Site icon Vistara News

TCS World 10K Run : ಈ ದಿನದಂದು ಮೆಟ್ರೊ ರೈಲು ಸೇವೆ ಬೆಳಗ್ಗೆ 4.10ಕ್ಕೆ ಆರಂಭ

Namma metro

ಬೆಂಗಳೂರು: ಏಪ್ರಿಲ್​ 28ರಂದು (ಭಾನುವಾರ) ಬೆಂಗಳೂರಿನ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್​ ಷಾ ಪರೇಡ್ ಮೈದಾನದಿಂದ ನಡೆಯಲಿರುವ TCS ವರ್ಲ್ಡ್ 10K ರನ್ (TCS World 10K Run ) ಪ್ರಯುಕ್ತ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ ನಮ್ಮ ಮೆಟ್ರೋ ರೈಲು ಸೇವೆ ಯನ್ನು 07:00 ಗಂಟೆಗೆ ಬದಲಾಗಿ ಮುಂಜಾನೆ 03:35 ಕ್ಕೆ ಆರಂಭಗೊಳ್ಳಲಿದೆ ಎಂದು ಮೆಟ್ರೊ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆಟ್ರೊ ರೈಲಿನ ಎಲ್ಲ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರದಿಂದ ರೇಷ್ಮೆ ಸಂಸ್ಥೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ವರೆಗೆ ರೈಲುಗಳು ಸಂಚರಿಸಲಿವೆ. ಮುಂಜಾನೆ 03.35 ರಿಂದ 04.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿದೆ ಎಂದು ನಮ್ಮ ಮೆಟ್ರೊ ಮಾಹಿತಿ ನೀಡಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಂ.ಜಿ ರಸ್ತೆ ಕಡೆಗೆ ಮೊದಲ ರೈಲು ಸೇವೆಯು ಬೆಳಗ್ಗೆ 04.10 ಗಂಟೆಗೆ ಪ್ರಾರಂಭವಾಗಲಿದೆ. ನಂತರ 10 ನಿಮಿಷಗಳ ಅಂತರದಿಂದ ಬೆಳಿಗ್ಗೆ 5.00 ಗಂಟೆಯವರೆಗೆ ರೈಲುಗಳು ಸಂಚರಿಸಲಿದೆ. ಆ ನಂತರ ರೈಲುಗಳು ಜನರ ದಟ್ಟಣೆಯ ಅನುಗುಣವಾಗಿ ಚಲಿಸುತ್ತವೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Namma Metro : ನಮ್ಮ ಮೆಟ್ರೊ ವಿಸ್ತೃತ ನೇರಳೆ ಮಾರ್ಗ ಲೋಕಾರ್ಪಣೆ ಮಾಡಿದ ಮೋದಿ; ಏನಿದರ ವಿಶೇಷತೆ?

10K ಓಟದಲ್ಲಿ ಭಾಗವಹಿಸಲು ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮೆಟ್ರೊ ಅಧಿಕಾರಿಗಳು ವಿನಿಂತಿ ಮಾಡಿದ್ದಾರೆ. ಸಾರ್ವಜನಿಕರು ನಗದು ರಹಿತ QR ಟಿಕೆಟ್‌ಗಳನ್ನು ಖರೀದಿಸಿ ಪ್ರಯಾಣಿಸುವಂತೆ ಬಿ.ಎಂ.ಆರ್.ಸಿ.ಎಲ್ ಹೇಳಿದೆ.

ಮತದಾನದ ದಿನದಂದು ನಮ್ಮ ಮೆಟ್ರೋ ಸೇವೆ ಹೀಗಿದೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಮೆಟ್ರೊ ರೈಲಿನ ಸಂಚಾರ ಅವಧಿ ರಾತ್ರಿ 11.55ರ ಬದಲಿಗೆ 12.35ರವರೆಗೆ ವಿಸ್ತರಣೆಗೊಳ್ಳಲಿದೆ. ಮತದಾನಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮೆಟ್ರೋ ಸೇವೆಯನ್ನು ವಿಸ್ತರಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ.

ಏಪ್ರಿಲ್ 26, 2024 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ತನ್ನ ನಾಲ್ಕು ಪ್ರಮುಖ ನಿಲ್ದಾಣಗಳಾದ ನಾಗಸಂದ್ರ, ಸಿಲ್ಕ್ ಇನ್ಸ್ಟಿಟ್ಯೂಟ್, ಚಲ್ಲಘಟ್ಟ, ವೈಟ್ಫೀಲ್ಡ್ (ಕಾಡುಗೋಡು) ನಿಂದ ತನ್ನ ಕೊನೆಯ ರೈಲು ಸೇವೆಗಳನ್ನು 23.55 ಬದಲಿಗೆ (ರಾತ್ರಿ 11.55) 12.35ರವರೆಗೆ ವಿಸ್ತರಿಸುತ್ತದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version