homecoming

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್(paris olympics)​ ಶೂಟಿಂಗ್​ ವಿಭಾಗದಲ್ಲಿ 2 ಐತಿಹಾಸಿಕ ಕಂಚಿನ ಪದಕ ಗೆದ್ದ ಶೂಟರ್​ ಮನು ಭಾಕರ್(Manu Bhaker)​ ಇಂದು(ಬುಧವಾರ) ತವರಿಗೆ ಆಗಮಿಸಿದ್ದಾರೆ. ನವದೆಹಲಿಗೆ(New Delhi) ಬಂದಿಳಿದ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಹೂವಿನ ಹಾರ ಮತ್ತು ಸಿಹಿ ತಿನ್ನಿಸುವ ಮೂಲಕ ಭರ್ಜರಿ ವೆಲ್​ಕಮ್​ ಮಾಡಲಾಯಿತು.

ಇಂದು(ಬುಧವಾರ) ಬೆಳಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮನು ಮತ್ತು ಅವರ ಕೋಚ್​ ಜಸ್ಪಾಲ್‌ ರಾಣಾ ಅವರನ್ನು ಅಭಿಮಾನಿಗಳು ತಮ್ಮ ಹೆಗಲ ಮೇಲೆ ಎತ್ತಿಕೊಂಡು ಸಂಭ್ರಮಿಸಿದರು. ಈ ವಿಡಿಯೊವನ್ನು ಎಎನ್​ಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ.

22 ವರ್ಷದ ಮನು ಭಾಕರ್ ಇದಕ್ಕೂ ಮುನ್ನ ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮತ್ತು ಸರಬ್ಜೋತ್ ಸಿಂಗ್ ಜತೆಗೂಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲೂ ಕಂಚಿನ ಪದಕ ಜಯಿಸುವ ಮೂಲಕ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನ್ನುವ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. 25 ಮೀ. ಪಿಸ್ತೂಲ್​ ಶೂಟಿಂಗ್​ ಫೈನಲ್​ ಪಂದ್ಯದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಹ್ಯಾಟ್ರಿಕ್​ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾಗಿದ್ದರು.

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಟೋಕಿಯೋಗೆ ಆಗಮಿಸಿದ್ದ ಮನು ಭಾಕರ್​ಗೆ ಅದೃಷ್ಟ ಕೈಕೊಟ್ಟಿತ್ತು. ಕೂಟದ ಮೊದಲ ಸ್ಪರ್ಧೆಯಲ್ಲೇ ಅವರ ಪಿಸ್ತೂಲ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರಿಗೆ ಫೈನಲ್​ಗೇರುವ ಅವಕಾಶ ಕೈತಪ್ಪಿತ್ತು. ಮೊದಲ ಸುತ್ತಿನಲ್ಲಿ ಎದುರಾಗ ಈ ಆಘಾತದಿಂದ ಚೇತರಿಕೊಳ್ಳದ ಮನು ಆ ಬಳಿಕ ಆಡಿದ 2 ಸ್ಪರ್ಧೆಗಳಲ್ಲಿಯೂ ಏಕಾಗ್ರತೆ ಸಾಧಿಸಲು ವಿಫಲರಾಗಿ ಸೋಲು ಕಂಡಿದ್ದರು. ಅಂದಿನ ಸೋಲಿನಿಂದ ಮನನೊಂದು ಶೂಟಿಂಗ್​ಗೆ ವಿದಾಯ ಹೇಳಲು ಬಯಸಿದ್ದ ಮನು, ತಂದೆಯ ಆತ್ಮವಿಶ್ವಾಸದ ಮಾತಿನಂತೆ ಶೂಟಿಂಗ್​ನಲ್ಲಿ ಮುಂದುವರಿದಿದ್ದರು. ಈ ಬಾರಿ ಪ್ಯಾರಿಸ್​ನಲ್ಲಿ 2 ಪದಕ ಗೆದ್ದು ಭಾರತೀಯ ಒಲಿಂಪಿಕ್ಸ್​ ಕ್ರೀಡಾ ಇತಿಹಾಸದಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ Manu Bhaker : ಪ್ಯಾರಿಸ್​ ಒಲಿಂಪಿಕ್ಸ್​​ ಸಮಾರೋಪದಲ್ಲಿ ಮನು ಭಾಕರ್​​ ತ್ರಿವರ್ಣ ಧ್ವಜಧಾರಿ

ಒಲಿಂಪಿಕ್ಸ್‌ನಲ್ಲಿ ದೇಶದ ಗೌರವವನ್ನು ಎತ್ತಿಹಿಡಿದ ಶೂಟರ್‌ ಮನು ಭಾಕರ್‌ ಅವರಿಗೆ ಒಲಿಂಪಿಕ್ಸ್‌ ಸಮಾರೋಪ ಸಮಾರಂಭದಲ್ಲಿ ಭಾರತದ ಮಹಿಳಾ ಧ್ವಜಧಾರಿಯ ಗೌರವ ಲಭಿಸಿದೆ. ಸಮಾರೋಪ ಸಮಾರಂಭ ಭಾನುವಾರ ರಾತ್ರಿ ನಡೆಯಲಿದೆ. ತವರಿಗೆ ಮರಳಿರುವ ಭಾಕರ್​ ಮತ್ತೆ ಪ್ಯಾರಿಸ್​ಗೆ ತೆರಳಲಿದ್ದಾರೆ. ಆದರೆ ಭಾರತದ ಪುರುಷ ಧ್ವಜಧಾರಿ ಕ್ರೀಡಾಳು ಯಾರೆಂಬುದನ್ನು ಇನ್ನಷ್ಟೇ ಹೆಸರಿಸಬೇಕಿದೆ. ಇಲ್ಲಿ ಲಕ್ಷ್ಯ ಸೇನ್‌, ನೀರಜ್‌ ಚೋಪ್ರಾ, ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌, ಗೋಲ್‌ಕೀಪರ್‌ ಪಿ.ಆರ್‌. ಶ್ರೀಜೇಶ್‌ ಮೊದಲಾದವರ ಹೆಸರು ಕೇಳಿಬರುತ್ತಿದೆ.

Exit mobile version