Mary Kom: ಒಂದೇ ತಾಸಿನಲ್ಲಿ 2 ಕೆಜಿ ತೂಕ ಇಳಿಸಿ ಚಿನ್ನ ಗೆದ್ದಿದ್ದ ಬಾಕ್ಸರ್​ ಮೇರಿ ಕೋಮ್ - Vistara News

ಕ್ರೀಡೆ

Mary Kom: ಒಂದೇ ತಾಸಿನಲ್ಲಿ 2 ಕೆಜಿ ತೂಕ ಇಳಿಸಿ ಚಿನ್ನ ಗೆದ್ದಿದ್ದ ಬಾಕ್ಸರ್​ ಮೇರಿ ಕೋಮ್

Mary Kom: ಅಚ್ಚರಿ ಎಂದರೆ ಕೋಮ್​ ಒಂದು ಗಂಟೆಯ ಅವಧಿಯಲ್ಲಿ 2 ಕೆಜಿ ತೂಕ ಇಳಿಸಿ ಫೈನಲ್​ನಲ್ಲಿ ಚಿನ್ನದ ಪದಕ ಜಯಿಸಿದ್ದರು. ತೂಕ ಇಳಿಸುವ ಸಲುವಾಗಿ ಸತತ 1 ಗಂಟೆಗಳ ಕಾಲ ಅವರು ಸ್ಕಿಪ್ಪಿಂಗ್ ನಡೆಸಿದ್ದಾಗಿ ​ ಹೇಳಿಕೊಂಡಿದ್ದಾರೆ.

VISTARANEWS.COM


on

Mary Kom
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಹತೂಕ ಕಾಪಾಡಿಕೊಳ್ಳಲು ವಿಫಲವಾದ ಹಿನ್ನಲೆಯಲ್ಲಿ ಒಲಿಂಪಿಕ್ಸ್ ಕೂಟದಿಂದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(vinesh phogat) ಅನರ್ಹಗೊಂಡಿರುವ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ. ಅಗತ್ಯಕ್ಕಿಂತ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ಕಾರಣ ಅವರನ್ನು ಫೈನಲ್ ಸ್ಪರ್ಧೆಯಲ್ಲಿ ಆಡದಂತೆ ಅನರ್ಹಗೊಳಿಸಲಾಗಿತ್ತು. ಆರು ಬಾರಿಯ ವಿಶ್ವ ಚಾಂಪಿಯನ್ ಮತ್ತು 2012 ರ ಒಲಿಂಪಿಕ್ ಕಂಚಿನ ಪದಕ ವಿಜೇತೆ, ಭಾರತದ ಖ್ಯಾತ ಬಾಕ್ಸಿಂಗ್​ ತಾರೆ ಮೇರಿ ಕೋಮ್(Mary Kom) ಕೂಡ ಹಿಂದೊಮ್ಮೆ ತೂಕದ ಸಮಸ್ಯೆಯಿಂದ ಅನರ್ಹಗೊಳ್ಳುವ ಭೀತಿಯನ್ನು ಎದುರಿಸಿದ್ದರಂತೆ. ಈ ವಿಚಾರವನ್ನು ಅವರೇ ಈಗ ಬಹಿರಂಗಪಡಿಸಿದ್ದಾರೆ.

ವಿನೇಶ್ ಫೋಗಟ್ ಘಟನೆಯ ಬಳಿಕ ಸಂದರ್ಶನವೊಂದರಲ್ಲಿ ಮಾತನಾಡಿದ ಖ್ಯಾತ ಮಹಿಳಾ ಬಾಕ್ಸರ್ ಮೇರಿ ಕೋಮ್, 2018ರಲ್ಲಿ ಪೊಲೆಂಡ್‌ನ ಗ್ಲಿವೈಸ್‌ನಲ್ಲಿ ನಡೆದಿದ್ದ ಮಹಿಳೆಯರ 13ನೇ ಸಿಲೆಸಿಯನ್ ಓಪನ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ನನಗೆ ತೂಕದ ಸಮಸ್ಯೆ ಎದುರಾಗಿತ್ತು. ನಾನು ಸ್ಪರ್ಧಿಸುವ ವಿಭಾಗದಲ್ಲಿ 48 ಕೆಜಿ ತೂಕದ ಮಿತಿ ಇತ್ತು. ಅದಕ್ಕಿಂತ ಒಂದೆರಡು ಕಿಲೋಗ್ರಾಂಗಳಷ್ಟು ಹೆಚ್ಚಿನ ತೂಕ ಹೊಂದಿದ್ದೆ. ಹೀಗಾಗಿ ಅನರ್ಹದ ಭೀತಿ ಎದುರಿಸಿದ್ದೆ. ಆದರೆ, ನಾನು ಸತತವಾಗಿ ಒಂದು ಗಂಟೆ ಸ್ಕಿಪ್ಪಿಂಗ್ ಮಾಡಿದ ನಂತರ ತೂಕವನ್ನು ಇಳಿಸಲು ಸಾಧ್ಯವಾಯಿತು” ಎಂದು ಮೇರಿ ಕೋಮ್‌ ಅಂದಿನ ಘಟನೆಯನ್ನು ಮೆಲುಕು ಹಾಕಿದ್ದಾರೆ.

ಇದನ್ನೂ ಓದಿ Paris Olympics: ಶ್ರೀಜೇಶ್​ಗೆ ಸಿಗಲಿ ಗೆಲುವಿನ ವಿದಾಯ; ಇಂದು ಭಾರತ-ಸ್ಪೇನ್​ ಕಂಚಿನ ಕಾದಾಟ

ಚಿನ್ನ ಗೆದ್ದಿದ್ದ ಕೋಮ್​


ಅಚ್ಚರಿ ಎಂದರೆ ಕೋಮ್​ ಒಂದು ಗಂಟೆಯ ಅವಧಿಯಲ್ಲಿ 2 ಕೆಜಿ ತೂಕ ಇಳಿಸಿ ಫೈನಲ್​ನಲ್ಲಿ ಚಿನ್ನದ ಪದಕ ಜಯಿಸಿದ್ದರು. ತೂಕ ಇಳಿಸುವ ಸಲುವಾಗಿ ಸತತ 1 ಗಂಟೆಗಳ ಕಾಲ ಅವರು ಸ್ಕಿಪ್ಪಿಂಗ್ ನಡೆಸಿದ್ದಾಗಿ ​ ಹೇಳಿಕೊಂಡಿದ್ದಾರೆ.

ಬೆಳ್ಳಿ ಪದಕ್ಕಕೆ ಮನವಿ ಮಾಡಿದ ವಿನೇಶ್​


ವಿನೇಶ್ ಫೋಗಟ್ ತಮ್ಮನ್ನು ಅನರ್ಹ ಮಾಡಿದ ನಿರ್ಧಾರದ ವಿರುದ್ಧ ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ಸ್ (ಸಿಎಎಸ್)ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜಂಟಿ ಬಳ್ಳಿಪದಕವನ್ನು ನೀಡುವಂತೆ ಕೋರಿದ್ದಾರೆ. ಗುರುವಾರ ಈ ಮೇಲ್ಮನವಿ ಬಗ್ಗೆ ಮಧ್ಯಂತರ ತೀರ್ಪು ನೀಡುವ ನಿರೀಕ್ಷೆ ಇದ್ದು, ಮೂಲ ನಿರ್ಧಾರವನ್ನು ಬದಲಿಸುವ ಸಾಧ್ಯತೆಯೂ ಇದೆ. ಒಲಿಂಪಿಕ್ ಕೂಟದ ಕಟ್ಟುನಿಟ್ಟಿನ ಸಂರಚನೆ ಕಾರಣದಿಂದಾಗಿ ಚಿನ್ನದ ಪದಕಕ್ಕೆ ಸ್ಪರ್ಧಿಸುವ ಅವಕಾಶವನ್ನು ನೀಡುವ ಸಾಧ್ಯತೆ ಕಡಿಮೆ. ಏಕೆಂದರೆ ಚಿನ್ನದ ಪದಕಕ್ಕಾಗಿ ಇರುವ ಸ್ಪರ್ಧೆಯ ಮರು ವೇಳಾಪಟ್ಟಿ ಸಿದ್ಧಪಡಿಸುವುದು ಸವಾಲುದಾಯಕ. ಆದರೆ ಅಧಿಕೃತ ಪ್ರಸಾರಸಂಸ್ಥೆಯಾಗಿರುವ ಜಿಯೊಸಿನಿಮಾ ಪ್ರಕಾರ, ವಿನೇಶ್ ಜಂಟಿ ಬೆಳ್ಳಿಪದಕಕ್ಕಾಗಿ ಮನವಿ ಸಲ್ಲಿಸಿದ್ದಾರೆ.

ಸಿಎಎಸ್ ಎನ್ನುವುದು 1984ರಲ್ಲಿ ಸ್ಥಾಪಿತವಾದ ಸ್ವತಂತ್ರ ಸಂಸ್ಥೆಯಾಗಿದ್ದು, ಕ್ರೀಡಾಸಂಬಂಧಿ ವ್ಯಾಜ್ಯಗಳನ್ನು ಮಧ್ಯಸ್ಥಿಕೆ ಮೂಲಕ ಬಗೆಹರಿಸುತ್ತದೆ. ಸ್ವಿಡ್ಜರ್ಲೆಂಡ್ ನ ಲೌಸನ್ ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಿಎಎಸ್, ನ್ಯೂಯಾರ್ಕ್ ಹಾಗೂ ಸಿಡ್ನಿಯಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಹೊಂದಿದ್ದು, ಒಲಿಂಪಿಕ್ ಆತಿಥ್ಯ ವಹಿಸುವ ದೇಶಗಳಲ್ಲಿ ತಾತ್ಕಾಲಿಕ ಕೋರ್ಟ್ ಗಳನ್ನು ಹೊಂದಿರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Swapnil Kusale: ತವರಿಗೆ ಮರಳಿದ ಸ್ವಪ್ನಿಲ್​ ಕುಸಾಲೆ; ಮುಂಬೈಯಲ್ಲಿ ಭರ್ಜರಿ ಸ್ವಾಗತ

Swapnil Kusale: 28 ವರ್ಷದ ಸ್ವಪ್ನಿಲ್ ಕುಸಾಲೆ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಅವರ ಅಪಟ್ಟ ಅಭಿಮಾನಿ. ಜತೆಗೆ ಧೋನಿಯಂತೆಯೇ ಇವರು ಕೂಡ ರೇಲ್ವೆ ಟಿಕೆಟ್ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು.

VISTARANEWS.COM


on

Swapnil Kusale
Koo

ಮುಂಬಯಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(paris olympics 2024) ಪುರುಷರ 50 ಮೀ. ರೈಫಲ್​ 3 ಪೊಸಿಷನ್​ ಶೂಟಿಂಗ್​ನಲ್ಲಿ ಕಂಚಿನ ಪದಕ ಗೆದ್ದ ಮಹಾರಾಷ್ಟ್ರದ 28 ವರ್ಷದ ಸ್ವಪ್ನಿಲ್​ ಕುಸಾಲೆ(Swapnil Kusale) ಅವರು ಇಂದು(ಗುರುವಾರ) ತವರಿಗೆ ಮರಳಿದ್ದಾರೆ. ಮುಂಬಯಿ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಹಾರ ಮತ್ತು ಗುಲಾಬಿ ದಳಗಳ ಅಭಿಷೇಕದೊಂದಿಗೆ ಕ್ರೀಡಾಪ್ರೇಮಿಗಳು ಭರ್ಜರಿಯಾಗಿ ಸ್ವಾಗತ ಕೋರಿದರು. ತೆರೆದ ಕಾರಿನ ಮೂಲಕ ಮೆರವಣಿಗೆ ಮಾಡಿ ಸಂಭ್ರಮಿಸಲಾಯಿತು. ಹಲವು ಕ್ರೀಡಾಭಿಮಾನಿಗಳು ಸೆಲ್ಫಿ ತೆಗೆಯಲು ನೂಕು ನುಗ್ಗಲು ಮಾಡುತ್ತಿರುವುದು ಕೂಡ ಕಂಡು ಬಂತು.

ಕೊಲ್ಹಾಪುರ ಜಿಲ್ಲೆಯ ಕಂಬಲ ವಾಡಿಯವರಾದ ಸ್ವಪ್ನಿಲ್​ಗೆ ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ(Eknath Shinde) 1 ಕೋಟಿ ಬಹುಮಾನ ಪ್ರಕಟಿಸಿದ್ದಾರೆ. 2009ರಲ್ಲಿ ಮಹಾರಾಷ್ಟ್ರದ ಕ್ರೀಡಾ ಪ್ರಭೋದಿನಿ ಯೋಜನೆಯಡಿ ಕ್ರೀಡಾ ತರಬೇತಿಗೆ ಆಯ್ಕೆಯಾಗಿದ್ದರು.

ಕಂಚಿನ ಪದಕ ಗೆಲ್ಲುವ ಮೂಲಕ ಸ್ವಪ್ನಿಲ್ ಒಲಿಂಪಿಕ್ಸ್​ನಲ್ಲಿ ಪುರುಷರ 50 ಮೀ. ರೈಫಲ್​ 3 ಪೊಸಿಷನ್​ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಹಾಗೂ 3ನೇ ರೈಫಲ್​ ಶೂಟರ್​ ಎಂಬ ಇತಿಹಾಸ ನಿರ್ಮಿಸಿದ್ದರು. ಫೈನಲ್​ ಸ್ಪರ್ಧೆಯಲ್ಲಿ ಅವರು ಒಟ್ಟು 451.4 ಅಂಕ ಗಳಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. ಸ್ವಪ್ನಿಲ್​ ಕುಸಾಲೆಗೆ ಮಹರಾಷ್ಟ್ರ ಸರ್ಕಾರದ ಬಹುಮಾನ ಮೊತ್ತದ ಹೊರತಾಗಿಯೂ ಕೇಂದ್ರ ಸರ್ಕಾರದಿಂದ 30 ಲಕ್ಷ ರೂ. ಮತ್ತು ಭಾರತೀಯ ಒಲಿಂಪಿಕ್ಸ್​ ಸಂಸ್ಥೆಯಿಂದ 50 ಲಕ್ಷ ರೂ. ಬಹುಮಾನ ಸಿಗಲಿದೆ.

ಇದನ್ನೂ ಓದಿ Paris Olympics: ಒಲಿಂಪಿಕ್ಸ್​ನಲ್ಲಿಯೂ ಸದ್ದು ಮಾಡಿದ ‘​ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡು; ವಿಡಿಯೊ ವೈರಲ್​

28 ವರ್ಷದ ಸ್ವಪ್ನಿಲ್ ಕುಸಾಲೆ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಅವರ ಅಪಟ್ಟ ಅಭಿಮಾನಿ. ಜತೆಗೆ ಧೋನಿಯಂತೆಯೇ ಇವರು ಕೂಡ ರೇಲ್ವೆ ಟಿಕೆಟ್ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಧೋನಿಯವರ ಬಯೋಪಿಕ್ ಸಿನೆಮಾವನ್ನು ಪದೇ ಪದೇ ವೀಕ್ಷಿಸಿದ ಬಳಿಕ ಸ್ವಪ್ನಿಲ್ ಕೂಡ ಪೂರ್ಣಪ್ರಮಾಣದಲ್ಲಿ ಶೂಟಿಂಗ್‌ನಲ್ಲಿ ತೊಡಗಿಕೊಂಡರು. ಧೋನಿಯವರಂತೆ ಶಾಂತ ಸ್ವಾಭಾವದ ಈ ಶೂಟರ್​ ಇದೀಗ ಒಲಿಂಪಿಕ್ಸ್‌ ಪದಕವೊಂದನ್ನು ಗೆದ್ದು ಇತಿಹಾಸದ ಪುಟ ಸೇರಿದ್ದಾರೆ. 2015ರ ಕುವೈತ್​ ಏಷ್ಯನ್‌ ಶೂಟಿಂಗ್‌ ಚಾಂಪಿಯನ್‌ಶಿಪ್‌ ಜೂನಿಯರ್‌ ವಿಭಾಗದಲ್ಲಿ ಚಿನ್ನ, 59ನೇ ಹಾಗೂ 61ನೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲೂ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. 

ಬುಧವಾರವಷ್ಟೇ ಪ್ಯಾರಿಸ್​ ಒಲಿಂಪಿಕ್ಸ್(paris olympics)​ ಅವಳಿ ಕಂಚಿನ ಪದಕ ವಿಜೇತೆ, ಶೂಟರ್​ ಮನು ಭಾಕರ್(Manu Bhaker)​ ತವರಿಗೆ ಮರಳಿದ್ದರು. ನವದೆಹಲಿಗೆ ಬಂದಿಳಿದಿದ್ದ ಅವರಿಗೂ ಭರ್ಜರಿ ಸ್ವಾಗತ ಕೋರಲಾಗಿತ್ತು. 22 ವರ್ಷದ ಮನು ಭಾಕರ್ ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮತ್ತು ಸರಬ್ಜೋತ್ ಸಿಂಗ್ ಜತೆಗೂಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲೂ ಕಂಚಿನ ಪದಕ ಜಯಿಸಿದ್ದರು.

Continue Reading

ಕ್ರೀಡೆ

Vinesh Phogat: ವಿನೇಶ್​ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

Vinesh Phogat: ಒಲಿಂಪಿಕ್ ಪದಕ ವಿಜೇತರಿಗೆ ನೀಡುವ ಎಲ್ಲ ಗೌರವಗಳು, ಪುರಸ್ಕಾರಗಳು ಮತ್ತು ಸೌಲಭ್ಯಗಳನ್ನು ನಮ್ಮ ಸರ್ಕಾರ ವಿನೇಶ್ ಫೋಗಟ್ ಅವರಿಗೆ ಕೃತಜ್ಞತೆಯಿಂದ ನೀಡಲು ತೀರ್ಮಾನ ಕೈಗೊಂಡಿದೆ. ಅಷ್ಟೇ ಅಲ್ಲದೇ, ಸರ್ಕಾರದ ವತಿಯಿಂದ 1.5 ಕೋಟಿ ನಗದು ಬಹುಮಾನ ನೀಡುತ್ತೇವೆ ಎಂದು ಸಿಎಂ ಸೈನಿ ಹೇಳಿದ್ದಾರೆ.

VISTARANEWS.COM


on

Vinesh Phogat
Koo

ನವದೆಹಲಿ: ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ(paris olympics) ಅನರ್ಹಗೊಂಡು ಪದಕ ವಂಚಿತರಾದರೂ ಕೂಡ ದೇಶದ ಹೃದಯ ಗೆದ್ದ ಕುಸ್ತಿಪಟು ವಿನೇಶ್‌ ಫೋಗಟ್‌(Vinesh Phogat) ಅವರಿಗೆ ಹರಿಯಾಣ ಸರ್ಕಾರ ವಿಶೇಷ ಗೌರವ ಸೂಚಿಸಲು ನಿರ್ಧರಿಸಿದೆ. ಅವರ ಸಾಧನೆಯನ್ನು ಪರಿಗಣಿಸಿ 1.5 ಕೋಟಿ ರೂ. ನಗುದು ಬಹುಮಾನ ನೀಡುವುದಾಗಿ ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ ಘೋಷಿಸಿದ್ದಾರೆ.

“ನಮ್ಮ ವೀರ ಪುತ್ರಿ ಹರಿಯಾಣದ ವಿನೇಶ್ ಫೋಗಟ್ ಪದಕ ಗೆಲ್ಲದಿದ್ದರೂ ಕೂಡ ಅವರು ತೋರಿದ ಅದ್ಭುತ ಪ್ರದರ್ಶನ ನಮಗೆಲ್ಲ ಸ್ಫೂರ್ತಿ. ದೇಶಕ್ಕಾಗಿ ಪದಕ ಗೆಲ್ಲಲು ಅವರು ಪಟ್ಟ ಶಮ್ರ ನಿಜಕ್ಕೂ ಮನಕಲಕುವಂತಿದೆ. ಕೆಲವು ಕಾರಣಗಳಿಂದ ಆಕೆಗೆ ಒಲಿಂಪಿಕ್ ಫೈನಲ್​ನಲ್ಲಿ ಆಡಲು ಸಾಧ್ಯವಾಗದೇ ಇರಬಹುದು, ಆದರೆ, ಆಕೆ ನಮಗೆಲ್ಲ ಚಾಂಪಿಯನ್ ಆಗಿದ್ದಾಳೆ. ವಿನೇಶ್ ತವರಿಗೆ ಮರಳಿದ ತಕ್ಷಣ ಅವರನ್ನು ಪದಕ ವಿಜೇತರಂತೆ ಸ್ವಾಗತಿಸಲು ಮತ್ತು ಗೌರವಿಸಲು ನಮ್ಮ ಸರ್ಕಾರ ನಿರ್ಧರಿಸಿದೆ” ಎಂದು ನಯಾಬ್‌ ಸಿಂಗ್‌ ಸೈನಿ ಟ್ವೀಟ್​ ಮೂಲಕ ಪ್ರಕಟಿಸಿದ್ದಾರೆ.

ಒಲಿಂಪಿಕ್ ಪದಕ ವಿಜೇತರಿಗೆ ನೀಡುವ ಎಲ್ಲ ಗೌರವಗಳು, ಪುರಸ್ಕಾರಗಳು ಮತ್ತು ಸೌಲಭ್ಯಗಳನ್ನು ನಮ್ಮ ಸರ್ಕಾರ ವಿನೇಶ್ ಫೋಗಟ್ ಅವರಿಗೆ ಕೃತಜ್ಞತೆಯಿಂದ ನೀಡಲು ತೀರ್ಮಾನ ಕೈಗೊಂಡಿದೆ. ಅಷ್ಟೇ ಅಲ್ಲದೇ, ಸರ್ಕಾರದ ವತಿಯಿಂದ 1.5 ಕೋಟಿ ನಗದು ಬಹುಮಾನ ನೀಡುತ್ತೇವೆ ಎಂದು ಸಿಎಂ ಸೈನಿ ಹೇಳಿದ್ದಾರೆ. ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ನಗದು ಮೊತ್ತ ನೀಡುವುದಾಗಿ ಈ ಹಿಂದೆಯೇ ಹರಿಯಾಣ ಸರ್ಕಾರ ಘೋಷಣೆ ಮಾಡಿತ್ತು.

ಪ್ಯಾರಿಸ್‌ ಒಲಿಂಪಿಕ್ಸ್‌ ಕುಸ್ತಿಯಲ್ಲಿ ಅನರ್ಹಗೊಂಡು ಆಘಾತಕ್ಕೀಡಾಗಿರುವ ಕುಸ್ತಿಪಟು ವಿನೇಶ್‌ ಫೋಗಾಟ್‌ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಭಾರತೀಯ ಒಲಿಂಪಿಕ್‌ ಅಸೋಸಿಯೇಶನ್‌ನ (ಐಒಎ) ಅಧ್ಯಕ್ಷೆ ಪಿ.ಟಿ. ಉಷಾ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ಟ್ವಿಟ್​ ಮಾಡಿ ‘ನೀವು ಭಾರತದ ಹೆಮ್ಮೆ ಮತ್ತು ದೇಶದ ಪ್ರತಿಯೊಬ್ಬರನ್ನೂ ಸ್ಫೂರ್ತಿಗೊಳಿಸಿದ್ದೀರಿ’ ಎಂದು ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ Paris Olympics: ಒಲಿಂಪಿಕ್ಸ್​ನಲ್ಲಿಯೂ ಸದ್ದು ಮಾಡಿದ ‘​ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡು; ವಿಡಿಯೊ ವೈರಲ್​

ವಿನೇಶ್ ಫೋಗಟ್ ತಮ್ಮನ್ನು ಅನರ್ಹ ಮಾಡಿದ ನಿರ್ಧಾರದ ವಿರುದ್ಧ ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ಸ್ (ಸಿಎಎಸ್)ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜಂಟಿ ಬಳ್ಳಿಪದಕವನ್ನು ನೀಡುವಂತೆ ಕೋರಿದ್ದಾರೆ. ಗುರುವಾರ ಈ ಮೇಲ್ಮನವಿ ಬಗ್ಗೆ ಮಧ್ಯಂತರ ತೀರ್ಪು ನೀಡುವ ನಿರೀಕ್ಷೆ ಇದ್ದು, ಮೂಲ ನಿರ್ಧಾರವನ್ನು ಬದಲಿಸುವ ಸಾಧ್ಯತೆಯೂ ಇದೆ. ಒಲಿಂಪಿಕ್ ಕೂಟದ ಕಟ್ಟುನಿಟ್ಟಿನ ಸಂರಚನೆ ಕಾರಣದಿಂದಾಗಿ ಚಿನ್ನದ ಪದಕಕ್ಕೆ ಸ್ಪರ್ಧಿಸುವ ಅವಕಾಶವನ್ನು ನೀಡುವ ಸಾಧ್ಯತೆ ಕಡಿಮೆ. ಏಕೆಂದರೆ ಚಿನ್ನದ ಪದಕಕ್ಕಾಗಿ ಇರುವ ಸ್ಪರ್ಧೆಯ ಮರು ವೇಳಾಪಟ್ಟಿ ಸಿದ್ಧಪಡಿಸುವುದು ಸವಾಲುದಾಯಕ. ಆದರೆ ಅಧಿಕೃತ ಪ್ರಸಾರಸಂಸ್ಥೆಯಾಗಿರುವ ಜಿಯೊಸಿನಿಮಾ ಪ್ರಕಾರ, ವಿನೇಶ್ ಜಂಟಿ ಬೆಳ್ಳಿಪದಕಕ್ಕಾಗಿ ಮನವಿ ಸಲ್ಲಿಸಿದ್ದಾರೆ.

ಸಿಎಎಸ್ ಎನ್ನುವುದು 1984ರಲ್ಲಿ ಸ್ಥಾಪಿತವಾದ ಸ್ವತಂತ್ರ ಸಂಸ್ಥೆಯಾಗಿದ್ದು, ಕ್ರೀಡಾಸಂಬಂಧಿ ವ್ಯಾಜ್ಯಗಳನ್ನು ಮಧ್ಯಸ್ಥಿಕೆ ಮೂಲಕ ಬಗೆಹರಿಸುತ್ತದೆ. ಸ್ವಿಡ್ಜರ್ಲೆಂಡ್ ನ ಲೌಸನ್ ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಿಎಎಸ್, ನ್ಯೂಯಾರ್ಕ್ ಹಾಗೂ ಸಿಡ್ನಿಯಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಹೊಂದಿದ್ದು, ಒಲಿಂಪಿಕ್ ಆತಿಥ್ಯ ವಹಿಸುವ ದೇಶಗಳಲ್ಲಿ ತಾತ್ಕಾಲಿಕ ಕೋರ್ಟ್ ಗಳನ್ನು ಹೊಂದಿರುತ್ತದೆ.

Continue Reading

ಕ್ರೀಡೆ

Paris Olympics: ಒಲಿಂಪಿಕ್ಸ್​ನಲ್ಲಿಯೂ ಸದ್ದು ಮಾಡಿದ ‘​ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡು; ವಿಡಿಯೊ ವೈರಲ್​

Paris Olympics: ಇಂಡಿಯಾ ಹೌಸ್‌ ಪ್ಯಾರಿಸ್‌ನ ಪಾರ್ಕ್‌ ಡಿ ಲಾ ವಿಲೆಟ್ಟೆಯಲ್ಲಿ, ಭಾರತೀಯ ಒಲಿಂಪಿಕ್ಸ್‌ ಒಕ್ಕೂಟದೊಂದಿಗೆ ಸೇರಿ ಇದನ್ನು ನಿರ್ಮಾಣ ಮಾಡಲಾಗಿದೆ. ದೇಶದಿಂದ ದೂರ ಇರುವ ಆ್ಯತ್ಲೀಟ್‌ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸಲು ಇದರ ಉದ್ದೇಶ.

VISTARANEWS.COM


on

Paris Olympics
Koo

ಪ್ಯಾರಿಸ್​: ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು…’ಈ ಹಾಡು ಕೇಳಿದರೆ ಎಂಥವರಿಗಾದರೂ ಒಮ್ಮೆ ರೋಮಾಂಚನ ಆಗುತ್ತದೆ. ಏಕೆಂದರೆ ಈ ಹಾಡಿಗೆ ಇರುವ ತಾಕತ್ತು ಅಂಥದ್ದು. ಹಾಡಿನ ಪ್ರತಿ ಸಾಲುಗಳು ಕನ್ನಡ ನಾಡಿನ ವಿಶೇಷತೆ ಬಗ್ಗೆ ವರ್ಣಿಸಲಾಗಿದೆ. ಡಾ. ರಾಜ್​ಕುಮಾರ್(Rajkumar) ಅವರು ಹಾಡಿದ ಈ ಹಾಡನ್ನು ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನೆನಪಿಸಿಕೊಳ್ಳಲಾಗುತ್ತಿದೆ. ಇದೀಗ ಈ ಹಾಡು ದೂರದ ಪ್ಯಾರಿಸ್​ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್​ನಲ್ಲಿಯೂ(Paris Olympics) ಸದ್ದು ಮಾಡಿದೆ.

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳು ರಿಲಯನ್ಸ್‌ ಸಂಸ್ಥೆ ನಿರ್ಮಾಣ ಮಾಡಿರುವ ಇಂಡಿಯಾ ಹೌಸ್‌ನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆಕಸ್ಮಿಕ(dr rajkumar akasmika) ಚಿತ್ರದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡಿಗೆ ನೃತ್ಯಗಾರರು ಅತ್ಯಂತ ಸುಂದವಾಗಿ ಹೆಜ್ಜೆ ಹಾಕಿದ್ದಾರೆ. ಈ ಮೂಲಕ ಕನ್ನಡ ಕಂಪು ಪ್ಯಾರಿಸ್​ನಲ್ಲಿಯೂ ಮೊಳಗಿದೆ. ಸದ್ಯ ಈ ವಿಡಿಯೊ ವೈರಲ್(viral video)​ ಆಗಿದೆ.

ವಿಶೇಷವೆಂದರೆ ಒಲಿಂಪಿಕ್ಸ್​ ವೇಳೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಡುತ್ತಿರುವುದು ಕೂಡ ಕರ್ನಾಟಕದವರೆ. ಹೌದು, ಕಳೆದ 9 ವರ್ಷಗಳಿಂದ ಪ್ಯಾರಿಸ್​ನಲ್ಲಿ ಸಂಗೀತ ಕಚೇರಿ ಸೇರಿ ಹಲವು ಸಂಸ್ಕೃತಿಯ ಕಾರ್ಯಕ್ರಮ ನಡೆಸುತ್ತಿರುವ ಕರ್ನಾಟಕ ಮೂಲದ ಭಾವನಾ ಪ್ರದ್ಯುಮ್ನ(Bhavana Pradyumna) ಅವರು ಕನ್ಸರ್ವೇಟರಿ ಆಫ್ ಪ್ಯಾರಿಸ್‌ ಸಂಸ್ಥೆಯ ಮೂಲಕ ಒಲಿಂಪಿಕ್ಸ್‌ ಹಾಗೂ ಪ್ಯಾರಾಲಿಂಪಿಕ್ಸ್‌ ನಡೆಯುವ 24 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ. ಒಟ್ಟು 180 ಕಲಾವಿದರಿಂದ ಸಂಗೀತ, ನಾಟಕ ಕಾರ್ಯಕ್ರಮ ನಡೆಯಲಿದೆ. ರಘು ದೀಕ್ಷಿತ್‌ ಕೂಡ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.

ಇದನ್ನೂ ಓದಿ Paris Olympics: ಶ್ರೀಜೇಶ್​ಗೆ ಸಿಗಲಿ ಗೆಲುವಿನ ವಿದಾಯ; ಇಂದು ಭಾರತ-ಸ್ಪೇನ್​ ಕಂಚಿನ ಕಾದಾಟ

ಇಂಡಿಯಾ ಹೌಸ್‌ ಪ್ಯಾರಿಸ್‌ನ ಪಾರ್ಕ್‌ ಡಿ ಲಾ ವಿಲೆಟ್ಟೆಯಲ್ಲಿ, ಭಾರತೀಯ ಒಲಿಂಪಿಕ್ಸ್‌ ಒಕ್ಕೂಟದೊಂದಿಗೆ ಸೇರಿ ಇದನ್ನು ನಿರ್ಮಾಣ ಮಾಡಲಾಗಿದೆ. ದೇಶದಿಂದ ದೂರ ಇರುವ ಆ್ಯತ್ಲೀಟ್‌ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸಲು ಇದರ ಉದ್ದೇಶ. ಈ ಇಂಡಿಯಾ ಹೌಸ್‌ ನಿರ್ಮಾಣ ಮಾಡಿದ್ದು ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ.

ನೀರಜ್​ ಮೇಲೆ ಚಿನ್ನದ ನಿರೀಕ್ಷೆ

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌(Paris Olympics)ನಲ್ಲಿ ಭಾರತದ ಕೊನೆಯ ಚಿನ್ನದ ಪದಕ ಭರವಸೆಯಾಗಿ ಉಳಿದಿರುವ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ(Neeraj Chopra) ಅವರು ಇಂದು ಫೈನಲ್​ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದು ಭಾರತಕ್ಕೆ ಟ್ರ್ಯಾಕ್​ ಆ್ಯಂಡ್​ ಫೀಲ್ಡ್​ನಲ್ಲಿ ಐತಿಹಾಸಿಕ ಪದಕ ಗೆದ್ದ ನೀರಜ್​ ಈ ಬಾರಿಯೂ ಚಿನ್ನಕ್ಕೆ ಗುರಿ ಇರಿಸಲಿ ಎನ್ನುವುದು ದೇಶವಾಸಿಗಳ ಹಾರೈಕೆ. ಫೈನಲ್​ ಪಂದ್ಯ ರಾತ್ರಿ 11:55ಕ್ಕೆ ಅರಂಭವಾಗಲಿದೆ.

ಮಂಗಳವಾರ ನಡೆದಿದ್ದ ಅರ್ಹತಾ ಸುತ್ತಿನ ಪಂದ್ಯದಲ್ಲಿ ತಮ್ಮ ಮೊದಲ ಪ್ರಯತ್ನದಲ್ಲೇ 89.34 ಮೀ. ದೂರ ಜಾವೆಲಿನ್​ ಎಸೆದು ನೇರವಾಗಿ ಫೈನಲ್​ ಪ್ರವೇಶಿಸಿದ್ದರು. ನೀರಜ್​ ಅವರೇ ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿದ್ದರು. ಹೀಗಾಗಿ ಫೈನಲ್​ನಲ್ಲಿಯೂ ಅವರ ಮೇಲೆ ನಿರೀಕ್ಷೆ ಇರಿಸಲಾಗಿದೆ. ಜರ್ಮನಿಯ ಜೂಲಿಯನ್ ವೆಬ್ಬರ್, ಪಾಕಿಸ್ತಾನದ ಅರ್ಷದ್ ನದೀಮ್, ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

Continue Reading

ಕ್ರೀಡೆ

Rohit Sharma: ಸೋಲಿನ ಬಳಿಕ ದೇಶೀಯ ಕ್ರಿಕೆಟ್​ನ ಮಹತ್ವ ತಿಳಿಸಿದ ರೋಹಿತ್​; ನೆಟ್ಟಿಗರಿಂದ ತೀವ್ರ ತರಾಟೆ

Rohit Sharma: ​ ಪಂದ್ಯದ ಸೋಲಿಗೆ ಸಹ ಆಟಗಾರರ ಬ್ಯಾಟಿಂಗ್​ ವೈಫಲ್ಯವೇ ಕಾರಣ ಎಂದು ರೋಹಿತ್ ನೇರ ಆರೋಪ ಮಾಡಿದ್ದಾರೆ. ನಾನು ತಂಡದ ಗೆಲುವಿಗಾಗಿ ಪ್ರಯತ್ನಪಟ್ಟಿದ್ದೇನೆ. ಆದರೆ, ಉಳಿದ ಆಟಗಾರರು ಬ್ಯಾಟಿಂಗ್​ ವೈಫಲ್ಯ ಕಂಡರು ಎಂದು ಹೇಳಿದ್ದಾರೆ.

VISTARANEWS.COM


on

Rohit Sharma
Koo

ಕೊಲಂಬೊ: 27 ವರ್ಷ ಬಳಿಕ ಶ್ರೀಲಂಕಾ ವಿರುದ್ಧ ಸರಣಿ ಸೋಲು ಕಂಡ ಭಾರತ ತಂಡದ ನಾಯಕ ರೋಹಿತ್​ ಶರ್ಮ(Rohit Sharma) ಈ ಸೋಲಿನ ಬಳಿಕ ದೇಶೀಯ ಕ್ರಿಕೆಟ್​ನ ಮಹತ್ವ ಏನೆಂದು ತಿಳಿಸಿದ್ದಾರೆ. ಬುಧವಾರ ನಡೆದಿದ್ದ ಸರಣಿಯ ಅಂಯಿಮ ಏಕದಿನ ಪಂದ್ಯದಲ್ಲಿ ಭಾರತ ಲಂಕಾ(Sri Lanka) ವಿರುದ್ಧ 110 ರನ್​ಗಳ ಹೀನಾಯ ಸೋಲಿಗೆ ತುತ್ತಾಗಿತ್ತು.

ಸೋಲಿನ ಬಳಿಕ ಮಾತನಾಡಿದ ನಾಯಕ ರೋಹಿತ್​, “ದೇಶೀಯ ಕ್ರಿಕೆಟ್ ಆಡುವುದು ಬಹಳ ಮುಖ್ಯ. ನಾವು ಮುಖ್ಯವಾಗಿ ಟೆಸ್ಟ್ ಮತ್ತು ಏಕದಿನ ಸರಣಿಗೆ ದೇಶೀಯ ಕ್ರಿಕೆಟ್​ ಪ್ರದರ್ಶನ ನೋಡಿ ಆಟಗಾರರನ್ನು ಆಯ್ಕೆ ಮಾಡಬೇಕಾಗಿದೆ. ನಮ್ಮ ದೇಶೀಯ ಕ್ರಿಕೆಟ್, ಭಾರತೀಯ ಕ್ರಿಕೇಟ್‌ನ ಬೆನ್ನೆಲುಬು” ಎಂದು ಹೇಳಿದ್ದಾರೆ.

ರೋಹಿತ್​ ಅವರ ಈ ಹೇಳಿಕೆಗೆ ನೆಟ್ಟಿಗರು ಸರಿಯಾಗಿ ತಿರುಗೇಟು ನೀಡಿದ್ದಾರೆ. ಸರಣಿ ಸೋತಾಗ ಮಾತ್ರ ದೇಶೀಯ ಕ್ರಿಕೆಟ್​ ನೆನೆಪಾಗುತ್ತದೆ. ಅದೆಷ್ಟೋ ಆಟಗಾರರು ದೇಶೀಯ ಕ್ರಿಕೆಟ್​ನಲ್ಲಿ ನಿಮಗಿಂತ ಶ್ರೇಷ್ಠ ಸಾಧನೆ ಮತ್ತು ಪ್ರದರ್ಶನ ತೋರಿದರೂ ಅವರಿಗೆ ಅವಕಾಶ ನೀಡದೆ ನಿಮ್ಮ ಒಳ ರಾಜಕೀಯದಿಂದ ಐಪಿಎಲ್​ನಲ್ಲಿ ಆಡಿದ ಆಟಗಾರರಿಗೆ ಮಣೆ ಹಾಕುತ್ತಿದ್ದೀರಿ. ಈಗ ನಿಮ್ಮ ಬುಡಕ್ಕೆ ನೀರು ಬಂದಾಗ ದೇಶೀಯ ಕ್ರಿಕೆಟ್ ನೆನಪಾಗುತ್ತದೆ ಎಂದು ಹೇಳುವ ಮೂಲಕ ರೋಹಿತ್​ಗೆ ತಿವಿದಿದ್ದಾರೆ.

ಇದನ್ನೂ ಓದಿ IND vs SL 3rd ODI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು; ಏಕದಿನ ಸರಣಿ ಶ್ರೀಲಂಕಾ ಮಡಿಲಿಗೆ

ಬುಧವಾರ ಕೊಲೊಂಬೊದ ಆರ್‌. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾ ತಂಡ 249 ರನ್‌ ಬಾರಿಸಿ ಸವಾಲೊಡ್ಡಿತು. ಈ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ತಂಡವು 26.1 ಓವರ್‌ಗಳಲ್ಲಿ 138 ರನ್‌ಗಳಿಸಿ ಆಲೌಟ್‌ ಆಗುವ ಮೂಲಕ 110 ರನ್‌ಗಳಿಂದ ಸೋಲನುಭವಿಸಿತು. ಭಾರತದ ಪರ ರೋಹಿತ್‌ ಶರ್ಮ (35), ವಾಷಿಂಗ್ಟನ್‌ ಸುಂದರ್‌ (30) ರನ್​ ಗಳಿಸಿದರು. ಉಳಿದ ಯಾವ ಬ್ಯಾಟರ್‌ಗಳೂ ರನ್‌ ಕಲೆಹಾಕುವಲ್ಲಿ ಯಶಸ್ವಿಯಾಗಲಿಲ್ಲ. ಹೀಗಾಗಿ ಪಂದ್ಯ ಸೋತಿತು. ಸತತ ಮೂರು ಪಂದ್ಯಗಳಲ್ಲೂ ಶ್ರೀಲಂಕಾ ತಂಡವು ಸ್ಪಿನ್‌ ದಾಳಿ ನಡೆಸುವ ಮೂಲಕ ಭಾರತ ತಂಡವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಸ್ಪಿನ್​ಗೆ ಹೆಚ್ಚಾಗಿ ಉತ್ತಮ ಬ್ಯಾಟ್​ ಬೀಸುತ್ತಿದ್ದ ಭಾರತ ಲಂಕಾದಲ್ಲಿ ಪರದಾಟ ನಡೆಸಿದ್ದು ನಿಜಕ್ಕೂ ನಾಚಿಕೆಗೇಡಿನ ಸಂಗತಿ.

​ಪಂದ್ಯದ ಸೋಲಿಗೆ ಸಹ ಆಟಗಾರರ ಬ್ಯಾಟಿಂಗ್​ ವೈಫಲ್ಯವೇ ಕಾರಣ ಎಂದು ರೋಹಿತ್​ ನೇರ ಆರೋಪವನ್ನು ಕೂಡ ಮಾಡಿದ್ದಾರೆ. ನಾನು ತಂಡದ ಗೆಲುವಿಗಾಗಿ ಪ್ರಯತ್ನಪಟ್ಟಿದ್ದೇನೆ. ಆದರೆ, ಉಳಿದ ಆಟಗಾರರು ಬ್ಯಾಟಿಂಗ್​ ವೈಫಲ್ಯ ಕಂಡರು. ಒಬ್ಬರೇ ಆಡಿ ಪಂದ್ಯವನ್ನು ಗೆಲ್ಲಿಸುವುದು ಕಷ್ಟ ಎಂದು ಹೇಳುವ ಮೂಲಕ ಬಹಿರಂಗವಾಗಿಯೇ ಸಹ ಆಟಗಾರರ ಕಳಪೆ ಪ್ರದರ್ಶನದ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

Continue Reading
Advertisement
Swapnil Kusale
ಕ್ರೀಡೆ11 mins ago

Swapnil Kusale: ತವರಿಗೆ ಮರಳಿದ ಸ್ವಪ್ನಿಲ್​ ಕುಸಾಲೆ; ಮುಂಬೈಯಲ್ಲಿ ಭರ್ಜರಿ ಸ್ವಾಗತ

Naga Chaitanya engagement Sobhita Dhulipala engaged
ಟಾಲಿವುಡ್13 mins ago

Naga Chaitanya: ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ ಧೂಳಿಪಾಲ; ಸಂಭ್ರಮದ ಫೋಟೋಸ್‌ ವೈರಲ್‌!

Parliament Session
ರಾಜಕೀಯ37 mins ago

Parliament Session: ವಿನೇಶ್‌ ಫೋಗಟ್‌ ಅನರ್ಹತೆಯ ವಿಚಾರ ಚರ್ಚೆಗೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ, ಸಭಾತ್ಯಾಗ

Assault Case
ಬೆಂಗಳೂರು39 mins ago

Assault Case : ಕಾರು ಚಾಲಕನ ಮುಖಕ್ಕೆ‌ ಉಗಿದು, ಗೂಂಡಾಗಿರಿ ಮಾಡಿದ ಆಟೋ ಡೈವರ್‌

Abhishek Ambareesh wife aviva is pregnant actress samalatha will become grandmother
ಸಿನಿಮಾ45 mins ago

Abhishek Ambareesh: ಗುಡ್‌ ನ್ಯೂಸ್‌ ಕೊಟ್ಟ ಅಭಿಷೇಕ್ ಅಂಬರೀಶ್; ಮಂಡ್ಯದ ಗಂಡು ಹುಟ್ಟಿ ಬರ್ತಿದ್ದಾರೆ ಅಂದ್ರು ಅಂಬಿ ಫ್ಯಾನ್ಸ್‌!

Prajwal Revanna Case HD Revanna bail plea arguments and counter arguments
ಕ್ರೈಂ53 mins ago

Prajwal Revanna Case: ರೇವಣ್ಣ, ಪ್ರಜ್ವಲ್‌ ರೇವಣ್ಣ ಅರ್ಜಿಗಳ ವಿಚಾರಣೆ ಆ.29ಕ್ಕೆ ಮುಂದೂಡಿಕೆ

Vinesh Phogat
ಕ್ರೀಡೆ54 mins ago

Vinesh Phogat: ವಿನೇಶ್​ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

Bangladesh Unrest
ವಿದೇಶ1 hour ago

Bangladesh Unrest: ದೇವರ ಮೂರ್ತಿಗಳು ಪುಡಿ ಪುಡಿ; ಹಿಂದೂಗಳ ರಕ್ಷಣೆಗೆ ಸೇನೆ, ಪೊಲೀಸರೇ ಹಿಂದೇಟು

Paris Olympics
ಕ್ರೀಡೆ1 hour ago

Paris Olympics: ಒಲಿಂಪಿಕ್ಸ್​ನಲ್ಲಿಯೂ ಸದ್ದು ಮಾಡಿದ ‘​ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡು; ವಿಡಿಯೊ ವೈರಲ್​

Buddhadeb Bhattacharjee
ದೇಶ2 hours ago

Buddhadeb Bhattacharjee: ಸರಳತೆಯಿಂದಲೇ ರಾಜಕಾರಣಿಗಳಿಗೆ ಮಾದರಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌