MI vs SRH: ಹೈದರಾಬಾದ್​ಗೆ ಗೆಲುವಿನ 'ಸನ್​ರೈಸ್​'; ಮುಂಬೈಗೆ ಸತತ 2ನೇ ಸೋಲು - Vistara News

ಕ್ರೀಡೆ

MI vs SRH: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್​’; ಮುಂಬೈಗೆ ಸತತ 2ನೇ ಸೋಲು

MI vs SRH: ಮುಂಬೈ ಇಂಡಿಯನ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 31 ರನ್​ ಅಂತರದಿಂದ ಗೆದ್ದು ಬೀಗಿದೆ.

VISTARANEWS.COM


on

Shahbaz Ahmed celebrates nabbing Ishan Kishan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್​: ಮುತ್ತಿನ ನಗರಿ ಹೈದರಾಬಾದ್​ನಲ್ಲಿ ಬುಧವಾರ ಸಿಕ್ಸರ್​ಗಳ ಸುರಿಮಳೆಯೇ ಸುರಿಯಿತು. ಮುಂಬೈ ಇಂಡಿಯನ್ಸ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳ ಆಟಗಾರರು ತಮ್ಮ ಸ್ಫೋಟಕ ಬ್ಯಾಟಿಂಗ್​ ಮೂಲಕ ಈ ಸಿಕ್ಸರ್​ಗಳ ಮಳೆಗೆ ಕಾರಣರಾದರು. ಅಂತಿಮವಾಗಿ ಪಂದ್ಯದಲ್ಲಿ ತವರಿನ ತಂಡವಾದ ಸನ್​ರೈಸರ್ಸ್​ ಹೈದರಾಬಾದ್ 31 ರನ್​ ಅಂತರದಿಂದ ಗೆದ್ದು ಬೀಗಿತು​. ಮುಂಬೈ ಸತತ 2ನೇ ಸೋಲಿನ ಅವಮಾನಕ್ಕೆ ಸಿಲುಕಿತು.

ಇಲ್ಲಿನ ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಆತಿಥೇಯ ಸನ್​ರೈಸರ್ಸ್ ಹೈದರಾಬಾದ್​ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 277 ರನ್​ ಬಾರಿಸಿತು. ಈ ದೊಡ್ಡ ಮೊತ್ತವನ್ನು ಅಷ್ಟೇ ದಿಟ್ಟ ರೀತಿಯಲ್ಲಿ ಬೆನ್ನಟ್ಟಿಕೊಂಡು ಹೋದ ಮುಂಬೈ ಅಂತಿಮವಾಗಿ 5 ವಿಕೆಟ್​ಗೆ 246 ರನ್​ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು. ಒಟ್ಟಾರೆಯಾಗಿ ಈ ಪಂದ್ಯದಲ್ಲಿ 523 ರನ್​ ದಾಖಲಾಯಿತು. ಇದು ಐಪಿಎಲ್​ನಲ್ಲಿ 2 ತಂಡಗಳು ಸೇರಿ ಬಾರಿಸಿದ ಗರಿಷ್ಠ ಮೊತ್ತದ ದಾಖಲೆ. ಈ ಹಿಂದೆ 2010ರಲ್ಲಿ ಚೆನ್ನೈ ಮತ್ತು ಕೆಕೆಆರ್​ ನಡುವಣ ಪಂದ್ಯದಲ್ಲಿ 469 ರನ್​ ಹರಿದು ಬಂದಿತ್ತು.

ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಮುಂಬೈಗೆ ಆರಂಭಿಕರಾದ ಇಶಾನ್​ ಕಿಶನ್​ ಮತ್ತು ಮುಂಬೈ ಪರ 200ನೇ ಪಂದ್ಯದಲ್ಲಿ ಆಡಲಿಳಿದ ಮಾಜಿ ನಾಯಕ ರೋಹಿತ್​ ಶರ್ಮ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ ಉತ್ತಮ ಅಡಿಪಾಯ ನಿರ್ಮಿಸಿದರು. ಇವರಿಬ್ಬರ ಬ್ಯಾಟಿಂಗ್​ ಆರ್ಭಟದಿಂದ ತಂಡ ಕೇವಲ ಮೂರು ಓವರ್​ಗೆ ವಿಕೆಟ್​ ನಷ್ಟವಿಲ್ಲದೆ 50 ರನ್​ ಕಲೆಹಾಕಿತು.

ಆದರೆ, ಉಭಯ ಆಟಗಾರರ ಈ ಬ್ಯಾಟಿಂಗ್​ ಜೋಶ್​ ಹೆಚ್ಚು ಹೊತ್ತು ಸಾಗಲಿಲ್ಲ. ಅಬ್ದುಲ್​ ಸಮದ್​ ಅವರಿಂದ ಒಂದು ಜೀವದಾನ ಪಡೆದರೂ ಕೂಡ ರೋಹಿತ್​ ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಎಡವಿದರು. 26 ರನ್​ ಗಳಿಸಿ ನಾಯಕ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರು. ಇಶಾನ್​ ಕಿಶನ್​ 13 ಎಸೆತಗಳಿಂದ 34 (4 ಸಿಕ್ಸರ್​, 3 ಬೌಂಡರಿ) ರನ್​ ಬಾರಿಸಿದರು. ಬಳಿಕ ಬಂದ ನಮನ್ ಧೀರ್ ಮತ್ತು ತಿಲಕ್​ ವರ್ಮ ಕೂಡ ಬಿರುಸಿನ ಆಟವಾಡಿ ತಂಡದ ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಪಟ್ಟರು. ಮುಂಬೈ 10 ಓವರ್​ಗೆ 140 ರನ್​ ಗಡಿ ದಾಡಿದ ವೇಳೆ ಈ ಬೃಹತ್​ ಮೊತ್ತವನ್ನು ಕೂಡ ಚೇಸಿಂಗ್​ ಮಾಡಿ ಗೆಲ್ಲುವ ಸೂಚನೆ ನೀಡಿತು. ಆದರೆ ಉಭಯ ಆಟಗಾರರ ವಿಕೆಟ್​ ಪತನದ ಬಳಿಕ ಹೈದರಾಬಾದ್​ ಬೌಲರ್​ಗಳು ಲಯಬದ್ಧ ಬೌಲಿಂಗ್​ ನಡೆಸಿ ಪಂದ್ಯವನ್ನು ಹಿಡಿತಕ್ಕೆ ತಂದರು.

ಮೊದಲು ಬ್ಯಾಟಿಂಗ್​ಗೆ ಇಳಿದ ಹೈದರಾಬಾದ್​ ಪರ ಅಗರ್ವಾಲ್(11)​ ಹೊರತುಪಡಿಸಿ ಉಳಿದ ಎಲ್ಲ ಬ್ಯಾಟರ್​ಗಳು ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸಿ ಗಮನಸೆಳೆದರು. ಅದರಲ್ಲೂ 2ನೇ ವಿಕೆಟ್​ಗೆ ಜತೆಯಾದ ಅಭಿಷೇಕ್​ ಶರ್ಮಾ ಮತ್ತು ಆರಂಭಕಾರ ಟ್ರಾವಿಸ್​ ಹೆಡ್​ ಪೈಪೋಟಿಗೆ ಬಿದ್ದವರಂತೆ ಬ್ಯಾಟಿಂಗ್​ ನಡೆಸಿ ಮುಂಬೈ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದರು. ಉಭಯ ಆಟಗಾರರ ಈ ಬ್ಯಾಟಿಂಗ್​ ಆರ್ಭಟಕ್ಕೆ ಮುಂಬೈ ​7 ಓವರ್​ ಆಗುವ ಮುನ್ನವೇ 100ರ ಗಡಿ ದಾಟಿತು.

ಇದನ್ನೂ ಓದಿ IPL 2024: ಐಪಿಎಲ್​ನಲ್ಲಿ ದಾಖಲೆ ನೂತನ ಬರೆದ ಹೈದರಾಬಾದ್; ಆರ್​ಸಿಬಿ ರೆಕಾರ್ಡ್ ಉಡೀಸ್​​

ತಿಲಕ್​ ವರ್ಮಾ(64) ಮತ್ತು ನಮನ್ ಧೀರ್(30) ರನ್​ ಗಳಿಸಿದರು. ಬಳಿಕ ಬಂದ ನಾಯಕ ಹಾರ್ದಿಕ್​ ಪಾಂಡ್ಯ(24) ಹಾಗೂ ಟಿಮ್​ ಡೇವಿಡ್(42*)​ ರನ್​ ಬಾರಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. ಹೈದರಾಬಾದ್​ ಪರ ನಾಯಕ ಕಮಿನ್ಸ್​ ಹಾಗೂ ಉನಾದ್ಕತ್​ ತಲಾ 2 ವಿಕೆಟ್​ ಪಡೆದರು.

ಬೌಲರ್​ಗಳನ್ನು ಚಿಂದಿ ಮಾಡಿದ ಹೆಡ್​-ಅಭಿಷೇಕ್

ವಿಶ್ವಕಪ್​ ಹೀರೊ ಟ್ರಾವಿಸ್​ ಹೆಡ್​ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರೆ, ಇವರ ಜತೆಗಾರ ಅಭಿಷೇಕ್​ ಶರ್ಮ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಈ ಜೋಡಿ ದ್ವಿತೀಯ ವಿಕೆಟ್​ಗೆ 68 ರನ್​ ಒಟ್ಟುಗೂಡಿಸಿತು. ಹೆಡ್​ 24 ಎಸೆತಗಳಿಂದ 9 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 62 ರನ್​ ಬಾರಿಸಿದರು. ಅಭಿಷೇಕ್​ ಶರ್ಮಾ 23 ಎಸೆತ ಎದುರಿಸಿ 7 ಸೊಗಸಾದ ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಸಿ 63 ರನ್​ ಕಲೆಹಾಕಿದರು. ಈ ಮೊತ್ತ ಬಾರಿಸಲು ಅವರು ಎದುರಿಸಿದ್ದು ಕೇವಲ 23 ಎಸೆತ. ಉಭಯ ಆಟಗಾರರ ಈ ಬ್ಯಾಟಿಂಗ್​ ಆರ್ಭಟದ ಮುಂದೆ ಮುಂಬೈ ತಂಡದ ಬೌಲಿಂಗ್​ ಸಂಪೂರ್ಣ ಹಳಿ ತಪ್ಪಿತು. ಹೆಡ್​ ಮತ್ತು ಅಭಿಷೇಕ್​ ಹೈದರಾಬಾದ್​ ಪರ ಅತಿ ಕಡಿಮೆ ಎಸೆತದಲ್ಲಿ ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಕ್ರಮವಾಗಿ ಮೊದಲೆಡರು ಸ್ಥಾನ ಪಡೆದರು.

ಮತ್ತೆ ಸಿಡಿದ ಕ್ಲಾಸೆನ್​


ಕಳೆದ ಕೆಕೆಆರ್​ ವಿರುದ್ಧ ಅಸಾಮಾನ್ಯ ಬ್ಯಾಟಿಂಗ್​ ಪ್ರದರ್ಶನ ತೋರಿದ್ದ ಹೆನ್ರಿಚ್​ ಕ್ಲಾಸೆನ್​ ಈ ಪಂದ್ಯದಲ್ಲಿಯೂ ಸಿಡಿದು ನಿಂತರು. ಕ್ರೀಸ್​ಗಿಳಿದ ಮೊದಲ ಎಸೆತದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತುಕೊಟ್ಟ ಅವರು ಮೈದಾನದ ಮೂಲೆ ಮೂಲೆಗೂ ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ತವರಿನ ಅಭಿಮಾನಿಗಳಿಗೆ ಬರಪೂರ ರಂಜನೆ ನೀಡಿದರು. ಇವರಿಗೆ ಏಡನ್​ ಮಾರ್ಕ್ರಮ್​ ಕೂಡ ಉತ್ತಮ ಸಾಥ್​ ನೀಡಿದರು. ತಾನೇನು ಕಮ್ಮಿ ಇಲ್ಲ ಎನ್ನುವಂತೆ ಕ್ಲಾಸೆನ್ ಕೂಡ 22 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ಮುಂಬೈ ಪರ ಜಸ್​​ಪ್ರೀತ್​ ಬುಮ್ರಾ ಅವರನ್ನು ಬಿಟ್ಟು ಉಳಿದೆಲ್ಲ ಬೌಲರ್​ಗಳು ದುಬಾರಿಯಾದರು. ನಾಯಕ ಪಾಂಡ್ಯ ಒಂದು ವಿಕೆಟ್​ ಕಿತ್ತರೂ ಕೂಡ 46 ರನ್​ ಬಿಟ್ಟುಕೊಟ್ಟರು.

ಚೊಚ್ಚಲ ಐಪಿಎಲ್​ ಪಂದ್ಯವನ್ನಾಡಿದ ದಕ್ಷಿಣ ಆಫ್ರಿಕಾದ 17 ವರ್ಷದ ಕ್ವೆನಾ ಮಫಕಾ ಅವರಂತೂ ಸರಿಯಾಗಿ ರನ್​ ಹೊಡೆಸಿಕೊಂಡರು. 4 ಓವರ್​ ಎಸೆದು 66 ರನ್​ ಬಿಟ್ಟುಕೊಟ್ಟರು. ಸ್ಪಿನ್ನರ್​ ಪಿಯೂಷ್ ಚಾವ್ಲಾ ಕೇವಲ 2 ಓವರ್​ಗೆ 34 ರನ್​ ಚಚ್ಚಿಸಿಕೊಂಡರು. ಕ್ಲಾಸೆನ್​ 34 ಎಸೆತದಿಂದ ಅಜೇಯ 80 ರನ್​ ಬಾರಿಸಿದರು. ಸಿಡಿದ್ದು 7 ಸಿಕ್ಸರ್​ ಮತ್ತು 4 ಬೌಂಡರಿ. ಮಾರ್ಕ್ರಮ್ ಕೂಡ 42 ರನ್​ ಬಾರಿಸಿ ಅಜೇಯರಾಗಿ ಉಳಿದರು.

ದಾಖಲೆ ಬರೆದ ಹೈದರಾಬಾದ್​


ಹೈದರಾಬಾದ್​ ತಂಡ ಈ ಬೃಹತ್​ ಮೊತ್ತವನ್ನು ಬಾರಿಸುವ ಮೂಲಕ ಐಪಿಎಲ್​(IPL 2024) ಇತಿಹಾಸದಲ್ಲೇ ಅತ್ಯಧಿಕ ರನ್​ ಪೇರಿಸಿದ ಮೊದಲ ತಂಡ ಎಂಬ ದಾಖಲೆ ಬರೆಯಿತು. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ ದಾಖಲೆಯನ್ನು ಮುರಿಯಿತು. ಆರ್​ಸಿಬಿ 2013ರಲ್ಲಿ ಪುಣೆ ವಾರಿಯರ್ಸ್​ ವಿರುದ್ಧ 5 ವಿಕೆಟ್​ಗೆ 263 ರನ್​ ಬಾರಿಸಿತ್ತು. ಇದೀಗ ಸನ್​ರೈಸರ್ಸ್​ 3 ವಿಕೆಟ್​ಗೆ 277 ರನ್​ ಬಾರಿಸುವ ಕಳೆದ 11 ವರ್ಷಗಳಿಂದ ಆರ್​ಸಿಬಿ ಹೆಸರಿನಲ್ಲಿ ದಾಖಲೆಯನ್ನು ಮೀರಿ ನಿಂತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

IPL 2024:ಆಟಗಾರರು ತಂಗಿರುವ ಹೋಟೆಲ್​ಗಳಿಗೂ ಮತ್ತು ಆಟಗಾರರು ಅಭ್ಯಾಸಕ್ಕೆ ಸಂಚರಿಸುವ ಬಸ್​ಗಳಿಗೂ ಅಹಮದಾಬಾದ್‌ ಪೊಲೀಸರು ಭಾರೀ ಭದ್ರತೆ ಕಲ್ಪಿಸಿದ್ದಾರೆ. ಸ್ಟೇಡಿಯಂ ಸುತ್ತಮುತ್ತಲೂ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಎಲ್ಲ ವಾಹನಗಳನ್ನು ತಪಾಸಣೆ ನಡೆಸುವುದು ಮತ್ತು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

VISTARANEWS.COM


on

IPL 2024
Koo

ಅಹಮದಾಬಾದ್​: ಕೆಲವು ದಿನಗಳ ಹಿಂದಷ್ಟೇ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿಗೆ ಪಾಕಿಸ್ತಾನ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ ಬಂದಿತ್ತು. ಇದೀಗ ಐಪಿಎಲ್(IPL 2024)​ಟೂರ್ನಿಗೂ ಐಸಿಸ್‌ ಉಗ್ರರ ಕಾಟವೊಂದು ಎದುರಾದಂತಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯಕ್ಕೆ ಒಂದು ದಿನ ಮೊದಲೇ ನಾಲ್ವರು ಐಸಿಸ್‌ ಉಗ್ರರನ್ನು (ISIS Terrorists) ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳವು (ATS) ಅಹಮದಾಬಾದ್‌ ಏರ್‌ಪೋರ್ಟ್‌ನಲ್ಲಿ ಬಂಧಿಸಿದ್ದಾರೆ. ಹೀಗಾಗಿ ನಾಳೆ(ಮಂಗಳವಾರ) ನಡೆಯುವ ಕ್ವಾಲಿಫೈಯರ್​ ಮತ್ತು ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯಕ್ಕೆ ಭಾರೀ ಭದ್ರತೆ ಮತ್ತು ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಬಂಧಿತ ನಾಲ್ವರು ಉಗ್ರರನ್ನು ಶ್ರೀಲಂಕಾ ಮೂಲದವರೆಂದು ಗುರುತಿಸಲಾಗಿದೆ. ನಾಲ್ವರೂ ಉಗ್ರರು ವಿಮಾನ ನಿಲ್ದಾಣದಲ್ಲಿ ತಮ್ಮ ಹ್ಯಾಂಡ್ಲರ್‌ಗಾಗಿ ಕಾಯುತ್ತಿರುವಾಗ ಅವರನ್ನು ಬಂಧಿಸಲಾಗಿದೆ. ನಾಲ್ವರನ್ನೂ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ನಾಲ್ವರೂ ಉಗ್ರರು ವಿಮಾನ ನಿಲ್ದಾಣದಲ್ಲಿ ಏನು ಮಾಡುತ್ತಿದ್ದರು? ಅವರು ರೂಪಿಸಿದ ಸಂಚೇನು? ಎಲ್ಲಿಗೆ ಹೋಗುವವರಿದ್ದರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್‌ನ ಎಲಿಮಿನೇಟರ್‌ ಹಾಗೂ ಕ್ವಾಲಿಫೈಯರ್‌ ಪಂದ್ಯದ ವೇಳೆ ಬಾಂಬ್​ ಸ್ಫೋಟ ಮಾಡುವುದು ಇವರ ಉದ್ದೇಶವಾಗಿತ್ತೇ ಎನ್ನುವುದು ಕೂಡ ಇಲ್ಲಿ ಭಯ ಹುಟ್ಟಿಸುವಂತೆ ಮಾಡಿದೆ.

ಈಗಾಗಲೇ ಆಟಗಾರರು ತಂಗಿರುವ ಹೋಟೆಲ್​ಗಳಿಗೂ ಮತ್ತು ಆಟಗಾರರು ಅಭ್ಯಾಸಕ್ಕೆ ಸಂಚರಿಸುವ ಬಸ್​ಗಳಿಗೂ ಅಹಮದಾಬಾದ್‌ ಪೊಲೀಸರು ಭಾರೀ ಭದ್ರತೆ ಕಲ್ಪಿಸಿದ್ದಾರೆ. ಸ್ಟೇಡಿಯಂ ಸುತ್ತಮುತ್ತಲೂ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಎಲ್ಲ ವಾಹನಗಳನ್ನು ತಪಾಸಣೆ ನಡೆಸುವುದು ಮತ್ತು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

ಮೊದಲ ಕ್ವಾಲಿಫೈಯರ್​ ಪಂದ್ಯ ಮಂಗಳವಾರ (ಮೇ 21) ಅಹಮದಾಬಾದ್​ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕೆಕೆಆರ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ಮುಖಾಮುಖಿಯಾಗಲಿವೆ. ಬುಧವಾರ (ಮೇ 22) ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ.

ಮೇ 12ರಂದು ಅಹಮದಾಬಾದ್‌ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಒಡ್ಡಲಾಗಿತ್ತು. ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ ಒಡ್ಡಲಾಗಿತ್ತು. ಬೆದರಿಕೆಯ ಮೇಲ್‌ ಬರುತ್ತಲೇ ಭದ್ರತಾ ಸಿಬ್ಬಂದಿಯು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿತ್ತು. ಇಡೀ ವಿಮಾನ ನಿಲ್ದಾನದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳಿಗಾಗಿ ಇನ್ನಿಲ್ಲದಂತೆ ಪರಿಶೀಲನೆ ನಡೆಸಲಾಗಿತ್ತು.

Continue Reading

ಕ್ರೀಡೆ

KKR vs SRH Qualifier 1: ಕೆಕೆಆರ್​-ಹೈದರಾಬಾದ್​ ಮುಖಾಮುಖಿ ದಾಖಲೆ, ಪಿಚ್​ ರಿಪೋರ್ಟ್​ ಹೇಗಿದೆ?

KKR vs SRH Qualifier 1: ಇತ್ತಂಡಗಳ ನಡುವಿನ ಪಂದ್ಯದಲ್ಲಿ ಯಾರೇ ಸೋತರೂ ಕೂಡ ಅವರಿಗೆ ಮತ್ತೊಂದು ಕ್ವಾಲಿಫೈಯರ್​ ಪಂದ್ಯವನ್ನಾಡುವ ಅವಕಾಶವಿದೆ. ಎಲಿಮಿನೇಟರ್​ ಪಂದ್ಯದ ವಿಜೇತರನ್ನು ಎದುರಿಸಲಿದೆ. ಹೀಗಾಗಿ ಸೋತರೂ ಮತ್ತೊಂದು ಪಂದ್ಯ ಆಡಿ ಅಲ್ಲಿ ಗೆದ್ದರೆ ಫೈನಲ್​ ಪ್ರವೇಶಿಸಬಹುದು.

VISTARANEWS.COM


on

KKR vs SRH Qualifier 1
Koo

ಅಹಮದಾಬಾದ್​: ಈ ಬಾರಿಯ ಐಪಿಎಲ್​ನ(IPL 2024) ಬಲಿಷ್ಠ ತಂಡಗಳಾದ ಕೆಕೆಆರ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ನಡುವಣ ಮೊದಲ ಕ್ವಾಲಿಫೈಯರ್(KKR vs SRH Qualifier 1) ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ನಡೆಯುವ ಇತ್ತಂಡಗಳ ಈ ಕಾದಾಟಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ(Narendra Modi Stadium) ಅಣಿಯಾಗಿದೆ. ಯಾರೇ ಗೆದ್ದರೂ ನೇರವಾಗಿ ಫೈನಲ್​ಗೆ ಎಂಟ್ರಿಕೊಡಲಿದ್ದಾರೆ. ಈ ತಂಡ ಯಾವುದು ಎಂಬುದು ನಾಳಿನ ಪಂದ್ಯದ ಕೌತುಕ.

ಬಲಾಬಲ ​


ಉಭಯ ತಂಡಗಳ ಐಪಿಎಲ್​ ಇತಿಹಾಸ ನೋಡುವಾಗ ಕೆಕೆಆರ್​ ಬಲಿಷ್ಠವಾಗಿದೆ. ಇದುವರೆಗೆ 26 ಪಂದ್ಯಗಳನ್ನು ಆಡಿ 17 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಪಂದ್ಯದಲ್ಲೂ ಹೈದರಾಬಾದ್​ ಸೋಲು ಕಂಡಿತ್ತು. ಉಭಯ ತಂಡಗಳ ನಡುವೆ ಒಂದು ಸೂಪರ್​ ಓವರ್​ ಪಂದ್ಯ ಕೂಡ ನಡೆದಿತ್ತು. 2020ರಲ್ಲಿ ಅಬುಧಾಬಿಯಲ್ಲಿ ನಡೆದಿದ್ದ ಪಂದ್ಯ ಇದಾಗಿತ್ತು. ಈ ಪಂದ್ಯದಲ್ಲಿ ಕೆಕೆಆರ್​ ಜಯಿಸಿತ್ತು. ಈ ಲೆಕ್ಕಾಚಾರವನ್ನು ನೋಡುವಾಗ ನಾಳಿನ ಪಂದ್ಯದಲ್ಲಿಯೂ ಕೆಕೆಆರ್​ ಗೆಲುವಿನ ಫೇವರಿಟ್​ ಆಗಿದೆ.

ಸೋತರೆ ಮತ್ತೊಂದು ಅವಕಾಶ


ಇತ್ತಂಡಗಳ ನಡುವಿನ ಪಂದ್ಯದಲ್ಲಿ ಯಾರೇ ಸೋತರೂ ಕೂಡ ಅವರಿಗೆ ಮತ್ತೊಂದು ಕ್ವಾಲಿಫೈಯರ್​ ಪಂದ್ಯವನ್ನಾಡುವ ಅವಕಾಶವಿದೆ. ಎಲಿಮಿನೇಟರ್​ ಪಂದ್ಯದ ವಿಜೇತರನ್ನು ಎದುರಿಸಲಿದೆ. ಹೀಗಾಗಿ ಸೋತರೂ ಮತ್ತೊಂದು ಪಂದ್ಯ ಆಡಿ ಅಲ್ಲಿ ಗೆದ್ದರೆ ಫೈನಲ್​ ಪ್ರವೇಶಿಸಬಹುದು. ನಾಳಿನ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ ಟಿಕೆಟ್​ ಪಡೆಯಲಿದೆ.

ಇದನ್ನೂ ಓದಿ IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

ಮಳೆ ಭೀತಿ


ಅಹಮದಾಬಾದ್​ನಲ್ಲಿ ಮಳೆಯಿಂದ ಒಂದು ಲೀಗ್​ ಪಂದ್ಯ ರದ್ದಾಗಿತ್ತು. ಇದು ಕೆಕೆಆರ್​ ಮತ್ತು ಗುಜರಾತ್​ ನಡುವಣ ಪಂದ್ಯವಾಗಿತ್ತು. ಮಳೆಯಿಂದ ಟಾಸ್​ ಕೂಡ ಆಗದೆ ರದ್ದಾಗಿತ್ತು. ಇದೀಗ ನಾಳೆ ನಡೆಯುವ ಕ್ವಾಲಿಫೈಯರ್​ ಪಂದ್ಯಕ್ಕೂ ಮಳೆಯ ಭೀತಿ ಇದೆ. ಒಂದೊಮ್ಮೆ ಮಳೆ ಬಂದರೂ ಕೂಡ ಚಿಂತಿಸುವ ಅಗತ್ಯವಿಲ್ಲ. ಮೀಸಲು ದಿನ ಇದೆ.

ಪಿಚ್​ ರಿಪೋರ್ಟ್​


ವಿಶ್ವದ ಅತಿ ದೊಡ್ಡ ಕ್ರೀಡಾಂಗಣ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನೇರ ಬೌಂಡರಿಗಳಿಗೆ ಸರಾಸರಿ 75 ಮೀಟರ್ ಮತ್ತು ಚದರ ಗಡಿಗಳಿಗೆ 60 ಮೀಟರ್ ಉದ್ದವನ್ನು ಹೊಂದಿದೆ. ಇಲ್ಲಿ ಇದುವರೆಗೆ 33 ಐಪಿಎಲ್​ ಪಂದ್ಯಗಳು ನಡೆದಿದ್ದು 15 ಬಾರಿ ಮೊದಲು ಬ್ಯಾಟಿಂಗ್​ ಮಾಡಿದ ತಂಡ, 18 ಬಾರಿ ಚೇಸಿಂಗ್​ ನಡೆಸಿದ ತಂಡಗಳು ಗೆದ್ದಿವೆ. ಇಲ್ಲಿ ದಾಖಲಾದ ಗರಿಷ್ಠ ಒತ್ತ 233 ರನ್​. ಮುಂಬೈ ಮತ್ತು ಗುಜರಾತ್ ನಡುವಣ ಪಂದ್ಯದಲ್ಲಿ ಈ ಮೊತ್ತ ದಾಖಲಾಗಿತ್ತು.

ಸಂಭಾವ್ಯ ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​: ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ವಿಜಯಕಾಂತ್ ವ್ಯಾಸಕಾಂತ್, ಟಿ. ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್, ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ನಿತೀಶ್ ರಾಣಾ, ಆಂಡ್ರೆ ರಸೆಲ್, ರಮಣ್​ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading

ಕ್ರಿಕೆಟ್

MS Dhoni Retirement: ಧೋನಿ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಚೆನ್ನೈ ಫ್ರಾಂಚೈಸಿ

MS Dhoni Retirement: ಸಿಎಸ್‌ಕೆ ಅಧಿಕಾರಿಯೊಬ್ಬರು ಧೋನಿ ನಿವೃತ್ತಿ ಬಗ್ಗೆ ಮಾತನಾಡಿದ್ದು, “ಧೋನಿ ಅವರು ಸಿಎಸ್‌ಕೆ ಜತೆ ಯಾರೊಂದಿಗೂ ತಮ್ಮ ನಿವೃತ್ತಿ ಬಗ್ಗೆ ಇದುವರೆಗೂ ಮಾತನಾಡಿಲ್ಲ. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವು ಧೋನಿಯ ನಿವೃತ್ತಿಯ ವಿಚಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ

VISTARANEWS.COM


on

MS Dhoni Retirement
Koo

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್​(Chennai Super Kings) ಕಳೆದ ಪಂದ್ಯದಲ್ಲಿ ಆರ್​ಸಿಬಿ(RCB) ವಿರುದ್ಧ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಹೀಗಾಗಿ ಮಹೇಂದ್ರ ಸಿಂಗ್​ ಧೋನಿ(MS Dhoni Retirement) ಅವರ ನಿವೃತ್ತಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೀಗ ಧೋನಿ ನೃತ್ತಿ ವಿಚಾರವಾಗಿ ಸಿಎಸ್​ಕೆ ಫ್ರಾಂಚೈಸಿಯ ಅಧಿಕಾರಿಯೊಬ್ಬರು ಮಹತ್ವದ ಹೇಳಿಕೆ ನೀಡಿದ್ದಾರೆ.

ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಾಗಿತ್ತು. ಇದೀಗ ಚೆನ್ನೈ ಸೋತು ಟೂರ್ನಿಯಿಂದ ಹೊರಬಿದ್ದರೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

ಇದೀಗ ಸಿಎಸ್‌ಕೆ ಅಧಿಕಾರಿಯೊಬ್ಬರು ಧೋನಿ ನಿವೃತ್ತಿ ಬಗ್ಗೆ ಮಾತನಾಡಿದ್ದು, “ಧೋನಿ ಅವರು ಸಿಎಸ್‌ಕೆ ಜತೆ ಯಾರೊಂದಿಗೂ ತಮ್ಮ ನಿವೃತ್ತಿ ಬಗ್ಗೆ ಇದುವರೆಗೂ ಮಾತನಾಡಿಲ್ಲ. ಕೆಲವು ಸಕ್ರಿಯ ಕ್ರಿಕೆಟಿಗರಿಂದ ಹೆಚ್ಚು ಟೀಕೆಗೆ ಒಳಗಾಗಿರುವ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವು ಧೋನಿಯ ನಿವೃತ್ತಿಯ ವಿಚಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆಯಿದೆ. ನಿಯಮವು ಮುಂದುವರಿದರೆ, ತಂಡದೊಂದಿಗೆ ನಿರ್ದಿಷ್ಟ ಕೆಲಸವನ್ನು ಪೂರೈಸಲು ಇದು ಅವರಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ. ನಿಯಮವನ್ನು ರದ್ದುಗೊಳಿಸಿದರೆ, ಧೋನಿ ಆಡುವುದು ಕಷ್ಟ” ಎಂದು ಹೇಳಿದ್ದಾರೆ.

ಅಧಿಕಾರಿಯ ಈ ಮಾತನ್ನು ಕೇಳುವಾಗ ಧೋನಿ ಇಂಪ್ಯಾಕ್ಟ್​ ನಿಯಮ ಜಾರಿಯಲ್ಲಿದ್ದರೆ ಮುಂದಿನ ಆವೃತ್ತಿಯಲ್ಲಿಯೂ ಆಡುವುದು ಬಹುತೇಖ ಖಚಿತ ಎನ್ನುವುದು ತಿಳಿದುಬಂದಿದೆ. ಒಂದೊಮ್ಮೆ ಈ ನಿಯಮ ಇಲ್ಲವಾದರೆ ಧೋನಿ ಮುಂದಿನ ಆವೃತ್ತಿಯ ಆಟಗಾರರ ಹರಾಜಿಗೂ ಮುನ್ನವೇ ನಿವೃತ್ತಿ ಹೇಳುವುದು ಬಹುತೇಖ ಖಚಿತ ಎನ್ನಲಡ್ಡಿಯಿಲ್ಲ. ಚೆನ್ನೈ ತಂಡ ಆರ್​ಸಿಬಿ ವಿರುದ್ಧ ಸೋಲು ಕಂಡಾಗ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಅವರು ಧೋನಿ ಮುಂದಿನ ಆವೃತ್ತಿಯಲ್ಲಿಯೂ ಆಡಲಿದ್ದಾರೆ ಎಂದು ಬಲವಾದ ಹೇಳಿಕೆ ನೀಡಿದ್ದರು.

ಇದನ್ನೂ ಓದಿ MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

ಕಳೆದ ಕೆಲವು ವರ್ಷಗಳಿಂದ ಸಿಎಸ್‌ಕೆಗಾಗಿ ಧೋನಿ ಆಡುತ್ತಿದ್ದಾರೆ. ಅವರ ಈ ಪ್ರದರ್ಶನವನ್ನು ಪರಿಗಣಿಸಿ, ಚೆನ್ನೈಯಲ್ಲಿ ಧೋನಿಯ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ. ಧೋನಿ ಚೆನ್ನೈನ ದೇವರು ಎಂದ ರಾಯುಡು, ಮುಂಬರುವ ವರ್ಷದಲ್ಲಿ ಚೆನ್ನೈನಲ್ಲಿ ಎಂಎಸ್ ಧೋನಿಯ ಮಂದಿರ ನಿರ್ಮಾಣವಾಗುವುದು ಖಚಿತ ಎಂದು ಹೇಳಿದ್ದಾರೆ.

Continue Reading

ಕ್ರೀಡೆ

IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

IPL 2024: ಒಂದು ವೇಳೆ ಮೀಸಲು ದಿನದಂದೂ ಕೂಡ ಮಳೆ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವು ಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಯಾರು ಮುಂದಿರುತ್ತಾರೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ.

VISTARANEWS.COM


on

IPL 2024
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​(IPL 2024) ಟೂರ್ನಿ ಕೊನೆಯ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್​ ಹಂತದ ಪಂದ್ಯಗಳು ಮುಕ್ತಾಯಕಂಡಿದ್ದು ಇನ್ನು ಕ್ವಾಲಿಫೈಯರ್​ ಮತ್ತು ಎಲಿಮಿನೇಟರ್​ ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಮೊದಲ ಕ್ವಾಲಿಫೈಯರ್​ ಪಂದ್ಯ ನಾಳೆ(ಮಂಗಳವಾರ) ಅಹಮದಾಬಾದ್​ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕೆಕೆಆರ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ಮುಖಾಮುಖಿಯಾಗಲಿವೆ. ಆದರೆ, ಪ್ಲೇ ಆಫ್​ ಪಂದ್ಯಗಳಿಗೂ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಈಗಾಗಲೇ ಲೀಗ್​ ಅಹಮದಾಬಾದ್​ ಸೇರಿ ಕೆಲವು ಕಡೆ ನಿಗದಿಯಾಗಿದ್ದ ಲೀಗ್​ ಪಂದ್ಯಗಳು ಮಳೆಯಿಂದ ರದ್ದಾದ ನಿದರ್ಶನವೂ ನಮ್ಮ ಕಣ್ಣ ಮುಂದಿದೆ. ಇದೀಗ ಪ್ಲೇ ಆಫ್​ ಪಂದ್ಯಗಳಿಗೆ(ipl playoffs rain rules) ಮಳೆ ನಿಯಮ ಹೇಗಿದೆ ಎಂಬ ಮಾಹಿತಿ ಇಂತಿದೆ.

ಮಳೆ ಬಂದರೆ?


ಐಪಿಎಲ್​ ಆಡಳಿತ ಮಂಡಳಿ ಮತ್ತು ಬಿಸಿಸಿಐ ಟೂರ್ನಿ ಆರಂಭಕ್ಕೂ ಮುನ್ನವೇ ಲೀಗ್​ ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ ಎಂದು ಸ್ಪಷ್ಟಪಡಿಸಿತ್ತು. ಅದರಂತೆ ಮಳೆಯಿಂದ ಪಂದ್ಯ ರದ್ದುಗೊಂಡರೆ ಉಭಯ ತಂಡಗಳಿಗೂ ತಲಾ ಒಂದು ಅಂಕ ನಿಗದಿಪಡಿಸಿತ್ತು. ಆದರೆ, ನಾಕೌಟ್ ಹಂತಕ್ಕೆ ಮೀಸಲು ದಿನವನ್ನು (Reserve day) ಇರಿಸಿದೆ. ಪೂರ್ಣ ಪಂದ್ಯ ನಡೆಸಲು ಹೆಚ್ಚುವರಿ 120 ನಿಮಿಷಗಳನ್ನು ನೀಡಲಾಗಿದೆ. ಈ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ ಆಗ ಡಕ್​ವರ್ತ್​ ನಿಯದ ಅನುಸಾರ ಓವರ್​ ಕಡಿತಗೊಳಿಸಿ ಪಂದ್ಯ ನಡೆಸುವ ನಿರ್ಣಾಯಕ್ಕೆ ಬರಲಾಗುತ್ತದೆ. ಈ ವೇಳೆಯೂ ಪಂದ್ಯ ನಡೆಯದೇ ಇದ್ದರೆ ಪಂದ್ಯವನ್ನು ಮೀಸಲ ದಿನಕ್ಕೆ ಮುಂದೂಡಲಾಗುತ್ತದೆ. ಒಂದೊಮ್ಮೆ ಮೀಸಲು ದಿನದ ಮೊದಲಿನ ದಿನ ಪಂದ್ಯ ಅರ್ಧಕ್ಕೆ ನಿಂತಿದ್ದರೆ, ಅಲ್ಲಿಂದಲೇ ಮರುದಿನ ಪಂದ್ಯ ಆರಂಭಿಸಲಾಗುತ್ತದೆ.

ಇದನ್ನೂ ಓದಿ IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

ಮೀಸಲು ದಿನಕ್ಕೂ ಮಳೆ ಬಂದರೆ?

ಮೀಸಲು ದಿನವೂ ಮಳೆ ಬಂದರೆ ಫಲಿತಾಂಶ ಹೇಗೆ ನಿರ್ಧರಿಸಲಾಗುತ್ತದೆ ಎನ್ನುವ ಪ್ರಶ್ನೆ ಕ್ರಿಕೆಟ್​ ಅಭಿಮಾನಿಗಳಿಗೆ ಕಾಡುವುದು ಸಹಜ. ಇದಕ್ಕೂ ಬಿಸಿಸಿಐ ಉತ್ತರ ನೀಡಿದೆ. ಒಂದು ವೇಳೆ ಮೀಸಲು ದಿನದಂದೂ ಕೂಡ ಮಳೆ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವು ಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಯಾರು ಮುಂದಿರುತ್ತಾರೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಈ ನಿಯಮ ಫೈನಲ್​ ಪಂದ್ಯಕ್ಕೂ ಅನ್ವಯವಾಗುತ್ತದೆ. ಒಂದೊಮ್ಮೆ ಮಳೆಯಿಂದ ಎಲ್ಲ ಪಂದ್ಯಗಳು ರದ್ದಾದದರೆ ಆಗ ಅಗ್ರಸ್ಥಾನಿ ಕೆಕೆಆರ್​ ಈ ಬಾರಿಯ ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಏಕೆಂದರೆ ಕೆಕೆಆರ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದೆ.​

Continue Reading
Advertisement
Covaxin Safety
ದೇಶ33 mins ago

Covaxin Safety: ಕೊವ್ಯಾಕ್ಸಿನ್‌ನಿಂದ ಅಡ್ಡ ಪರಿಣಾಮ ಎಂದು ಬನಾರಸ್‌ ವಿವಿ ವರದಿ; ವೈದ್ಯ ಸಂಶೋಧನಾ ಸಂಸ್ಥೆ ಆಕ್ಷೇಪ

Food department deletes name from ration card list even though it is alive
ವಿಜಯನಗರ37 mins ago

Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

History Of Ice Cream
ಆಹಾರ/ಅಡುಗೆ38 mins ago

History Of Ice Cream: ಎಲ್ಲರ ನೆಚ್ಚಿನ ಐಸ್‌ಕ್ರೀಮ್‌ ಹುಟ್ಟಿದ್ದು ಹೇಗೆ?

IPL 2024
ಕ್ರೀಡೆ39 mins ago

IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

Silver Jewel Trend
ಫ್ಯಾಷನ್49 mins ago

Silver Jewel Trend: ಬಂಗಾರದ ಆಭರಣಗಳಿಗೆ ಸೆಡ್ಡು ಹೊಡೆದ ಸಿಲ್ವರ್‌ ಜ್ಯುವೆಲರಿಗಳು!

Prajwal Revanna Case
ಪ್ರಮುಖ ಸುದ್ದಿ51 mins ago

Prajwal Revanna Case: ನಾನು ಸೇರಿ ಸುಮಾರು 30 ಜನರ ಫೋನ್ ಟ್ಯಾಪ್: ಸರ್ಕಾರದ ವಿರುದ್ಧ ಎಚ್‌ಡಿಕೆ ಬಾಂಬ್‌!

Holenarasipura sexual assault case SIT moves HC against HD Revanna bail order
ಕ್ರೈಂ57 mins ago

HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

Due to heavy rain in Shira water entered houses and shops
ತುಮಕೂರು1 hour ago

Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

Lok Sabha Election 2024 Shah Rukh Khan booth in Mumbai
ಬಾಲಿವುಡ್1 hour ago

Lok Sabha Election 2024: ಕುಟುಂಬದ ಜತೆ ಬಂದು ಮತ ಚಲಾಯಿಸಿದ ಶಾರುಖ್‌ ಖಾನ್‌

Trichy Tour
ಪ್ರವಾಸ1 hour ago

Trichy Tour: ದಾಂಪತ್ಯದ ಲವಲವಿಕೆಯನ್ನು ಮತ್ತೆ ಜೀವಂತಗೊಳಿಸಲು ತಿರುಚಿರಾಪಳ್ಳಿಗೆ ಹೋಗಿ ಬನ್ನಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌